Tag: Adhir Ranjan Chowdhury

  • ಅನುದಾನ ಹಂಚಿಕೆಯಲ್ಲಿ ರಾಜ್ಯಗಳ ನಡುವೆ ತಾರತಮ್ಯ ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

    ಅನುದಾನ ಹಂಚಿಕೆಯಲ್ಲಿ ರಾಜ್ಯಗಳ ನಡುವೆ ತಾರತಮ್ಯ ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

    – ಹಣಕಾಸು ಆಯೋಗದ ಶಿಫಾರಸು ಆಧಾರದ ಮೇಲೆ ರಾಜ್ಯಗಳಿಗೆ ಹಣ ಬಿಡುಗಡೆ

    ನವದೆಹಲಿ: ಹಣಕಾಸು ಆಯೋಗದ (Finance Commission) ಶಿಫಾರಸು ಆಧರಿಸಿ ರಾಜ್ಯಗಳಿಗೆ ಅನುದಾನ ನೀಡಲಾಗುತ್ತಿದೆ. ಜಿಎಸ್‌ಟಿ ಅದರಲ್ಲೂ ರಾಜ್ಯಗಳ ಪಾಲಿನ ಜಿಎಸ್‌ಟಿಯನ್ನು (GST) ನೂರಕ್ಕೆ ನೂರರಷ್ಟು ರಾಜ್ಯಗಳಿಗೆ ನೀಡಲಾಗುತ್ತಿದೆ. ಆಯೋಗದ ಶಿಫಾರಸು ಉಲ್ಲಂಘಿಸಿ ರಾಜ್ಯಗಳ ನಡುವೆ ತಾರತಮ್ಯ ಮಾಡಲು ಸಾಧ್ಯವಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಲೋಕಸಭೆಯಲ್ಲಿ ಹೇಳಿದ್ದಾರೆ.

    ತೆರಿಗೆ ಅನ್ಯಾಯ ಪ್ರಶ್ನಿಸಿ ಕರ್ನಾಟಕ ರಾಜ್ಯ ಸರ್ಕಾರದ ಪ್ರತಿಭಟನೆಯನ್ನು ಉಲ್ಲೇಖಿಸಿದ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲವು ರಾಜ್ಯಗಳು ಮಾಡುತ್ತಿರುವ ತೆರಿಗೆ ತಾರತಮ್ಯ ರಾಜಕೀಯವಾಗಿ ದೂಷಣೆಯಾಗಿದ್ದು, ಇದು ಸತ್ಯವಲ್ಲ. ಕೇಂದ್ರ ಹಣಕಾಸು ಆಯೋಗದ ಶಿಫಾರಸು ಅನ್ವಯ ಅನುದಾನ ನೀಡುತ್ತಿದೆ ಎಂದರು. ಇದನ್ನೂ ಓದಿ: ಲೋಕಸಭೆಗೆ ಅಲ್ಲ, ರಾಜ್ಯಸಭೆಗೆ ದೆಹಲಿಯಲ್ಲಿ ವಿ.ಸೋಮಣ್ಣ ಲಾಬಿ!

    ಹಣಕಾಸು ಆಯೋಗವು ಎಲ್ಲಾ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ ಶಿಫಾರಸು ಮಾಡುತ್ತದೆ. ಇದು ರಾಜ್ಯ ಸರ್ಕಾರಗಳಿಗೂ ಗೊತ್ತು. ಈ ಸತ್ಯಾಂಶ ಬಿಟ್ಟು ರಾಜಕೀಯ ಆರೋಪ ಮಾಡಲಾಗುತ್ತಿದೆ ಎಂದರು. ಮುಂದುವರಿದು ಬೇಕಾಬಿಟ್ಟಿ ಹಣ ಖರ್ಚು ಮಾಡಿ ನಿಮ್ಮ ರಾಜ್ಯದ ಬಜೆಟ್ ಅನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಕೇಂದ್ರ ಸರ್ಕಾರವನ್ನು ದೂಷಿಸಬೇಡಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಂಧ ಭಕ್ತರು ಹೆಚ್ಚಿರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಿ ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಹುನ್ನಾರ: ಹರಿಪ್ರಸಾದ್ ವಾಗ್ದಾಳಿ

    ಯಾವುದೇ ಕೇಂದ್ರ ಹಣಕಾಸು ಸಚಿವರು ಹಣಕಾಸು ಆಯೋಗದ ಶಿಫಾರಸುಗಳೊಂದಿಗೆ ಆಟವಾಡಲು ಸಾಧ್ಯವಿಲ್ಲ. ನನಗೆ ಈ ರಾಜ್ಯ ಇಷ್ಟವಿಲ್ಲ. ತೆರಿಗೆ ಮರುಪಾವತಿಯನ್ನು ನಿಲ್ಲಿಸಿ ಎಂದು ಹೇಳಲು ಯಾವುದೇ ಹಣಕಾಸು ಸಚಿವರಿಗೆ ಅಧಿಕಾರ ಇಲ್ಲ. ಸಚಿವರು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಈ ವ್ಯವಸ್ಥೆ ಉತ್ತಮವಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ವಿಶ್ವಾಸಮತ ಗೆದ್ದ ಜಾರ್ಖಂಡ್‌ ನೂತನ ಸಿಎಂ ಚಂಪೈ ಸೊರೇನ್‌

    ಇದಕ್ಕೂ ಮುನ್ನ ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅಧೀರ್ ರಂಜನ್ ಚೌಧರಿ, ಕರ್ನಾಟಕದ ಬಗ್ಗೆ ಕೇಂದ್ರದ ವಿವೇಚನಾರಹಿತ ಮತ್ತು ನಿರಂಕುಶ ವರ್ತನೆಯ ಹಿಂದಿನ ಕಾರಣವನ್ನು ಸೀತಾರಾಮನ್ ಅವರಿಗೆ ಕೇಳಿದರು. ಕೆಲವು ತಿಂಗಳ ಹಿಂದೆ ಈ ಪರಿಸ್ಥಿತಿ ಇರಲಿಲ್ಲವಾದ್ದರಿಂದ ಕರ್ನಾಟಕ ರಾಜ್ಯ ಸರ್ಕಾರವು ನ್ಯಾಯಸಮ್ಮತವಾದ ಬಾಕಿಯನ್ನು ಪಡೆಯುವುದರಿಂದ ವಂಚಿತವಾಗಿದೆಯೇ ಎಂದು ನಾನು ತಿಳಿಯಲು ಬಯಸುತ್ತೇನೆ ಎಂದಿದ್ದರು. ಇದನ್ನೂ ಓದಿ: ನನ್ನ ರಾಮನನ್ನು ಬಿಜೆಪಿಗೆ ಬಿಟ್ಟುಕೊಡಲ್ಲ – ಶಶಿ ತರೂರ್‌

  • ಹಿಂದೂ ಹೆಸರನ್ನು ನೀಡಿದವರೇ ವಿದೇಶಿಯರು: ಅಧೀರ್‌ ರಂಜನ್‌ ಚೌಧರಿ

    ಹಿಂದೂ ಹೆಸರನ್ನು ನೀಡಿದವರೇ ವಿದೇಶಿಯರು: ಅಧೀರ್‌ ರಂಜನ್‌ ಚೌಧರಿ

    ನವದೆಹಲಿ: ಹಿಂದೂ (Hindu) ಹೆಸರನ್ನು ನೀಡಿದವರು ವಿದೇಶಿಯರು ಎಂದು ಕಾಂಗ್ರೆಸ್‌ (Congress) ಸಂಸದ ಅಧೀರ್‌ ರಂಜನ್‌ ಚೌಧರಿ (Adhir Ranjan Chowdhury) ಹೇಳಿದ್ದಾರೆ.

    ಇಂಡಿಯಾ ಎಂಬ ಹೆಸರು ಪ್ರಧಾನಿ ಮೋದಿಗೆ ಭಯ ತಂದಿದೆ. ಇಂಡಿಯಾ (INDIA) ಎಂಬ ಮೈತ್ರಿಕೂಟ ರಚನೆಯಾದ ದಿನದಿಂದ ಪ್ರಧಾನಿ ಮೋದಿಯವರಿಗೆ (PM Narendra Modi) ಇಂಡಿಯಾ ಎಂಬ ಹೆಸರಿನ ಮೇಲೆ ದ್ವೇಷ ಹೆಚ್ಚಾಗಿದೆ ಎಂದು ಕಿಡಿಕಾರಿದ್ದಾರೆ.   ಇದನ್ನೂ ಓದಿ: ಟೀಂ ಭಾರತ್ ಅಂತಾ ಜೆರ್ಸಿ ಬದಲಿಸಿ – ಬಿಸಿಸಿಐಗೆ ಸೆಹ್ವಾಗ್ ಆಗ್ರಹ

    ಸದ್ಯ ರಾಷ್ಟ್ರಪತಿಗಳ ನಿವಾಸವಾಗಿರುವ ರಾಷ್ಟ್ರಪತಿ ಭವನ (Rashtrapati Bhavan) ಈ ಹಿಂದೆ ಬ್ರಿಟಿಷ್‌ ವೈಸ್‌ರಾಯ್‌ ಮನೆಯಾಗಿತ್ತು. ಮೋದಿಯವರು ಬ್ರಿಟಿಷರ ವಿರೋಧಿಯಾಗಿದ್ದರೆ ರಾಷ್ಟ್ರಪತಿ ಭವನವನ್ನು ಏನು ಮಾಡುತ್ತಾರೆ ಎಂದು ಅಧೀರ್‌ ರಂಜನ್‌ ಪ್ರಶ್ನೆ ಮಾಡಿದ್ದಾರೆ.  ಇದನ್ನೂ ಓದಿ: ಬದಲಾಗುತ್ತಾ ದೇಶದ ಹೆಸರು – ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಅಂತ ಮರುನಾಮಕರಣ?

    ಬಿಜೆಪಿ (BJP) ಕೇಂದ್ರ ಸರ್ಕಾರವು ದೇಶದ ಹೆಸರನ್ನು`ಇಂಡಿಯಾ’ ಬದಲಿಗೆ `ರಿಪಬ್ಲಿಕ್‌ ಆಫ್‌ ಭಾರತ್‌’ (Republic Of Bharat) ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ವಿಪಕ್ಷಗಳು ಬಿಜೆಪಿ ವಿರುದ್ಧ ಮುಗಿಬಿದ್ದರೆ ಬಿಜೆಪಿ ನಾಯಕರು ವಿಪಕ್ಷಗಳ ವಿರುದ್ಧ ಕಿಡಿಕಾರುತ್ತಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೋದಿಯನ್ನು ಜನ ಹುಚ್ಚು ಮೋದಿ ಅಂತಿದ್ದಾರೆ- ಮತ್ತೆ ನಾಲಗೆ ಹರಿಬಿಟ್ಟ ಕೈ ನಾಯಕ ಅಧೀರ್

    ಮೋದಿಯನ್ನು ಜನ ಹುಚ್ಚು ಮೋದಿ ಅಂತಿದ್ದಾರೆ- ಮತ್ತೆ ನಾಲಗೆ ಹರಿಬಿಟ್ಟ ಕೈ ನಾಯಕ ಅಧೀರ್

    ಕೋಲ್ಕತ್ತಾ: ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಹಾಗೂ ಸಂಸದ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ನಾಲಗೆ ಹರಿಬಿಟ್ಟಿದ್ದಾರೆ. ಪ್ರಧಾನಿಯನ್ನು ಟೀಕಿಸುವ ಭರದಲ್ಲಿ ಪಗ್ಲಾ ಮೋದಿ (ಹುಚ್ಚ ಮೋದಿ) ಎಂದು ನಿಂದಿಸುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

    ತಮ್ಮ ಹೇಳಿಕೆ ವಿವಾದವಾಗುತ್ತಿದ್ದಂತೆಯೇ ಅಧೀರ್ ಸ್ಪಷ್ಟನೆ ನೀಡಿದ್ದು, ನಾನು ಸಾರ್ವಜನಿಕರಲ್ಲಿ 2 ಸಾವಿರ ರೂ. ನೋಟು ಹಿಂತೆಗೆದುಕೊಳ್ಳುವ ನಿರ್ಧಾರಕ್ಕೆ ಯಾವ ಭಾವನೆ ಇದೆ ಎನ್ನುವುದನ್ನು ತಿಳಿಸಲು ಪ್ರಯತ್ನಿಸಿದೆ ಅಷ್ಟೇ. ಬೇರೆ ಯಾವುದೇ ಉದ್ದೇಶವಿರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲೂ ಜನ ಮೋದಿಯನ್ನು ಇಷ್ಟಪಡುತ್ತಾರೆ: ಅನೂಪ್ ಜಲೋಟಾ

    ಅಧೀರ್ ಹೇಳಿದ್ದೇನು..?: 2,000 ಮುಖಬೆಲೆಯ ನೋಟುಗಳು ಹಿಂಪಡೆದ ವಿಷಯವಾಗಿ ಮಾತನಾಡುತ್ತಿದ್ದ ವೇಳೆ ಕೈ ನಾಯಕ ಈ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ಬಗ್ಗೆ ದೇಶದ ನಾಗರಿಕರಲ್ಲಿ ಹತಾಶೆ ಹೆಚ್ಚುತ್ತಿದೆ. ಜನರು ಮೋದಿ ಅವರನ್ನು ಹುಚ್ಚು (ಪಗ್ಲಾ) ಮೋದಿ ಎಂದು ಕರೆಯುತ್ತಿದ್ದಾರೆ. ಸಾರ್ವಜನಿಕರ ಭಾವನೆಗಳು ಮೋದಿ ವಿರುದ್ಧ ಇವೆ ಎಂದು ಹೇಳಿದ್ದರು.

    ಅಧೀರ್ ಅವರ ಹೇಳಿಕೆಗೆ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಮಾಮ್ ಕಿಡಿಕಾರಿದ್ದು, ಅಧೀರ್ ಅವರು ಪದೇ ಪದೇ ಪ್ರಧಾನಿ ಮೋದಿ ಅವರ ವಿರುದ್ಧ ನಿಂದನೀಯ ಭಾಷೆಯನ್ನು ಬಳಸುತ್ತಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಕೂಡಲೇ ಅವರು ಈ ಹೇಳಿಕೆ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

  • ದ್ರೌಪದಿ ಮುರ್ಮುಗೆ ರಾಷ್ಟ್ರಪತ್ನಿ ಎಂದಿದ್ದಕ್ಕೆ ಕ್ಷಮೆ ಕೋರಿದ ಅಧೀರ್ ರಂಜನ್ ಚೌಧರಿ

    ದ್ರೌಪದಿ ಮುರ್ಮುಗೆ ರಾಷ್ಟ್ರಪತ್ನಿ ಎಂದಿದ್ದಕ್ಕೆ ಕ್ಷಮೆ ಕೋರಿದ ಅಧೀರ್ ರಂಜನ್ ಚೌಧರಿ

    ನವದೆಹಲಿ: ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕರೆದಿದ್ದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಕೋರಿದ್ದಾರೆ.

    ಅಧೀರ್ ರಂಜನ್ ಚೌಧರಿ ಅವರು, ತಮ್ಮ ಪಕ್ಷದಿಂದ ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಎನ್ನುವ ಬದಲು ರಾಷ್ಟ್ರಪತ್ನಿ ಎಂದಿದ್ದರು. ಈ ಬಗ್ಗೆ ಆಡಳಿತ ಪಕ್ಷದವರು ಸೋನಿಯಾ ಗಾಂಧಿ ಹಾಗೂ ಅಧೀರ್ ರಂಜನ್ ಚೌಧರಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮಾತನಾಡಿದ ಅಧೀರ್ ರಂಜನ್ ಚೌಧರಿ, ದ್ರೌಪದಿ ಮುರ್ಮು ಅವರನ್ನು ಖುದ್ದಾಗಿ ಭೇಟಿಯಾಗುವುದಾಗಿ ಹಾಗೂ ಅವರಿಗೆ ನೋವಾಗಿದ್ದರೆ ಕ್ಷಮೆ ಕೇಳುವುದಾಗಿ ತಿಳಿಸಿದ್ದಾರೆ.

    ರಾಷ್ಟ್ರಪತಿ ಅವರನ್ನು ಅವಮಾನಿಸುವ ಯೋಚನೆಯೂ ಇರಲಿಲ್ಲ. ಅಧ್ಯಕ್ಷರಿಗೆ ನೋವಾಗಿದ್ದರೆ ನಾನೇ ಖುದ್ದು ಭೇಟಿಯಾಗಿ ಕ್ಷಮೆ ಕೇಳುತ್ತೇನೆ. ಅವರು ಬೇಕಾದರೆ ನನ್ನನ್ನು ಗಲ್ಲಿಗೇರಿಸಬಹುದು. ಶಿಕ್ಷೆಗೆ ನಾನು ಸಿದ್ಧನಿದ್ದೇನೆ. ಆದರೆ ಸೋನಿಯಾ ಗಾಂಧಿ ಅವರನ್ನು ವಿನಃ ಕರೆತರಲಾಗುತ್ತಿದೆ ಎಂದರು.

    ಎನ್‍ಡಿಎ ಸರ್ಕಾರ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಹೆಸರಿಸಿದಾಗಿನಿಂದಲೂ ಕಾಂಗ್ರೆಸ್, ಮುರ್ಮು ಅವರನ್ನು ದುರುದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದೆ. ಮತ್ತು ಕಾಂಗ್ರೆಸ್‍ನ ನಾಯಕರು ಅವರನ್ನು ಕೈಗೊಂಬೆ ಮತ್ತು ರಬ್ಬರ್ ಸ್ಟಾಂಪ್ ಎಂದು ಕರೆದಿದ್ದರು ಎಂದು ಬಿಜೆಪಿ ಆರೋಪಿಸಿತ್ತು.

    bjP

    ಈ ಬಗ್ಗೆ ಸಚಿವೆ ಸ್ಮೃತಿ ಇರಾನಿ ಕಿಡಿಕಾರಿದ್ದು, ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಆಯ್ಕೆಯಾದ ನಂತರವೂ ಈ ವಾಗ್ದಾಳಿಗಳು ನಿಲ್ಲುವಂತೆ ಕಾಣುತ್ತಿಲ್ಲ. ಚೌಧರಿಯವರ ಈ ಹೇಳಿಕೆಯು ಮುರ್ಮು ಅವರು ಪ್ರತಿನಿಧಿಸುವ ಶ್ರೀಮಂತ ಬುಡಕಟ್ಟು ಪರಂಪರೆಗೆ ಮತ್ತು ಕಠಿಣ ಪರಿಶ್ರಮದ ಮೂಲಕ ಮೇಲೆ ಬರುವ ಬಡವರಿಗೆ ಮಾಡುವ ಅವಮಾನವಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಪಾಪಿಗೂ ಭವಿಷ್ಯವಿದೆ – ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧಿಸಲು ನಿರಾಕರಿಸಿದ ಸುಪ್ರೀಂ

    ಭಾರತದ ಮೊದಲ ಬುಡಕಟ್ಟು ಜನಾಂಗದಿಂದ ರಾಷ್ಟ್ರಪತಿಯಾಗಿರುವ ದ್ರೌಪದಿ ಮುರ್ಮು ಅವರು ಹೋರಾಟಗಳನ್ನು ನಡೆಸಿಕೊಂಡು ಬಂದಂತವರು. ಮತ್ತು ಪಂಚಾಯಿತಿಯಿಂದ ಸಂಸತ್ತಿನವರೆಗೆ ದೇಶದ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತಾರೆ. ಅಧ್ಯಕ್ಷೆ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪದೇ ಪದೆ ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಎಂದು ಸ್ಮೃತಿ ಇರಾನಿ ಆರೋಪಿಸಿದ್ದರು.

    ಇದಲ್ಲದೆ ಸದನದ ಒಳಗೂ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡ ಸ್ಮೃತಿ ಇರಾನಿ, ಸೋನಿಯಾ ಗಾಂಧಿ ಅವರೇ, ನೀವು ದ್ರೌಪದಿ ಮುರ್ಮು ಅವರ ಅವಮಾನವನ್ನು ಅನುಮೋದಿಸಿರುವಿರಿ. ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿ ಮಹಿಳೆಯನ್ನು ಅವಮಾನಿಸಲು ಸೋನಿಯಾ ಗಾಂಧಿ ಅವರು ಅನುಮತಿ ನೀಡಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ನಡೆಸಲು ನಾವು ಸಿದ್ಧ: ಆರ್. ಅಶೋಕ್

    Live Tv
    [brid partner=56869869 player=32851 video=960834 autoplay=true]

  • ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ: ಕಾಂಗ್ರೆಸ್ ಆಗ್ರಹ

    ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ: ಕಾಂಗ್ರೆಸ್ ಆಗ್ರಹ

    ನವದೆಹಲಿ: ಬಿರ್‌ಭುಮ್‌ ಘಟನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಆಡಳಿತವಿರು ಪಶ್ಚಿಮ ಬಂಗಾಳದಲ್ಲಿ 355ನೇ ವಿಧಿಯನ್ನು ಹೇರಬೇಕೆಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್‍ಗೆ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಒತ್ತಾಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಐಟಿಯಿಂದ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ರಾಷ್ಟ್ರಪತಿ ಕೋವಿಂದ್‌ ಅವರನ್ನು ಭೇಟಿ ಮಾಡಿ 355ನೇ ವಿಧಿಯನ್ನು ಹೇರಲು ಒತ್ತಾಯಿಸುತ್ತೇನೆ ಎಂದ ಅವರು, ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಇದರಿಂದಾಗಿ ಬಂಗಾಳದಲ್ಲಿ ಜನರು ಅಸುರಕ್ಷಿತರಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

    ಪರಿಚ್ಛೇದ 355ರ ಪ್ರಕಾರ, ಬಾಹ್ಯ ಆಕ್ರಮಣ ಮತ್ತು ಆಂತರಿಕ ಅಡಚಣೆಯಿಂದ ಪ್ರತಿ ರಾಜ್ಯವನ್ನು ರಕ್ಷಿಸುವುದು ಮತ್ತು ಈ ಸಂವಿಧಾನದ ನಿಬಂಧನೆಗಳಿಗೆ ಅನುಗುಣವಾಗಿ ಪ್ರತಿ ರಾಜ್ಯದ ಸರ್ಕಾರ ನಿರ್ವಹಿಸುತ್ತಿರುವ ಕಾರ್ಯವನ್ನು ಖಚಿತಪಡಿಸಿಕೊಳ್ಳುವುದು ಒಕ್ಕೂಟದ ಕರ್ತವ್ಯವಾಗಿದೆ.

    ಮಮತಾ ರಾಜೀನಾಮೆಗೆ ಬಿಜೆಪಿ ಒತ್ತಾಯ: ಬಿರ್‌ಭುಮ್‌ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಬೇಕು. ಜೊತೆಗೆ ಘಟನೆಗೆ ಸಂಬಂಧಿಸಿ ಕೇಂದ್ರ ಏಜೆನ್ಸಿಗಳು ತನಿಖೆಯನ್ನು ನಡೆಸಬೇಕು ಎಂದು ಒತ್ತಾಯಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈವರೆಗೆ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಪೊಲೀಸ್ ಮಹಾ ನಿರ್ದೇಶಕ ಮನೋಜ್ ಮಾಳವಿಕಾ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವ್ಯಾಪಾರಿಗಳಿಗೆ ನಿಷೇಧ: ನಿಯಮ ಏನಿದೆ?

    ಏನಿದು ಘಟನೆ?: ಬುಧವಾರ ಟಿಎಂಸಿ ಮುಖಂಡನ ಹತ್ಯೆ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬಿರ್‌ಭುಮ್‌ನಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, 11 ಮಂದಿ ಸಜೀವ ದಹನವಾಗಿದ್ದಾರೆ. ಇದನ್ನೂ ಓದಿ: ಕಾಟನ್ ಜಿನ್ನಿಂಗ್ ಮಿಲ್‍ನಲ್ಲಿ ಬೆಂಕಿ ಅವಘಡ- ಕೋಟ್ಯಂತರ ಮೌಲ್ಯದ ಹತ್ತಿ ಭಸ್ಮ

    ಸೋಮವಾರ ರಾಮಪುರಹಾಟ್‍ನ ಬಗುಟಿ ಗ್ರಾಮ ಪಂಚಾಯಿತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು ಅವರ ಗ್ರಾಮದಲ್ಲಿನ ವಿರೋಧಿ ಗುಂಪಿನ ಕೆಲವು ಮನೆಗಳ ಮೇಲೆ ದಾಳಿ ನಡೆಸಲು ಮುಂದಾಗಿದೆ.

    ದಾಳಿ ಹಿನ್ನೆಲೆಯಲ್ಲಿ 10 ರಿಂದ 12 ಮಂದಿಗೆ ಬೆಂಕಿ ಬಿದ್ದಿದ್ದು, 11 ಮಂದಿ ಸಜೀವ ದಹನವಾಗಿದ್ದಾರೆ. ಸುಟ್ಟು ಕರಕಲಾದ 11 ಮೃತದೇಹವನ್ನು ಹೊರತೆಗೆಲಾಗಿದ್ದು, ಒಂದೇ ಮನೆಯಿಂದ 7 ಮೃತದೇಹಗಳನ್ನು ಹೊರತೆಗೆದಿರುವುದು ಇದೇ ವೇಳೆ ಬೆಳಕಿಗೆ ಬಂದಿದೆ.

  • ಮಮತಾ ಬ್ಯಾನರ್ಜಿ ಬಿಜೆಪಿ ಏಜೆಂಟ್: ಕಾಂಗ್ರೆಸ್

    ಮಮತಾ ಬ್ಯಾನರ್ಜಿ ಬಿಜೆಪಿ ಏಜೆಂಟ್: ಕಾಂಗ್ರೆಸ್

    ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಏಜೆಂಟ್ ಎಂದು ಕಾಂಗ್ರೆಸ್‍ನ ಪಶ್ಚಿಮ ಮುಖ್ಯಸ್ಥ ಅಧೀರ್ ರಂಜನ್ ಚೌದರಿ ವಾಗ್ದಾಳಿ ನಡೆಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಚ್ಚುತನದ ವ್ಯಕ್ತಿಗೆ ನಾನು ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಪ್ರತಿಪಕ್ಷಗಳ ಒಟ್ಟು ಮತಗಳ ಶೇಕಡಾ 20ರಷ್ಟು ಮತವನ್ನು ಕಾಂಗ್ರೆಸ್ ಹೊಂದಿದೆ. ಭಾರತದಾದ್ಯಂತ ಕಾಂಗ್ರೆಸ್ 700 ಶಾಸಕರನ್ನು ಹೊಂದಿದೆ. ಜೊತೆಗೆ ಪ್ರತಿಪಕ್ಷಗಳ ಒಟ್ಟು ಮತಗಳ ಶೇಕಡಾ 20ರಷ್ಟು ಕಾಂಗ್ರೆಸ್ ಹೊಂದಿದೆ. ಅದು ಅವರ ಬಳಿ ಇದೆಯೇ ಎಂದು ತಿರುಗೇಟು ನೀಡಿದರು.

    ಮಮತಾ ಬ್ಯಾನರ್ಜಿ ಅವರು ಬಿಜೆಪಿಯನ್ನು ಮೆಚ್ಚಿಸಲು ಮತ್ತು ಅದರ ಏಜೆಂಟ್ ಆಗಿ ಕಾರ್ಯನಿರ್ವಹಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಜೊತೆ ಸುದ್ದಿಯಲ್ಲಿ ಇರಲು ಈ ರೀತಿಯ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: 122 ಮಾಜಿ ಸಂಸದರು, ಶಾಸಕರ ಭದ್ರತೆ ಹಿಂಪಡೆದ ಭಗವಂತ್ ಮಾನ್

    ಮಮತಾ ಬ್ಯಾನರ್ಜಿ ಅವರು ಬಿಜೆಪಿಯನ್ನು ಮೆಚ್ಚಿಸಲು ಗೋವಾಕ್ಕೆ ಹೋದರು. ಆದರೆ ಗೋವಾದಲ್ಲಿ ಕಾಂಗ್ರೆಸ್ ಅನ್ನು ದುರ್ಬಲಗೊಳಿಸಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಶಾಲೆಗೆ ಮದ್ಯ ಸೇವಿಸಿ ಬಂದ ಶಿಕ್ಷಕ – ವಿದ್ಯಾರ್ಥಿ ಮೇಲೆ ಬ್ಯಾಟ್‍ನಿಂದ ಹಲ್ಲೆ

    ಈ ಹಿಂದೆ ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಹಾಗೂ ಕಾಂಗ್ರೆಸ್ ಹೀನಾಯ ಸೋಲಿನ ಬಗ್ಗೆ ಮಾತನಾಡಿದ್ದ ಮಮತಾ ಬ್ಯಾನರ್ಜಿ ಅವರು, ಬಿಜೆಪಿ ವಿರುದ್ಧ ಹೋರಾಡಲು ಬಯಸುವ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ನಡೆಯಬೇಕು. ಕಾಂಗ್ರೆಸ್ ತಮ್ಮ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದೆ. ಕಾಂಗ್ರೆಸ್ ಮೇಲೆ ಅವಲಂಬಿತವಾಗಿಲ್ಲ ಎಂದು ಹೇಳಿದ್ದರು.

  • ಅಭಿನಂದನ್‍ ಮೀಸೆಯನ್ನು ರಾಷ್ಟ್ರೀಯ ಮೀಸೆಯನ್ನಾಗಿ ಮಾಡಿ: ಎ.ಆರ್ ಚೌಧರಿ ಮನವಿ

    ಅಭಿನಂದನ್‍ ಮೀಸೆಯನ್ನು ರಾಷ್ಟ್ರೀಯ ಮೀಸೆಯನ್ನಾಗಿ ಮಾಡಿ: ಎ.ಆರ್ ಚೌಧರಿ ಮನವಿ

    ನವದೆಹಲಿ: ಭಾರತೀಯ ವಾಯು ಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಮೀಸೆಯನ್ನು ರಾಷ್ಟ್ರೀಯ ಮೀಸೆಯೆಂದು ಘೋಷಿಸಿ, ಗೌರವ ನೀಡಿ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮನವಿ ಮಾಡಿದ್ದಾರೆ.

    ಲೋಕಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಅವರು, ವಿಂಗ್ ಕಮಾಂಡರ್ ಅಭಿನಂದನ್ ಅವರು ನಮ್ಮ ಹೆಮ್ಮೆಯ ಯೋಧ. ಸರ್ಕಾರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಬೇಕು ಹಾಗೂ ಅವರ ಮೀಸೆಯನ್ನು ರಾಷ್ಟ್ರೀಯ ಮೀಸೆಯೆಂದು ಘೋಷಿಸಬೇಕು ಎಂದು ಹೇಳಿದರು.

    ಬಾಲಕೋಟ್ ನಲ್ಲಿರುವ ಉಗ್ರರ ನೆಲೆಯ ಮೇಲೆ ದಾಳಿ ನಡೆಸಿದ ಬಳಿಕ ಫೆ.27 ರಂದು ಪಾಕಿಸ್ತಾನ ಭಾರತದ ಮೇಲೆ ವಾಯು ದಾಳಿ ನಡೆಸಲು ಮುಂದಾಗಿತ್ತು. ಈ ವೇಳೆ ಪಾಕ್ ವಿಮಾನದ ಜೊತೆಗಿನ ಡಾಗ್ ಫೈಟ್ ಕಾಳಗದಲ್ಲಿ ಎಫ್-16 ವಿಮಾನವನ್ನು ಅಭಿನಂದನ್ ಹೊಡೆದು ಉರುಳಿಸಿದ್ದರು. ಈ ವೇಳೆ ಪಾಕ್ ಅಭಿನಂದನ್ ಅವರಿದ್ದ ಮಿಗ್ -21 ವಿಮಾನದ ಮೇಲೆ ಕ್ಷಿಪಣಿ ದಾಳಿ ಮಾಡಿತ್ತು. ಪರಿಣಾಮ ಅಭಿನಂದನ್ ವಿಮಾನ ಪತನಗೊಂಡು ಪಾಕ್ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಬಿದ್ದಿತ್ತು. ನಂತರ ಪಾಕ್ ಸೇನೆ ಅಭಿನಂದನ್ ಅವರನ್ನು ವಶಕ್ಕೆ ಪಡೆದು ಮಾರ್ಚ್ 1 ರಂದು ರಾತ್ರಿ ಬಿಡುಗಡೆ ಮಾಡಿತ್ತು.

    ವೀರಯೋಧ ಅಭಿನಂದನ್ ಭಾರತಕ್ಕೆ ಹಿಂದಿರುಗಿದ ಬಳಿಕ ಇಡೀ ದೇಶವೇ ಸಂಭ್ರಮಾಚರಣೆ ಮಾಡಿತ್ತು. ಅಲ್ಲದೆ ಹೆಮ್ಮೆಯಿಂದ ಹಲವು ಪೋಷಕರು ಅಭಿನಂದನ್ ಅವರ ಹೆಸರನ್ನು ತಮ್ಮ ಮಕ್ಕಳಿಗೆ ನಾಮಕರಣ ಮಾಡಿದ್ದರು. ಅಲ್ಲದೆ ಅವರ ಹೇರ್ ಸ್ಟೈಲ್, ಮಿಸೆ ಎಲ್ಲೆಡೆ ಸಖತ್ ಫೇಮಸ್ ಆಗಿತ್ತು.