Tag: Adesh Gupta

  • ಎಂಸಿಡಿ ಚುನಾವಣೆ ಸೋಲು – ದೆಹಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ರಾಜೀನಾಮೆ

    ಎಂಸಿಡಿ ಚುನಾವಣೆ ಸೋಲು – ದೆಹಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ರಾಜೀನಾಮೆ

    ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಯಲ್ಲಿ (Election) ಸೋಲಾದ ಬಳಿಕ ಭಾರತೀಯ ಜನತಾ ಪಕ್ಷದ (BJP) ದೆಹಲಿಯ ಅಧ್ಯಕ್ಷ ಆದೇಶ್ ಗುಪ್ತಾ (Adesh Gupta) ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿದ್ದಾರೆ.

    ಆದೇಶ್ ಗುಪ್ತಾ ಅವರ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಅಂಗೀಕರಿಸಿದ್ದಾರೆ. ವೀರೇಂದ್ರ ಸಚ್‌ದೇವ ಅವರನ್ನು ಈಗ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಮುಂದಿನ ದೆಹಲಿ ಬಿಜೆಪಿ ಅಧ್ಯಕ್ಷರ ನೇಮಕವಾಗುವವರೆಗೆ ಸಚ್‌ದೇವ ಹಂಗಾಮಿ ಅಧ್ಯಕ್ಷರಾಗಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಎಂಸಿಡಿ ಚುನಾವಣೆಯ ಸೋಲಿನ ನೈತಿಕ ಹೊಣೆಯನ್ನು ನಾನು ಹೊತ್ತುಕೊಂಡಿದ್ದೇನೆ. ನಾವು ಎಂಸಿಡಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುತ್ತೇವೆಂದು ನಿರೀಕ್ಷಿಸಿದ್ದೆವು. ಆದರೆ ಅದು ಸಾಧ್ಯವಾಗಿಲ್ಲ. ಹೀಗಾಗಿ ನಾನು ಈ ನಿರ್ಧಾರವನ್ನು ಕೈಗೊಂಡಿದ್ದೇನೆ ಎಂದು ಗುಪ್ತಾ ತಿಳಿಸಿದ್ದಾರೆ. ಇದನ್ನೂ ಓದಿ: ಹಿಮಾಚಲಕ್ಕೆ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣವಚನ ಸ್ವೀಕಾರ

    ಎಂಸಿಡಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಜಯಗಳಿಸಿದೆ. 250 ವಾರ್ಡ್ಗಳ ಎಂಸಿಡಿ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ 134 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 104, ಕಾಂಗ್ರೆಸ್ 9 ಹಾಗೂ ಇತರ 3 ಸ್ಥಾನಗಳನ್ನು ಗಳಿಸಿದೆ. ಇದನ್ನೂ ಓದಿ: ಡಿಕ್ಷನರಿಯಲ್ಲಿ ಕಾಂಗ್ರೆಸ್‍ನ ಅರ್ಥವನ್ನು ಹೊಡೆದಾಟ, ಬಡಿದಾಟವೆಂದು ಬರೆಯಬೇಕು: ಪ್ರಹ್ಲಾದ್ ಜೋಶಿ

    Live Tv
    [brid partner=56869869 player=32851 video=960834 autoplay=true]

  • ಆಪ್ ಪಂಜಾಬ್ ಪೊಲೀಸರನ್ನು ದುರಪಯೋಗಪಡಿಸಿಕೊಂಡಿದೆ: ಬಿಜೆಪಿ ಆರೋಪ

    ಆಪ್ ಪಂಜಾಬ್ ಪೊಲೀಸರನ್ನು ದುರಪಯೋಗಪಡಿಸಿಕೊಂಡಿದೆ: ಬಿಜೆಪಿ ಆರೋಪ

    ನವದೆಹಲಿ: ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ಬಂಧಿಸಲು ಪಂಜಾಬ್‍ನ ಆಪ್ ನೇತೃತ್ವದ ಸರ್ಕಾರವು ರಾಜ್ಯ ಪೊಲೀಸ್ ಪಡೆಯನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ಆರೋಪಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಜೀಂದರ್ ಪಾಲ್ ಸಿಂಗ್ ವಾಪಸ್ ಮನೆಗೆ ಮರಳಿದ್ದಾರೆ. ಇದು ಪ್ರಜಾಪ್ರಭುತ್ವದ ಮತ್ತು ನ್ಯಾಯದ ವಿಜಯವಾಗಿದೆ. ತಜೀಂದರ್ ಸಿಂಗ್ ಬಿಡುಗೆಡೆಯಿಂದಾಗಿ ಕೇಜ್ರಿವಾಲ್ ಅವರ ದುರಹಂಕಾರ ಮುರಿದಿದೆ. ಅವರು ಬಗ್ಗಾವನ್ನು ಬಂಧಿಸಲು ಪಂಜಾಬ್ ಪೊಲೀಸ್ ಬಲವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸರು ತಜೀಂದರ್ ಪಾಲ್ ಸಿಂಗ್‍ರನ್ನು ಬಂಧಿಸುವಾಗ ತಂದೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಂದು ಕಿಡಿಕಾರಿದರು.

    ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಮತ್ತು ಕಾಶ್ಮೀರಿ ಪಂಡಿತರಿಗೆ ತೋರಿದ ಅಗೌರವಕ್ಕೆ ಕ್ಷಮೆ ಯಾಚಿಸುವುದು ಅಪರಾಧವಾಗಿದ್ದರೆ, ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನು ಈ ಅಪರಾಧವನ್ನು ಮುಂದುವರಿಸುತ್ತಾರೆ ಎಂದರು. ಇದನ್ನೂ ಓದಿ: ಕೇಜ್ರಿವಾಲ್ ವಿರುದ್ಧ ಟೀಕೆ- ಪೊಲೀಸರಿಂದ ದೆಹಲಿ ಬಿಜೆಪಿ ಮುಖಂಡ ಅರೆಸ್ಟ್

    ಯಾವುದೇ ರೀತಿಯ ಕ್ರಮಕ್ಕೂ ಬಿಜೆಪಿ ಕಾರ್ಯಕರ್ತರು ಹೆದರುವುದಿಲ್ಲ. ಕೇಜ್ರಿವಾಲ್ ಅವರ ದುರಹಂಕಾರದ ವಿರುದ್ಧ ನಾವು ಹೋರಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಇದು ಸೇಡಿನ ರಾಜಕಾರಣ: ಬಿಜೆಪಿ ಮುಖಂಡನ ಬಂಧನಕ್ಕೆ ನವಜೋತ್‌ ಸಿಧು ಕಿಡಿ

    ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ ನಂತರ ತಜೀಂದರ್ ಸಿಂಗ್ ಮಧ್ಯ ರಾತ್ರಿ ದೆಹಲಿಯಲ್ಲಿರುವ ಅವರ ನಿವಾಸವನ್ನು ತಲುಪಿದರು. ತಜೀಂದರ್‌ ಸಿಂಗ್ ಅವರ ಕುಟುಂಬದ ಸದಸ್ಯರು ದೆಹಲಿಯಲ್ಲಿರುವ ಅವರ ಮನೆಗೆ ಹಿಂದಿರುಗಿದ ನಂತರ ಸಂಭ್ರಮಿಸಿದ್ದರು. ಇದನ್ನೂ ಓದಿ: ಬಿಜೆಪಿ ನಾಯಕನನ್ನು ದೆಹಲಿ ಪೊಲೀಸರಿಗೆ ಮಾತ್ರ ಹಸ್ತಾಂತರಿಸುತ್ತೇವೆ: ಹರಿಯಾಣ ಗೃಹ ಸಚಿವ