Tag: actress

  • ಅಡ್ಜಸ್ಟ್ ಮಾಡ್ಕೊಳ್ಳಿ: ಕಾಸ್ಟಿಂಗ್ ಕೌಚ್ ಕಹಿ ಅನುಭವ ಬಿಚ್ಚಿಟ್ಟ ನಟಿ

    ಅಡ್ಜಸ್ಟ್ ಮಾಡ್ಕೊಳ್ಳಿ: ಕಾಸ್ಟಿಂಗ್ ಕೌಚ್ ಕಹಿ ಅನುಭವ ಬಿಚ್ಚಿಟ್ಟ ನಟಿ

    ಹೈದರಾಬಾದ್: ಬಹುತೇಕ ಬಾಲಿವುಡ್ ನಟಿಯರು ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ಸಿನಿಮಾ ಉದ್ಯಮದಲ್ಲಿ ತಮಗಾದ ಕರಾಳ ಅನುಭವಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇದೀಗ ತಮಿಳು ಮತ್ತು ತೆಲಗು ನಟಿ ವಾಣಿ ಭಜನ್ ಆರಂಭದಲ್ಲಿ ತಾವು ಎದುರಿಸಿದ್ದ ದಿನಗಳನ್ನ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

    ಕೆಲವರು ಅಡ್ಜಸ್ಟ್ ಬಗ್ಗೆ ಮಾತನಾಡುತ್ತಿದ್ದರು. ಆದರೆ ಯಾರು ನನ್ನ ಜೊತೆ ಈ ಕುರಿತು ನೇರವಾಗಿ ಮಾತನಾಡಿಲ್ಲ. ಮ್ಯಾನೇಜರ್ ಮತ್ತು ನಿರ್ದೇಶಕರ ಮೂಲಕ ಮಾತುಗಳನ್ನಾಡಿದ್ದಾರೆ. ಬಹುತೇಕರು ಮ್ಯಾನೇಜರ್ ಮೂಲಕ ನನ್ನನ್ನು ಸಂಪರ್ಕಿಸುವ ಪ್ರಯತ್ನ ಸಹ ನಡೆಸಿದ್ದರು. ಫೋನ್ ಕರೆಗಳ ಬಗ್ಗೆ ನಾನು ಧ್ಯಾನ ನೀಡಲಿಲ್ಲ ಎಂದು ಹೇಳಿದ್ದಾರೆ.

    ಈ ರೀತಿಯ ಕೆಟ್ಟ ಅನುಭವಗಳಿಂದಾಗಿ ಸಿನಿಮಾಗಳಲ್ಲಿ ನಟಿಸಲಿಲ್ಲ. ಕಿರುತೆರೆಯಲ್ಲಿ ನನಗೆ ಸ್ಥಾನವಿದ್ದರಿಂದ ದೊಡ್ಡ ನಟಿಯಾಗಬೇಕೆಂಬ ಆಸೆ ನನಗಿರಲಿಲ್ಲ. ಇಂತಹ ಅಡ್ಜಸ್ಟ್ ಗಳಿಂದ ದೊಡ್ಡ ನಟಿಯಾಗಲು ಸಾಧ್ಯ. ಆದ್ರೆ ನಾನು ಆ ದಾರಿಯನ್ನು ಆಯ್ಕೆ ಮಾಡಿಕೊಳ್ಳಲಿಲ್ಲ. ಇನ್ನು ದೊಡ್ಡ ಸ್ಟಾರ್ ನಟಿಯರೆಲ್ಲ ಇದೇ ರೀತಿಯಲ್ಲಿ ಉನ್ನತ ಸ್ಥಾನ ತಲುಪಿದ್ದಾರೆ ಎಂದು ನಾನು ಹೇಳುತ್ತಿಲ್ಲ. ಇಂತಹ ಜನರ ಜೊತೆ ಸಂಘರ್ಷ ನಡೆಸಿ, ಸತತ ಪರಿಶ್ರಮದಿಂದಾಗಿ ಟಾಪ್ ಸ್ಥಾನಲ್ಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದರು.

    ‘ಓ ಮೈ ಕಡವುಲೆ’ ತಮಿಳು ಸಿನಿಮಾದಲ್ಲಿ ವಾಣಿ ಭಜನ್ ಕೆಲಸ ಮಾಡಿದ್ದಾರೆ. ‘ದೇವಕಮಲ್’ ಧಾರಾವಾಹಿಯಲ್ಲಿಯೂ ಕಾಣಿಸಿಕೊಂಡಿರುವ ವಾಣಿ, ಸದ್ಯ ಫ್ಯಾಶನ್ ಇಂಡಸ್ಟ್ರಿಯಲ್ಲಿ ಬ್ಯುಸಿಯಾಗಿದ್ದಾರೆ.

  • ತನ್ನ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ನಟಿಯ ಶವ ಪತ್ತೆ

    ತನ್ನ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ನಟಿಯ ಶವ ಪತ್ತೆ

    – ಸಾಯುವ ಮುನ್ನ ಸೋದರಿಗೆ ವಿಡಿಯೋ ಕಾಲ್

    ಚೆನ್ನೈ: ತಮಿಳು ನಟಿಯೊಬ್ಬಳು ತನ್ನ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ಪಿ.ಪದ್ಮಜಾ (23) ಆತ್ಮಹತ್ಯೆ ಮಾಡಿಕೊಂಡ ನಟಿ. ಈಕೆ ಅನೇಕ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಳು. ಆದರೆ ಭಾನುವಾರ ತಿರುವೊಟ್ಟಿಯೂರ್ ನಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

    ಪದ್ಮಜಾ ಕಲಾದಿಪೇಟೆಯ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದಳು. ಈಕೆಗೆ ಪವನ್ (25) ಎಂಬವರ ಜೊತೆ ಮದುವೆಯಾಗಿತ್ತು. ಈ ದಂಪತಿಗೆ ಎರಡು ವರ್ಷದ ಮಗನಿದ್ದಾನೆ. ಆದರೆ ಪತಿಯ ಜೊತೆ ಜಗಳ ಮಾಡಿಕೊಂಡು ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಮಗನನ್ನು ಸಂಬಂಧಿಕರ ಮನೆಯಲ್ಲಿ ಬೆಳೆಸಲಾಗುತ್ತಿದೆ. ದಂಪತಿ ವಾರಾಂತ್ಯದಲ್ಲಿ ಮಗನನ್ನು ಭೇಟಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

    ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪದ್ಮಜಾ ಕಳೆದ ತಿಂಗಳು ಪತಿಯಿಂದ ದೂರವಾಗಿದ್ದಳು. ಪತಿ ಪವನ್ ಆಂಧ್ರ ಪ್ರದೇಶಕ್ಕೆ ಶಿಫ್ಟ್ ಆಗಿದ್ದರು. ಸಾಲದ ಕಾರಣದಿಂದಾಗಿ ಪದ್ಮಜಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

    ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಅಂದರೆ ಶನಿವಾರ ತನ್ನ ಸಹೋದರಿಗೆ ವಿಡಿಯೋ ಕಾಲ್ ಮಾಡಿದ್ದಳು. ಈ ವೇಳೆ ಪದ್ಮಜಾ ಆರ್ಥಿಕ ಸಮಸ್ಯೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಳು. ಅಲ್ಲದೇ ಸಿನಿಮಾ ಮತ್ತು ಸೀರಿಯಲ್‍ನಲ್ಲಿ ಮುಖ್ಯವಾದ ಪಾತ್ರ ಸಿಗುತ್ತಿಲ್ಲ ಎಂದು ಮಾತನಾಡಿದ್ದಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಎರಡು ದಿನಗಳಿಂದ ಮನೆ ಲಾಕ್ ಆಗಿರುವುದನ್ನು ನೋಡಿದ ಮನೆಯ ಮಾಲೀಕ ಎಸ್.ಕಾಶಿನಾಥನ್ ಅನುಮಾನಗೊಂಡು ತಿರುವೊಟ್ಟಿಯೂರ್ ಪೊಲೀಸರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದು ಬಾಗಿಲು ಮುರಿದು ನೋಡಿದಾಗ ಪದ್ಮಜಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

    ಸದ್ಯಕ್ಕೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಜೊತೆಗೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

  • ಕಾರ್ತಿಕ್ ಕೈಯನ್ನ ಸೊಂಟದ ಮೇಲಿರಿಸಿಕೊಂಡ ಸೈಫ್ ಪುತ್ರಿ ಸಾರಾ

    ಕಾರ್ತಿಕ್ ಕೈಯನ್ನ ಸೊಂಟದ ಮೇಲಿರಿಸಿಕೊಂಡ ಸೈಫ್ ಪುತ್ರಿ ಸಾರಾ

    ಮುಂಬೈ: ಸೊಂಟದ ಮೇಲೆ ಕೈ ಇಡು ಎಂದು ಬಾಲಿವುಡ್‍ನ ಖ್ಯಾತ ನಟ ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಸಹ ನಟ, ಗೆಳೆಯ ಕಾರ್ತಿಕ್ ಆರ್ಯನ್‍ಗೆ ಸೂಚನೆ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ನಟನೆಯ ‘ಲವ್ ಆಜ್ ಕಲ್’ ಸಿನಿಮಾ ಪ್ರೇಮಿಗಳ ದಿನವಾದ ಫೆಬ್ರವರಿ 14ದಂದು ತೆರೆ ಕಾಣಲಿದೆ. ಹೀಗಾಗಿ ಈ ಜೋಡಿ ಸಿನಿಮಾ ಪ್ರಚಾರದಲ್ಲಿ ಸಖತ್ ಬ್ಯುಸಿ ಆಗಿದ್ದಾರೆ.

    ಸಿನಿಮಾ ಪ್ರಚಾರದ ವೇಳೆ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ವೇದಿಕೆ ಮೇಲೆ ನಿಂತಿದ್ದರು. ಕಾರ್ಯಕ್ರಮದ ಬಳಿಕ ಕ್ಯಾಮೆರಾ ಪೋಸ್ ಕೊಡುತ್ತಿದ್ದಾಗ ಸಾರಾ ಗೆಳೆಯ ಆರ್ಯನ್ ಕೈಯನ್ನು ಹಿಡಿದುಕೊಂಡು ಸೊಂಟದ ಮೇಲೆ ಇಟ್ಟುಕೊಂಡರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಟ ಕಾರ್ತಿಕ್ ಆರ್ಯನ್ ಜೊತೆ ಸಾರಾ ಪ್ರೀತಿಯಲ್ಲಿದ್ದಾರೆ ಎನ್ನುವ ವಿಚಾರ ಹರಿದಾಡಿತ್ತು. ಚಿತ್ರದ ಲಿಪ್‍ಕಿಸ್ ದೃಶ್ಯ ವೈರಲ್ ಆಗಿತ್ತು. ಆದ್ರೆ ಸೆನ್ಸಾರ್ ಬೋರ್ಡ್ ಕಿಸ್ಸಿಂಗ್ ದೃಶ್ಯಕ್ಕೆ ಕತ್ತರಿ ಹಾಕಿದೆ.

    2009ರಲ್ಲಿ ಸೈಫ್ ಅಲಿ ಖಾನ್ ನಟನೆಯ `ಲವ್ ಆಜ್ ಕಲ್’ ಸಿನಿಮಾ ತೆರೆಗೆ ಬಂದಿತ್ತು. ದೀಪಿಕಾ ನಾಯಕಿಯಾಗಿದ್ದ ಈ ಚಿತ್ರಕ್ಕೆ ಇಮ್ತಿಯಾಜ್ ಅಲಿ ಖಾನ್ ನಿರ್ದೇಶನ ಮಾಡಿದ್ದರು. ಇದಾದ ಸುಮಾರು 10 ವರ್ಷಗಳ ಬಳಿಕ ಇದೇ ಶೀರ್ಷಿಕೆ ಇಟ್ಟುಕೊಂಡು ಅವರು ಆ್ಯಯಕ್ಷನ್ ಕಟ್ ಹೇಳಲಾಗಿದೆ. ಈ ಚಿತ್ರದಲ್ಲಿ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ನಟಿಸಿದ್ದಾರೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಮಂಗಳಗೌರಿ ಮದುವೆ’ ಖ್ಯಾತಿಯ ನಟಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಮಂಗಳಗೌರಿ ಮದುವೆ’ ಖ್ಯಾತಿಯ ನಟಿ

    ಬೆಂಗಳೂರು: ‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ನಟಿ ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ನಟಿ ರಾಧಿಕಾ ಸೌಂದರ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೀಗಾಗಿ ರಾಧಿಕಾ ಎನ್ನುವುದಕ್ಕಿಂತ ಸೌಂದರ್ಯ ಎಂದರೆ ಪ್ರೇಕ್ಷಕರಿಗೆ ಗೊತ್ತಾಗುತ್ತದೆ. ಇವರು ನಟ, ನಿರ್ದೇಶಕ ಶ್ರವಂತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಈ ದಂಪತಿಯ ಮದುವೆಗೆ ಕಿರುತೆರೆ ಕಲಾವಿದರು ಮತ್ತು ಸ್ನೇಹಿತರು ಹೋಗಿ ನವಜೋಡಿಗೆ ಶುಭಾ ಹಾರೈಸಿದ್ದಾರೆ. ನಟಿ ರಾಧಿಕಾ ಸೀರಿಯಲ್‍ನಲ್ಲಿ ನೆಗೆಟಿವ್ ಶೇಡ್‍ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿರುತೆರೆ ಮಾತ್ರವಲ್ಲದೇ ನಟ ವಿಜಯ್ ರಾಜ್‍ಕುಮಾರ್ ಅಭಿನಯದ ‘ಗ್ರಾಮಾಯಣ’ ಸಿನಿಮಾದಲ್ಲೂ ಅಭಿನಯಿಸಿದ್ದಾರೆ.

    ಶ್ರವಂತ್ ಕೂಡ ನಟರಾಗಿದ್ದು, ‘ಪರಾರಿ’, ‘ಅಂಬರ’ ಮತ್ತು ‘ಚಿಕ್ಕಮಗಳೂರು ಚಿಕ್ಕಮಲ್ಲಿಗೆ’ ಸಿನಿಮಾದಲ್ಲಿ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಹಿಂದೆ ‘ಮಧುಬಾಲ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದರು. ಪ್ರಸ್ತುತ ಧಾರಾವಾಹಿಯೊಂದನ್ನು ನಿರ್ದೇಶನ ಮಾಡುತ್ತಿದ್ದಾರೆ.

  • ನಡು ರಸ್ತೆಯಲ್ಲೇ ಸಿನಿಮೀಯ ರೀತಿ ನಟಿಯ ಫೈಟ್

    ನಡು ರಸ್ತೆಯಲ್ಲೇ ಸಿನಿಮೀಯ ರೀತಿ ನಟಿಯ ಫೈಟ್

    ಮಂಗಳೂರು: ಸಿನಿಮಾಗಳಲ್ಲಿ ಹೀರೋಗಳಂತೆಯೇ ಇತ್ತೀಚೆಗೆ ಹೀರೋಯಿನ್‍ಗಳೂ ಫೈಟ್ ಮಾಡೋದನ್ನು ಎಲ್ಲರೂ ನೋಡಿದ್ದಾರೆ. ಆದರೆ ವಿಟ್ಲ ಸಮೀಪ ಸಿನಿಮಾ ನಟಿಯೊಬ್ಬರು ನಡು ರಸ್ತೆಯಲ್ಲೇ ರಿಯಲ್ ಫೈಟ್ ನಡೆಸಿ ಸುದ್ದಿಯಾಗಿದ್ದಾರೆ.

    ಕಾರಿಗೆ ಸೈಡ್ ಕೊಡುವ ವಿಚಾರಕ್ಕೆ ನಟಿ ಹಾಗೂ ಇನ್ನೊಂದು ಕಾರಿನಲ್ಲಿದ್ದ ಪ್ರಯಾಣಿಕರ ನಡುವೆ ರಸ್ತೆಯಲ್ಲಿ ಸಿನಿಮೀಯ ರೀತಿ ಹೊಡೆದಾಟ ನಡೆದಿದ್ದು, ಹೊಡೆದಾಟದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಬಳಿ ಘಟನೆ ನಡೆದಿದೆ.

    ಕಾರಿನಲ್ಲಿ ನಟಿ ಶೋಭಿತಾ ಮತ್ತು ಇನ್ನೊಂದು ಕಾರಿನವರ ನಡುವೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಮಿತಿಮೀರಿ ಸಾರ್ವಜನಿಕರ ಎದುರೇ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಫೆಬ್ರವರಿ 10ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೊಡೆದಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿವೆ. ಎದುರು ಕಾರಿನವರು ನಟಿ ಮೇಲೆ ಕೈ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದನ್ನು ಗಮನಿಸಿದ ಸ್ಥಳೀಯರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

  • ಸೀರಿಯಲ್‍ನಲ್ಲಿ ಪ್ರಮುಖ ಪಾತ್ರ ಸಿಕ್ಕಿಲ್ಲವೆಂದು ನಟಿ ಆತ್ಮಹತ್ಯೆ

    ಸೀರಿಯಲ್‍ನಲ್ಲಿ ಪ್ರಮುಖ ಪಾತ್ರ ಸಿಕ್ಕಿಲ್ಲವೆಂದು ನಟಿ ಆತ್ಮಹತ್ಯೆ

    – ವಿದ್ಯಾಭ್ಯಾಸ ಮುಂದುವರಿಸಲು ಹುಟ್ಟೂರಿನಿಂದ ಬಂದಿದ್ರು
    – ನೇಣು ಬಿಗಿದುಕೊಂಡು ಕಿರುತೆರೆ ನಟಿ ಸೂಸೈಡ್

    ಕೋಲ್ಕತ್ತಾ: ಸೀರಿಯಲ್‍ನಲ್ಲಿ ಪ್ರಮುಖ ಪಾತ್ರ ಸಿಕ್ಕಿಲ್ಲವೆಂದು ಬಂಗಾಳಿ ನಟಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ಬುರ್ದ್ವಾನ್‍ನಲ್ಲಿ ನಡೆದಿದೆ.

    ಸುಬರ್ನಾ ಜಾಶ್ (23) ಆತ್ಮಹತ್ಯೆ ಮಾಡಿಕೊಂಡ ನಟಿ. ಭಾನುವಾರ ರಾತ್ರಿ ಪೋಷಕರು ಸುಬರ್ನಾ ಜಾಶ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ನೋಡಿದ್ದಾರೆ. ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿಯೇ ನಟಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

    ನಟಿಯ ದೇಹವನ್ನು ಸೋಮವಾರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ನಟಿ ಸುಬರ್ನಾ ಜಾಶ್ ಕೆಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದು, ಹೆಚ್ಚಾಗಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೊನೆಯ ಬಾರಿಗೆ ‘ಮಯೂರ್ ಪಾಂಖಿ’ ಧಾರಾವಾಹಿಯಲ್ಲಿ ನಾಯಕಿಯ ಸ್ನೇಹಿತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

    ಮೂಲತಃ ಬುರ್ದ್ವಾನ್‍ ಮೂಲದ ಸುಬರ್ನಾ ವಿದ್ಯಾಭ್ಯಾಸವನ್ನು ಮುಂದುವರಿಸಲು ಕೋಲ್ಕತ್ತಾಗೆ ಬಂದಿದ್ದರು. ಆದರೆ ಸುಬರ್ನಾ ಜಾಶ್‍ಗೆ ನಟಿಯಾಗಬೇಕೆಂಬ ಕನಸಿತ್ತು. ಕೊನೆಗೆ ತನ್ನ ವೃತ್ತಿಜೀವನಕ್ಕಾಗಿ ಕೋಲ್ಕತ್ತಾದಲ್ಲಿಯೇ ವಾಸಿಸುತ್ತಿದ್ದರು. ಅದರಂತೆಯೇ ಅನೇಕ ಆಡಿಷನ್‍ಗಳಿಗೆ ಹೋಗುತ್ತಿದ್ದರು. ನಂತರ ಕೆಲವು ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಅವಕಾಶವನ್ನು ಸಹ ಪಡೆದಿದ್ದರು.

    ಧಾರಾವಾಹಿಯಲ್ಲಿ ಮುಖ್ಯಪಾತ್ರಗಳು ಸಿಗದೆ ಇದ್ದ ಕಾರಣ ಸುಬರ್ನಾ ಜಾಶ್ ಖಿನ್ನತೆಗೆ ಒಳಗಾಗಿದ್ದರು. ಅಲ್ಲದೇ ಕೆಲವು ದಿನಗಳ ಹಿಂದೆ ತನ್ನ ಹುಟ್ಟೂರಿಗೆ ವಾಪಸ್ ಹೋಗಿದ್ದರು ಎಂದು ವರದಿಯಾಗಿದೆ. ಆದರೆ ನಟಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುಬರ್ನಾ ಜಾಶ್ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ಕುಟುಂಬದವರು ತಿಳಿಸಿದ್ದಾರೆ.

    ಇತ್ತೀಚೆಗೆ ಮುಂಬೈ ಮೂಲದ ಕಿರುತೆರೆ ನಟಿ ಸೆಜಲ್ ಶರ್ಮಾ ಸಹ ಆತ್ಮಹತ್ಯೆಗೆ ಶರಣಾಗಿದ್ದರು.

  • ನೇಣು ಬಿಗಿದುಕೊಂಡು ನಟಿ ಆತ್ಮಹತ್ಯೆ

    ನೇಣು ಬಿಗಿದುಕೊಂಡು ನಟಿ ಆತ್ಮಹತ್ಯೆ

    ಮುಂಬೈ: ಬಾಲಿವುಡ್ ಕಿರುತೆರೆ ನಟಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ ನಗರದಲ್ಲಿ ನಡೆದಿದೆ.

    ನಟಿ ಸೆಜಲ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೆಜಲ್ ಶರ್ಮಾ ‘ದಿಲ್ ತೋ ಹ್ಯಾಪಿ ಹೈ ಜಿ’ ಧಾರಾವಾಹಿಯಲ್ಲಿ ಸಿಮ್ಮಿ ಖೋಸ್ಲಾ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು. ಆದರೆ ಶುಕ್ರವಾರ ತಮ್ಮ ಮೀರಾ ರಸ್ತೆ ರೆಸಿಡೆನ್ಸಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶುಕ್ರವಾರ ಮುಂಜಾನೆ ನಟಿ ಶರ್ಮಾಗೆ ತನ್ನ ರೂಮ್ ಮೇಟ್ ಫೋನ್ ಮಾಡಿದ್ದಾರೆ. ಆದರೆ ಫೋನ್ ರಿಸೀವ್ ಮಾಡಿರಲಿಲ್ಲ. ಹೀಗಾಗಿ ಆಕೆಯ ರೂಮ್‍ಮೆಟ್ ಬಾಗಿಲನ್ನು ತೆರೆದು ನೋಡಿದಾಗ ಶರ್ಮಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಿಯೇ ಶರ್ಮಾ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ರೂಮಿನಲ್ಲಿ ಡೆತ್‍ನೋಟ್ ಪತ್ತೆಯಾಗಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿದ್ದಾರೆ. ಸದ್ಯಕ್ಕೆ ಮೀರಾ ರಸ್ತೆ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ನಟಿ ಸೆಜಲ್ ಶರ್ಮಾ ಉದಯಪುರ ಮೂಲದವರಾಗಿದ್ದು, 2017 ರಲ್ಲಿ ಮುಂಬೈಗೆ ಬಂದು ನಟನಾ ವೃತ್ತಿಯನ್ನು ಮುಂದುವರಿಸಿದ್ದರು. ‘ ದಿಲ್ ತೋಹ್ ಹ್ಯಾಪಿ ಹೈ ಜಿ’ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಯಾಗಿದ್ದರು. ಶರ್ಮಾ ಅವರು ಕೆಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ವೆಬ್ ಸರಣಿಯಲ್ಲೂ ಅಭಿನಯಿಸಿದ್ದಾರೆ.

    ನಿಜಕ್ಕೂ ಈ ಸುದ್ದಿ ಕೇಳಿ ನನಗೆ ಅಚ್ಚರಿಯಾಯಿತು. ನಾನು ಅವರನ್ನು 10 ದಿನಗಳ ಹಿಂದೆ ಭೇಟಿಯಾಗಿದ್ದೆ. ಅಲ್ಲದೇ ಭಾನುವಾರ ವಾಟ್ಸಪ್‍ನಲ್ಲಿ ಚಾಟ್ ಕೂಡ ಮಾಡಿದ್ದೆವು. ನಾನು 10 ದಿನಗಳ ಹಿಂದೆ ಅವರನ್ನು ಭೇಟಿಯಾದಾಗ ಶರ್ಮಾ ಚೆನ್ನಾಗಿದ್ದರು. ಆದರೆ ಇದ್ದಕ್ಕಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರೆ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಶರ್ಮಾರ ಸಹನಟ ದುಃಖದಿಂದ ಹೇಳಿದ್ದಾರೆ.

  • ಮದ್ವೆ ಊಹಾಪೋಹದ ಬಗ್ಗೆ ಮೌನ ಮುರಿದ ಡಿಂಪಲ್ ಕ್ವೀನ್

    ಮದ್ವೆ ಊಹಾಪೋಹದ ಬಗ್ಗೆ ಮೌನ ಮುರಿದ ಡಿಂಪಲ್ ಕ್ವೀನ್

    ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದ್ದ ತಮ್ಮ ಮದುವೆ ಊಹಾಪೋಹಗಳಿಗೆ ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಸ್ಪಷ್ಟನೆ ನೀಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ರಚಿತಾ ರಾಮ್, ಎಲ್ಲರಿಗೂ ನಮಸ್ಕಾರ. ನಾನು ನಿಮ್ಮ ರಚಿತಾ ರಾಮ್. ಈ ನಡುವೆ ಫೇಸ್‍ಬುಕ್, ಇನ್‍ಸ್ಟಾಗ್ರಾಮ್, ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿಗಳ ಬಗ್ಗೆ ಸ್ಪಷ್ಟನೆ ಕೊಡಲು ಬಯಸುತ್ತೇನೆ. ನನ್ನ ಸಿನಿಮಾಗಳ ಕುರಿತಾದ ವಿಷಯಗಳಾಗಲಿ ಅಥವಾ ವೈಯಕ್ತಿಕ ವಿಷಯಗಳಾಗಲಿ ನನ್ನ ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಅದು ಸತ್ಯವೆಂದು ಪರಿಗಣಿಸಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

    ಮನರಂಜನೆಗಾಗಿ ಸುಳ್ಳು ವದಂತಿಗಳಗಳನ್ನು ಸೃಷ್ಟಿ ಮಾಡಿದರೆ ಖುಷಿ ಉಂಟಾಗಬಹುದು. ಆದರೆ ಅದರಿಂದ ನನಗೆ ಹಾಗೂ ವದಂತಿಗಳಲ್ಲಿ ಸಿಲುಕಿದ ಸಂಬಂಧಪಟ್ಟ ವ್ಯಕ್ತಿಗಳಿಗೆ ಬೇಸರ ಉಂಟಾಗುತ್ತದೆ ಎಂಬ ವಿಷಯ ಅರ್ಥ ಮಾಡಿಕೊಂಡರೆ ಉತ್ತಮ ಎಂದು ಹೇಳಿದ್ದಾರೆ.

    ಅತಿ ಮುಖ್ಯವಾದ ಸಂಗತಿ ಏನೆಂದರೆ ಸದ್ಯಕ್ಕೆ ನನ್ನ ಮದುವೆ ನಿಶ್ಚಯವಾಗಿಲ್ಲ. ನಾನು ಮದುವೆಯಾಗುವ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ತಿಳಿಸಿ ಎಲ್ಲರ ಸಮ್ಮುಖದಲ್ಲಿ ಗುರು ಹಿರಿಯರ ಆಶೀರ್ವಾದದೊಂದಿಗೆ ಆಗುತ್ತೇನೆ. ಸುಳ್ಳು ವದಂತಿಗಳನ್ನು ನಂಬಿ ವೈಯಕ್ತಿಕ ವಿಚಾರಗಳ ಬಗ್ಗೆ ನಗೆಪಾಟಲು ಮಾಡಬೇಡಿ ಎಂದು ವಿನಮ್ರತೆಯಿಂದ ಕೇಳಿಕೊಳ್ಳುತ್ತೇನೆ. ನಿಮ್ಮ ರಚಿತಾರಾಮ್ ಎಂದು ಮನವಿ ಮಾಡಿಕೊಂಡಿದ್ದಾರೆ.

  • ಕೊಲ್ಲೂರು ಮೂಕಾಂಬಿಕೆಯಲ್ಲಿ ವರ ಬೇಡಿಕೊಂಡ ರಚಿತಾ ರಾಮ್

    ಕೊಲ್ಲೂರು ಮೂಕಾಂಬಿಕೆಯಲ್ಲಿ ವರ ಬೇಡಿಕೊಂಡ ರಚಿತಾ ರಾಮ್

    ಉಡುಪಿ: ಸ್ಯಾಂಡಲ್‍ವುಡ್ ನಟಿ ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ಮುಂದೆ ನಿಂತು ವರವೊಂದನ್ನು ಬೇಡಿಕೊಂಡಿದ್ದಾರಂತೆ.

    ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಬಳಿಕ ರಚಿತಾ ರಾಮ್ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದರು. ಮೂಕಾಂಬಿಕೆಗೆ ವಿಶೇಷ ಸೇವೆ ಸಲ್ಲಿಸಿದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ರಚಿತಾ ರಾಮ್ ಅವರಿಗೆ ಫಲ ಪ್ರಸಾದಗಳನ್ನು ನೀಡಿ ಗೌರವ ಸಲ್ಲಿಸಿತು.

    ರಚಿತಾ ರಾಮ್ ಅವರು ಗರ್ಭಗುಡಿಯ ಮುಂದೆ ದೇವಿಯಲ್ಲಿ ಕೆಲಕಾಲ ನಿಂತು ಬೇಡಿಕೊಂಡಿದ್ದಾರಂತೆ. ಅದೇನು ಬೇಡಿಕೆ ಅಂತ ಅರ್ಚಕರಲ್ಲೂ ಹೇಳದ ರಚಿತಾ, ನನ್ನ ಮನಸ್ಸಿನ ಇಚ್ಛೆ ಪೂರೈಸಮ್ಮಾ ಕೊಲ್ಲೂರಮ್ಮಾ ಅಂತ ಕೋರಿಕೊಂಡಿದ್ದಾರೆ. ನಿಮ್ಮ ಆಕಾಂಕ್ಷೆ ಈಡೇರಲಿ ಎಂದು ಕೊಲ್ಲೂರಿನ ಅರ್ಚಕರು ಪ್ರಸಾದ ಕೊಟ್ಟಿದ್ದಾರೆ. ಇದನ್ನೂ ಓದಿ: ಟಿ ರಚಿತಾ ರಾಮ್ ಶೃಂಗೇರಿಗೆ ಭೇಟಿ

  • ‘ಚಷ್ಮಾ’ ಹುಡುಗಿಗೆ ಮತ್ತೊಂದು ‘ಕಿರಿಕ್’- ರಶ್ಮಿಕಾ, ಕುಟುಂಬಸ್ಥರಿಗೆ ಐಟಿ ಸಮನ್ಸ್

    ‘ಚಷ್ಮಾ’ ಹುಡುಗಿಗೆ ಮತ್ತೊಂದು ‘ಕಿರಿಕ್’- ರಶ್ಮಿಕಾ, ಕುಟುಂಬಸ್ಥರಿಗೆ ಐಟಿ ಸಮನ್ಸ್

    ಬೆಂಗಳೂರು: ಸ್ಯಾಂಡಲ್‍ವುಡ್ ಕ್ರಷ್, ಕಿರಿಕ್ ರಾಣಿ ರಶ್ಮಿಕಾ ಮಂದಣ್ಣ ಮತ್ತು ಕುಟುಂಬಸ್ಥರಿಗೆ ಐಟಿ ಸಮನ್ಸ್ ನೀಡಿದೆ.

    ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ಮೈಸೂರಿನ ಐಟಿ ಕಚೇರಿಗೆ ಹಾಜರಾಗುವಂತೆ ರಶ್ಮಿಕಾ ಮತ್ತು ಕುಟುಂಬಸ್ಥರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕಿರಿಕ್ ಬೆಡಗಿ ಮನೆಯಲ್ಲಿ ಐಟಿ ಬೇಟೆ – ದಾಳಿ ವೇಳೆ ಸಿಕ್ಕಿದ್ದು 25 ಲಕ್ಷ ಕ್ಯಾಶ್

    ಐಟಿ ಅಧಿಕಾರಿಗಳು ರಶ್ಮಿಕಾ ಮನೆಯಲ್ಲಿ ಸತತ ಎರಡು ದಿನಗಳ ಕಾಲ ದಾಳಿ ನಡೆಸಿ ಸಾಕಷ್ಟು ಮಾಹಿತಿ ಕಲೆ ಹಾಕಿದ್ದರು. ಜೊತೆಗೆ ದಾಖಲೆ ಇಲ್ಲದ 25 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತೆರಿಗೆ ವಂಚನೆ ಮಾಡಿರುವ ಕೋಟ್ಯಂತರ ಆಸ್ತಿಯ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ನನ್ನ ಅಕೌಂಟ್‍ನಲ್ಲಿ ದುಡ್ಡೇ ಇಲ್ಲ ಎಂದಿದ್ದ 5 ದಿನದಲ್ಲೇ ರಶ್ಮಿಕಾಗೆ ಐಟಿ ಶಾಕ್

    ಈ ಎಲ್ಲಾ ಮಾಹಿತಿಯ ಆಧಾರದ ಮೇಲೆ ಐಟಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

    ದಾಳಿ ವೇಳೆ ರಶ್ಮಿಕಾ ಮನೆಯಲ್ಲಿ 3.94 ಕೋಟಿ ರೂ. ಮೊತ್ತದ ಅಘೋಷಿತ ಆದಾಯ ಪತ್ತೆಯಾಗಿದೆ. 1.5 ಕೋಟಿ ರೂಪಾಯಿಗೆ ತೆರಿಗೆ ಕಟ್ಟಿಲ್ಲ. ಇಷ್ಟು ಮಾತ್ರವಲ್ಲದೆ ರಶ್ಮಿಕಾ ಹೆಸರಲ್ಲಿ ಎರಡು ಪ್ಯಾನ್ ಕಾರ್ಡ್ ಇರುವುದು ಕೂಡ ಬೆಳಕಿಗೆ ಬಂದಿದೆ. ಒಂದು ಪ್ಯಾನ್ ಕಾರ್ಡ್ ಮೂಲಕ 2016-17ರವರೆಗಷ್ಟೇ ಆದಾಯ ತೆರಿಗೆ ಸಲ್ಲಿಕೆ ಮಾಡಲಾಗಿದೆ. ರಶ್ಮಿಕಾ ತಂದೆ ಒಡೆತನದ ಕಲ್ಯಾಣ ಮಂಟಪದ ಬಗ್ಗೆಯೂ ಗುಮಾನಿಯಿದ್ದು, ಕಲ್ಯಾಣ ಮಂಟಪದ ವ್ಯವಹಾರದ ಬಗ್ಗೆಯೂ ಕೆಲ ಮಾಹಿತಿ ಮುಚ್ಚಿಟ್ಟ ಆರೋಪ ಕೇಳಿ ಬಂದಿದೆ.

    ಐಟಿ ದಾಳಿ:
    ಗುರುವಾರ ಮುಂಜಾನೆ 7:30ಕ್ಕೆ ರಶ್ಮಿಕಾ ಅಭಿಮಾನಿಗಳು ಎಂದು ಎಂಟ್ರಿ ಕೊಟ್ಟಿದ್ದ ಆಂಧ್ರಪ್ರದೇಶದ ಐಟಿ ಅಧಿಕಾರಿಗಳು, ಮನೆಯನ್ನು ಜಾಲಾಡಿ ದಾಖಲೆಗಳನ್ನು ಕಲೆಹಾಕಿದ್ದರು. ರಶ್ಮಿಕಾ ಮಂದಣ್ಣ ತಂದೆ ಒಡೆತನದ ಬೃಹತ್ ಬಂಗಲೆ, ಸೆರೆನಿಟಿ ಕಲ್ಯಾಣ ಮಂಟಪ, ಕಾಫಿ ತೋಟ, ಹೊಸದಾಗಿ ಖರೀದಿ ಮಾಡಿ ಬಿಟ್ಟಂಗಾಲದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ಇಂಟರ್ ನ್ಯಾಷನಲ್ ರೆಸಿಡೆನ್ಸಿಯಲ್ ಸ್ಕೂಲ್, ಪೆಟ್ರೋಲ್ ಬಂಕ್ ಜಾಗದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದರು.

    ಸತತ 29 ಗಂಟೆಗಳ ಬಳಿಕ ಐಟಿ ಅಧಿಕಾರಿಗಳ ತಲಾಶ್ ಬಳಿಕ 1 ಸೂಟ್‍ಕೇಸ್, 3 ಹ್ಯಾಂಡ್ ಬ್ಯಾಗ್, 1 ಬಾಕ್ಸ್ ನಲ್ಲಿ ಮಂದಣ್ಣ ಮನೆಯಲ್ಲಿ ಸಿಕ್ಕ ದಾಖಲೆಯನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ.