Tag: actor

  • ಕನ್ನಡದ ಬಹುತೇಕ ದಿಗ್ಗಜರ ಜೊತೆ ನಟಿಸಿರುವ ನಟ ಉದಯ್ ಹುತ್ತಿನಗದ್ದೆ ನಿಧನ

    ಕನ್ನಡದ ಬಹುತೇಕ ದಿಗ್ಗಜರ ಜೊತೆ ನಟಿಸಿರುವ ನಟ ಉದಯ್ ಹುತ್ತಿನಗದ್ದೆ ನಿಧನ

    ಡಾ.ರಾಜ್ ಕುಮಾರ್ ಅಭಿನಯದ ‘ದೇವತಾ ಮನುಷ್ಯ’ ಸೇರಿದಂತೆ ಕನ್ನಡದಲ್ಲಿ ಅನೇಕ ಚಿತ್ರಗಳಲ್ಲಿ ನಟಿಸಿರುವ ಹಿರಿಯ ನಟ ಉದಯ್ ಹುತ್ತಿನಗದ್ದೆ ಇಹಲೋಕ ತ್ಯಜಿಸಿದ್ದಾರೆ. ‘ಆರಂಭ’ ಸಿನಿಮಾದ ಮೂಲಕ 1980ರ ದಶಕದ ಕೊನೆಯಲ್ಲಿ ಇವರು ನಾಯಕ ನಟರಾಗಿಯೂ ಅಭಿಮಾನಿಗಳನ್ನು ರಂಜಿಸಿದ್ದಾರೆ. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

    ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಬಸರಿಕಟ್ಟೆ ಗ್ರಾಮದವರಾದ ಉದಯ್, ಮೈಸೂರು ಹಾಗೂ ಬೆಂಗಳೂರಿನಲ್ಲಿ ಶಿಕ್ಷಣ ಪಡೆದು, ನಂತರ ಡಾ.ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಶ್, ಡಾ. ವಿಷ್ಣುವರ್ಧನ್ ಸೇರಿದಂತೆ ಅನೇಕ ಹಿರಿಯ ಕಲಾವಿದರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಅಲ್ಲದೇ, ಅಭಿನಯ ತರಂಗ ನಟನಾ ಶಾಲೆಯಲ್ಲಿ ತರಬೇತಿ ಪಡೆದು, ರಂಗಕರ್ಮಿ ಕೂಡ ಆಗಿದ್ದರು.

    ಅಗ್ನಿಪರ್ವ, ಶುಭ ಮಿಲನ, ಅಮೃತಬಿಂದು, ಉದ್ಭವ, ಜಯಭೇರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗುರುತಿಸಿಕೊಳ್ಳುವಂತಹ ಪಾತ್ರ ಮಾಡಿದ್ದ ಉದಯ್, ಆನಂತರ ಸಿನಿಮಾ ರಂಗದಿಂದ ದೂರವಾಗಿ ಚಿಕ್ಕಮಗಳೂರಿನಲ್ಲಿ ಕಾಫಿ ಎಸ್ಟೇಟ್ ಹೊಂದಿದ್ದರು. ಅದೇ ಉದ್ಯಮದಲ್ಲಿಯೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.  ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

    ನಟನೆಯ ಜೊತೆಗೆ ಬೆಂಗಳೂರಿನ ನವರಂಗ ಬಳಿ ಫೋಟೋಗ್ರಫಿ ಸ್ಟುಡಿಯೋ ಕೂಡ ನಡೆಸುತ್ತಿದ್ದ ಅವರು, ಮಲೆನಾಡಿನಿಂದ ಬರುವ ಹುಡುಗರಿಗೆ ಆಶ್ರಯ ತಾಣವೂ ಅದಾಗಿತ್ತು. ಸಿನಿಮಾ ರಂಗದಲ್ಲಿ ಅವರಿಗೆ ನಿರೀಕ್ಷಿತ ಗೆಲುವು ಸಿಗದೇ ಇರುವ ಕಾರಣಕ್ಕಾಗಿ ಕಲರ್ ಲ್ಯಾಬ್ ಮಾಡಿಕೊಂಡು ಈ ಕ್ಷೇತ್ರದಲ್ಲಿ ಅಪಾರ ಹೆಸರು ಮಾಡಿದರು.

  • ಗಣೇಶ್ ಮತ್ತು ಪ್ರೀತಂ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ

    ಗಣೇಶ್ ಮತ್ತು ಪ್ರೀತಂ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ

    ನಿರ್ದೇಶಕ ಪ್ರೀತಂ ಗುಬ್ಬಿ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕಾಂಬಿನೇಷನ್ ನ 4ನೇ ಸಿನಿಮಾ ಇದಾಗಿದೆ. ಇದನ್ನೂ ಓದಿ : ದಿ ಕೇರಳ ಸ್ಟೋರಿ ಸಿನಿಮಾ ಶುರು: ಸ್ಫೂರ್ತಿಯಂತೆ ದಿ ಕಾಶ್ಮೀರ್ ಫೈಲ್ಸ್

    ‘ಮಳೆಯಲಿ ಜೊತೆಯಲಿ’ ಸಿನಿಮಾದ ಮೂಲಕ ಈ ಜೋಡಿ ಒಂದಾಗಿತ್ತು. ಆನಂತರ ‘ದಿಲ್  ರಂಗೀಲಾ’ ಆಗಿ ತೆರೆಯ ಮೇಲೆ ಕಾಣಿಸಿಕೊಂಡಿತ್ತು. ಈ ಕಾಂಬಿನೇಷನ್ ನ ಕೊನೆಯ ಸಿನಿಮಾ ‘99’. ಇದಾದ ನಂತರ ಪ್ರೀತಂ ಮತ್ತು ಗಣೇಶ್ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದನ್ನೂ ಓದಿ : ಕಾಲೇಜು ದಿನಗಳಲ್ಲಿ ಅಮೀರ್‌ ಮೇಲೆ ಕ್ರಷ್‌ ಆಗಿತ್ತು.. ಲವ್‌ ಲೆಟರ್‌ ಕೂಡ ಬರೆದಿದ್ದೆ: ಬಾಲಿವುಡ್‌ ನಟಿ

    ಸಾಮಾನ್ಯವಾಗಿ ಪ್ರೀತಂ ಸಿನಿಮಾಗಳೆಂದರೆ, ಅಲ್ಲೊಂದು ಲವ್ ಸ್ಟೋರಿ ಇದ್ದೇ ಇರುತ್ತದೆ. ಹಾಗಾಗಿ ಈ ಸಿನಿಮಾದಲ್ಲೂ ಅಪರೂಪದ ಪ್ರೇಮಕಥೆಯನ್ನು ಹೇಳಲಿದ್ದಾರಂತೆ ನಿರ್ದೇಶಕರು. ‘ಮುಂಗಾರು ಮಳೆ’ ಸಿನಿಮಾದ ಮೂಲಕ ಈ ಜೋಡಿ ಒಂದಾಗಿ ಕೆಲಸ ಮಾಡುತ್ತಿದ್ದರೂ, ಮುಂಗಾರು ಮಳೆಗೆ ಪ್ರೀತಂ ಕೇವಲ ಕಥೆಗಾರ ಆಗಿದ್ದರು. ಇದನ್ನೂ ಓದಿ: ಮಾಧುರಿ ದೀಕ್ಷಿತ್ ಇರೋದು ಮನೇಲಿ ಅಲ್ಲ, ಅರಮನೆಯಲ್ಲಿ: ಹೊಸ ಮನೆಗೆ ದೇವದಾಸ್ ಬೆಡಗಿ

    ಇತ್ತ ಗಣೇಶ್ ಕೂಡ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲದೇ, ಟಾಕ್ ಶೋ  ಒಂದನ್ನು ನಡೆಸಿಕೊಡುತ್ತಿದ್ದಾರೆ. ಗಾಳಿಪಟ2 ಸಿನಿಮಾ ರಿಲೀಸ್ ಗೆ ಸಿದ್ಧವಾಗಿದ್ದರೆ, ತ್ರಿಬಲ್ ರೈಡಿಂಗ್ ಕೂಡ ಶೂಟಿಂಗ್ ಮುಗಿಸಿಕೊಂಡಿದೆ. ಹೀಗಾಗಿ ಹೊಸ ಸಿನಿಮಾ ಅತೀ ಶೀಘ್ರದಲ್ಲೇ ಸೆಟ್ಟೇರಿದೆ ಅಚ್ಚರಿ ಪಡಬೇಕಿಲ್ಲ.

  • ಉಕ್ರೇನ್ ನಟನ ಸಾವಿನ ಬೆನ್ನಲ್ಲೆ ಅವರ ಕೊನೆಯ ಪೋಸ್ಟ್ ವೈರಲ್

    ಉಕ್ರೇನ್ ನಟನ ಸಾವಿನ ಬೆನ್ನಲ್ಲೆ ಅವರ ಕೊನೆಯ ಪೋಸ್ಟ್ ವೈರಲ್

    ಕೀವ್: ರಷ್ಯಾದ ಶೇಲ್ ದಾಳಿ ವೇಳೆ ಉಕ್ರೇನ್‍ನ ನಟ ಪಾಶಾ ಲೀ ಸಾವನ್ನಪ್ಪಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಅವರ ಕೊನೆಯ ಪೋಸ್ಟ್‍ವೊಂದು ಸದ್ದು ಮಾಡುತ್ತಿದೆ.

    ಉಕ್ರೇನ್‍ನ ಮೇಲೆ ರಷ್ಯಾ ತೀವ್ರವಾಗಿ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ತನ್ನ ದೇಶವನ್ನು ರಕ್ಷಿಸಿಕೊಳ್ಳಲು ಉಕ್ರೇನ್‍ನ ನಟ ಪಾಶಾಲೀ ಸೇನೆ ಸೇರಿದ್ದರು. ಆದರೆ ಅವರು ಶೇಲ್ ದಾಳಿ ವೇಳೆ ಇರ್ಪಿನ್‍ನಲ್ಲಿ ಸಾವನ್ನಪ್ಪಿದ್ದರು.

    ಸಾಯುವ ಮೊದಲು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕಿದ್ದ ಅವರ ಕೊನೆಯ ಪೋಸ್ಟ್ ವೈರಲ್ ಆಗುತ್ತಿದೆ. ಕಳೆದ 48 ಗಂಟೆಗಳ ಕಾಲ ನಾವು ಹೇಗೆ ಬಾಂಬ್ ದಾಳಿ ಮಾಡುತ್ತಿದ್ದೇವೆ ಎಂಬುದರ ಕುರಿತು ಚಿತ್ರ ತೆಗೆಯುವ ಅವಕಾಶವಿದೆ. ನಾವು ನಮ್ಮ ದೇಶಕ್ಕಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ ಜೊತೆಗೆ ಎಲ್ಲವೂ ಉಕ್ರೇನ್ ಆಗಿರುತ್ತದೆ. ಇದರಿಂದಾಗಿ ನಾವು ನಗುತ್ತಿದ್ದೇವೆ ಎಂದು ಪೋಸ್ಟ್ ಮಾಡಿದ್ದಾರೆ.

    ಕಳೆದ ತಿಂಗಳು ಉಕ್ರೇನ್‍ನ ಮೇಲೆ ರಷ್ಯಾ ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಕ್ರೈಮಿಯಾ ಮೂಲದ ನಟ ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್‍ನ ರಕ್ಷಣಾ ಪಡೆಗೆ ಸೇರಿದ್ದರು. ಇದನ್ನೂ ಓದಿ: ಮಾ.11ರ 12:46 ವೇಳೆ ಸೇವ್ ಮಾಡ್ಕೊಳ್ಳಿ: ಕನ್ ಫ್ಯೂಸ್ ಮಾಡಿದ ಉಪೇಂದ್ರ

    ಉಕ್ರೇನ್‍ನ ರಾಷ್ಟ್ರೀಯ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಸೆರ್ಗಿ ಟೊಮಿಲೆಂಕೊ ಮತ್ತು ಒಡೆಸ್ಸಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ಪಾಶಾ ಲೀ ಅವರ ಸಾವಿನ ಸುದ್ದಿಯನ್ನು ದೃಢಪಡಿಸಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಇಬ್ಬರು ಮಹಿಳೆಯರಿಗೆ ಮಂಗನಕಾಯಿಲೆ ದೃಢ

  • ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ಗೌರಿ ಲಂಕೇಶ್ ಹತ್ಯ ಬಳಿಕೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರಿಗೆ ನೀಡಲಾಗಿದ್ದ ಗನ್ ಮ್ಯಾನ್ ಅನ್ನು ಸರ್ಕಾರ ಹಿಂಪಡೆದಿದೆ. ಈ ನಡೆಗೆ ಅವರು ಅಸಮಾಧಾನವನ್ನು ವ್ಯಕ್ತ ಪಡಿಸಿದ್ದಾರೆ. ತಮಗೆ ಈಗಲೂ ಜೀವಕ್ಕೆ ಅಪಾಯವಿದ್ದರೂ, ಗನ್ ಮ್ಯಾನ್ ಹಿಂಪಡೆದಿದ್ದಕ್ಕಾಗಿ ಚೇತನ್, ಶುಕ್ರವಾರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಭೇಟಿ ಮಾಡಿದರು. ಇದನ್ನೂ ಓದಿ : ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಚೇತನ್, “ನನಗೆ ಈಗಲೂ ಜೀವ ಬೆದರಿಕೆ ಇದೆ. ಗೌರಿ ಲಂಕೇಶ್ ಹತ್ಯ ಬಳಿಕೆ ನೀಡಲಾಗಿದ್ದ ಗನ್ ಮ್ಯಾನ್ ಅನ್ನು ಏಕಾಏಕಿ ಹಿಂಪಡೆದಿದ್ದಾರೆ. ಹಾಗಾಗಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ, ಗನ್ ಮ್ಯಾನ್ ವಾಪಸ್ಸು ಕಳುಹಿಸುವಂತೆ ಮನವಿ ಮಾಡಿದ್ದೇನೆ’ ಎಂದರು. ಇದೇ ಸಂದರ್ಭದಲ್ಲಿಯೇ ಅವರು ತಮ್ಮ ಮನೆಯ ಹತ್ತಿರ ಬೀಟ್ ವ್ಯವಸ್ಥೆಯನ್ನು ಹೆಚ್ಚಿಸುವಂತೆಯೂ ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭಾಸ್ಕರ್.ವಿ.ರೆಡ್ಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು

    ನ್ಯಾಯಾಧೀಶರ ಬಗ್ಗೆ ಅವಹೇಳನ ರೀತಿಯಲ್ಲಿ ಟ್ವಿಟ್ ಮಾಡಿದ್ದ ಚೇತನ್, 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಅವರಿಗೆ ಜಾಮೀನು ಸಿಕ್ಕಿತ್ತು. ಜೈಲಿನಿಂದ ಆಚೆ ಬಂದ ಮೇಲೂ ತಾವು ಪ್ರಶ್ನಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ, ಅವರ ಮೇಲೆ ಇನ್ನೂ ಎರಡು ಕೇಸ್‍ಗಳು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಈ ಎಲ್ಲದರ ಹಿನ್ನೆಲೆಯಲ್ಲಿ ಅವರಿಗೆ ನೀಡಲಾಗಿದ್ದ ಗನ್ ಮ್ಯಾನ್ ಸೆಕ್ಯುರಿಟಿಯನ್ನು ಸರ್ಕಾರ ಹಿಂಪಡೆದಿದೆ ಎನ್ನಲಾಗುತ್ತಿದೆ.

  • ಜಾಮೀನು ಸಿಕ್ಕರೂ ನಟ ಚೇತನ್‍ಗಿಲ್ಲ ಬಿಡುಗಡೆ ಭಾಗ್ಯ

    ಜಾಮೀನು ಸಿಕ್ಕರೂ ನಟ ಚೇತನ್‍ಗಿಲ್ಲ ಬಿಡುಗಡೆ ಭಾಗ್ಯ

    ಬೆಂಗಳೂರು: ಬೆಂಗಳೂರಿನ 8ನೇ ಜೆಎಂಎಫ್‍ಸಿ ನ್ಯಾಯಾಲಯದಿಂದ ಜಾಮೀನು ಮಂಜೂರು ಆದರೂ ನಟ ಚೇತನ್ ಗೆ ಎರಡು ದಿನಗಳ ಕಾಲ ಬಿಡುಗಡೆ ಭಾಗ್ಯ ಇಲ್ಲ.

    ಹೌದು. ಸಮಯಕ್ಕೆ ಸರಿಯಾಗಿ ಶ್ಯೂರಿಟಿ ಒದಗಿಸೋದಕ್ಕೆ ಸಾಧ್ಯವಾಗದ ಕಾರಣ ಚೇತನ್ ಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಇಲ್ಲ. ಚೇತನ್ ಜೈಲಿನಿಂದ ಹೊರಗಡೆ ಬರಲು ಇನ್ನೂ ಎರಡು ದಿನ ಕಾಲಾವಕಾಶ ಬೇಕು. ಯಾಕೆಂದರೆ ಎರಡು ದಿನ ಕೋರ್ಟ್ ರಜೆ ಇದ್ದು, ಸೋಮವಾರ ಬಿಡುಗಡೆಯಾಗುವ ಸಾಧ್ಯತೆಗಳಿವೆ.  ಇದನ್ನೂ ಓದಿ: ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ ಜೇಮ್ಸ್ ಹೊಸ ಫೋಟೋಸ್ ನೋಡ್ಬೇಕಾ?

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಬರಹ ಪ್ರಕಟಿಸಿದ ಆರೋಪದಡಿ ಚೇತನ್, ಶೇಷಾದ್ರಿಪುರಂ ಪೊಲೀಸರಿಂದ ಅರೆಸ್ಟ್ ಆಗಿದ್ದರು. ನಂತರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗಬಂಧನ ವಿಧಿಸಿ ಕೋರ್ಟ್ ಆದೇಶಿಸಿತ್ತು. ಹೀಗಾಗಿ ನಾಲ್ಕು ದಿನಗಳಿಂದ ಚೇತನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು, ಜಾಮೀನಿಗಾಗಿ ಚೇತನ್ ಕುಟುಂಬ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

    ಇಂದು ಬೆಂಗಳೂರಿನ 8ನೇ ಜೆಎಂಎಫ್‍ಸಿ ನ್ಯಾಯಾಲಯ ಚೇತನ್‍ಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್  ಬೇಲ್ ನೀಡಿತ್ತು. ಅಲ್ಲದೇ ತನಿಖೆಗೆ ಸಹಕರಿಸಬೇಕು. ಕೋರ್ಟ್ ವಿಚಾರಣೆಗಳಿಗೆ ಹಾಜರಾಗಬೇಕು ಎಂಬ ಷರತ್ತನ್ನು ವಿಧಿಸಿತ್ತು. ಆದರೆ ಇದೀಗ ಎರಡು ದಿನ ಜೈಲಿನಿಂದ ಬಿಡುಗಡೆ ಭಾಗ್ಯ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ವಿದ್ಯಾರ್ಥಿಗಳ ರಕ್ಷಣೆ ಯಾವಾಗ?: ಸಿಎಂ ಬಸವರಾಜ ಬೊಮ್ಮಾಯಿಗೆ ನಟಿ ರಮ್ಯಾ ಪ್ರಶ್ನೆ

  • ನಟ ಧನ್ವೀರ್ ಮೇಲೆ ನಿಲ್ಲುತ್ತಿಲ್ಲ ದಾಳಿ : ದಾಳಿ ಹಿಂದೆ ಸ್ಟಾರ್ ನಟರ ಕೈವಾಡ?

    ನಟ ಧನ್ವೀರ್ ಮೇಲೆ ನಿಲ್ಲುತ್ತಿಲ್ಲ ದಾಳಿ : ದಾಳಿ ಹಿಂದೆ ಸ್ಟಾರ್ ನಟರ ಕೈವಾಡ?

    ರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಚಿತ್ರಮಂದಿರದ ಮುಂದೆ ಅಭಿಮಾನಿಗೆ ಹೊಡೆದ ಎನ್ನುವ ಕಾರಣಕ್ಕಾಗಿ ಕನ್ನಡದ ಯುವ ನಟ ಧನ್ವೀರ್ ಗೌಡ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಘಟನೆ ನಡೆದು ಇನ್ನೂ 48 ಗಂಟೆ ಕಳೆದಿಲ್ಲ ಅಷ್ಟರಲ್ಲಿ ಹುಬ್ಬಳ್ಳಿಯಲ್ಲಿ ಯುವಕರ ಗುಂಪೊಂದು ಧನ್ವೀರ್ ಮೇಲೆ ದಾಳಿ ಮಾಡಿದೆ. ಇದನ್ನೂ ಓದಿ : ಶಬ್ದ ಚಿತ್ರದ ವಿಭಿನ್ನ ಪಾತ್ರದಲ್ಲಿ ಮೇಘನಾ ರಾಜ್ : ನಿರ್ದೇಶಕ ಕಾಂತ ಹೇಳಿದ್ದೇನು?


    ಒಂದು ಗುಂಪು ಧನ್ವೀರ್ ವಿರುದ್ಧ ಮಾತಿನ ದಾಳಿಗೆ ಇಳಿದರೆ, ಮತ್ತೊಂದು ಗುಂಪು ಧನ್ವೀರ್ ರಕ್ಷಣೆ ನಿಂತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಸಿನಿಮಾದ ಪ್ರಚಾರಕ್ಕಾಗಿ ಹುಬ್ಬಳ್ಳಿಗೆ ತೆರಳಿದ್ದ ಅವರು, ಅನಿರೀಕ್ಷಿತ ದಾಳಿಗೆ ಹೈರಾಣಾಗಿದ್ದಾರೆ. ಇದನ್ನೂ ಓದಿ : ಡಿಸೆಂಬರ್ ನಲ್ಲಿ ರಶ್ಮಿಕಾ ಮಂದಣ್ಣ -ದೇವರಕೊಂಡ ಮದುವೆ? ಏನಿದು ಮ್ಯಾರೇಜ್ ಕಹಾನಿ


    ಇತ್ತ ಸೋಷಿಯಲ್ ಮೀಡಿಯಾದಲ್ಲಿ ಸ್ಟಾರ್ ನಟರ ಹೆಸರಿನಲ್ಲಿ ಕೆಲ ಕಿಡಿಗೇಡಿಗಳು ಅಪಪ್ರಚಾರ ನಡೆಸುತ್ತಿರುವುದು ಮತ್ತೊಂದು ಸುತ್ತಿನ ಚಕಮಕಿಗೆ ಕಾರಣವಾಗಿದೆ. ಧನ್ವೀರ್ ದಾಳಿಯ ಹಿಂದೆ ಇಬ್ಬರು ಸ್ಟಾರ್ ನಟರ ಕೈವಾಡ ಇದೆಯಂದು, ಈ ಯುವ ನಟನ ಗೆಲುವನ್ನು ಸಹಿಸಲಾಗದ ಆ ನಟರು ಈ ರೀತಿಯಲ್ಲಿ ದಾಳಿ ಮಾಡಿಸುತ್ತಿದ್ದಾರೆ ಎಂಬ ಪೋಸ್ಟ್ ಗಳು ಆಯಾ ಅಭಿಮಾನಿಗಳ ಗ್ರೂಪ್ ನಲ್ಲಿ ಹರಿದಾಡುತ್ತಿವೆ. ಈ ಇಬ್ಬರು ಸ್ಟಾರ್ ನಟರ ಅಭಿಮಾನಿಗಳು ಕೂಡ ಈ ವಿಷಯದಲ್ಲಿ ಒಬ್ಬರಿಗೊಬ್ಬರು ಕೆಸರೆರಿಚುವ ಕೆಲಸಕ್ಕೂ ಮುಂದಾಗಿದ್ದಾರೆ.  ಇದನ್ನೂ ಓದಿ : ಜೀ ಕನ್ನಡ ವಾಹಿನಿಗೆ ಜಿಗಿದ ರಚಿತಾ ರಾಮ್ – Exclusive


    ಈ ಎಲ್ಲ ನಡೆಗಳು ಅಭಿಮಾನಿಗಳ ಅತಿರೇಕ ಮತ್ತು ನಟರ ವರ್ತನೆ ಕುರಿತು ಚಿತ್ರೋದ್ಯಮದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿವೆ. ಈ ರೀತಿಯ ಅಪಪ್ರಚಾರ ಮಾಡುವವರು ವಿರುದ್ಧ ಕ್ರಮ ತಗೆದುಕೊಳ್ಳಬೇಕೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅನೇಕರು ಸಲಹೆ ನೀಡಿದ್ದಾರೆ.

  • ಕಾಂಗ್ರೆಸ್‌ಗೆ ಮತ ಹಾಕುವವರು ಕಳ್ಳರು: ಕಂಗನಾ ರಣಾವತ್‌

    ಕಾಂಗ್ರೆಸ್‌ಗೆ ಮತ ಹಾಕುವವರು ಕಳ್ಳರು: ಕಂಗನಾ ರಣಾವತ್‌

    ನವದೆಹಲಿ: ನಾಸ್ತಿಕರನ್ನು ನಂಬಲು ಸಾಧ್ಯವಿಲ್ಲ. ಕಳ್ಳರು ಮಾತ್ರ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ ಎಂದು ಬಾಲಿವುಡ್‌ ನಟಿ ಕಂಗನಾ ರಣಾವತ್‌ ಹೇಳಿದ್ದಾರೆ.

    ʻಜೀವನದ ನಾಲ್ಕು ನಿಯಮಗಳನ್ನು ನೆನಪಿಟ್ಟುಕೊಳ್ಳಿʼ ಎಂಬ ಶೀರ್ಷಿಕೆಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, 1.ಮೂರ್ಖರು ಮಾತ್ರ ಮೂರ್ಖರನ್ನು ಬೆಂಬಲಿಸುತ್ತಾರೆ. 2.ತನ್ನನ್ನೇ ನಂಬದವರಿಗೆ ದೇವರು ಮತ್ತು ನಂಬಿಕೆ ಮೇಲೆ ವಿಶ್ವಾಸವಿರುವುದಿಲ್ಲ. 3.ನಿಮ್ಮ ಅಂತರಂಗದ ಪ್ರತಿಬಿಂಬವಾಗಿರುವ ಗುರುವನ್ನು ನೀವು ಕಾಣುವಿರಿ. ನೀವು ಸತ್ಯವಂತರಾಗಿದ್ದರೆ ಸತ್ಯವಂತ ಗುರುಗಳನ್ನೇ ಅನುಸರಿಸುವಿರಿ. ನೀವು ಒಳ್ಳೆಯವರಾಗಿಲ್ಲದಿದ್ದರೆ, ವಂಚಕರನ್ನೇ ಗುರು ಎಂದು ಕಾಣುವಿರಿ. 3.ನೀವು ಕಳ್ಳರಾಗಿದ್ದರೆ ಕಾಂಗ್ರೆಸ್‌ನ್ನು ಬೆಂಬಲಿಸುವಿರಿ. ನೀವು ನಿಜವಾದ ರಾಷ್ಟ್ರವಾದಿಯಾಗಿದ್ದರೆ ಬಿಜೆಪಿಗೆ ಮತ ಹಾಕುವಿರಿ ಎಂದು ಕಂಗನಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಶೂಟಿಂಗ್‍ಗಾಗಿ ರಾಜಮಂಡ್ರಿಗೆ ಬಂದಿಳಿದ ರಾಮ್ ಚರಣ್ – ಅಭಿಮಾನಿಗಳಿಂದ ನೂಕು ನುಗ್ಗಲು

    ಕಂಗನಾ ರಣಾವತ್‌ ಹಿಂದಿನಿಂದಲೂ ಬಿಜೆಪಿ ಪರವಾಗಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಕಂಗನಾ ಭೇಟಿಯಾಗಿದ್ದರು. ಅವರ ಪೋಸ್ಟ್‌ಗಳು ಸಹ ಬಿಜೆಪಿ ಪರವಾಗಿವೆ.

    ಅಷ್ಟೇ ಅಲ್ಲದೆ ವಿವಾದಾತ್ಮಕ ಹೇಳಿಕೆಗಳ ಮೂಲಕವೂ ಕಂಗನಾ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಗಾಂಧೀಜಿ ಅವರ ಅಹಿಂಸಾವಾದವನ್ನು ಟೀಕಿಸಿ ವಿವಾದಕ್ಕೆ ಗುರಿಯಾಗಿದ್ದರು. ಇದನ್ನೂ ಓದಿ: ದೇಶದ ಭದ್ರತೆಗಾಗಿ ಕೇಂದ್ರ ಸರ್ಕಾರದೊಂದಿಗೆ ಕೆಲಸ ಮಾಡುತ್ತೇವೆ: ಕೇಜ್ರಿವಾಲ್‌

  • ಸ್ಯಾಂಡಲ್‍ವುಡ್ ನಟ ಕಂ ನಿರ್ದೇಶಕನ ವಿರುದ್ಧ ಅತ್ಯಾಚಾರ ಪ್ರಕರಣ

    ಸ್ಯಾಂಡಲ್‍ವುಡ್ ನಟ ಕಂ ನಿರ್ದೇಶಕನ ವಿರುದ್ಧ ಅತ್ಯಾಚಾರ ಪ್ರಕರಣ

    ಬೆಂಗಳೂರು: ಸ್ಯಾಂಡಲ್‍ವುಡ್ ನಾಯಕ ನಟ, ನಿರ್ದೇಶಕರೊಬ್ಬರ ವಿರುದ್ಧ ಅತ್ಯಾಚಾರ ಪ್ರಕರಣವೊಂದು ದಾಖಲಾಗಿದೆ. ಇನ್ನೊಬ್ಬಳ ಬಾಳಿನಲ್ಲಿ ಆಕ್ಷನ್ ಕಟ್ ಹೇಳಿದ ಸೆಕ್ಸ್ ಸ್ಕ್ಯಾಂಡಲ್ ಸ್ಟೋರಿ ಇದಾಗಿದೆ.

    ವಿಷನ್ 2023 ಚಿತ್ರದ ನಿರ್ದೇಶಕ ಮತ್ತು ನಾಯಕ ನಟನಾಗಿರುವ ಹರ್ಷವರ್ಧನ್ ವಿರುದ್ಧ ಈ ಆರೋಪ ಕೇಳಿಬಂದಿದೆ. ನೀಲಿ ಚಿತ್ರ ತೋರಿಸಿ ಸಹ ನಟಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಬೈಕ್ ಅಪಘಾತ – ಟಿಎಂಸಿ ನಾಯಕ ಮದನ್ ಮಿತ್ರಾಗೆ ಗಾಯ

    ಮದುವೆಯಾಗುವುದಾಗಿ ನಂಬಿಸಿ ಹರ್ಷವರ್ಧನ್, 8 ತಿಂಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಸಹ ನಟಿ ದೂರು ನೀಡಿದ್ದಾರೆ. ನಟಿಯ ದೂರಿನ ಆಧಾರದ ಮೇಲೆ ಇದೀಗ ಹರ್ಷವರ್ಧನ್ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲು ಮಾಡಿಕೊಂಡು ಬಂಧಿಸಿದ್ದಾರೆ. ಅಲ್ಲದೆ ನ್ಯಾಯಾಂಗ ಬಂಧನಕ್ಕೆ ಕಳುಹಿದ್ದಾರೆ.

    ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ, ತಾವಿದ್ದಲ್ಲಿಂದಲೇ ನನಗೆ ಹರಸಿ: ನಿಖಿಲ್ ಕುಮಾರಸ್ವಾಮಿ

    ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ, ತಾವಿದ್ದಲ್ಲಿಂದಲೇ ನನಗೆ ಹರಸಿ: ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವದು ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುವುದಿಲ್ಲ, ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.

    ಹುಟ್ಟುಹಬ್ಬಕ್ಕಿಂತ ಒಂದು ದಿನ ಮುಂಚಿತವಾಗಿ, ಅಂದರೆ ಜ.21ರಂದು ನಿಖಿಲ್ ಕುಮಾರಸ್ವಾಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:  ಕೆಜಿಎಫ್ ಸಿನಿಮಾದ ಹಾಡಿಗೆ ಕಿಲಿ ಪೌಲ್ ಮಸ್ತ್ ಸ್ಟೆಪ್ಸ್

    ಕೋವಿಡ್ ಸಂಕಷ್ಟದ ಸಮಯದಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ ಈ ವರ್ಷ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಅಭಿಮಾನಿಗಳು, ಕಾರ್ಯಕರ್ತರು ಕೋವಿಡ್ ಸಂಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ತಾವಿದ್ದಲ್ಲಿಂದಲೇ ನನಗೆ ಹರಸಿ. ಒಂದು ಅರ್ಥಪೂರ್ಣ ಆಚರಣೆಗೆ ಕೈಜೋಡಿಸಿ ಎಂದು ಸೋಶಿಯಲ್‍ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ‘ತೋತಾಪುರಿ’ ಚಿತ್ರತಂಡದಿಂದ ಪ್ರೇಕ್ಷಕರಿಗೆ ಸಿಕ್ತು ಸಿಹಿಸುದ್ದಿ- ಜನವರಿ 24ಕ್ಕೆ ಆಡಿಯೋ ಟೀಸರ್ ರಿಲೀಸ್

    ನಿಖಿಲ್ ಅವರ ಈ ನಿರ್ಧಾರಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕವೇ ಎಲ್ಲರೂ ಮುಂಚಿತವಾಗಿ ವಿಶ್ ಮಾಡುತ್ತಿದ್ದಾರೆ. ಬರ್ತ್‍ಡೇ ಪ್ರಯುಕ್ತ ಅಭಿಮಾನಿಗಳಿಗೆ ಗಿಫ್ಟ್ ಆಗಿ ನಿಖಿಲ್ ಕುಮಾರಸ್ವಾಮಿ ನಟಿಸಲಿರುವ ಹೊಸ ಚಿತ್ರದ ಟೈಟಲ್ ಲಾಂಚ್ ಆಗಲಿದೆ. ಇದನ್ನೂ ಓದಿ:  ಇನ್‍ಸ್ಟಾಗ್ರಾಮ್‍ಗೆ ಎಂಟ್ರಿಕೊಟ್ಟ ಮೀರಾ ಜಾಸ್ಮಿನ್

  • ವಡಿವೇಲುಗೆ ಕೊರೊನಾ- ಓಮಿಕ್ರಾನ್ ಸೋಂಕು ಶಂಕೆ

    ವಡಿವೇಲುಗೆ ಕೊರೊನಾ- ಓಮಿಕ್ರಾನ್ ಸೋಂಕು ಶಂಕೆ

    ಚೆನ್ನೈ: ತಮಿಳಿನ ಹಾಸ್ಯ ನಟ ವಡಿವೇಲು ಅವರು ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದಾರೆ.

    ವಡಿವೇಲು ಅವರು ಇತ್ತೀಚೆಗಷ್ಟೇ ಲಂಡನ್ ನಿಂದ ವಾಪಸ್ಸಾಗಿದ್ದರೆ. ಸೋಂಕು ಅಲ್ಲಿಂದಲೇ ವಡಿವೇಲು ಅವರಿಗೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

    ತಮಿಳಿನ ನಾಯ್ ಶೇಖರ್ ರಿಟರ್ನ್ಸ್ ಚಿತ್ರದ ಚಿತ್ರೀಕರಣಕ್ಕೆಂದು ವಡಿವೇಲು ಲಂಡನ್‌ಗೆ ತೆರಳಿದ್ದರು. ವಿದೇಶದಿಂದ ವಾಪಸ್ ಆದಾಗಲೇ ಅವರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿತ್ತು ಎಂದು ವಡಿವೇಲು ಮನೆಯವರು ತಿಳಿಸಿದ್ದಾರೆ. ಇದನ್ನೂ ಓದಿ: ರಾಯನ್ ರಾಜ್ ಸರ್ಜಾ ಕ್ರಿಸ್‍ಮಸ್ ಸಂಭ್ರಮ ಹೇಗಿತ್ತು ಗೊತ್ತಾ?

    ವಡಿವೇಲು ಅವರ ಆರೋಗ್ಯ ತೀರಾ ಹದಗೆಟ್ಟಿದ್ದು, ವಡಿವೇಲು ಅವರಿಗೆ ಓಮಿಕ್ರಾನ್ ಸೋಂಕು ಕೂಡ ತಗುಲಿರುವ ಶಂಕೆ ವ್ಯಕ್ತವಾಗಿದೆ. ವಡಿವೇಲು 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಅದ್ಭುತ ನಟನೆಯಿಂದ ಸಾಕಷ್ಟು ಪ್ರಶಸ್ತಿಗಳು ಇವರ ಪಾಲಾಗಿವೆ. ಇದನ್ನೂ ಓದಿ: 1.83 ಕೋಟಿ ಮೌಲ್ಯದ 3.6 ಕೆ.ಜಿ ಚಿನ್ನ ತಿರುಪತಿ ತಿಮ್ಮಪ್ಪನಿಗೆ ಅರ್ಪಣೆ