Tag: ACP

  • ವಕ್ಫ್‌ ಪ್ರತಿಭಟನಾಕಾರರಿಗೆ ಡ್ರಾಪ್‌ ಕೊಟ್ಟಿಲ್ಲ, ಅಪಘಾತಗೊಂಡ ಬಾಲಕನನ್ನು ಎಸಿಪಿ ಕಾರಿನಲ್ಲಿ ಸಾಗಿಸಲಾಗಿತ್ತು: ಮಂಗಳೂರು ಪೊಲೀಸ್‌

    ವಕ್ಫ್‌ ಪ್ರತಿಭಟನಾಕಾರರಿಗೆ ಡ್ರಾಪ್‌ ಕೊಟ್ಟಿಲ್ಲ, ಅಪಘಾತಗೊಂಡ ಬಾಲಕನನ್ನು ಎಸಿಪಿ ಕಾರಿನಲ್ಲಿ ಸಾಗಿಸಲಾಗಿತ್ತು: ಮಂಗಳೂರು ಪೊಲೀಸ್‌

    ಮಂಗಳೂರು: ವಕ್ಫ್ ತಿದ್ದುಪಡಿ ಕಾನೂನು ವಿರೋಧಿಸಿ ಮಂಗಳೂರಿನಲ್ಲಿ (Mangaluru) ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ವಾಹನ ದುರ್ಬಳಕೆಯಾಗಿರುವ ಆರೋಪ ಕೇಳಿ ಬಂದಿತ್ತು. ಹೆದ್ದಾರಿ ಬಂದ್ ವೇಳೆ ಕೆಲವು ಪ್ರತಿಭಟನಾಕಾರರನ್ನು ಎಸಿಪಿ ವಾಹನದಲ್ಲೇ ಕರೆದೊಯ್ದ ವೀಡಿಯೋ ವೈರಲ್ ಆಗಿತ್ತು.  ವೈರಲ್‌ ಆದ ಬೆನ್ನಲ್ಲೇ ಅಪಘಾತಗೊಂಡ ಬಾಲಕನನ್ನು ಎಸಿಪಿ ಕಾರಿನಲ್ಲಿ ಸಾಗಿಸಲಾಗಿತ್ತುಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.

    ನಡೆದಿದ್ದು ಏನು? ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಷಾ ಗಾರ್ಡನ್ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡೇ ಇದ್ದ ಮೈದಾನದಿಂದ ಹೊರ ಬಂದ ಪ್ರತಿಭಟನಾಕಾರರು ಹೆದ್ದಾರಿಯಲ್ಲೇ ನಿಂತಿದ್ದರು. ಹೆದ್ದಾರಿ ಬಂದ್ ಮಾಡೋ ಪ್ಲಾನ್ ಪೊಲೀಸರು ಮೊದಲೇ ಮಾಡಿದ್ದರೂ ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಹೆದ್ದಾರಿ ಬಂದ್ ಮಾಡದೆ ವಾಹನ ಸಂಚಾರಕ್ಕೆ ಮುಕ್ತವಾಗಿಸಿದ್ದರು. ಆದರೆ ಮೈದಾನದಲ್ಲಿರಬೇಕಾದ ಪ್ರತಿಭಟನಾಕಾರರು ಹೆದ್ದಾರಿಗೆ ಬಂದು ನಿಂತು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಕೆಲ ಗಂಟೆಗಳ ಕಾಲ ಕಿ.ಮೀ ದೂರದವರೆಗೆ ವಾಹನಗಳು ನಿಂತಿದ್ದವು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ ಕಾನೂನು ಮಾಡಿದ್ರೆ ಸಂಸತ್ತು ಭವನವನ್ನು ಮುಚ್ಚಬೇಕು: ಬಿಜೆಪಿ ಎಂಪಿ ನಿಶಿಕಾಂತ್‌ ದುಬೆ

    ಈ ನಡುವೆ ಕಾರ್ಯಕ್ರಮ ಮುಗಿದ ಬಳಿಕ ಕೆಲ ಪ್ರತಿಭಟನಾಕಾರರನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದರು ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿತ್ತು. ಮಂಗಳೂರು ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ಅವರ ಸರ್ಕಾರಿ ಕಾರಿನಲ್ಲಿ ಕೆಲ ಪ್ರತಿಭಟನಾಕಾರರನ್ನು ಕರೆದೊಯ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರ ಸರ್ಕಾರಿ ವಾಹನಗಳನ್ನು ದುರ್ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಪ. ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತನ್ನಿ – ಕೇಂದ್ರಕ್ಕೆ ನಟ ಮಿಥುನ್ ಚಕ್ರವರ್ತಿ ಆಗ್ರಹ

    ಪೊಲೀಸರು ಹೇಳೋದು ಏನು?
    ನಗರ ಪೊಲೀಸ್‌ ಆಯುಕ್ತರು ಈ ಘಟನೆಗೆ ಸ್ಪಷ್ಟನೆ ನೀಡಿದ್ದು ಇದು ಪ್ರತಿಭಟನಾಕಾರರನ್ನು ಸಾಗಿಸಿದ್ದು ಅಲ್ಲ. ಈ ಸಂದರ್ಭದಲ್ಲಿ ಟೆಂಪೋ ಟ್ರಾವೆಲ್ಲರ್‌ ಬಾಲಕನಿಗೆ ಗುದ್ದಿತ್ತು. ಬಾಲಕನ ಕಾಲಿನ ಮೇಲೆ ಚಕ್ರ ಹರಿದು ಹೋಗಿತ್ತು. ಬಾಲಕನನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಎಸಿಪಿ ಅವರ ಕಾರಿನಲ್ಲಿ ಸಾಗಿಸಿದ್ದಾರೆ. ಆ ವೇಳೆ ಗಾಯಾಳುವಿನ ಜೊತೆ ಇತರರು ಇದ್ದರು ಎಂದು ಸ್ಪಷ್ಟೀಕರಣ ನೀಡಿದ್ದಾರೆ.

  • ಮಹಿಳಾ ಎಸಿಪಿ ಜೊತೆ ಸಂಬಂಧ ಆರೋಪ – ಎಸಿಪಿ ಗೋವರ್ಧನ್ ವಿರುದ್ಧ ಪತ್ನಿ ದೂರು

    ಮಹಿಳಾ ಎಸಿಪಿ ಜೊತೆ ಸಂಬಂಧ ಆರೋಪ – ಎಸಿಪಿ ಗೋವರ್ಧನ್ ವಿರುದ್ಧ ಪತ್ನಿ ದೂರು

    ಬೆಂಗಳೂರು: ಆಗ್ನೇಯ ವಿಭಾಗದ ಸೆನ್ ಎಸಿಪಿ ಗೋವರ್ಧನ್ ಹಾಗೂ ಮಹಿಳಾ ಎಸಿಪಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ಎಸಿಪಿ ಗೋವರ್ಧನ್ ಪತ್ನಿ ತನ್ನ ಗಂಡ ಹಾಗೂ ಮತ್ತೊಬ್ಬ ಮಹಿಳಾ ಅಧಿಕಾರಿಯ ವಿರುದ್ಧ ದೂರು ನೀಡಿದ್ದಾರೆ.

    ಡಿವೈಎಸ್ಪಿ ಆಗಿ ಆಯ್ಕೆ ಆದಾಗಿನಿಂದ ಕುಟುಂಬವನ್ನು ದೂರ ಮಾಡಿದ್ದಾರೆ. ಅವರದೇ ಬ್ಯಾಚ್‌ನ ಮಹಿಳಾ ಅಧಿಕಾರಿಯ ಜೊತೆ ಸಂಬಂಧ ಹೊಂದಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಗೋವರ್ಧನ್ ಪತ್ನಿ ಅಮೃತ ದೂರು ನೀಡಿದ್ದಾರೆ.

    ಮಹಿಳಾ ಅಧಿಕಾರಿ ಹಾಗೂ ಗೋವರ್ಧನ್ ನಡುವಿನ ಚಾಟ್ ಸಿಕ್ಕಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

  • ಪತ್ನಿ, ಸೋದರಳಿಯನಿಗೆ ಗುಂಡು ಹಾರಿಸಿ ಆತ್ಮಹತ್ಯೆಗೆ ಶರಣಾದ ಎಸಿಪಿ

    ಪತ್ನಿ, ಸೋದರಳಿಯನಿಗೆ ಗುಂಡು ಹಾರಿಸಿ ಆತ್ಮಹತ್ಯೆಗೆ ಶರಣಾದ ಎಸಿಪಿ

    ಮುಂಬೈ: ಪೊಲೀಸ್ ಕಮಿಷನರ್ (ACP) ಒಬ್ಬರು ಪತ್ನಿ ಹಾಗೂ ಸೋದರಳಿಯನಿಗೆ ಗುಂಡು ಹಾರಿಸಿ ಹತ್ಯೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ (Maharashtra) ಪುಣೆಯಲ್ಲಿ (Pune) ನಡೆದಿದೆ.

    ಮೃತರನ್ನು ಪೊಲೀಸ್ (Police) ಅಧಿಕಾರಿಯ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಹಾಗೂ ಭರತ್ ಗಾಯಕ್ವಾಡ್ (57) ಎನ್ನಲಾಗಿದೆ. ಎಸಿಪಿ ಭರತ್ ಗಾಯಕ್ವಾಡ್ ಬೆಳಗ್ಗಿನ ಜಾವ 3.30ರ ಸುಮಾರಿಗೆ ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ. ಬಂದೂಕಿನಿಂದ ಬಂದ ಸ್ಫೋಟದ ಸದ್ದಿಗೆ ಎಸಿಪಿ ಮಗ ಹಾಗೂ ಸೋದರಳಿಯ ಪಕ್ಕದ ರೋಮ್‍ನಿಂದ ಎದ್ದು ಬಂದಿದ್ದಾರೆ. ಈ ವೇಳೆ ಸೋದರಳಿಯನ ಮೇಲೂ ಗುಂಡು ಹಾರಿಸಲಾಗಿದೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೋಣಿ ಮುಳುಗಿ 15 ಮಂದಿ ಸಾವು, ಹಲವರು ನಾಪತ್ತೆ

    ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಘಟನೆಯ ಕಾರಣ ಪತ್ತೆಹಚ್ಚಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಚತುಶೃರ್ಂಗಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು. ಅವರು ಮನೆಗೆ ಬಂದಿದ್ದರು, ಈ ವೇಳೆ ಯಾವ ಕಾರಣಕ್ಕೆ ಈ ನಿರ್ಧಾರ ಕೈಗೊಂಡರು ಎಂಬುದು ತಿಳಿಯುತ್ತಿಲ್ಲ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಸಾವು- ಮೊಬೈಲ್‍ನಲ್ಲಿ ಕೊನೇ ಕ್ಷಣ ಸೆರೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಂಚಕ್ಕೆ ಬೇಡಿಕೆ – ಇಬ್ಬರು ಕಾನ್ಸ್‌ಟೇಬಲ್ ಕೆಲಸದಿಂದ ವಜಾ

    ಲಂಚಕ್ಕೆ ಬೇಡಿಕೆ – ಇಬ್ಬರು ಕಾನ್ಸ್‌ಟೇಬಲ್ ಕೆಲಸದಿಂದ ವಜಾ

    ಬೆಂಗಳೂರು: ಪೊಲೀಸರಿಂದ ಸಾರ್ವಜನಿಕರ ಸುಲಿಗೆ ಪ್ರಕರಣದಲ್ಲಿ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು (Constable) ಸೇವೆಯಿಂದ ವಜಾ ಮಾಡಿ ಕಮಿಷನರ್ (Police Commissioner) ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

    ಆಡುಗೋಡಿ ಠಾಣೆ ಕಾನ್ಸ್‌ಟೇಬಲ್ ಅರವಿಂದ್ ಹಾಗೂ ಮಾಳಪ್ಪ ಬಿ.ವಾಲಿಕಾರ್ ಲಂಚಕ್ಕೆ ಬೇಡಿಕೆ ಇಟ್ಟು ಸೇವೆಯಿಂದ ವಜಾಗೊಂಡವರು. ಚೈತ್ರ ರತ್ನಾಕರ್ ಹಾಗೂ ಚೀರಾಸ್ ಎಂಬುವವರು ಕೋರಮಂಗಲದ ನೆಕ್ಸಾಸ್ ಮಾಲ್ ಬಳಿ ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಕಾನ್ಸ್‌ಟೇಬಲ್‌ಗಳು  50 ಸಾವಿರ ರೂ. ದಂಡ ಹಾಗೂ ಎಫ್‍ಐಆರ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ನಂತರ ತಮಗೆ ಪರಿಚಯದ ಟೀ ಅಂಗಡಿ ಒಂದಕ್ಕೆ ಪೋನ್‍ಪೇ ಮೂಲಕ ನಾಲ್ಕು ಸಾವಿರ ರೂ.ಗಳನ್ನು ಲಂಚವಾಗಿ (Bribe) ವರ್ಗಾಯಿಸಿಕೊಂಡಿದ್ದರು. ಇದನ್ನೂ ಓದಿ: ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ

    ಈ ಬಗ್ಗೆ ಚೈತ್ರ ರತ್ನಾಕರ್ ಹಾಗೂ ಚೀರಾಸ್ ಟ್ವಿಟ್ಟರ್‌ನಲ್ಲಿ ಡಿಜಿ ಹಾಗೂ ಐಜಿಪಿಗೆ ದೂರು ನೀಡಿದ್ದರು. ಡಿಸಿಪಿ (DCP) ಮಡಿವಾಳ ಅವರು ಎಸಿಪಿ (ACP) ತನಿಖೆಗೆ ಆದೇಶಿಸಿದ್ದರು. ಲಂಚ ಪಡೆದಿರುವುದು ವಿಚಾರಣೆ ವೇಳೆ ಸಾಭೀತಾದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ಹೆಣ್ಣಿನ ರೂಪವಷ್ಟೇ, ಅವರ ಗುಣಗಳೇ ಬೇರೆ: ರಮೇಶ್ ಜಾರಕಿಹೊಳಿ

  • ಬೆಳ್ಳಂಬೆಳಗ್ಗೆ ಖಾಕಿ ಕಾರ್ಯಾಚರಣೆ – 86 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ

    ಬೆಳ್ಳಂಬೆಳಗ್ಗೆ ಖಾಕಿ ಕಾರ್ಯಾಚರಣೆ – 86 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ

    ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಖಾಕಿ ಪಡೆ 86 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿದ್ದು, 30 ರೌಡಿ ಶೀಟರ್‌ಗಳನ್ನ ಸಿಸಿಬಿ (CCB Police) ಕಚೇರಿಗೆ ಕರೆತಂದಿದ್ದಾರೆ.

    ಐವರು ಎಸಿಪಿ (ACP), 30 ಇನ್ಸ್ಪೆಕ್ಟರ್‌ಗಳ ನೇತೃತ್ವದ ತಂಡ ದಾಳಿ ನಡೆಸಿದೆ. ನಂತರ ಸಿಸಿಬಿ ಕಚೇರಿಗೆ ಕರೆತಂದು ಸಿಸಿಬಿ ಎಸಿಪಿ ಧರ್ಮೆಂದ್ರ ನೇತೃತ್ವದಲ್ಲಿ ಫುಲ್ ಕ್ಲಾಸ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ತೊಡಗುವುದು ಕಂಡುಬಂದರೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದೂ ವಾರ್ನಿಂಗ್ ನೀಡಲಾಗಿದೆ. ಇದನ್ನೂ ಓದಿ: ಸಾವು-ಬದುಕಿನ ನಡುವೆ ಶಂಕಿತ ಉಗ್ರ ಶಾರೀಕ್ ನರಳಾಟ- ಪೊಲೀಸರಲ್ಲಿ ಆತಂಕ

    ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ ಸೇರಿ ಕುಖ್ಯಾತ ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿ ನಡೆದಿದೆ. ಈ ವೇಳೆ 30 ರೌಡಿಗಳನ್ನ ವಶಕ್ಕೆ ಪಡೆದಿದ್ದು, ದಾಳಿ ವೇಳೆ ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಹಲವರು ಮನೆಯಿಂದ ಎಸ್ಕೇಪ್ ಆಗಿರುವುದು ಕಂಡುಬಂದಿದೆ. ಇದನ್ನೂ ಓದಿ: ಚಿಲುಮೆ ಬಳಿಕ ಧಾರವಾಡದಲ್ಲೂ ವೋಟರ್ ಸ್ಕ್ಯಾಮ್- ಮತದಾರರ ಕ್ಷೇತ್ರ ವರ್ಗಾವಣೆ ಆರೋಪ

    ದಾಳಿ ವೇಳೆ ವಿಲ್ಸನ್‌ಗಾರ್ಡನ್ (Wilson Garden) ನಾಗ ತಮಿಳುನಾಡಿನಲ್ಲಿ ಇರುವುದು ಬೆಳಕಿಗೆ ಬಂದಿದ್ದು, ಕೋತಿರಾಮ, ಆರ್.ಟಿ ನಗರ ವೆಂಕಟೇಶ, ಟಾಮಿ ಸೇರಿ 30 ಮಂದಿ ಸಿಕ್ಕಿಬಿದ್ದಿದ್ದಾರೆ. ವಿಜಯನಗರದ ರೌಡಿಶೀಟರ್ ರಾಘವೇಂದ್ರ ಪ್ರಸಾದ್ ಮನೆಯಲ್ಲಿ ಎರಡು ಲಾಂಗ್‌ಗಳು ಪತ್ತೆಯಾಗಿವೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶೋತ್ಸವದಲ್ಲಿ ಡಿಜೆ ಹಾಡಿಗೆ ಸಖತ್ ಸ್ಟೆಪ್ ಹಾಕಿದ ACP

    ಗಣೇಶೋತ್ಸವದಲ್ಲಿ ಡಿಜೆ ಹಾಡಿಗೆ ಸಖತ್ ಸ್ಟೆಪ್ ಹಾಕಿದ ACP

    ಬೆಳಗಾವಿ: ದೇಶದಲ್ಲಿ ಮುಂಬೈ (Mumbai) ಹೊರತುಪಡಿಸಿದರೆ ಬೆಳಗಾವಿಯಲ್ಲಿ ಆಚರಿಸುವ ಅದ್ಧೂರಿ ಗಣೇಶೋತ್ಸವ (Ganeshothsav) ವಿಸರ್ಜನಾ ಮೆರವಣಿಗೆ ಕಾರ್ಯ ಸತತವಾಗಿ 24 ಗಂಟೆಗಳ ಕಾಲ ನಡೆಯಿತು.

    ಎರಡು ವರ್ಷಗಳ ಬಳಿಕ ಬೆಳಗಾವಿಯಲ್ಲಿ ಅದ್ಧೂರಿ ಗಣೇಶೋತ್ಸವಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ನಿನ್ನೆ ಸಂಜೆಯಿಂದಲೂ ಮಳೆ, ಬಿಸಿಲೆನ್ನದೇ ಲಕ್ಷಾಂತರ ಭಕ್ತರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಇದನ್ನೂ ಓದಿ: ಸಿಧು ಮೂಸೆವಾಲಾ ಹತ್ಯೆ ಕೇಸ್ – ಮೂವರು ಅರೆಸ್ಟ್

    ಇದೇ ವೇಳೆಯಲ್ಲಿ ಕೆಲವು ನಗರಸೇವಕರು ಹಾಗೂ ಎಸಿಪಿ (ACP) ನಾರಾಯಣ ಭರಮನಿ, ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಪಾಲಿಕೆ ಅಧಿಕಾರಿಗಳಾದ ಸಂಜಯ ಡುಮ್ಮಗೋಳ, ಲಕ್ಷ್ಮೀ ನಿಪ್ಪಾಣಿಕರ್ ಡಿಜೆ ಹಾಡಿಗೆ ಸಕ್ಕತ್ ಸ್ಟೆಪ್ ಹಾಕಿ ಸಂಭ್ರಮಿಸಿದರು. ಇದನ್ನೂ ಓದಿ: ಜನಸ್ಪಂದನಕ್ಕೆ ಕರಾಳೋತ್ಸವದ ಬಿಸಿ – ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

    ಬೆಳಗಾವಿ ನಗರದಲ್ಲಿ 382 ಹಾಗೂ ಜಿಲ್ಲೆ ಸೇರಿದ್ರೆ 450ಕ್ಕೂ ಹೆಚ್ಚು ಸಾರ್ವಜನಿಕ ಗಣೇಶ ಮಂಡಳಿಗಳಿದ್ದು (Ganesha Festival Board), ಕಳೆದ ಹನ್ನೂಂದು ದಿನಗಳಿಂದ ವಿವಿಧ ಕಾರ್ಯಕ್ರಮಗಳ ಆಯೋಜಿಸಿ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಗಿದೆ. ನಿನ್ನೆ ಚತುರ್ದಶಿ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಗೆ ಪ್ರಾರಂಭವಾಗಿದ್ದ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ಸತತ 24 ಗಂಟೆಗಳ ಬಳಿಕ ಗಣೇಶ ಮೂರ್ತಿಯನ್ನು ಕಪೀಲೇಶ್ವರ ಹೊಂಡದಲ್ಲಿ ವಿಸರ್ಜನೆ ಮಾಡಲಾಯಿತು.

    Live Tv
    [brid partner=56869869 player=32851 video=960834 autoplay=true]

  • ವರದಕ್ಷಿಣೆ ನೀಡದ್ದಕ್ಕೆ ಸ್ನೇಹಿತರೊಂದಿಗೆ ಪತ್ನಿಯನ್ನೇ ಗ್ಯಾಂಗ್‌ರೇಪ್‌ಗೈದ

    ವರದಕ್ಷಿಣೆ ನೀಡದ್ದಕ್ಕೆ ಸ್ನೇಹಿತರೊಂದಿಗೆ ಪತ್ನಿಯನ್ನೇ ಗ್ಯಾಂಗ್‌ರೇಪ್‌ಗೈದ

    ಲಕ್ನೋ: ಪತ್ನಿ ವರದಕ್ಷಿಣೆ ತಂದು ಕೊಡಲಿಲ್ಲವೆಂದು ಪತಿಯೊಬ್ಬ ಸ್ನೇಹಿತರ ಜೊತೆ ಸೇರಿ ಪತಿಯನ್ನು ಅತ್ಯಾಚಾರ ಮಾಡಿರುವ ಘಟನೆಯೊಂದು ಕಾನ್ಪುರದಲ್ಲಿ ನಡೆದಿದೆ.

    ವರದಕ್ಷಿಣೆಗಾಗಿ ಪತಿಯೊಬ್ಬ ಪತ್ನಿಯ ಕುಟುಂಬವನ್ನು ಪೀಡಿಸುತ್ತಿದ್ದ. ಇತ್ತ ಪತ್ನಿಗೂ ಕಿರುಕುಳ ನೀಡುತ್ತಿದ್ದ. ಪತ್ನಿಯ ಕುಟುಂಬ ವರದಕ್ಷಿಣೆಯನ್ನು ನೀಡಲಿಲ್ಲವೆಂದು ತನ್ನ ಸ್ನೇಹಿತರ ಜೊತೆ ಸೇರಿ ಪತ್ನಿಯನ್ನು ಪತಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾನೆ. ಈ ಹಿನ್ನೆಲೆ ಮಹಿಳೆಯ ಕುಟುಂಬ, ಆಕೆಯ ಪತಿ ಮತ್ತು ಆತನ ಸ್ನೇಹಿತರ ವಿರುದ್ಧ ಕಿರುಕುಳ ಮತ್ತು ಅತ್ಯಾಚಾರ ಆರೋಪದ ಮೇಲೆ ಚಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮ್ಯೂಸಿಕ್ ಶೂಟ್ ವೇಳೆ ದಾಳಿ: 8 ಮಹಿಳಾ ರೂಪದರ್ಶಿಗಳ ಮೇಲೆ ಅತ್ಯಾಚಾರ

    ದೂರಿನಲ್ಲಿ ಏನಿದೆ?
    2020 ರ ಮಾರ್ಚ್ 6 ರಂದು ನಾವು ಮದುವೆಯಾಗಿದ್ದು, ಅಂದಿನಿಂದ ನನ್ನ ಪತಿ ವರದಕ್ಷಿಣೆಯಾಗಿ 2 ಲಕ್ಷ ರೂ. ಮತ್ತು ಕಾರಿಗೆ ಬೇಡಿಕೆಯಿಟ್ಟಿದ್ದ. ಅವರ ಬೇಡಿಕೆಗಳನ್ನು ನಾವು ಈಡೇರದಿದ್ದಾಗ ನನ್ನನ್ನು ಕೊಠಡಿಯಲ್ಲಿ ಕೂಡಿ ಹಾಕಲಾಗಿತ್ತು. ಅಷ್ಟೇ ಅಲ್ಲದೇ ನನ್ನ ಪತಿ ತನ್ನ ಮೂವರು ಸ್ನೇಹಿತರನ್ನು ಕರೆದುಕೊಂಡು ಬಂದು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇದಕ್ಕೆ ನಾನು ವಿರೋಧ ವ್ಯಕ್ತಪಡಿಸಿದಾಗ ನನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

    ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ಮೃಗಾಂಕ್ ಪಾಠಕ್ ಮಾತನಾಡಿ, ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಫೈನಲ್ ತಲುಪಿದ ಕನ್ನಡಿಗ, ಈಜುಪಟು ಶ್ರೀಹರಿ ನಟರಾಜ್ 

    Live Tv
    [brid partner=56869869 player=32851 video=960834 autoplay=true]

  • ಧ್ವನಿವರ್ಧಕ ಬಳಕೆಗೆ ನಿಯಮ ಜಾರಿ –  ಮಾರ್ಗಸೂಚಿಯಲ್ಲಿ ಏನಿದೆ?

    ಧ್ವನಿವರ್ಧಕ ಬಳಕೆಗೆ ನಿಯಮ ಜಾರಿ – ಮಾರ್ಗಸೂಚಿಯಲ್ಲಿ ಏನಿದೆ?

    ಬೆಂಗಳೂರು: ಧ್ವನಿವರ್ಧಕ ಬಳಕೆಯಲ್ಲಿ ನಿಯಮ ಉಲ್ಲಂಘನೆಯಾದರೆ, ಡಿವೈಎಸ್‌ಪಿ ದರ್ಜೆಯಿಂದ ಮೇಲ್ಪಟ್ಟು ರಾಜ್ಯ ಪೊಲೀಸ್ ಮಹಾನಿರ್ದೇಶಕರ ದರ್ಜೆವರೆಗೂ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಕ್ರಮ ಕೈಗೊಳ್ಳುವ ಅಧಿಕಾರ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    GOVERNMENT OF KARNATAKA NOTICE (1)

    ಈಗಾಗಲೇ ಧ್ವನಿವರ್ಧಕಗಳ ಬಳಕೆಗೆ 15 ದಿನಗಳ ಒಳಗಾಗಿ ಕಡ್ಡಾಯವಾಗಿ ಅನುಮತಿ ಪಡೆಯುವಂತೆ ಸೂಚಿಸಿದೆ. ಎಲ್ಲ ಧಾರ್ಮಿಕ ಕೇಂದ್ರಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲೂ ಧ್ವನಿವರ್ಧಕ ಬಳಸುವುದಕ್ಕೂ ಅನುಮತಿ ಕಡ್ಡಾಯಗೊಳಿಸಿದೆ. ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ಹಾಗೂ ಬೆಳಗ್ಗೆ 6 ರಿಂದ ರಾತ್ರಿ 10ರ ವರೆಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿರುವ ಮಿತಿಯಲ್ಲೇ ಮೈಕ್‌ಗಳ ಶಬ್ಧ ಪ್ರಮಾಣ ಇರಬೇಕು. ವಸತಿ ಪ್ರದೇಶಗಳಲ್ಲಿ ರಾತ್ರಿ 10ರ ಬಳಿಕ ವಾಹನಗಳ ಹಾರ್ನ್ ಗಳಿಗೂ ನಿರ್ಬಂಧವಿರಬೇಕು ಎಂದು ಆದೇಶಿಸಿದೆ.

    GOVERNMENT OF KARNATAKA NOTICE (1)

    ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಗಳ ಬಳಕೆಗೆ ಲಿಖಿತ ಅನುಮತಿ ಪಡೆದಿರಬೇಕು ಈ ಮಾರ್ಗಸೂಚಿ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸೂಚಿಸಿದೆ.

    ಅನುಮತಿ ನೀಡಲು 2 ಹಂತದ ಸಮಿತಿ: ಧ್ವನಿವರ್ಧಕಗಳಿಗೆ ಅನುಮತಿ ಕೊಡಲು 2 ಹಂತದಲ್ಲಿ ಸರ್ಕಾರ ಸಮಿತಿ ರಚನೆ ಮಾಡಲಿದೆ. ಕಮಿಷನರೇಟ್ ಜಿಲ್ಲೆಗಳಲ್ಲಿ ಮೊದಲ ಸಮಿತಿ ರಚಿಸಬೇಕು. ಈ ಸಮಿತಿಯಲ್ಲಿ ಎಸಿಪಿ, ಸ್ಥಳೀಯ ಸಂಸ್ಥೆಯ ಕಾರ್ಯಕಾರಿ ಇಂಜಿನಿಯರ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಒಬ್ಬರು ಸದಸ್ಯರಿರುತ್ತಾರೆ. ಉಳಿದ ಜಿಲ್ಲೆಗಳಲ್ಲಿ 2ನೇ ಸಮಿತಿ ರಚಿಸಬೇಕು. ಇದರಲ್ಲಿ ಡಿವೈಎಸ್ಪಿ, ತಹಸಿಲ್ದಾರ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಒಬ್ಬರು ಸದಸ್ಯರಿರುತ್ತಾರೆ. ಎಲ್ಲ ಪರಿಶೀಲಿಸಿ ಈ ಸಮಿತಿಗಳು ಧ್ವನಿವರ್ಧಕಗಳಿಗೆ ಅನುಮತಿ ಕೊಡಲಿವೆ.

    GOVERNMENT OF KARNATAKA NOTICE

    ಸಾರ್ವಜನಿಕ ಸ್ಥಳಗಳಲ್ಲಿ 10 ರಿಂದ 75 ಡೆಸಿಬಲ್, ಖಾಸಗಿ ಸ್ಥಳಗಳಲ್ಲಿ ಸ್ವಂತ ಸೌಂಡ್ ಸಿಸ್ಟಂಗಳ ಬಳಕೆಗೆ 5 ಡಿಸಿಬಲ್ ಶಬ್ಧ ಮಿತಿ ಇರಬೇಕು. ಹೊರತಾಗಿ ರಾತ್ರಿ 10ರ ಬಳಿಕ ಡ್ರಂ, ಟ್ರಂಪೆಟ್, ಟಂ-ಟಂ, ಇತರೆ ಶಬ್ಧ ಉಂಟು ಮಾಡುವ ಸಾಧನಗಳ ಬಳಕೆಯನ್ನೂ ನಿಷೇಧಿಸಲಾಗಿದೆ ಎಂದು ಆದೇಶ ಪ್ರತಿ ಹೇಳಿದೆ.

    ಸದ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ಅನುಮತಿ ಕೊಡಲು 2 ಹಂತದ ಸಮಿತಿಗಳ ರಚನೆ ಹೊರತುಪಡಿಸಿದರೆ ಹೊಸ ಟಫ್ ರೂಲ್ಸ್‌ಗಳು  ಇಲ್ಲ. ಉಳಿದಂತೆ 2005ರ ಸುಪ್ರೀಂ ಕೋರ್ಟ್ ಆದೇಶ, 1986ರ ಪರಿಸರ ಸಂರಕ್ಷಣೆ ಕಾಯ್ದೆ ಹಾಗೂ 2002 ರ ಕರ್ನಾಟಕ ಸರ್ಕಾರದ ಆದೇಶಗಳ ಪಾಲನೆಗೆ ತಾಕೀತು ಮಾಡಿದೆ.

    GOVERNMENT OF KARNATAKA NOTICE

    ಶಬ್ಧ ಪ್ರಮಾಣ ಎಲ್ಲಿ ಎಷ್ಟಿರಬೇಕು?

    • ಸಾರ್ವಜನಿಕ ಸ್ಥಳ- 10 ರಿಂದ 75 ಡೆಸಿಬಲ್
    • ಖಾಸಗಿ ಸ್ಥಳ – 5 ಡೆಸಿಬಲ್ (ಸ್ವಂತ ಸೌಂಡ್ ಸಿಸ್ಟಂಗಳ ಬಳಕೆ)
    • ಕೈಗಾರಿಕಾ ಪ್ರದೇಶ – ಹಗಲು 75 ಡೆಸಿಬಲ್, ರಾತ್ರಿ 70 ಡೆಸಿಬಲ್
    • ವಾಣಿಜ್ಯ ಚಟುವಟಿಕೆ ಪ್ರದೇಶ – ಹಗಲು 65 ಡೆಸಿಬಲ್, ರಾತ್ರಿ 60 ಡೆಸಿಬಲ್
    • ಜನವಸತಿ ಪ್ರದೇಶ – ಹಗಲು 55 ಡೆಸಿಬಲ್, ರಾತ್ರಿ 45 ಡೆಸಿಬಲ್
    • ಸೈಲೆಂಟ್ ಝೋನ್ (ನಿಶ್ಯಬ್ಧ ವಲಯ) ಹಗಲು 50 ಡೆಸಿಬಲ್, ರಾತ್ರಿ 40 ಡೆಸಿಬಲ್

  • ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ವಂಚನೆ

    ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ವಂಚನೆ

    ಬೆಂಗಳೂರು: ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪೆನಿ ಒಂದರ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನಿವೃತ್ತ ಎಸಿಪಿ ಲವಕುಮಾರ್ ಎಂಬುವರು ಜಿಗಣಿಯ ನವ್ಯ ಲೇಔಟ್‍ನಲ್ಲಿ 90 ಲಕ್ಷ ಮೌಲ್ಯದ ಮೂರು ನಿವೇಶನ ಹೊಂದಿದ್ದರು. ಕೆಲದಿನಗಳ ಹಿಂದೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ನಿರ್ಮಾಣ್ ಶೆಲ್ಟರ್ಸ್ ಕಂಪೆನಿ ಸಂಪರ್ಕಿಸಿ ತಮ್ಮ ಬಳಿಯಿರುವ ನಿವೇಶನಗಳನ್ನು ಮಾರಾಟ ಮಾಡಿಕೊಡಿಕೊಡುವುದಾಗಿ ಹೇಳಿದ್ದು, ಇದರಂತೆ ಪವರ್ ಅಫ್ ಅರ್ಟಾನಿ ಮೂಲಕ ಮೂಲ ದಾಖಲಾತಿ ನೀಡಿದ್ದರು. ಇದನ್ನೂ ಓದಿ: ಮೆಣಸಿಕಾಯಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ಮೂವರಿಗೆ ಜೈಲು

    ಇದೀಗ ಕಂಪೆನಿಯೂ ಮೂರು ಸೈಟ್ ಮಾರಾಟ ಮಾಡಿ 85 ಲಕ್ಷ ರೂಪಾಯಿ ಮಾರಾಟ ಮಾಡಿ 30 ಲಕ್ಷ ಹಣ ನೀಡಿ ಉಳಿದ ಹಣ ಸ್ವಂತ ಬಳಕೆ ಉಪಯೋಗಿಸಿಕೊಂಡು ಹಣ ನೀಡದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ನಿವೃತ್ತ ಎಸಿಪಿ ಉಲ್ಲೇಖಿಸಿದ್ದಾರೆ. ಲವಕುಮಾರ್ ನೀಡಿದ ದೂರಿನ ಮೇರೆಗೆ ನಿರ್ಮಾಣ್ ಶೆಲ್ಟರ್ ಕಂಪೆನಿ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮೀನಾರಾಯಣ್, ಕಂಪೆನಿ ಸಿಬ್ಬಂದಿ ಶಶಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿ ಲಕ್ಷ್ಮೀ ನಾರಾಯಣ್ ಇದೇ ರೀತಿ ಸಾಕಷ್ಟು ಜನರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ವಾರಕ್ಕೊಮ್ಮೆ ಕುಡಿತಿದ್ದೋರು ಇನ್ಮೇಲೆ ದಿನಾ ಕುಡಿಯಲು ಆರಂಭಿಸ್ತಾರೆ – ಮಹಿಳೆಯರ ಪ್ರತಿಭಟನೆ

  • ಜೋರಾಗಿ ಬಂದು ಡಿಕ್ಕಿ ಹೊಡೆದ ಲಾರಿ – ಕರ್ತವ್ಯ ನಿರತ ಎಸಿಪಿ ಸಾವು

    ಜೋರಾಗಿ ಬಂದು ಡಿಕ್ಕಿ ಹೊಡೆದ ಲಾರಿ – ಕರ್ತವ್ಯ ನಿರತ ಎಸಿಪಿ ಸಾವು

    ನವದೆಹಲಿ: ಜೋರಾಗಿ ಚಲಿಸುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯ ನಿರತ ಎಸಿಪಿ ಸಾವನ್ನಪ್ಪಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ.

    ದೆಹಲಿ ಸಂಚಾರಿ ಪೊಲೀಸ್ ಘಟಕದ 58 ವರ್ಷದ ಸಂಕೇತ್ ಕೌಶಿಕ್ ಮೃತಪಟ್ಟ ಪೊಲೀಸ್ ಅಧಿಕಾರಿ ಎಂದು ಗುರುತಿಸಲಾಗಿದೆ. ಸಂಕೇತ್ ಅವರು ಶನಿವಾರ ರಾತ್ರಿ ದೆಹಲಿಯ ರಾಜೋಕ್ರಿ ಫ್ಲೈಓವರ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವೇಗವಾಗಿ ಬಂದ ವಾಹನ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಅಪಘಾತದ ನಂತರ ಟಾಟಾ 407ರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾಜೋಕ್ರಿ ಫ್ಲೈಓವರ್ ಬಳಿ ಸಂಕೇತ್ ಕೌಶಿಕ್ ಅವರು ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆಯಿತು. ಆಗ ನಾವು ಅವರನ್ನು ಏಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಅಲ್ಲಿ ವೈದ್ಯರು ಸಂಕೇತ್ ಅವರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು ಎಂದು ಜೊತೆಗಿದ್ದ ಪೊಲೀಸರು ಹೇಳಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ದೆಹಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಎಸಿಪಿ ಸಂಕೇತ್ ಕೌಶಿಕ್ ಅವರ ಸಾವಿನ ಸುದ್ದಿ ಕೇಳಿ ಶಾಕ್ ಆಯ್ತು. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿಸಿಕೊಂಡು ಚಾಲಕನಿಗಾಗಿ ಬಲೆ ಬೀಸಿದ್ದೇವೆ ಎಂದು ತಿಳಿಸಿದ್ದಾರೆ.