ಖ್ಯಾತ ಕಿರುತೆರೆಯ ನಟಿ, ಸಿನಿಮಾ ನಿರ್ದೇಶಕ ಅನಿಲ್ ಗಂಗೂಲಿ ಅವರ ಪುತ್ರಿ ರೂಪಾ ಗಂಗಾಲಿ (Roopa Ganguly) ಬಿಜೆಪಿ (BJP)ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಕ್ಷದ ಮುಖಂಡರಾದ ಅನಿಲ್ ಬಲುನಿ ಹಾಗೂ ವಿನೋದ್ ತಾವ್ಡೆ ಸಮ್ಮುಖದಲ್ಲಿ ಅವರು ಇಂದು ಪಕ್ಷದ ಕಚೇರಿಯಲ್ಲಿ ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ಸೇರಿದ್ದಾರೆ.
ಇದೇ ಮಾರ್ಚ್ ನಲ್ಲಿ ರೂಪಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಆ ಸಂದರ್ಭದಲ್ಲೇ ಬಿಜೆಪಿಯನ್ನು ಸೇರುವ ಒಲವನ್ನೂ ಅವರು ವ್ಯಕ್ತ ಪಡಿಸಿದ್ದರು. ಅದರಂತೆ ಬಿಜೆಪಿಗೆ ಸೇರಿದ್ದಾರೆ. ಮೋದಿ (, Narendra Modi) ಅವರ ಕಾರ್ಯವೈಖರಿಯನ್ನು ಮೆಚ್ಚಿ ಬಂದಿದ್ದೇನೆ ಅಂದಿದ್ದಾರೆ.
ಜನರಿಗೆ, ದೇಶಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ನನ್ನ ಕನಸು. ಅದನ್ನು ಆಗಲೇ ಮೋದಿ ಅವರು ಮಾಡುತ್ತಿದ್ದಾರೆ. ಅದನ್ನು ಗಮನಿಸಿಯೇ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ನನಗೆ ಇರಲಿ ಎಂದಿದ್ದಾರೆ ಗಂಗೂಲಿ.
ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivraj Kumar) ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ (Congress) ಅಧಿಕೃತವಾಗಿ ಸೇರ್ಪಡೆಗೊಂಡರು. ಕಾಂಗ್ರೆಸ್ ತತ್ವ ಮತ್ತು ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ (D.K. Shivakumar) ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅವರನ್ನು ಸ್ವಾಗತಿಸಿದರು. ಮಧು ಬಂಗಾರಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ‘ಇಂದು ಗೀತಾ ಕಾಂಗ್ರೆಸ್ ಪಕ್ಷ ಸೇರಿ, ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ತೆರಳುತ್ತಾರೆ. ಅವರ ಜೊತೆ ನಾನೂ ತೆರಳುತ್ತಿದ್ದೇನೆ. ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮ ನಾಯಕ್ ಸಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ
ಮುಂದುವರೆದು ಮಾತನಾಡಿದ ಶಿವರಾಜ್ ಕುಮಾರ್, ‘ಬಂಗಾರಪ್ಪ ಅವರ ಮಕ್ಕಳಾದ ಮಧು ಹಾಗೂ ಗೀತಾರಿಗೆ ರಾಜಕೀಯ ಹೇಳಿಕೊಡೋದು ಬೇಡ. ತಾಯಿ ಹೋದ ಬಳಿಕ ಎರಡು ವರ್ಷದಿಂದ ಶಕ್ತಿ ಧಾಮದ ಪ್ರೆಸಿಡೆಂಟ್ ಆಗಿದ್ದಾರೆ ಗೀತೆ. ಮಕ್ಕಳಿಗೆ ಸ್ಕಿಲ್ ಡೆವಲಪ್ಮೆಂಟ್ ಮಾಡುತ್ತಿದ್ದಾರೆ. ಸುತ್ತಮುತ್ತ ಫ್ರೀ ಬೇಕಿಂಗ್ ಕ್ಯಾಂಪ್ ಮಾಡಿ ಅವೇರ್‌ನೆಸ್ ಕೂಡ ಮಾಡಿದ್ದಾರೆ. ಸಮಾಜಮುಖಿ ಕೆಲಸಗಳ ಬಗ್ಗೆ ಅವರಿಗೆ ಆಸಕ್ತಿ ಇದೆ’ ಎಂದು ಹೇಳಿದರು.
ಗೀತಾ ಶಿವರಾಜ್ ಕುಮಾರ್‌ರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ಅವರ ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
ಕನ್ನಡದ ಹಿರಿಯ ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಆಡಳಿತ ಸರಕಾರದ ಕಾರ್ಯಗಳನ್ನು ಈವರೆಗೂ ಬೆಂಬಲಿಸುತ್ತಾ ಬಂದಿದ್ದ ಅನಂತ್ ನಾಗ್, ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಅದು ಈಗ ನಿಜವಾಗಿದೆ.
ಇಂದು ಸಂಜೆ 4.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಅವರು ಪಕ್ಷವನ್ನು ಸೇರುತ್ತಿದ್ದಾರೆ. ಈ ಸಂದರ್ಭದಲ್ಲಿ ನಿರ್ಮಾಪಕ, ಸಚಿವ ಮುನಿರತ್ನ ಸೇರಿದಂತೆ ಹಲವು ಗಣ್ಯರು ಉಪಸ್ಥಿತಿ ಇರಲಿದ್ದಾರೆ. ಇದನ್ನೂ ಓದಿ: ಸಿಂಬು ಜೊತೆಗಿನ ಬ್ರೇಕಪ್ ಬಗ್ಗೆ ಮೌನ ಮುರಿದ ನಟಿ ಹನ್ಸಿಕಾ ಮೋಟ್ವಾನಿ
ಅನಂತ್ ನಾಗ್ ರಾಜಕಾರಣಕ್ಕೆ ಬರುತ್ತಿರುವುದು ಹೊಸದೇನೂ ಅಲ್ಲ. ಈಗಾಗಲೇ ಅವರು ಜೆ.ಎಚ್. ಪಟೇಲ್ ನೇತೃತ್ವದ ಸರಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದವರು. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಸೋತಿದ್ದರು. ಅಲ್ಲದೇ, ಶಾಸಕರಾಗಿ, ಪರಿಷತ್ ಸದಸ್ಯರಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ.
LIVE TV
[brid partner=56869869 player=32851 video=960834 autoplay=true]
ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡು, ಅಲ್ಲಿಂದ ಹೊರ ಬಂದಿದ್ದ ನಟ ಶಶಿಕುಮಾರ್ (Shashikumar), ಇಂದು ಬೆಂಗಳೂರಿನಲ್ಲಿ ಬಿಜೆಪಿ ಪಕ್ಷ ಸೇರಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai), ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಸಮ್ಮುಖದಲ್ಲಿ ಬಿಜೆಪಿ ಸೇರಿಕೊಂಡಿರುವ ಶಶಿಕುಮಾರ್, ತಾವು ನರೇಂದ್ರ ಮೋದಿ (Narendra Modi) ಅವರ ಕಾರ್ಯವೈಖರಿ ಮೆಚ್ಚಿ ಈ ಪಕ್ಷವನ್ನು ಸೇರಿರುವುದಾಗಿ ಹೇಳಿದ್ದಾರೆ.
ಸಿನಿಮಾ ರಂಗದ ಜೊತೆ ಜೊತೆಗೆ ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಶಶಿಕುಮಾರ್, ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋಲು ಮತ್ತು ಗೆಲುವನ್ನೂ ಕಂಡಿದ್ದಾರೆ. ಇದೀಗ ಮತ್ತೆ ಸಕ್ರೀಯವಾಗಿ ರಾಜಕಾರಣದಲ್ಲೇ ಉಳಿಯುವ ಇಂಗಿತವನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಇಂದು ಬಿಜೆಪಿ ಪಕ್ಷ ಸೇರ್ಪಡೆಗೊಂಡ ನಂತರ ತಮ್ಮ ರಾಜಕೀಯ ನಿಲುವುಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ. ಇದನ್ನೂ ಓದಿ:ಡಯಟ್ ಕಾರಣದಿಂದಾಗಿ ಖ್ಯಾತ ನಟ ಕಲ್ಯಾಣ್ ಕುಮಾರ್ ಸೊಸೆ ನಿಧನ?
ಬಿಜೆಪಿ (BJP) ಸೇರ್ಪಡೆಗೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿರುವ ಶಶಿಕುಮಾರ್, ‘ನಾನು ಇಲ್ಲಿ ಟಿಕೆಟ್ ಕೇಳಿಲ್ಲ. ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿ ಬಗ್ಗೆ ಮೆಚ್ಚಿ ಬಂದಿದ್ದೇನೆ. ಸಿಎಂ ಕೂಡ SC, ST ಸಮುದಾಯಕ್ಕೆ ನೀಡಿದ ಕೊಡುಗೆ ನೋಡಿ ಬಂದೆ. ಮೀಸಲಾತಿ ವಿಚಾರವಾಗಿ ಬಹು ವರ್ಷದ ಬೇಡಿಕೆ ಈಡೇರಿಸಿದ್ದಾರೆ ಮುಖ್ಯಮಂತ್ರಿಗಳು ಎಂದಿದ್ದಾರೆ.
ಅಲ್ಲದೇ ಶಶಿಕುಮಾರ್ ಚಳ್ಳಕೆರೆ ವಿಧಾನಸಭೆ ಟಿಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿದ್ದು, ಈ ಕುರಿತೂ ಅವರು ಪ್ರತಿಕ್ರಿಯೆ ನೀಡಿದ್ದು, ‘ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ನಾನು ಸನ್ಯಾಸಿಯಲ್ಲ, ಪಕ್ಷದ ತೀರ್ಮಾನವೇ ಅಂತಿಮ. ಪಕ್ಷ ಟಿಕೆಟ್ ಕೊಟ್ರೆ ಸ್ಪರ್ಧಿಸುವ ಉತ್ಸಾಹ ಇದೆ’ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ. ತಾವು ಚಳ್ಳಕೆರೆ ಟಿಕೆಟ್ ಆಕಾಂಕ್ಷಿ ಎನ್ನುವುದನ್ನೂ ಪರೋಕ್ಷವಾಗಿ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]