Tag: actress Ramya

  • ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌

    ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌

    – ಮೈಸೂರಲ್ಲಿ ರಾಜಾರೋಷವಾಗಿ ಮಾದಕವಸ್ತು ತಯಾರಿಸ್ತಿದ್ರು ಅನ್ನೋದೇ ಆತಂಕ: ಸಚಿವ

    ಬೆಂಗಳೂರು: ದರ್ಶನ್‌ ಫ್ಯಾನ್ಸ್‌ Vs ಮೋಹಕ ತಾರೆ ರಮ್ಯಾ ನಡುವಿನ ಜಟಾಪಟಿ ಬಗ್ಗೆ ಗೃಹ ಸಚಿವ ಪರಮೇಶ್ವರ್‌ (G Parameshwar) ಪ್ರತಿಕ್ರಿಯಿಸಿದ್ದಾರೆ. ನಟಿ ರಮ್ಯಾ ದೂರು ಕೊಟ್ಟರೆ, ಪೊಲೀಸರು ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

    ಹೌದು. ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಫ್ಯಾನ್ಸ್ (Darshan Fans) ವಿರುದ್ಧ ಸ್ಯಾಂಡಲ್‌ವುಡ್ ಕ್ವೀನ್, ನಟಿ ರಮ್ಯಾ (Ramya) ಗರಂ ಆಗಿದ್ದಾರೆ. ಕೊಲೆಯಾಗಿರುವ ರೇಣುಕಾಸ್ವಾಮಿ ಕುಟುಂಬದ ಪರ ರಮ್ಯಾ ನಿಂತಿರುವುದು ದರ್ಶನ್ ಫ್ಯಾನ್ಸ್ ಕೋಪಕ್ಕೆ ಕಾರಣವಾಗಿದೆ. ಹಾಗಾಗಿ ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ ದರ್ಶನ್ ಅಭಿಮಾನಿಗಳು. ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ಕಳುಹಿಸುತ್ತಿರುವ ಅಶ್ಲೀಲ ಮೆಸೇಜ್‌ಗಳನ್ನು ತಮ್ಮದೇ ಸೋಷಿಯಲ್ ಮೀಡಿಯಾ ಅಕೌಂಟ್‌ನಲ್ಲಿ ಪೋಸ್ಟ್ ಕೂಡ ಮಾಡಿದ್ದಾರೆ ರಮ್ಯಾ. ಫೇಕ್‌ ಪ್ರೊಫೈಲ್‌ ಕ್ರಿಯೇಟ್‌ ಮಾಡಿ ಕಾಮೆಂಟ್‌ ಮಾಡಿದವರ ವಿರುದ್ಧ ದೂರು ಕೊಡಲು ನಟಿ ತಯಾರಿ ನಡೆಸುತ್ತಿದ್ದಾರೆ.

    ಈ ನಡುವೆ ಪ್ರತಿಕ್ರಿಯಿಸಿರುವ ಗೃಹಸಚಿವ ಜಿ. ಪರಮೇಶ್ವರ್‌, ನಟಿ ದೂರು ಕೊಟ್ಟರೆ, ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಅಲ್ಲದೇ ನಮ್ಮಲ್ಲಿ ಕೆಲವು ಪ್ರಕರಣದಲ್ಲಿ ಸ್ವಯಂಪ್ರೇರಿತ ತಗೋತಾರೆ. ಆಥರ ಏನಾದ್ರೂ ಅವಕಾಶ ಇದ್ರೆ ಪೊಲೀಸರು ಪರಿಶೀಲನೆ ಮಾಡ್ತಾರೆ ಅಂತಲೂ ಹೇಳಿದ್ದಾರೆ.

    ರಾಜಾರೋಷವಾಗಿ ಡ್ರಗ್ಸ್ ತಯಾರಿಸ್ತಿದ್ರು ಅನ್ನೋದು ಆತಂಕ
    ಇನ್ನೂ ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇದರ ಸಂಪೂರ್ಣ ಮಾಹಿತಿ ಇನ್ನೂ ಬರಬೇಕು. ರಾಜಾರೋಷವಾಗಿ ಇಲ್ಲಿ ಡ್ರಗ್ಸ್ ತಯಾರಿಸ್ತಿದ್ರು ಅನ್ನೋದು ಆತಂಕದ ವಿಚಾರ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಮಕ್ಕೆ ಸೂಚಿಸಲಾಗಿದೆ. ಸ್ಥಳೀಯ ಠಾಣೆಯವರಿಗೆ ಗೊತ್ತಾಗಿಲ್ಲ, ಬಾಂಬೆ ಪೊಲೀಸರು ಬಂದು ದಾಳಿ ಮಾಡ್ತಾರೆ ಅಂದ್ರೆ ನಮ್ಮದೇ ಲೋಪ ಎದ್ದು ಕಾಣ್ತದೆ. ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ, ಎಸ್‌ಪಿಗಳಿಗೂ ಸೂಚನೆ ಕೊಡಲಾಗಿದೆ ಎಂದು ತಿಳಿಸಿದ್ದಾರೆ.

    ಇನ್ನೂ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಜಿಲೆಟಿನ್ ಕಡ್ಡಿಗಳ ಪತ್ತೆ ಪ್ರಕರಣದ ಬಗ್ಗೆ ಮಾತನಾಡಿ, ಕ್ವಾರಿಗಳಿಗೆ ಅಂತ ಇದನ್ನ ಇಟ್ಟಿದ್ರು ಅನ್ನೋದು ಮಾಹಿತಿ ಇದೆ. ಆತ ಪೊಲೀಸರು ಬಂದ್ರು ಅಂತ ಹೆದರಿ ಅಲ್ಲೇ ಬಿಟ್ಟು ಹೋಗಿದ್ದಾನೆ. ಯಾರಿಗೋ ಅದನ್ನು ಕೊಡಬೇಕಿತ್ತು, ಪೊಲೀಸರನ್ನು ನೋಡಿ ಅಲ್ಲೇ ಬಿಟ್ಟು ಹೋಗಿದ್ದಾನೆ ಅಂತ ನನಗೆ ಮಾಹಿತಿ ಬಂದಿದೆ. ಇದರ ಬಗ್ಗೆ ಇನ್ನೂ ತನಿಖೆ ಆಗಬೇಕು ಎಂದು ತಿಳಿಸಿದ್ದಾರೆ.

  • `ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?

    `ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?

    ರ್ಶನ್ ಫ್ಯಾನ್ಸ್ (Darshan Fans) ವಿರುದ್ಧ ನಟಿ ರಮ್ಯಾ (Actress Ramya) ಕೆಂಡಕಾರುತ್ತಿರುವ ಬೆನ್ನಲ್ಲೇ ಇದೀಗ ಕ್ರೇಜಿ ಕ್ವೀನ್ ರಕ್ಷಿತಾ (Rakshitha Prem) ಡಿ-ಬಾಸ್ ಫ್ಯಾನ್ಸ್‌ಗೆ ಕಿವಿಮಾತು ಹೇಳಿದ್ದಾರೆ. ಈ ಮೂಲಕ ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ಟಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

    ಕ್ರೇಜಿ ಕ್ವೀನ್ ರಕ್ಷಿತಾ ಅವರು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿದ್ದಾರೆ. ಸ್ಟೋರಿಯಲ್ಲಿ, ನೀವು ಜನರ ಮಾನಸಿಕ ಸ್ಥಿತಿಗತಿಯನ್ನು ನೋಡೋಕೆ ಸಾಧ್ಯವಿಲ್ಲ, ದಯವಿಟ್ಟು ದಯೆಯಿಂದಿರಿ (ಸಹನೆಯಿಂದಿರಿ) ಎಂದಿದ್ದಾರೆ. ಜೊತೆಗೆ ಇನ್ನೊಂದರಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ `ಮೂಲಭೂತವಾಗಿ ಮಾನವನಿಗಿರಬೇಕಾದ ವಿನಯತೆ’ ನಿಜಕ್ಕೂ ವೈರಲ್ ಆಗಬೇಕೆಂದುಕೊಳ್ಳುತ್ತೇನೆ ಎಂದಿದ್ದಾರೆ.ಇದನ್ನೂ ಓದಿ: ಯುರೋಪಿಯನ್‌ ಒಕ್ಕೂಟದೊಂದಿಗೆ ಟ್ರಂಪ್‌ ಬಿಗ್‌ ಡೀಲ್‌ – ಆಮದುಗಳ ಮೇಲೆ 15% ಸುಂಕ

    ಈ ಮೂಲಕ ನಟಿ ರಕ್ಷಿತಾ ರಮ್ಯಾಗೆ ಟಾಂಗ್ ಕೊಟ್ಟಿದ್ದು, ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ಸದ್ಯ ರಕ್ಷಿತಾ ಪೋಸ್ಟ್ ಡಿ-ಬಾಸ್ ಫ್ಯಾನ್ಸ್ ಪೇಜ್‌ನಲ್ಲಿ ಭಾರೀ ವೈರಲ್ ಆಗುತ್ತಿದ್ದು, ಅಟೆನ್ಷನ್ ಗಿಟ್ಟಿಸಿಕೊಳ್ಳುವವರಿಗೆ ರಕ್ಷಿತಾ ಅವರ ಸಂದೇಶ ಇಲ್ಲ ಎನ್ನುತ್ತಿದ್ದಾರೆ.

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy Case) ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾ ಪದೇ ಪದೇ ದರ್ಶನ್ ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗುತ್ತಿದ್ದಾರೆ. ಜೊತೆಗೆ ಡಿ-ಬಾಸ್ ಅಭಿಮಾನಿಗಳು ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಟಿ ಕೂಡ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆಗಿದ್ದಾರೆ.

    Rakshitha Prem's Instagram Stories
    Rakshitha Prem’s Instagram Stories

    ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದವರ ಅಕೌಂಟ್‌ಗಳನ್ನು ಬಹಿರಂಗೊಳಿಸಿದ್ದಾರೆ. ರೇಣುಕಾಸ್ವಾಮಿ ಕಳುಹಿಸಿದ ಸಂದೇಶಕ್ಕೂ, ಡಿಬಾಸ್ ಫ್ಯಾನ್ಸ್ ಕಳುಹಿಸುತ್ತಿರುವ ಸಂದೇಶಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಇವರೆಲ್ಲಾ ಸ್ತ್ರೀ-ದ್ವೇಷಿ ಮನೋಭಾವದವರು. ಇಂತವರಿಂದಲೇ ಹೆಣ್ಮಕ್ಕಳು ದೌರ್ಜನ್ಯ, ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ ಅಂತ ಇನ್‌ಸ್ಟಾಗ್ರಾಮ್ ಪೋ‌ಸ್ಟ್‌ನಲ್ಲಿ ರಮ್ಯಾ ಆಕ್ರೋಶ ಹೊರಹಾಕಿದ್ದಾರೆ.

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಹೆಸರು ಕೇಳಿ ಬಂದಾಗ, ಅವತ್ತು ಕೂಡ ರಮ್ಯಾ ಮಾತಾಡಿದ್ದರು. ದರ್ಶನ್‌ರಿಂದ ತಪ್ಪಾಗಿದ್ದರೆ ಕಠಿಣ ಶಿಕ್ಷೆಯೇ ಆಗಬೇಕು ಅಂತ ಪ್ರತಿಕ್ರಿಯೆ ನೀಡಿದ್ದರು. ಜಾಮೀನು ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದಾಗಲೂ ದರ್ಶನ್ ವಿರುದ್ಧವೇ ಪೋಸ್ಟ್ ಮಾಡಿದ್ದರು. ಹಾಗಾಗಿ ದರ್ಶನ್ ಫ್ಯಾನ್ಸ್ ರಮ್ಯಾ ವಿರುದ್ಧ ತಿರುಗಿಬಿದ್ದಿದ್ದರು. ಈಗೀಗ ತೀರಾ ವೈಯಕ್ತಿಕವಾಗಿ ರಮ್ಯಾಗೆ ಟೀಕೆ ಮಾಡುತ್ತಿದ್ದಾರೆ.

    ಈ ಕುರಿತು `ಪಬ್ಲಿಕ್ ಟಿವಿ’ ಜೊತೆ ಮಾತನಾಡಿರೋ ಮೋಹಕತಾರೆ, ಕಾನೂನು ಹೋರಾಟ ಮಾಡೋದಾಗಿ ತಿಳಿಸಿದ್ದಾರೆ. ಎಲ್ಲಾ ಮೆಸೇಜ್‌ಗಳೊಂದಿಗೆ ದೂರು ಕೊಡೋದಾಗಿ ತಿಳಿಸಿದ್ದಾರೆ. ಸುದೀಪ್, ಯಶ್ ಅಲ್ಲ, ಅವರ ಹೆಂಡತಿ ಮಕ್ಕಳನ್ನೂ ಬಿಟ್ಟಿಲ್ಲ. ಚಿಕ್ಕಚಿಕ್ಕ ಮಕ್ಕಳ ಬಗ್ಗೆ ಕೆಟ್ಟಕೆಟ್ಟ ಪದ ಬಳಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಪರಿಶಿಷ್ಟರ 11.8 ಸಾವಿರ ಕೋಟಿಯನ್ನು `ಗ್ಯಾರಂಟಿ’ಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ: ಅಶೋಕ್ ಕಿಡಿ

  • Exclusive | ರೇಣುಕಾಸ್ವಾಮಿ ಕೇಸ್‌ – ʻಡಿ ಬಾಸ್‌ʼ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಕೆಂಡ

    Exclusive | ರೇಣುಕಾಸ್ವಾಮಿ ಕೇಸ್‌ – ʻಡಿ ಬಾಸ್‌ʼ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಕೆಂಡ

    ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದ ನಟಿ ರಮ್ಯಾ (Ramya) ಇದೀಗ ದರ್ಶನ್‌ ಅಭಿಮಾನಿಗಳ ವಿರುದ್ಧ ತಿರುಗಿಬಿದ್ದಿದ್ದಾರೆ.

    ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿರುವ ನಟಿ, ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ ಅಂತಲೂ ಬರೆದುಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಇತ್ತೀಚೆಗೆ ʻಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣʼ ಎಂದು ತಮ್ಮ ಇನ್‌ಸ್ಟಾ ಸ್ಟೇಟಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು. ನಟಿ ರಮ್ಯಾ ಪೋಸ್ಟ್ ವೈರಲ್ ಆಗ್ತಿದ್ದಂತೆ ದರ್ಶನ್ ಅಭಿಮಾನಿಗಳು ಕೆಟ್ಟ ಪದಗಳಿಂದ ರಮ್ಯಾ ವಿರುದ್ದ ಸೋಶಿಯಲ್ ಮಿಡಿಯಾದಲ್ಲಿ ಕಾಮೆಂಟ್ಸ್ ಮಾಡೋದ್ರ ಜೊತೆಗೆ ಟ್ರೋಲ್ ಮಾಡಿದ್ರು. ಇದೀಗ ನಟಿ ರಮ್ಯಾ ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ.

    ರಮ್ಯಾ ಇನ್‌ಸ್ಟಾ ಸ್ಟೋರಿಯಲ್ಲಿ ಏನಿದೆ?
    ಮೊದಲ ಪೋಸ್ಟ್‌ನಲ್ಲಿ ʻಕೇಸ್‌ ಯಾವುದೇ ಇರಲಿ, ಯಾರದ್ದೇ ಇರಲಿ, ಸದಾ ನ್ಯಾಯದ ಪರʼ ಎನ್ನುವ ʻತೆರೆಯಮೇಲಷ್ಟೇ ಅಲ್ಲ ನಿಜ ಜೀವನದಲ್ಲೂ HIROIN ರಮ್ಯಾ ಎಂದು ಬರೆಯಲಾಗಿದೆ. ಅಲ್ಲದೇ ರಮ್ಯಾ ಎರಡು ದಿನಗಳ ಹಿಂದೆ ಮಾಡಿದ ಪೋಸ್ಟ್‌ ಇದೆ. ಇದರೊಂದಿಗೆ ʻಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ… ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಅನ್ನೋದಕ್ಕೇ ನಿಮ್ಮ ಕಾಮೆಂಟ್ಸ್‌ಗಳೇ ಸಾಕ್ಷಿʼ ಅಂತ ಮತ್ತೊಂದು ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ

    ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರಾಗೌಡ ಸೇರಿ 17 ಆರೋಪಿಗಳು ಬಂಧನವಾಗಿದ್ದರು. ಜೈಲುವಾಸದ ನಂತರ ಎಲ್ಲಾ ಆರೋಪಿಗಳು ಜಾಮೀನು ಪಡೆದು ಆಚೆ ಬಂದಿದ್ದರು. ಇದೀಗ ದರ್ಶನ್‌ಗೆ ರಾಜ್ಯ ಹೈಕೋರ್ಟ್‌ (Karnataka High Court) ನೀಡಿ‌ದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿದಿದೆ. ನ್ಯಾ.ಪಾರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ಪೀಠದಲ್ಲಿ ನಡೆಸಿದ್ದು, ಆದೇಶ ಕಾಯ್ದಿರಿಸಲಾಗಿದೆ. ಇದನ್ನೂ ಓದಿ: ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ

    ಹೈಕೋರ್ಟ್‌ ರೀತಿ ತರಾತುರಿಯಲ್ಲಿ ಆದೇಶ ನೀಡುವುದಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಒಂದು ವಾರದಲ್ಲಿ ಆದೇಶ ಪ್ರಕಟಿಸುವುದಾಗಿ ಹೇಳಿದೆ. ಒಂದೂವರೆ ಗಂಟೆಗಳ ಕಾಲ ವಾದ-ಪ್ರತಿವಾದ ಆಲಿಸಿ ಕಡೆಯಲ್ಲಿ ಇತರೇ ಆರೋಪಿಗಳ ಪರ ವಕೀಲರ ಮಾಹಿತಿ ಕೇಳಿದೆ. ಎಲ್ಲ ಆರೋಪಿಗಳ ಪರ ವಕೀಲರು ಲಿಖಿತ ವಾದ ಮಂಡಿಸಬಹುದು. ಒಂದು ವಾರದಲ್ಲಿ ಮೂರು ಪುಟಗಳ ಮಾಹಿತಿ ನೀಡಬೇಕು. ಬಳಿಕ ಆದೇಶ ನೀಡುವುದಾಗಿ ಕೋರ್ಟ್‌ ಹೇಳಿದೆ. ಇದನ್ನೂ ಓದಿ: ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ

  • Video | ಕೊನೆಗೂ ಮದುವೆ ಬಗ್ಗೆ ಸ್ಪಷ್ಟನೆ ಕೊಟ್ಟ ಮೋಹಕ ತಾರೆ ರಮ್ಯಾ!

    Video | ಕೊನೆಗೂ ಮದುವೆ ಬಗ್ಗೆ ಸ್ಪಷ್ಟನೆ ಕೊಟ್ಟ ಮೋಹಕ ತಾರೆ ರಮ್ಯಾ!

    ಕೊನೆಗೂ ಮೋಹಕ ತಾರೆ ರಮ್ಯಾ (Ramya) ಮದುವೆ (Wedding) ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಹಲವಾರು ಬಾರಿ ರಮ್ಯಾ ಮದುವೆ ವಿಚಾರ ಹಾಟ್ ಟಾಪಿಕ್ ಕೂಡ ಆಗಿತ್ತು. ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಯಾವುದೇ ಕಾರ್ಯಕ್ರಮಕ್ಕೆ ಹೋಗಲಿ ಅಲ್ಲಿ ಮದುವೆ ವಿಷಯ ಪ್ರಸ್ತಾಪ ಆಗಿಯೇ ಆಗುತ್ತಿತ್ತು. ಈ ವೀಕೆಂಡ್ ನಲ್ಲೂ ರಮ್ಯಾ ಮದುವೆ ವಿಷ್ಯ ಬ್ರೇಕಿಂಗ್ ಆಗಿತ್ತು.

    ಟೆಕ್ಸ್‌ಟೈಲ್ ಉದ್ಯಮಿ (Businessman) ಜೊತೆ ರಮ್ಯಾ ನಿಶ್ಚಿತಾರ್ಥ ಆಗಿದೆ ಅನ್ನೋ ವಿಚಾರ ಗಾಂಧಿನಗರದ ಗಲ್ಲಿಗಲ್ಲಿಗಳಲ್ಲಿ ಕೇಳಿ ಬಂದಿತ್ತು. ಆಪ್ತರು ಹೇಳುವಂತೆ ಅಕ್ಟೋಬರ್ ನಲ್ಲಿ ಎಂಗೇಜ್‌ಮೆಂಟ್ ಆಗಲಿದ್ದಾರಂತೆ. ನವೆಂಬರ್‌ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ಮದುವೆ ನಡೆಯಲಿದೆ ಎಂದು ಹೇಲಾಗಿತ್ತು. ಆದ್ರೆ ನಟಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳುವ ಮೂಲಕ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ದಯವಿಟ್ಟು ವದಂತಿ ಮತ್ತು ಸುಳ್ಳು ಸುದ್ದಿಗಳನ್ನ ಹಾಕಬೇಡಿ. ಮುಂದೆ ನಾನು ಮದುವೆ ಆಗೋವಾಗ ನಿಮಗೆ ಹೇಳುತ್ತೀನಿ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ.

    ಈ ವಿಚಾರಕ್ಕೆ ಸಂಬಂಧಿಸಿದ ವೀಡಿಯೋ ಇಲ್ಲಿದೆ..

  • ದರ್ಶನ್‌, ಪ್ರಜ್ವಲ್‌ ರೇವಣ್ಣ, ಯಡಿಯೂರಪ್ಪ, ಸೂರಜ್‌ ವಿರುದ್ಧ ನಟಿ ರಮ್ಯಾ ಕೆಂಡ

    ದರ್ಶನ್‌, ಪ್ರಜ್ವಲ್‌ ರೇವಣ್ಣ, ಯಡಿಯೂರಪ್ಪ, ಸೂರಜ್‌ ವಿರುದ್ಧ ನಟಿ ರಮ್ಯಾ ಕೆಂಡ

    – ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು, ಶಕ್ತಿಶಾಲಿಗಳು ಎಂದು ನಟಿ ವಾಗ್ದಾಳಿ

    ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಆರೋಪಗಳನ್ನು ಎದುರಿಸುತ್ತಿರುವ ನಟ ದರ್ಶನ್‌, ಪ್ರಜ್ವಲ್‌ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್‌ ರೇವಣ್ಣ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ (Ramya) ಕೆಂಡ ಕಾರಿದ್ದಾರೆ.

    ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು. ಅವರ ಹಿಂಸಾತ್ಮಕ ಕ್ರಿಯೆಯಿಂದಾಗಿ ಬಡವರು, ಮಹಿಳೆಯರು ಮತ್ತು ಮಕ್ಕಳ ಬದುಕು ನಾಶವಾಗಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ದರ್ಶನ್ ಜೊತೆ ಬಂಧನವಾಗಿರೋ ಆರೋಪಿಗಳ ಕುಟುಂಬದ ಸ್ಥಿತಿ ಶೋಚನೀಯ!

    ರಮ್ಯಾ ಪೋಸ್ಟ್‌ನಲ್ಲೇನಿದೆ?
    ಕಾನೂನನ್ನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು. ಅವರ ಹಿಂಸಾತ್ಮಕ ಕ್ರಿಯೆಗಳಿಗೆ ಬಡವರು, ಮಹಿಳೆಯರು ಮತ್ತು ಮಕ್ಕಳು ಬದುಕು ನಾಶವಾಗಿದೆ. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನು ಅವುಗಳ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ? ಎಂದು ನಟಿ ರಮ್ಯಾ ಪೋಸ್ಟ್‌ ಮಾಡಿದ್ದಾರೆ.

    ರಮ್ಯಾ ತಮ್ಮ ಪೋಸ್ಟ್‌ ಜೊತೆಗೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ನಟ ದರ್ಶನ್‌, ಮಾಜಿ ಸಿಎಂ ಯಡಿಯೂರಪ್ಪ, ಎಂಎಲ್‌ಸಿ ಸೂರಜ್‌ ರೇವಣ್ಣ ಅವರ ಹೆಸರನ್ನು ಹ್ಯಾಶ್‌ ಟ್ಯಾಗ್‌ ಮೂಲಕ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ -‌ ಇಂದು ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ ಜೈಲು ಫಿಕ್ಸ್‌?

    ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗಾಗಲೇ ಪ್ರಜ್ವಲ್‌ ರೇವಣ್ಣ (Prajwal Revanna) ನ್ಯಾಯಾಂಗ ಬಂಧನದಲ್ಲಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Darshan) ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಇವರ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ (B.S.Yediyurappa) ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿದೆ. ಇದೆಲ್ಲದರ ಜೊತೆಗೆ ಈಗ ಮಾಜಿ ಪ್ರಧಾನಿ ದೇವೇಗೌಡರ ಮತ್ತೊಬ್ಬ ಮೊಮ್ಮಗ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಪುತ್ರ ಸೂರಜ್‌ ರೇವಣ್ಣ (Suraj Revanna) ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.

  • ಕಾಂಗ್ರೆಸ್‌ ಕಟ್ಟಾಳು ರಮ್ಯಾ ಮೇಲ್ಯಾಕೆ ಈ ಅನುಮಾನ?

    ಕಾಂಗ್ರೆಸ್‌ ಕಟ್ಟಾಳು ರಮ್ಯಾ ಮೇಲ್ಯಾಕೆ ಈ ಅನುಮಾನ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬ್ಯಾಂಕಾಕ್‌ಗೆ ಹಾರಿದ ಮೋಹಕ ತಾರೆ ರಮ್ಯಾ: ಫೋಟೋ ವೈರಲ್

    ಬ್ಯಾಂಕಾಕ್‌ಗೆ ಹಾರಿದ ಮೋಹಕ ತಾರೆ ರಮ್ಯಾ: ಫೋಟೋ ವೈರಲ್

    ಚಂದನವನದ ಚೆಂದದ ನಟಿ ರಮ್ಯಾ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಅಗಿದ್ದಾರೆ. ಮತ್ತೆ ಸಿನಿಮಾಗೆ ಕಂಬ್ಯಾಕ್ ಮಾಡಲು ತೆರೆಮರೆಯಲ್ಲಿ ಸಖತ್ ಕಸರತ್ತು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಈಗ ಸ್ನೇಹಿತೆಯರೊಂದಿಗೆ ನಟಿ ರಮ್ಯಾ ಬ್ಯಾಂಕಾಕ್‌ಗೆ ಹಾರಿದ್ದಾರೆ. ನಟಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಲ್‌ಚಲ್ ಎಬ್ಬಿಸುತ್ತಿದೆ.

    `ಅಭಿ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದ ರಮ್ಯಾ, ಸಾಕಷ್ಟು ಹಿಟ್ ಸಿನಿಮಾಗಳ ಮೂಲಕ ಕಮಾಲ್ ಮಾಡಿದ್ದರು. ಕಡೆಯದಾಗಿ ʻನಾಗರಹಾವುʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನಂತರ ರಾಜಕೀಯ ರಂಗದಲ್ಲಿ ಬ್ಯುಸಿಯಾದ್ದರು. ಸಿನಿಮಾ ಮತ್ತು ರಾಜಕೀಯ ಎರಡು ರಂಗದಿಂದಲೂ ಅಂತರ ಕಾಯ್ದುಕೊಂಡು ಸೈಲೆಂಟ್ ಆಗಿದ್ದರು. ಈಗ ಮತ್ತೆ ರಮ್ಯಾ ಚೈತ್ರ ಕಾಲ ಶುರುವಾಗಿದೆ. ಸಿನಿಮಾ ಸಮಾರಂಭಗಳಿಗೆ ಕಾಣಿಸಿಕೊಳ್ಳುತ್ತಾ ಹೊಸ ತಂಡಕ್ಕೆ ಸಾಥ್ ನೀಡುತ್ತಿರುತ್ತಾರೆ. ಇದೀಗ ರಮ್ಯಾ ವಿದೇಶಕ್ಕೆ ಹಾರಿದ್ದಾರೆ. ನಟಿಯ ನಯಾ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

    RAMYA

    ಇತ್ತೀಚೆಗೆಷ್ಟೇ ನಟಿ ಕಾವ್ಯಾ ಮತ್ತು ವರುಣ್ ಗೌಡ ಮದುವೆಯಲ್ಲಿ ಕಾಣಿಸಿಕೊಂಡಿದ್ದರು. ಈಗ ಕೊಂಚ ಬ್ರೇಕ್ ತೆಗೆದುಕೊಂಡು ಬ್ಯಾಂಕಾಕ್‌ಗೆ ಹಾರಿದ್ದಾರೆ. ತಮ್ಮ ಚೆಂದದ ಫೋಟೋವೊಂದು ಶೇರ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೈಪ್ ಕ್ರಿಯೇಟ್ ಮಾಡಿದ್ದಾರೆ. ರಮ್ಯಾ ಲುಕ್ ನೋಡಿ ಅಯ್ಯೋ ದೃಷ್ಟಿ ತೆಗೆಸಿಕೊಳ್ಳಿ ಅಂತಾ ಕಾಮೆಂಟ್ ಮಾಡ್ತಿದ್ದಾರೆ.ಇದನ್ನೂ ಓದಿ:`ವಿ ಲವ್ ಯೂ’ ಎಂದ ಅಭಿಮಾನಿಗೆ ದೀಪಿಕಾ ಖಡಕ್ ರಿಯಾಕ್ಷನ್

    ಇದೀಗ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿರುವ ರಮ್ಯಾ, ಭಿನ್ನ ಕಥೆಯ ಮೂಲಕ ಕಮ್‌ಬ್ಯಾಕ್ ಆಗಲು ರೆಡಿಯಾಗಿದ್ದಾರೆ. ಸದ್ಯದಲ್ಲೇ ಅನೌನ್ಸ್ ಕೂಡ ಮಾಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜಸ್ಥಾನದಲ್ಲಿ ಒಂದಾದ ಡಿಕೆಶಿ-ಎಂಬಿಪಾ

    ರಾಜಸ್ಥಾನದಲ್ಲಿ ಒಂದಾದ ಡಿಕೆಶಿ-ಎಂಬಿಪಾ

    ಬೆಂಗಳೂರು: ಕಾಂಗ್ರೆಸ್‌ ನಾಯಕರ ಜಗಳ ಬೀದಿಗೆ ಬಂದಿದ್ದೆ ತಡ ಈಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಮಾಜಿ ಸಚಿವ ಎಂಬಿ ಪಾಟೀಲ್‌ ಒಂದಾಗಿದ್ದಾರೆ.

    ರಾಜಸ್ಥಾನ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಚಿಂಥನ ಮಂಥನ ಸಭೆಯಲ್ಲಿ ಇಬ್ಬರು ನಾಯಕರು ಒಟ್ಟಿಗೆ ಇರುವ ಫೋಟೋ ಲಭ್ಯವಾಗಿದೆ. ಇಬ್ಬರು ಯಾವುದೋ ವಿಷಯಕ್ಕೆ ಮಾತನಾಡಿಕೊಂಡು ಹೆಗಲ ಮೇಲೆ ಕೈ ಹಾಕಿಕೊಂಡು ಆತ್ಮೀಯವಾಗಿರುವ ಫೋಟೋ ಸಿಕ್ಕಿದೆ. ಇದನ್ನೂ ಓದಿ: ಕಾಳಿ ಸ್ವಾಮಿಗೆ ಮಸಿ ಬಳೆದಿದ್ದು ಅಕ್ಷಮ್ಯ ಅಪರಾಧ: ಮುತಾಲಿಕ್

    ರಮ್ಯಾ ಟ್ವೀಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಯಾರು ಪ್ರತಿಕ್ರಿಯೆ ನೀಡದಂತೆ ಹೈಕಮಾಂಡ್‌ ಕೈ ನಾಯಕರಿಗೆ ಸೂಚನೆ ನೀಡಿದೆ. ಈ ಬೆನ್ನಲ್ಲೇ ನಾಯಕರು ಭಿನ್ನಮತ ಶಮನ ಮಾಡುವ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.

     

  • ಒಡೆದು ಆಳುವ ರಾಜಕಾರಣಕ್ಕೆ ನಾವು ಇನ್ನು ಎಷ್ಟು ಜೀವಗಳನ್ನು ಕಳೆದುಕೊಳ್ಳಬೇಕು: ರಮ್ಯಾ

    ಒಡೆದು ಆಳುವ ರಾಜಕಾರಣಕ್ಕೆ ನಾವು ಇನ್ನು ಎಷ್ಟು ಜೀವಗಳನ್ನು ಕಳೆದುಕೊಳ್ಳಬೇಕು: ರಮ್ಯಾ

    ಬೆಂಗಳೂರು: ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ರಾಜ್ಯಾದ್ಯಂತ ಬಿಸಿ ಕೆಂಡವಾಗಿದೆ. ತಮ್ಮನನ್ನು ಕಳೆದುಕೊಂಡ ಹರ್ಷನ ಅಕ್ಕ ಮಾಧ್ಯಮಗಳ ಮುಂದೆ ಕರುಳು ಹಿಂಡುವಂತಹ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ನಟಿ ರಮ್ಯಾ ತಮ್ಮ ಟಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

    ಹಿಂದೂ ಎನ್ನುವುದು ಬಿಟ್ಟರೆ ನನ್ನ ತಮ್ಮ ಬೇರೆ ಏನೂ ಮಾಡಿಲ್ಲ. ಹಿಂದೂ-ಹಿಂದುತ್ವ ಎಂದಿದ್ದಕ್ಕೆ ಇಂದು ನನ್ನ ತಮ್ಮ ಈ ಸ್ಥಿತಿಗೆ ಬಂದುಬಿಟ್ಟ. ಹಿಂದೂ ಮುಸ್ಲಿಂ ಎಲ್ಲಾ ಸಮುದಾಯದ ಅಣ್ಣ ತಮ್ಮಂದಿರಿಗೆ ನಾನು ಕೈ ಮುಗಿದು ಕೇಳಿಕೊಳ್ಳುತ್ತೇನೆ ನೀವು ನಿಮ್ಮ ತಂದೆ ತಾಯಿಯರಿಗೆ ಒಳ್ಳೆಯ ಮಕ್ಕಳಾಗಿರಿ. ಅದು ಬಿಟ್ಟು ಈ ರೀತಿ ಮಾಡಬೇಡಿ ಎಂದು ಹರ್ಷನ ಸಹೋದರಿ ಅಶ್ವಿನಿ ಕಂಬನಿ ಹಾಕಿದ್ದರು. ಇದನ್ನೂ ಓದಿ: ಹರ್ಷ ಕೊಲೆ ಕೇಸ್ – 7 ಆರೋಪಿಗಳು ಯಾರು? ಯಾರ ಪಾತ್ರ ಏನು?

    ಹರ್ಷನ ಹೇಳಿಕೆಗೆ ರಮ್ಯಾ, ಆಕೆ ಹೇಳಿದ್ದು ಸರಿ. ಒಡೆದು ಆಳುವ ರಾಜಕಾರಣಕ್ಕೆ ನಾವು ಇನ್ನು ಎಷ್ಟು ಜೀವಗಳನ್ನು ಕಳೆದುಕೊಳ್ಳಬೇಕು? ಇದನ್ನು ಏಕತೆ, ಶಾಂತಿ ಹಾಗೂ ಸೌಹಾರ್ದತೆ ಎನ್ನುತ್ತಾರಾ? ನನ್ನ ಹೃದಯ ಅವಳ ಹಾಗೂ ಹರ್ಷ ಕುಟುಂಬಕ್ಕೆ ಮರುಗುತ್ತಿದೆ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 9 ಎಫ್‍ಐಆರ್, 7 ಮಂದಿ ಅರೆಸ್ಟ್‌ – ಶಿವಮೊಗ್ಗ ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆ

  • ನಾನು ಈ ಮೂರು ವಸ್ತುಗಳನ್ನು ಮರೆಯುತ್ತೇನೆ: ರಮ್ಯಾ

    ನಾನು ಈ ಮೂರು ವಸ್ತುಗಳನ್ನು ಮರೆಯುತ್ತೇನೆ: ರಮ್ಯಾ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದ ವೇಳೆ ಅಭಿಮಾನಿಗಳ ಪ್ರಶ್ನೆಗೆ ಸ್ಮಾರ್ಟ್ ಆಗಿ ಉತ್ತರಿಸುವ ಪ್ರಯತ್ಮವನ್ನು ಮಾಡಿದ್ದಾರೆ. ಇದೀಗ ಲೈವ್‍ನಲ್ಲಿ ಹೇಳಿಕೊಂಡಿರುವ ವಿಚಾರಗಳು ಸಖತ್ ಸುದ್ದಿ ಮಾಡುತ್ತಿವೆ. ಕಾಮಿಡಿಯನ್ ಸೋನು ವೇಣುಗೋಪಾಲ್ ಜೊತೆಗೆ ಹಲವು ವಿಚಾರಗಳನ್ನು ಅವರು ಲೈವ್‍ನಲ್ಲಿ ಹೇಳಿಕೊಂಡಿದ್ದಾರೆ.

     

     

    View this post on Instagram

     

    A post shared by Sonu Venugopal (@sonuvenugopaal)

    ನಾನು ಆಗಾಗ ಮೊಬೈಲ್, ಕನ್ನಡಕ ಮತ್ತು ಟೀತ್ ಐಲೈನರನ್ನು ಮರೆತು ಹೋಗುತ್ತೇನೆ ಎಂದು ತಾವು ಹೆಚ್ಚಾಗಿ ಮರೆತು ಹೋಗುವ ವಸ್ತುಗಳ ಕುರಿತಾಗಿ ಹೇಳಿಕೊಂಡಿದ್ದಾರೆ. ಸಿನಿಮಾಕ್ಕೆ ಮತ್ತೆ ಯಾವಾಗ ಮರಳುತ್ತೀರಿ ಎಂದು ಕೇಳಿದಾಗ, ಸದ್ಯ ಇಲ್ಲ ಅಂತ ಹೇಳಿ ಸರಿಯಾಗಿ ಉತ್ತರ ನೀಡದೇ ಜಾರಿಕೊಂಡಿದ್ದಾರೆ.  ಇದನ್ನೂ ಓದಿ:
    ನನ್ನ ಮದುವೆಗೆ ಯಾರೂ ಬರಲ್ಲ ಅಂತೆ: ರಮ್ಯಾ

    ನಾನು ಅಷ್ಟೊಂದು ಚೆನ್ನಾಗಿ ಇದೀನಿ ಅಂತ ಅಂದುಕೊಳ್ಳೋದಿಲ್ಲ. ನಾನು ಎವರೇಜ್ ಗರ್ಲ್. ಸಿನಿಮಾ ಮಾಡುವಾಗ ಆರೋಗ್ಯದ ಬಗ್ಗೆ ಸಿಕ್ಕಾಪಟ್ಟೆ ಗಮನ ಕೊಡುತ್ತಿದ್ದೆ. ಆಗ ಡಯೆಟ್, ವ್ಯಾಯಾಮ ಮಾಡುತ್ತಿದ್ದೆ. ಈಗ ಮನಸ್ಸಿಗೆ ಬಂದಿದ್ದನ್ನೆಲ್ಲ ತಿನ್ನುತ್ತೇನೆ, ಆದಾಗ ವ್ಯಾಯಾಮ ಮಾಡುತ್ತೇನೆ ಎಂದು ತಮ್ಮ ಸೌಂದರ್ಯದ ಗುಟ್ಟನ್ನು ಹೇಳಿಕೊಂಡಿದ್ದಾರೆ.

    ನನಗೆ ಸೀರೆ ಅಂದ್ರೆ ತುಂಬಾ ಇಷ್ಟ. ಆದ್ರೆ ನಾನು ಎಲ್ಲಿಗೂ ಹೋಗುವುದಿಲ್ಲ. ಹೀಗಾಗಿ ನಾನು ಸೀರೆ ಹಾಕುವುದು ಕಡಿಮೆಯಾಗಿದೆ. ನಾನು ಯಾರ ಮದುವೆ ಸಮಾರಂಭಗಳಿಗೆ ಹೋಗುವುದಿಲ್ಲ. ನನ್ನ ಮದುವೆಗೂ ಯಾರೂ ಬರುವುದಿಲ್ಲ ಎಂದು ನನ್ನ ಅಮ್ಮ ಹೇಳುತ್ತಾರೆ. ಆಗ ನಾನು ಅವರಿಗೆ ಒಳ್ಳೆಯದು ಎಂದು ಹೇಳುತ್ತಿರುತ್ತೇನೆ ಎಂದಿದ್ದಾರೆ.

    ನನಗೆ ಉತ್ತರಕರ್ನಾಟಕ ಬದನೆಕಾಯಿ ರೊಟ್ಟಿ ಎಂದರೆ ತುಂಬಾ ಇಷ್ಟ. ಐಸ್ ಕ್ರೀಮ್ ತುಂಬಾ ಇಷ್ಟ ಪಟ್ಟು ತಿನ್ನುತ್ತೇನೆ. ನಾನು ಸಸ್ಯಹಾರಿ ಮಾಂಸವನ್ನು ಸೇವಿಸುವುದಿಲ್ಲ. ಮೊಟ್ಟೆಯಿಂದ ಮಾಡಿರಿವ ಕೇಕ್, ಮಶ್ರೂಮ್ ತಿನ್ನುತ್ತೇನೆ ಎಂದು ಹೇಳುವ ಮೂಲಕವಾಗಿ ತಮ್ಮ ಆಹಾರ ಪದ್ಧತಿಯ ಕುರಿತಾಗಿ ಹೇಳಿಕೊಂಡಿದ್ದಾರೆ.

    ನಾನು ಅಮೆರಿಕಾದ ವ್ಯಾಕ್ಸಿನ್‍ಗೆ ಕಾಯುತ್ತಿದ್ದೇನೆ. ವ್ಯಾಕ್ಸಿನ್ ತೆಗೆದುಕೊಂಡಿಲ್ಲ, ಮೊಡೆರ್ನಾಗೆ ಕಾಯುತ್ತಿದ್ದೇನೆ. ಫೈಜರ್ ವ್ಯಾಕ್ಸಿನ್‍ನ್ನು ಮೂರು ಡೋಸ್ ತೆಗೆದುಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ವ್ಯಾಕ್ಸಿನ್ ವಿಚಾರದಲ್ಲಿ ಸಿಕ್ಕಾಪಟ್ಟೆ ಗೊಂದಲ ಶುರುವಾಗಿದೆ. ಮೊಡೆರ್ನಾಗೆ ಸದ್ಯ ಅನುಮತಿ ಸಿಕ್ಕಿದೆ ನನಗೆ ಅದು ಖುಷಿಯ ವಿಚಾರವಾಗಿದೆ ಎಂದಿದ್ದಾರೆ.

    ಇನ್‍ಸ್ಟಾಗ್ರಾಮ್ ಲೈವ್ ಬರುವೆ ಎಂದು ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುತ್ತಿದ್ದಂತೆ ಅಭಿಮಾನಿಗಳು ಸಿಕ್ಕಾಪಟ್ಟೆ ಕುತೂಹಲದಿಂದಿದ್ದರು. ರಮ್ಯಾ ಇನ್‍ಸ್ಟಾಗ್ರಾಮ್ ಲೈವ್ ಬರೋದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಹಲವು ವರ್ಷಗಳಿಂದ ಚಿತ್ರರಂಗ, ಅಭಿಮಾನಿಗಳು, ರಾಜಕೀಯದಿಂದ ದೂರವಾಗಿರುವ ರಮ್ಯಾ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಲೈವ್ ನೋಡಿದ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.