Tag: Actor Umesh

  • ನಟ ಉಮೇಶ್ ಆರೋಗ್ಯ ವಿಚಾರಿಸಿದ ಹಿರಿಯ ಕಲಾವಿದರು

    ನಟ ಉಮೇಶ್ ಆರೋಗ್ಯ ವಿಚಾರಿಸಿದ ಹಿರಿಯ ಕಲಾವಿದರು

    ಹಿರಿಯ ನಟ ಎಂಎಸ್ ಉಮೇಶ್ (Umesh) ಮನೆಯಲ್ಲಿ ಕಾಲುಜಾರಿ ಬಿದ್ದು ಸೊಂಟ ಹಾಗೂ ಬಲಗೈ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.

    ಹಿರಿಯ ನಟ ಉಮೇಶ್ ಅವರಿಗೆ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನಿಂಗ್ ಮಾಡಿದ ಬಳಿಕ ಲಿವರ್‌ನಲ್ಲಿ ಘನಗಾತ್ರದ ಗೆಡ್ಡೆ ಪತ್ತೆಯಾಗಿದೆ. ಲಿವರ್ ಕ್ಯಾನ್ಸರ್ ಆಗಿ ಅದು ಬೇರೆ ಬೇರೆ ಅಂಗಗಳಿಗೆ ಹರಡಿದೆ ಎಂದು ಶಾಂತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಹಿರಿಯ ನಟ ಉಮೇಶ್‌ಗೆ ಕ್ಯಾನ್ಸರ್; 4ನೇ ಸ್ಟೇಜ್‌ನಲ್ಲಿ ಕಾಯಿಲೆ

    ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಟ ಉಮೇಶ್ ಅವರ ಆರೋಗ್ಯವನ್ನ ವಿಚಾರಿಸಿದ್ದಾರೆ ಹಿರಿಯ ಕಲಾವಿದರು. ಈ ವೇಳೆ ತಮ್ಮ ಒಡನಾಟ ಹಾಗೂ ಹಳೆದಿನ ಶೂಟಿಂಗ್ ವೇಳೆ ಕಳೆದ ದಿನಗಳನ್ನ ಮೆಲುಕು ಹಾಕಿದ್ದಾರೆ. ಹಿರಿಯ ನಟಿ ಗಿರಿಜಾ ಲೋಕೇಶ್ ಹಾಡು ಹೇಳಿ ಉಮೇಶ ಅವರ ಜೊತೆ ಕೆಲಹೊತ್ತು ಕಾಲಕಳೆದಿದ್ದಾರೆ. ಹಿರಿಯ ನಟಿ ಗಿರಿಜಾ ಲೋಕೇಶ್, ಡಿಂಗ್ರಿ ನಾಗರಾಜ್, ಶ್ರುತಿ ಅವರ ತಾಯಂದಿರು ಹಾಗೂ ತಂದೆ, ನಟ ಗಣೇಶ್ ರಾವ್ ಸೇರಿ ಮುಂತಾದವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

    ಹಿರಿಯ ನಟ ಉಮೇಶ್ ಅವರು ಕನ್ನಡ ಚಿತ್ರರಂಗ, ರಂಗಭೂಮಿಯಲ್ಲಿ ಕಲಾ ಸೇವೆಯನ್ನ ಸಲ್ಲಿಸಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ. ಬೇಗ ಗುಣಮುಖರಾಗಿ ಬರಲೆಂದು ಆಪ್ತರು, ಅಭಿಮಾನಿಗಳ ಆಶಯವಾಗಿದೆ. ಇದನ್ನೂ ಓದಿ: ಕನ್ನಡಿಗರ ಆಶೀರ್ವಾದ ಇರೋತನಕ ಬಿಗ್‌ ಬಾಸ್‌ ನಿಲ್ಲಲ್ಲ – ಮೌನ ಮುರಿದ ಕಿಚ್ಚ ಸುದೀಪ್‌

  • ಹಿರಿಯ ನಟ ಉಮೇಶ್‌ಗೆ ಕ್ಯಾನ್ಸರ್; 4ನೇ ಸ್ಟೇಜ್‌ನಲ್ಲಿ ಕಾಯಿಲೆ

    ಹಿರಿಯ ನಟ ಉಮೇಶ್‌ಗೆ ಕ್ಯಾನ್ಸರ್; 4ನೇ ಸ್ಟೇಜ್‌ನಲ್ಲಿ ಕಾಯಿಲೆ

    ಸ್ಯಾಂಡಲ್‌ವುಡ್‌ನ ಹಿರಿಯ ನಟ ಉಮೇಶ್‌ (Actor Umesh) ಅವರು ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದಾರೆ. ನಟನಿಗೆ ಕಾಯಿಲೆ 4ನೇ ಸ್ಟೇಜ್‌ನಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಹಿರಿಯ ನಟ ಎಂ.ಎಸ್ ಉಮೇಶ್ ಅವರು ನಿನ್ನೆ (ಅ.10) ಮನೆಯಲ್ಲಿ ಬಿದ್ದು ಕಾಲು ಹಾಗೂ ಭುಜಕ್ಕೆ ಪೆಟ್ಟು ಮಾಡಿಕೊಂಡ ಕಾರಣದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ದಾಖಲಾದ ಬಳಿಕ MRI ಹಾಗೂ CT ಸ್ಕ್ಯಾನಿಂಗ್ ಮಾಡಿದಾಗ ಅವರಿಗೆ ಕ್ಯಾನ್ಸರ್ ಕಾಯಿಲೆ ಪತ್ತೆಯಾಗಿದೆ. ಮುದ್ದಿನ ಪಾಳ್ಯದ ಶಾಂತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಂತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಚೇರ್ಮನ್ ಆದ ಶಿವರಾಜ್ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕನಕರಾಜನಾದ ನಟ ಅನೂಪ್ ರೇವಣ್ಣ – ಇದು ಸಿಎಂ ಅಭಿಮಾನಿ ಸ್ಟೋರಿ

    ಹಿರಿಯ ಕಲಾವಿದ ಉಮೇಶ್ ಅವರು ಆಗೊಂದು ಈಗೊಂದು ಸಿನಿಮಾ ಮಾಡುತ್ತ ಜೀವನ ನಡೆಸೋದು ಕಷ್ಟವಾದ ಈ ಕಾಲದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದು ಕಡೆ ಕೈಕೊಟ್ಟ ಆರೋಗ್ಯ ಮತ್ತೊಂದೆಡೆ ಕುಟುಂಬದ ನಿರ್ವಹಣೆ. ಹೀಗಾಗಿ, ಚಿತ್ರರಂಗದ ನೆರವಿಗಾಗಿ ಎದುರು ನೋಡುತ್ತಿದ್ದಾರೆ.

    500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚಿದ ಉಮೇಶ್ ಅವರಿಗೆ ಉನ್ನತ ಮಟ್ಟದ ಚಿಕಿತ್ಸೆಯ ಅವಶ್ಯಕತೆ ಇದೆ. ಇಷ್ಟೆಲ್ಲಾ ನೋವಿನಲ್ಲೂ ಸಿನಿಮಾದ ಡೈಲಾಗ್ ಹೇಳಿ ನಗೆ ಚಟಾಕಿ ಹಾರಿಸಿದ್ದಾರೆ ಹಿರಿಯ ನಟ ಉಮೇಶ್. ಕ್ಯಾನ್ಸರ್ ಕಾಯಿಲೆ 4ನೇ ಹಂತದಲ್ಲಿ ಇದ್ದು, ಇದಕ್ಕೆ ಚಿಕಿತ್ಸೆ ಆದ ಬಳಿಕ ಮೂಳೆ ಸರ್ಜರಿ ಮಾಡಲು ಸಾಧ್ಯ ಅಂತಿದ್ದಾರೆ ವೈದ್ಯರು. ಇದನ್ನೂ ಓದಿ: ದರ್ಶನ್‌ಗೆ ಜೈಲಲ್ಲಿ ಹಾಸಿಗೆ, ದಿಂಬು ನೀಡದ ವಿಚಾರ – ‘ಜೈಲು ಪರಿಶೀಲಿಸಿ ರಿಪೋರ್ಟ್‌ ಕೊಡಿ’: ಕಾನೂನು ಪ್ರಾಧಿಕಾರಕ್ಕೆ ಕೋರ್ಟ್ ಆದೇಶ

  • ಬಿದ್ದು ಕಾಲು ಮುರಿದುಕೊಂಡ ಹಿರಿಯ ನಟ ಉಮೇಶ್ – ಆರೋಗ್ಯ ಸ್ಥಿತಿ ಹೇಗಿದೆ?

    ಬಿದ್ದು ಕಾಲು ಮುರಿದುಕೊಂಡ ಹಿರಿಯ ನಟ ಉಮೇಶ್ – ಆರೋಗ್ಯ ಸ್ಥಿತಿ ಹೇಗಿದೆ?

    – ಆರ್ಥಿಕ ಸಹಾಯಕ್ಕಾಗಿ ಕಲಾವಿದರ ಸಂಘದ ಮೊರೆ ಹೋದ ನಟ

    ಕನ್ನಡದ ಹಿರಿಯ ನಟ ಉಮೇಶ್ (Actor Umesh) ವಯೋ ಸಹಜ ತೊಂದರೆಗಳಿಂದ ಬಳಲುತ್ತಿದ್ದಾರೆ. ಇಂಥಹ ಕಷ್ಟದ ಹೊತ್ತಲ್ಲೇ ಅವರು ಮನೆಯಲ್ಲೇ ಬಿದ್ದು ಕಾಲು ಮುರಿದುಕೊಂಡಿದ್ದಾರೆ.

    ಶುಕ್ರವಾರ ಬೆಳಗ್ಗೆ ಮನೆಯಲ್ಲೇ ಜಾರಿ ಬಿದ್ದ ಉಮೇಶ್ ನೋವಿನಿಂದಾಗಿ ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ಮುದ್ದಿನಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಇದೀಗ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಹಿರಿಯ ನಟ ಉಮೇಶ್ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ನಟರಾಗಿ, ಐದು ದಶಕದಿಂದ ಬಣ್ಣ ಹಚ್ಚುತ್ತಿರುವ ಕಲಾವಿದ. ಇದೀಗ ಇಳಿ ವಯಸ್ಸಿನಲ್ಲಿ ಕಾಲಿಗೆ ಫ್ರ್ಯಾಕ್ಟರ್‌ ಮಾಡಿಕೊಂಡು ನರಳುತ್ತಿದ್ದಾರೆ. ಮನೆಯ ಆರ್ಥಿಕ ಸ್ಥಿತಿ ಚೆನ್ನಾಗಿಲ್ಲದ ಕಾರಣ ಕಲಾವಿದರ ಸಂಘದ ಮೊರೆ ಹೋಗಿದ್ದಾರೆ ಉಮೇಶ್.

    ಈ ವಯಸ್ಸಿನಲ್ಲೂ ಅವರು ನಟನೆಯ ತೊರೆದಿಲ್ಲ. ಆದರೆ ಮುಂದಿನ ಸ್ಥಿತಿ ಏನು ಅನ್ನೋ ಚಿಂತೆ ಅವರಿಗೂ ಕುಟುಂಬಸ್ಥರಿಗೂ ಎದುರಾಗಿದೆ. ಸದ್ಯಕ್ಕೀಗ ಕಾಲಿಗೆ ಆಪರೇಷನ್ ಮಾಡಬೇಕಾಗಿ ಬಂದಿದೆ. ವಿಶ್ರಾಂತಿ ಬಳಿಕ ಆರೋಗ್ಯದಲ್ಲಿ ಚೇತರಿಕೆ ಆಗಬೇಕಾಗಿದೆ.