Tag: actress sexual assault case

  • ನಟಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ – ನಟ ದಿಲೀಪ್‌ ಮನೆ ಮೇಲೆ ಕೇರಳ ಪೊಲೀಸರ ದಾಳಿ

    ನಟಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ – ನಟ ದಿಲೀಪ್‌ ಮನೆ ಮೇಲೆ ಕೇರಳ ಪೊಲೀಸರ ದಾಳಿ

    ತಿರುವನಂತಪುರಂ: 2017ರಲ್ಲಿ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ವಿಭಾಗದ ಕೇರಳ ಪೊಲೀಸ್‌ ತಂಡವು ನಟ ದಿಲೀಪ್‌ ಮತ್ತು ಆತನ ಸಹೋದರನ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿದೆ.

    ದಿಲೀಪ್‌ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಆಡಿಯೋ ಕ್ಲಿಪ್‌ವೊಂದನ್ನು ಟಿವಿ ವಾಹಿನಿಯೊಂದು ಬಿಡುಗಡೆ ಮಾಡಿತ್ತು. ಹೀಗಾಗಿ ಭಾನುವಾರ ನಟನ ವಿರುದ್ಧ ಪ್ರಕರಣ ದಾಖಲಾಗಿತ್ತು. ನಟ, ತನಿಖಾಧಿಕಾರಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಆಡಿಯೋದಲ್ಲಿ ಇದೆ. ಇದನ್ನೂ ಓದಿ: ಲೋಕಲ್ ಕಂಟೈನ್ಮೆಂಟ್‍ಗೆ ಮೋದಿ ಸಲಹೆ

    ನಟಿಯೊಬ್ಬರ ಮೇಲಿನ ಹಲ್ಲೆ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದಿಲೀಪ್‌ ವಿರುದ್ಧ ನಿರ್ದೇಶಕ ಬಾಲಚಂದ್ರಕುಮಾರ್‌ ಹಲವು ಹೇಳಿಕೆಗಳನ್ನು ನೀಡಿದ್ದರು. ತನಿಖಾಧಿಕಾರಿಗಳ ಮೇಲೆ ದಾಳಿ ನಡೆಸುವ ಸಂಚಿನ ಕುರಿತು ಹಲವು ಚರ್ಚೆಗಳು ನಡೆದಿದ್ದವು ಎಂದು ಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ.

    ಕಳೆದ ವರ್ಷ ನ.25 ರಂದು ಬಾಲಚಂದ್ರಕುಮಾರ್‌, ಕೇರಳ ಸಿಎಂಗೆ ದೂರು ಸಲ್ಲಿಸಿದ್ದರು. ನಟ ದಿಲೀಪ್‌ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಟನ ಮನೆಯಲ್ಲಿ ಪ್ರಮುಖ ಆರೋಪಿ ಪಲ್ಸರ್‌ ಸುನಿ ಕಾಣಿಸಿಕೊಂಡಿದ್ದನ್ನು ನಾನು ನೋಡಿದ್ದೇನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದಿಲೀಪ್‌ ಕೂಡ ಆರೋಪಿ ಎಂದು ದೂರಿದ್ದಾರೆ. ಇದನ್ನೂ ಓದಿ: UP Election – ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ 50 ಮಹಿಳೆಯರು, ಅತ್ಯಾಚಾರ ಸಂತ್ರಸ್ತೆ ತಾಯಿಯೂ ಅಭ್ಯರ್ಥಿ

    POLICE JEEP

    ನಟ ದಿಲೀಪ್‌ ಅವರಿಗೆ ಸಂಬಂಧಿಸಿದ ಮೂರು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲು ಅಧಿಕಾರಿಗಳ ಮೂರು ತಂಡಗಳನ್ನು ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಬದುಕುಳಿದಿದ್ದ ನಟಿ, ನಟ ದಿಲೀಪ್‌ ಕುಮಾರ್‌ ವಿರುದ್ಧ ತನಿಖೆಗೆ ಒತ್ತಾಯಿಸಿದ್ದರು. ಸಂತ್ರಸ್ತೆ ನಟಿ ತಮಿಳು, ತೆಲುಗು, ಮಲಯಾಳಂ ಭಾಷೆ ಸಿನಿಮಾಗಳಲ್ಲೂ ನಟಿಸಿದ್ದಾರೆ. ಪ್ರಕರಣದಲ್ಲಿ 10 ಆರೋಪಿಗಳಿದ್ದು, ಆರಂಭದಲ್ಲಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ನಂತರ ದಿಲೀಪ್‌ ಅವರನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.