Tag: Actor Mammootty

  • ಐಷಾರಾಮಿ ವಾಹನ ಕಳ್ಳಸಾಗಣೆ ಕೇಸ್; ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

    ಐಷಾರಾಮಿ ವಾಹನ ಕಳ್ಳಸಾಗಣೆ ಕೇಸ್; ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

    ತಿರುವನಂತಪುರಂ: ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ (Mammootty), ದುಲ್ಕರ್ ಸಲ್ಮಾನ್ (Dulquer Salmaan), ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ.

    ಚೆನ್ನೈನಲ್ಲಿರುವ (Chennai) ಮಮ್ಮುಟ್ಟಿ ಅವರ ಚಲನಚಿತ್ರ ನಿರ್ಮಾಣ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಿಗ್‌ಬಾಸ್‌ಗೆ ಬೀಗ| 2 ಸಾವಿರ ಉದ್ಯೋಗಿಗಳಿಗೆ ಸಮಸ್ಯೆ – ಇಂದು ಮಧ್ಯಾಹ್ನ ತುರ್ತು ಅರ್ಜಿ ವಿಚಾರಣೆ

    ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ ಮತ್ತು ಕೊಯಮತ್ತೂರಿನಲ್ಲಿರುವ ತಮಿಳು, ಮಲಯಾಳಂ ನಟರು ಹಾಗೂ ವಾಹನ ಮಾಲೀಕರು ಸೇರಿ 17 ಸ್ಥಳಗಳಲ್ಲಿ ದಾಳಿ ನಡೆಸಿದೆ.

    ಫೆಮಾ, 1999ರ ಅಡಿಯಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಇಂಡೋ-ಭೂತಾನ್/ನೇಪಾಳ ಮಾರ್ಗಗಳ ಮೂಲಕ ಲ್ಯಾಂಡ್ ಕ್ರೂಸರ್, ಡಿಫೆಂಡರ್ ಮತ್ತು ಮಸೆರಾಟಿಯಂತಹ ಐಷಾರಾಮಿ ಕಾರುಗಳ ಅಕ್ರಮ ಆಮದು ಮತ್ತು ನೋಂದಣಿಯಲ್ಲಿ ತೊಡಗಿರುವ ಸಿಂಡಿಕೇಟ್ ಅನ್ನು ಬಹಿರಂಗಪಡಿಸುವ ಮಾಹಿತಿಯ ಆಧಾರದ ಮೇಲೆ ದಾಳಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ನಕಲಿ ದಾಖಲೆಗಳನ್ನು ಬಳಸಿ ಅರುಣಾಚಲ ಪ್ರದೇಶ ಮತ್ತು ಹಿಮಾಚಲ ಪ್ರದೇಶದಂತಹ ರಾಜ್ಯಗಳ ವಾಹನ ನೋಂದಣಿ ಪಡೆದುಕೊಂಡು ಅಕ್ರಮವಾಗಿ ಸಿನಿಮಾ ನಟರಿಗೆ, ಉದ್ಯಮಿಗಳಿಗೆ ಕಾರು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ.

  • ವಯನಾಡು ಭೂಕುಸಿತ ದುರಂತ: ಆರ್ಥಿಕ ನೆರವು ನೀಡಿದ ರಶ್ಮಿಕಾ, ಸೂರ್ಯ, ಮಮ್ಮುಟ್ಟಿ

    ವಯನಾಡು ಭೂಕುಸಿತ ದುರಂತ: ಆರ್ಥಿಕ ನೆರವು ನೀಡಿದ ರಶ್ಮಿಕಾ, ಸೂರ್ಯ, ಮಮ್ಮುಟ್ಟಿ

    ಕೇರಳದ ವಯನಾಡಿನಲ್ಲಿ (Wayanad Landslides) ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ಭೀಕರ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಅವರ ಸಹಾಯಕ್ಕೆ ಸಿನಿಮಾ ನಟ, ನಟಿಯರು ಮುಂದಾಗಿದ್ದಾರೆ.

    ವಯನಾಡು ಭೂಕುಸಿತ ದುರಂತದಲ್ಲಿ ಸಂಕಷ್ಟದಲ್ಲಿರುವರಿಗೆ ನೆರವಾಗಲು ಲಕ್ಷ ಲಕ್ಷ ಹಣವನ್ನು ಕೇರಳದ ಸಿಎಂ ಫಂಡ್‌ಗೆ ಸೌತ್ ನಟ, ನಟಿಯರು ದೇಣಿಗೆ ನೀಡಿದ್ದಾರೆ. ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ, ತಮಿಳು ನಟ ಸೂರ್ಯ, ಚಿಯಾನ್ ವಿಕ್ರಮ್, ಮಮ್ಮುಟ್ಟಿ, ದುಲ್ಕರ್ ಸಲ್ಮಾನ್, ಫಹಾದ್ ಫಾಸಿಲ್ ಸೇರಿದಂತೆ ಅನೇಕರು ನೆರವಿಗೆ ಬಂದಿದ್ದಾರೆ.

    ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕಾರ್ಯವೊಂದಕ್ಕಾಗಿ ಅತಿಥಿಯಾಗಿ ಕೇರಳಕ್ಕೆ ಆಗಮಿಸಿದ್ದರು. ಆಗ ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಅವರ ಪ್ರೀತಿ ನೋಡಿ ನಟಿ ಧನ್ಯವಾದ ತಿಳಿಸಿದ್ದರು. ಇದೀಗ ಕೇರಳದಲ್ಲಿ ಆಗಿರುವ ಭೂಕುಸಿತ ದುರಂತ ಕಂಡು ಅಲ್ಲಿನ ಸಿಎಂ ಫಂಡ್‌ಗೆ ನಟಿ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಟಿಯ ನಡೆಗೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.

    ತಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್ (Chiyan Vikram), ಕೇರಳದ ಸಿಎಂ ಫಂಡ್‌ಗೆ 20 ಲಕ್ಷ ರೂ. ದೇಣಿಗೆ ನೀಡುವ ಮೂಲಕ ನೆರವಾಗಿದ್ದಾರೆ. ಸೂರ್ಯ (Suriya) ಮತ್ತು ಜ್ಯೋತಿಕಾ ದಂಪತಿ, ನಟ ಕಾರ್ತಿ (Karthi) ಜಂಟಿಯಾಗಿ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

    ಸ್ಟಾರ್ ನಟ ಮಮ್ಮುಟ್ಟಿ ಮತ್ತು ಪುತ್ರ ದುಲ್ಕರ್ ಸಲ್ಮಾನ್ ಜೊತೆಯಾಗಿ 35 ಲಕ್ಷ ರೂ. ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ. ಫಹಾದ್ ಫಾಸಿಲ್, ನಜ್ರಿಯಾ ಜೋಡಿ 25 ಲಕ್ಷ ರೂ. ದೇಣಿಗೆ ನೀಡಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

  • ಮಾಲಿವುಡ್ ಸ್ಟಾರ್ ಮಮ್ಮುಟ್ಟಿ ಸಿನಿಮಾದಲ್ಲಿ ಸಮಂತಾ

    ಮಾಲಿವುಡ್ ಸ್ಟಾರ್ ಮಮ್ಮುಟ್ಟಿ ಸಿನಿಮಾದಲ್ಲಿ ಸಮಂತಾ

    ಸೌತ್ ನಟಿ ಸಮಂತಾ (Samantha) ಮಯೋಸಿಟೀಸ್ ಕಾಯಿಲೆಯಿಂದ ಬಳಲುತ್ತಿದ್ದರಿಂದ ನಟನೆಯಿಂದ ಅಂತರ ಕಾಯ್ದುಕೊಂಡಿದ್ದರು. ಇದೀಗ ಮತ್ತೆ ಹೊಸ ಸಿನಿಮಾಗಳಲ್ಲಿ ನಟಿಸಲು ರೆಡಿಯಾಗಿದ್ದಾರೆ. ಮಮ್ಮುಟ್ಟಿ (Mammootty) ಸಿನಿಮಾದಲ್ಲಿ ನಟಿಸಲು ಸ್ಯಾಮ್ ಗೋಲ್ಡನ್ ಆಫರ್ ಗಿಟ್ಟಿಸಿಕೊಂಡಿದ್ದಾರೆ.

    ಮಾಲಿವುಡ್ (Mollywood) ಸೂಪರ್ ಸ್ಟಾರ್ ಮಮ್ಮುಟ್ಟಿ ಹೊಸ ಸಿನಿಮಾಗೆ ಸಮಂತಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಅವರ ಪಾತ್ರಕ್ಕೆ ಪ್ರಾಮುಖ್ಯತೆ ಇದ್ದು, ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಜೂನ್ 15ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

    ಆ್ಯಕ್ಷನ್ ಥ್ರಿಲರ್ ಕಥೆಯನ್ನು ಹೊಂದಿರುವ ಇನ್ನೂ ಹೆಸರಿಡದ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೌತಮ್ ವಾಸುದೇವ್ ಮೆನನ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಸಿರಿ

    ಅಂದಹಾಗೆ, ಇತ್ತೀಚೆಗೆ ಮಮ್ಮುಟ್ಟಿ ಜೊತೆ ಜಾಹೀರಾತು ಚಿತ್ರೀಕರಣವೊಂದರಲ್ಲಿ ಸಮಂತಾ ನಟಿಸಿದ್ದರು. ಮುಮ್ಮುಟ್ಟಿ ಜೊತೆಗಿನ ಫೋಟೋ ಹಂಚಿಕೊಂಡು ‘ನನ್ನ ನೆಚ್ಚಿನ ವ್ಯಕ್ತಿ’ ಎಂದು ಬರೆದುಕೊಂಡಿದ್ದರು. ಈಗ ಅವರಿಗೆ ನಾಯಕಿಯಾಗಿ ನಟಿಸುತ್ತಿರೋದಕ್ಕೆ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಇಬ್ಬರ ಕಾಂಬಿನೇಷನ್‌ ಸಿನಿಮಾ ನೋಡೋಕೆ ಫ್ಯಾನ್ಸ್ ಕಾಯುತ್ತಿದ್ದಾರೆ.

  • ಮಮ್ಮುಟ್ಟಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಸಮಂತಾ

    ಮಮ್ಮುಟ್ಟಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಸಮಂತಾ

    ಸೌತ್ ಬ್ಯೂಟಿ ಸಮಂತಾ (Samantha) ಮತ್ತೆ ಸಿನಿಮಾದತ್ತ ಮುಖ ಮಾಡಿದ್ದಾರೆ. ಹೊಸ ಸಿನಿಮಾ ಕಥೆಗಳನ್ನು ಕೇಳ್ತಿದ್ದಾರೆ. ಈಗ ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಮಂತಾ ಸಂಭ್ರಮಿಸಿದ್ದಾರೆ. ಇಬ್ಬರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಚಿತ್ರೀಕರಣವೊಂದಕ್ಕಾಗಿ ನಟಿ ಸಮಂತಾ ಕೊಚ್ಚಿಗೆ ಹಾಜರಿ ಹಾಕಿದ್ದರು. ಶೂಟಿಂಗ್‌ನಲ್ಲಿ ಮಮ್ಮುಟ್ಟಿ (Mammootty) ಅವರನ್ನು ಸಮಂತಾ ಭೇಟಿಯಾಗಿದ್ದಾರೆ. ನನ್ನ ಫೇವರೇಟ್ ಎಂದು ಸ್ಟಾರ್ ಸಿಂಬಲ್ ಹಾಕಿ ಸೋಷಿಯಲ್ ಮೀಡಿಯಾದಲ್ಲಿ ಭೇಟಿಯಾಗಿದ್ದ ಸಂತಸವನ್ನು ನಟಿ ವ್ಯಕ್ತಪಡಿಸಿದ್ದಾರೆ.

    ಅದಷ್ಟೇ ಅಲ್ಲ, ‘ಪುಷ್ಪ’ (Pushpa) ವಿಲನ್ ಫಹಾದ್ ಫಾಸಿಲ್ ಕೂಡ ತನ್ನ ಫೇವರೇಟ್ ಎಂದು ಹೇಳಿದ್ದಾರೆ. ಕೊಚ್ಚಿಯಲ್ಲಿ ಫಹಾದ್ ಕಟೌಟ್ ಫೋಟೋ ಶೇರ್ ಮಾಡಿ ಮತ್ತೊಬ್ಬರು ನನ್ನ ಫೇವರೇಟ್ ಎಂದಿದ್ದಾರೆ ಸಮಂತಾ. ಇತ್ತೀಚೆಗೆ ನಟನೆಗೆ ಕಮ್‌ಬ್ಯಾಕ್ ಆಗೋದಾಗಿ ನಟಿ ತಿಳಿಸಿದ್ದರು. ಅದರಂತೆ ಮಮ್ಮುಟ್ಟಿ ಜೊತೆ ನಟಿ ಫೋಟೋ ಶೇರ್ ಮಾಡ್ತಿದ್ದಂತೆ ಯಾವ ಸಿನಿಮಾ? ಏನ್ಮಾಡ್ತಿದ್ದಾರೆ ಸಮಂತಾ ಎಂದು ಫ್ಯಾನ್ಸ್ ತಲೆಕೆಡಿಸಿಕೊಂಡಿದ್ದಾರೆ. ಇದನ್ನೂ ಓದಿ:ಕೈಗೆ ಪೆಟ್ಟು ಮಾಡಿಕೊಂಡಿದ್ದ ವಿಕ್ಕಿ ಕೌಶಲ್ ಆರೋಗ್ಯ ಹೇಗಿದೆ?

    ವಿವಾದ, ಅನಾರೋಗ್ಯ, ಯಶಸ್ಸು ಎಲ್ಲವೂ ಅನುಭವಿಸಿರುವ ಜೀವ ಸಮಂತಾ. ನಾಗಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಸಮಂತಾ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಎಲ್ಲಾ ವಿಚಾರಕ್ಕೂ ಸಮಂತಾ ಕಡೆಯೇ ಬೆಟ್ಟು ಮಾಡಿ ತೋರಿಸುತ್ತಿದ್ದರು. ಸಹವಾಸವೇ ಬೇಡ ಅಂತ ವೃತ್ತಿರಂಗದಲ್ಲಿ ಬ್ಯುಸಿಯಾದರು. ಪುಷ್ಪ ಚಿತ್ರದಲ್ಲಿ ಸೊಂಟ ಬಳುಕಿಸಿದ ಮೇಲೆ ಸಮಂತಾ ಲಕ್ ಬದಲಾಯ್ತು.

    ಆದರೆ ಯಶೋದ ಮತ್ತು ಖುಷಿ ಸಿನಿಮಾ ಆದ್ಮೇಲೆ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಂಡಿರಲಿಲ್ಲ. ಎರಡೂ ಹೀನಾಯವಾಗಿ ಸೋತ ಚಿತ್ರಗಳು. ಸೋಲಿನ ಹೊಡೆತಕ್ಕೆ ಅನಾರೋಗ್ಯದ ಆಘಾತ ಎರಡನ್ನೂ ಸಹಿಕೊಳ್ಳೋಕೆ ಸ್ಯಾಮ್‌ಗೆ 6 ತಿಂಗಳು ಹಿಡಿಯಿತು. ಇದೀಗ ಮತ್ತೆ ಕೆಲಸಕ್ಕೆ ಮರಳಿದ್ದಾರೆ.

    ಸದ್ಯ ಸಮಂತಾಗೆ ಟಾಲಿವುಡ್ ಮಾತ್ರವಲ್ಲ ಬಾಲಿವುಡ್‌ನಿಂದಲೂ ಬಂಪರ್ ಅವಕಾಶಗಳು ಅರಸಿ ಬರುತ್ತಿವೆ. ಹಾಗಾಗಿ ಸಮಂತಾ ಸಿನಿಮಾ ಮತ್ತು ಲುಕ್ ಹೇಗಿರಲಿದೆ ಎಂಬ ಚರ್ಚೆ ಕೂಡ ನಡೆದಿದೆ. ಹೊಸ ಕೆಲಸ ಅವರನ್ನು ಕೈ ಹಿಡಿಯಲಿ ಎನ್ನುತ್ತಿದ್ದಾರೆ ಸ್ಯಾಮ್ ಫ್ಯಾನ್ಸ್.

  • ಸಾಮಾನ್ಯರಂತೆ ಸುಳ್ಯದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಖ್ಯಾತ ಮಲೆಯಾಳಂ ನಟ ಮಮ್ಮುಟ್ಟಿ

    ಸಾಮಾನ್ಯರಂತೆ ಸುಳ್ಯದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಖ್ಯಾತ ಮಲೆಯಾಳಂ ನಟ ಮಮ್ಮುಟ್ಟಿ

    ಮಂಗಳೂರು: ಖ್ಯಾತ ಮಲೆಯಾಳಂ ನಟ ಮಮ್ಮುಟ್ಟಿ ಕರಾವಳಿಯ ಮಸೀದಿಯೊಂದಕ್ಕೆ ತೆರಳಿ ಶುಕ್ರವಾರ ಜುಮಾ ನಮಾಝ್ ನಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ.

    ಸಿನೆಮಾ ಶೂಟಿಂಗ್ ಒಂದರ ಚಿತ್ರೀಕರಣಕ್ಕಾಗಿ ಕಳೆದ ಒಂದು ವಾರದಿಂದ ಮಂಗಳೂರಿನ ಸುಳ್ಯದ ಕೊಯಿಲದಲ್ಲಿರುವ ಅವರು ಶುಕ್ರವಾರ ಸಾಮಾನ್ಯರಂತೆ ನಿಂತು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ನಗರದ ಕೊಯಿಲದ ಅತ್ತೂರು ಮಸೀದಿಗೆ ತೆರಳಿದ ಅವರು ತಲೆಗೆ ಟೊಪ್ಪಿ ಧರಿಸಿ, ಸಾಮಾನ್ಯರಂತೆ ನಿಂತು ಪ್ರಾರ್ಥಿಸಿದರು.

    ಶುಕ್ರವಾರ ನಮಾಝ್ ಮುಸ್ಲಿಮರಿಗೆ ಕಡ್ಡಾಯವಾಗಿದ್ದು, ಬಡವ ಶ್ರೀಮಂತ ಎನ್ನುವ ಭೇದವಿಲ್ಲದೇ ಭುಜಕ್ಕೆ ಭುಜ ತಾಗಿಸಿಕೊಂಡು ನಿಂತು ನಮಾಝ್ ಮಾಡುವ ಕ್ರಮವಿದೆ. ಅಂತಹ ಕ್ರಮವನ್ನು ಪಾಲಿಸಿದ ಮಮ್ಮುಟ್ಟಿಯವರ ಫೋಟೋ ವೊಂದು ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಚಿತ್ರದಲ್ಲಿ ನಟ ಮಮ್ಮುಟ್ಟಿ ತಲೆಗೆ ಟೊಪ್ಪಿ ಧರಿಸಿ, ಕೈಕಟ್ಟಿ ನಮಾಝ್ ನಲ್ಲಿ ನಿರತವಾಗಿರುವುದು ಕಂಡುಬಂದಿದೆ.

    ಮಸೀದಿಗೆ ಮಮ್ಮುಟ್ಟಿ ಬರಲಿ, ವಿಪ್ರೋ ಮುಖ್ಯಸ್ಥ ಅಜೀಂ ಪ್ರೇಮ್ ಜೀಯೇ ಬರಲಿ ಸಾಮಾನ್ಯರ ಸಾಲಿನಲ್ಲಿಯೇ ನಿಂತು ಅಲ್ಲಾಹ್ ನನ್ನು ಸ್ತುತಿಸಬೇಕು ಹೊರತು, ಅವರಿಗೆ ಯಾವುದೇ ವಿಶೇಷ ಸ್ಥಾನಮಾನವಾಗ ಇಲ್ಲ. ಅವರ ವೈಯಕ್ತಿಕ ಪದವಿ ಹಾಗೂ ಶ್ರೀಮಂತಿಕೆ ಮಸೀದಿ ಒಳಭಾಗದಲ್ಲಿ ನಡೆಯುವ ಪ್ರಾರ್ಥನೆಗೂ ಸಂಬಂಧವಿರದು ಎಂದು ಮಸೀದಿ ಮುಖಂಡರು ಪ್ರತಿಕ್ರಿಯಿಸಿದ್ದಾರೆ. ಕಳೆದ ತಿಂಗಳು ಕೇರಳದ ಮಸೀದಿಯೊಂದರಲ್ಲೂ ಸಾಮಾನ್ಯರಂತೆ ಕೂತು ಪ್ರಾರ್ಥಿಸುತ್ತಿದ್ದ ಫೋಟೋವು ತುಂಬಾನೇ ವೈರಲ್ ಆಗಿತ್ತು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಖ್ಯಾತ ಬಹುಭಾಷಾ ನಟ ಮೋಹನ್ ಲಾಲ್