Tag: actor

  • ಹೆತ್ತವರ ವಿರುದ್ಧ ದೂರು ದಾಖಲಿಸಿದ ನಟ

    ಹೆತ್ತವರ ವಿರುದ್ಧ ದೂರು ದಾಖಲಿಸಿದ ನಟ

    ಚೆನ್ನೈ: ತಮಿಳಿನ ಖ್ಯಾತ ನಟ ದಳಪತಿ ವಿಜಯ್ ತಂದೆ-ತಾಯಿ ಸೇರಿ 11 ಜನರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಸದ್ಯ, ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

    ವಿಜಯ್ ತಂದೆ ಖ್ಯಾತ ನಿರ್ದೇಶಕ ಎಸ್.ಎ. ಚಂದ್ರಶೇಖರ್. ಇವರು ಸಾಕಷ್ಟು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ವಿಜಯ್ ತಂದೆ 2020ರಲ್ಲಿ ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್ ಇಯಕ್ಕಮ್ ಪಕ್ಷ ಆರಂಭಿಸಿದ್ದರು. ಆದರೆ ಅದು ವಿಜಯ್‍ಗೆ ಇಷ್ಟವಿಲ್ಲ. ನನ್ನ ತಂದೆಯ ಪಕ್ಷ ಎಂದು ಸಫೋರ್ಟ್ ಮಾಡಬೇಡಿ. ಆ ಪಕ್ಷದ ಜೊತೆಗೆ ನೇರವಾಗಿ, ಪರೋಕ್ಷವಾಗಿ ಯಾವುದೇ ಸಂಬಂಧವಿಲ್ಲ. ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್ ಇಯಕ್ಕಮ್ ಪಾರ್ಟಿ ಜೊತೆಗೆ ನನ್ನ ಹೆಸರು ಸೇರಿಸಿದರೆ, ಫೋಟೋ ಬಳಸಿಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು. ಇದು ದೊಡ್ಡಮಟ್ಟದ ಸುದ್ದಿಯಾಗಿತ್ತು. ಇದೀಗ ಆ ಬಗ್ಗೆಯೇ ಪ್ರಕರಣ ದಾಖಲು ಮಾಡಲಾಗಿದೆ. ವಿಜಯ್ ಹೆಸರು, ಅಭಿಮಾನಿಗಳ ಸಂಘಗಳ ಹೆಸರನ್ನು ಎಲ್ಲಿಯೂ ಬಳಸದಂತೆ ತಡೆಯಾಜ್ಞೆ ತರಲಾಗಿದೆ. ಇದನ್ನೂ ಓದಿ: ಭಾರತದ ಬಯೋಟೆಕ್ ರಾಜಧಾನಿ ಬೆಂಗಳೂರು: ಪಿಯೂಷ್ ಗೋಯಲ್

    ಈ ಸಂಬಂಧ ವಿಜಯ್ ತಂದೆ ಎಸ್.ಎ. ಚಂದ್ರಶೇಖರ್, ತಾಯಿ ಶೋಭಾ ಚಂದ್ರಶೇಖರ್, ಪಾರ್ಟಿ ಲೀಡರ್ ಪದ್ಮನಾಭನ್ ಸೇರಿದಂತೆ 11 ಜನರ ವಿರುದ್ಧ ಪ್ರಕರಣದ ದಾಖಲಾಗಿದೆ. ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್ ಇಯಕ್ಕಮ್ ಪಾರ್ಟಿಗೆ ಎಸ್.ಎ. ಚಂದ್ರಶೇಖರ್ ಅವರು ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ. ತಾಯಿ ಶೋಭಾ ಚಂದ್ರಶೇಖರ್ ಅವರು ಖಜಾಂಚಿ ಆಗಿದ್ದಾರೆ. ಇದನ್ನೂ ಓದಿ:  ಬಾಲಕಿ ಕೆನ್ನೆ ಕಚ್ಚಿದ್ದ ಶಿಕ್ಷಕನಿಗೆ ಪೊಲೀಸರ ಮುಂದೆಯೇ ಥಳಿಸಿದ ಸ್ಥಳೀಯರು

    ಇದು ವಿಜಯ್ ಅವರ ರಾಜಕೀಯ ಪಕ್ಷವಲ್ಲ. ಈ ಪಕ್ಷದೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ. ಅಂದು ವಿಜಯ್‍ಗೆ ಅಭಿಮಾನಿ ಸಂಘ ಕಟ್ಟಲು ಅವರ ಯಾವುದೇ ಅನುಮತಿ ಪಡೆಯಲಿಲ್ಲ. ಅದೇ ರೀತಿ ಈಗಲೂ ರಾಜಕೀಯ ಪಕ್ಷ ಸ್ಥಾಪನೆಗೆ ವಿಜಯ್ ಅನುಮತಿ ಬೇಕಿಲ್ಲ ಎಂದು ಚಂದ್ರಶೇಖರ್ ವಾದ ಮಾಡಿದ್ದರು ಎಂಬ ಮಾತು ಕೇಳಿಬಂದಿತ್ತು. ಇದನ್ನೂ ಓದಿ:  ಲಸಿಕೆ ವಿತರಣೆ ದಾಖಲೆ ಬಗ್ಗೆ ಕೇಂದ್ರ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ

    ಈ ಎಲ್ಲ ವಿಚಾರವಾಗಿ ಬೇಸತ್ತ ವಿಜಯ್ ನನ್ನ ತಂದೆ ನೀಡಿರುವ ರಾಜಕೀಯ ಹೇಳಿಕೆಗಳೊಂದಿಗೆ ನನಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಸಂಬಂಧವಿಲ್ಲ ಎಂದು ವಿಜಯ್ ಹೇಳಿದ್ದರು. ಪಕ್ಷಕ್ಕೆ ವಿಜಯ್ ಹೆಸರಿದೆ ಎಂಬ ಕಾರಣಕ್ಕೆ ಅವರ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಆಗುವ ಸಾಧ್ಯತೆ ಇರುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ವಿಜಯ್ ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.

  • 20 ಕೋಟಿಗೂ ಅಧಿಕ ತೆರಿಗೆ ವಂಚಿಸಿದ್ದಾರೆ ಸೋನು ಸೂದ್: ಆದಾಯ ತೆರಿಗೆ ಇಲಾಖೆ

    20 ಕೋಟಿಗೂ ಅಧಿಕ ತೆರಿಗೆ ವಂಚಿಸಿದ್ದಾರೆ ಸೋನು ಸೂದ್: ಆದಾಯ ತೆರಿಗೆ ಇಲಾಖೆ

    ಮುಂಬೈ: ಬಾಲಿವುಡ್ ನಟ ಸೋನು ಸೂದ್ 20 ಕೋಟಿಗೂ ಅಧಿಕ ತೆರಿಗೆ ವಂಚಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.

    ಸತತ ಮೂರು ದಿನಗಳ ಕಾಲ ಸೋನು ಅವರ ಮನೆ, ಕಚೇರಿಗಳ ಮೇಲೆ ಸಮೀಕ್ಷೆ ನಡೆಸಿದ ಐಟಿ ಅಧಿಕಾರಿಗಳು, ನಟನಿಗೆ ಸಂಬಂಧಿಸಿದ ನಾನ್ ಪ್ರಾಫಿಟ್ ಸಂಸ್ಥೆಯು, 2.1 ಕೋಟಿಗಳನ್ನು ವಿದೇಶಿ ಮೂಲಗಳಿಂದ ಸಂಗ್ರಹಿಸಿದೆ ಎಂದಿದೆ. ಇದು ಸರ್ಕಾರದ ವಿದೇಶಿ ಹಣ ಸ್ವೀಕಾರದ ಕಾನೂನಿಗೆ ವಿರುದ್ಧವಾಗಿದೆ ಎಂದು ಇಲಾಖೆ ತಿಳಿಸಿದೆ.

    ಮನೆಯ ಮೇಲಿನ ಸಮೀಕ್ಷೆಯ ವೇಳೆ ಅವರು ತಮ್ಮ ಸಹವರ್ತಿಗಳೊಂದಿಗೆ ಕೂಡಿ ತೆರಿಗೆ ವಂಚನೆ ನಡೆಸಿದ್ದರ ಕುರಿತು ಸಾಕ್ಷ್ಯಗಳು ಪತ್ತೆಯಾಗಿವೆ. ಇದರಲ್ಲಿ ಮುಖ್ಯವಾಗಿ ಲೆಕ್ಕವಿಲ್ಲದ ಆದಾಯವನ್ನು ನಕಲಿ ಸಂಸ್ಥೆಗಳ ಮೂಲಕ ಸಾಗಿಸಲಾಗಿದೆ ಎಂದು ಸಿಬಿಡಿಟಿ ಮಾಹಿತಿ ನೀಡಿದೆ. ಐಟಿ ಇಲಾಖೆಯು ಸೋನು ಸೂದ್ ಹಾಗೂ ಲಕ್ನೋ ಮೂಲದ ಸಂಸ್ಥೆಯೊಂದರ ಮೇಲೆ ಸಮೀಕ್ಷೆ ನಡೆಸಿತ್ತು.ಇದಕ್ಕೆ ಸಂಬಂಧಪಟ್ಟಂತೆ, ಮುಂಬೈ, ಲಕ್ನೋ, ಕಾನ್ಪುರ, ಜೈಪುರ, ದೆಹಲಿ, ಗುರುಗ್ರಾಮಗಳಲ್ಲಿ ಶೋಧ ನಡೆಸಲಾಗಿತ್ತು ಎಂದು ಕೇಂದ್ರ ಆದಾಯ ತೆರಿಗೆ ಮಂಡಳಿ ತಿಳಿಸಿದೆ.

    ನಟನ ವಿರುದ್ಧದ ಆರೋಪಗಳು:

    ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಕಷ್ಟಪಡುತ್ತಿರುವವರಿಗೆ ಸಹಾಯ ಮಾಡಿದ ಪ್ರಯತ್ನಗಳು ಭಾರೀ ಪ್ರಶಂಸೆಯನ್ನುಗಳಿಸಿತ್ತು. ಆದರೆ ಕಳೆದ ವರ್ಷ ಜುಲೈನಲ್ಲಿ ಕೋವಿಡ್ ಮೊದಲ ಅಲೆಯಲ್ಲಿ ಸ್ಥಾಪಿಸಲಾದ ಅವರ ಲಾಭರಹಿತ ಸೂದ್ ಚಾರಿಟಿ ಫೌಂಡೇಶನ್ 18 ಕೋಟಿಗೂ ಹೆಚ್ಚು ದೇಣಿಗೆ ಸಂಗ್ರಹಿಸಿದೆ. ಈ ವರ್ಷದ ಏಪ್ರಿಲ್ ವರೆಗೆ, ಅದರಲ್ಲಿ 1.9 ಕೋಟಿ ಪರಿಹಾರ ಕಾರ್ಯಕ್ಕಾಗಿ ಖರ್ಚು ಮಾಡಿದೆ. ಉಳಿದ 17 ಕೋಟಿ ಹಣ ಲಾಭರಹಿತ ಬ್ಯಾಂಕ್ ಖಾತೆಯಲ್ಲಿ ಬಳಕೆಯಾಗದೆ ಉಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸೋನು ಸೂದ್ ಅವರ ಕಂಪನಿ ಮತ್ತು ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವಿನ ಇತ್ತೀಚಿನ ಒಪ್ಪಂದದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಒಪ್ಪಂದದ ಆಧಾರದ ಮೇಲೆ ತೆರಿಗೆ ವಂಚನೆಯ ಆರೋಪದ ಕುರಿತು ಸಮೀಕ್ಷೆ ನಡೆಸಲಾಗಿದೆ.

    ಲಕ್ನೋದ ಸಂಸ್ಥೆಯಲ್ಲಿ ಸೋನು ಸೂದ್ ಅಕ್ರಮ ಹಣವನ್ನು ಹೂಡಿದ್ದಾರೆ. ಈ ಕುರಿತು ಸಾಕ್ಷಾಧಾರಗಳು ಲಭ್ಯವಾಗಿವೆ. ಜೊತೆಗೆ ಲಕ್ನೋದ ಕಂಪೆನಿಯು 65 ಕೋಟಿಗೂ ಅಧಿಕ ಬೋಗಸ್ ಕಾಂಟ್ರಾಕ್ಟ್ ಪಡೆದಿದೆ. ಹೆಚ್ಚಿನ ತನಿಖೆ ನಡೆದಿದೆ ಎಂದು ಮಾಹಿತಿ ನೀಡಲಾಗಿದೆ.

  • ಜನ ಅಸಾಮಾನ್ಯ , ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಉಪೇಂದ್ರ

    ಜನ ಅಸಾಮಾನ್ಯ , ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಉಪೇಂದ್ರ

    ಬೆಂಗಳೂರು: ಜನಸಾಮಾನ್ಯ ಅಲ್ಲ, ಜನ ಅಸಾಮಾನ್ಯ ಎಂದು ಸ್ಯಾಂಡಲ್‍ವುಡ್ ನಟ ಉಪೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆಯುವ ಮೂಲಕವಾಗಿ ಅಭಿಮಾನಿಗಳಲ್ಲಿ ಅಚ್ಚರಿಯನ್ನು ಮೂಡಿಸಿದ್ದಾರೆ.

    ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಮುಂದಿನ ಸಿನಿಮಾದ ಟೈಟಲ್ ರಿಲೀಸ್ ಆಗಿದೆ. ನೋಡೋಕೆ ನಾಮದಂತೆ ಕಾಣುವ ಈ ಟೈಟಲ್ ಹಿಂದೆ ಯಾವ ಸೀಕ್ರೆಟ್ ಇದೆ, ಅಭಿಮಾನಿಗಳಿಗೆ ಏನು ಹೇಳಲು ಹೊರಟಿದ್ದಾರೆ ಎನ್ನುವುದು ಮಾತ್ರ ನಿಗೂಢವಾಗಿದೆ. ಇದನ್ನೂ ಓದಿ: ಕಂಗನಾ ರಣಾವತ್‍ಗೆ Kooನಲ್ಲಿ 1 ಮಿಲಿಯನ್ ಫಾಲೋವರ್ಸ್

     

    View this post on Instagram

     

    A post shared by Upendra (@nimmaupendra)

    ಉಪೇಂದ್ರ ಅವರ ಈ ಪೋಸ್ಟ್ ನೋಡಿದ ಅಭಿಮಾನಿಗಳು ಈಗಾಗಲೇ ತಲೆಗೆ ಹುಳವನ್ನು ಬಿಟ್ಟುಕೊಂಡು ರಿಯಲ್ ಸ್ಟಾರ್ ಮುಂದಿನ ಸಿನಿಮಾ ಯಾವುದು ಎಂದು ಗೆಸ್ ಮಾಡೋಕೆ ಪ್ರಾರಂಭಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತಾಗಿ ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲವಾಗಿ ನಿಮ್ಮನ್ನು ಅರ್ಥ ಮಾಡಿಕೊಳ್ಳಲು ಯಾರಿಂದನು ಆಗಲ್ಲ, ಊಹಿಸಬಹುದು ಅಷ್ಟೇ ಲೇಜೆಂಡ್, ನಾವು ಒಂದಾದರೆ ಸಮಾಜವನ್ನು ಬದಲಿಸಬಹುದು, ನಿಮ್ಮೊಳಗೆ ನಾನು, ಬಾಸ್ ಈಸ್ ಬ್ಯಾಕ್ ಎಂದು ಹೇಳುತ್ತಿದ್ದಾರೆ. ಇದನ್ನೂ ಓದಿ: 1 ಸಾಲಿನಲ್ಲಿ ಪ್ರಧಾನಿಗೆ ವಿಶ್ ಮಾಡಿದ ರಾಹುಲ್ ಗಾಂಧಿ

    ಕೆಲವರು ಉಪೇಂದ್ರ ಅವರ ಮುಂದಿನ ಸಿನಿಮಾ ಹೆಸರು ಉಪ್ಪಿ2 ಇರಬಹುದು ಎಂದಿದ್ದಾರೆ. ಕೆಲವರು ಈ ಹಿಂದೆ ಉಪೇಂದ್ರ ಸಿನಿಮಾದಲ್ಲಿ ನಾನು ನಾನು ಅಂದಿದ್ದರು. ಉಪ್ಪಿ 2ನಲ್ಲಿ ನೀನು ಅಂದಿದ್ದರು. ಇದೀಗ ಉಪೇಂದ್ರ ಯು ಮತ್ತು ಐ ಅನ್ನೋ ಟೈಟಲ್ ಇಟ್ಟು ನನ್ನೊಳಗಿನ ನೀನು ಎಂದು ಟೈಟಲ್ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

    ಅಭಿಮಾನಿಗಳ ಊಹೆಗಳನ್ನ ಟ್ವೀಟ್ ಮೂಲಕವಾಗಿ ಹಂಚಿಕೊಂಡಿರುವ ಉಪೇಂದ್ರ ಅವರು ಮಾತ್ರ ಜನ-ಅಸಾಮಾನ್ಯ ಎಂದು ಬರೆದುಕೊಂಡಿದ್ದಾರೆ. ರಿಯಲ್ ಸ್ಟಾರ್ ಎನನ್ನು ಹೇಳಲು ಹೊರಟಿದ್ದಾರೆ ಎನ್ನುವುದು ಕೂತುಹಲ ಮೂಡಿಸಿದೆ.

  • ಕಬಿನಿ ಫಾರೆಸ್ಟ್‌ನಲ್ಲಿ  ಗಣೇಶ್, ರಾಜೂಗೌಡ ಫ್ಯಾಮಿಲಿ ಟ್ರಿಪ್

    ಕಬಿನಿ ಫಾರೆಸ್ಟ್‌ನಲ್ಲಿ  ಗಣೇಶ್, ರಾಜೂಗೌಡ ಫ್ಯಾಮಿಲಿ ಟ್ರಿಪ್

    ಮೈಸೂರು: ಸ್ಯಾಂಡಲ್‍ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸುರಪುರ ಶಾಸಕ ರಾಜೂಗೌಡ ಅವರು ಫ್ಯಾಮಿಲಿ ಜೊತೆಗೆ ಹೆಚ್ ಡಿ ಕೋಟೆಯ ಸುತ್ತಮುತ್ತ ಪ್ರದೇಶಗಳಲ್ಲಿ ಜಾಲಿ ಟ್ರಿಪ್ ಮಾಡುತ್ತಿದ್ದಾರೆ.

    ಸಚಿವ ಸ್ಥಾನದಿಂದ ವಂಚಿತಗೊಂಡು ಮತ್ತು ಸಚಿವ ಆನಂದ್ ಸಿಂಗ್ ರಾಜೀನಾಮೆ ವಿಚಾರದಲ್ಲಿ ಸದಾ ಸುದ್ದಿಯಲ್ಲಿದ್ದ ಸುರಪುರ ಶಾಸಕ ಈಗ ಫ್ಯಾಮಿಲಿ ಜೊತೆಗೆ ಜಾಲಿ ಟ್ರಿಪ್‍ನಲ್ಲಿದ್ದಾರೆ. ಗಣೇಶ್ ಮತ್ತು ರಾಜೂಗೌಡರ ಕುಟುಂಬದ ಜೊತೆಗೆ ಸದ್ಯ ಎಂಜಾಯ್ಮೆಂಟ್ ಮೂಡ್‍ನಲ್ಲಿದ್ದಾರೆ. ಇದನ್ನೂ ಓದಿ: ಮತದಾರ ಪ್ರಭುಗಳ ಖುಣ ತೀರಿಸುವ ಕೆಲಸ ಮಾಡುತ್ತೇನೆ: ಮುನಿರತ್ನ

     

    View this post on Instagram

     

    A post shared by Ganesh (@goldenstar_ganesh)

    ಹೆಚ್ ಡಿ ಕೋಟೆ ಕಾನನ ಪ್ರದೇಶದಲ್ಲಿ ಚಾರಣ ಮಾಡುತ್ತಿರುವ ರಾಜೂಗೌಡರಿಗೆ, ಗಣೇಶ್ ಮತ್ತು ನಟ ರವಿಶಂಕರ್ ಜೊತೆಯಾಗಿದ್ದಾರೆ. ಮೊದಲಿಂದಲೂ ಸಿನಿಮಾ ಮಂದಿಜೊತೆಗೆ ಉತ್ತಮ ಒಡನಾಟ ಹೊಂದಿರುವ ರಾಜೂಗೌಡ ಒಂದೆರಡು ದಿನ ರಾಜಕೀಯ ಜಂಜಾಟ ಬಿಟ್ಟು ಕುಟುಂಬದವರ ಜೊತೆಗೆ ಕಾಲ ಕಳೆಯುತ್ತಿದ್ದಾರೆ. ಹೆಚ್ ಡಿ ಕೋಟೆ ಅರಣ್ಯ ಪ್ರದೇಶದಲ್ಲಿ ವನಮಹೋತ್ಸವ ಆಚರಣೆ ಮಾಡಿದ್ದಾರೆ. ಇದನ್ನೂ ಓದಿ: ಸಮಯ ಪ್ರಜ್ಞೆ ಮೆರೆದ KSRTC ಚಾಲಕ – 50ಕ್ಕೂ ಅಧಿಕ ಮಂದಿ ಪ್ರಯಾಣಿಕರು ಪಾರು

     

    View this post on Instagram

     

    A post shared by Ganesh (@goldenstar_ganesh)

    ಕಬಿನಿ ನದಿಯಲ್ಲಿ ಫ್ಯಾಮಿಲಿ ಜೊತೆಗೆ ಬೋಟ್‍ನಲ್ಲಿ ಕುಳಿತು ಎಂಜಾಯ್ ಮಾಡಿದ್ದಾರೆ. ಕಬಿನಿ ಫಾರೆಸ್ಟ್‌ನಲ್ಲಿ ಸಫಾರಿ ಹೋಗುವಾಗ ಗಣೇಶ್ ಅವರ ಕ್ಯಾಮೆರಾಗೆ ಚಿರತೆ ಸೆರೆ ಸಿಕ್ಕಿದೆ. ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಗಣೇಶ್ ಅವರು ಕುಟುಂಬದ ಜೊತೆಗೆ ಜಾಲಿ ಟ್ರಿಪ್ ಮಾಡುತ್ತಿರುವುದಾಗಿ ಬರೆದುಕೊಂಡಿದ್ದಾರೆ.

  • ಬಾಲಿವುಡ್ ನಟ ಗೋವಿಂದ್ ಸ್ಯಾಂಡಲ್‍ವುಡ್‍ಗೆ ಎಂಟ್ರಿ

    ಬಾಲಿವುಡ್ ನಟ ಗೋವಿಂದ್ ಸ್ಯಾಂಡಲ್‍ವುಡ್‍ಗೆ ಎಂಟ್ರಿ

    ಮುಂಬೈ: ಹಾಸ್ಯದ ಮೂಲಕವಾಗಿ ಮೋಡಿ ಮಾಡುವ ಬಾಲಿವುಡ್ ನಟ ಗೋವಿಂದ್ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡಲಿದ್ದಾರೆ.

    ಸದ್ಯ ಸ್ಯಾಂಡಲ್‍ವುಡ್‍ನಲ್ಲಿ ಪ್ರಜ್ವಲ್ ದೇವರಾಜ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈಚೆಗೆ ಅವರೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಅದರಲ್ಲಿ ಗೋವಿಂದ್ ಒಂದು ಮಹತ್ವದ ಪಾತ್ರ ಮಾಡೋದು ಖಚಿತ ಎನ್ನಲಾಗುತ್ತಿದೆ. ಕಿರಣ್ ವಿಶ್ವನಾಥ್ ಎಂಬ ಹೊಸ ಪ್ರತಿಭೆ ಇದರ ನಿರ್ದೇಶಕರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಿರಣ್, ನಾವು ಗೋವಿಂದ್ ಅವರೊಂದಿಗೆ ಮಾತುಕತೆ ಮಾಡುತ್ತಿರುವುದು ನಿಜ. ನಮ್ಮ ನಿರ್ಮಾಪಕ ನವೀನ್ ಕುಮಾರ್ ಅವರು ಈಗಾಗಲೇ ಹಲವು ಸುತ್ತಿನ ಚರ್ಚೆ ಮಾಡಿದ್ದಾರೆ. ಅಧಿಕೃತ ಒಪ್ಪಿಗೆ ಸಿಗುವುದು ಬಾಕಿ ಇದೆ. ಎಲ್ಲವೂ ಅಂತಿಮಗೊಂಡ ಮೇಲೆ ಅಧಿಕೃತವಾಗಿ ಘೋಷಣೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

    ಡಾ. ರಾಜ್‍ಕುಮಾರ್ ಅವರಿಗೆ ಗೋವಿಂದ್ ದೊಡ್ಡ ಅಭಿಮಾನಿ ಎಂಬುದು ಗೊತ್ತಿರುವ ವಿಷಯ. ಒಮ್ಮೆ ರಿಯಾಲಿಟಿ ಶೋವೊಂದರಲ್ಲಿ ಡಾ. ರಾಜ್ ನಟಿಸಿದ್ದ ಎರಡು ಕನಸು ಸಿನಿಮಾದ ಎಂದೆಂದೂ ನಿನ್ನನು ಮರೆತು ಬದುಕಿರಲಾರೆ.. ಹಾಡನ್ನು ಹಾಡಿದ್ದರು. ಅದು ಸಖತ್ ವೈರಲ್ ಆಗಿತ್ತು. ಅಲ್ಲದೆ ಆಗಾಗ ಅವರು ಕರ್ನಾಟಕಕ್ಕೆ ಬಂದುಹೋಗುತ್ತಿರುತ್ತಾರಂತೆ. ಇದೀಗ ಅವರೊಂದು ಕನ್ನಡ ಸಿನಿಮಾದಲ್ಲಿ ನಟಿಸುವ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಇದನ್ನೂ ಓದಿ: ರಾಯನ್ ರಾಜ್ ಸರ್ಜಾಗೆ ದೇವರು ಪ್ರಪಂಚದ ಪ್ರತಿಯೊಂದು ಸಂತೋಷವನ್ನು ನೀಡಲಿ: ಸುಮಲತಾ

    ಬಾಲಿವುಡ್‍ನಲ್ಲಿ ತಮ್ಮ ಹಾಸ್ಯದಿಂದಲೇ ಜನಪ್ರಿಯತೆ ಗಿಟ್ಟಿಸಿಕೊಂಡಿರುವ ನಟ ಗೋವಿಂದ್. 1986ರಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಗೋವಿಂದ್, ಇಂದಿಗೂ ಬೇಡಿಕೆಯನ್ನು ಉಳಿಸಿಕೊಂಡಿದ್ದಾರೆ. ತಮ್ಮ ಸುದೀರ್ಘ 35 ವರ್ಷಗಳ ಚಿತ್ರ ಬದುಕಿನಲ್ಲಿ ಒಂದು ತಮಿಳು ಮತ್ತು ಒಂದು ಬಂಗಾಳಿ ಬಿಟ್ಟರೆ, ಮಿಕ್ಕೆಲ್ಲ ಸಿನಿಮಾಗಳು ಹಿಂದಿಯಲ್ಲೇ ಮಾಡಿದ್ದಾರೆ. ಇದೀಗ ಮೊದಲ ಬಾರಿಗೆ ಗೋವಿಂದ ಕನ್ನಡಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

  • ಕುರಿಗಾಯಿ ಜೊತೆಗೆ ಕುಳಿತು ಊಟ ಮಾಡಿದ ನಟ ಪುನೀತ್

    ಕುರಿಗಾಯಿ ಜೊತೆಗೆ ಕುಳಿತು ಊಟ ಮಾಡಿದ ನಟ ಪುನೀತ್

    ಕೊಪ್ಪಳ: ಸಾಕಷ್ಟು ಅಭಿಮಾನಿಗಳ ಮನಸ್ಸನ್ನು ಗೆದ್ದಿರುವ ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಸಾಮಾನ್ಯರಂತೆ ಜಮೀನಲ್ಲಿ ಕುರಿಗಾಯಿ ಹಾಕಿರುವ ಹಟ್ಟಿಯಲ್ಲಿ ಕುಳಿತು ಊಟ ಮಾಡಿದ್ದಾರೆ.

    ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಆಗಮಿಸಿದ ಪುನೀತ್ ರಾಜ್‍ಕುಮಾರ್ ಅವರು ಬೆಟ್ಟ ಬಂದ್ ಇರುವುದರಿಂದ ಗಂಗಾವತಿ ಸಮೀಪದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಸ್ಥಳೀಯ ಪ್ರವಾಸಿ ಸ್ಥಳಗಳಾದ ಋಷಿಮುಖ ಪರ್ವತ, ಸಣಾಪೂರ, ಬಂಡಿ ಹಲಾಪೂರ, ನಾರಾಯಣ ಪೇಟೆ ಊರುಗಳಿಗೆ ಭೇಟಿಯನ್ನು ನೀಡಿದ್ದಾರೆ. ಇದನ್ನೂ ಓದಿ: ಸಕ್ರೆಬೈಲು ಆನೆ ಬಿಡಾರದಲ್ಲಿ ಡಾಕ್ಯುಮೆಂಟರಿ ಶೂಟಿಂಗ್‍ನಲ್ಲಿ ಪವರ್ ಸ್ಟಾರ್

    ಗಂಗಾವತಿ ಸುತ್ತಾಟ ನಡೆಸಿ ವಿಜಯನಗರಕ್ಕೆ ಹೋಗುವ ವೇಳೆಯಲ್ಲಿ ದಾರಿಯ ಜಮೀನಿನಲ್ಲಿ ಕುರಿಗಾಯಿ ಹಾಕಿರುವ ಕುರಿ ಹಟ್ಟಿಗೆ ಭೇಟಿಯನ್ನು ನೀಡಿದ್ದಾರೆ. ಕುರಿಗಾಯಿ ಜೊತೆ ಮಾತುಕತೆ ನಡೆಸಿದ್ದಾರೆ. ಪುನೀತ್ ರಾಜ್‍ಕುಮಾರ್ ಅವರು ಅವರ ಕಂಬಳಿ ಮೇಲೆ ಕುಳಿತು, ಕುರಿಗಾಯಿ ಊಟ ಮಾಡುವ ಊಟ ಮಾಡಿ ಸರಳತೆಯನ್ನು ಮೆರೆದಿದ್ದಾರೆ. ಇದನ್ನೂ ಓದಿ: ರಾಯನ್ ರಾಜ್ ಸರ್ಜಾಗೆ ದೇವರು ಪ್ರಪಂಚದ ಪ್ರತಿಯೊಂದು ಸಂತೋಷವನ್ನು ನೀಡಲಿ: ಸುಮಲತಾ

    ಕುರಿಗಾಯಿ ಮಕ್ಕಳ ಹಾಗೂ ಕುರಿಗಾಯಿ ಜೊತೆಗೆ ತಮ್ಮ ಐಶಾರಾಮಿ ಕಾರಿನ ಮುಂದೆ ನಿಂತುಕೊಂಡು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಆನೆಗೊಂದಿ ಸಮೀಪದ ಐತಿಹಾಸಿಕ ಸ್ಥಳಗಳ ವಿಕ್ಷಣೆಗೆ ಕುತೂಹಲ ಹೊಂದಿದ್ದ ಪುನೀತ್ ರಾಜ್‍ಕುಮಾರ್ ಅವರು ಸಮೀಪದ ಸಣಾಪೂರ ಕೆರೆ, ಸಣಾಪೂರ ಪಾಲ್ಸ್, ಕಲ್ಲಿನ ಸೇತುವೆ ಸೇರಿದಂತೆ ಇತರ ಸ್ಥಳಗಳನ್ನು ವಿಕ್ಷಣೆಯನ್ನು ಮಾಡಿದರು. ನಂತರ ಸ್ಥಳೀಯ ಜನರು ಹಾಗೂ ಪುನೀತ್ ಅವರ ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಪಟ್ಟರು. ಅಷ್ಟೇ ಅಲ್ಲದೆ ಸ್ಥಳೀಯ ಕಲಾವಿದರೊಂದಿಗೆ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾದರು.

  • ಚಂದನ್ ಕುಮಾರ್ ಫಿಟ್ನೆಸ್‍ಗೆ ಫ್ಯಾನ್ಸ್ ಫಿದಾ

    ಚಂದನ್ ಕುಮಾರ್ ಫಿಟ್ನೆಸ್‍ಗೆ ಫ್ಯಾನ್ಸ್ ಫಿದಾ

    ಬೆಂಗಳೂರು: ಕೇವಲ 2 ತಿಂಗಳಲ್ಲಿ ಸ್ಯಾಂಡಲ್‍ವುಡ್ ನಟ ಚಂದನ್ ಕುಮಾರ್ ದೇಹದ ಟ್ರಾನ್ಸ್​ಫಾರ್ಮೇಷನ್​ ನೋಡಿ ಫ್ಯಾನ್ಸ್ ಅಚ್ಚರಿಗೊಂಡಿದ್ದಾರೆ.

    ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಅನೇಕರು ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದ್ದರಿಂದ ಫಿಟ್ನೆಸ್ ಕಳೆದುಕೊಂಡಿದ್ದಾರೆ. ಇದರಲ್ಲಿ ಚಂದನ್ ಕುಮಾರ್ ಕೂಡ ಒಬ್ಬರು. ಆದರೆ ಕೇವಲ ಎರಡೇ ತಿಂಗಳಲ್ಲಿ ಅವರ ದೇಹದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

    ಜೂನ್ 21ರ ಫೋಟೋದಲ್ಲಿ ಚಂದನ್‍ಗೆ ಹೊಟ್ಟೆ ಬಂದಿತ್ತು. ಆದರೆ ಆಗಸ್ಟ್ 26ರ ಫೋಟೋದಲ್ಲಿ ಅವರು ಸಖತ್ ಫಿಟ್ ಆಗಿದ್ದಾರೆ. ಈ ಫೋಟೋ ನೋಡಿದ ಫ್ಯಾನ್ಸ್ ಅಚ್ಚರಿ ಹೊರ ಹಾಕಿದ್ದಾರೆ. ಇನ್ನೂ ಕೆಲವರು ನೀವೇ ನಮಗೆ ಸ್ಫೂರ್ತಿ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ. ಇದನ್ನೂ ಓದಿ:  ಮಹಿಳೆಯರ ವಿರುದ್ಧದ ಅಪರಾಧಗಳತ್ತ ಕಣ್ಣು ಮುಚ್ಚಬೇಡಿ, ಮಾತನಾಡಿ: ರಮ್ಯಾ

    ಚಂದನ್ ಕುಮಾರ್ ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಕೊರೊನಾ ಎರಡನೇ ಅಲೆ ಬರುವುದಕ್ಕೂ ಕೆಲ ತಿಂಗಳ ಮೊದಲು ಅವರ ಮದುವೆ ನಿಗದಿ ಆದ ಕಾರಣ ನಟನೆಯಿಂದ ಒಂದು ಬ್ರೇಕ್ ತೆಗೆದುಕೊಂಡರು. ಈ ಕಾರಣಕ್ಕೆ ತೆಲುಗು ಧಾರಾವಾಹಿಯಿಂದ ಹೊರ ಬಂದರು. ಹೀಗಾಗಿ ಚಂದನ್ ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿತ್ತು. ಅಲ್ಲದೆ ಅವರಿಗೆ ಜಿಮ್‍ಗೆ ತೆರಳೋಕು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ದೇಹ ಶೇಪ್ ಕಳೆದುಕೊಂಡಿತ್ತು. ಆದರೆ ಸತತ ಎರಡು ತಿಂಗಳು ಜಿಮ್‍ನಲ್ಲಿ ಬೆವರು ಹರಿಸಿದ್ದಾರೆ. ಈ ಮೂಲಕ ಅವರ ಬಾಡಿಯನ್ನು ಕರಗಿಸಿದ್ದಾರೆ.

  • ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇಗೌಡಗೆ ಅಪಘಾತ- ಪ್ರಾಣಾಪಾಯದಿಂದ ಪಾರು

    ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇಗೌಡಗೆ ಅಪಘಾತ- ಪ್ರಾಣಾಪಾಯದಿಂದ ಪಾರು

    ಬೆಂಗಳೂರು: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡ ಅಪಘಾತಕ್ಕೀಡಾಗಿದ್ದಾರೆ. ನಿನ್ನೆ ಸಂಜೆ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.

    ನಿನ್ನೆ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡ ಅವರು, ಯೋಗರಾಜ್ ಭಟ್ ಅವರ ಸಿನಿಮಾದ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಟ ಗೋವಿಂದೇಗೌಡ ಅವರಿಗೆ ಅಪಘಾತ ಉಂಟಾಗಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೂಲಗಳ ಪ್ರಕಾರ ನಟ ಗೋವಿಂದೇಗೌಡ ಅವರಿಗೆ ಚಿತ್ರೀಕರಣದ ಸಂದರ್ಭದಲ್ಲಿ ಕಾರಿನ ಸಾಹಸ ದೃಶ್ಯದ ಶೂಟಿಂಗ್ ವೇಳೆಯಲ್ಲಿ ಹೊಟ್ಟೆಗೆ ಪೆಟ್ಟು ಬಿದ್ದಿರೋದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ ಕಾರಣದಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

    ಈ ಬಗ್ಗೆ ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್, ಕಾಮಿಡಿಕಿಲಾಡಿ ನಟ ಜಿಜಿ ಗೋವಿಂದೇಗೌಡನಿಗೆ ಚಿತ್ರೀಕರಣ ಸಮಯದಲ್ಲಿ ಅಪಘಾತವಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ. ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ ಎಂದು ತಿಳಿಸಿದ್ದಾರೆ.

    ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ ಯೋಗರಾಜ್ ಭಟ್, ಒಂದು ಚಿಕ್ಕ ಅಪಘಾತವಾಗಿದೆ. ಗೋವಿಂದೇಗೌಡ ಅರಾಮಾಗಿದ್ದಾರೆ. ಚಿಕಿತ್ಸೆ ಬಳಿಕ ಮತ್ತೆ ಅವರು ಚಿತ್ರೀಕರಣಕ್ಕೆ ಮರಳಿದ್ದಾರೆ. ಈಗಷ್ಟೇ ನಾವೆಲ್ಲರೂ ಚಿತ್ರೀಕರಣ ಮುಗಿಸಿ ವಾಪಾಸ್ ಬಂದಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ.

    ಈ ಸಂಬಂಧ ನಟ ಜಗ್ಗೇಶ್ ಕೂಡ ಟ್ವೀಟ್ ಮಾಡಿದ್ದು, ಈಗ ತಾನೆ ಗೋವಿಂದೇಗೌಡನನ್ನ ಭೇಟಿ ಮಾಡಿದೆ. ರಾಯರ ಆಶೀರ್ವಾದದಿಂದ ಕ್ಷೇಮವಾಗಿದ್ದಾನೆ. ನಾನು, ಭಟ್ರು ಮತ್ತು ಶರಣ ಜೊತೆಗಿದ್ದೇವೆ. ನಿಮ್ಮ ಹಾರೈಕೆಯಿರಲಿ ಎಂದು ಟ್ವೀಟ್ ಮಾಡಿದ್ದಾರೆ.

  • ಬದುಕಿನ ಬಂಡಿ ಸಾಗಿಸಲು ರಸ್ತೆ ಬದಿ ಮೀನು ಮಾರಾಟಕ್ಕಿಳಿದ ಜನಪ್ರಿಯ ಕಿರುತೆರೆ ನಟ

    ಬದುಕಿನ ಬಂಡಿ ಸಾಗಿಸಲು ರಸ್ತೆ ಬದಿ ಮೀನು ಮಾರಾಟಕ್ಕಿಳಿದ ಜನಪ್ರಿಯ ಕಿರುತೆರೆ ನಟ

    ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿತ್ತು. ಇದು ಅನೇಕ ಮಂದಿಯ ಬಾಳನ್ನು ಕಸಿಯಿತು. ತುತ್ತಿನ ಅನ್ನಕ್ಕೂ ಜನ ಪರದಾಡುವಂತಾಗಿತ್ತು. ಅಂತೆಯೇ ಬೆಂಗಾಳಿ ಕಿರುತೆರೆ ನಟರೊಬ್ಬರು ತಮ್ಮ ಬದುಕಿನ ಬಂಡಿ ಓಡಿಸಲು ಮೀನು ಮಾರಾಟಕ್ಕಿಳಿದಿದ್ದಾರೆ.

    ಹೌದು. ಕಿರುತೆರೆ ಲೋಕದಲ್ಲಿ ಜನಪ್ರಿಯ ನಟನಾಗಿ ಗುರುತಿಸಿಕೊಂಡಿರುವ ಅರಿಂದರ್ ಪ್ರಮಣಿಕ್‍ಗೆ ರಸ್ತೆ ಬದಿ ಮೀನು ಮಾರಾಟ ಮಾಡಿ ಜೀವನ ಸಾಗಿಸುವ ಪರಿಸ್ಥಿತಿ ಬಂದೊದಗಿದೆ. ನಟನ ಈ ಸ್ಥಿತಿಗೆ ಕಲಾಭಿಮಾನಿಗಳು ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂದು ಗಣಿಗಾರಿಕೆ ಪ್ರದೇಶಕ್ಕೆ ಸಂಸದೆ ಸುಮಲತಾ ಅಂಬರೀಶ್ ಭೇಟಿ

    ಈ ಸಂಬಂಧ ಪ್ರತಿಕ್ರಿಯಿಸಿರುವ ನಟ, ನನ್ನ ತಂದೆ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಆಗ ನಾನು ಜನಪ್ರಿಯ ನಟನಾಗಬೇಕೆಂಬ ಕನಸು ಕಂಡಿದ್ದೆ. ಹೀಗೆ ನಟನೆಗೆ ಇಳಿದೆ. ನಾನು ನಟನೆ ಮಾಡಲು ಆರಂಭಿಸುತ್ತಿದ್ದಂತೆಯೇ ನಮ್ಮ ತಂದೆ ತರಕಾರಿ ಮಾರಾಟ ಮಾಡುವುದುನ್ನು ನಿಲ್ಲಿಸಿದ್ದರು. ಆದರೆ ಇದೀಗ ಕೊರೊನಾದಿಂದ ನನಗೂ ಕೆಲಸ ಸಿಗುತ್ತಿಲ್ಲ. ಇತ್ತ ಕುಟುಂಬವೂ ತೀವ್ರ ಸಂಕಷ್ಟಕ್ಕೀಡಾಯಿತು. ಹೀಗಾಗಿ ನನ್ನ ಕುಟುಂಬ ನೋಡಿಕೊಳ್ಳಲು ನಾನು ಮೀನು ಮರಾಟಕ್ಕೆ ಇಳಿದೆ ಎಂದು ತಿಳಿಸಿದ್ದಾರೆ.

    ಅಲ್ಲದೆ ಬೀದಿಯಲ್ಲಿ ಕುಳಿತು ಮೀನು ಮಾರಾಟ ಮಾಡುವುದು ಸುಲಭದ ಕೆಲಸವಲ್ಲ. ಆದರೆ ಜೀವನ ನಡೆಸಬೇಕೆಂದರೆ ಇದನ್ನು ಮಾಡಲೇಬೇಕಿತ್ತು, ನನಗೆ ಬೇರೆ ದಾರಿ ಇರಲಿಲ್ಲ ಎಂದು ಪ್ರಮಣಿಕ್ ತಮ್ಮ ಪರಿಸ್ಥಿತಿ ನೆನೆದು ಕಣ್ಣೀರಾದರು.  ಇದನ್ನೂ ಓದಿ: ಮಾಜಿ ಸಿಎಂ ಪದ ಬಳಕೆ ತಪ್ಪು, ಕೆಲಸವನ್ನ ಟೀಕಿಸಲಿ: ಶಾಸಕಿ ಪೂರ್ಣಿಮಾ

    ಪ್ರಮಣಿಕ್ ಅವರು ತಾವು ಪ್ರಥಮ ಪಿಯುಸಿ ಓದುತ್ತಿದ್ದಾಗಲೇ ನಟನೆ ಮೇಲೆ ಆಸಕ್ತಿ ಬೆಳೆಸಿಕೊಂಡಿದ್ದರು. ನಾಟಕಕಾರ ಹಾಗೂ ನಿರ್ದೇಶಕ ಚಂದನ್ ಸೇನ್ ಅವರ ತಂಡ ಸೇರಿ ನಾಟಕಗಳಲ್ಲಿ ನಟಿಸಲು ಆರಂಭಿಸಿದರು. ನಂತರ ಅಲ್ಲಿಂದ ಧಾರಾವಾಹಿ ಲೋಕಕ್ಕೆ ಪ್ರವೇಶಿಸಿದ್ದು, ಅನನ್ಯ ಚಟರ್ಜಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಸುಬರ್ನಲತಾ’ ಧಾರಾವಾಹಿ ಸೇರಿದಂತೆ ಬೆಂಗಾಳಿಯ ಹಲವು ಧಾರಾವಾಹಿಗಳಲ್ಲಿ ಅರಿಂದಮ್ ಪ್ರಮಣಿಕ್ ನಟಿಸಿ ಮನೆ ಮಾತಾಗಿದ್ದರು.

  • ವಿಜಯ ಕುಮಾರ್ ಮುಂದೆ ‘ಸಂಚಾರಿ’ ಬಂದಿದ್ದು ಹೇಗೆ?

    ವಿಜಯ ಕುಮಾರ್ ಮುಂದೆ ‘ಸಂಚಾರಿ’ ಬಂದಿದ್ದು ಹೇಗೆ?

    ಬೆಂಗಳೂರು: ಅದ್ಭುತ ನಟನೆ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಎಲ್ಲರ ಗಮನ ಸೆಳೆದ ನಟ ಸಂಚಾರಿ ವಿಜಯ್ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರು ಜೀವನದುದ್ದಕ್ಕೂ ನಡೆದ ಬಂದಿರು ಹಾದಿಯನ್ನು ಗಮನಿಸಿದರೆ ಅವರು ಪಟ್ಟ ಶ್ರಮ ಎಷ್ಟಿದೆ ಎನ್ನುವುದು ಅನಾವರಣಗೊಳ್ಳುತ್ತದೆ.

    ವಿಜಯ್ 37ನೇ ವಯಸ್ಸಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಟನೆ ಹಾಗೂ ಸಮಾಜಮುಖಿ ಕೆಲಸ ಎರಡರಲ್ಲೂ ಸೈ ಎನ್ನಿಸಿಕೊಂಡಿದ್ದ ಅವರ ಅಕಾಲಿಕ ವಿದಾಯ ಎಲ್ಲರಲ್ಲೂ ಶೋಕ ಮಡುಗಟ್ಟುವಂತೆ ಮಾಡಿದೆ. ಇವರ ನಿಧನಕ್ಕೆ ಚಿತ್ರರಂಗ, ಅಭಿಮಾನಿಗಳು, ಗಣ್ಯರು ಕಂಬನಿಯನ್ನು ಮಿಡಿದಿದ್ದಾರೆ. ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ

    1983 ಜುಲೈ 18ರಂದು ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ವಿಜಯ್ ಅವರ ಮೂಲ ಹೆಸರು ವಿಜಯ್ ಕುಮಾರ್ ಬಿ. ಸಣ್ಣ ವಯಸ್ಸಿನಿಂದಲೇ ನಟನೆ ಬಗ್ಗೆ ಆಸಕ್ತಿ ಹೊಂದಿದ್ದ ವಿಜಯ್ ರಂಗಭೂಮಿಯಲ್ಲಿ ಪಳಗಿದರು. ಇವರು ಸಂಚಾರಿ ಹೆಸರಿನ ಥಿಯೇಟರ್ ಗ್ರೂಪ್‍ನಿಂದ ಬಂದ ಕಾರಣ ಸ್ಯಾಂಡಲ್‍ವುಡ್‍ನನಲ್ಲಿ ವಿಜಯ್ ಮುಂದೆ ‘ಸಂಚಾರಿ’ ಬಂತು. ನಂತರ ‘ಸಂಚಾರಿ ವಿಜಯ್’ ಪ್ರಖ್ಯಾತವಾಯ್ತು. ಇದನ್ನೂ ಓದಿ: ಲಾಕ್‍ಡೌನ್ ಮೊದಲು ಮಾತನಾಡಿದ್ದೆ, ಈಗ ಆಘಾತಗೊಂಡಿದ್ದೇನೆ: ಸುದೀಪ್

    ಚಿತ್ರರಂಗದಲ್ಲಿ ಅದೃಷ್ಟಪರೀಕ್ಷೆಗೆ ಸಾಕಷ್ಟು ಜನರು ಮುಂದಾಗುತ್ತಾರೆ. ಆದರೆ, ಎಲ್ಲರಿಗೂ ಯಶಸ್ಸು ಸಿಗೋದಿಲ್ಲ. ಆದರೆ, ಸಂಚಾರಿ ವಿಜಯ್‍ಗೆ ನಟನಾ ಕಲೆ ಅದ್ಭುತವಾಗಿ ಒಲಿದಿತ್ತು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಸುಲಲಿತವಾಗಿ ನಿಭಾಯಿಸುತ್ತಿದ್ದರು. ತಾವು ಸೆಲೆಬ್ರಿಟಿ ಎನ್ನುವ ಯಾವುದೇ ಅಹಂ ಅವರಲ್ಲಿ ಎಂದಿಗೂ ಇರಲಿಲ್ಲ. ಕೊರೊನಾ ಸಂದರ್ಭದಲ್ಲಿ ಸಂಚಾರಿ ವಿಜಯ್ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದರು. ಈ ಹಿಂದೆ ಕೂಡಾ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ವಿಜಯ್ ಇದೇ ಕಾರಣಕ್ಕಾಗಿ ಬಣ್ಣದ ಲೋಕದಾಚೆಗೂ ಅಭಿಮಾನಿಗಳನ್ನು ಹೊಂದಿದ್ದರು. ಇದನ್ನೂ ಓದಿ: ಮತ್ತೆ ಹುಟ್ಟಿ ಬಾ ಗೆಳೆಯ ಎಂದ ಸ್ಯಾಂಡಲ್‍ವುಡ್

    2011ರಲ್ಲಿ ತೆರೆಗೆ ಬಂದ ರಂಗಪ್ಪ ಹೋಗ್ಬಿಟ್ಟಾ ಸಿನಿಮಾ ಸಂಚಾರಿ ವಿಜಯ್ ಅವರ ಮೊದಲ ಸಿನಿಮಾ. ರಮೇಶ್ ಅರವಿಂದ್ ಅಭಿನಯಿಸಿದ ಈ ಚಿತ್ರದಲ್ಲಿ ನೀನಾಸಂ ಸತೀಶ್, ಮೊದಲಾದವರು ನಟಿಸಿದ್ದರು. ಈ ಚಿತ್ರದಲ್ಲಿ ಸಂಚಾರಿ ವಿಜಯ್ ಕೂಡ ಕಾಣಿಸಿಕೊಂಡಿದ್ದರು. ಅದೇ ವರ್ಷ ತೆರೆಗೆ ಬಂದ ರಾಮ ರಾಮ ರಘು ರಾಮ ಚಿತ್ರದಲ್ಲಿ ವಿಜಯ್ ನಟಿಸಿದರು. 2013ರಲ್ಲಿ ಪ್ರೇಮ್ ನಟನೆಯ ದಾಸ್ವಾಳ ಚಿತ್ರದಲ್ಲಿ ಪಾತ್ರ ಒಂದನ್ನು ನಿರ್ವಹಿಸಿದ್ದರು. 2014ರಲ್ಲಿ ಬಂದ ಹರಿವು ಚಿತ್ರದಲ್ಲಿ ಸಂಚಾರಿ ಮೊದಲ ಬಾರಿಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರು. ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಇದನ್ನೂ ಓದಿ: ನಟ ಸಂಚಾರಿ ವಿಜಯ್ ನಿಧನಕ್ಕೆ ಸಿಎಂ ಸಂತಾಪ

     

    2015ರಲ್ಲಿ ತೆರೆಗೆ ಬಂದ ಅವರ ನಟನೆಯ ನಾನು ಅವನಲ್ಲ ಅವಳು ಸಿನಿಮಾ ಸಂಚಾರಿ ವಿಜಯ್ ಅವರ ವೃತ್ತಿ ಜೀವನವನ್ನೇ ಬದಲಾಯಿಸಿತು. ಈ ಚಿತ್ರದಲ್ಲಿ ಅವರ ಅದ್ಭುತ ನಟನೆಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳು ಸಿಕ್ಕವು. ಈ ಚಿತ್ರ ತೆರೆಕಂಡ ನಂತರ ಅವರಿಗೆ ಅವಕಾಶಗಳು ತೀವ್ರವಾಗಿ ಹೆಚ್ಚಿದವು. 2017 ಮತ್ತು 2018ರಲ್ಲಿ ಅವರ ನಟನೆಯ 8-9 ಚಿತ್ರಗಳು ತೆರೆಗೆ ಬಂದವು. ಆ್ಯಕ್ಟ್ 1978 ಅವರ ಕೊನೆಯ ಚಿತ್ರವಾಗಿದೆ. ವಿಜಯ್ ಸಿನಿಮಾ ಮಾತ್ರವಲ್ಲದೇ ಅನೇಕ ಸಾಮಾಜಿಕ ಕಾರ್ಯಗಳ ಮೂಲಕವಾಗಿಯೂ ತಮ್ಮನ್ನೂ ತಾವು ಗುರುತಿಸಿಕೊಮಡಿದ್ದರು. ಇದೀಗ ಅವರ ಅಗಲಿಕೆ ಸ್ಯಾಂಡಲ್‍ವುಡ್‍ಗೆ ತುಂಬಲಾರದ ನಷ್ಟವಾಗಿದೆ.