Tag: ADGP Chandrasekhar

  • ಒಂದು ದಿನವಾದ್ರೂ ನನ್ನನ್ನ ಜೈಲಿಗೆ ಕಳಿಸಲು ರಾಜ್ಯ ಸರ್ಕಾರದಿಂದ ಸಂಚು – ಹೆಚ್‌ಡಿಕೆ ಗಂಭೀರ ಆರೋಪ

    ಒಂದು ದಿನವಾದ್ರೂ ನನ್ನನ್ನ ಜೈಲಿಗೆ ಕಳಿಸಲು ರಾಜ್ಯ ಸರ್ಕಾರದಿಂದ ಸಂಚು – ಹೆಚ್‌ಡಿಕೆ ಗಂಭೀರ ಆರೋಪ

    – ಒಬ್ಬ ಅಧಿಕಾರಿ ಬಂದು ನಿಮ್ಮನ್ನ ಕ್ರಿಮಿನಲ್ ಅಂದ್ರೆ ಏನ್‌ ಮಾಡ್ತೀರಿ ಸಿದ್ಧರಾಮಯ್ಯನವರೇ?
    – ನಾನು ಬೇಲ್ ತೆಗೆದುಕೊಂಡಿದ್ದೇನೆ, ಆ ಅಧಿಕಾರಿ ಸ್ಟೇ ತೆಗೆದುಕೊಂಡಿದ್ದಾರೆ ಎಂದ ಕೇಂದ್ರ ಸಚಿವ

    ನವದೆಹಲಿ: ಹಿಂದೆ ಇದೇ ಸಿದ್ದರಾಮಯ್ಯ (Siddaramaiah) ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆರೋಪಿಸಿದರು.

    ದೆಹಲಿಯಲ್ಲಿ (New Delhi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಕಳಿಸಬೇಕೆಂದು ಚರ್ಚೆ ಮಾಡಲಾಗಿದೆ ಆರೋಪ ಮಾಡಿದರು.

    ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ ಎಂದು ಅವರು ಹೇಳಿದರು. ಇದನ್ನೂ ಓದಿ: ರೇಪ್‌ ಆರೋಪಿಗಳಿಗೆ ಪುರುಷತ್ವ ಹರಣ – ಇಟಲಿಯಲ್ಲಿ ಶೀಘ್ರವೇ ಬರಲಿದೆ ಹೊಸ ಕಾನೂನು

    ಕಳೆದ 3-4 ತಿಂಗಳಿಂದ ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. 80 ಕೋಟಿ ರೂ. ಗುಳುಂ ಮಾಡಿರೋ ಪ್ರಕರಣದಲ್ಲಿ ಏನಾಯಿತು? ಎಸ್‌ಐಟಿ ಯಾರನ್ನೋ ಬಂಧನ ಮಾಡಿದ್ದರು. ಯಾರೋ ಸಂಬಂಧವಿಲ್ಲದ ವ್ಯಕ್ತಿಯ ಹೆಸರನ್ನು ಪ್ರಕರಣದಲ್ಲಿ ಸೇರಿಸಿದಿರಿ. ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ನಾನು ಆ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್ ಬಗ್ಗೆ ಅಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡುವುದಕ್ಕೆ ಅವಕಾಶ ಕೇಳಿ ಪತ್ರ ಬರೆದು, ಒಂದು ಖಾಸಗಿ ಚಾನೆಲ್‌ಗೆ ಲೀಕ್ ಮಾಡಿರುವ ಹಿನ್ನೆಲೆಯಲ್ಲಿ ನಾನು ಪ್ರಶ್ನೆ ಮಾಡಿದ್ದು ಎಂದು ಅವರು ಹೇಳಿದರು.

    ನಾನು ಆ ಪೋಲಿಸ್ ಅಧಿಕಾರಿಯ ಉದ್ಧಟನವನ್ನು ಖಂಡಿಸಿದ್ದೆ. ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜೊತೆ ಅವರ ನೇರ ನಂಟಿದೆ. ಸಮಾಜ ವಿದ್ರೋಹಿ ಶಕ್ತಿಗಳಿಗೆ ಸಾಥ್ ನೀಡಲು ಈ ವ್ಯಕ್ತಿಗೆ ಐಪಿಎಸ್ ಸ್ಥಾನ ಕೊಟ್ಟಿದ್ದಾರಾ? ಕ್ರಿಮಿನಲ್ ಪ್ರಕರಣದಲ್ಲಿ (Criminal Case) ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಜಾಮೀನು ಮೇಲೆ ಹೊರಗಡೆ ಇದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇದನ್ನೂ ಓದಿ: ಅಣ್ಣನಿಗೆ ಆಗದೇ ಇರೋರು ಹಗರಣ ಮಾಡಿದ್ದಾರೆ, ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು: ಸಿಎಂ ಸಹೋದರ

    ನಿಮ್ಮನ್ನ ಕ್ರಿಮಿನಲ್‌ ಅಂದ್ರೆ ಏನ್‌ ಮಾಡ್ತೀರಿ?
    ಅಧಿಕಾರಿಗಳು ಸಿಎಂ ಬಳಿ ಬಂದು ನೀವು ಕ್ರಿಮಿನಲ್ ಸಿಎಂ ಅಂದ್ರೆ ಏನು ಮಾಡುತ್ತೀರಿ? ಶನಿವಾರ ಕಚೇರಿಗೆ ರಜೆ ಇದ್ದರೂ ಸಹೋದ್ಯೋಗಿಗಳಿಗೆ ಪತ್ರ ಬರೆಯುವ ನೆಲದಲ್ಲಿ ನನ್ನ ಬಗ್ಗೆ ಅಶ್ಲೀಲ ಭಾಷೆ ಬಳಕೆ ಮಾಡಿದ್ದಾರೆ. ಅದು ಕಚೇರಿ ಮೆಮೊ ಅಲ್ಲ, ಅದರಲ್ಲಿ ಸೀಲ್ ಇಲ್ಲ, ಆ ಇಲಾಖೆಯ ಎಂಬಲಂ ಇಲ್ಲ ಎಂದು ಸಚಿವರು ಹೇಳಿದರು.

    ಇಂಥ ಅಧಿಕಾರಿಗಳು ಸರ್ಕಾರವನ್ನು ಮೆಚ್ಚಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಾರೆ. ಅದಕ್ಕಾಗಿ ಸಲುವಾಗಿ ಜಾಮೀನು ತೆಗೆದುಕೊಂಡೆ. ಆ ಅಧಿಕಾರಿ ಮೇಲೆಯೂ ಪ್ರಕರಣ ಇದೆ. ಅವರು ಆರೋಪಿ ನಂಬರ್ 2, ಹೈಕೋರ್ಟ್ ನಲ್ಲಿ ತನಿಖೆಗೆ ಸ್ಟೇ ತಗೊಂಡಿದ್ದಾರೆ. ನಾನು ಬರೀ ಜಾಮೀನು ತಗೊಂಡಿದ್ದೇನೆ. ಸ್ಟೇ ತೆಗೆದುಕೊಂಡಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇದನ್ನೂ ಓದಿ: ರೇಪ್‌ ಆರೋಪಿಗಳಿಗೆ ಪುರುಷತ್ವ ಹರಣ – ಇಟಲಿಯಲ್ಲಿ ಶೀಘ್ರವೇ ಬರಲಿದೆ ಹೊಸ ಕಾನೂನು

    ಗೃಹ ಸಚಿವ ಡಾ.ಪರಮೇಶ್ವರ್‌ ಶದ್ಧ ಪಂಡಿತರು. ನನ್ನ ಹೆಸರು ಉಲ್ಲೇಖಿಸಿಲ್ಲ ಅಂತಾರೆ. ಸಿಎಂ ಮೇಲೂ ಆರೋಪ ಇದೆ, ನಾಳೆ ಬೆಳಗ್ಗೆ ಬಂದು ನಿಮ್ಮ ಅಧಿಕಾರಿ ನಿಮ್ಮನ್ನು ಕ್ರಿಮಿನಲ್ ಮುಖ್ಯಮಂತ್ರಿ ಅಂತಾ ಕರೆದರೆ ಏನು ಮಾಡುತ್ತೀರಿ? ನನ್ನ ವಿರುದ್ಧ ಬರೆದ ಪತ್ರ ಹೇಗೆ ಹಂಚಲಾಯಿತು? ನನ್ನ ವಿರುದ್ಧ ಸಿಎಂ ಕಚೇರಿಯಿಂದ ಸೋಮವಾರ ರಾತ್ರಿ ಮತ್ತೊಂದು ಪತ್ರ ದಾಖಲೆಗಳು ಹೋಗಿವೆ. ಪತ್ರದಲ್ಲಿ ಉಲ್ಲೇಖಿಸಿರುವ ಕಿಶೋರ್ ಕುಮಾರ ಅವರನ್ನು ಇವರು ಎಲ್ಲಿಗೆ ಕರೆಸಿಕೊಂಡಿದ್ದರು? ಎಂದು ಅವರು ಪ್ರಶ್ನಿಸಿದರು.

  • ಎಡಿಜಿಪಿ ಕುಮಾರಸ್ವಾಮಿಯನ್ನ ಹಂದಿ ಎಂದಿದ್ದಾರಾ? – ಸಿದ್ದರಾಮಯ್ಯ ಪ್ರಶ್ನೆ

    ಎಡಿಜಿಪಿ ಕುಮಾರಸ್ವಾಮಿಯನ್ನ ಹಂದಿ ಎಂದಿದ್ದಾರಾ? – ಸಿದ್ದರಾಮಯ್ಯ ಪ್ರಶ್ನೆ

    – ಸ್ನೇಹಮಹಿ ಕೃಷ್ಣ ಯಾರು ಎಂಬುದೇ ಗೊತ್ತಿಲ್ಲ ಎಂದ ಸಿಎಂ
    – ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ

    ಮೈಸೂರು: ಎಡಿಜಿಪಿ ಚಂದ್ರಶೇಖರ್‌ (ADGP Chandrasekhar) ಮತ್ತು ಕುಮಾರಸ್ವಾಮಿ ನಡುವೆ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ಕುಮಾರಸ್ವಾಮಿಯನ್ನು ಎಡಿಜಿಪಿ ಹಂದಿ ಎಂದು ಕರೆದಿದ್ದಾರಾ? ಇಲ್ಲಾ ತಾನೇ. ಅವರು ಇಂಗ್ಲೀಷ್‌ನ ಬರ್ನಾಡ್ ಶಾರ ವ್ಯಾಕ್ಯವನ್ನ ಉಲ್ಲೇಖಿಸಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

    ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಳಿಕ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ಮತ್ತು ಕುಮಾರಸ್ವಾಮಿ ನಡುವೆ ಜಟಾಪಟಿ ವಿಚಾರ ಉತ್ತರಿಸಿದರು. ಕುಮಾರಸ್ವಾಮಿಯನ್ನು ಎಡಿಜಿಪಿ ಹಂದಿ ಎಂದು ಕರೆದಿದ್ದಾರಾ? ಇಲ್ಲಾ ತಾನೇ. ಅವರು ಇಂಗ್ಲೀಷ್‌ನ ಬರ್ನಾಡ್ ಶಾರ ವ್ಯಾಕ್ಯವನ್ನ ಉಲ್ಲೇಖಿಸಿದ್ದಾರೆ ಅಷ್ಟೇ. ಕುಮಾರಸ್ವಾಮಿ ಎಡಿಜಿಪಿ ಮೇಲೆ ಕೆಲವೊಂದಿಷ್ಟು ಆರೋಪ ಮಾಡಿದ್ದರು. ಅದಕ್ಕೆ ಕೆಲವು ಉತ್ತರಗಳನ್ನ ಕೊಟ್ಟಿದ್ದಾರೆ. ಹಂದಿ ಎನ್ನುವ ಪದವನ್ನು ಕುಮಾರಸ್ವಾಮಿ ಅವರಿಗೆ ಬಳಸಿದ್ದಾರೆ ಎಂದು ಹೇಗೆ ಹೇಳುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

    ನಾನು ಈ ವಿಚಾರದ ಬಗ್ಗೆ ಸುದೀರ್ಘ ವಿವರಣೆ ನೀಡುವುದಿಲ್ಲ. ಅದರಲ್ಲೂ ಕುಮಾರಸ್ವಾಮಿ (HD Kumaraswamy) ಹೇಳಿಕೆಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿದ್ದೇನೆ. ಕುಮಾರಸ್ವಾಮಿ ತಪ್ಪು ಮಾಡಿ ಬಿಟ್ಟಿದ್ದಾರೆ. ಹೀಗಾಗಿ ಬೇರೆಯವರ ಮೇಲೆ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ ಅಷ್ಟೇ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 136 ಶಾಸಕರಿಗೆ 1 ರೂಪಾಯಿ ಅನುದಾನ ಕೊಟ್ಟಿಲ್ಲ, ಇನ್ನೂ ಚನ್ನಪಟ್ಟಣಕ್ಕೆ 500 ಕೋಟಿ ಎಲ್ಲಿಂದ ಬರುತ್ತೆ?- ನಿಖಿಲ್

    ಗ್ಯಾರಂಟಿ ನಿಲ್ಲಿಸಲ್ಲ:
    ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ಇರುತ್ತೆ ಯಾರು ಏನು ಮಾಡಲು ಸಾಧ್ಯವಿಲ್ಲ. ಸ್ವಲ್ಪ ದಿನ ತೊಂದರೆ ಕೊಡಬಹುದು ಅಷ್ಟೇ. ನಾನು ಯಾರಿಗೂ ಹೆದರಲ್ಲ ಜಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ. ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ ವೇಳೆ ಸಿಎಂ ಮಾತು ಕೇಳಿ ಹೌದು ಹುಲಿಯಾ ಅಂತ ಜನ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಜಮೈಕಾ ಪ್ರಧಾನಿ ಭಾರತ ಪ್ರವಾಸ – ಸೋಮವಾರದಿಂದ 4 ದಿನಗಳ ಭೇಟಿ

    ಇದೇ ವೇಳೆ ಮೈಸೂರಿನ ಹೊರವಲಯದಲ್ಲಿ ನಡೆದಿರುವ ಪಾರ್ಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಎಸ್ಪಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲಿಸರು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: 1 ಲಕ್ಷ ಕೋಟಿ ಲಾಸ್‌ನಲ್ಲಿರುವ 33 ಕಂಪನಿಗಳು ಚುನಾವಣಾ ಬಾಂಡ್‌ಗೆ 570 ಕೋಟಿ ಹಣ ನೀಡಿವೆ – ಪ್ರಿಯಾಂಕ್‌ ಖರ್ಗೆ

    ನನಗೆ ಸ್ನೇಹಮಹಿ ಕೃಷ್ಣ ಯಾರು ಎಂಬುದೇ ಗೊತ್ತಿಲ್ಲ:
    ಇದೇ ವೇಳೆ ಸ್ನೇಹಮಯಿ ಕೃಷ್ಣ ಇಡಿಗೆ ಇ-ಮೇಲ್‌ ಮೂಲಕ ದೂರು ನೀಡಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ಸ್ನೇಹಮಹಿ ಕೃಷ್ಣ ಯಾರು ಎಂಬುದೇ ಗೊತ್ತಿಲ್ಲ. ನಾನು ಇವತ್ತಿನವರೆಗೂ ಅವರನ್ನ ನೋಡಿಯೇ ಇಲ್ಲ. ಅವರ ಮೇಲೆ ಏನೇನು ಕೇಸ್ ಗಳಿದೆ ಅದು ನನಗೆ ಗೊತ್ತಿಲ್ಲ. ಅವರು ಇಡಿ ಕೇಸ್ ಕೊಟ್ಟಿರಬಹುದು, ಕೊಡಲಿ ಬಿಡಿ. ಕೇಸ್ ಕೊಟ್ಟ ತಕ್ಷಣ ಅದು ತನಿಖೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಈಗ ಮುಡಾ ವಿಚಾರ ನ್ಯಾಯಾಲಯದಲ್ಲಿದೆ, ಇದರ ಬಗ್ಗೆ ಹೆಚ್ಚು ಕಾಮೆಂಟ್ ಮಾಡುವುದಿಲ್ಲ ಎಂದು ಉತ್ತರಿಸಿದರು.