Tag: Actor-Actress

  • ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಜೋಶ್‌ʼ ನಟಿ ಪೂರ್ಣ

    ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಜೋಶ್‌ʼ ನಟಿ ಪೂರ್ಣ

    ಜೋಶ್, 100, ರಾಧನ ಗಂಡ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಮೋಡಿ ಮಾಡಿದ್ದ ನಟಿ ಪೂರ್ಣ ಅಲಿಯಾಸ್ ಶಮ್ನಾ ಕಾಸಿಮ್ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸದ್ಯ ನಟಿ ಪೂರ್ಣ ಬೇಬಿ ಶವರ್‌ ಕಾರ್ಯಕ್ರಮದ ಸಂಭ್ರಮದಲ್ಲಿದ್ದಾರೆ.

    ಬಹುಭಾಷಾ ನಟಿ ಪೂರ್ಣ ಇದೀಗ ತಾಯಿಯಾಗುತ್ತಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಪೂರ್ಣ ಕಳೆದ 2022ರ ಅಕ್ಟೋಬರ್ 25ರಂದು ಶನಿದ್ ಅಸಿಫ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದುಬೈ ಮೂಲದ ಉದ್ಯಮಿ ಶನಿದ್ ಜೊತೆ ಅದ್ದೂರಿಯಾಗಿ ವಿವಾಹವಾಗಿದ್ದರು. ಇದನ್ನೂ ಓದಿ: `ಗಟ್ಟಿಮೇಳ’ ನಟಿ ಪ್ರಿಯಾ ಜೊತೆ ಸಿದ್ದು ಮದುವೆ ಡೇಟ್ ಫಿಕ್ಸ್

    ಈಗ ತಾಯಿಯಾಗುತ್ತಿರುವ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಮನೆಗೆ ಹೊಸ ಅತಿಥಿ ಆಗಮನದ ಸಂಭ್ರಮದ ನಡುವೆ ಬೇಬಿ ಶವರ್ ಕಾರ್ಯಕ್ರಮವು ಅದ್ದೂರಿಯಾಗಿ ನಡೆದಿದೆ. ಕೆಂಪು ಬಣ್ಣದ ಸೀರೆಯಲ್ಲಿ ನಟಿ ಮಿರ ಮಿರ ಅಂತಾ ಮಿಂಚಿದ್ದಾರೆ. ಈ ಕುರಿತ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

    ಇನ್ನೂ ಮದುವೆಯಾಗಿ ಕೆಲವೇ ತಿಂಗಳಿಗೆ ನಟಿ ಪೂರ್ಣ (Actress Purnaa) ತಾಯಿಯಾಗುತ್ತಿರುವ ಗುಡ್ ನ್ಯೂಸ್ ನೀಡಿರೋದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಇನ್ನೂ ಪತಿ ಶನಿದ್‌ ಅನುಪಸ್ಥಿತಿಯಲ್ಲಿ ನಟಿಯ ಬೇಬಿ ಶವರ್‌ ಕಾರ್ಯಕ್ರಮ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಿ: ಸಿದ್ದರಾಮಯ್ಯ

    ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಿ: ಸಿದ್ದರಾಮಯ್ಯ

    ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ 71ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿನಿಮಾ ನಟ- ನಟಿಯರು ಕೂಡ ಹೋರಾಟ ನಿರತ ರೈತರನ್ನು ಬೆಂಬಲಿಸುವಂತೆ ಕರೆ ನೀಡಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು. ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ ಎಂದು ಪ್ರಶ್ನಿಸಿದ್ದಾರೆ.

    ಇತ್ತ ನಿನ್ನೆಯಷ್ಟೇ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‍ಬರ್ಗ್ ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಖ್ಯಾತ ಪಾಪ್ ಗಾಯಕಿ ರಿಹಾನಾ ಟ್ವೀಟ್ ಮಾಡಿ, ರೈತ ಹೋರಾಟ ಬೆಂಬಲಿಸಿ ಏಕೆ ಮಾತಾಡ್ತಿಲ್ಲ ಅಂತ ಪ್ರಶ್ನಿಸಿದ್ದರು. ಇದಕ್ಕೆ ಬಾಲಿವುಡ್ ನಟಿ ಕಂಗನಾ ರಣಾವತ್ ತಿರುಗೇಟು ನೀಡಿದ್ದರು. ಪ್ರತಿಭಟನೆ ನಡೆಸ್ತಿರುವವರು ರೈತರಲ್ಲ. ಅವರು ದೇಶವನ್ನು ವಿಭಜಿಸಲು ನೋಡ್ತಿರುವ ಭಯೋತ್ಪಾದಕರು. ದೇಶವನ್ನು ತುಕ್ಡೆ ತುಕ್ಡೆ ಮಾಡಿ ಚೈನಾ ಕಾಲೋನಿಗಳನ್ನಾಗಿ ಮಾಡುವ ಉದ್ದೇಶ ಹೊಂದಿರುವವರು. ನಾವು ನಮ್ಮ ದೇಶವನ್ನು ಮಾರಿಕೊಳ್ಳಲು ನೋಡ್ತಿಲ್ಲ. ಅದಕ್ಕೆ ನಾವು ಮಾತಾಡ್ತಿಲ್ಲ. ನೀವು ಸುಮ್ಮನಿರಿ ಎಂದು ಟ್ವೀಟ್ ಮಾಡಿ ಆಕ್ರೊಶ ಹೊರಹಾಕಿದ್ದರು. ಇದನ್ನೂ ಓದಿ: ವಿಶ್ವಮಟ್ಟದಲ್ಲಿ ಭಾರತದ ವಿರುದ್ಧ ಷಡ್ಯಂತ್ರ? – ಪ್ರತಿಭಟನೆಯ ಟೂಲ್‌ ಕಿಟ್ ಬಹಿರಂಗ ಮಾಡಿದ‌ ಗ್ರೇಟಾ ಥನ್‌ಬರ್ಗ್‌

    ಒಟ್ಟಿನಲ್ಲಿ ರೈತ ಚಳುವಳಿಯ ಹೆಸರಿನಲ್ಲಿ ಭಾರತದ ಆಂತರಿಕ ವಿಚಾರದಲ್ಲಿ ತಲೆ ಹಾಕಿದ ವಿದೇಶಿ ಸೆಲೆಬ್ರಿಟಿಗಳ ವಿರುದ್ಧ ದೇಶಿ ಸೆಲೆಬ್ರಿಟಿಗಳು ಸಿಡಿದೆದ್ದಿದ್ದರು. ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಅಜಯ್ ದೇವಗನ್, ಸುನೀಲ್ ಶೆಟ್ಟಿ, ನಿರ್ಮಾಪಕ ಕರಣ್ ಜೋಹರ್, ಗಾಯಕ್ ಕೈಲಾಶ್ ಖೇರ್, ಖ್ಯಾತ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ, ಟೀಂ ಇಂಡಿಯಾ ಆಟಗಾರ ಶಿಖರ್ ಧವನ್, ಸುರೇಶ್ ರೈನಾ ವಿದೇಶಿ ಸೆಲೆಬ್ರಿಟಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಬೇಡಿ ಎನ್ನುತ್ತಾ #IndiaAgainstPropaganda #IndiaTogether ಟ್ರೆಂಡ್ ಮಾಡಿದ್ದರು. ಇದನ್ನೂ ಓದಿ: #IndiaAgainstPropaganda -ರಾಷ್ಟ್ರಕ್ಕಾಗಿ ನಾವೆಲ್ಲ ಒಂದಾಗೋಣ ಎಂದ ಸಚಿನ್‌

  • ಬಳ್ಳಾರಿ ಪೊಲೀಸರ ವಿನೂತನ ಪ್ರಯತ್ನಕ್ಕೆ ಕೈ ಜೋಡಿಸಿದ ಸ್ಯಾಂಡಲ್ ವುಡ್ ನಟ-ನಟಿಯರು!

    ಬಳ್ಳಾರಿ ಪೊಲೀಸರ ವಿನೂತನ ಪ್ರಯತ್ನಕ್ಕೆ ಕೈ ಜೋಡಿಸಿದ ಸ್ಯಾಂಡಲ್ ವುಡ್ ನಟ-ನಟಿಯರು!

    ಬಳ್ಳಾರಿ: ಅಪಘಾತವಾದಾಗ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲು ಯಾರು ಮುಂದೆ ಬರಲ್ಲ, ಗಾಯಾಳುಗಳನ್ನು ಕರೆದೊಯ್ಯುವ ಅಂಬುಲೆನ್ಸ್ ಗಳಿಗೆ ದಾರಿನೂ ಸಹ ಕೊಡಲ್ಲ. ಹೀಗಾಗಿ ಅಂಬುಲೆನ್ಸ್ ಗಳಿಗೆ ದಾರಿ ಕೊಡಿ ರೋಗಿಗಳ ಜೀವ ಉಳಿಸಿ ಎಂದು ಬಳ್ಳಾರಿ ಪೊಲೀಸರು ಜಾಗೃತಿ ಆರಂಭಿಸಿದ್ದಾರೆ. ಪೊಲೀಸರ ಈ ವಿನೂತನ ಕಾರ್ಯಕ್ಕೆ ಸ್ಯಾಂಡಲವುಡ್ ನಟ-ನಟಿಯರು ಸಹ ಸಾಥ್ ನೀಡಿದ್ದಾರೆ.

    ಅಂಬುಲೆನ್ಸ್ ಗಳಿಗೆ ಅಡ್ಡವಾಗುವ ಜನರಲ್ಲಿ ಜಾಗೃತಿ ಮೂಡಿಸಲು ಬಳ್ಳಾರಿಯ ತೋರಣಗಲ್ ಠಾಣೆಯ ಪೊಲೀಸರು ರಾಜ್ಯದಲ್ಲೇ ಮೊದಲ ಬಾರಿಗೆ ವಿನೂತನ ಜಾಗೃತಿ ಆರಂಭಿಸಿದ್ದಾರೆ. ಅಂಬುಲೆನ್ಸ್ ಗಳಿಗೆ ದಾರಿ ಬಿಡಿ ರೋಗಿಗಳ ಪ್ರಾಣ ಉಳಿಸಿ ಎಂದು ಜಾಗೃತಿ ಆರಂಭಿಸುವ ಮೂಲಕ ರೋಗಿಗಳಿಗೆ ನೆರವಾಗಲು ಮುಂದಾಗಿದ್ದಾರೆ.

    ತೋರಣಗಲ್ ಪೊಲೀಸ್ ಠಾಣೆಯ ಪಿಎಸ್‍ಐ ಮೊಹ್ಮದ್ ರಫೀಕ್ ಅವರ ಈ ವಿನೂತನ ಕಾರ್ಯಕ್ಕೆ ಬಳ್ಳಾರಿ ಪೊಲೀಸರು ಸಾಥ್ ನೀಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಆಟೋ, ಲಾರಿ, ಟಾಕ್ಸಿ ಚಾಲಕರು ಸೇರಿದಂತೆ ಸಾರ್ವಜನಿಕರಿಗೆ ಅಂಬುಲೆನ್ಸ್ ಗಳಿಗೆ ದಾರಿ ಬಿಡಿ ಎಂದು ಮನವರಿಕೆ ಮಾಡಿಕೊಡುತ್ತಿದ್ದಾರೆ.

    ತೋರಣಗಲ್ ಪೊಲೀಸರ ಈ ವಿನೂತನ ಜಾಗೃತಿಗೆ ಸ್ಯಾಂಡಲ್ ವುಡ್ ತಾರೆಯರಾದ ಯಶ್, ಪ್ರೇಮ್, ದಿಗಂತ್, ಐಂದ್ರಿತಾ ರೈ ಹಾಗೂ ಮೇಘನಾ ಗಾಂವ್ಕರ್ ಸಹ ಕೈ ಜೋಡಿಸಿ ಜನರಿಗೆ ಅಂಬುಲೆನ್ಸ್ ಗಳಿಗೆ ದಾರಿ ಮಾಡಿಕೊಡುವಂತೆ ಸಂದೇಶ ಸಾರುತ್ತಿದ್ದಾರೆ.

    ಬಳ್ಳಾರಿ ಪೊಲೀಸರು ವಾಹನ ಚಾಲಕರಿಗೆ ಮತ್ತು ಸಾರ್ವಜನಿಕರಿಗೆ ಟ್ರಾಫಿಕ್ ಸಿಗ್ನಲ್ ಗಳಲ್ಲಿ ಅಂಬುಲೆನ್ಸ್ ಗಳಿಗೆ ದಾರಿ ಬಿಡುವಂತೆ ಜಾಗೃತಿ ಮೂಡಿಸುತ್ತಿದ್ದಾರೆ, ಬಳ್ಳಾರಿ ಪೊಲೀಸರ ಈ ವಿನೂತನ ಕಾರ್ಯಕ್ಕೆ ಹಲವಾರು ವಿದೇಶಗಳ ರಾಯಭಾರಿಗಳು ಹಾಗೂ ಮಾಜಿ ವಿಶ್ವ ಸುಂದರಿಯರು ಸಹ ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಪೊಲೀಸರ ಜಾಗೃತಿಗೆ ಕೈಜೋಡಿಸಿ ಅಂಬುಲೆನ್ಸ್ ಗಳ ಮಹತ್ವವನ್ನು ಸಾರುತ್ತಿದ್ದಾರೆ.