Tag: actor

  • ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ – ಶ್ರೀ ಕ್ಷೇತ್ರದ ಪರ ನಿಂತ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

    ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ – ಶ್ರೀ ಕ್ಷೇತ್ರದ ಪರ ನಿಂತ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

    ಮಂಗಳೂರು: ಧರ್ಮಸ್ಥಳ (Dharmasthala) ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ (Pawan Kalyan) ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ನಿಂತಿದ್ದಾರೆ.

    ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣ ಆರಂಭದಿಂದಲೂ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಬರುತ್ತಿದೆ. ಇದೀಗ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನಿಂತಿದ್ದು, ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಆಗಮಿಸಲಿದ್ದಾರೆ.ಇದನ್ನೂ ಓದಿ: ಸೌಜನ್ಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು ಮಾವ ವಿಠಲ ಗೌಡ: ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ

    ಗುರುವಾರ (ಸೆ.11) ಪವನ್ ಕಲ್ಯಾಣ್ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ವಿಶೇಷ ಸೇವೆ ನೆರವೇರಲಿದ್ದು, ಈ ಮೂಲಕ ಕ್ಷೇತ್ರದ ಅಪಪ್ರಚಾರ ವಿರುದ್ಧ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಇದೇ ವೇಳೆ ದೇವಸ್ಥಾನದ ಮುಂಭಾಗದಲ್ಲಿ ವಿಶೇಷ ಆರತಿ ಸೇವೆ ನಡೆಯಲಿದೆ.

  • ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ

    ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ

    ಗಣಪ, ಕರಿಯಾ-2 ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರುಗಳಿಸಿದ್ದ ನಟ ಸಂತೋಷ್ ಬಾಲರಾಜ್ (Santosh Balaraj) ಅವರ ಅಂತ್ಯಕ್ರಿಯೆ ಇಂದು (ಆ.6) ಆನೇಕಲ್‌ನಲ್ಲಿ ನೆರವೇರಿತು.

    ನಟ ಸಂತೋಷ್ ಬಾಲರಾಜ್ ಅವರ ಹುಟ್ಟೂರು ಆನೇಕಲ್ (Anekal) ಪಟ್ಟಣದ ಸಂತವನ ಚಿನ್ನಪ್ಪನವರ ಪುಣ್ಯಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗಿತ್ತು. ಫಾದರ್ ಶಾಂತರಾಜು ಥಾಮಸ್ ಅವರು ಪಾರ್ಥಿವ ಶರೀರಕ್ಕೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಅಂತಿಮ ವಿಧಿ-ವಿಧಾನ ಪೂರ್ಣಗೊಳಿಸಿದರು. ಕ್ರಿಶ್ಚಿಯನ್ ಸಂಪ್ರದಾಯದಂತೆ ತಂದೆಯ ಸಮಾಧಿ ಪಕ್ಕದಲ್ಲಿಯೇ ನಟ ಸಂತೋಷ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.ಇದನ್ನೂ ಓದಿ: ಪ್ರಸಾದ್‌ ಯೋಜನೆಯಡಿ ಕೊಲ್ಲೂರು ದೇವಸ್ಥಾನ ಸೇರಿಸಿ: ನಿರ್ಮಲಾ ಸೀತಾರಾಮನ್‌ಗೆ ಬಿ.ವೈ.ರಾಘವೇಂದ್ರ ಮನವಿ

    ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಬಳಿಕ ಸಂತೋಷ್ ಅವರು ತೀವ್ರವಾಗಿ ಅಸ್ವಸ್ಥರಾಗಿದ್ದರು. ಮತ್ತೆ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್ ಮೈಗೆಲ್ಲ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ (ಆ.5) ನಿಧನರಾದರು.

    ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಕೊಪ್ಪಳ ಮೂಲದ ಓರ್ವ ವಶಕ್ಕೆ

  • ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ

    ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ

    ಸ್ಯಾಂಡಲ್‌ವುಡ್‌ನ (Sandalwood) ಯುವ ನಟನ ಸಂತೋಷ್ ಬಾಲರಾಜ್ (Santosh Balaraj) (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಇದನ್ನೂ ಓದಿ: ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ

    ಜಾಂಡೀಸ್ ಮೈಗೆಲ್ಲ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು (ಇಂದು) ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

    ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.

  • `ರೆಟ್ರೋ’ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಆಕ್ಷೇಪಾರ್ಹ ಹೇಳಿಕೆ – ವಿಜಯ್ ದೇವರಕೊಂಡ ವಿರುದ್ಧ ಕೇಸ್ ದಾಖಲು

    `ರೆಟ್ರೋ’ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಆಕ್ಷೇಪಾರ್ಹ ಹೇಳಿಕೆ – ವಿಜಯ್ ದೇವರಕೊಂಡ ವಿರುದ್ಧ ಕೇಸ್ ದಾಖಲು

    `ರೆಟ್ರೋ’ (Retro) ಪ್ರೀ-ರಿಲೀಸ್ (Pre-Release Event) ಈವೆಂಟ್‌ನಲ್ಲಿ ಬುಡಕಟ್ಟು ಸಮುದಾಯದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ತೆಲುಗು ನಟ ವಿಜಯ್ ದೇವರಕೊಂಡ (Vijay Devarakonda) ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

    ಮೇ 1ರಂದು ತೆರೆಕಂಡಿರುವ `ರೆಟ್ರೋ’ ಸಿನಿಮಾದಲ್ಲಿ ತಮಿಳು ನಟ ಸೂರ್ಯ ಹಾಗೂ ನಟಿ ಪೂಜಾ ಹೆಗ್ಡೆ ನಟಿಸಿದ್ದಾರೆ. ಸಿನಿಮಾ ರಿಲೀಸ್‌ಗೂ ಮುನ್ನ ಏ.26ರಂದು ಹೈದರಾಬಾದ್‌ನ ಜೆಆರ್‌ಸಿ ಕನ್‌ವೆನ್ಷನ್‌ನಲ್ಲಿ ತೆಲುಗು `ರೆಟ್ರೋ’ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ ಆಯೋಜಿಸಲಾಗಿತ್ತು.ಇದನ್ನೂ ಓದಿ: ಜಯಂ ರವಿ ಜೊತೆ ಬೋಲ್ಡ್ ಆಗಿ ಕಾಣಿಸ್ಕೊಂಡ ವದಂತಿ ಗೆಳತಿ ಕೆನೀಶಾ

    ಕಾರ್ಯಕ್ರಮದಲ್ಲಿ ತೆಲುಗು ನಟ ವಿಜಯ್ ದೇವರಕೊಂಡ ಅವರು ಭಾಗಿಯಾಗಿದ್ದರು. ಈ ವೇಳೆ ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ದಾಳಿಯನ್ನು ಉಲ್ಲೇಖಿಸಿ ಮಾತನಾಡಿದ್ದ ವಿಜಯ್, ಈ ರೀತಿಯ ಘಟನೆಗಳಿಗೆ ಪರಿಹಾರವೆಂದರೆ ಭಯೋತ್ಪಾದಕರಿಗೆ ಶಿಕ್ಷಣ ನೀಡುವುದು. ಅಂದರೆ ಭಯೋತ್ಪಾದಕರಾಗದಂತೆ ತಡೆಯುವುದು. ಭಯೋತ್ಪಾದನೆಯಿಂದ ಅವರಿಗೆ ಏನು ಲಾಭ? ಕಾಶ್ಮೀರ ಭಾರತಕ್ಕೆ ಸೇರಿದ್ದು, ಕಾಶ್ಮೀರಿಗಳು ನಮ್ಮವರು. ಇನ್ನೂ ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡುವ ಅವಶ್ಯಕತೆಯಿಲ್ಲ. ಈಗಾಗಲೇ ಪಾಕಿಸ್ತಾನದವರು ತಮ್ಮ ಸರ್ಕಾರದಿಂದಾಗಿ ಕಿತ್ತು ತಿನ್ನುವ ಪರಿಸ್ಥಿತಿಗೆ ಬಂದಿದ್ದಾರೆ. ಇದು ಹೀಗೆ ಮುಂದುವರಿದರೆ ಪಾಕಿಸ್ತಾನದ ಪ್ರಜೆಗಳೇ ತಮ್ಮ ಸರ್ಕಾರದ ಮೇಲೆ ದಾಳಿ ನಡೆಸುತ್ತಾರೆ. 500 ವರ್ಷಗಳ ಹಿಂದೆ ಸಾಮಾನ್ಯ ಜ್ಞಾನವಿಲ್ಲದೆ ಬುಡಕಟ್ಟು ಜನಾಂಗದವರು ಹೋರಾಡಿದಂತೆ ಇದೀಗ ಭಯೋತ್ಪಾದಕರು ವರ್ತಿಸುತ್ತಿದ್ದಾರೆ ಎಂದು ಹೇಳಿದರು.

    ಈ ಹೇಳಿಕೆಯಿಂದಾಗಿ ಬುಡಕಟ್ಟು ಸಮುದಾಯದವರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಇದನ್ನರಿತ ವಿಜಯ್ ಕ್ಷಮೆಯಾಚಿಸಿದ್ದರು. ನಾನು ಯಾವುದೇ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ಹೇಳಿಕೆ ನೀಡಿಲ್ಲ. ಯಾರನ್ನೂ ನೋವಿಸುವ ಉದ್ದೇಶ ನನ್ನದಾಗಿರಲಿಲ್ಲ. ನಾನು ಎಲ್ಲರನ್ನು ಗೌರವಿಸುತ್ತೇವೆ ಎಂದು ಹೇಳಿದ್ದರು.

    ಸದ್ಯ ಸೈದಾಬಾದ್ ನಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಅಧ್ಯಕ್ಷ ನೆನವತ್ ಅಶೋಕ್ ಕುಮಾರ್ ನಾಯಕ್ ಅವರು ನಟ ವಿಜಯ್ ದೇವರಕೊಂಡ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ನಟ ವಿಜಯ್ ಹೇಳಿಕೆ ನೀಡಿದ ಒಂದು ತಿಂಗಳ ನಂತರ ಸೈಬರಾಬಾದ್‌ನ ರಾಯದುರ್ಗ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಇದಕ್ಕೂ ಮುನ್ನ ಹೈದರಾಬಾದ್ ಮೂಲದ ವಕೀಲ ಲಾಲ್ ಚೌಹಾಣ್ ನಟನ ವಿರುದ್ಧ ದೂರು ದಾಖಲಿಸಿದ್ದರು. ಸದ್ಯ ವಿಜಯ್ ದೇವರಕೊಂಡ `ಕಿಂಗ್ಡಮ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಪ್ರದಾನ

  • ಹಾಸ್ಯ ಕಲಾವಿದ, ಹಿರಿಯ ನಟ ಅತುಲ್ ಪರ್ಚುರೆ ನಿಧನ

    ಹಾಸ್ಯ ಕಲಾವಿದ, ಹಿರಿಯ ನಟ ಅತುಲ್ ಪರ್ಚುರೆ ನಿಧನ

    ಮುಂಬೈ: ಹಾಸ್ಯ ಪಾತ್ರಗಳ ಮೂಲಕ ಮರಾಠಿ  ಮತ್ತು ಹಿಂದಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಟ ಅತುಲ್ ಪರ್ಚುರೆ (Atul Parchure) ಅವರು ನಿಧನರಾಗಿದ್ದಾರೆ.

    ಲಿವರ್ ಕ್ಯಾನ್ಸರ್‌ನಿಂದ ಕಳೆದ ಕೆಲ ವರ್ಷಗಳಿಂದ ಬಳಲುತ್ತಿದ್ದ ಅವರು, ಈಚೆಗೆ ಆಸ್ಪತ್ರೆ ಸೇರಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಮ್ಮ 57 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು, ತಾಯಿ, ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ. ಇದನ್ನೂ ಓದಿ: ದರ್ಶನ್ ಇಂದೇ ಹೈಕೋರ್ಟ್ ಮೊರೆ ಹೋಗ್ತಾರಾ? – ಅರ್ಜಿ ಸಲ್ಲಿಸಿದ್ರೆ ಮುಂದೇನು?

    ಅತುಲ್ ಅವರು ಕಪಿಲ್ ಶರ್ಮಾ (Kapil Sharma) ಅವರ ಹಾಸ್ಯ ಕಾರ್ಯಕ್ರಮ, ಹಿಂದಿಯ ಹಲವಾರು ದೂರದರ್ಶನ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳಲ್ಲಿ ಕಾಣಿಸಿಕೊಂಡ ಪ್ರಸಿದ್ಧ ನಟರಾಗಿದ್ದರು. ಟಾಕ್ ಶೋ ಪ್ರದರ್ಶನವೊಂದರಲ್ಲಿ, ಅವರು ತಾವು ಎದುರಿಸುತ್ತಿರುವ ಕ್ಯಾನ್ಸರ್ ರೋಗದ ಬಗ್ಗೆ ಹೇಳಿಕೊಂಡಿದ್ದರು. ಯಕೃತ್ತಿನಲ್ಲಿ 5 ಸೆಂ.ಮೀ ಗೆಡ್ಡೆ ಇದೆ ಎಂದು ಬಹಿರಂಗಪಡಿಸಿದ್ದರು.  ಇದನ್ನೂ ಓದಿ: ಬಳ್ಳಾರಿ ಜೈಲಧಿಕಾರಿಗಳ ಕೈ ಸೇರಿದ ದರ್ಶನ್ ಮೆಡಿಕಲ್ ರಿಪೋರ್ಟ್

    ಈ ಬಗ್ಗೆ ಅವರು ಮೊದಲೇ ತಿಳಿಸಿದ್ದು, ಆರಂಭದಲ್ಲಿ ಕ್ಯಾನ್ಸರ್ ಚಿಕಿತ್ಸೆ ಆರಂಭಿಸಿದಾಗ ವೈದ್ಯರಿಂದ ಎಡವಟ್ಟಾಗಿ ಸಮಸ್ಯೆ ಎದುರಾಗಿತ್ತು. ನನ್ನ ಮೇದೋಜ್ಜೀರಕ ಗ್ರಂಥಿಯ ಮೇಲೆ ಪರಿಣಾಮ ಬೀರಿತು ಮತ್ತು ವಿವಿಧ ತೊಡಕುಗಳಿಗೆ ಕಾರಣವಾಯಿತು. ತಪ್ಪಾದ ಚಿಕಿತ್ಸೆಯು ವಾಸ್ತವವಾಗಿ ನನ್ನ ಸ್ಥಿತಿಯನ್ನು ಉಲ್ಬಣಗೊಳಿಸಿತು. ನಾನು ನಡೆಯಲು ಸಾಧ್ಯವಾಗಲಿಲ್ಲ ಮತ್ತು ಸ್ಪಷ್ಟವಾಗಿ ಮಾತನಾಡಲು ಕಷ್ಟಪಡುತ್ತಿದ್ದೆ. ಕೊನೆಗೆ ನಾನು ಬೇರೆ ವೈದ್ಯರನ್ನು ಸಂಪರ್ಕಿಸಿದೆ. ಸೂಕ್ತವಾದ ಔಷಧಿ ಮತ್ತು ಕೀಮೋಥೆರಪಿಯನ್ನು ಪಡೆದುಕೊಂಡೆ ಎಂದು ಹೇಳಿಕೊಂಡಿದ್ದರು. ಇದನ್ನೂ ಓದಿ: ಉಪ್ಪಿ ಅಣ್ಣನ ಮಗ ನಿರಂಜನ್‌ಗೆ ಅರ್ಜುನ್ ಸರ್ಜಾ ಆ್ಯಕ್ಷನ್ ಕಟ್

    ಅತುಲ್ ಅವರು ಸಿನಿಮಾದ ಜೊತೆ ಜೊತೆ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಹೆಸರು ಮಾಡಿದ್ದರು. ಶಾರುಖ್ ಖಾನ್, ಅಜಯ್ ದೇವಗನ್ ಮುಂತಾದ ಹಿಂದಿ ಚಿತ್ರರಂಗದ ಸ್ಟಾರ್ ನಟರ ಜೊತೆ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ಕಪಿಲ್ ಶರ್ಮಾ ನಡೆಸಿಕೊಟ್ಟ ‘ಕಾಮಿಡಿ ನೈಟ್ಸ್ ವಿಥ್ ಕಪಿಲ್’ ಕಾರ್ಯಕ್ರಮದಲ್ಲಿ ಹಲವು ಪಾತ್ರಗಳನ್ನು ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ‘ನವ್ರಾ ಮಜಾ ನವಸಾಚಾ’, ‘ಸಲಾಮ್-ಇ-ಇಷ್ಕ್’, ‘ಆಲ್ ದಿ ಬೆಸ್ಟ್, ಫನ್ ಬಿಗಿನ್ಸ್’, ಮುಂತಾದ ಚಲನಚಿತ್ರಗಳಲ್ಲಿ ನಟಿಸಿದ್ದರು. ಇದನ್ನೂ ಓದಿ: ಮಂಡ್ಯದಲ್ಲಿ ಅಪ್ಪು ಹೆಸರಲ್ಲಿ ವಂಚನೆ ಆರೋಪ – ಕ್ರೀಡಾಕೂಟದ ನಕಲಿ ಪೋಸ್ಟ್ ಬಿಟ್ಟು ದೋಖಾ

  • ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಘೋಷಣೆ

    ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಘೋಷಣೆ

    ಮುಂಬೈ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ (Mithun Chakraborty) ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು (Dadasaheb Phalke Award) ಘೋಷಣೆ ಮಾಡಿದ್ದು, ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು (70th National Film Awards) ಸ್ವೀಕರಿಸಲಿದ್ದಾರೆ.

    ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಿಥುನ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಭಾರತೀಯ ಚಿತ್ರರಂಗಕ್ಕೆ ಅವರ ಅಪ್ರತಿಮ ಕೊಡುಗೆಗಾಗಿ ಪೌರಾಣಿಕ ನಟರಾದ ಶಾ.ಮಿಥುನ್ ಚಕ್ರವರ್ತಿಯವರನ್ನು ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿಯು ಆಯ್ಕೆ ಮಾಡಿದೆ. ಅ.8 ರಂದು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಬರೆದುಕೊಂಡಿದ್ದು, ಪೋಸ್ಟ್ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಬಾಹ್ಯಾಕಾಶ ನಿಲ್ದಾಣ ತಲುಪಿತು ಕ್ರ್ಯೂ-9 ಮಿಷನ್ – ಅಪ್ಪಿಕೊಂಡು ಸ್ವಾಗತಿಸಿದ ಗಗನಯಾನಿಗಳು

    ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿಯು ಭಾರತೀಯ ಚಿತ್ರರಂಗಕ್ಕೆ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ, ಶಾ. ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದೆ ಎಂದು ಘೋಷಿಸಲು ಸಂತೋಷವಾಗುತ್ತದೆ ಎಂದಿದ್ದಾರೆ. ಜೊತೆಗೆ ಈ ವರ್ಷದ ಆರಂಭದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣವನ್ನು ಘೋಷಿಸಲಾಗಿತ್ತು.

    ಮಿಥುನ್ ಚಕ್ರವರ್ತಿ ಹಿನ್ನೆಲೆ:
    ಕಲ್ಕತ್ತಾದಲ್ಲಿ ಜನಿಸಿದ ಇವರು, 1976ರ ಮೃಗಯಾ (Mrigayaa) ಸಿನಿಮಾದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಈ ಸಿನಿಮಾದ ಅತ್ಯುತ್ತಮ ನಟನೆಯಿಂದಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ತಂದುಕೊಟ್ಟಿತು. ಬಳಿಕ 1992 ರಲ್ಲಿ ತೆರೆ ಕಂಡ ತಹದರ್ ಕಥಾ ಹಾಗೂ 1998ರಲ್ಲಿ ತೆರೆ ಕಂಡಿದ್ದ ಸ್ವಾಮಿ ವಿವೇಕಾನಂದ ಸಿನಿಮಾದ ಪಾತ್ರಗಳಿಗಾಗಿ ಎರಡು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ಇತ್ತೀಚಿಗೆ ತೆರೆ ಕಂಡಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್‌ನಲ್ಲಿ (The Kashmiri Files) ಕಾಣಿಸಿಕೊಂಡಿದ್ದರು.ಇದನ್ನೂ ಓದಿ: ಮುಡಾದಲ್ಲಿ ಸಿಎಂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಸಿದ್ದರಾಮಯ್ಯರ ರಾಜೀನಾಮೆ ಅನಿವಾರ್ಯ: ವಿಜಯೇಂದ್ರ

  • ರೇಣುಕಾಸ್ವಾಮಿ ಕೊಲೆ ಪ್ರಕರಣ- ಚಿಕ್ಕಣ್ಣ ಬಳಿಕ ಮತ್ತೊಬ್ಬ ನಟನಿಗೆ ವಿಚಾರಣೆ ಭೀತಿ!

    ರೇಣುಕಾಸ್ವಾಮಿ ಕೊಲೆ ಪ್ರಕರಣ- ಚಿಕ್ಕಣ್ಣ ಬಳಿಕ ಮತ್ತೊಬ್ಬ ನಟನಿಗೆ ವಿಚಾರಣೆ ಭೀತಿ!

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದ ತನಿಖೆ ಭರದಿಂದ ಸಾಗಿದೆ. ಈ ಸಂಬಂಧ ಇಂದು ಹಾಸ್ಯನಟ ಚಿಕ್ಕಣ್ಣ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಬೆನ್ನಲ್ಲೇ ಇದೀಗ ಮತ್ತೊಬ್ಬ ನಟನಿಗೆ ವಿಚಾರಣೆಯ ಭೀತಿ ಎದುರಾಗಿದೆ.

    ಹೌದು. ಸ್ಟೋನಿ ಬ್ರೂಕ್ ಪಬ್‍ನಲ್ಲಿ ಚಿಕ್ಕಣ್ಣ (Chikkanna) ಅಲ್ಲದೇ ಇನ್ನೊಬ್ಬ ನಟನಿದ್ದ ವಿಚಾರ ಪೊಲೀಸರಿಗೆ ಗೊತ್ತಾಗಿದೆ. ಚಿಕ್ಕಣ್ಣ, ದರ್ಶನ್ ಬಿಟ್ಟು ಮತ್ತೊಬ್ಬ ನಟ ಇದ್ದರು. ಪಾರ್ಟಿ ನಂತರ ಚಿಕ್ಕಣ್ಣ ಮತ್ತು ಆ ನಟ ಇಬ್ರೂ ಒಟ್ಟಿಗೆ ತೆರಳಿದ್ದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

    ನಟ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರಂತೆ. ಇದೀಗ ಆ ನಟನಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಅಲ್ಲದೇ ನೋಟಿಸ್ ಕೊಟ್ಟು ವಿಚಾರಣೆಗೆ ಬರುವಂತೆ ಸೂಚನೆ ನೀಡುವ ಸಾಧ್ಯತೆಗಳಿವೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ದರ್ಶನ್‌ ಊಟಕ್ಕೆ ಕರೆದಿದ್ರು ಹೋಗಿದ್ದೆ- ಪೊಲೀಸರ ಮುಂದೆ ಚಿಕ್ಕಣ್ಣ ಹೇಳಿದ್ದೇನು?

    ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Case) ಸಂಬಂಧ ಸ್ಟೋನಿ ಬ್ರೂಕ್ ಪಬ್‍ನಲ್ಲಿ (Stony Brook) ಚಿಕ್ಕಣ್ಣ ಇದ್ದರು ಎಂಬ ಮಾಹಿತಿ ಮೇರೆಗೆ ಪೊಲೀಸರು ಇಂದು ನಟನಿಗೆ ನೋಟಿಸ್ ಕೊಟ್ಟಿದ್ದರು. ಆದರೆ ನೋಟಿಸ್‍ಗೆ ಚಿಕ್ಕಣ್ಣ ಉತ್ತರಿಸಿರಲಿಲ್ಲ. ಬಳಿಕ ಸ್ಟೋನಿ ಬ್ರೂಕ್ ಪಬ್‍ನಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಲು ತೆರಳಿದ್ದಾಗ ಚಿಕ್ಕಣ್ಣ ಅಲ್ಲಿದ್ದರು. ಹೀಗಾಗಿ ಅವರನ್ನು ಪೊಲೀಸರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆತಂದು ಸರಿಸುಮಾರು ಮೂರೂವರೆ ಗಂಟೆಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿ ಕಳಿಸಿದ್ದಾರೆ.

    ವಿಚಾರಣೆ ಎದುರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಿಕ್ಕಣ್ಣ, ದರ್ಶನ್ ನನಗೆ ಸ್ನೇಹಿತ, ಹಾಗಾಗಿ ಊಟಕ್ಕೆ ಹೋಗಿದ್ದೆ. ಇವತ್ತು ಪೊಲೀಸರು ವಿಚಾರಣೆ ಕರೆದಿದ್ರು ಬಂದಿದ್ದೀನಿ. ಪ್ರಕರಣದ ತನಿಖೆ ನಡೀತಿದೆ. ಹೀಗಾಗಿ ಈಗ ನಾನು ಏನೂ ಹೇಳಲ್ಲ ಎಂದು ಹೇಳಿ ಹೊರಟರು.

  • ನಟ, ಐಎಎಸ್ ಅಧಿಕಾರಿ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

    ನಟ, ಐಎಎಸ್ ಅಧಿಕಾರಿ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

    ನ್ನಡದಲ್ಲಿ ಐಎಎಸ್ (IAS) ಮಾಡಿದ ಮೊದಲ ಅಧಿಕಾರಿ ಹಾಗೂ ಬಾ ನಲ್ಲೆ ಮಧುಚಂದ್ರಕೆ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ (Actor) ನಟಿಸಿರುವ ಕೆ.ಶಿವರಾಮ್ (K. Shivaram) ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಇದೆ. ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಹಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು.

    ಮೂಲಗಳ ಪ್ರಕಾರ ಎಚ್.ಸಿ.ಜಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪರಿಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ಸಿಗುತ್ತಿದೆ. ಕನ್ನಡದಲ್ಲೇ ಐಎಎಸ್ ಬರೆದು, ನಂತರ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ.

     

    ನಂತರ ಬಾ ನಲ್ಲೆ ಮಧುಚಂದ್ರಿಕೆ, ವಸಂತ ಕಾವ್ಯದಂತಹ ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಾಂಗ್ಲಿಯಾನ 3 ಚಿತ್ರದಲ್ಲಿ ಇವರದ್ದು ಖಳನಾಯಕನ ಪಾತ್ರ. ಹತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಶಿವರಾಮ್, ತಮ್ಮ ಮಗಳನ್ನು ನಟ ಪ್ರದೀಪ್ ಅವರಿಗೆ ಧಾರೆಯರೆದಿದ್ದರು. ಕೆಲವು ತಿಂಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಅವರು ಆಪ್ತರು ತಿಳಿಸಿದ್ದಾರೆ.

  • ವ್ಯಾಲೆಂಟೈನ್‌ ದಿನದ ವಿಶೇಷ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

    ವ್ಯಾಲೆಂಟೈನ್‌ ದಿನದ ವಿಶೇಷ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

    ಸ್ಯಾಂಡಲ್‌ವುಡ್‌ನ ಮುದ್ದಾದ ಜೋಡಿ ಯಶ್- ರಾಧಿಕಾ ಪಂಡಿತ್ (Radhika Pandit) ಪ್ರೇಮಿಗಳ ದಿನವನ್ನು ಸೆಲೆಬ್ರೇಟ್ ಮಾಡಿದ್ದಾರೆ. ವ್ಯಾಲೆಂಟೈನ್ ದಿನದ ಸುಂದರ ಫೋಟೋಗಳನ್ನು ನಟಿ ರಾಧಿಕಾ ಹಂಚಿಕೊಂಡಿದ್ದಾರೆ.‌ ‘ಕೆಜಿಎಫ್‌ 2’ (KGF 2) ನಟನ ಫ್ಯಾಮಿಲಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಫೆ.14 ಪ್ರೇಮಿಗಳ ಪಾಲಿಗೆ ವಿಶೇಷ ದಿನ. ಅದರಲ್ಲಿ ಪ್ರೀತಿಸಿ ಮದುವೆಯಾಗಿರುವ ಯಶ್ (Yash) ಮತ್ತು ರಾಧಿಕಾ ದಂಪತಿಗೂ ವಿಶೇಷ ದಿನ ಎಂದು ಹೇಳಿದರೆ ತಪ್ಪಾಗಲಾರದು. ಚಂದನವನದ ಆದರ್ಶ ಜೋಡಿ ಯಶ್ ಮತ್ತು ರಾಧಿಕಾ ಇಂದು ಲವ್ಲಿ ಆಗಿ ಪ್ರೇಮಿಗಳ ದಿನಾಚರಣೆಯನ್ನು ಆಚರಿಸಿದ್ದಾರೆ. ಇದನ್ನೂ ಓದಿ:ಆಪ್ರೋ ಲುಕ್ ನಲ್ಲಿ ಧ್ರುವ ಸರ್ಜಾ: ಗೋವಾದಲ್ಲಿ ಕಾಣಿಸಿಕೊಂಡ ನಟ

    ದೂರದ ಊರಿನಲ್ಲಿ ಯಶ್ ಜೋಡಿ ತಮ್ಮ ಮಕ್ಕಳ ಜೊತೆ ಸಮಯ ಕಳೆದಿದ್ದಾರೆ. ಗೋಡೆಯ ಮೇಲೆ ಹಾರ್ಟ್ ಬಲೂನ್ ಹಾಕಿ ಕಲರ್‌ಫುಲ್ ಡ್ರೆಸ್ ಧರಿಸಿ ಮಿಂಚಿದ್ದಾರೆ. ಯಶ್ ಮತ್ತು ರಾಧಿಕಾ ಇಬ್ಬರು ಕಣ್ಣಿಗೆ ಕುಲ್ಲಿಂಗ್ ಗ್ಲ್ಯಾಸ್ ತೊಟ್ಟು ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ನನ್ನ ಶಾಶ್ವತ ಪ್ರೇಮಿಗಳೊಂದಿಗೆ ವ್ಯಾಲೆಂಟೈನ್ಸ್‌ ಡೇ ಲಂಚ್‌ ಎಂದು ನಟಿ ಕ್ಯಾಪ್ಷನ್‌  ನೀಡಿದ್ದಾರೆ.

    ಇನ್ನೂ ‘ಟಾಕ್ಸಿಕ್’ (Toxic) ಶೂಟಿಂಗ್‌ಗೆ ಬ್ರೇಕ್ ಕೊಟ್ಟು ಯಶ್ ತಮ್ಮ ಕುಟುಂಬಕ್ಕೆ ಸಮಯ ಮೀಸಲಿಟ್ಟಿದ್ದಾರೆ. ಯಶ್ ಪಕ್ಕಾ ಫ್ಯಾಮಿಲಿಮೆನ್ ಎಂಬುದು ಗೊತ್ತಿರುವ ವಿಚಾರ. ಎಷ್ಟೇ ಬ್ಯುಸಿ ಇದ್ದರೂ ಕುಟುಂಬಕ್ಕೆ ಸಮಯ ಕೊಡೋದ್ರಲ್ಲಿ ಯಶ್ ಯಾವತ್ತೂ ಹಿಂದೆ ಬಿದ್ದಿಲ್ಲ.

    ರಾಧಿಕಾ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿರೋದು ನೋಡಿ ಫ್ಯಾನ್ಸ್, ಅತ್ತಿಗೆ ಯಾವಾಗ ಮತ್ತೆ ಸಿನಿಮಾ ಮಾಡ್ತೀರಾ ಎಂದು ಸೋಷಿಯಲ್ ಮೀಡಿಯಾದಲ್ಲಿ ನಟಿಗೆ ಪ್ರಶ್ನೆ ಮಾಡಿದ್ದಾರೆ. ಸದ್ಯದಲ್ಲೇ ನಟಿ ಸಿನಿಮಾರಂಗಕ್ಕೆ ಎಂಟ್ರಿ ಕೊಡ್ತಾರೆ ಎಂಬ ಸುದ್ದಿ ಕೂಡ ಇದೆ. ರಾಧಿಕಾ ಕಡೆಯಿಂದ ಅಧಿಕೃತ ಮಾಹಿತಿ ಸಿಗುವವರೆಗೂ ಕಾದುನೋಡಬೇಕಿದೆ.

  • ಮಿಥುನ್ ಚಕ್ರವರ್ತಿಗೆ ಬ್ರೈನ್ ಸ್ಟ್ರೋಕ್- ಆರೋಗ್ಯ ಸ್ಥಿತಿ ಹೇಗಿದೆ?

    ಮಿಥುನ್ ಚಕ್ರವರ್ತಿಗೆ ಬ್ರೈನ್ ಸ್ಟ್ರೋಕ್- ಆರೋಗ್ಯ ಸ್ಥಿತಿ ಹೇಗಿದೆ?

    ಬಾಲಿವುಡ್‌ನ (Bollywood) ಖ್ಯಾತ ನಟ ಕಮ್ ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿಗೆ (Mithun Chakraborty) ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ (ಫೆ.10) ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು. ಇದೀಗ ನಟ ಮಿಥುನ್ ಅವರ ಹೆಲ್ತ್ ಬಗ್ಗೆ ಅಪ್‌ಡೇಟ್ ಹೊರಬಿದ್ದಿದೆ. ಅವರಿಗೆ ಆಗಿದ್ದು ಬ್ರೈನ್ ಸ್ಟ್ರೋಕ್ (Brain Stroke) ಎಂಬ ವಿಚಾರ ತಿಳಿದು ಬಂದಿದೆ.

    ಮಿಥುನ್ ಈಗ ಐಸಿಯುನಿಂದ ಹೊರಬಂದಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ನಟಿ ದೇಬಶ್ರೀ ರಾಯ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಮಿಥುನ್ ಅವರು ಈಗ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ. ಸರಿಯಾದ ಸಮಯಕ್ಕೆ ಆಡ್ಮಿಟ್ ಮಾಡಿದ ಕಾರಣ ಚಿಂತಿಸುವ ಅಗತ್ಯವಿಲ್ಲ. ಶುಗರ್ ಮಟ್ಟ ಕೂಡ ಕಡಿಮೆ ಆಗಿದೆ. ಈಗ ಅವರು ಐಸಿಯುನಿಂದ ಹೊರಬಂದಿದ್ದಾರೆ. ಚೇತರಿಸಿಕೊಳ್ಳುತ್ತಿದ್ದಾರೆ ಎಂದು ದೇಬಶ್ರೀ ರಾಯ್ ತಿಳಿಸಿದ್ದಾರೆ. ಸದ್ಯ 73 ವರ್ಷ ವಯಸ್ಸಿನ ನಟ ಮಿಥುನ್ ಆರೋಗ್ಯದಲ್ಲಿ ಚೇತರಿಕೆ ಕಂಡಿರುವ ವಿಚಾರ ತಿಳಿದು ಅಭಿಮಾನಿಗಳು ನಿರಾಳವಾಗಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ನತ್ತ ‘ಆರ್‌ಆರ್‌ಆರ್’ ಹೀರೋ ರಾಮ್ ಚರಣ್

    ಮಿಥುನ್ ಚಕ್ರವರ್ತಿ ಅವರು 1976ರಿಂದ ಚಿತ್ರೋದ್ಯಮದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ರಾಷ್ಟ್ರ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಗೌರವಗಳನ್ನು ಅವರು ಪಡೆದಿದ್ದಾರೆ. ಡಿಸ್ಕೋ ಡ್ಯಾನ್ಸರ್, ಜಂಗ್, ಪ್ರೇಮ್ ಪ್ರತಿಜ್ಞಾ, ಪ್ಯಾರ್ ಜುಕ್ತಾ ನಹೀ, ಮರ್ದ್ ಮುಂತಾದ ಸಿನಿಮಾಗಳಲ್ಲಿ ನಟಿಸಿ ಅವರು ಹೆಸರುವಾಸಿ ಆಗಿದ್ದಾರೆ.