Tag: acid attack

  • ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ

    ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ

    ರಾಮನಗರ: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಯ (Minor Girl) ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿದ ಘಟನೆ ಕನಕಪುರದ (Kanakapura) ಬೈಪಾಸ್ ರಸ್ತೆಯ ನಾರಾಯಣಪ್ಪ ಕೆರೆ ಬಳಿ ನಡೆದಿದೆ.

    ಕನಕಪುರದ ಕುರುಪೇಟೆ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು ಎಂಬಾತ 17 ವರ್ಷದ ಅಪ್ರಾಪ್ತೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಅಪ್ರಾಪ್ತೆಯ ಬಳಿ ಮಾತನಾಡುವ ಬಾ ಎಂದು ಕರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ತಮ್ಮನ ಜೊತೆ ಬೈಪಾಸ್ ರಸ್ತೆಗೆ ಬಂದಿದ್ದಳು. ಈ ವೇಳೆ ಸುಮಂತ್ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಾನೆ. ಆದರೆ ಸುಮಂತ್ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಾಳೆ.

    ಅಷ್ಟೇ ಅಲ್ಲದೇ ಸುಮಂತ್ ಈ ಹಿಂದೆಯೂ ಹಲವು ಬಾರಿ ಪ್ರೀತಿಸುವಂತೆ ಒತ್ತಾಯಿಸಿದ್ದ. ಅದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಸುಮಂತ್ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಇದಾದ ಬಳಿಕ ಸುಮಂತ್ ಬೈಕ್‍ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಆಮ್ ಆದ್ಮಿಯಿಂದ ತುರುವೇಕೆರೆಯಲ್ಲಿ ಟೆನ್ನಿಸ್ ಕೃಷ್ಣ ಸ್ಪರ್ಧೆ

    ಯುವತಿಯ ಮುಖಕ್ಕೆ ಆ್ಯಸಿಡ್ ಎರಚಿದ್ದರಿಂದ ಯುವತಿಯ ಎಡಗಣ್ಣು ಹಾಗೂ ಮುಖಕ್ಕೆ ಗಾಯಗಳಾಗಿದೆ. ಕೂಡಲೇ ಯುವತಿಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಬೆಂಗಳೂರಿನ ನಿಮ್ಹಾನ್ಸ್‌ಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ವೇಳೆ ಕಿರಿಕ್ – ಇಬ್ಬರ ಹತ್ಯೆಯಲ್ಲಿ ಅಂತ್ಯ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಡವಾಗಿ ಮನೆಗೆ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ಮುಖಕ್ಕೆ ಆ್ಯಸಿಡ್ ಎರಚಿದ ಪತ್ನಿ!

    ತಡವಾಗಿ ಮನೆಗೆ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ಮುಖಕ್ಕೆ ಆ್ಯಸಿಡ್ ಎರಚಿದ ಪತ್ನಿ!

    ಲಕ್ನೋ: ಮನೆಗೆ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ರೊಚ್ಚಿಗೆದ್ದ ಪತ್ನಿಯೊಬ್ಬಳು ಪತಿ ಮುಖದ ಮೇಲೆ ಆ್ಯಸಿಡ್ ಎರಚಿದ ವಿಲಕ್ಷಣ ಘಟನೆಯೊಂದು ಉತ್ತರಪ್ರದೇಶದ ಕಾನ್ಪುರದ ಕೂಪರ್ ಗಂಜ್ ಪ್ರದೇಶದಲ್ಲಿ ನಡೆದಿದೆ.

    ಆ್ಯಸಿಡ್ ದಾಳಿ (Acid Attack) ಗೆ ಒಳಗಾದ ವ್ಯಕ್ತಿಯನ್ನು ಡಬ್ಬು ಎಂದು ಗುರುತಿಸಲಾಗಿದ್ದು, ಉರ್ಸಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಒಡಿಶಾ ಆರೋಗ್ಯ ಸಚಿವರ ಹತ್ಯೆ ಕೇಸ್ – ASIಗೆ ಇತ್ತು Bipolar Disorder ಮಾನಸಿಕ ಕಾಯಿಲೆ

    ಡಬ್ಬು ತನ್ನ ಪತ್ನಿ (Wife) ಜೊತೆ ಮನೆಗೆ ಬರಲು ತಡವಾಗಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಅಲ್ಲದೆ ಪತಿಯ ಮಾತಿನಿಂದ ಸಿಟ್ಟಿಗೆದ್ದ ಪತ್ನಿ ಆ್ಯಸಿಡ್ ಬಾಟ್ಲಿ ತೆಗೆದುಕೊಂಡು ಮುಚ್ಚಳ ತೆಗೆದು ಪತಿಯ ಮುಖಕ್ಕೆ ಎರಚಿದ್ದಾಳೆ ಎಂದು ಆತ ನಡೆದ ಘಟನೆಯನ್ನು ವಿವರಿಸಿದ್ದಾನೆ.

    ಪ್ರಕರಣ ಸಂಬಂಧ ಪೊಲೀಸರು ಪತ್ನಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆ್ಯಸಿಡ್ ನಾಗನ ಪರ ವಾದಿಸಲು ಮುಂದೆ ಬರುತ್ತಿಲ್ಲ ವಕೀಲರು

    ಆ್ಯಸಿಡ್ ನಾಗನ ಪರ ವಾದಿಸಲು ಮುಂದೆ ಬರುತ್ತಿಲ್ಲ ವಕೀಲರು

    ಬೆಂಗಳೂರು: ಪ್ರೀತಿ ಮಾಡಲು ಒಪ್ಪದ ಯುವತಿಯ ಮೇಲೆ ಆ್ಯಸಿಡ್ (Acid) ಹಾಕಿದ್ದ ಸೈಕೋಪಾತ್ ನಾಗ ಅಲಿಯಾಸ್‌ ನಾಗೇಶ್‌ (Nagesh) ಪರ ವಕಾಲತ್ತು ವಹಿಸಿಕೊಳ್ಳಲು ವಕೀಲರು ಮುಂದೆ ಬರುತ್ತಿಲ್ಲ.

    ನಾಗನ ವಿರುದ್ಧ ದೋಷಾರೋಪ ಪಟ್ಟಿ (Chargesheet) ಈಗಾಗಲೇ ಸಲ್ಲಿಕೆಯಾಗಿದೆ. ಆರೋಪ ಸಾಬೀತಾಗಬೇಕಾದರೆ ನ್ಯಾಯಾಲಯದಲ್ಲಿ(Court) ವಿಚಾರಣೆ ನಡೆಯಬೇಕು. ಇದನ್ನೂ ಓದಿ: ರಾಹುಲ್‌ ಬಾಬಾ ಕೇಳಿ, 2024ರ ಜ.1ಕ್ಕೆ ರಾಮ ಮಂದಿರ ಲೋಕಾರ್ಪಣೆ: ಅಮಿತ್‌ ಶಾ

     

    ವಕೀಲರು ಸಿಗದ ಕಾರಣ ಆರೋಪ ಸಾಬೀತಾಗದೇ ಪ್ರಕರಣ ಮುಂದಕ್ಕೂ ಹೋಗದೇ ಜೈಲಿನಲ್ಲಿಯೇ ನಾಗ ದಿನ ಕಳೆಯುತ್ತಿದ್ದಾನೆ. ಈಗ ಸರ್ಕಾರದಿಂದ ಉಚಿತವಾಗಿ ಸಿಗುವ ವಕೀಲರಿಗಾಗಿ ನಾಗ ಎದುರು ನೋಡುತ್ತಿದ್ದಾನೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಲಕಿಯ ಮೇಲೆ ಆ್ಯಸಿಡ್ ಎರಚಿದವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ: ಗೌತಮ್ ಗಂಭೀರ್

    ಬಾಲಕಿಯ ಮೇಲೆ ಆ್ಯಸಿಡ್ ಎರಚಿದವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ: ಗೌತಮ್ ಗಂಭೀರ್

    ನವದೆಹಲಿ: ಶಾಲೆಗೆ ಹೋಗುತ್ತಿದ್ದ 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿದ (Acid Attack) ವ್ಯಕ್ತಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಬಿಜೆಪಿ ಸಂಸದ ಗೌತಮ್ ಗಂಭೀರ್ (Gautam Gambhir) ಒತ್ತಾಯಿಸಿದರು.

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆ್ಯಸಿಡ್ ಎರಚುವಂತಹ ಪ್ರಕರಣಗಳಲ್ಲಿ ಪಾಲ್ಗೊಳ್ಳುವವರಲ್ಲಿ ಭಯವನ್ನು ಹುಟ್ಟು ಹಾಕುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು ಅವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ತಿಳಿಸಿದರು.

    ಬುಧವಾರ ಪಶ್ಚಿಮ ದೆಹಲಿಯಲ್ಲಿ ಇಬ್ಬರು ಬೈಕ್‍ನಲ್ಲಿ ಬಂದ ಮುಸುಕುಧಾರಿಗಳಿಂದ ಬಾಲಕಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಘಟನೆ ನಡೆದು ಗಂಟೆಗಳೊಳಗೆ, ಆಕೆಯ ನೆರೆ ಮನೆಯಾತ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಆ್ಯಸಿಡ್ ತರಕಾರಿಯಂತೆ ಮಾರಾಟವಾಗುತ್ತಿದೆ: ಡಿಸಿಡಬ್ಲ್ಯು ಮುಖ್ಯಸ್ಥೆ ಕಿಡಿ

    ಬಾಲಕಿಗೆ ಮುಖದ ಮೇಲೆ ಸುಟ್ಟ ಗಾಯಗಳಾಗಿದ್ದು, ಆಕೆ ಸಫ್ದರ್‍ಜಂಗ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    Live Tv
    [brid partner=56869869 player=32851 video=960834 autoplay=true]

  • ಆ್ಯಸಿಡ್ ತರಕಾರಿಯಂತೆ ಮಾರಾಟವಾಗುತ್ತಿದೆ: ಡಿಸಿಡಬ್ಲ್ಯು ಮುಖ್ಯಸ್ಥೆ ಕಿಡಿ

    ಆ್ಯಸಿಡ್ ತರಕಾರಿಯಂತೆ ಮಾರಾಟವಾಗುತ್ತಿದೆ: ಡಿಸಿಡಬ್ಲ್ಯು ಮುಖ್ಯಸ್ಥೆ ಕಿಡಿ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಇಂದು ಶಾಲಾ ಬಾಲಕಿ ಮೇಲೆ ನಡೆದ ಆ್ಯಸಿಡ್ ದಾಳಿ (Acid Attack) ಜನರನ್ನು ಭಯಭೀತಗೊಳಿಸಿದೆ. ಈ ಭೀಕರ ಘಟನೆ ನಡೆದ ಬಳಿಕ ದೆಹಲಿ ಮಹಿಳಾ ಆಯೋಗದ (DCW) ಮುಖ್ಯಸ್ಥೆ ಸ್ವಾತಿ ಮಲಿವಾಲ್ (Swati Maliwal) ಮಾರುಕಟ್ಟೆಗಳಲ್ಲಿ ಆ್ಯಸಿಡ್ ತರಕಾರಿಯಂತೆ ಮಾರಾಟವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

    ಪಶ್ಚಿಮ ದೆಹಲಿಯ ಉತ್ತಮ್ ನಗರದ ಬಳಿಕ ಇಂದು ಬೆಳಗ್ಗೆ 7:30ರ ಹೊತ್ತಿಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 17 ವರ್ಷದ ಬಾಲಕಿ ಮೇಲೆ ಆ್ಯಸಿಡ್ ಎರಚಿದ್ದಾರೆ. ಘಟನೆಯಿಂದ ಬಾಲಕಿಯ ಮುಖ ಹಾಗೂ ಕಣ್ಣುಗಳಿಗೆ ಸುಟ್ಟ ಗಾಯಗಳಾಗಿವೆ. ಬಾಲಕಿಯನ್ನು ನಗರದ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಆರೋಪಿಗಳ ಹೆಸರನ್ನು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಆರೋಪಿಗಳಲ್ಲಿ ಈಗಾಗಲೇ ಒಬ್ಬನನ್ನು ಬಂಧಿಸಲಾಗಿದೆ.

    ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸ್ವಾತಿ ಮಲಿವಾಲ್, ಆ್ಯಸಿಡ್ ಮಾರಾಟದ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಾವು ನ್ಯಾಯಾಲಯವನ್ನು ಒತ್ತಾಯಿಸುತ್ತೇವೆ. ಘಟನೆಯ ಕುರಿತು ನಾವು ನಗರದ ಪೊಲೀಸರಿಗೆ ನೋಟಿಸ್ ನೀಡಿದ್ದೇವೆ. ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ತಿಳಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಡಿಸಿಡಬ್ಲ್ಯು ಈ ಹಿಂದೆಯೇ ಹಲವಾರು ಸೂಚನೆಗಳನ್ನು ನೀಡಿದೆ. ಹಲವಾರು ಶಿಫಾರಸುಗಳನ್ನು ಮಾಡಿದೆ. ಆದರೆ ಆ್ಯಸಿಡ್ ಮಾರಾಟ ಇನ್ನೂ ಕೂಡಾ ಮುಂದುವರಿದಿದೆ. ಮಾರುಕಟ್ಟೆಗಳಲ್ಲಿ ತರಕಾರಿಗಳನ್ನು ಮಾರಾಟ ಮಾಡಿದಂತೆ ಆ್ಯಸಿಡ್ ಮಾರಾಟವಾಗುತ್ತಿದೆ. ಯಾರು ಬೇಕಾದರೂ ಆ್ಯಸಿಡ್ ಖರೀದಿಸಿ ಇಂತಹ ಕೃತ್ಯಗಳನ್ನು ಮಾಡಬಹುದು. ಇಂತಹ ಸಂದರ್ಭದಲ್ಲಿ ಸರ್ಕಾರ ಏಕೆ ನಿದ್ರಿಸುತ್ತಿದೆ? ಹುಡುಗಿಯರ ಮೇಲೆ ಆ್ಯಸಿಡ್ ದಾಳಿಯಾದಾಗ ಅವರು ಬಾಹ್ಯವಾಗಿ ಮಾತ್ರವಲ್ಲದೇ ಆಂತರಿಕವಾಗಿಯೂ ಗಾಯಗೊಳ್ಳುತ್ತಾರೆ. ಅವರ ಜೀವನವೇ ನಾಶವಾಗಿ ಹೋಗುತ್ತದೆ ಎಂದು ಹೇಳಿದರು.

    ಆ್ಯಸಿಡ್ ದಾಳಿಗೊಳಗಾದ ಬಾಲಕಿಯ ಮುಖ ಹಾಗೂ ಕಣ್ಣುಗಳಿಗೆ ಗಾಯಗಳಾಗಿವೆ. ಆಕೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಐಸಿಯುನಲ್ಲಿ ಇರಿಸಲಾಗಿದೆ. ಆಕೆಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ವೈದ್ಯನಿಂದ ಪತ್ನಿಯ ಬರ್ಬರ ಹತ್ಯೆ – ಸೂಟ್‍ಕೇಸ್‍ನಲ್ಲಿ ತುಂಬಿ 400 ಕಿ.ಮೀ ದೂರದಲ್ಲಿ ಸುಟ್ಟು ಹಾಕಿದ

    Live Tv
    [brid partner=56869869 player=32851 video=960834 autoplay=true]

  • 14ರ ಬಾಲಕಿಯ ಕತ್ತು ಸೀಳಿ, ಮುಖಕ್ಕೆ ಆ್ಯಸಿಡ್ ಹಾಕಿದ ಪಾಪಿ

    14ರ ಬಾಲಕಿಯ ಕತ್ತು ಸೀಳಿ, ಮುಖಕ್ಕೆ ಆ್ಯಸಿಡ್ ಹಾಕಿದ ಪಾಪಿ

    ಅಮರಾವತಿ: ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯ ಕತ್ತು ಸೀಳಿ, ಆಕೆಯ ಮುಖಕ್ಕೆ ಆ್ಯಸಿಡ್ ಹಾಕಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.

    ಭೀಕರ ಕೃತ್ಯ ಎಸಗಿರುವ ಆರೋಪಿ ಬಾಲಕಿಯ ಕುಟುಂಬದ ಹತ್ತಿರದ ಸಂಬಂಧಿ ಎಂದು ಹೇಳಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆ್ಯಸಿಡ್ ದಾಳಿಗೆ ತುತ್ತಾದ ಬಾಲಕಿಯನ್ನು ಮೊದಲಿಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಅಪೋಲೋ ಆಸ್ಪತ್ರೆಗೆ ರವಾನಿಸಲಾಗಿದೆ.

    ಘಟನೆಯೇನು?
    ವರದಿಗಳ ಪ್ರಕಾರ ಕೃತ್ಯ ಎಸಗಿರುವ ಆರೋಪಿ ಸಂತ್ರಸ್ತೆಯ ಹತ್ತಿರದ ಸಂಬಂಧಿಯಾಗಿದ್ದು, ಹಣದ ಆಸೆಯಿಂದ ಬಾಲಕಿ ಮೇಲೆ ಹಲ್ಲೆ ನಡೆಸಿದ್ದಾನೆ. ಸೋಮವಾರ ಮಧ್ಯಾಹ್ನ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮದ್ಯದ ಅಮಲಿನಲ್ಲಿದ್ದ ಆತ ಕಳ್ಳತನಕ್ಕಾಗಿ ಬಂದಿದ್ದ. ಮನೆಯೊಳಗೆ ಹೊಕ್ಕ ಆರೋಪಿ ಬಾಲಕಿ ಮೇಲೆ ಆ್ಯಸಿಡ್ ದಾಳಿ ನಡೆಸಿ, ಕತ್ತು ಕುಯ್ದಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಚೀನಾ ಭೂಕಂಪ – ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ ವೀಡಿಯೋಗಳು

    ಘಟನೆ ಬಗ್ಗೆ ತಿಳಿದ ಸ್ಥಳೀಯರು ತಕ್ಷಣವೇ ಬಾಲಕಿಯ ತಂದೆಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ. ಬಳಿಕ 108 ಸಹಾಯವಾಣಿಗೆ ಕರೆ ಮಾಡಿ, ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

    CRIME

    ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಭಾರತೀಯ ದಂಡಸಂಹಿತೆ(ಐಪಿಸಿ) ಹಾಗೂ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ್ಯಸಿಡ್ ದಾಳಿಯಿಂದಾಗಿ ಬಾಲಕಿಯ ಮುಖ ಸುಟ್ಟು ಹೋಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಭೀಮಾತೀರದಲ್ಲಿ ಮತ್ತೆ ರಕ್ತಪಾತ – ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದ ತಮ್ಮ

    Live Tv
    [brid partner=56869869 player=32851 video=960834 autoplay=true]

  • ಆ್ಯಸಿಡ್ ದಾಳಿಯಲ್ಲಿ ಬದುಕುಳಿದ 17ರ ಹುಡುಗಿ ದೆಹಲಿಗೆ ಏರ್‌ಲಿಫ್ಟ್‌

    ಆ್ಯಸಿಡ್ ದಾಳಿಯಲ್ಲಿ ಬದುಕುಳಿದ 17ರ ಹುಡುಗಿ ದೆಹಲಿಗೆ ಏರ್‌ಲಿಫ್ಟ್‌

    ನವದೆಹಲಿ: ಆ್ಯಸಿಡ್ ದಾಳಿಗೆ ಒಳಗಾಗಿ ಬದುಕುಳಿದ 17 ವರ್ಷದ ಹುಡುಗಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಾರ್ಖಂಡ್‌ನಿಂದ ದೆಹಲಿಗೆ ಏರ್‌ಲಿಫ್ಟ್‌ ಮಾಡಲಾಗಿದೆ.

    ಈ ಕುರಿತು ಜಾರ್ಖಂಡ್‌ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ವೈದ್ಯಕೀಯ ಮಂಡಳಿಯು ಬಾಲಕಿಯನ್ನು ದೆಹಲಿಯ ಏಮ್ಸ್‌ಗೆ ಶಿಫಾರಸು ಮಾಡಿದೆ. ಇದನ್ನೂ ಓದಿ: ಬಲವಂತದ ಮತಾಂತರ ಆರೋಪ – ಪಾದ್ರಿಯ ಕಾರಿಗೆ ಬೆಂಕಿ, ಚರ್ಚ್ ಧ್ವಂಸ

    ರಿಮ್ಸ್ ಸೂಪರಿಂಟೆಂಡೆಂಟ್ ನೇತೃತ್ವದಲ್ಲಿ ರಚನೆಯಾದ ವೈದ್ಯಕೀಯ ಮಂಡಳಿ ನೀಡಿದ ವರದಿಯ ಆಧಾರದ ಮೇಲೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಬುಧವಾರ ಬಾಲಕಿಯನ್ನು ಏರ್‌ಲಿಫ್ಟ್ ಮಾಡುವ ನಿರ್ಧಾರ ಕೈಗೊಂಡರು ಎಂದು ಮುಖ್ಯಮಂತ್ರಿಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

    ಆ್ಯಸಿಡ್ ಸಂತ್ರಸ್ತೆ ಮತ್ತು ಆಕೆಯ ಕುಟುಂಬಕ್ಕೆ ಎಲ್ಲಾ ಸಹಕಾರ ನೀಡುವಂತೆ ಸೋರೆನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆಗಳೊಂದಿಗೆ ಸಂತ್ರಸ್ತೆಗೆ ಉತ್ತಮ ಚಿಕಿತ್ಸೆ ಕೊಡಿಸಲು ರಾಂಚಿ ಡಿಸಿ ಅವರು ದೆಹಲಿಗೆ ಸ್ಥಳಾಂತರಿಸುವ ಕ್ರಮ ಕೈಗೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕನನ್ನೇ ಮರಕ್ಕೆ ಕಟ್ಟಿ ಥಳಿಸಿದ ವಿದ್ಯಾರ್ಥಿಗಳು!

    ಜಾರ್ಖಂಡ್‌ನ ಚತ್ರಾ ಜಿಲ್ಲೆಯ 17ರ ಹುಡುಗಿ ಆಗಸ್ಟ್ 5 ರಂದು ಆ್ಯಸಿಡ್ ದಾಳಿಗೆ ಒಳಗಾಗಿದ್ದಳು. ಅದೇ ದಿನ ಆರೋಪಿಯನ್ನು ಬಂಧಿಸಲಾಗಿದ್ದು, ಕಾನೂನು ಪ್ರಕ್ರಿಯೆ ನಡೆಯುತ್ತಿದೆ ಎಂದು ಛತ್ರದ ಉಪ ಆಯುಕ್ತ ಅಬು ಇಮ್ರಾನ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 20ಕ್ಕೂ ಹೆಚ್ಚು ಎಮ್ಮೆ, ಹಸುಗಳ ಮೇಲೆ ಆ್ಯಸಿಡ್ ಎರಚಿದ ಕಿಡಿಗೇಡಿಗಳು!

    20ಕ್ಕೂ ಹೆಚ್ಚು ಎಮ್ಮೆ, ಹಸುಗಳ ಮೇಲೆ ಆ್ಯಸಿಡ್ ಎರಚಿದ ಕಿಡಿಗೇಡಿಗಳು!

    ಆನೇಕಲ್: ಎಮ್ಮೆ ಹಾಗೂ ಹಸುಗಳ ಮೇಲೆ ಆ್ಯಸಿಡ್ ಎರಚಿ ಅಮಾನುಷವಾಗಿ ನಡೆದುಕೊಂಡಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳ್ಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ನೆಟ್ಟುಪಾಳ್ಯಂ ಸಮೀಪದ ರಾಜಕುಮಾರ್ ಎಂಬವರಿಗೆ ಸೇರಿದ ಸುಮಾರು 20ಕ್ಕೂ ಹೆಚ್ಚು ಎಮ್ಮೆ ಹಾಗೂ ಹಸುಗಳ ಮೇಲೆ ಕೆಲ ದುಷ್ಕರ್ಮಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ರಾಜಕುಮಾರ್ ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನವನ್ನು ಸಾಗಿಸುತ್ತಿದ್ದರು. ಆದರೆ ಯಾರೋ ಕಿಡಿಗೇಡಿಗಳು ಮೊನ್ನೆ ರಾತ್ರಿ ಪ್ರಾಣಿಗಳ ಮೇಲೆ ಆ್ಯಸಿಡ್ ಎರಚಿದ್ದು, ಬೆನ್ನು ತಲೆ ಕಾಲು ಹಾಗೂ ದೇಹದ ಹಲವು ಭಾಗಗಳಿಗೆ ಆ್ಯಸಿಡ್ ಬಿದ್ದು ತೀವ್ರ ರಕ್ತಸ್ರಾವವಾಗಿದೆ.

    ಸ್ಥಳಕ್ಕೆ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಜಾನುವಾರುಗಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಈ ಕೃತ್ಯವನ್ನು ಮಾಡಿರುವಂತಹ ಕಿಡಿಗೇಡಿಗಳು ಯಾರು ಎಂಬ ಮಾಹಿತಿ ಇನ್ನು ಸಹ ಲಭ್ಯವಾಗಿಲ್ಲ.

    ಅಮಾನುಷ ಕೃತ್ಯ ಎಸಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆಜಾನ್ ವೇಳೆ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    Live Tv
    [brid partner=56869869 player=32851 video=960834 autoplay=true]

  • ಆ್ಯಸಿಡ್ ಸಂತ್ರಸ್ತೆಯ ಸರ್ಜರಿಗೆ ನೆರವಾದ ಪೊಲೀಸರು

    ಆ್ಯಸಿಡ್ ಸಂತ್ರಸ್ತೆಯ ಸರ್ಜರಿಗೆ ನೆರವಾದ ಪೊಲೀಸರು

    ಬೆಂಗಳೂರು: ಇತ್ತೀಚೆಗೆ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ರಕ್ತದ ಅವಶ್ಯಕತೆ ಇದ್ದು, ಸಂತ್ರಸ್ತೆಗೆ ರಕ್ತ ದಾನ ಮಾಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಏಪ್ರಿಲ್ 28ರಂದು ಸುಂಕದಕಟ್ಟೆಯಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿ ಸರ್ಜರಿಗೆ ಒಳಗಾಗಿದ್ದು, ರಕ್ತದ ಅವಶ್ಯಕತೆ ಇತ್ತು. ಹೀಗಾಗಿ ನಗರದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಪ್ರಶಾಂತ್ ಸೇರಿದಂತೆ ಐವರು ಸಿಬ್ಬಂದಿ ರಕ್ತದಾನ ಮಾಡಿದ್ದಾರೆ. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.3.47ಕ್ಕೆ ಏರಿಕೆ – ಬೆಂಗ್ಳೂರಲ್ಲಿ 791 ಕೇಸ್

    ಪೊಲೀಸರು 5 ಯುನಿಟ್ ರಕ್ತದಾನ ಮಾಡಿದ್ದು, ಸಂತ್ರಸ್ತ ಯುವತಿ ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಮೊದಲ ದಿನ ಸಿಇಟಿ ಪರೀಕ್ಷೆ ಸುಗಮ: ಅಶ್ವಥ್ ನಾರಾಯಣ

    Live Tv

  • ಬೆಂಗಳೂರಿನಲ್ಲಿ ಸ್ನೇಹಿತನಿಂದ ಗೆಳೆಯನ ಮೇಲೆಯೇ ಆ್ಯಸಿಡ್ ದಾಳಿ

    ಬೆಂಗಳೂರಿನಲ್ಲಿ ಸ್ನೇಹಿತನಿಂದ ಗೆಳೆಯನ ಮೇಲೆಯೇ ಆ್ಯಸಿಡ್ ದಾಳಿ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ. ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ಮಾಡಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್‍ನಲ್ಲಿ ನಡೆದಿದೆ.

    ಇತ್ತೀಚೆಗಷ್ಟೇ ಯುವತಿ ಮೇಲೆ ಯುವಕನೊಬ್ಬ ಆ್ಯಸಿಡ್ ದಾಳಿ ಮಾಡಿ ವಿಕೃತಿ ಮೆರೆದಿದ್ದ. ಇದಿನ್ನೂ ಮಾಸದೇ ಹಾಗೇ ಉಳಿದಿರುವಾಗಲೇ ಮತ್ತೊಂದು ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ತನ್ನ ಸ್ನೇಹಿತನಿಗೆ ಆ್ಯಸಿಡ್ ಎರಚಿದ್ದಾನೆ. ಜನತಾ ಅದಕ್ ಹಾಗೂ ಸಂತ್ರಸ್ತ ಬೆಳ್ಳಿ ಪಾಲಿಶ್ ಅಂಗಡಿಯಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದರು. ಆದರೆ ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಜನತಾ ಅದಕ್ ಹಾಗೂ ಸಂತ್ರಸ್ತ ಕುಡಿದು ಗಲಾಟೆ ಮಾಡಿಕೊಂಡಿದ್ದರು.

    crime

    ಈ ವೇಳೆ ಸಂತ್ರಸ್ತ ಮೊಬೈಲ್‍ನಲ್ಲಿ ವೀಡಿಯೋ ಮಾಡಲು ಮುಂದಾಗಿದ್ದ. ಇದರಿಂದ ಕೋಪಗೊಂಡ ಜನತಾ ಅದಕ್ ಬೆಳ್ಳಿ ಪಾಲಿಶ್ ಮಾಡಲು ತಂದಿದ್ದ ಡೈಲೂಟ್ ಆ್ಯಸಿಡ್ ಎರಚಿ ಕೃತ್ಯವೆಸಗಿದ್ದಾನೆ. ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಬೆಂಬಲ ಕೇಳಿದ ರೇವಣ್ಣ

    ಘಟನೆಯಲ್ಲಿ ಸಂತ್ರಸ್ತನ ಮುಖ, ಎದೆ ಗಾಯವಾಗಿದ್ದು, ಶೇ.30ರಷ್ಟು ಸುಟ್ಟಿದೆ. ಸಂತ್ರಸ್ತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರಕರಣ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಜನತಾ ಅದಕ್‍ನನ್ನು ಮೈಸೂರು ಬಳಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಅತಿ ದೊಡ್ಡ ಕೂಗು ಮಾರಿ ಅಂದ್ರೆ ಅದು ಸಿದ್ದರಾಮಯ್ಯ: ಪ್ರತಾಪ್ ಸಿಂಹ