Tag: Adichunchanagiri

  • ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ, ಖಂಡಿತ ಇಲ್ಲ – ಎಚ್‍ಡಿಕೆ

    ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ, ಖಂಡಿತ ಇಲ್ಲ – ಎಚ್‍ಡಿಕೆ

    ಬೆಂಗಳೂರು: ನನ್ನ ಅವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ರಾಜಕೀಯ ನಾಯಕರ ಹೇಳಿಕೆ ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

    ಈ ಸಂಬಂಧ ಸರಣಿ ಟ್ವೀಟ್ ಮಾಡಿ ತನ್ನ ಮೇಲೆ ಬಂದಿರುವ ಆರೋಪಗಳಿಗೆ ಕುಮಾರಸ್ವಾಮಿ ಉತ್ತರ ನೀಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ನನ್ನ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ.

    ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಅಶೋಕ್ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ.

    ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ.

    ವಿಜಯೇಂದ್ರ ಕಿಡಿ:
    ಸ್ವಾರ್ಥ, ಅಧಿಕಾರಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಇಳಿಯಬಹುದು ಎನ್ನುವುದರಲ್ಲಿ ಕುಮಾರಸ್ವಾಮಿಯವರಿಗೆ ಸರಿಸಾಟಿಯಿಲ್ಲ. ಇಡೀ ದೇಶವೇ ಗೌರವಿಸುವ ಶ್ರೀಗಳ ಫೋನ್ ಕದ್ದಾಲಿಸಿದ್ದು ಮಾತ್ರವಲ್ಲದೆ, ಸ್ಮಗ್ಲರ್ ಗಳ ಪಟ್ಟಿಯಲ್ಲಿ ಸೇರಿಸಿ, ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಅವರಲ್ಲಿ ಸ್ವಲ್ಪವಾದರೂ ನೈತಿಕತೆ ಉಳಿದಿದ್ದರೆ ಮೊದಲು ಗುರುಗಳ ಕ್ಷಮೆ ಕೇಳಲಿ ಎಂದು ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

  • ನಾನು ಪ್ರಮಾಣ ವಚನ ಸ್ವೀಕರಿಸಿದಾಗಿಂದ್ಲೂ ಉತ್ತಮ ಮಳೆಯಾಗುತ್ತಿದೆ- ಎಚ್‍ಡಿಕೆ

    ನಾನು ಪ್ರಮಾಣ ವಚನ ಸ್ವೀಕರಿಸಿದಾಗಿಂದ್ಲೂ ಉತ್ತಮ ಮಳೆಯಾಗುತ್ತಿದೆ- ಎಚ್‍ಡಿಕೆ

    ಮಂಡ್ಯ: ಜಯನಗರ ಚುನಾವಣೆಯ ಈ ಫಲಿತಾಂಶ ಮೊದಲೇ ನಿರೀಕ್ಷೆ ಇತ್ತು. ಬಿಜೆಪಿಯವರು ಸಮ್ಮಿಶ್ರ ಸರ್ಕಾರಕ್ಕೆ ಜನಬೆಂಬಲವಿಲ್ಲ ಅಂತಾ ಅಪಪ್ರಚಾರ ಮಾಡುತ್ತಿದ್ರು ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

    ಇಲ್ಲಿನ ಆದಿಚುಂಚನಗಿರಿಯಲ್ಲಿ ಮಾತನಾಡಿದ ಅವರು, ಜನರು ಸಮ್ಮಿಶ್ರ ಸರ್ಕಾರವನ್ನು ಒಪ್ಪಿದ್ದಾರೆಂಬುದನ್ನ ಜಯನಗರ ಫಲಿಶಾಂಶ ತೋರಿಸುತ್ತಿದೆ. ಇದೇ ವೇಳೆ ಅಮಾವಾಸ್ಯೆ ಪೂಜೆ ಬಗ್ಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ನಾನು ಪ್ರಮಾಣ ವಚನ ಸ್ವೀಕಾರ ಮಾಡಿದಾಗಲಿಂದ ಉತ್ತಮ ಮಳೆಯಾಗುತ್ತಿದೆ. ಹಲವಾರು ತಿಂಗಳಿಂದ ಅಮಾವಾಸ್ಯೆ ಪೂಜೆಗೆ ಬಂದು ದರ್ಶನ ಪಡೆದು ಹೋಗುತ್ತಿದ್ದೇನೆ. ಪರಮಪೂಜ್ಯ ಸಾಮೀಜಿಯವರೇ ಪೂಜೆಯ ಕಾರ್ಯ ನಡೆಸುತ್ತಾರೆ. ಈ ರೀತಿಯ ವಿಶೇಷ ಪೂಜೆ ಬೇರೆ ಕಡೆ ನೋಡಲು ಸಾಧ್ಯವಿಲ್ಲ ಅಂದ್ರು.

    ರಾಜ್ಯದಲ್ಲಿ ಎಲ್ಲ ಕಡೆ ಉತ್ತಮ ಮಳೆಯಾಗಲು ದೇವರ ಮೇಲಿನ ನಂಬಿಕೆಯ ಶಕ್ತಿ ಕಾರಣ. ಮುಂಗಾರು ಬೆಳೆಗೆ ಇನ್ನೂ ಒಳ್ಳೆ ಮಳೆಯಾದ್ರೆ ನಾನೇ ಮಂಡ್ಯದಲ್ಲಿ ಭತ್ತ ನಾಟಿಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ನಾನು ಸಿಎಂ ಆಗಲು ಕಾಂಗ್ರೆಸ್ ಬೆಂಬಲ ನೀಡಲು ಕಾಲಭೈರವೇಶ್ವರ ಪ್ರೇರಣೆ ಎಂಬುದು ನನ್ನ ಭಾವನೆ ಅಂದ್ರು.

    ಸಾಲಮನ್ನಾ ವಿಷಯದಲ್ಲಿ ಯಾವ ಆತಂಕ ಬೇಡ. ನನ್ನ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಆತ್ಮಹತ್ಯೆ ಮಾಡಿಕೊಂಡ್ರೆ ನನ್ನ ಕೆಲಸ ಮಾಡುವ ಸಾಮರ್ಥ್ಯ ಕುಗ್ಗುತ್ತೆ. ಬಜೆಟ್ ನಲ್ಲಿ ಯಾವ ರೀತಿ ಸಾಲಮನ್ನ ಮಾಡುತ್ತೇನೆ ಎಂದು ಹೇಳುತ್ತೇನೆ ಅಂತಾ ಭರವಸೆ ನೀಡಿದ್ರು.

    ಮೋದಿಗೆ ತಿರುಗೇಟು: ನನಗೆ ನನ್ನ ವೈಯಕ್ತಿಕ ಫಿಟ್ನೆಸ್ ಗಿಂತ ಅಭಿವೃದ್ಧಿ ಫಿಟ್ನೆಸ್ ಮುಖ್ಯ. ಅಭಿವೃದ್ಧಿ ಫಿಟ್ನೆಸ್ನಲ್ಲಿ ಮೋದಿಗಿಂತ ಮುಂದಿದ್ದೇನೆ. ಈ ವಿಚಾರದಲ್ಲಿ ವಿಚಾರದಲ್ಲಿ ಮೋದಿಯಿಂದ ಪಾಠಕಲಿಯುವ ಅವಶ್ಯಕತೆಯಿಲ್ಲ ಎಂದು ತಿರುಗೇಟು ನೀಡಿದ್ರು.

  • ಕಾಲಭೈರವನ ಸನ್ನಿಧಿಯಲ್ಲಿ ರೆಬೆಲ್ ಶಾಸಕರಿಂದ ಅಮಾವಾಸ್ಯೆ ಪೂಜೆ

    ಕಾಲಭೈರವನ ಸನ್ನಿಧಿಯಲ್ಲಿ ರೆಬೆಲ್ ಶಾಸಕರಿಂದ ಅಮಾವಾಸ್ಯೆ ಪೂಜೆ

    ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ನಂತರ ಇದೀಗ ಜೆಡಿಎಸ್ ಬಂಡಾಯ ಶಾಸಕರಾದ ಚಲುವರಾಯಸ್ವಾಮಿ, ರಮೇಶ್‍ಬಾಬು ಬಂಡಿಸಿದ್ದೇಗೌಡ ಹಾಗೂ ಬಾಲಕೃಷ್ಣ ಆದಿಚುಂಚನಗಿರಿ ಕಾಲಭೈರವೇಶ್ವರ ಕ್ಷೇತ್ರಾದಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

    ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಆಗಮಿಸಿರುವ ಜೆಡಿಎಸ್ ಬಂಡಾಯ ಶಾಸಕರು, ಮೊದಲು ಹೋಮದಲ್ಲಿ ಪಾಲ್ಗೊಂಡ್ರು. ಸ್ವತಃ ನಿರ್ಮಲಾನಂದನಾಥ ಸ್ವಾಮೀಜಿಗಳೇ ಮುಂದೆ ನಿಂತು ಪೂಜೆ ನೆರವೇರಿಸಿದ್ದಾರೆ. ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕ ರೇವಣ್ಣ ದಂಪತಿ ಆಗಮಿಸಿ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಅಮವಾಸ್ಯೆ ಪೂಜೆ ಸಲ್ಲಿಸಿದ್ರು.

    ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಸತತ ಮೂರು ಅಮವಾಸ್ಯೆ ಪೂಜೆ ಸಲ್ಲಿಸಿದ್ರೆ ಇಷ್ಟಾರ್ಥ ಸಿದ್ಧಿ ಆಗುತ್ತೆ ಎಂಬ ಪ್ರಬಲವಾದ ನಂಬಿಕೆಯಿದೆ. ಹೀಗಾಗಿ ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಮೂವರು ಪ್ರತ್ಯೇಕವಾಗಿ ಪತ್ನಿ ಸಮೇತರಾಗಿ ಆಗಮಿಸಿ ಮೂರು ಅಮವಾಸ್ಯೆ ಪೂಜೆ ನೆರವೇರಿಸಿದ್ರು. ರಾಜ್ಯದ ಜನರಿಗೆ ಒಳಿತಾಗಲಿ, ಜೆಡಿಎಸ್ ಅಧಿಕಾರಕ್ಕೆ ಬರಲಿ ಎಂದು ಕಾಲಭೈರವೇಶ್ವರ ಸ್ವಾಮಿಯಲ್ಲಿ ಕೇಳಿಕೊಂಡಿದ್ರು. ಇದೀಗ ಬಂಡಾಯ ಶಾಸಕರು ತಮ್ಮ ಪತ್ನಿ ಸಮೇತರಾಗಿ ಬಂದು ಪೂಜೆ ಸಲ್ಲಿಸುತ್ತಿದ್ದಾರೆ.

    ಈ ಹಿಂದೆ ನಾನು ಜೆಡಿಎಸ್ ಪಕ್ಷಕ್ಕೆ, ವರಿಷ್ಠರಿಗೆ ಅನ್ಯಾಯ ಮಾಡಿಲ್ಲ. ಈ ಬಗ್ಗೆ ಮುಂದೊಂದು ದಿನ ಕಾಲಭೈರವೇಶ್ವರ ಸನ್ನಿಧಿಯಲ್ಲಿ ಪ್ರಮಾಣ ಕೂಡ ಮಾಡುತ್ತೇನೆ ಎಂದು ಚಲುವರಾಯಸ್ವಾಮಿ ಹೇಳಿದ್ರು. ಹೀಗಾಗಿ ಪೂಜೆ ನಂತ್ರ ಚಲುವರಾಯಸ್ವಾಮಿ ಪ್ರಮಾಣ ಮಾಡುತ್ತಾರಾ ಎಂಬ ಕುತೂಹಲವೂ ಮೂಡಿದ್ದು, ಬಂಡಾಯ ಶಾಸಕರ ಪೂಜೆ ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ.

     

  • ಎಚ್‍ಡಿ ರೇವಣ್ಣ ದಂಪತಿಯಿಂದ ಆದಿಚುಂಚನಗಿರಿಯಲ್ಲಿ ವಿಶೇಷ ಅಮವಾಸೆ ಪೂಜೆ

    ಎಚ್‍ಡಿ ರೇವಣ್ಣ ದಂಪತಿಯಿಂದ ಆದಿಚುಂಚನಗಿರಿಯಲ್ಲಿ ವಿಶೇಷ ಅಮವಾಸೆ ಪೂಜೆ

    ಮಂಡ್ಯ: ಎಚ್‍ಡಿ ರೇವಣ್ಣ ಅವರು ಪತ್ನಿ ಭವಾನಿ ಸಮೇತರಾಗಿ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಅಮವಾಸೆ ಪೂಜೆ ಸಲ್ಲಿಸಿದ್ದಾರೆ.

    ಸ್ವತಃ ನಿರ್ಮಲಾನಂದನಾಥ ಸ್ವಾಮೀಜಿಯವರೇ ಪೂಜಾ ಕಾರ್ಯ ನಡೆಸಿಕೊಟ್ಟಿದ್ದಾರೆ. ಆದಿಚುಂಚನಗಿರಿಗೆ ಆಗಮಿಸಿ ಕಾಲಭೈರವೇಶ್ವರ ಸ್ವಾಮಿ ಸೇರಿದಂತೆ ಕ್ಷೇತ್ರಾದಿ ದೇವತೆಗಳಿಗೆ ಸತತ ಮೂರು ಬಾರಿ ವಿಶೇಷ ಅಮವಾಸೆ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ಸಿದ್ಧಿಸುತ್ತೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪತ್ನಿ ಸಮೇತರಾಗಿ ಆಗಮಿಸಿ ಆದಿಚುಂಚನಗಿರಿ ಕಾಲಭೈರವೇಶ್ವರ ಸ್ವಾಮಿಗೆ ಸತತ ಮೂರು ಬಾರಿ ಅಮವಾಸೆ ಪೂಜೆ ಸಲ್ಲಿಸಿದರು.

    ರಾಜ್ಯದ ಜನರ ಒಳಿತಿಗೆ ಮತ್ತು ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ಶಕ್ತಿ ನೀಡುವಂತೆ ಕಾಲಭೈರವೇಶ್ವರನಲ್ಲಿ ಪ್ರಾರ್ಥಿಸಿದ್ದಾರೆ. ಇದೀಗ ಎಚ್‍ಡಿ.ರೇವಣ್ಣ ಅವರೂ ಕೂಡ ಸತತ ಎರಡನೇ ಬಾರಿ ಅಮವಾಸೆ ಪೂಜೆಯಲ್ಲಿ ಪಾಲ್ಗೊಂಡಿದ್ದು ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.