Tag: actress jyothi

  • ನಾಗಾರಾಧನೆ ವೇಳೆ ಭಾವೋದ್ವೇಗಕ್ಕೆ ಒಳಗಾದ ಹಿರಿಯ ನಟಿ ಜ್ಯೋತಿ

    ನಾಗಾರಾಧನೆ ವೇಳೆ ಭಾವೋದ್ವೇಗಕ್ಕೆ ಒಳಗಾದ ಹಿರಿಯ ನಟಿ ಜ್ಯೋತಿ

    ಸ್ಯಾಂಡಲ್‌ವುಡ್ ಏಳಿಗೆಗಾಗಿ ಇಂದು (ಆ.14) ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಸಿನಿ ಕಲಾವಿದರ ದಂಡೇ ಪೂಜೆ ಕಾರ್ಯದಲ್ಲಿ ಭಾಗಿಯಾಗಿದ್ದು, ನಾಗಾರಾಧನೆ ವೇಳೆ ಹಿರಿಯ ನಟಿ ಜ್ಯೋತಿ (Actress Jyothi) ಭಾವೋದ್ವೇಗಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಇದನ್ನೂ ಓದಿ:ಚಿತ್ರರಂಗದ ಏಳಿಗೆಗಾಗಿ ಪೂಜೆ- ಊಟಕ್ಕೆ ಕುತ್ತು ಬಂದಾಗ ದೇವರ ಮೊರೆ ಹೋಗುತ್ತೀವಿ ಎಂದ ನೆನಪಿರಲಿ ಪ್ರೇಮ್

    ನಾಗಾರಾಧನೆ ನಡೆಯುತ್ತಿದ್ದ ವೇಳೆ, ನಟಿ ಜ್ಯೋತಿ ಭಾವೋದ್ವೇಗಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರಿಗೆ ಕುಡಿಯಲು ನೀರು ಕೊಟ್ಟು ಸಮಾಧಾನಪಡಿಸಿದ್ದಾರೆ. ಈ ಘಟನೆ ನೋಡಿ ಎಲ್ಲರೂ ಅಚ್ಚರಿಪಟ್ಟಿದ್ದಾರೆ.

    ಅಂದಹಾಗೆ, ರಾಕ್‌ಲೈನ್ ವೆಂಕಟೇಶ್ ನೇತೃತ್ವದಲ್ಲಿ ಈ ಪೂಜೆ ನಡೆಯುತ್ತಿದ್ದು, ಹಿರಿಯ ನಟಿ ಗಿರಿಜಾ ಲೋಕೇಶ್, ಜಗ್ಗೇಶ್, ಶರಣ್, ಲವ್ಲಿ ಸ್ಟಾರ್ ಪ್ರೇಮ್, ನಟಿ ರಾಗಿಣಿ ದ್ವಿವೇದಿ, ಅಭಿಷೇಕ್ ಅಂಬರೀಶ್, ಗುರುಕಿರಣ್, ಪದ್ಮಜಾ ರಾವ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.