– ಬಂಧನ ಭೀತಿಯಲ್ಲಿ ನಿರೀಕ್ಷಣಾ ಜಾಮೀನಿಗೆ ನಟ ಅರ್ಜಿ ಸಲ್ಲಿಕೆ
ಬೆಂಗಳೂರು: ವರಾಹಿ ಜ್ಯುವೆಲ್ಲರ್ಸ್ ಮಾಲೀಕರಿಗೆ ವಂಚನೆ ಪ್ರಕರಣದಲ್ಲಿ ನಟ ಧರ್ಮೇಂದ್ರನನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಬಂಧನ ಭೀತಿಯಿಂದಾಗಿ ನಟ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಐಶ್ವರ್ಯ ಗೌಡ ಹಾಗೂ ಹರೀಶ್ ಬಂಧನ ಆಗುತ್ತಿದ್ದಂತೆ ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದಾರೆ. ನಟ ಧರ್ಮೇಂದ್ರ ಬಂಧನಕ್ಕೆ ಪ್ರತ್ಯೇಕ ತಂಡ ರಚಿಸಿ ಚಂದ್ರಲೇಔಟ್ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ (DK Suresh) ಸಹೋದರಿ ಅಂತ ಹೇಳಿಕೊಂಡು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 9ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.
ಇಂದು (ಡಿ.28) ಚಂದ್ರಲೇಔಟ್ ಪೊಲೀಸರು ಆರೋಪಿ ಐಶ್ವರ್ಯ ಗೌಡ, ಪತಿ ಹರೀಶ್ ಇಬ್ಬರನ್ನೂ ಬಂಧಿಸಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಆರೋಪಿಗಳನ್ನು ಕೋರಮಂಗಲದ ಜಡ್ಜ್ ಮನೆಯಲ್ಲಿ ಹಾಜರುಪಡಿಸಿದ್ದರು.ಇದನ್ನೂ ಓದಿ: ಕುರಿಗಳ ಜೀವ ಉಳಿಸಲು ಕಂದಕಕ್ಕೆ ಬಸ್ ಇಳಿಸಿದ ಚಾಲಕ
ಪ್ರಕರಣದ ಐಓ ಎಸಿಪಿ ಭರತ್ ರೆಡ್ಡಿ ಒಂದು ವಾರ ಕಸ್ಟಡಿಗೆ ಪಡೆಯಲು ಸೋಮವಾರ ಬಾಡಿ ವಾರೆಂಟ್ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇತ್ತ ಆರೋಪಿ ಐಶ್ವರ್ಯ ಗೌಡ ಪರ ವಕೀಲರು ಜಾಮೀನು ಕೂಡ ಅರ್ಜಿ ಸಲ್ಲಿಸಿದ್ದಾರೆ.
ಆರೋಪಿಗಳು ಜನವರಿ 10ರ ವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ. ಆದೇಶದ ಹಿನ್ನೆಲೆ ಸದ್ಯ ಪರಪ್ಪನ ಅಗ್ರಹಾರ ಜೈಲಿನತ್ತ ಐಶ್ವರ್ಯ ಗೌಡನ್ನು ಕರೆದೊಯ್ಯುತ್ತಿದ್ದಾರೆ.
ಏನಿದು ಪ್ರಕರಣ?
ಐಶ್ವರ್ಯ ಗೌಡ ಕಳೆದ ಜನವರಿಯಿಂದ ಇಲ್ಲಿಯವರೆಗೂ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿದ್ದಳು. ಹಣ ಕೊಡದೇ ಇದ್ದಾಗ, ಡಿಕೆ ಸುರೇಶ್ ಕಡೆಯಿಂದ ಮಾಲೀಕರಿಗೆ ಕರೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದರು. ಈ ವೇಳೆ ಸಿನಿಮಾ ನಟ ಧರ್ಮೇಂದ್ರ ಎಂಬುವವರಿಂದ ಐಶ್ವರ್ಯಗೌಡ ಕರೆ ಮಾಡಿಸಿ, ಬೆದರಿಕೆ ಹಾಕಿದ್ದಾರೆ ಅನ್ನೋ ಆರೋಪವೂ ಕೇಳಿಬಂದಿದೆ.
ಧಮೇಂದ್ರ ಡಿ.ಕೆ ಸುರೇಶ್ ವಾಯ್ಸ್‌ನಲ್ಲಿ ಕರೆ ಮಾಡಿದ್ದ ಧರ್ಮೇಂದ್ರ ಮಾಲೀಕರಾದ ವನಿತಾ ಐತಾಳ್‌ಗೆ ಕರೆ ಮಾಡಿ ಸಮಯ ಕೇಳಿದ್ದರು. ಕೊನೆಗೆ ತಾನೇ ಧರ್ಮೇಂದ್ರನನ್ನ ಕಳುಹಿಸಿ ಕೊಲೆ ಮಾಡಿಸುವುದಾಗಿಯೂ ಬೆದರಿಕೆ ಹಾಕಿದ್ದರು. ಅವಾಚ್ಯ ಶಬ್ಧಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಜ್ಯುವೆಲರಿ ಮಾಲೀಕಾರದ ವನಿತಾ ಆರ್.ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು, ವನಿತಾ ಐತಾಳ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಇಂದು ಆರೋಪಿಗಳಿಬ್ಬರನ್ನ ಬಂಧಿಸಿದ್ದಾರೆ. ಅಲ್ಲದೇ ನಟ ಧಮೇಂದ್ರ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಎಷ್ಟೆಷ್ಟು ಪ್ರಮಾಣದ ಚಿನ್ನಾಭರಣ ಖರೀದಿ?
* ಅಕ್ಟೋಬರ್ 12 – 2023 – 62,03,590 ರೂ.
* ಅಕ್ಟೋಬರ್ 13 – 2023 9,65,320 ರೂ.
* ಅಕ್ಟೋಬರ್ 18 – 2023 – 95,42,500 ರೂ.
* ಅಕ್ಟೋಬರ್ 27 – 2023 – 5.2.1,37,42,700 ರೂ.
* ನವೆಂಬರ್ 29 – 2023 – 5.2.87,71,630 ರೂ.
* ಡಿಸೆಂಬರ್ 1 – 2023 – 57,25,650 ರೂ.
* ಜನವರಿ 1 – 2024 – 1,45,51,070 ರೂ.
* ಅಕ್ಟೋಬರ್ 13 – 2023 – 75,10,200 ರೂ.
* ನವೆಂಬರ್ 10 – 2023 – 57,22,120 ರೂ.
* ನವೆಂಬರ್ 12 – 2023 – 57,02,050 ರೂ.
* ನವೆಂಬರ್ 12 – 2023 – 56,88,600 ರೂ.
ಒಟ್ಟು 14,659.940 ಗ್ರಾಂ – 8,41,25,430 ರೂ.ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಭಾನುವಾರ ಮೃತ ಸಚಿನ್ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ
ಬಾಲಿವುಡ್ ನಟಿ ಇಶಾ ಡಿಯೋಲ್ (Esha Deol) ಅವರು ಇತ್ತೀಚೆಗೆ ತಮ್ಮ ಡಿವೋರ್ಸ್ (Divorce) ವಿಚಾರವಾಗಿ ಭಾರೀ ಸುದ್ದಿಯಲ್ಲಿದ್ದರು. ಈ ಬೆನ್ನಲ್ಲೇ ಇದೀಗ ಹೇಮಾ ಮಾಲಿನಿ (Hema Malini) ಪುತ್ರಿ ರಾಜಕೀಯ (Politics) ಅಖಾಡಕ್ಕೆ ಇಳಿಯಲಿದ್ದಾರೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ.
ಉದ್ಯಮಿ ಭರತ್ ಜೊತೆ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಮೇಲೆ ಇಶಾ ರಾಜಕೀಯಕ್ಕೆ ಬರುವ ಬಗ್ಗೆ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಇಷ್ಟೇಲ್ಲಾ ಸುದ್ದಿಯಾಗಲು ಇದೀಗ ಹೇಮಾ ಮಾಲಿನಿ ನೀಡಿರುವ ಹೇಳಿಕೆ. ಮಗಳಿಗೆ ರಾಜಕೀಯಕ್ಕೆ ಬರಲು ಆಸಕ್ತಿಯಿದೆ ಎಂದು ಆಡಿರುವ ಮಾತು ಸದ್ದು ಮಾಡುತ್ತಿದೆ.
ಮಥುರಾದಿಂದ ಬಿಜೆಪಿಯ ಲೋಕಸಭೆ ಸದಸ್ಯೆಯಾಗಿರುವ ಹೇಮಾ ಮಾಲಿನಿ ಅವರು ಸಂದರ್ಶನವೊಂದರಲ್ಲಿ ನಾನು ರಾಜಕೀಯದಲ್ಲಿ ಬೆಳೆಯಲು ಕುಟುಂಬದ ಬೆಂಬಲವಿದೆ. ಅವರ ಸಾಥ್‌ನಿಂದಲೇ ನಾನು ಆರಾಮ ಆಗಿ ಇಲ್ಲಿ ಕೆಲಸ ಮಾಡಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಮಕ್ಕಳು ಕೂಡ ರಾಜಕೀಯಕ್ಕೆ ಬರುವ ಆಸಕ್ತಿ ತೋರಿಸಿದರೆ ಬರಲಿ ಎಂದು ನಟಿ ಮಾತನಾಡಿದ್ದಾರೆ.
ಈ ಮೂಲಕ ಇಶಾ ರಾಜಕೀಯ ಅಖಾಡಕ್ಕೆ ಇಳಿಯುವ ಬಗ್ಗೆ ನಟಿ ಹೇಮಾ ಮಾಲಿನಿ ರಿವೀಲ್ ಮಾಡಿದ್ದಾರೆ. ಮಗಳ ನಿರ್ಧಾರದ ಬಗ್ಗೆ ಬೆಂಬಲಿದೆ ಎಂಬುದನ್ನು ನಟಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಅನುಷ್ಕಾ ಶೆಟ್ಟಿ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್
2 ವಾರಗಳ ಹಿಂದೆ ವಿಚ್ಛೇದನದ ಬಗ್ಗೆ ಇಶಾ ಡಿಯೋಲ್- ಭರತ್ ತಖ್ತಾನಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದರು. ಈ ಬಗ್ಗೆ ಖಾಸಗಿ ಪತ್ರಿಕೆಯೊಂದು ವರದಿ ಮಾಡಿತ್ತು. ನಾವು ಪರಸ್ಪರ ಒಪ್ಪಿಗೆಯ ಮೇರೆಗೆ ಸೌಹಾರ್ದಯುತವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಜೀವನ ಬದಲಾಗುತ್ತಿರುವ ಈ ಸಮಯದಲ್ಲಿ ನಮ್ಮ ಇಬ್ಬರು ಮಕ್ಕಳ ಉತ್ತಮ ಹಿತಾಸಕ್ತಿ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮಹತ್ವದ್ದಾಗಿದೆ. ನಮ್ಮ ಗೌಪ್ಯತೆಯನ್ನ ಗೌರವಿಸುವುದನ್ನು ನಾವು ಪ್ರಶಂಸಿಸುತ್ತೇವೆ ಎಂದು ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಹೇಳಿಕೆ ನೀಡಿದ್ದರು.
2012ರಲ್ಲಿ ಇಶಾ ಡಿಯೋಲ್- ಭರತ್ ತಖ್ತಾನಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2017ರಲ್ಲಿ ಮಗಳು ರಾಧ್ಯಗೆ ಇಶಾ ಡಿಯೋಲ್ ಜನ್ಮ ನೀಡಿದರು. 2019ರಲ್ಲಿ ಎರಡನೇ ಮಗುವನ್ನ ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಬರಮಾಡಿಕೊಂಡಿದ್ದರು. ಇದೀಗ 12 ವರ್ಷಗಳ ದಾಂಪತ್ಯ ಜೀವನಕ್ಕೆ ಇಶಾ ಡಿಯೋಲ್- ಭರತ್ ಬ್ರೇಕ್ ಹಾಕಿದ್ದರು.
ಧೂಮ್, ಜಸ್ಟ್ ಮ್ಯಾರೀಡ್, ನೋ ಎಂಟ್ರಿ, ಡಾರ್ಲಿಂಗ್, ಶಾದಿ ನಂ.1 ಸೇರಿದಂತೆ ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ಇಶಾ ನಟಿಸಿದ್ದಾರೆ.
ಬಾಲಿವುಡ್ ಸ್ಟಾರ್ ನಟ ಧರ್ಮೇಂದ್ರ ಮತ್ತು ಹೇಮಾ ಮಾಲಿನಿ (Hema Malini) ಪುತ್ರಿ ಇಶಾ ಡಿಯೋಲ್ (Esha Deol) ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಉದ್ಯಮಿ ಭರತ್ ತಖ್ತಾನಿ (Bharat Takhtani) ಜೊತೆಗಿನ 12 ವರ್ಷಗಳ ವೈವಾಹಿಕ ಜೀವನಕ್ಕೆ ‘ಧೂಮ್’ ನಟಿ ಇಶಾ ಅಂತ್ಯ ಹಾಡಿದ್ದಾರೆ. ಇದನ್ನೂ ಓದಿ:ಸಂಭಾವನೆ ಬಗ್ಗೆ ಮಾತನಾಡಿದವರಿಗೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ
ವಿಚ್ಛೇದನದ ಬಗ್ಗೆ ಇಶಾ ಡಿಯೋಲ್- ಭರತ್ ತಖ್ತಾನಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ. ನಾವು ಪರಸ್ಪರ ಒಪ್ಪಿಗೆಯ ಮೇರೆಗೆ ಸೌಹಾರ್ದಯುತವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಜೀವನ ಬದಲಾಗುತ್ತಿರುವ ಈ ಸಮಯದಲ್ಲಿ ನಮ್ಮ ಇಬ್ಬರು ಮಕ್ಕಳ ಉತ್ತಮ ಹಿತಾಸಕ್ತಿ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮಹತ್ವದ್ದಾಗಿದೆ. ನಮ್ಮ ಗೌಪ್ಯತೆಯನ್ನ ಗೌರವಿಸುವುದನ್ನು ನಾವು ಪ್ರಶಂಸಿಸುತ್ತೇವೆ ಎಂದು ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಜಂಟಿ ಹೇಳಿಕೆ ನೀಡಿದ್ದಾರೆ. ಎಂದು ವರದಿಯಾಗಿದೆ. ಕೆಲ ದಿನಗಳಿಂದ ಇಬ್ಬರ ಡಿವೋರ್ಸ್ (Divorce) ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಈಗ ಅಧಿಕೃತ ಮಾಹಿತಿ ಹೊರಬಿದ್ದಿದೆ.
2012ರಲ್ಲಿ ಇಶಾ ಡಿಯೋಲ್- ಭರತ್ ತಖ್ತಾನಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2017ರಲ್ಲಿ ಮಗಳು ರಾಧ್ಯಗೆ ಇಶಾ ಡಿಯೋಲ್ ಜನ್ಮ ನೀಡಿದರು. 2019ರಲ್ಲಿ ಎರಡನೇ ಮಗುವನ್ನ ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಬರಮಾಡಿಕೊಂಡಿದ್ದರು. ಇದೀಗ 12 ವರ್ಷಗಳ ದಾಂಪತ್ಯ ಜೀವನಕ್ಕೆ ಇಶಾ ಡಿಯೋಲ್- ಭರತ್ ಬ್ರೇಕ್ ಹಾಕಿದ್ದಾರೆ. ಸದ್ಯ ಇಬ್ಬರೂ ಬೇರೆ ಆಗಿರುವ ವಿಚಾರ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ.
ಧೂಮ್, ಜಸ್ಟ್ ಮ್ಯಾರೀಡ್, ನೋ ಎಂಟ್ರಿ, ಡಾರ್ಲಿಂಗ್, ಶಾದಿ ನಂ.1 ಸೇರಿದಂತೆ ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ಇಶಾ ನಟಿಸಿದ್ದಾರೆ.
ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರು ಮೊದಲ ಬಾರಿಗೆ ಖರೀದಿಸಿದ ಕಾರಿನ ವೀಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕಾರಿನ ಬೆಲೆಯನ್ನು ರಿವೀಲ್ ಮಾಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಧರ್ಮೇಂದ್ರ ಅವರು ಒಂದಾನೊಂದು ಕಾಲದಲ್ಲಿ ಬಾಲಿವುಡ್‍ನ ಬಹು ಬೇಡಿಕೆಯ ನಟರಾಗಿ ಮಿಂಚಿದ್ದವರು. ತಮ್ಮ ಅಭಿನಯದ ಮೂಲಕವೇ ಅಪಾರ ಅಭಿಮಾನಿ ಬಳಗ ಹೊಂದಿದ್ದ ಧರ್ಮೇಂದ್ರ ಅವರಿಗೆ ಇಂದಿಗೂ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿಯೇ ಇದೆ. ಅದರಲ್ಲಿಯೂ ಅಮಿತಾಭ್ ಬಚ್ಚನ್ ಹಾಗೂ ಧರ್ಮೇಂದ್ರ ಅವರು ಒಟ್ಟಾಗಿ ಅಭಿನಯಿಸಿದ್ದ ಶೋಲೆ ಸಿನಿಮಾವನ್ನು ಜನ ಇಂದಿಗೂ ಮರೆತಿಲ್ಲ. ಇದನ್ನೂ ಓದಿ: ವಿಜಯ್ ದೇವರಕೊಂಡ ಫ್ಯಾಮಿಲಿ ಟ್ರಿಪ್ – ಟೆಕ್ ಆಫ್ ವೇಳೆ ವಿಜಯ್ ತಾಯಿ ಗಲಿಬಿಲಿ
ಸದ್ಯ ಧರ್ಮೇಂದ್ರ ಅವರು 1960ರಲ್ಲಿ ಮೊದಲ ಬಾರಿಗೆ ಖರೀದಿಸಿದ ಕಾರಿನ ವೀಡಿಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ಧರ್ಮೇಂದ್ರ ಅವರು ಕಾರಿನ ಪಕ್ಕದಲ್ಲಿ ನಿಂತುಕೊಂಡು, ಹಾಯ್ ಫ್ರೆಂಡ್ಸ್. ಇದು ನನ್ನ ಮೊದಲ ಕಾರು ಫಿಯೆಟ್. ನಾನು ಇದನ್ನು 18,000 ರೂಪಾಯಿಗೆ ಮಾತ್ರ ಖರೀದಿಸಿದ್ದೆ. ಆ ದಿನಗಳಲ್ಲಿ 18,000 ರೂಪಾಯಿ ಬಹಳ ದೊಡ್ಡ ಮೊತ್ತವಾಗಿತ್ತು. ನಾನು ಈ ಕಾರನ್ನು ಬಹಳ ಚೆನ್ನಾಗಿ ನೋಡಿಕೊಂಡಿದ್ದೇನೆ. ಚೆನ್ನಾಗಿ ಕಾಣಿಸುತ್ತಿದ್ಯಾ? ಎಂದು ಕೇಳುತ್ತಾ, ಇದು ನನ್ನ ಜೊತೆ ಯಾವಾಗಲೂ ಇರಬೇಕು ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸಮಂತಾ ಜೊತೆ ಸ್ಟೈಲಿಸ್ಟ್ ಪ್ರೀತಂ ಸಂಬಂಧ ವದಂತಿ
ವೀಡಿಯೋ ಜೊತೆಗೆ ಕ್ಯಾಪ್ಷನ್‍ನಲ್ಲಿ ಸ್ನೇಹಿತರೇ, ಫಿಯೆಟ್ ನನ್ನ ಮೊದಲ ಕಾರು. ಇದು ನನ್ನ ಪ್ರೀತಿಯ ಮಗುವಿದ್ದಂತೆ.. ಸಮಸ್ಯೆಗಳ ಮಧ್ಯೆ ದೇವರ ದಯೆಯಿಂದ 1960ರಲ್ಲಿ ಖರೀದಿಸಿದೆ ಎಂದು ಬರೆಯುವ ಮೂಲಕ ಹಾರ್ಟ್ ಮತ್ತು ಬೆಂಕಿ ಎಮೋಜಿಗಳನ್ನು ಹಾಕಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಧರ್ಮೇಂದ್ರ ಅವರ ಪುತ್ರ ನಟ ಬಾಬಿ ಡಿಯೋಲ್ ಕಾಮೆಂಟ್ ಸೆಕ್ಷನ್‍ನಲ್ಲಿ ಹಾರ್ಟ್ ಎಮೋಜಿಯನ್ನು ಕಳುಹಿಸಿದ್ದಾರೆ. ಪ್ರಸ್ತುತ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಚಿತ್ರದಲ್ಲಿ ಧರ್ಮೇಂದ್ರ ಅವರು ಅಭಿನಯಿಸುತ್ತಿದ್ದಾರೆ.