Tag: Additional District Magistrate

  • ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಡಿಎಂ ಶವವಾಗಿ ಪತ್ತೆ

    ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಡಿಎಂ ಶವವಾಗಿ ಪತ್ತೆ

    ಲಕ್ನೋ: ಅಯೋಧ್ಯೆಯ (Ayodhya) ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ADM) ಗುರುವಾರ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

    ಸುರ್ಜಿತ್ ಸಿಂಗ್ (58) ಕೊತ್ವಾಲಿ ನಗರದ ಸಿವಿಲ್ ಲೈನ್ಸ್ ಪ್ರದೇಶದ ಸುರ್ಸಾರಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಸಿಂಗ್ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಹಾಗಾಗಿ ಮೆದುಳು ರಕ್ತಸ್ರಾವದಿಂದ ಸಾವಾಗಿರಬಹುದು ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಜೋತುಬಿದ್ದ ವಿದ್ಯುತ್ ವೈರ್‌ಗೆ ಇಬ್ಬರು ರೈತರು ಬಲಿ – ಸೆಸ್ಕ್ ಜೂನಿಯರ್ ಎಂಜಿನಿಯರ್, ಲೈನ್‌ಮ್ಯಾನ್ ಸಸ್ಪೆಂಡ್

    ಘಟನೆಯ ಬಗ್ಗೆ ಮಾಹಿತಿ ಪಡೆದ ಅಯೋಧ್ಯೆ ವಿಭಾಗೀಯ ಆಯುಕ್ತ ಗೌರವ್ ದಯಾಳ್, ಡಿಎಂ ಚಂದ್ರ ವಿಜಯ್ ಸಿಂಗ್, ಸಂಸದ ಅವಧೇಶ್ ಪ್ರಸಾದ್, ಮೇಯರ್ ಗಿರೀಶ್ಪತಿ ತ್ರಿಪಾಠಿ, ಅಯೋಧ್ಯೆ ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಡಿಎಂ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೆ ಘಟನೆ ಬಗ್ಗೆ ಕುಟುಂಬ ಸದಸ್ಯರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: Nvidia ದಲ್ಲಿ ವಿದ್ಯೆ ಇದೆ, ಇದರರ್ಥ ಭಾರತದಲ್ಲಿ ಜ್ಞಾನ: ಅಂಬಾನಿಯ ಮಾತಿಗೆ ಜೆನ್ಸನ್‌ ಹುವಾಂಗ್‌ ಚಪ್ಪಾಳೆ

    ಸುರ್ಜೀತ್ ಸಿಂಗ್ ಅವರು ಪತ್ನಿ, ಮಗ ಮತ್ತು ಸೊಸೆಯನ್ನು ಅಗಲಿದ್ದಾರೆ. ವರದಿಗಳ ಪ್ರಕಾರ ಸಿಂಗ್ ಮೃತದೇಹ ಪತ್ತೆಯಾದ ಕೋಣೆಯ ಸುತ್ತ ನೆಲದ ಮೇಲೆ ರಕ್ತ ಕಂಡುಬಂದಿದೆ. ಪುರಾವೆಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡವೂ ಆಗಮಿಸಿದೆ. ಮೂಲತಃ ಫರೂಕಾಬಾದ್‌ನವರಾದ ಸಿಂಗ್ ಅಯೋಧ್ಯೆಗೆ ನೇಮಕಗೊಳ್ಳುವ ಮೊದಲು ಜೌನ್‌ಪುರದಲ್ಲಿದ್ದರು. ಅವರ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತನಿಖೆ ಹಾಗೂ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ| ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ದ ಕಾರು

  • Kerala | ಕಾರ್ಯಕ್ರಮದಲ್ಲಿ ಬಹಿರಂಗ ಟೀಕೆ- ಒಂದು ದಿನದ ಬಳಿಕ ಶವವಾಗಿ ಪತ್ತೆಯಾದ ಅಧಿಕಾರಿ

    Kerala | ಕಾರ್ಯಕ್ರಮದಲ್ಲಿ ಬಹಿರಂಗ ಟೀಕೆ- ಒಂದು ದಿನದ ಬಳಿಕ ಶವವಾಗಿ ಪತ್ತೆಯಾದ ಅಧಿಕಾರಿ

    ತಿರುವನಂತಪುರಂ: ಕೇರಳದ ಕಣ್ಣೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ADM) ನವೀನ್ ಬಾಬು (Naveen Babu) ತಮ್ಮ ಪಲ್ಲಿಕುನ್ನುನಲ್ಲಿರುವ ಮನೆಯಲ್ಲಿ ಮಂಗಳವಾರ (ಅ.15) ಶವವಾಗಿ ಪತ್ತೆಯಾಗಿದ್ದಾರೆ.

    ತಮ್ಮ ತವರೂರು ಪತ್ತನಂತಿಟ್ಟದಲ್ಲಿ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಹಿಂದಿನ ದಿನ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ, ಎಲ್ಲಿ ಏನಾಗಿದೆ?

    ಘಟನೆಯ ಹಿಂದಿನ ದಿನ ಮೃತ ನವೀನ್ ಬಾಬು ಅವರಿಗೆ ಸಹೋದ್ಯೋಗಿಗಳು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಹಾಗೂ ಸಿಪಿಎಂ ನಾಯಕಿ ಪಿಪಿ ದಿವ್ಯಾ (PP Divya) ಆಹ್ವಾನವಿಲ್ಲದೇ ದಿಢೀರ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

    ಈ ವೇಳೆ ಮಾತನಾಡಿದ ದಿವ್ಯಾ, ನವೀನ್ ಬಾಬು ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಜೊತೆಗೆ ಹಲವು ತಿಂಗಳುಗಳಿಂದ ಚೆಂಗಲೈ ಪೆಟ್ರೋಲ್ ಪಂಪ್‌ಗೆ ಅನುಮತಿ ನೀಡಲು ಎಡಿಎಮ್ ಅವರು ವಿಳಂಬ ಮಾಡುತ್ತಿದ್ದಾರೆ ಎಂದು ಟೀಕಿಸಿ, ಬಹಿರಂಗವಾಗಿ ಮಾತನಾಡಿದ್ದರು.

    ಎಡಿಎಮ್ ಅವರ ದಿಢೀರ್ ವರ್ಗಾವಣೆ ಹಿಂದಿನ ಕಾರಣ ನನಗೆ ಗೊತ್ತಿದೆ. ಎರಡು ದಿನಗಳ ನಂತರ ಇನ್ನುಳಿದ ಮಾಹಿತಿಯನ್ನು ನೀಡುತ್ತೇನೆ ಎಂದು ಸುಳಿವು ನೀಡಿದ್ದರು. ಇದಾದ ಮಾರನೇ ದಿನ ನೇಣು ಬಿಗಿದ ಸ್ಥಿತಿಯಲ್ಲಿ ನವೀನ್ ಬಾಬು ಅವರ ಶವವಾಗಿ ಪತ್ತೆಯಾಗಿದ್ದು, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

    ಸಿಪಿಎಂ ಸ್ಥಳೀಯ ಮುಖಂಡ ಮಲಯಾಳಪುಳ ಮೋಹನ್ ಸುದ್ದಿಗಾರರೊಂದಿಗೆ ಮಾತನಾಡಿ, ಬಾಬು ಅವರ ಕುಟುಂಬವು ಸಾಂಪ್ರದಾಯಿಕ ಕುಟುಂಬವಾಗಿದ್ದು, ಬಾಬು ಕುರಿತು ನನಗೆ ಬಹಳ ಹಿಂದಿನಿಂದಲೂ ತಿಳಿದಿದೆ. ಬಾಬು ಒಬ್ಬ ಪ್ರಾಮಾಣಿಕ ಅಧಿಕಾರಿಯಾಗಿದ್ದರು. ದಿವ್ಯಾ ಅವರ ಬಹಿರಂಗ ಟೀಕೆಯು ಬಾಬು ಅವರ ಸಾವಿಗೆ ಕಾರಣವಾಗಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಇದನ್ನೂ ಓದಿ: ಸೈನ್ಯಕ್ಕೆ ಪ್ರಬಲ ಅಸ್ತ್ರ – ಅಮೆರಿಕದ MQ-9B ಪ್ರಿಡೆಟರ್ ಡ್ರೋನ್ ಒಪ್ಪಂದಕ್ಕೆ ಸಹಿ ಹಾಕಿದ ಭಾರತ

    ಸದ್ಯ ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ.