Tag: Action Cinema

  • ರಾಮ್ ಗೋಪಾಲ್ ವರ್ಮಾ ಸಿನಿಮಾದಲ್ಲಿ ಬುದ್ಧಿವಂತ

    ರಾಮ್ ಗೋಪಾಲ್ ವರ್ಮಾ ಸಿನಿಮಾದಲ್ಲಿ ಬುದ್ಧಿವಂತ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರರವರಿಗೆ ಇಂದು 53ನೇ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾರವರು ಉಪೇಂದ್ರ ಜೊತೆಗೆ ಸಿನಿಮಾ ಮಾಡುತ್ತಿರುವ ವಿಚಾರವನ್ನು ರಿವೀಲ್ ಮಾಡಿದ್ದಾರೆ.

    ತಮ್ಮ ವಿಭಿನ್ನ ಅಭಿನಯ ಮತ್ತು ನಿರ್ದೇಶನ ಮೂಲಕವೇ ಸ್ಯಾಂಡಲ್‍ವುಡ್‍ನಲ್ಲಿ ಅಪಾರ ಅಭಿಮಾನಿ ಬಳಗ ಹೊಂದಿರುವ ನಟ ಎಂದರೆ ಉಪೇಂದ್ರ. ಸಿನಿಮಾಗಳಷ್ಟೇ ಅಲ್ಲದೇ ರಾಜಕೀಯಕ್ಕೂ ಇಳಿದಿರುವ ಉಪೇಂದ್ರರವರು ಸದಾ ವಿಭಿನ್ನವಾಗಿ ಯೋಚಿಸುತ್ತಾರೆ. ಶುಕ್ರವಾರವಷ್ಟೇ ತಮ್ಮ ಮುಂದಿನ ಸಿನಿಮಾದ ಟೈಟಲ್ ಲಾಂಚ್ ಮಾಡಿ. ಜನ ಸಾಮಾನ್ಯ ಅಲ್ಲ, ಜನ ಅಸಾಮಾನ್ಯ ಎಂಬ ಪೋಸ್ಟ್ ಮಾಡಿ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ್ದ ಉಪೇಂದ್ರವರು, ಇದೀಗ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ಇದನ್ನೂ ಓದಿ: ಪ್ರವಾಸಿ ವಾಹನ ಪಲ್ಟಿ – ಪ್ರವಾಸಿಗರು ಪ್ರಾಣಾಪಾಯದಿಂದ ಪಾರು

    ಹೌದು ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಹಾಗೂ ಉಪೇಂದ್ರ ಕಾಂಬೀನೇಷನ್‍ನಲ್ಲಿ ಹೊಸ ಸಿನಿಮಾವೊಂದು ಸೆಟ್ಟೇರಲಿದೆ. ಇನ್ನೂ ಈ ಕುರಿತಂತೆ ಸ್ವತಃ ರಾಮ್ ಗೋಪಾಲ್ ವರ್ಮಾರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಾನು ಹಾಗೂ ಉಪೇಂದ್ರರವರು ಶೀಘ್ರವೇ ಆ್ಯಕ್ಷನ್ ಸಿನಿಮಾವನ್ನು ಮಾಡಲಿದ್ದೇವೆ ಎಂದು ಘೋಷಿಸಲು ಸಂತಸವಾಗುತ್ತಿದೆ. ಹುಟ್ಟು ಹಬ್ಬದ ಶುಭಾಶಯಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆಯುವ ಮೂಲಕ  ತಿಳಿಸಿದ್ದಾರೆ. ಇದನ್ನೂ ಓದಿ: ಜನ ಅಸಾಮಾನ್ಯ , ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಉಪೇಂದ್ರ

    ಈ ಮುನ್ನ 2016ರಲ್ಲಿ ಕನ್ನಡದ ಕಿಲ್ಲಿಂಗ್ ವೀರಪ್ಪನ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿ ಸೈ ಎನಿಸಿಕೊಂಡಿದ್ದ ರಾಮ್‍ಗೋಪಾಲ್ ವರ್ಮಾರವರು ಇದೀಗ ಉಪೇಂದ್ರ ಸಿನಿಮಾವನ್ನು ನಿರ್ದೇಶಿಸಲು ಮುಂದಾಗಿದ್ದಾರೆ. ಇಲ್ಲಿಯವರೆಗೂ ಹಿಂದಿ, ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಸಿನಿಮಾ ನಿರ್ದೇಶಿಸಿದ್ದಾರೆ.