Tag: Aditi Ashok

  • ಏಷ್ಯನ್ ಗೇಮ್ಸ್ – ಗಾಲ್ಫ್‌ನಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದ ಕರ್ನಾಟಕದ ಅದಿತಿ ಅಶೋಕ್

    ಏಷ್ಯನ್ ಗೇಮ್ಸ್ – ಗಾಲ್ಫ್‌ನಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದ ಕರ್ನಾಟಕದ ಅದಿತಿ ಅಶೋಕ್

    ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ (Aditi Ashok) ಅವರು ಏಷ್ಯನ್ ಗೇಮ್ಸ್ 2023ರಲ್ಲಿ (Asian Games 2023) ಐತಿಹಾಸಿಕ ಬೆಳ್ಳಿ ಪದಕ (Silver Medal) ಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ.

    ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ಗಾಲ್ಫ್‌ (Golf) ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಅದಿತಿ ಅಶೋಕ್ ಪಾತ್ರರಾಗಿದ್ದಾರೆ.

    ಶನಿವಾರ 3ನೇ ಸುತ್ತಿನ ಪಂದ್ಯದ ಬಳಿಕ ಅದಿತಿ ಚಿನ್ನ ಗಳಿಸಲು ಹೆಜ್ಜೆಯಿಟ್ಟಿದ್ದರು. 7 ಸ್ಟ್ರೋಕ್ ಮುನ್ನಡೆಯೊಂದಿಗೆ ಆಟವನ್ನು ಆರಂಭಿಸಿದ ಅವರಿಗೆ ಮೊದಲ ಸ್ಥಾನವನ್ನು ಗಳಿಸಲು ಉತ್ತಮ ಅವಕಾಶವಿತ್ತು. ಆದರೆ ಕೊನೆಯ 3 ಹೊಡೆತದಲ್ಲಿ ಹಿನ್ನಡೆ ಅನುಭವಿಸಿ ಅವರು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಥೈಲ್ಯಾಂಡ್‌ನ ಅರ್ಪಿಚುಯಾ ಯುಬೋಲ್ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ. ಇದನ್ನೂ ಓದಿ: Asian Games 2023: ಎದುರಾಳಿ ಪಾಕ್‌ ವಿರುದ್ಧ ಭಾರತಕ್ಕೆ ಜಯ – ಸ್ಕ್ವಾಷ್‌ನಲ್ಲಿ ಚಿನ್ನದ ಬೇಟೆ

    ಈ ಹಿಂದೆ ಅದಿತಿ ಅಶೋಕ್ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗಾಲ್ಫ್‌ನಲ್ಲಿ 4ನೇ ಸ್ಥಾನ ಗಳಿಸಿ ದೇಶದ ಗಮನ ಸೆಳೆದಿದ್ದರು. ಇದೀಗ ಏಷ್ಯನ್ ಗೇಮ್ಸ್‌ನಲ್ಲಿ ಅದಿತಿ ಪದಕ ಗೆದ್ದು ಬೀಗಿದ್ದಾರೆ. ಇದನ್ನೂ ಓದಿ: Asian Games: ಟೆನ್ನಿಸ್‌ ಮಿಶ್ರ ಡಬಲ್ಸ್‌ನಲ್ಲಿ ಭಾರತಕ್ಕೆ ಚಿನ್ನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ ಆಯ್ಕೆ

    ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ ಆಯ್ಕೆ

    – ಝಿರೋದಾ ಸಂಸ್ಥಾಪಕ, ಗಲ್ಫ್ ಆಟಗಾರ್ತಿ ಕೂಡ ಆಯ್ಕೆ

    ಬೆಂಗಳೂರು: ಪ್ರತಿವರ್ಷ ಸರ್ಕಾರ ನೀಡುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು (Kempegowda International Award) ಮೂವರಿಗೆ ನೀಡಲು ಸರ್ಕಾರ ತೀರ್ಮಾನ ಮಾಡಿದ್ದು, ಆಯ್ಕೆಯಾದ ಸಾಧಕರ ಹೆಸರನ್ನು ಡಿಸಿಎಂ ಡಿಕೆ ಶಿವಕುಮಾರ್ (D.K.Shivakuamar) ಎಲ್ಲರ ಸಮ್ಮುಖದಲ್ಲಿ ಬಹಿರಂಗಪಡಿಸಿದ್ದಾರೆ.

    ಪ್ರತಿವರ್ಷ ಕೆಂಪೇಗೌಡ ಜಯಂತಿಯ ಪ್ರಯುಕ್ತ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಮೂವರು ಸಾಧಕರಿಗೆ ನೀಡಲಾಗುತ್ತದೆ. ಈ ಬಾರಿಯೂ ಸಹ ಒಂದು ಸಂಸ್ಥೆ ಹಾಗೂ ಮತ್ತಿಬ್ಬರು ಸಾಧಕರಿಗೆ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿರುವುದಾಗಿ ಡಿಕೆಶಿ ತಿಳಿಸಿದ್ದಾರೆ. ಸಾಧಕರನ್ನು ಆಯ್ಕೆ ಮಾಡುವ ಸಲುವಾಗಿ ಬಿ.ಎಲ್ ಶಂಕರ್ ಸಮಿತಿಯನ್ನು ರಚಿಸಲಾಗಿದ್ದು, ಬೆಂಗಳೂರಿನ ಜಯದೇವ ವಿಜ್ಞಾನ ಸಂಸ್ಥೆ (Jayadeva Institute of Science) ಸಾಧಕರ ಪಟ್ಟಿಯನ್ನು ಸೇರಿದೆ. ಈ ಆಸ್ಪತ್ರೆ 1600 ಬೆಡ್‌ಗಳನ್ನು ಹೊಂದಿದ್ದು, ಸಮಾಜದ ಎಲ್ಲಾ ವರ್ಗದವರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಹೃದ್ರೋಗ ಚಿಕಿತ್ಸೆಯನ್ನು ಒದಗಿಸುತ್ತಿದೆ. ಅಲ್ಲದೇ ತೀರಾ ಬಡವರಿಗೆ ಉಚಿತ ಚಿಕಿತ್ಸೆಯನ್ನು ಸಹ ಈ ಸಂಸ್ಥೆ ನೀಡುತ್ತಿದೆ. ಇದನ್ನೂ ಓದಿ: ಮಂಗಳವಾರದಿಂದ ರಾಜ್ಯದಲ್ಲಿ 2ನೇ ವಂದೇ ಭಾರತ್ ರೈಲು ಸಂಚಾರ ಶುರು

    ಇನ್ನೂ ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಝಿರೋದಾ (Zerodha) ಎಂಬ ಉದ್ಯಮವನ್ನು ಪ್ರಾಂಭಿಸಿ ಉನ್ನತ ಮಟ್ಟಕ್ಕೆ ಬೆಳೆದು ನಿಂತು ಯುವಉದ್ಯಮಿಯಾಗಿರುವ ಝಿರೋದಾ ಕಂಪನಿ ಸಂಸ್ಥಾಪಕ ನಿತಿನ್ ಕಾಮತ್ (Nithin Kamath) ಅವರು ಸಹಾ ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ. ನಿತಿನ್ ಕಾಮತ್ ತಮ್ಮ ಉದ್ಯಮದಲ್ಲಿ ಬರುವ 25% ರಷ್ಟು ಹಣವನ್ನು ಸಾಮಾಜ ಸೇವೆಗಾಗಿ ಮುಡಿಪಿಟ್ಟಿದ್ದಾರೆ. ಇದನ್ನೂ ಓದಿ: ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

    ಬೆಂಗಳೂರಿನ (Bengaluru) ಯುವ ಗಾಲ್ಫ್ ಆಟಗಾರ್ತಿಯಾಗಿರುವ ಅದಿತಿ ಅಶೋಕ್ (Aditi Ashok) ಎಂಬವರು ಕೂಡಾ ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ಈಕೆ ವಿಶ್ವ ಗಾಲ್ಫ್ (Golf) ಆಟದಲ್ಲಿ ಮಹತ್ತರ ಸಾಧನೆ ಮಾಡಿದ್ದು, ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನಾಲ್ಕನೇ ಸ್ಥಾನ ಪಡೆದು ದೇಶದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು (Siddaramaiah) ಜೂನ್ 27ನೇ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಈ ಕಾರ್ಯಕ್ರಮವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದೆ. ಈ ಪ್ರಶಸ್ತಿಯ ಜೊತೆಗೆ ಸಾಧಕರಿಗೆ 5 ಲಕ್ಷ ರೂ. ನಗದು ದೊರೆಯಲಿದೆ ಎಂದು ಡಿಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರದ ಅಕ್ಕಿ ಬೇಕಿದ್ದರೆ ನಮ್ಮನ್ನು ಕೇಳಿಯೇ ಘೋಷಣೆ ಮಾಡ್ಬೇಕು: ಪ್ರಲ್ಹಾದ್ ಜೋಶಿ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • 200 ರಿಂದ 4ನೇ ಸ್ಥಾನಕ್ಕೆ ಜಿಗಿತ – ಕೊನೆ ಕ್ಷಣದಲ್ಲಿ ಅದಿತಿಗೆ ತಪ್ಪಿತು ಪದಕ

    200 ರಿಂದ 4ನೇ ಸ್ಥಾನಕ್ಕೆ ಜಿಗಿತ – ಕೊನೆ ಕ್ಷಣದಲ್ಲಿ ಅದಿತಿಗೆ ತಪ್ಪಿತು ಪದಕ

    ಟೋಕಿಯೋ: ವಿಶ್ವದಲ್ಲಿ 200ನೇ ಸ್ಥಾನ ಪಡೆದಿದ್ದ ಗಾಲ್ಫರ್, ಕನ್ನಡತಿ ಅದಿತಿ ಅಶೋಕ್ ಒಲಿಂಪಿಕ್ಸ್ ನಲ್ಲಿ ನಾಲ್ಕನೇಯ ಸ್ಥಾನ ಪಡೆಯುವ ಮೂಲಕ ಭಾರತಕ್ಕೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ.

    ನಿನ್ನೆ ನಡೆದ ಮೂರನೇ ಸುತ್ತಿನ ಬಳಿಕ ಪದಕದ ನಿರೀಕ್ಷೆ ಮೂಡಿಸಿದ್ದ ಗಾಲ್ಫರ್ ಅದಿತಿ ಅಶೋಕ್ ಇಂದು ಕೂದಲೆಳೆಯ ಅಂಚಿನಲ್ಲಿ ಪದಕವನ್ನು ಕಳೆದುಕೊಂಡು ನಾಲ್ಕನೇಯ ಸ್ಥಾನವನ್ನು ಪಡೆದರು.

    ಇಂದು ನಡೆದ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದರು. ಆದರೆ ಬಳಿಕ ಜಂಟಿ ಮೂರನೇ ಸ್ಥಾನವನ್ನು ನ್ಯೂಜಿಲೆಂಡ್​ನ ಲೈಡಿಯಾ ಕೊ ಜೊತೆ ಗಳಿಸಿಕೊಂಡ ಕಾರಣ ಟೈ ಆಗಿತ್ತು. ಈ ವೇಳೆ ಮಳೆ ಬಂದ ಕಾರಣ ಪಂದ್ಯ ಸ್ಥಗಿತಗೊಳಿಸಲಾಗಿತ್ತು. ಬಳಿಕ ಪುನಃ ಆರಂಭಗೊಂಡು ಫೈನಲ್ ರೌಂಡ್ ನಡೆಯಿತು. ಈ ಸುತ್ತಿನಲ್ಲಿ ಅದಿತಿ 2 ಸ್ಥಾನ ಕುಸಿತಗೊಂಡು ಅಂತಿಮವಾಗಿ 4ನೇ ಸ್ಥಾನ ಪಡೆದುಕೊಂಡರು. ಇದನ್ನೂ ಓದಿ: ಗಾಲ್ಫ್ ನಲ್ಲಿ ಅದಿತಿ ಮಿಂಚು – ಭಾರತಕ್ಕೆ ಮತ್ತೊಂದು ಪದಕ?

    ಒಟ್ಟು 71 ಯತ್ನಗಳಲ್ಲಿ ಎಲ್ಲ 18 ಗುಂಡಿಗಳಿಗೆ ಬಾಲನ್ನು ಹಾಕಬೇಕು. ಅದಿತಿ ಮೊದಲ ಸುತ್ತಿನಲ್ಲಿ 67, ಎರಡನೇ ಸುತ್ತಿನಲ್ಲಿ 66, ಮೂರನೇ ಸುತ್ತಿನಲ್ಲಿ 68, ಇಂದು ನಡೆದ 4 ನೇ ಸುತ್ತಿನಲ್ಲಿ 68 ಯತ್ನಗಳಲ್ಲಿಗುಂಡಿಗೆ ಚೆಂಡನ್ನು ಹಾಕಿದರು.

    ಒಟ್ಟು 4 ಸುತ್ತುಗಳ ಬಳಿಕ ವಿಶ್ವದ ನಂಬರ್ ಒನ್ ಆಟಗಾರ್ತಿ ಅಮೆರಿಕದ ನೆಲ್ಲಿ ಕೊರ್ಡಾ ಮೊದಲ ಸ್ಥಾನ ಪಡೆದರು. ನೆಲ್ಲಿ 267 ಯತ್ನ, ಜಪಾನ್ ಮತ್ತು ನ್ಯೂಜಿಲೆಂಡ್ ಆಟಗಾರ್ತಿಯರು 268 ಯತ್ನ, ಅದಿತಿ 269 ಯತ್ನಗಳಲ್ಲಿ ಗುಂಡಿಗೆ ಚೆಂಡನ್ನು ಹಾಕಿದ್ದರು. ಎರಡನೇ ಸ್ಥಾನಕ್ಕೆ ಟೈ ಆದ ಹಿನ್ನೆಲೆಯಲ್ಲಿ ಮತ್ತೆ ಪಂದ್ಯ ಆಡಿಸಲಾಯಿತು. ಇದರಲ್ಲಿ ಜಪಾನ್ ಆಟಗಾರ್ತಿ ಜಯಗಳಿಸಿದರು.

     ಕಳೆದ 2016ರ ರಿಯೋ ಒಲಿಂಪಿಕ್ಸ್ ನಲ್ಲಿ ದೇಶವನ್ನು ಪ್ರತಿನಿಧಿಸಿದ್ದ  ಅದಿತಿ ಎರಡನೇ ಬಾರಿ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

  • ಗಾಲ್ಫ್ ನಲ್ಲಿ ಅದಿತಿ ಮಿಂಚು – ಭಾರತಕ್ಕೆ ಮತ್ತೊಂದು ಪದಕ?

    ಗಾಲ್ಫ್ ನಲ್ಲಿ ಅದಿತಿ ಮಿಂಚು – ಭಾರತಕ್ಕೆ ಮತ್ತೊಂದು ಪದಕ?

    ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಭಾರತ ಮತ್ತೊಂದು ಪದಕ ಗೆಲ್ಲುವ ಆಶಾ ಭಾವನೆ ಮೂಡಿದೆ. ಮಹಿಳಾ ಗಾಲ್ಫರ್ ಬೆಂಗಳೂರಿನ ಅದಿತಿ ಅಶೋಕ್ (Aditi Ashok) 3ನೇ ಸುತ್ತಿನಲ್ಲೂ 2ನೇ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಈ ಮೂಲಕ ಪದಕದ ನಿರೀಕ್ಷೆ ಮೂಡಿಸಿದ್ದಾರೆ.

    ಮೂರು ಸುತ್ತಿನ ಬಳಿಕ ಒಂದು ಸುತ್ತು ಬಾಕಿ ಉಳಿದುಕೊಂಡಿದ್ದು, ನಾಳೆ ನಾಲ್ಕನೇ ಸುತ್ತು ನಡೆಯಲಿದೆ. ಆದರೆ ಈ ನಡುವೆ ಹವಾಮಾನದ ವೈಪರೀತ್ಯ ಕಾಡುತ್ತಿದೆ. ನಾಳೆ ಹವಾಮಾನ ವ್ಯತ್ಯಾಸದಿಂದಾಗಿ ಎಲ್ಲಾ 18 ಗುಂಡಿಗಳು ಸರಿಯಾಗಿ ಕಾಣದೇ ಇದ್ದರೆ ಇಂದಿನ ಸ್ಥಾನದ ಆಧಾರದಲ್ಲಿ ಬೆಳ್ಳಿ ಪದಕ ಜಯಿಸುವ ನಿರೀಕ್ಷೆ ಇದೆ. ಇದನ್ನೂ ಓದಿ: ಸೆಮಿಫೈನಲ್‍ಗೆ ಲಗ್ಗೆ ಇಟ್ಟ ಭಜರಂಗ್ ಪೊನಿಯಾ – ಪದಕ ನಿರೀಕ್ಷೆ

    ಕಳೆದ 2016ರ ರಿಯೋ ಒಲಿಂಪಿಕ್ಸ್ ನಲ್ಲಿ ದೇಶವನ್ನು ಪ್ರತಿನಿಧಿಸಿದ್ದ ಅದಿತಿ, 45ನೇ ಶ್ರೇಯಾಂಕದೊಂದಿಗೆ ಎರಡನೇ ಬಾರಿ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.