ತಮ್ಮ ಬ್ಯಾಂಕ್ ಖಾತೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ನಟಿ ಚೈತ್ರಾ ಹಳ್ಳಿಕೇರಿ ಅವರು ತಮ್ಮ ಪತಿ ಬಾಲಾಜಿ ಮತ್ತು ಮಾವ ಎಂ.ಕೆ ಪೋತರಾಜು ವಿರುದ್ಧ ದೂರು ದಾಖಲಿಸಿದ್ದರು. ಅವರ ಮೇಲೆ ಕ್ರಮ ತಗೆದುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ದೂರಿಗೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು
ನಟಿ ಚೈತ್ರಾ ಹಳ್ಳಿಕೇರಿ ತಮ್ಮ ಮೇಲೆ ದಾಖಲಿಸಿರುವ ದೂರು ಮತ್ತು ಅದಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸುವಂತೆ ಬಾಲಾಜಿ ಮತ್ತು ಅವರ ತಂದೆ ಪೋತರಾಜು ಅವರು ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ವಾದ ಆಲಿಸಿದ ನ್ಯಾಯಮೂರ್ತಿಗಳಾದ ಹೇಮಂತ್ ಚಂದನಗೌಡರ್ ಅವರು ತಡೆಯಾಜ್ಞೆ ನೀಡಿದ್ದಾರೆ. ಈ ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಶ್ಯಾಮಸುಂದರ್ ವಾದಿಸಿದ್ದರು. ಇದನ್ನೂ ಓದಿ:`ಜವಾನ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಶಾರುಖ್ ಖಾನ್ ಎಂಟ್ರಿ
ಚೈತ್ರಾ ಹಳ್ಳಿಕೇರಿ ಈ ಹಿಂದೆಯೇ ಪತಿಯ ವಿರುದ್ಧ ದೂರು ದಾಖಲಿಸಿದ್ದರು. ತಮಗೆ ನಿರಂತರ ಹಿಂಸೆ ಕೊಡುತ್ತಿದ್ದಾರೆ ಎಂದೂ ಅವರು ಆರೋಪಿಸಿದ್ದರು. ಈ ಬಾರಿ ತಮ್ಮ ಅರಿವಿಗೆ ಬಾರದಂತೆ ತಮ್ಮದೇ ಹೆಸರಿನಲ್ಲಿ ಪತಿ ಮತ್ತು ಮಾವ ಬ್ಯಾಂಕ್ ಖಾತೆ ತೆಗೆದು ವ್ಯವಹರಿಸಿದ್ದಾರೆ ಎಂದು ದೂರು ದಾಖಲಿಸಿದ್ದರು.
ನಟಿ ಮತ್ತು ರೂಪದರ್ಶಿ ಕೇರಳದ ಶಹನಾ ಮೇ 12 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ನಟಿಯ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಕೇರಳದ ಕೊಯಿಕ್ಕೊಡ್ ನ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದ್ದು, ಈ ಸಂಬಂಧ ದೂರು ಕೂಡ ದಾಖಲಾಗಿತ್ತು. ಶಹನಾ ಸಾವಿನ ಕುರಿತು ತನಿಖೆ ನಡೆಸಿರುವ ಕೇರಳದ ಪೊಲೀಸರು ಒಂದಷ್ಟು ಮಾಹಿತಿಯನ್ನು ಹೊರ ಹಾಕಿದ್ದಾರೆ. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು
ನಟಿ ಶಹನಾ ಸಾವಿಗೆ ಅವರ ಪತಿಯೇ ಕಾರಣವೆಂದು ಶಹನಾ ಕುಟುಂಬ ಆರೋಪಿಸಿತ್ತು. ಹೀಗಾಗಿ ಪೊಲೀಸ್ ರು ತನಿಖೆಯನ್ನು ಚುರುಕುಗೊಳಿಸಿದ್ದರು. ಈ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಕಲೆ ಹಾಕಿರುವ ಅಧಿಕಾರಿಗಳು, ಆಕೆ ಬರೆದಿರುವ ಡೈರಿಯನ್ನು ಪತ್ತೆ ಮಾಡಿದ್ದಾರೆ. ಈ ಡೈರಿಯಲ್ಲಿ ಶಹನಾ ತನ್ನ ಗಂಡನ ಕರಾಳ ಮುಖಗಳನ್ನು ಬರೆದಿಟ್ಟಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ
ಶಹನಾ ಅವರಿಗೆ ತಮ್ಮ ಗಂಡನ ಕಡೆಯ ಕುಟುಂಬ ಸಿಕ್ಕಾಪಟ್ಟೆ ಹಿಂಸೆ ನೀಡಿದೆಯಂತೆ. ಊಟ ಕೊಡದೇ ಸತಾಯಿಸಿದೆಯಂತೆ. ಎರಡು ದಿನಕ್ಕೊಮ್ಮೆ ಒಂದು ತುಂಡು ಬ್ರೆಡ್ ಕೊಡುತ್ತಿದ್ದರು ಎಂದು ಡೈರಿಯಲ್ಲಿ ಬರೆದಿದ್ದಾರೆ ಎನ್ನುತ್ತಿವೆ ಮೂಲಗಳು. ನನ್ನ ಪತಿಯ ಕುಟುಂಬಕ್ಕೆ ಸೊಸೆ ಬೇಕಿರಲಿಲ್ಲ, ಒಬ್ಬ ಸೇವಕಿ ಬೇಕಿತ್ತು ಎಂದು ಶಹನಾ ಬರೆದಿದ್ದಾರಂತೆ.
ಮಾನಸಿಕ ಕಿರುಕುಳ ಮಾತ್ರವಲ್ಲ, ದೈಹಿಕ ಹಿಂಸೆಯನ್ನೂ ಮಾಡಿದ್ದಾರೆ ಎಂದು ಡೈರಿಯಲ್ಲಿ ಬರೆದಿದ್ದಾರಂತೆ ಶಹನಾ. ಗಂಡನ ಅತೃಪ್ತ ಜೀವನದಿಂದ ತಾವು ಖಿನ್ನತೆಗೆ ಒಳಗಾಗಬೇಕಾಯಿತು ಎಂದು ಡೈರಿಯಲ್ಲಿ ಉಲ್ಲೇಖಿಸಿದ್ದಾರಂತೆ.
ನಟಿಯರ ಆತ್ಮಹತ್ಯೆಯ ಸರಣಿ ಮತ್ತೆ ಮುಂದುವರೆದಿದ್ದು, ಇದೀಗ ಕೋಲ್ಕತ್ತಾದಿಂದ ತೆಲುಗು ಸಿನಿಮಾ ರಂಗಕ್ಕೆ ಶಿಫ್ಟ್ ಆಗಿದೆ. ಹದಿನೈದು ದಿನಗಳಲ್ಲಿ ಪಶ್ಚಿಮ ಬಂಗಾಳದ ನಾಲ್ವರು ನಟಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸರಣಿ ಸಾವು ಪೊಲೀಸ್ ಅಧಿಕಾರಿಗಳನ್ನೂ ನಿದ್ದೆಗೆಡಿಸಿತ್ತು. ತನಿಖೆಗೂ ಆದೇಶ ಮಾಡಲಾಗಿದೆ. ಇದನ್ನೂ ಓದಿ:ಸಿಧು ಮೂಸೆ ವಾಲಾ ಹತ್ಯೆ: ತನಿಖೆ ವೇಳೆ ಶಾಕಿಂಗ್ ವಿಚಾರ ಬಯಲು
ಈ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ ಟಾಲಿವುಡ್ ನಲ್ಲೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ತೆಲುಗಿನ ಕಿರುತೆರೆಯ ಹೆಸರಾಂತ ನಟ ಮೈಥಿಲಿ, ಭಾರೀ ಪ್ರಮಾಣದ ಮದ್ಯದ ಜೊತೆ ನಿದ್ದೆ ಮಾತ್ರೆ ಬೆರೆಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿರುವ ನಟಿಯನ್ನು ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ವಿಜಯ್ ದೇವರಕೊಂಡ ಚಿತ್ರಕ್ಕೆ ಜೋಡಿಯಾಗಿ ಕರಾವಳಿ ನಟಿ ಫಿಕ್ಸ್
ಮೈಥಿಲಿ ರೆಡ್ಡಿ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗುತ್ತಿದೆ. ಪತಿಯು ಬೇರೆ ಹುಡುಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನುವ ಕಾರಣಕ್ಕಾಗಿ ಕುಟುಂಬದಲ್ಲಿ ಗಲಾಟೆಗಳು ನಡೆಯುತ್ತಿದ್ದವು ಎಂದು ಹೇಳಲಾಗಿದ್ದು, ಈ ಸಂಬಂಧ ಎರಡು ಬಾರಿ ಮೈಥಿಲಿ ಅವರು ಗಂಡನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ:ಕಿಯಾರಾಗೆ ಸಿದ್ಧಾರ್ಥ್ ಮಲ್ಹೋತ್ರಾ ಕ್ಲಾಸ್: ಅಷ್ಟಕ್ಕೂ ಆಗಿದ್ದೇನು?
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಆತ್ಮಹತ್ಯೆಯ ಯತ್ನಕ್ಕೆ ನಿಜವಾದ ಕಾರಣ ಏನು ಅನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆ. ಅಂದಹಾಗೆ ಪತಿ ಶ್ರೀಧರ್ ರೆಡ್ಡಿ ಕೂಡ ಟಿವಿ ಕಾರ್ಯಕ್ರಮವೊಂದರ ನಿರ್ದೇಶಕ ಎನ್ನಲಾಗುತ್ತಿದೆ.
ಸ್ಯಾಂಡಲ್‌ವುಡ್‌ನಲ್ಲಿ ನಟಿ ಕಮ್ ನಿರೂಪಕಿ ಅನುಪಮಾ ಗೌಡ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ನಟಿಯಾಗಿದ್ದ ಅನುಪಮಾ ಗೌಡ ಈಗ ಓಪನ್ ವಾಟರ್ ಡ್ರೈವರ್ ಆಗಿ ಬಡ್ತಿ ಪಡೆದಿದ್ದಾರೆ. ಅನುಪಮಾ ಅವರ ಹೊಸ ಸಾಹಸಕ್ಕೆ ಸರ್ಟಿಫಿಕೇಟ್ ಕೂಡ ಗಿಟ್ಟಿಸಿಕೊಂಡಿದ್ದಾರೆ.
ಬಿಗ್ ಬಾಸ್ ಶೋ ಸ್ಪರ್ಧಿಯಾಗಿ, ನಟಿಯಾಗಿ ನಿರೂಪಕಿಯಾಗಿ ಅಪಾರ ಅಭಿಮಾನಿಗಳ ಮನಗೆದ್ದ ಚೆಲುವೆ ಅನುಪಮಾ ಗೌಡ. ಇತ್ತೀಚಿನ `ನನ್ನಮ್ಮ ಸೂಪರ್ ಸ್ಟಾರ್’ ಶೋ ಮೂಲಕ ಸಖತ್ ಸದ್ದು ಮಾಡಿದ್ದರು. ಈಗ ಬ್ರೇಕ್ ಟೈಮ್‌ನಲ್ಲಿ ಗಟ್ಟಿಗಿತ್ತಿ ಅನುಪಮಾ ಗೌಡ ಹೊಸ ಸಾಹಸವೊಂದನ್ನ ಮಾಡಿ, ಮುಗಿಸಿದ್ದಾರೆ.
ಈ ನಟಿಗೆ ಟ್ರಾವೆಲ್ ಮಾಡೋದು ಅಂದ್ರೆ ತುಂಬಾ ಇಷ್ಟ. ಕಳೆದ ಬಾರಿ ಕಿರುತೆರೆ ನಟಿಯರೊಂದಿಗೆ ಗೋವಾ ಪ್ರವಾಸಕ್ಕೆ ಹೋಗಿ ಮಸ್ತ್ ಮಜಾ ಮಾಡಿ ಬಂದಿದ್ದರು. ಈಗ ಅನುಪಮಾ ಥೈಲಾಂಡ್‌ಗೆ ಹೋಗಿದ್ದಾರೆ. ಆದರೆ ಈ ಸಲ ಸುಮ್ಮನೆ ಮಜಾ ಮಾಡಲು ಹೋಗಿಲ್ಲ, ಬದಲಾಗಿ ಸಮುದ್ರ ಆಳದಲ್ಲಿ ಸಂಚರಿಸೋ ಬಗ್ಗೆ ಕೋರ್ಸ್ ಮಾಡಿ, ಎಕ್ಸಾಂ ಬರೆದು ಇದೀಗ ಓಪನ್ ವಾಟರ್ ಡ್ರೈವರ್ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಹೋರಾಟಕ್ಕೆ ಮಣಿದ ಅಕ್ಷಯ್ ಕುಮಾರ್: ಬಾಲಿವುಡ್ ಮಂದಿಯ ನಿದ್ದೆಗೆಡಿಸುತ್ತಿದೆ ಕರಣಿ ಸೇನಾ ಸಂಘಟನೆ
ಅನುಪಮಾ ಪಡೆದಿರೋದು ಓಪನ್ ವಾಟರ್ ಡೈವರ್ ಅನ್ನೋ ಸ್ಕ್ಯೂಬಾದ ಮೊದಲ ಹಂತದ ಸರ್ಟಿಫಿಕೇಟ್. ಒಂದಿಷ್ಟು ಡಾಲರ್‌ಗಳನ್ನು ಪಾವತಿಸಿ ನಾಲ್ಕರಿಂದ ಏಳು ದಿನ ಅಂದರೆ ಟ್ರೈನಿಂಗ್ ಪಡೆದು ಎಕ್ಸಾಂ ಬರೆದು ಈ ಸರ್ಟಿಫಿಕೇಟ್ ಪಡೆದಿದ್ದಾರೆ. ಇನ್ನು ಈ ಕೋರ್ಸ್ನ ಕೊನೆಯಲ್ಲಿ ನಿಮಗೆ ಸಮುದ್ರದಾಳದಲ್ಲಿ ಸಂಚರಿಸೋ ಬಗ್ಗೆ ಜ್ಞಾನ ಸಿಗುತ್ತೆ. ಈ ಸರ್ಟಿಫಿಕೇಟ್ ಪಡೆದರೆ ವಿಶ್ವದ ಎಲ್ಲಿ ಬೇಕಿದ್ದರೂ ಹೋಗಿ ಅಂಡರ್‌ವಾಟರ್ ನಲ್ಲಿ ಸ್ಕ್ಯೂಬಾ ಡೈವಿಂಗ್ ಮಾಡಬಹುದಾಗಿದೆ. ಒಟ್ನಲ್ಲಿ ಗಟ್ಟಿಗಿತ್ತಿ ಅನುಪಮಾ ಹೊಸ ಸಾಹಸದ ವಿಚಾರ ಕೇಳಿ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದಾರೆ.
ಎರಡು ದಿನಗಳಿಂದ ಸ್ಯಾಂಡಲ್‌ವುಡ್‌ನಲ್ಲಿ ನಟಿ ಚೈತ್ರಾ ಹಳ್ಳಿಕೇರಿ ಅವರ ಸುದ್ದಿಯೇ ಹೆಚ್ಚು ಸದ್ದು ಮಾಡುತ್ತಿದೆ. ತಮ್ಮ ಪತಿ ಮತ್ತು ಅವರ ಕುಟುಂಬದವರು ತಮಗೆ ಮೋಸ ಮಾಡಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಚೈತ್ರಾ ಹಳ್ಳಿಕೇರಿ, ತಮ್ಮ ಪತಿಯಿಂದ ದೈಹಿಕ ಹಲ್ಲೆಗೊಳಗಾಗಿರುವೆ ಎಂದೂ ಹೇಳಿದ್ದಾರೆ. ಅಲ್ಲದೇ, ಇದೀಗ ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆಗೆದು ಪತಿಯ ಕುಟುಂಬ ತಮಗೆ ಮೋಸ ಮಾಡಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ : ನಿಮ್ಮ ಬಾಡಿಯನ್ನು ನೀವೇ ಲವ್ ಮಾಡಬೇಕು : ರಾಗಿಣಿ
ಕೌಟುಂಬಿಕ ಕಾರಣಕ್ಕಾಗಿ ಚೈತ್ರಾ ಹಳ್ಳಿಕೇರಿ ಸುದ್ದಿ ಆಗಿದ್ದು, ಇದೇ ಮೊದಲೇನೂ ಅಲ್ಲ. ಈ ಹಿಂದೆ 2018ರಲ್ಲೂ ಅವರು ಪತಿಯ ವಿರುದ್ಧ ದೂರು ದಾಖಲಿಸಿದ್ದರು. ತಮಗೆ ಪತಿಯಿಂದ ವಿಪರೀತ ಹಿಂಸೆ ಆಗುತ್ತಿದೆ. ಹಾಗೂ ತಾವು ನಿರ್ಮಿಸಿದ್ದ ಧಾರಾವಾಹಿಯಿಂದ ಬಂದ ಹಣವನ್ನೂ ಅವರು ಕಿತ್ತುಕೊಂಡಿದ್ದಾರೆ ಎಂದು ದೂರು ಕೊಟ್ಟಿದ್ದರು. ಆನಂತರ ಪತಿಯೊಂದಿಗೆ ಜೀವನ ನಡೆಸುತ್ತೇನೆ ಎಂದು ಒಪ್ಪಂದಕ್ಕೂ ಬಂದಿದ್ದರು. ಇದನ್ನೂ ಓದಿ : ಸದ್ದಿಲ್ಲದೇ ಶುರುವಾಯ್ತು ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ : ಮೊದಲ ದಿನವೇ ಫೋಟೋ ಲೀಕ್
ಇದೀಗ ಮತ್ತೆ ಚೈತ್ರಾ ಹಳ್ಳಿಕೇರಿ ತಮ್ಮ ಪತಿಯ ವಿರುದ್ಧ ಮತ್ತೊಂದು ಆರೋಪ ಮಾಡಿದ್ದಾರೆ. ತಮಗೆ ಗೊತ್ತೇ ಇಲ್ಲದಂತೆ ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು, ಸಾಲ ತಗೆದುಕೊಂಡಿದ್ದಾರೆ ಹಾಗೂ ತಮ್ಮದೇ ಗೋಲ್ಡ್ ಅಡವಿಟ್ಟು, ಪತಿಯು ಸಾಲ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ಜೊತೆ ಹೊಂದಾಣಿಕೆ ಸಾಧ್ಯವಿಲ್ಲ. ಹಾಗಾಗಿ ಅವರಿಂದ ದೂರವಾಗುವುದು ನಿಶ್ಚಿತ ಎಂದೂ ಹೇಳಿದ್ದಾರೆ. ಇದನ್ನೂ ಓದಿ : ಧನುಶ್ ನಟನೆಯ ಹಾಲಿವುಡ್ ಸಿನಿಮಾದ ಟ್ರೇಲರ್ ರಿಲೀಸ್ : ಎಲ್ಲಿದ್ದಾರೆ ಧನುಶ್?
ಇಷ್ಟೆಲ್ಲ ಆರೋಪ ಮಾಡುತ್ತಿರುವ ಚೈತ್ರಾ ಹಳ್ಳಿಕೇರಿ ಯಾರು ಎನ್ನುವ ಕುತೂಹಲ ಸಿನಿಮಾ ಪ್ರೇಮಿಗಳದ್ದು. ವೆಲ್ ಡನ್ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿದವರು ಚೈತ್ರಾ ಹಳ್ಳಿಕೇರಿ. ಆನಂತರ ಗೌಡ್ರು, ಖುಷಿ, ಶಿಷ್ಯ, ಗುನ್ನ, ಪಾರ್ಥ, ಶ್ರೀ ದಾನಮ್ಮ ದೇವಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದರು. ಮದುವೆಯ ನಂತರ ಸಿನಿಮಾ ರಂಗದಿಂದಲೇ ದೂರವಾದರು. ಇದೀಗ ಮತ್ತೆ ಸಿನಿಮಾಗಳಲ್ಲಿ ನಟಿಸುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
ಗಂಡ ಬಾಲಾಜಿ ಪೋತರಾಜ್ ಹಾಗೂ ಮಾವ ಪೋತರಾಜ್, ತಮ್ಮ ಸಹಿ ಫೋರ್ಜರಿ ಮಾಡಿ ಗೋಲ್ಡ್ ಪಡೆದಿದ್ದಾರೆ. ಇದರಲ್ಲಿ ಬ್ಯಾಂಕ್ ಮ್ಯಾನೇಜರ್ ಕೂಡಾ ಇದರಲ್ಲಿ ಶಾಮೀಲಾಗಿದ್ದಾರೆ. ನನಗೆ ವಂಚನೆ ಮಾಡಿ ಜೀವಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ನಟಿ ಉಲ್ಲೇಖಿಸಿದ್ದಾರೆ.
ಬೆಂಗಳೂರು: ಕಿರುತೆರೆ ನಟಿ ಚೇತನಾ ರಾಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಯಾಟ್ ಸರ್ಜರಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗೆ ಬೀಗ ಜಡಿಯಲಾಗಿದ್ದು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.
ಸಾವಿನ ಘಟನೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಆರೋಗ್ಯ ಇಲಾಖೆಯು ಡಾ.ಶೆಟ್ಟಿಗೆ ನೋಟಿಸ್ ಕೊಟ್ಟು ಆಸ್ಪತ್ರೆಯನ್ನ ಬಂದ್ ಮಾಡಿಸಲಾಗಿದೆ. ದೂರಿನ ಅನ್ವಯ ಸಾವಿನ ರಾಹಸ್ಯ ಭೇದಿಸಲು ಮುಂದಾಗಿದ್ದ ಸುಬ್ರಹ್ಮಣ್ಯ ನಗರ ಪೊಲೀಸರು, ಆಸ್ಪತ್ರೆಯ ಸಾಹೇಬ್ ಗೌಡ ಶೆಟ್ಟಿ ಸೇರಿದಂತೆ ನಾಲ್ವರ ವಿರುದ್ಧ ನೋಟಿಸ್ ಜಾರಿಗೊಳಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಚೇತನಾ ರಾಜ್ ಸಾವು: ಬಾಡಿ ಶೇಮಿಂಗ್ ವಿರುದ್ಧ ದನಿಯೆತ್ತಿದ ಅಶ್ವಿತಿ ಶೆಟ್ಟಿ
ಏನಿದು ಪ್ರಕರಣ?: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್ ಈಚೆಗಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು. ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ವಾಸವಿರುವ ನಟಿಯ ಪೋಷಕರು, ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ನಾಳೆ ಬೆಂಗಳೂರಿಗೆ ಸನ್ನಿ ಲಿಯೋನ್ : ಮಂಡ್ಯಗೆ ಹೋಗಿ ರಕ್ತದಾನ ಮಾಡ್ತಾರಾ ಶೇಷಮ್ಮ?
ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎಂದು ಹೇಳಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ವೈದ್ಯರಿಗೆ ನೋಟಿಸ್ ನೀಡಿದ್ದಾರೆ.
ಈ ಇಂಡಸ್ಟ್ರಿಯಲ್ಲಿ ನಟಿಯರಿಗೆ ಅವಾಸ್ತವಿಕ ಸೌಂದರ್ಯದ ವಿಚಾರವಾಗಿ ತೀವ್ರ ಒತ್ತಡ ಹಾಕಲಾಗುತ್ತಿದೆ ಎಂದು ಮೋಹಕ ತಾರೆ ರಮ್ಯಾ ನಟಿಯರು ಎದುರಿಸುವ ಸವಾಲನ್ನು ಬಿಚ್ಚಿಡುವ ಮೂಲಕ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ.
ಯುವನಟಿ ಚೇತನಾ ರಾಜ್ ನಿಧನಕ್ಕೆ ಸಂತಾಪ ಸೂಚಿಸಿದ ರಮ್ಯಾ, ಪ್ಲಾಸ್ಟಿಕ್ ಸರ್ಜರಿಯಿಂದ ಯುವ ನಟಿ ನಿಧನರಾಗಿರುವ ಸುದ್ದಿ ತಿಳಿಯಿತು. ನನ್ನ ಕಾಲಿನ ಟ್ಯೂಮರ್ ತೆಗೆಸಿದ ಬಳಿಕ ನಾನು ದಪ್ಪಗಾದೆ. ನಾನು ಈಗ ವೇಟ್ ಲಾಸ್ ಜರ್ನಿಯಲ್ಲಿದ್ದೆ. ಆದರೆ ನನಗೆ ಜೀವ ಕಳೆದುಕೊಂಡ ಈ ನಟಿ ಬಗ್ಗೆ ಸಹಾನುಭೂತಿಯಿದೆ ಎಂದರು. ಇದನ್ನೂ ಓದಿ: ನಟಿ ಚೇತನಾ ರಾಜ್ ಸಾವು : ತೆಳ್ಳಗಾಗಿಸುವ ಚಿಕಿತ್ಸೆ ಪ್ರಾಣಕ್ಕೆ ಅಪಾಯ
ಪುರುಷನಾದನು ಸಂಪೂರ್ಣವಾಗಿ ತಲೆಕೂದಲು ಕಳೆದುಕೊಂಡು ಟೋಪಿ ಹಾಕಿಕೊಳ್ಳಬಹುದು. ಮುಖದಲ್ಲಿನ ಒಂದೊಂದು ಗಲ್ಲವೂ 5 ಕೆಜಿ ಇರಬಹುದು. 65 ವರ್ಷವಾದರೂ ಆತ ಹೀರೋ ಆಗುತ್ತಾನೆ. ಆದರೆ ಇದೇ ಮಹಿಳೆಗೆ ಅನ್ವಯವಾಗಿ ಆಕೆ ತೂಕ ಹೆಚ್ಚಿಸಿಕೊಂಡರೆ ಆಂಟಿ, ಬುಡ್ಡಿ, ಅಜ್ಜಿ ಎಂದು ಕರೆಯಲಾಗುತ್ತದೆ ಎಂದು ರಮ್ಯಾ ಸಾಮಾಜಿಕ ಮಾಧ್ಯಮದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಈ ಇಂಡಸ್ಟ್ರಿ ನಟಿಯರ ಪಾತ್ರದ ವಿಚಾರವಾಗಿ ಇನ್ನೂ ಸುಧಾರಣೆ ಆಗಬೇಕು. ಇಂಡಸ್ಟ್ರಿ ಬದಲಾಗಬೇಕು. ಈ ವಿಷಯದ ಕುರಿತು ಮಹಿಳೆ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ರಮ್ಯಾ ಆಗ್ರಹಿಸಿದರು.
ಇತ್ತೀಚಿನ ದಿನಗಳಲ್ಲಿ ಬಹುತೇಕರು ಸೌಂದರ್ಯದ ಹಿಂದೆ ಬಿದ್ದು ನಾನಾ ರೀತಿಯ ಅಪಾಯಗಳನ್ನು ತಂದುಕೊಳ್ಳುತ್ತಿದ್ದಾರೆ. ಅದರಲ್ಲೂ ತೆಳ್ಳಗಾಗುವ ನಿಟ್ಟಿನಲ್ಲಿ ಸಾಕಷ್ಟು ಕಲಾವಿದೆಯರು ನಾನಾ ರೀತಿಯ ಮಾರ್ಗಗಳನ್ನು ಕಂಡುಕೊಂಡಿದ್ದಾರೆ. ವೈಜ್ಞಾನಿಕವಾಗಿ ಅವುಗಳು ಸರಿಯಾದ ಕ್ರಮವಲ್ಲ ಎಂದು ಗೊತ್ತಿದ್ದರೂ, ತಾವು ನೋಡುಗರ ಮುಂದೆ ಸುಂದರವಾಗಿ ಕಾಣಬೇಕು ಎನ್ನುವ ದೃಷ್ಟಿಯಿಂದ ಶಾರ್ಟ್ ಕಟ್ ವಿಧಾನವನ್ನು ಅನುಸರಿಸುತ್ತಿದ್ದಾರೆ. ಹೀಗಾಗಿ ಜೀವಕ್ಕೆ ಅಪಾಯ ಆಗುವಂತ ಚಿಕಿತ್ಸೆಗೂ ಅನೇಕರು ಮುಂದಾಗುತ್ತಾರೆ. ಇಂತಹ ಮಾರ್ಗ ಅನುಸರಿಸಿದ ಕಿರುತೆರೆ ನಟಿ ಚೇತನಾ ರಾಜ್ ಪ್ರಾಣ ಬಿಟ್ಟಿದ್ದಾರೆ.
ಯೋಗ, ವ್ಯಾಯಾಮ, ಆಹಾರ ಕ್ರಮಗಳ ಮೂಲಕ ತೂಕ ಇಳಿಸಿಕೊಳ್ಳಲು ತುಂಬಾ ಸಮಯ ಬೇಕಾಗುವುದರಿಂದ ಚಿಕಿತ್ಸೆ ಮೂಲಕ ತೂಕ ಇಳಿಸಿಕೊಳ್ಳಲು ಮುಂದಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಲಿಪೊಸಕ್ಷನ್ ಸೇರಿದಂತೆ ಅನೇಕ ಚಿಕಿತ್ಸೆ ವಿಧಾನಗಳ ಮೂಲಕ ವೇಟ್ ಲಾಸ್ ಮಾಡಿಸಿಕೊಳ್ಳುವವರ ಸಂಖ್ಯೆಯೂ ಹೆಚ್ಚಾಗಿದೆ ಎನ್ನುತ್ತಿದೆ ವೈದ್ಯ ಅಂಕಿ ಅಂಶ. ಇದನ್ನೂ ಓದಿ: ಫ್ಯಾಟ್ ಸರ್ಜರಿ ಎಫೆಕ್ಟ್ – ಕಿರುತೆರೆ ನಟಿ ಚೇತನಾ ರಾಜ್ ಸಾವು
ವ್ಯಾಯಾಮ ಮತ್ತು ಆಹಾರ ಕ್ರಮದಿಂದ ದೇಹದ ಬೊಜ್ಜನ್ನು ಕರಗಿಸಬಹುದಾಗಿದ್ದರೂ, ಅದು ಸುಲಭವಾಗಿ ಕರಗುವುದಿಲ್ಲ ಎಂಬ ಕಾರಣಕ್ಕಾಗಿ ಲಿಪೋಸಕ್ಷನ್ ರೀತಿಯ ಚಿಕಿತ್ಸೆಗಳು ಇಂದು ಜನಪ್ರಿಯವಾಗಿವೆ. ಇಂತಹ ಚಿಕಿತ್ಸೆ ಪಡೆಯುವ ಮುನ್ನ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ತಗೆದುಕೊಳ್ಳಲೇಬೇಕು ಎನ್ನುತ್ತಾರೆ ವೈದ್ಯರು.
ಲಿಪೊಸಕ್ಷನ್ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ನಾವು ಅಂದುಕೊಂಡಷ್ಟು ತೂಕ ಇಳಿಯುತ್ತದೆ ಎನ್ನುವುದು ತಪ್ಪು. ವ್ಯಕ್ತಿಯಿಂದ ವ್ಯಕ್ತಿಗೆ ಕೊಬ್ಬು ಕಡಿಮೆ ಆಗುತ್ತದೆ ಎನ್ನುವುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಯಾವ ವ್ಯಕ್ತಿಗೆ ಎಷ್ಟು ತೂಕ ಕಡಿಮೆ ಮಾಡಿಕೊಳ್ಳಬೇಕು ಎನ್ನುವುದನ್ನು ವೈದ್ಯರು ನಿರ್ಧರಿಸುತ್ತಾರೆ. ತೂಕ ಇಳಿಸಿಕೊಳ್ಳುವಾಗಿ ಇಂತಿಷ್ಟೇ ತೂಕ ಕಡಿಮೆ ಮಾಡಬೇಕು ಎಂದು ವೈದ್ಯರನ್ನು ಪೋರ್ಸ್ ಮಾಡಬೇಡಿ. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್‌ಫ್ರೆಂಡ್ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ
ಈ ರೀತಿಯ ಚಿಕಿತ್ಸೆಯಿಂದ ಮ್ಯಾಕ್ಸಿಮಮ್, ಐದಾರು ಕೇಜಿ ತೂಕ ಕಡಿಮೆ ಮಾಡಿಸಿಕೊಳ್ಳಬಹುದು. ಇದಕ್ಕಿಂತ ಜಾಸ್ತಿ ತೂಕ ಕಡಿಮೆ ಮಾಡಿಸಿಕೊಳ್ಳಲು ಮುಂದಾದರೆ, ಅಪಾಯ ಕಟ್ಟಿಟ್ಟ ಬುತ್ತಿ. ಈ ಸಮಯದಲ್ಲಿ ಸಾವೂ ಸಂಭವಿಸಬಹುದು ಎನ್ನುತ್ತಾರೆ ವೈದ್ಯರು. ಚಿಕಿತ್ಸೆ ಸಮಯದಲ್ಲಿ ಅಥವಾ ಚಿಕಿತ್ಸೆಯ ನಂತರವೂ ಆರೋಗ್ಯದಲ್ಲಿ ಏರುಪೇರಾಗಬಹುದು. ಹಾಗಾಗಿ ಯಶಸ್ಸಿ ಚಿಕಿತ್ಸೆ ನಂತರ ನಿರಂತರವಾಗಿ ವ್ಯಾಯಾಮ ಮತ್ತು ಆಹಾರದ ಕ್ರಮವನ್ನು ಪಾಲಿಸಲೇಬೇಕು. ಮತ್ತು ನುರಿತ ವೈದ್ಯರಿಂದಲೇ ಇಂತಹ ಚಿಕಿತ್ಸೆಯನ್ನು ಪಡೆಯಬೇಕು.
ಇಂತಹ ಚಿಕಿತ್ಸೆಗೆ ಒಳಗಾಗುವ ಮುನ್ನ ಮಾನಸಿಕವಾಗಿ ವ್ಯಕ್ತಿಯು ಸದೃಢವಾಗಿರಬೇಕು ಮತ್ತು ಚಿಕಿತ್ಸೆಯ ಮುನ್ನ ವೈದ್ಯರು ಹೇಳಿದ ಸಲಹೆಗಳನ್ನು ಚಾಚೂ ತಪ್ಪದೇ ಪಾಲಿಸಿರಬೇಕು. ಚಿಕಿತ್ಸೆಗೆ ಭಾಗಿಯಾಗುವಾಗ ಒಬ್ಬರೇ ಹೋಗಬೇಡಿ, ನಿಮ್ಮ ಕುಟುಂಬದವರಿಗೂ ಮಾಹಿತಿ ತಿಳಿಸಿ. ಮತ್ತು ಮತ್ತೊಬ್ಬ ವೈದ್ಯರ ಸಲಹೆಯನ್ನೂ ಪಡೆಯಬೇಕು.
ತಿರುವನಂತಪುರಂ: ಖ್ಯಾತ ನಟಿಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ಸ್ನೇಹಿತ ಶರತ್ ಜಿ ನಾಯರ್ ಅವರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಿದ ಆರೋಪದಡಿ ಪೊಲೀಸರು ಶರತ್ ಜಿ ನಾಯರ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ. ನಟ ದಿಲೀಪ್ ಜಾಮೀನು ಪಡೆದ ನಂತರ ಅವರ ಮನೆಗೆ ಶರತ್ ಜಿ ನಾಯರ್ ಭೇಟಿ ನೀಡಿದ್ದಾರೆ ಎಂಬ ಚಲನಚಿತ್ರ ನಿರ್ದೇಶಕ ಬಾಲಚಂದ್ರಕುಮಾರ್ ಹೇಳಿಕೆ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ದಿಲೀಪ್ ಅವರು, ನಟಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಸಂಚು ರೂಪಿಸಿದ್ದ ಆಡಿಯೋ ಟಿವಿಗಳಲ್ಲಿ ಪ್ರಸಾರವಾದ ಬಳಿಕ ದಿಲೀಪ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಉದ್ದೇಶಪೂರ್ವಕವಾಗಿ ತನ್ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಸಲು ತನಿಖಾಧಿಕಾರಿ ಯತ್ನಿಸಿದ್ದಾರೆ ಎಂದು ದಿಲೀಪ್ ಆರೋಪಿಸಿದ್ದರು. ಇದನ್ನೂ ಓದಿ: ಕನ್ನಡಿಗ ಅನಿಲ್ ಹೆಗ್ಡೆಗೆ ಬಿಹಾರ್ ರಾಜ್ಯಸಭಾ ಟಿಕೆಟ್
ತಮಿಳು, ತೆಲುಗು, ಮಲಯಾಳಂ, ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿರುವ ಖ್ಯಾತಿ ನಟಿಯನ್ನು 2017ರ ಫೆಬ್ರವರಿ 17ರಂದು ರಾತ್ರಿ ವಾಹನದಲ್ಲಿ ಅಪಹರಿಸಿ ಸುಮಾರು ಎರಡು ಗಂಟೆಗಳ ಕಾಲ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ನಟಿಯನ್ನು ಬ್ಲ್ಯಾಕ್ ಮೇಲ್ ಮಾಡುವ ಸಲುವಾಗಿ ಇಡೀ ಕೃತ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯಲಾಗಿತ್ತು.
ಈ ಪ್ರಕರಣದಲ್ಲಿ 10 ಮಂದಿ ಶಾಮೀಲಾಗಿದ್ದು, ಅದರಲ್ಲಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ನಂತರ ಆರೋಪಿ ದಿಲೀಪ್‍ರನ್ನು ಬಂಧಿಸಿ ಇದೀಗ ಜಾಮೀನಿನ ಆಧಾರದ ಮೇಲೆ ಬಿಡುಗಡೆಗೊಳಿಸಲಾಗಿದೆ. ಇದನ್ನೂ ಓದಿ: ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು