Tag: actress Sumalatha

  • ಅಕ್ರಮ ಗಣಿಗಾರಿಕೆ ನಿಲ್ಲಿಸುವುದು ನನ್ನ ಹೋರಾಟ: ಸುಮಲತಾ

    ಅಕ್ರಮ ಗಣಿಗಾರಿಕೆ ನಿಲ್ಲಿಸುವುದು ನನ್ನ ಹೋರಾಟ: ಸುಮಲತಾ

    -ನಾನು ದ್ವೇಷದ ರಾಜಕಾರಣ ಮಾಡುತ್ತಿಲ್ಲ

    ಬೆಂಗಳೂರು: ನನ್ನ ಹೋರಾಟ ನನ್ನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವುದಾಗಿದೆ. ನನ್ನ ಹೋರಾಟದತ್ತ ನನ್ನ ಗಮನ ಇರುತ್ತಷ್ಟೇ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಇದನ್ನೂ ಓದಿ: ಸುಮಲತಾ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ

    ರಾಜಭವನ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಮಸ್ಯೆ ಸೃಷ್ಟಿಸಿಲ್ಲ, ಯಾರು ಸಮಸ್ಯೆ ಸೃಷ್ಟಿಸಿದಾರೋ ಅವರು ಅರ್ಥ ಮಾಡ್ಕೊಂಡ್ರೆ ಸಾಕು. ಅಕ್ರಮ ಗಣಿಗಾರಿಕೆ ನಿಲ್ಲಿಸುವ ವಿಚಾರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದು ಕಷ್ಟ ಅಂತ ನನಗೂ ಗೊತ್ತು. ಆದರೆ ನನ್ನ ಪ್ರಯತ್ನ ನಾನು ಮಾಡುತ್ತೇನೆ. ಸಂಸತ್ ನಲ್ಲೂ ಮಂಡ್ಯ ಅಕ್ರಮ ಗಣಿಗಾರಿಕೆ ವಿಚಾರ ಪ್ರಸ್ತಾಪ ಮಾಡ್ತೇನೆ. ಈ ಸಂಬಂಧ ಸಿಎಂ ಅವರನ್ನೂ, ಗಣಿ ಸಚಿವರನ್ನೂ ಭೇಟಿ ಮಾಡ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 5ನೇ ತರಗತಿ ಮಕ್ಕಳಿಗೆ ಶಾಲೆಯಿಂದಲೇ ಉಚಿತ ಕಾಂಡೋಮ್- ಪೋಷಕರು ಆಕ್ರೋಶ

    ಅಕ್ರಮ ಗಣಿಗಾರಿಕೆ ಬಗ್ಗೆ ಎಲ್ಲರ ಗಮನಕ್ಕೆ ತಂದಿದ್ದೇನೆ. ನನ್ನ ಹೋರಾಟ ನನ್ನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವುದಾಗಿದೆ. ನನ್ನ ಹೋರಾಟದತ್ತ ನನ್ನ ಗಮನ ಇರುತ್ತದೆ. ನಾನು ಯಾರನ್ನೂ ಟಾರ್ಗೆಟ್ ಮಾಡುತ್ತಿಲ್ಲ. ಅಂಬರೀಷ್ ಅವರ ಲಕ್ಷಾಂತರ ಅಭಿಮಾನಿಗಳಿಗೂ ನೋವಾಗಿದೆ. ಆದರೆ ನಾವು ಅವರ ದಾರಿಯಲ್ಲಿ ಹೋಗುವುದು ಬೇಡ ಅಂತ ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುತೇನೆ ಎಂದು ಮನವಿ ಮಾಡಿದ್ದಾರೆ.

  • ಸುಮಲತಾ ಅಂಬರೀಶ್ ಫೇಸ್ ಬುಕ್ ಪ್ರೊಫೈಲ್ ಚೇಂಜ್

    ಸುಮಲತಾ ಅಂಬರೀಶ್ ಫೇಸ್ ಬುಕ್ ಪ್ರೊಫೈಲ್ ಚೇಂಜ್

    ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಪಂಚಭೂತಗಳಲ್ಲಿ ಲೀನರಾದ ಬಳಿಕ ಪತ್ನಿ ಸುಮಲತಾ ಅಮರನಾಥ್ ಅವರು ತಮ್ಮ ಪತಿಯೊಂದಿಗೆ ಕಳೆದ ಸಂತಸದ ಕ್ಷಣಗಳನ್ನು ನೆನಪು ಮಾಡಿಕೊಂಡಿದ್ದು, ಈ ಮೂಲಕ ತಮ್ಮ ಫೇಸ್‍ಬುಕ್ ಪ್ರೊಫೈಲ್ ಫೋಟೋ ಬದಲಿಸಿದ್ದಾರೆ.

    ಮಲೇಷಿಯಾದಲ್ಲಿ ನಡೆದ 25ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂದರ್ಭದಲ್ಲಿ ತೆಗೆಸಿದ್ದ ಫೋಟೋವನ್ನ ಮಂಗಳವಾರ ಮಧ್ಯಾಹ್ನ ವೇಳೆಗೆ ತಮ್ಮ ಫೇಸ್ ಬುಕ್ ಕವರ್ ಫೋಟೋ ಆಗಿ ಅಪ್ ಡೇಟ್ ಮಾಡಿದ್ದಾರೆ. ಅಲ್ಲದೇ ಅಂತಿಮ ವಿಧಿ ವಿಧಾನ ನಡೆಯುವ ವೇಳೆ ಇರಿಸಿದ್ದ ಫೋಟೋವನ್ನು ಪ್ರೊಫೈಲ್ ಆಗಿ ಫೋಟೋ ಮಾಡಿದ್ದಾರೆ.

    ಸುಮಲತಾ ಅವರ ಪ್ರೊಫೈಲ್ ಬದಲಾಗುತ್ತಿದಂತೆ ಕೆಲ ಅಭಿಮಾನಿಗಳು ಫೋಟೋ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಂಬಿ ಅವರನ್ನು ಕಳೆದುಕೊಂಡ ಬಗ್ಗೆ ಸಂತಾಪ ಸೂಚಿಸಿ, ಸುಮಲತಾ ಅವರಿಗೆ ಸಾಂತ್ವನದ ನುಡಿಗಳನ್ನ ಹೇಳಿದ್ದಾರೆ. ಅಲ್ಲದೇ ಪ್ರೀತಿ, ನೋವುಗಳ ಮಧ್ಯೆ ಅಂಬಿ ಅವರಿಗೆ ಬೆಂಬಲವಾಗಿ ನಿಂತ ನಿಮಗೆ ಧನ್ಯವಾದ ಎಂದು ತಿಳಿಸಿದ್ದಾರೆ.

    1984 ರಲ್ಲಿ ಬಂದ ಕನ್ನಡ `ಆಹುತಿ’ ಸಿನಿಮಾದಲ್ಲಿ ಅಂಬರೀಶ್ ಹಾಗೂ ಸುಮಲತಾ ಅವರು ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡಿದ್ದರು. ಬಳಿಕ ಸುಮಾರು ಆರೇಳು ಸಿನಿಮಾಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ ಈ ಜೋಡಿಯ ಸ್ನೇಹ ಪ್ರೀತಿಗೆ ತಿರುಗಿ 1991 ರಲ್ಲಿ ಮದುವೆಯಾಗಿದ್ದರು. 27 ವರ್ಷ ಸಂತದ ಸಂಸಾರ ನಡೆಸಿದ್ದ ಈ ಜೋಡಿ ತಮ್ಮ 25ನೇ ವಿವಾಹ ವಾರ್ಷಿಕೋತ್ಸವವನ್ನು ಮಲೇಷಿಯಾದಲ್ಲಿ ಆಚರಣೆ ಮಾಡಿ ಸಂಭ್ರಮಿಸಿದ್ದರು. ಈ ವೇಳೆ ತೆಗೆದ ಫೋಟೋವನ್ನೇ ಸುಮಲತಾ ಅವರು ತಮ್ಮ ಫೇಸ್‍ಬುಕ್ ಪ್ರೊಫೈಲ್‍ಗೆ ಅಪ್ ಡೇಟ್ ಮಾಡಿದ್ದಾರೆ.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv