Tag: actor Chikkanna

  • ಸದ್ದಿಲ್ಲದೇ ಹಾಸ್ಯನಟ ಚಿಕ್ಕಣ್ಣ ಮದ್ವೆ ನಿಶ್ಚಯ

    ಸದ್ದಿಲ್ಲದೇ ಹಾಸ್ಯನಟ ಚಿಕ್ಕಣ್ಣ ಮದ್ವೆ ನಿಶ್ಚಯ

    ಮೈಸೂರು: ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಹಸಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯ ಜೊತೆ ಚಿಕ್ಕಣ್ಣ ಹಸಮಣೆ ಏರಲಿದ್ದಾರೆ.

    ಮಹದೇವಪುರ ಗ್ರಾಮದ ಪಾವನಾ ಎಂಬ ಯುವತಿಯ ಜೊತೆ ಚಿಕ್ಕಣ್ಣ ಮದುವೆ ನಿಶ್ಚಯವಾಗಿದೆ. ಈಗಾಗಲೇ ಹೂ ಮುಡಿಸುವ ಶಾಸ್ತ್ರವನ್ನು ಎರಡು ಕುಟುಂಬಗಳು ನೇರವೇರಿಸಿರಿವೆ. ನಿಶ್ಚಿತಾರ್ಥ ಮತ್ತು ಮದುವೆ ದಿನಾಂಕ ಮುಂದಿನ ವಾರ ನಿಗದಿಯಾಗಲಿದೆ.

  • ದರ್ಶನ್ ಬರ್ತ್‌ಡೇ ಸಂಭ್ರಮ – ಪತಿ ಜೊತೆಗಿನ ಫೋಟೊ ಹಂಚಿಕೊಂಡು ವಿಜಯಲಕ್ಷ್ಮೀ ವಿಶ್

    ದರ್ಶನ್ ಬರ್ತ್‌ಡೇ ಸಂಭ್ರಮ – ಪತಿ ಜೊತೆಗಿನ ಫೋಟೊ ಹಂಚಿಕೊಂಡು ವಿಜಯಲಕ್ಷ್ಮೀ ವಿಶ್

    – `ದಾಸ’ನಿಗೆ ಬರ್ತ್‌ಡೇ ವಿಶ್ ಮಾಡಿದ ಧನ್ವೀರ್, ಚಿಕ್ಕಣ್ಣ

    ಬೆಂಗಳೂರು: ನಟ ದರ್ಶನ್ (Darshan) 48ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಪತಿ ದರ್ಶನ್ ಜೊತೆಗಿನ ಫೋಟೊ ಹಂಚಿಕೊಂಡು ಪತ್ನಿ ವಿಜಯಲಕ್ಷ್ಮೀ (Vijayalakshmi) ಬರ್ತ್‌ಡೇ (Birthday) ವಿಶ್ ಮಾಡಿದ್ದಾರೆ.

     

    View this post on Instagram

     

    A post shared by Vijayalakshmi darshan (@viji.darshan)

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿದ್ದ ಸಂದರ್ಭದಿಂದಲೂ ಜೊತೆಯಾಗಿದ್ದ ನಟ ಧನ್ವೀರ್ (Dhanveer) ಸಹ ಶುಭಾಶಯ ತಿಳಿಸಿದ್ದಾರೆ. ಧನ್ವೀರ್ ದರ್ಶನ್ ಜೊತೆಗಿನ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿ, ಸಂತೋಪ ಮತ್ತು ಯಶಸ್ಸು ಸದಾ ನಿಮ್ಮ ಜೊತೆಗಿರಲಿ. ನೀವು ನಡೆವ ಪ್ರತಿ ಹೆಜ್ಜೆಯೂ ಯಶಸ್ಸಿನ ಪಥವಾಗಲಿ. ಹುಟ್ಟುಹಬ್ಬದ ಶುಭಾಶಯಗಳು ಅಣ್ಣ (ಬಾಸ್) #ಉಸಿರಿರುವವರೆಗೂ ಇರ್ತಿವಿ ನಿಮ್ಮಿಂದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಕ್ಟರ್ & ಡಾಕ್ಟರ್ – ಮೈಸೂರಲ್ಲಿ ಅದ್ದೂರಿಯಾಗಿ ನಡೆದ ಡಾಲಿ, ಧನ್ಯತಾ ಮದುವೆ

    ನಟ ಚಿಕ್ಕಣ್ಣ ಸಹ ತಮ್ಮ ಇನ್‌ಸ್ಟಾ ಖಾತೆಯಲ್ಲಿ, ಹುಟ್ಟುಹಬ್ಬದ ಶುಭಾಶಯಗಳು ಸರ್ ಎಂದು ಬರೆದುಕೊಂಡು ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Chikku (@chikkanna_official)

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಪ್ರತಿವರ್ಷ ಅಭಿಮಾನಿಗಳೊಂದಿಗೆ ಭರ್ಜರಿಯಾಗಿ ಬರ್ತ್‌ಡೇ ಸೆಲೆಬ್ರೆಟ್ ಮಾಡುತ್ತಿದ್ದ ದರ್ಶನ್, ಈ ಬಾರಿ ಅನಾರೋಗ್ಯದ ಕಾರಣ ಇವೆಲ್ಲದರಿಂದಲೂ ದೂರ ಉಳಿದಿದ್ದಾರೆ. ಇದನ್ನೂ ಓದಿ : ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಮೃತರ ಕುಟುಂಬಗಳಿಗೆ ಕೇಂದ್ರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ

    ಇದೀಗ ಅಭಿಮಾನಿಗಳಿಂದ ದರ್ಶನ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ.

  • ದರ್ಶನ್ ಸಮಾಜ ಸೇವೆಗೆ ಕೈ ಜೋಡಿಸಿದ ಚಿಕ್ಕಣ್ಣ

    ದರ್ಶನ್ ಸಮಾಜ ಸೇವೆಗೆ ಕೈ ಜೋಡಿಸಿದ ಚಿಕ್ಕಣ್ಣ

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ.

    ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ ಚಿಕ್ಕಣ್ಣ ನಾನು ಸೆರೆಹಿಡಿದಿದ್ದ ಆನೆಯ ಫೋಟೋವನ್ನು ಅರಣ್ಯ ಇಲಾಖೆಯ ನೆರವಿಗಾಗಿ 1 ಲಕ್ಷ ರೂಪಾಯಿಗಳನ್ನು ನೀಡಿ ಖರೀದಿ ಮಾಡಿರುವುದು ಶ್ಲಾಘನೀಯ. ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನನ್ನ ಕೃತಘ್ನತೆಗಳು’ ಎಂದು ಬರೆದುಕೊಂಡಿದ್ದಾರೆ.

    ಸಿನಿಮಾ ಬ್ಯುಸಿಯ ನಡುವೆಯು ತಮ್ಮ ವಿರಾಮ ವೇಳೆಯನ್ನ ಸದುಪಯೋಗ ಪಡಿಸಿಕೊಳ್ಳುವ ದರ್ಶನ್ ಬಿಡುವಿದ್ದಾಗೆಲ್ಲಾ ಕಾಡಿನಲ್ಲಿ ಕಾಲ ಕಳೆಯುತ್ತಾರೆ. ಅಲ್ಲದೇ ವನ್ಯಜೀವಿ ಹಾಗೂ ಪ್ರಕೃತಿ ಫೋಟೋಗ್ರಾಫಿ ಬಗ್ಗೆ ದರ್ಶನ್ ಹೆಚ್ಚು ಆಸಕ್ತರಾಗಿದ್ದು, ಪ್ರಾಣಿ ಪಕ್ಷಿಗಳ ಅಂದವನ್ನ ಕ್ಯಾಮೆರಾದಲ್ಲಿ ಸೆರೆಹಿಡಿಯುವ ಹವ್ಯಾಸ ಹೊಂದಿದ್ದಾರೆ. ಈ ಹಿಂದೆ ತಾವು ಸೆರೆ ಹಿಡಿದ್ದ ಪ್ರಕೃತಿಯ ಅದ್ಭುತ ದೃಶ್ಯಗಳ ಫೋಟೋಗಳನ್ನು ಹರಾಜು ಹಾಕಿದ್ದರು. ಮಾರ್ಚ್ 3 ರಂದು ನಡೆದ ಈ ಹರಾಜಿನಲ್ಲಿ 3.75 ಲಕ್ಷ ರೂ. ಸಂಗ್ರಹಣೆಯಾಗಿತ್ತು. ಇದರಲ್ಲಿ ಬಂದ ಹಣವನ್ನು ದರ್ಶನ್ ಅರಣ್ಯ ಸಂರಕ್ಷಣೆಗೆ ಖರ್ಚು ಮಾಡುತ್ತೇನೆ ಎಂದು ತಿಳಿಸಿದ್ದರು.

  • ಹಾಸ್ಯ ನಟ ಚಿಕ್ಕಣ್ಣ ಕಾರಿಗೆ ಕನ್ನ ಹಾಕಿದ ಕಳ್ಳರು

    ಹಾಸ್ಯ ನಟ ಚಿಕ್ಕಣ್ಣ ಕಾರಿಗೆ ಕನ್ನ ಹಾಕಿದ ಕಳ್ಳರು

    ಬೆಂಗಳೂರು: ಕನ್ನಡ ಚಿತ್ರ ರಂಗದಲ್ಲಿ ಕಾಮಿಡಿ ಕಿಂಗ್ ಎಂದೇ ಪ್ರಸಿದ್ಧಿ ಪಡೆದಿರುವ ನಟ ಚಿಕ್ಕಣ್ಣ ಅವರ ಕಾರಿನ ಗಾಜು ಒಡೆದು ಕಳ್ಳತನ ಮಾಡಿರುವ ಘಟನೆ ನಗರದ ನಾಗರವಾವಿ ಬಳಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಚಿಕ್ಕಣ್ಣ ಅವರು ತಮ್ಮ ಕಾರನ್ನು ನಾಗರಭಾವಿಯ ಎಂಆರ್‍ಕೆ ಅಪಾರ್ಟ್ ಮೆಂಟ್ ಬಳಿ ನಿಲ್ಲಿಸಿ ತೆರಳಿದ್ದ ವೇಳೆ ಘಟನೆ ನಡೆದಿದೆ. ಕಾರಿನ ಗಾಜು ಒಡೆದು ತಮ್ಮ ಕೈ ತಳಕ ತೋರಿರುವ ಕಳ್ಳರು, ಕಾರಿನಲ್ಲಿದ್ದ ಬೆಲೆ ಬಾಳುವ ಸ್ಟಿರಿಯೋ ಹಾಗೂ ಎಲ್‍ಇಡಿ ಸೆಟ್ ಹೊತ್ತೊಯಿದಿದ್ದಾರೆ.

    ಮೇ 20 ರ ಭಾನುವಾರದಂದು ಘಟನೆ ನಡೆದಿದ್ದು, ಈ ಸಂಬಂಧ ಚಿಕ್ಕಣ್ಣ ಅವರು ಈಗಾಗಲೇ ಅನ್ನಪೂಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.