Tag: actor Darshan

  • ಕಾನೂನಿನ ಮುಂದೆ ಎಲ್ಲರೂ ಒಂದೇ – ದರ್ಶನ್ ಬೇಲ್ ರದ್ದು ಬಗ್ಗೆ ನಟಿ ರಮ್ಯಾ ಪೋಸ್ಟ್

    ಕಾನೂನಿನ ಮುಂದೆ ಎಲ್ಲರೂ ಒಂದೇ – ದರ್ಶನ್ ಬೇಲ್ ರದ್ದು ಬಗ್ಗೆ ನಟಿ ರಮ್ಯಾ ಪೋಸ್ಟ್

    – ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದ ನಟಿ

    ರೇಣುಕಾಸ್ವಾಮಿ ಕೇಸ್‌ಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಸ್ಟೋರಿ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ದರ್ಶನ್‌ ಜಾಮೀನು ರದ್ದು | ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ಸಾರಿದ ಸುಪ್ರೀಂ: ವಕೀಲ ಚಿದಾನಂದ್

    ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿಕೊಂಡಿರುವ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರಿಗೂ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ಎಲ್ಲರಿಗೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಜ್ಯ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಗುರುವಾರ (ಆ.14) ಜಾಮೀನು ಅರ್ಜಿಯನ್ನು ರದ್ದುಗೊಳಿಸಿ, ಕೂಡಲೇ ಎಲ್ಲಾ 7 ಆರೋಪಿಗಳು ಸರೆಂಡರ್ ಆಗಬೇಕೆಂದು ಸೂಚನೆ ನೀಡಿತ್ತು.ಇದನ್ನೂ ಓದಿ: ದರ್ಶನ್ ಜಾಮೀನು ರದ್ದು; ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ಪತ್ನಿ

  • ದರ್ಶನ್‌ ಜಾಮೀನು ರದ್ದು | ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ಸಾರಿದ ಸುಪ್ರೀಂ: ವಕೀಲ ಚಿದಾನಂದ್

    ದರ್ಶನ್‌ ಜಾಮೀನು ರದ್ದು | ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ಸಾರಿದ ಸುಪ್ರೀಂ: ವಕೀಲ ಚಿದಾನಂದ್

    ರಾಜಾತಿಥ್ಯ ಕೊಟ್ಟರೆ ಕಠಿಣ ಕ್ರಮ – ತೀರ್ಪಿನ ಪ್ರತಿ ಎಲ್ಲಾ ರಾಜ್ಯಕ್ಕೂ ಹಂಚಿ ಎಂದ ಕೋರ್ಟ್‌

    ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನಟ ದರ್ಶನ್‌ (Actor Darshan) ಜಾಮೀನು ರದ್ದಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ಸುಪ್ರೀಂ ಕೋರ್ಟ್ (Supreme Court) ಸಾರಿದೆ ಎಂದು ಸರ್ಕಾರದ ಪರ ವಕೀಲ ಚಿದಾನಂದ್ ಹೇಳಿದ್ದಾರೆ.

    ಸುಪ್ರೀಂ ಕೋರ್ಟ್‌ ಆವರಣದಲ್ಲಿ ʻಪಬ್ಲಿಕ್‌ ಟಿವಿʼ ಜೊತೆ ಅವರು ಮಾತನಾಡಿದರು. ಈ ವೇಳೆ, ಈ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸುವ ವೇಳೆ ಹೈಕೋರ್ಟ್‌ ಮಾಡಿದ ತಪ್ಪನ್ನು ನಾವು ಮಾಡೋದಿಲ್ಲ ಎಂದಿತ್ತು. ಈಗ ಸುದೀರ್ಘವಾಗಿ ಪರಿಶೀಲಿಸಿದ ನ್ಯಾಯಾಲಯ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡಿದೆ. ಇದು ಘೋರ ಕೃತ್ಯ ಎಸಗುವವರಿಗೆ ಇದು ದೊಡ್ಡ ಪಾಠ. ಇನ್ನೂ ಹೈಕೋರ್ಟ್‌ ಈ ಪ್ರಕರಣವನ್ನು ಕ್ಷಲ್ಲಕ ಎಂಬಂತೆ ನೋಡಿತ್ತು ಎಂದಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ VIP ಟ್ರೀಟ್‌ಮೆಂಟ್ ಕೊಟ್ರೆ ಹುಷಾರ್ – ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ

    ಈ ತೀರ್ಪಿನ ಪ್ರತಿಯನ್ನು ಎಲ್ಲಾ ರಾಜ್ಯಗಳಿಗೆ ಹಂಚುವಂತೆ ನ್ಯಾಯಾಲಯ ಹೇಳಿದೆ. ಯಾಕೆಂದರೆ, ಸುಪ್ರೀಂ ಕೋರ್ಟ್‌ ತೀರ್ಪು ದೇಶಕ್ಕೆ ಕಾನೂನಾಗಿದೆ. ಈ ರೀತಿ ಪ್ರಭಾವಿ ವ್ಯಕ್ತಿಗಳು ಅಪರಾಧ ಕೃತ್ಯ ಎಸಗಿದಾಗ, ಜೈಲು ಅಧಿಕಾರಿಗಳು ಯಾವ ರೀತಿ ನಡೆದುಕೊಳ್ಳಬೇಕು ಎಂಬುದನ್ನು ಕೋರ್ಟ್‌ ಹೇಳಿದೆ. ಅದನ್ನು ಎಲ್ಲಾ ರಾಜ್ಯಗಳಿಗೂ ಹಂಚುವಂತೆ ಪೀಠ ಹೇಳಿದೆ. ಜೈಲಿನಲ್ಲಿ ಮತ್ತೆ ಈ ಆರೋಪಿಗಳಿಗೆ ಐಷಾರಾಮಿ ವ್ಯವಸ್ಥೆ ನೀಡಿದ್ದು ಗಮನಕ್ಕೆ ಬಂದರೆ ಕಠಿಣ ಕ್ರಮದ ಎಚ್ಚರಿಕೆಯನ್ನೂ ನ್ಯಾಯಾಲಯ ನೀಡಿದೆ ಎಂದಿದ್ದಾರೆ.

    ದರ್ಶನ್‌ ಬೆನ್ನು ನೋವು ಅಂತ ಜಾಮೀನು ಪಡೆದು, ಪರೀಕ್ಷೆ ಮಾಡಿಸಿಕೊಂಡ ಮಾರನೇ ದಿನವೇ ಪ್ರೀಮಿಯಮ್‌ ಶೋನಲ್ಲಿ 3 ಗಂಟೆ ಕೂತು ಸಿನಿಮಾ ನೋಡಿದ್ದಾರೆ. ಇದನ್ನೆಲ್ಲ ನ್ಯಾಯಾಲಯದ ಗಮನಕ್ಕೆ ತರಲಾಗಿತ್ತು. ಕಾನೂನು ಎಲ್ಲರಿಗೂ ಒಂದೇ, ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್‌ ಈ ತೀರ್ಪು ಮೈಲಿಗಲ್ಲು ಎಂದಿದೆ. ಇನ್ನೂ ಆರೋಪಿಗಳ ಪರ ವಕೀಲರು ಸಮಯ ಕೇಳಿಲ್ಲ. ಆದ್ದರಿಂದ ಇಂದೇ ಆರೋಪಿಗಳು ಶರಣಾಗಬೇಕು ಎಂದಿದ್ದಾರೆ. ಇದನ್ನೂ ಓದಿ: ಕೊಲೆ ಕೇಸಲ್ಲಿ ಜಾಮೀನು ರದ್ದು – ಮತ್ತೆ ಜೈಲಿಗೆ ದರ್ಶನ್

  • ಸತ್ಯ ಎಲ್ಲಕ್ಕಿಂತ ಶಕ್ತಿಶಾಲಿ, ಅದು ನ್ಯಾಯ ಕೊಡುತ್ತೆ – ತೀರ್ಪಿಗೂ ಮುನ್ನ ಪವಿತ್ರಾ ಗೌಡ ಪೋಸ್ಟ್

    ಸತ್ಯ ಎಲ್ಲಕ್ಕಿಂತ ಶಕ್ತಿಶಾಲಿ, ಅದು ನ್ಯಾಯ ಕೊಡುತ್ತೆ – ತೀರ್ಪಿಗೂ ಮುನ್ನ ಪವಿತ್ರಾ ಗೌಡ ಪೋಸ್ಟ್

    ರೇಣುಕಾಸ್ವಾಮಿ ಕೊಲೆ (Renukaswamy Case) ಕೇಸಲ್ಲಿ ಆರೋಪಿಗಳಾದ ನಟ ದರ್ಶನ್ (Actor Darshan)  ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಭವಿಷ್ಯ ಇಂದು (ಆ.14) ಹೊರಬೀಳಲಿದೆ. ಈ ಹಿನ್ನೆಲೆ ಆರೋಪಿ ಪವಿತ್ರಾ ಗೌಡ (Pavitra Gowda) ಪೋಸ್ಟ್‌ವೊಂದನ್ನು ಹಾಕಿಕೊಂಡಿದ್ದಾರೆ.

    ಜಾಮೀನು ಮುಂದುವರೆಯುವ ನಿರೀಕ್ಷೆಯಲ್ಲಿರುವ ಪವಿತ್ರಾ ಗೌಡ ಇನ್ಸ್‌ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪೋಸ್ಟ್ನಲ್ಲಿ, ಸತ್ಯವು ಎಲ್ಲಕ್ಕಿಂತ ಹೆಚ್ಚು ಶಕ್ತಿಶಾಲಿ. ಅದು ಯಾವಾಗಲೂ ನ್ಯಾಯವನ್ನು ಕೊಡುತ್ತದೆ. ಈ ಜಗತ್ತಿನಲ್ಲಿರುವ ಎಲ್ಲಕ್ಕಿಂತ ಹೆಚ್ಚಿನ ಶಕ್ತಿಯನ್ನು ಸತ್ಯ ಹೊಂದಿರುತ್ತದೆ. ಎಷ್ಟೇ ಸಮಯ ತೆಗೆದುಕೊಂಡರೂ, ನ್ಯಾಯವು ಯಾವಾಗಲೂ ತನ್ನ ದಾರಿಯನ್ನು ಕಂಡುಕೊಳ್ಳುತ್ತದೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಮಾನಸಿಕ ಸ್ಥಿತಿ ಕುಗ್ಗಿತಾ?- ಅತ್ಯಾಚಾರ ಕೇಸ್‌ ಅಪರಾಧಿಗೆ ಜೈಲಿನಲ್ಲೇ ಕೌನ್ಸಿಲಿಂಗ್

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪಕ್ಕೆ ಸಂಬಂಸಿದಂತೆ ಪ್ರಕರಣದ ಎ1 ಪವಿತ್ರಾ ಗೌಡ, ಎ2 ದರ್ಶನ್ ಹಾಗೂ `ಡಿ’ ಗ್ಯಾಂಗ್‌ಗೆ ಹೈಕೋರ್ಟ್ ಜಾಮೀನು ನೀಡಿತ್ತು. ರಾಜ್ಯ ಪೊಲೀಸ್ ಇಲಾಖೆ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಆದೇಶವನ್ನು ಕಾಯ್ದಿರಿಸಿತ್ತು. ಗುರುವಾರ ದರ್ಶನ್, ಪವಿತ್ರಾ ಸೇರಿದಂತೆ ಏಳು ಜನರ ಬೇಲ್ ಭವಿಷ್ಯ ನಿರ್ಧಾರವಾಗಲಿದೆ.

    ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸುತ್ತಾ? ಅಥವಾ ಮುಂದುವರೆಯುತ್ತಾ ಎಂಬ ಕುತೂಹಲಕ್ಕೆ ಕೌಂಟ್‌ಡೌನ್ ಶುರುವಾಗಿದ್ದು, ಪವಿತ್ರಾ ಗೌಡ ಜಾಮೀನು ಮುಂದುವರೆಯುವ ನಿರೀಕ್ಷೆಯಲ್ಲಿದ್ದಾರೆ.ಇದನ್ನೂ ಓದಿ: 2.5 ಲಕ್ಷಕ್ಕೆ ನವಜಾತ ಶಿಶುವನ್ನೇ ಮಾರಿದ ತಾಯಿ – ಹಣ ಖರ್ಚಾದ ಬಳಿಕ ಮಗು ವಾಪಸ್ಸಿಗಾಗಿ ದೂರು

  • ದರ್ಶನ್ ಜಾಮೀನು ಭವಿಷ್ಯಕ್ಕೆ ಕೌಂಟ್‌ಡೌನ್ – ನಟನಿಗೆ ಜೈಲಾ? ಬೇಲಾ?

    ದರ್ಶನ್ ಜಾಮೀನು ಭವಿಷ್ಯಕ್ಕೆ ಕೌಂಟ್‌ಡೌನ್ – ನಟನಿಗೆ ಜೈಲಾ? ಬೇಲಾ?

    – `ಡಿ’ ಗ್ಯಾಂಗ್‌ನ ಏಳು ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶ

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳಾದ ನಟ ದರ್ಶನ್ (Actor Darshan) ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಕರ್ನಾಟಕ ಪೊಲೀಸರು (Karnataka Police) ಸಲ್ಲಿಸಿದ್ದ ಅರ್ಜಿ ಭವಿಷ್ಯ ಇಂದು (ಆ.14) ಹೊರಬೀಳಲಿದೆ.

    ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸುತ್ತಾ? ಅಥವಾ ಮುಂದುವರೆಯುತ್ತಾ ಎಂಬ ಕುತೂಹಲಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಜೊತೆಗೆ ನಟ ದರ್ಶನ್ ಕೂಡ ಜಾಮೀನು ಮುಂದುವರೆಯುವ ನಿರೀಕ್ಷೆಯಲ್ಲಿದ್ದಾರೆ.

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ2 ದರ್ಶನ್ ಹಾಗೂ `ಡಿ’ ಗ್ಯಾಂಗ್‌ಗೆ ಹೈಕೋರ್ಟ್ ಜಾಮೀನು ನೀಡಿತ್ತು. ರಾಜ್ಯ ಪೊಲೀಸ್ ಇಲಾಖೆ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಆದೇಶವನ್ನು ಕಾಯ್ದಿರಿಸಿತ್ತು. ಗುರುವಾರ ದರ್ಶನ್, ಪವಿತ್ರಾ ಸೇರಿದಂತೆ ಏಳು ಜನರ ಬೇಲ್ ಭವಿಷ್ಯ ಹೊರಬೇಳಲಿದೆ.

    ಇನ್ನೂ ಈ ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಾದ-ಪ್ರತಿವಾದದ ಸಂದರ್ಭದಲ್ಲಿ ದರ್ಶನ್ ಹಾಗೂ ಪವಿತ್ರಾ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಜಾಮೀನು ಮುಂದುವರೆಸುವಂತೆ ಮನವಿ ಮಾಡಿಕೊಂಡಿದ್ದರು.

    ದರ್ಶನ್ ಹೇಳಿದ್ದೇನು?

    •  ಮೈಸೂರಿನಲ್ಲಿ ಬಂಧಿಸಿ, ಬೆಂಗಳೂರಲ್ಲಿ ಎಫ್‌ಐಆರ್ ಹಾಕಿದ್ದಾರೆ
    • ಬಂಧನಕ್ಕೆ ಸಂಜೆ 6:30ವರೆಗೆ ಲಿಖಿತ ಕಾರಣ ತಿಳಿಸಿಲ್ಲ, ಇದು ಕಾನೂನು ಉಲ್ಲಂಘನೆ
    • ಜಾಮೀನು ರದ್ದುಪಡಿಸೋದು ಕಠಿಣ ಕ್ರಮವಾಗಲಿದೆ
    •  ಯಾವುದೇ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ
    • ಅಪಹರಣದಲ್ಲಿ ಇವರ ಪಾತ್ರ, ಸೂಚನೆಗೆ ಸಾಕ್ಷಿ, ಆಧಾರಗಳಿಲ್ಲ
    • ದರ್ಶನ್ & ಎ-3 ಪವನ್ ಮಧ್ಯೆ ಮಾತುಕತೆ ನಡೆದಿಲ್ಲ
    •  ವಾಟ್ಸಾಪ್ ಸಂದೇಶ ವಿನಿಮಯವಾಗಿಲ್ಲ
    • ಸಾಕ್ಷಿಗಳ ಹೇಳಿಕೆಗಳಲ್ಲೇ ಅನುಮಾನವಿದೆ

    ಪವಿತ್ರಾಗೌಡ ಹೇಳಿದ್ದೇನು?

    •  ನಾನು ಒಬ್ಬಂಟಿ ಪೋಷಕಳಾಗಿದ್ದೇನೆ ನನಗೆ ಒಬ್ಬಳೇ ಒಬ್ಬಳು ಮಗಳಿದ್ದಾಳೆ
    •  ವಯಸ್ಸಾದ ಪೋಷಕರನ್ನೂ ನೋಡಿಕೊಳ್ಳಬೇಕಿದೆ
    • ನನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ
    • ಮಹಿಳೆ ಆಗಿರೋದ್ರಿಂದ ಜಾಮೀನು ರದ್ದು ಕಠಿಣ ಕ್ರಮವಾಗಲಿದೆ

    ಇದೆಲ್ಲದರ ಮಧ್ಯೆ ಸರ್ಕಾರಿ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಕೆಲವು ಮಾಹಿತಿಗಳನ್ನು ನೀಡಿದ್ದರು.

    •  ಮೃತ ರೇಣುಕಾಸ್ವಾಮಿ ದರ್ಶನ್ ಅಭಿಮಾನಿಯಾಗಿದ್ದ.
    •  ದರ್ಶನ್-ಪವಿತ್ರಗೌಡ ಲಿವ್-ಇನ್ ಸಂಬಂಧದಲ್ಲಿದ್ದರು.
    •  ಪವಿತ್ರಾಗೌಡಗೆ ರೇಣುಕಾಸ್ವಾಮಿ ಅವಹೇಳನಕಾರಿ ಸಂದೇಶ ಕಳುಹಿಸಿದ್ದ
    • ಇದರಿಂದಾಗಿ ಪಟ್ಟಣಗೆರೆ ಶೆಡ್‌ನಲ್ಲಿ ಕೊಲೆ ಮಾಡಲಾಯ್ತು
    • ಆರೋಪಿಗಳು ಕಿಡ್ನ್ಯಾಪ್‌, ಕೊಲೆಯಾದ ಸ್ಥಳದಲ್ಲಿದ್ದರು ಅನ್ನೋದು ತನಿಖೆಯಿಂದ ಬಯಲು
    • ಪಟ್ಟಣಗೆರೆ ಶೆಡ್‌ಗೆ ಪ್ರವೇಶ ಮಾಡೋದನ್ನು ಐವರು ಸಾಕ್ಷಿಗಳು ನೋಡಿದ್ದಾರೆ
    • ಘಟನಾ ಸ್ಥಳದಿಂದ ಸಂಗ್ರಹಿಸಲಾದ ಮಣ್ಣಿನ ಮಾದರಿ ದೃಢಪಟ್ಟಿದೆ
    • ಕೊಲೆ ವೇಳೆ ಎ-1 ಪವಿತ್ರಾ, ಎ-2 ದರ್ಶನ್ ಸಕ್ರಿಯ
    • ರೇಣುಕಾಸ್ವಾಮಿ ರಕ್ತದ ಕಲೆಗಳು ಆರೋಪಿ ಬಟ್ಟೆ ಮೇಲೆ ಕಂಡುಬಂದಿದೆ
    • ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಅಂತ ಹೈಕೋರ್ಟ್ ಹೇಳಿರುವುದು
    • ತಪ್ಪು ಸಾಕ್ಷಿ ಪುನೀತ್ ಹೇಳಿಕೆ ತಡವಾಗಿ ದಾಖಲಿಸಿರೋದಕ್ಕೆ ಸೂಕ್ತ ಕಾರಣ ನೀಡಲಾಗಿದೆ
    •  ವಿಧಿವಿಜ್ಞಾನ, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳನ್ನು ಹೈಕೋರ್ಟ್ ಪರಿಗಣಿಸಿಲ್ಲ
    • ಎ-2 ದರ್ಶನ್‌ಗೆ ಅಪರಾಧದ ಹಿನ್ನೆಲೆ ಇದೆ
    • ಬೆನ್ನು ನೋವು ಅಂತ ವಿನಾಯ್ತಿ ಪಡೆದು ಮರುದಿನವೇ ಶೂಟಿಂಗ್‌ಗೆ ಹೋಗಿದ್ದಾರೆ

    ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡಿರುವ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠ ಮಹತ್ವದ ತೀರ್ಪನ್ನು ನೀಡುವ ಸಾಧ್ಯತೆ ಇದೆ. ಇದರ ಜೊತೆಗೆ ವಿಶೇಷ ಅಂದ್ರೆ `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಅನ್ನೋ ಸಾಲುಗಳಲ್ಲಿ ಡೆವಿಲ್ ಸಿನಿಮಾ ಹಾಡು ಶುಕ್ರವಾರ (ಆ.15) ರಿಲೀಸ್ ಆಗಲಿದೆ.

  • ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್

    ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣ ಸಂಬಂಧ ಇಂದು (ಆ.12) ನಟ ದರ್ಶನ್ (Actor Darshan) ಹಾಗೂ ಇತರ ಆರೋಪಿಗಳು ಕೋರ್ಟ್‌ಗೆ ಹಾಜರಾಗಲಿದ್ದಾರೆ.

    ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್‌ಗೆ (CCH Court) ಆರೋಪಿಗಳು ವಿಚಾರಣೆಗಾಗಿ ಹಾಜರಾಗಲಿದ್ದು, ಬಳಿಕ ಟ್ರಯಲ್ ನಡೆಸಲು ಡೇಟ್ ಫಿಕ್ಸ್ ಮಾಡುವ ಸಾಧ್ಯತೆ ಇದೆ. ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಸರ್ಕಾರಿ ಪರ ವಕೀಲರು ಆರು ತಿಂಗಳ ಒಳಗೆ ಟ್ರಯಲ್ ಮುಗಿಸೋದಾಗಿ ತಿಳಿಸಿದ್ದಾರೆ. ಹಾಗಾಗಿ, ಇಂದು ದರ್ಶನ್ ಸೇರಿದಂತೆ ಎಲ್ಲಾ ಹದಿನೇಳು ಆರೋಪಿಗಳು ಕೋರ್ಟ್ ಮುಂದೆ ವಿಚಾರಣೆಗೆ ಹಾಜರಾದ ನಂತರ ಟ್ರಯಲ್ ಡೇಟ್ ಫಿಕ್ಸ್ ಆಗಲಿದೆ ಎನ್ನಲಾಗಿದೆ. ಇದನ್ನೂ ಓದಿ: Explainer: ಕರ್ನಾಟಕದಲ್ಲಿ ಹೇಗಿದೆ ಅಂಗಾಂಗ ದಾನ ಜಾಗೃತಿ?- ಕಿಡ್ನಿ, ಹೃದಯ ಕಸಿ ಅಪರೇಷನ್‌ಗೆ BPL ಕಾರ್ಡುದಾರರು ಎಷ್ಟು ಕಟ್ಟಬೇಕು?

    ಇಂದು ಕೋರ್ಟ್‌ನಲ್ಲಿ ವಿಚಾರಣೆ ನಂತರ ಟ್ರಯಲ್ ಡೇಟ್ ಫಿಕ್ಸ್ ಆಗೋದು ಒಂದು ಕಡೆಯಾದ್ರೆ, ರಾಜ್ಯ ಸರ್ಕಾರ ಜಾಮೀನು ರದ್ದು ಮಾಡುವಂತೆ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಮುಕ್ತಾಯವಾಗಿದ್ದು, ಇದೇ ವಾರದಲ್ಲಿ ತೀರ್ಪು ಬಹುತೇಕ ಖಚಿತ ಎನ್ನಲಾಗಿದೆ.

    ನಟ ದರ್ಶನ್, ಪವಿತ್ರ ಗೌಡ, ರಾಘವೇಂದ್ರ, ಪವನ್, ಜಗದೀಶ್, ಅನುಕುಮಾರ್, ರವಿಶಂಕರ್ ಜಾಮೀನು ರದ್ದು ಮಾಡುವಂತೆ ಸರ್ಕಾರ ಈಗಾಗಲೇ ಅರ್ಜಿ ಸಲ್ಲಿಸಿತ್ತು. ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ (Supreme Court) ಆರೋಪಿಗಳ ಪರ ವಕೀಲರಿಗೆ ಲಿಖಿತ ವಾದ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಕಳೆದ ವಾರ ಆರೋಪಿಗಳ ಪರ ವಕೀಲರು ಲಿಖಿತ ವಾದ ಸಲ್ಲಿಸಿದ್ದಾರೆ. ಹಾಗಾಗಿ ಇದೇ ವಾರದಲ್ಲಿ ಆದೇಶ ಕೂಡ ಸುಪ್ರೀಂ ಕೋರ್ಟ್ ಪ್ರಕಟ ಮಾಡುವ ಸಾಧ್ಯತೆಯಿದೆ. ಒಂದು ವೇಳೆ ಜಾಮೀನು ರದ್ದಾದರೆ ಮತ್ತೆ ಎಲ್ಲಾ ಆರೋಪಿಗಳು ಜೈಲು ಸೇರಬೇಕಾಗುತ್ತದೆ. ಇದನ್ನೂ ಓದಿ: ಮಂಡ್ಯ| ಶಾಲೆಯಲ್ಲಿ ಮೊಟ್ಟೆ ನೀಡಿದ್ದಕ್ಕೆ 70ಕ್ಕೂ‌ ಅಧಿಕ ಮಕ್ಕಳು ಬೇರೆ ಶಾಲೆಗೆ ಸೇರ್ಪಡೆ

  • ಡಿ-ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ದೂರಿನ ಬಳಿಕವೂ ನಿಲ್ಲದ ಕಾಮೆಂಟ್ಸ್

    ಡಿ-ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ದೂರಿನ ಬಳಿಕವೂ ನಿಲ್ಲದ ಕಾಮೆಂಟ್ಸ್

    ಡಿ-ಫ್ಯಾನ್ಸ್‌ನಿಂದ (D-Boss) ಬರುತ್ತಿರುವ ಅಶ್ಲೀಲ ಮೆಸೇಜ್ ವಿಚಾರವಾಗಿ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ (Actress Ramya) ಈಗಾಗಲೇ ಕಾನೂನು ಸಮರಕ್ಕಿಳಿದಿದ್ದಾರೆ. ಆದರೂ ಕೂಡ ಅಶ್ಲೀಲ ಮೆಸೇಜ್‌ಗಳು ನಿಲ್ಲುತ್ತಿಲ್ಲ.

    ಇನ್‌ಸ್ಟಾಗ್ರಾಂ ಮೂಲಕ ಅಶ್ಲೀಲ ಮೆಸೇಜ್ ಬಂದ ಹಿನ್ನೆಲೆ ನಟಿ ರಮ್ಯಾಗೆ ಈಗಾಗಲೇ 43 ಅಕೌಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ. ಇಷ್ಟೆಲ್ಲಾ ಆದರೂ ಡಿ-ಬಾಸ್ ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್‌ಗಳು ಮುಂದುವರಿದಿವೆ.ಇದನ್ನೂ ಓದಿ: ಡಿ-ಬಾಸ್ ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ಬೆಂಬಲಕ್ಕೆ ನಿಂತ ದೊಡ್ಮನೆ ಕುಟುಂಬ

    ದೂರು ದಾಖಲಾದ 43 ಅಕೌಂಟ್‌ಗಳ ಪೈಕಿ ಒಂದು ಅಕೌಂಟ್ `ದಿ-ಡೆವಿಲ್-ಲವ್-181′ ನಿಂದ ಪದೇ ಪದೇ ಅಶ್ಲೀಲ ಸ್ಟೇಟಸ್ ಹಾಗೂ ಮೆಸೇಜ್‌ಗಳು ಬರುತ್ತಲೇ ಇವೆ. ಇನ್ನೊಂದು ಕಡೆ ಡಿ-ಬಾಸ್ ಅಭಿಮಾನಿಗಳು ಸ್ವಲ್ಪ ದಿನ ಸುಮ್ನಿರೋಣ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ. ಇನ್ನೂ ಎಫ್‌ಐಆರ್ ದಾಖಲಾಗಿ ಎರಡು ದಿನ ಕಳೆದರೂ ಪೊಲೀಸರು ಯಾವುದೇ ಕ್ರಮ ಜರುಗಿಸಿಲ್ಲ.

    ರೇಣುಕಾಸ್ವಾಮಿ ಕೊಲೆ (Renukaswamy Case) ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾ ಪದೇ ಪದೇ ದರ್ಶನ್ ಫ್ಯಾನ್ಸ್ ಆಕ್ರೋಶಕ್ಕೆ ಕಾರಣರಾಗುತ್ತಿದ್ದಾರೆ. ಜೊತೆಗೆ ಡಿ-ಬಾಸ್ ಅಭಿಮಾನಿಗಳು ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಟಿ ಕೂಡ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆಗಿದ್ದಾರೆ. ಜೊತೆಗೆ ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದವರ ಅಕೌಂಟ್‌ಗಳನ್ನು ಬಹಿರಂಗಗೊಳಿಸಿ, ದೂರು ದಾಖಲಿಸಿದ್ದರು.ಇದನ್ನೂ ಓದಿ: ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ರಮ್ಯಾ – ದರ್ಶನ್ ಅಭಿಮಾನಿಗಳ ವಿರುದ್ಧ FIR

  • ಇತ್ತ `ಡಿ’ ಫ್ಯಾನ್ಸ್ ಜಟಾಪಟಿ – ಅತ್ತ ಕಾಮಾಕ್ಯದಲ್ಲಿ ದರ್ಶನ್

    ಇತ್ತ `ಡಿ’ ಫ್ಯಾನ್ಸ್ ಜಟಾಪಟಿ – ಅತ್ತ ಕಾಮಾಕ್ಯದಲ್ಲಿ ದರ್ಶನ್

    ಟ ದರ್ಶನ್ (Darshan) ಪ್ರಸಿದ್ಧ ಕಾಮಾಕ್ಯ ದೇವಿಯ ಶಕ್ತಿಪೀಠಕ್ಕೆ ತೆರಳಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿರುವ ಸುಪ್ರಸಿದ್ಧ ಕಾಮಾಕ್ಯ ದೇವಿ ದೇವಸ್ಥಾನಕ್ಕೆ (Kamakhya Devi temple) ದರ್ಶನ್, ಪತ್ನಿ ವಿಜಯಲಕ್ಷ್ಮಿ ಜೊತೆ ತೆರಳಿದ್ದಾರೆ. ದೇವಿಗೆ ಹರಕೆ ತೀರಿಸಿದ್ದಾರೆ.

    ಸಂಕಷ್ಟದಲ್ಲಿರುವ ದರ್ಶನ್ ದೇವಿಯ ಮೊರೆ ಹೋಗಿದ್ದಾರೆ. ಶೀಘ್ರದಲ್ಲೇ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಕುರಿತು ಆದೇಶ ಪ್ರಕಟವಾಗಲಿದ್ದು ದರ್ಶನ್‌ಗೆ ಇದು ಸಂದಿಗ್ಧ ಸ್ಥಿತಿ. ದರ್ಶನ್ ಜೈಲಲ್ಲಿದ್ದಾಗ ವಿಜಯಲಕ್ಷ್ಮಿ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡಿಸಿಕೊಂಡು ಬಂದಿದ್ದರು. ಇದೀಗ ಪತಿಯೊಂದಿಗೆ ತೆರಳಿ ಶಕ್ತಿದೇವಿಗೆ ಮತ್ತೆ ಮೊರೆಹೋಗಿದ್ದಾರೆ. ಅಭಿಮಾನಿಗಳ ಜೊತೆ ಫೋಟೋ ತೆಗೆಸಿಕೊಳ್ಳುವ ವೀಡಿಯೋ ರಿವೀಲ್ ಆಗಿದೆ. ಇದನ್ನೂ ಓದಿ: ಶಿರೂರು ಭೂಕುಸಿತ ದುರಂತ; ಮಲೆಯಾಳಂನಲ್ಲಿ ಸಿನಿಮಾ ಸಟ್ಟೇರಲು ಸಿದ್ಧತೆ

    ಇತ್ತ ದರ್ಶನ್ ಫ್ಯಾನ್ಸ್ ವಿರುದ್ಧ ನಟಿ ರಮ್ಯಾ ನಟ ಪ್ರಥಮ್ ಸೇರಿ ಹಲವರು ಪೊಲೀಸರಿಗೆ ದೂರು ನೀಡಿದ್ದಾರೆ. ದರ್ಶನ್ ಅವರಿಗೆ ಬುದ್ಧಿ ಹೇಳಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದರೆ ದರ್ಶನ್ ಇದೀಗ ಕಾಮಾಕ್ಯ ದೇವಿ ದೇವಸ್ಥಾನದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇದನ್ನೂ ಓದಿ: 11 ದಿನದಲ್ಲಿ 250 ಕೋಟಿ ರೂ. ದಾಟಿದ `ಸೈಯಾರಾ’ ಕಲೆಕ್ಷನ್

    ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ನಿಂದ ಆದೇಶ ಹೊರಬೀಳಲಿದ್ದು ದರ್ಶನ್‌ಗೆ ಭಾರಿ ಆತಂಕ ಇರುವಂತೆ ಕಾಣುತ್ತಿದೆ. ಈ ಹೊತ್ತಲ್ಲಿ ಕಾಮಾಕ್ಯದೇವಿಯ ದರ್ಶನ ಪಡೆದಿದ್ದಾರೆ ನಟ ದರ್ಶನ್. ಮರಳಿ ಬಂದ ಬಳಿಕ ಅಭಿಮಾನಿಗಳಿಗೆ ಬುದ್ಧಿ ಹೇಳ್ತಾರಾ? ಅಥವಾ ಸುಮ್ಮನಾಗ್ತಾರಾ ಅನ್ನೋ ಪ್ರಶ್ನೆ ಎದುರಾಗಿದೆ.

  • ಕುಟುಂಬ ಸಮೇತ ಅಸ್ಸಾಂನ ಕಾಮಾಕ್ಯ ದೇವಿಯ ಹರಕೆ ತೀರಿಸಿದ ದರ್ಶನ್

    ಕುಟುಂಬ ಸಮೇತ ಅಸ್ಸಾಂನ ಕಾಮಾಕ್ಯ ದೇವಿಯ ಹರಕೆ ತೀರಿಸಿದ ದರ್ಶನ್

    ಸ್ಸಾಂನ ಗುವಾಹಟಿಯಲ್ಲಿರುವ ಪ್ರಸಿದ್ಧ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.

    ರಾಜ್ಯದಲ್ಲಿ ಡಿ-ಫ್ಯಾನ್ಸ್, ರಮ್ಯಾ ಮತ್ತು ಒಳ್ಳೆ ಹುಡ್ಗ ಪ್ರಥಮ್ ವಿಷಯಗಳ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ನಟ ದರ್ಶನ್ ಕಾಮಾಕ್ಯ ದೇವಿ ಮೊರೆ ಹೋಗಿದ್ದಾರೆ.ಇದನ್ನೂ ಓದಿ: ಡಿ-ಬಾಸ್ ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ಬೆಂಬಲಕ್ಕೆ ನಿಂತ ದೊಡ್ಮನೆ ಕುಟುಂಬ

    ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷಿö್ಮ ಇದೇ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ತೆರಳಿ ಹರಕೆ ಹೊತ್ತಿದ್ದರು. ಜೊತೆಗೆ ಕೆಲವೇ ದಿನಗಳಲ್ಲಿ ಸುಪ್ರೀಂ ತೀರ್ಪು ಬರುವ ಸಾಧ್ಯತೆಯಿದ್ದು, ದರ್ಶನ್ ಆತಂಕದಲ್ಲಿದ್ದಾರೆ. ಹೀಗಾಗಿ ಹರಕೆ ತೀರಿಸಲು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ.

    ಕಳೆದ ವಾರ ಸುಪ್ರೀಂ ಕೋರ್ಟ್ನಲ್ಲಿ, ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ವಾದ-ಪ್ರತಿವಾದಗಳು ನಡೆದಿದ್ದು, ಒಂದು ವಾರದಲ್ಲಿ ತೀರ್ಪು ನೀಡುವುದಾಗಿ ಕೋರ್ಟ್ ತಿಳಿಸಿತ್ತು. ಇನ್ನೂ ನಟಿ ರಮ್ಯಾ ದರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರಕ್ಕಿಳಿದಿದ್ದು, ಒಳ್ಳೆ ಹುಡ್ಗ ಪ್ರಥಮ್ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್: ಹನುಮಾನ್ ಹುಡುಗನ ಚಿತ್ರ

  • ಡಿ-ಕಂಪನಿಗೆ ಡುಬಾಕ್ ಅಂತ ಕ್ಲಾಸ್ – ದರ್ಶನ್ ಫ್ಯಾನ್ಸ್‌ಗೆ ಬೆಂಡೆತ್ತಿದ ಒಳ್ಳೆ ಹುಡ್ಗ ಪ್ರಥಮ್

    ಡಿ-ಕಂಪನಿಗೆ ಡುಬಾಕ್ ಅಂತ ಕ್ಲಾಸ್ – ದರ್ಶನ್ ಫ್ಯಾನ್ಸ್‌ಗೆ ಬೆಂಡೆತ್ತಿದ ಒಳ್ಳೆ ಹುಡ್ಗ ಪ್ರಥಮ್

    ಬೆಂಗಳೂರು: ಡಿ ಕಂಪನಿ ಅದೊಂದು ಡುಬಾಕ್ ಕಂಪನಿ, ದರ್ಬೇಸಿಗಳ ಕಂಪನಿ ಅಂತಾ ಹೆಸರಿಟ್ಕೊಳ್ಳಿ ಎಂದು ದರ್ಶನ್ ಫ್ಯಾನ್ಸ್‌ಗೆ (Darshan Fans) ಒಳ್ಳೆ ಹುಡ್ಗ ಪ್ರಥಮ್ (Olle Hudga Pratham) ತರಾಟೆಗೆ ತೆಗೆದುಕೊಂಡಿದ್ದಾರೆ.

    ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿರುವ ಅವರು, ರಾಷ್ಟ್ರೀಯ ತನಿಖಾ ಸಂಸ್ಥೆ, ಇಂಟರ್‌ಪೋಲ್, ಸೈಬರ್ ಕ್ರೈಮ್, ಇಂಟಲಿಜೆನ್ಸ್ ಇವೆಲ್ಲಾ ದೇಶದ ಬಹಳ ದೊಡ್ಡ ಬೇಹುಗಾರಿಗೆ ಕಂಪನಿಗಳು. ಇವನ್ನೆಲ್ಲಾ ಮುಚ್ಚಿ ಎಲ್ಲಾ ಕೇಸ್‌ಗಳನ್ನು ಆ ಡಿ-ಕಂಪನಿ, ಡುಬಾಕ್ ಕಂಪನಿಗೆ ಕೊಡಿ. ಪರಿಹರಿಸ್ತಾರೆ. ಅವತ್ತು ದೊಡ್ಡಬಳ್ಳಾಪುರದಲ್ಲಿ ನಾನು ರೌಡಿಗಳ ಬಳಿ ಚಿಪ್ಸು-ಪಪ್ಸ್ ತಿನ್ನೋಕೆ ಹೋಗಿದ್ನಂತೆ. ಸುಮ್ನೆ ತಪ್ಪು ಮಾಹಿತಿ ಹಬ್ಬಿಸಬೇಡಿ. ಮೊದಲು ಶಿಕ್ಷಣ ಮುಖ್ಯ. ಸುಮ್ನಿದ್ದು ನಿಮ್ಮ ಅಮ್ಮ-ಅಪ್ಪನಿಗೆ ದುಡಿದು ತಂದು ಸಾಕಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.ಇದನ್ನೂ ಓದಿ: ಸಂಸತ್‌ನಲ್ಲಿ ʻಸಿಂಧೂರʼ ಸಮರ – ವಿಪಕ್ಷಗಳಿಗೆ ಇಂದು ಮೋದಿ ಉತ್ತರ

    ಈ ಡುಬಾಕ್ ಕಂಪನಿಯ ಇಂಟಲಿಜೆನ್ಸ್ ಪ್ರಕಾರ ಇನ್ವೇಸ್ಟಿಕೇಷನ್ ಮಾಡಿ ಹೇಳಿದ್ರಂತೆ ಅವತ್ತು ಹಲ್ಲೆ ಮಾಡೋಕೆ ಚಿಪ್ಸು-ಪಪ್ಸು ಮ್ಯಾಟರಂತೆ. ಜೊತೆಗೆ ಅಲ್ಲಿರುವವರು ದರ್ಶನ್ ಫ್ಯಾನ್ಸ್ ಅಲ್ವಂತೆ ಅಂತ ಹೇಳ್ತಿದ್ದಾರೆ. ಸುಮ್ಮನೇ ಡಿ-ಕಂಪನಿ ಅಂತ ಹೆಸರಿಟ್ಕೊಂಡು ಪುಂಡಾಟ ಮಾಡ್ತಾರೆ. ಅಲ್ಲಿ ಏನಾಯ್ತು ಅಂತ ಎಸ್‌ಪಿಯವರು ಹೇಳ್ತಾರೆ. ನಿಮಗೆ ಒಂದು ಚೂರಾದರೂ ಬುದ್ಧಿ ಇದ್ರೆ, ತಪ್ಪು ಮ್ಯಾಟರ್ ಹಬ್ಬಿಸೋದು ಬಿಡಿ. ನಾನು ಅಲ್ಲೇನೂ ಚಿಪ್ಸು ತಿನ್ನಕ್ಕೆ ಹೋಗಿರಲಿಲ್ಲ ಎಂದು ಸೆಲ್ಫಿ ವಿಡಿಯೋ ಮಾಡಿ ಟಾಂಗ್ ಕೊಟ್ಟಿದ್ದಾರೆ.

    ಏನಿದು ಪ್ರಕರಣ? ದೊಡ್ಡಬಳ್ಳಾಪುರ ದೇವಸ್ಥಾನದ ಬಳಿ ಆಗಿದ್ದೇನು?
    ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ ಅನ್ನೋ ಆಡಿಯೋವೊಂದು ಸ್ಫೋಟಗೊಂಡಿತ್ತು. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿತ್ತು. ಈ ಕುರಿತು ವ್ಯಕ್ತಿಯೊಬ್ಬರೊಂದಿಗೆ ಪ್ರಥಮ್ ಮಾತನಾಡಿರುವ ಆಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್ ತೋರಿಸಿ ನಟನಿಗೆ ಜೀವಬೆದರಿಕೆ ಹಾಕಿದ್ದರು. ಪೂಜೆ ಮುಗಿಸಿ ಹೊರಟ ವೇಳೆ ಕಾರಿಗೆ ಅಡ್ಡಬಂದ ಕೆಲವರು ಪ್ರಥಮ್‌ನನ್ನ ಬಲವಂತವಾಗಿ ಕರೆದೊಯ್ದು, ನಮ್ ಬಾಸ್ ಬಗ್ಗೆ ಮಾತಾಡ್ತಿಯ ಅಂತ ಹಲ್ಲೆಗೆ ಯತ್ನಿಸಿ ಅವಾಚ್ಯವಾಗಿ ನಿಂದಿಸಿ ಬೆದರಿಸಿದ್ದರು. ಆ ಸ್ಥಳದಲ್ಲಿ ಬುಲೆಟ್ ರಕ್ಷಕ್ ಕೂಡ ಇರುವುದಾಗಿ ಹೇಳಿದ್ದರು. ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡು ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಅವರನ್ನ ಭೇಟಿಯಾಗಿ ಘಟನೆ ವಿವರಿಸಿದ್ದರು. ಬಳಿಕ ಎಸ್ಪಿ ಸಂಬಂಧಪಟ್ಟ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಎಸ್ಪಿ ಸಿಕೆ ಬಾಬಾ, ನಟ ಪ್ರಥಮ್ ಮೇಲೆ ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ದೇವಸ್ಥಾನಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಅವರನ್ನ ಈಗಾಗಲೇ ಕರೆದು ಮಾತನಾಡಿದ್ದೀನಿ. ಅವರಿಗೆ ದೂರು ಕೊಡೋಕೆ ಹೇಳಿದ್ದೀನಿ. ಇಲ್ಲಿವರೆಗೂ ಯಾವುದೇ ದೂರು ನೀಡಿಲ್ಲ. ದೂರು ಕೊಟ್ಟ ನಂತರ ತನಿಖೆ ಮಾಡಿ ಕ್ರಮ ಕೈಗೊಳ್ತಿವಿ ಎಂದು ಹೇಳಿದ್ದರು.ಇದನ್ನೂ ಓದಿ: ನಾಗಮಂಡಲ ಎಂದರೇನು? ಇದರ ಆಚರಣೆ, ಮಹತ್ವವೇನು?

  • `I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್

    `I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್

    – ಕನ್ನಡ ಚಿತ್ರರಂಗವನ್ನ ಭಯದಿಂದ ಮುಕ್ತಗೊಳಿಸೋಣ ಅಂತ ಕರೆ

    ಟ ದರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರಕ್ಕಿಳಿಯಲು ಮುಂದಾಗಿರುವ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ (Actress Ramya) ಒಳ್ಳೆ ಹುಡ್ಗ ಪ್ರಥಮ್ (Olle Hudga Pratham) ಸಾಥ್ ನೀಡಲು ಮುಂದಾಗಿದ್ದಾರೆ.

    ಎಕ್ಸ್ ಖಾತೆಯಲ್ಲಿ ಟ್ವೀಟ್ ಹಂಚಿಕೊಂಡಿರುವ ಅವರು, ನಾನು ರಮ್ಯಾ ಮೇಡಂ ಘನತೆಗೆ ಬೆಂಬಲ ನೀಡುತ್ತೇನೆ. ಎಲ್ಲರೂ ನಟಿ ರಮ್ಯಾ ಪರ ನಿಲ್ಲೋಣ. ಈಗಲೂ ನಾವು ರಮ್ಯಾ ಅವರ ಆತ್ಮಗೌರವದ ಪರ ನಿಲ್ಲದೇ ಹೋದರೆ ನಾವು ಕಲಾವಿದರಾಗೋಕೆ ನಾಚಿಕೆಯಾಗಬೇಕು. ಕನ್ನಡ ಚಿತ್ರರಂಗವನ್ನ ಭಯದಿಂದ ಮುಕ್ತಗೊಳಿಸೋಣ. ಇಷ್ಟೆಲ್ಲಾ ಆದರೂ ಜಾಣಕಿವುಡರಾಗಿರುವ ಪುಣ್ಯಾತ್ಮ ಕಲಾವಿದರಿಗೆ ದೇವರು ನೂರು ಕಾಲ ಬಾಳುವ ಆಯಸ್ಸು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.ಇದನ್ನೂ ಓದಿ: `ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾ ಪದೇ ಪದೇ ದರ್ಶನ್ ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗುತ್ತಿದ್ದಾರೆ. ಜೊತೆಗೆ ಡಿ-ಬಾಸ್ ಅಭಿಮಾನಿಗಳು ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಟಿ ಕೂಡ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆಗಿದ್ದಾರೆ.

    ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದವರ ಅಕೌಂಟ್‌ಗಳನ್ನು ಬಹಿರಂಗೊಳಿಸಿದ್ದಾರೆ. ರೇಣುಕಾಸ್ವಾಮಿ ಕಳುಹಿಸಿದ ಸಂದೇಶಕ್ಕೂ, ಡಿಬಾಸ್ ಫ್ಯಾನ್ಸ್ ಕಳುಹಿಸುತ್ತಿರುವ ಸಂದೇಶಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಇವರೆಲ್ಲಾ ಸ್ತ್ರೀ-ದ್ವೇಷಿ ಮನೋಭಾವದವರು. ಇಂತವರಿಂದಲೇ ಹೆಣ್ಮಕ್ಕಳು ದೌರ್ಜನ್ಯ, ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ ಅಂತ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ರಮ್ಯಾ ಆಕ್ರೋಶ ಹೊರಹಾಕಿದ್ದಾರೆ.

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಹೆಸರು ಕೇಳಿ ಬಂದಾಗ, ಅವತ್ತು ಕೂಡ ರಮ್ಯಾ ಮಾತಾಡಿದ್ದರು. ದರ್ಶನ್‌ರಿಂದ ತಪ್ಪಾಗಿದ್ದರೆ ಕಠಿಣ ಶಿಕ್ಷೆಯೇ ಆಗಬೇಕು ಅಂತ ಪ್ರತಿಕ್ರಿಯೆ ನೀಡಿದ್ದರು. ಜಾಮೀನು ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದಾಗಲೂ ದರ್ಶನ್ ವಿರುದ್ಧವೇ ಪೋಸ್ಟ್ ಮಾಡಿದ್ದರು. ಹಾಗಾಗಿ ದರ್ಶನ್ ಫ್ಯಾನ್ಸ್ ರಮ್ಯಾ ವಿರುದ್ಧ ತಿರುಗಿಬಿದ್ದಿದ್ದರು. ಈಗೀಗ ತೀರಾ ವೈಯಕ್ತಿಕವಾಗಿ ರಮ್ಯಾಗೆ ಟೀಕೆ ಮಾಡುತ್ತಿದ್ದಾರೆ.

    ಈ ಕುರಿತು `ಪಬ್ಲಿಕ್ ಟಿವಿ’ ಜೊತೆ ಮಾತನಾಡಿರೋ ಮೋಹಕತಾರೆ, ಕಾನೂನು ಹೋರಾಟ ಮಾಡೋದಾಗಿ ತಿಳಿಸಿದ್ದಾರೆ. ಎಲ್ಲಾ ಮೆಸೇಜ್‌ಗಳೊಂದಿಗೆ ದೂರು ಕೊಡೋದಾಗಿ ತಿಳಿಸಿದ್ದಾರೆ. ಸುದೀಪ್, ಯಶ್ ಅಲ್ಲ, ಅವರ ಹೆಂಡತಿ ಮಕ್ಕಳನ್ನೂ ಬಿಟ್ಟಿಲ್ಲ. ಚಿಕ್ಕಚಿಕ್ಕ ಮಕ್ಕಳ ಬಗ್ಗೆ ಕೆಟ್ಟಕೆಟ್ಟ ಪದ ಬಳಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: `ಡಿ’ ಫ್ಯಾನ್ಸ್ ವಿರುದ್ಧ ದೂರು ಕೊಡಲು ಮುಂದಾದ ರಮ್ಯಾ; ಪತಿ ಪರ ಕಾನೂನು ಸಮರಕ್ಕಿಳಿದ ವಿಜಯಲಕ್ಷ್ಮಿ