Tag: Aditi Prabhudev

  • ಹಿರಿಯನಟ ಶಶಿಕುಮಾರ್ ಪುತ್ರನ ಮತ್ತೊಂದು ಸಿನಿಮಾ ಬಿಡುಗಡೆಗೆ ಸಿದ್ಧ

    ಹಿರಿಯನಟ ಶಶಿಕುಮಾರ್ ಪುತ್ರನ ಮತ್ತೊಂದು ಸಿನಿಮಾ ಬಿಡುಗಡೆಗೆ ಸಿದ್ಧ

    ಹಿರಿಯ ನಟ ಶಶಿಕುಮಾರ್ (Sasikumar) ಪುತ್ರ ಅಕ್ಷಿತ್ (Akshit) ನಟನೆಯ, ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ನಿರ್ಮಿಸಿರುವ ‘ಖೆಯೊಸ್’ (Kheos) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಸಿನಿಮಾದಲ್ಲಿ ಅಕ್ಷಿತ್ ಶಶಿಕುಮಾರ್ ಹಾಗೂ ಸ್ಯಾಂಡಲ್ ವುಡ್ ಬೆಡಗಿ ಅದಿತಿ ಪ್ರಭುದೇವ (Aditi Prabhudev) ಈ ಚಿತ್ರದ ನಾಯಕ – ನಾಯಕಿಯಾಗಿ ಅಭಿನಯಿಸಿದ್ದಾರೆ. ಶಶಿಕುಮಾರ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದು, ತಂದೆ – ಮಗ ಇಬ್ಬರೂ ಒಟ್ಟಿಗೆ ಅಭಿನಯಿಸಿರುವ ಮೊದಲ ಚಿತ್ರವಿದು. ಆರ್ ಕೆ ಚಂದನ್, ಸಿದ್ದು ಮೂಲಿಮನಿ ಮೊದಲಾದವರು, ತಾರಾಬಳಗದಲ್ಲಿದ್ದಾರೆ.

    ಡಾ.ಜಿ.ವಿ.ಪ್ರಸಾದ್ “ಖೆಯೊಸ್” ಚಿತ್ರದ ನಿರ್ದೇಶಕರು. ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಇದೊಂದು ಮೆಡಿಕಲ್ ಕಾಲೇಜಿನಲ್ಲಿ ನಡೆಯುವ ಕಥೆ. ಆಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಜೊತೆಗೆ ಮರ್ಡರ್ ಮಿಸ್ಟರಿ ಜಾನರ್ ಎನ್ನಬಹುದು. ಮನಸ್ಸಿನಲ್ಲಾಗುವ ಗೊಂದಲ, ಅಸ್ತವ್ಯಸ್ತ ಇವುಗಳಿಗೆ “ಖೆಯೊಸ್” ಎನ್ನುತ್ತಾರೆ. ಫೆಬ್ರವರಿ 17 ಚಿತ್ರ ತೆರೆಗೆ ಬರಲಿದೆ.  ಜನವರಿ 26 ರಂದು “ಖೆಯೊಸ್” ಚಿತ್ರದ ತುಣುಕು ಬಿಡುಗಡೆಯಾಗಲಿದೆ. ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎನ್ನುತ್ತಾರೆ ನಿರ್ದೇಶಕ ಜಿ.ವಿ.ಪ್ರಸಾದ್. ಇದನ್ನೂ ಓದಿ: `ಕೆಜಿಎಫ್ 2′ ನಟಿ ರವೀನಾ ಟಂಡನ್ ಪುತ್ರಿ ರಾಶಾ ಬಾಲಿವುಡ್‌ಗೆ ಎಂಟ್ರಿ

    ವಿ.ನಾಗೇಂದ್ರ ಪ್ರಸಾದ್ ಹಾಗೂ ಜಿ.ವಿ.ಪ್ರಸಾದ್ ಬರೆದಿರುವ ಮೂರು ಹಾಡುಗಳು ಚಿತ್ರದಲ್ಲಿದ್ದು, ವಿಜಯ್ ಹರಿತ್ಸ ಸಂಗೀತ ನೀಡಿದ್ದಾರೆ. ದಿಲೀಪ್ ಕುಮಾರ್, ಸಂದೀಪ್ ವಳ್ಳೂರಿ ಛಾಯಾಗ್ರಹಣ ಹಾಗೂ ಮಧು ತುಂಬಿಕೆರೆ, ವೆಂಕಿ ಯುಡಿವಿ ಸಂಕಲನವಿರುವ “ಖೆಯೊಸ್” ಚಿತ್ರಕ್ಕೆ ಚೇತನ್ ಡಿಸೋಜ , ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಛೂ ಮಂತರ್’ ಎಂದು ನಗಿಸಿ, ಹೆದರಿಸೋಕೆ ಬರುತ್ತಿದ್ದಾರೆ ಶರಣ್

    ‘ಛೂ ಮಂತರ್’ ಎಂದು ನಗಿಸಿ, ಹೆದರಿಸೋಕೆ ಬರುತ್ತಿದ್ದಾರೆ ಶರಣ್

    ಮ್ಮ ಸಹಜ ನಟನೆಯ ಮೂಲಕ ಮನೆಮಾತಾಗಿರುವ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಕುತೂಹಲ ಮೂಡಿಸಿರುವ ಈ ಚಿತ್ರದ ಮೋಷನ್ ಪೋಸ್ಟರ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ಇದು ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಐದನೇ ಸಿನಿಮಾ. ನಾನು ಹಾಗೂ ಮಾನಸ ತರುಣ್ ಈ ಚಿತ್ರದ ನಿರ್ಮಾಪಕರು. ನಿರ್ದೇಶಕ ನವನೀತ್ ಹಾಗೂ ನಾನು, ಉಪೇಂದ್ರ ಅವರ ಸಿನಿಮಾ ಮಾಡಬೇಕಿತ್ತು. ಕಾರಣಾಂತರದಿಂದ ಆ ಚಿತ್ರ ಸ್ವಲ್ಪ ಮುಂದೆ ಹೋಯಿತು. ಅಷ್ಟರಲ್ಲಿ ನವನೀತ್ ಹಾರಾರ್ ಜಾನರ್ ನ ಈ ಚಿತ್ರದ ಕಥೆ ಸಿದ್ಧಮಾಡಿಕೊಂಡಿದ್ದರು. ಶರಣ್ ಹಾಗೂ ತರುಣ್ ಸುಧೀರ್ ಅವರ ಬಳಿ ಕಥೆ ಹೇಳಿದ್ದರು. ಇಬ್ಬರಿಗೂ ಕಥೆ ಹಿಡಿಸಿತು. ಚಿತ್ರ ಆರಂಭವಾಯಿತು. ಬೆಂಗಳೂರು, ಮೈಸೂರು, ಉತ್ತರಾಖಂಡದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಶರಣ್ ಅವರೊಟ್ಟಿಗೆ ಚಿಕ್ಕಣ್ಣ, ಅದಿತಿ, ಪ್ರಭುದೇವ, ಪ್ರಭು ಮುಂಡ್ಕರ್, ಮೇಘನಾ ಗಾಂವ್ಕರ್, ಧರ್ಮ, ರಜನಿ ಭಾರದ್ವಾಜ್ ಮುಂತಾದವರು ಅಭಿನಯಿಸಿದ್ದಾರೆ. ಅವಿನಾಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಚಂದನ್ ಶೆಟ್ಟಿ ಸಂಗೀತ ನೀಡಿದ್ದಾರೆ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದರು‌.

    ಶರಣ್ ಸರ್ ಜೊತೆ ಕೆಲಸ ಮಾಡಿದ್ದು ಖುಷಿಯಿದೆ‌. “ಛೂ ಮಂತರ್” ಎಂದರೆ ಫ್ಯಾನ್ಸಿ ವರ್ಡ್. ಈ ಪದ ತುಂಬಾ ಕಡೆ ಬಳಸುತ್ತಾರೆ. ಚಿತ್ರದಲ್ಲಿ ಮೂರು ಕಥೆಗಳಿರುತ್ತದೆ. ಎಲ್ಲಾ ಕಥೆಗಳಿಗೂ ಮೂಲ ನಾಯಕ ಆಗಿರುತ್ತಾರೆ. ನನ್ನ ಕಥೆ ಕೇಳಿ ಶರಣ್ ಹಾಗೂ ತರುಣ್ ಸುಧೀರ್ ಇಷ್ಟಪಟ್ಟರು. ಕಂಪ್ಲೀಟ್ ಹಾರರ್ ಸಿನಿಮಾದಲ್ಲಿ ಶರಣ್ ಅವರು ಅಭಿನಯಿಸಿರಲಿಲ್ಲ. ಇದೇ ಮೊದಲು ಎನ್ನಬಹುದು. ‌ನಮ್ಮ ಚಿತ್ರದಲ್ಲಿ ಹಾರಾರ್ ಜೊತೆ ಕಾಮಿಡಿ ಹಾಗೂ ಥ್ರಿಲ್ಲರ್ ಕೂಡ ಇದೆ ಎಂದರು “ಕರ್ವ” ಖ್ಯಾತಿಯ ನಿರ್ದೇಶಕ ನವನೀತ್. ಇದನ್ನೂ ಓದಿ: ರೂಪೇಶ್ ಗೆ ಬಿಗ್ ಬಾಸ್ ಕೊಟ್ಟಿದ್ದು 60 ಲಕ್ಷ: ನಿಜವಾಗಿಯೂ ಅವರ ಕೈಗೆ ಬರೋದೆಷ್ಟು?

    ನಾನು ಚಿಕ್ಕವಯಸ್ಸಿನಿಂದಲೂ ಹಾರಾರ್ ಚಿತ್ರಗಳ ಅಭಿಮಾನಿ. ಸಾಕಷ್ಟು ಹಾರಾರ್ ಚಿತ್ರ ನೋಡಿದ್ದೇನೆ. ಈ ಚಿತ್ರದ ಕಥೆಯನ್ನು ನವನೀತ್ ಅದ್ಭುತವಾಗಿ ಮಾಡಿಕೊಂಡಿದ್ದಾರೆ. ಅವರ ಜೊತೆ ಕೆಲಸ ಮಾಡಿರುವುದು ಸಂತೋಷವಾಗಿದೆ. ನನ್ನ ಮಿತ್ರ ತರುಣ್ ಸುಧೀರ್ ಈ ಚಿತ್ರದ ಕಥೆ ಕೇಳಿ ಮೆಚ್ಚುಗೆ ಸೂಚಿಸಿದ್ದಾರೆ. ನನ್ನ ಹಾಗೂ ಚಿಕ್ಕಣ್ಣ ಅವರ ಕಾಂಬಿನೇಶನ್ ಎಂದರೆ‌ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇರುತ್ತದೆ‌. ಈ ಚಿತ್ರದಲ್ಲೂ ನಮ್ಮ ಜೋಡಿ ಮೋಡಿ ಮಾಡಲಿದೆ. ಈ ಚಿತ್ರದ ಮತ್ತೊಂದು ಹೈಲೈಟ್ ಎಂದರೆ ಅನೂಪ್ ಅವರ ಛಾಯಾಗ್ರಹಣ ಎನ್ನುತ್ತಾರೆ ಶರಣ್.

    ತರುಣ್ ಶಿವಪ್ಪ ನಿರ್ಮಾಣದ ಹಿಂದಿನ ಚಿತ್ರದಲ್ಲೇ ಅಭಿನಯಿಸಬೇಕಿತ್ತು‌, ಆದ್ರೆ ಆಗಿರಲಿಲ್ಲ. ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನನ್ನ ಪಾತ್ರ ಚೆನ್ನಾಗಿದೆ ಎಂದರು ಮೇಘನಾ ಗಾಂವ್ಕರ್. ನನಗೂ ಹಾರಾರ್ ಚಿತ್ರಗಳೆಂದರೆ ಪ್ರಾಣ. ನವನೀತ್ ಅವರ “ಕರ್ವ” ಚಿತ್ರವನ್ನು ಸಾಕಷ್ಟು ಸಲ ನೋಡಿದ್ದೇನೆ. ಶರಣ್ ಸರ್ ಜೊತೆ ನಟಿಸಿರುವ ಸಂತಸವಿದೆ‌. ಒಳ್ಳೆಯ ಪಾತ್ರ ನೀಡಿರುವ ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಧನ್ಯವಾದ ಎಂದರು ಅದಿತಿ ಪ್ರಭುದೇವ. ಫಾರಿನ್ ರಿಟರ್ನ್ ಪಾತ್ರದಲ್ಲಿ ಅಭಿನಯಿಸಿರುವುದಾಗಿ ಪ್ರಭು ಮುಂಡ್ಕರ್, ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ಧರ್ಮ ಹೇಳಿದರು. ರಜನಿ ಭಾರದ್ವಾಜ್ ಸಹ “ಛೂ ಮಂತರ್” ಬಗ್ಗೆ ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ಹಾರರ್ ಕಾಮಿಡಿ ಸಿನಿಮಾದಲ್ಲಿ ಇಬ್ಬರು ನಾಯಕಿಯರ ಜೊತೆ ಶರಣ್ ಡುಯೆಟ್

    ಹಾರರ್ ಕಾಮಿಡಿ ಸಿನಿಮಾದಲ್ಲಿ ಇಬ್ಬರು ನಾಯಕಿಯರ ಜೊತೆ ಶರಣ್ ಡುಯೆಟ್

    ಟ ಶರಣ್ ಇದೀಗ ಮತ್ತೊಂದು ಸಿನಿಮಾದಲ್ಲಿ ಸದ್ದಿಲ್ಲದೇ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಛೂ ಮಂತರ್’ ಎಂದು ಹೆಸರಿಡಲಾಗಿದ್ದು, ಈ ಸಿನಿಮಾದ ನಾಯಕರಾಗಿ ಶರಣ್ ನಟಿಸಿದ್ದರೆ, ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್ ನಲ್ಲಿ ಬರುತ್ತಿರುವ ಚಿತ್ರ ಎಂದಮೇಲೆ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡುವುದಂತು ಖಚಿತ.

    ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡುತ್ತಾ ಬಂದಿರುವ, ತರುಣ್ ಸ್ಟುಡಿಯೋಸ್  ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇದು ಈ ಸಂಸ್ಥೆಯಿಂದ ನಿರ್ಮಾಣವಾಗಿರುವ ಐದನೇ ಚಿತ್ರ. “ಕರ್ವ” ಚಿತ್ರದ‌ ಮೂಲಕ ಕನ್ನಡಿಗರ ಮನಗೆದ್ದಿರುವ ನವನೀತ್, ಕಥೆ, ಚಿತ್ರಕಥೆ ಬರೆದು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

    ಹಾರರ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆಗೆ ಸಿದ್ದವಾಗುತ್ತಿದೆ. ಬೆಂಗಳೂರು, ಮೈಸೂರು, ಉತ್ತರಾಖಂಡ ಹಾಗೂ ಲಂಡನ್ ನಲ್ಲಿ ಚಿತ್ರೀಕರಣ ನಡೆದಿದೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ಅನೂಪ್ ಕಟ್ಟುಕರನ್ ಮೊದಲ ಬಾರಿಗೆ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ. ವೆಂಕಿ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಶಿವಕುಮಾರ್(ಕೆ.ಜಿ.ಎಫ್ ಖ್ಯಾತಿ) ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ “ಛೂ ಮಂತರ್” ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಅದಿತಿ ಪ್ರಭುದೇವ ವಿವಾಹಕ್ಕೆ ಸಿದ್ಧಗೊಂಡ ಅರಮನೆ ಮೈದಾನ

    ಅದಿತಿ ಪ್ರಭುದೇವ ವಿವಾಹಕ್ಕೆ ಸಿದ್ಧಗೊಂಡ ಅರಮನೆ ಮೈದಾನ

    ಟಿ ಅದಿತಿ ಪ್ರಭುದೇವ್ ನಾಳೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇಂದು ಅವರ ಆರತಕ್ಷತೆ ನಡೆಯಲಿದ್ದು, ನಾಳೆ ಹಸೆಮಣೆ ಏರುತ್ತಿದ್ದಾರೆ. ಇದೊಂದು ಅರೇಂಜ್ಡ್ ಮ್ಯಾರೇಜ್ ಆಗಿದ್ದು, ಮನೆಯವರೇ ತೋರಿಸಿದಿ ಯಶಸ್ವಿ ಜೊತೆ ನಾಳೆ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಇಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಅದ್ದೂರಿ ಆರತಕ್ಷತೆಯಲ್ಲಿ ಸ್ಯಾಂಡಲ್ ವುಡ್ ಹಾಗೂ ರಾಜಕೀಯ ಗಣ್ಯರು ಆಗಮಿಸಲಿದ್ದಾರೆ.

    ಇವರು ಕನ್ನಡ ಸಿನಿಮಾ ರಂಗದ ಬಹುಬೇಡಿಕೆಯ ನಟಿಯಾಗಿದ್ದು, ಒಂದೇ ಒಂದು ವಿವಾದವಿಲ್ಲದೇ ಸ್ಟಾರ್ ನಟಿಯಾಗಿ ಬೆಳೆದಿರುವ ಅದಿತಿ ಪ್ರಭುದೇವ ಅವರ ಅರಿಶಿನ ಶಾಸ್ತ್ರ ನಿನ್ನೆ ನಡೆದದ್ದು ಆ ಫೋಟೋಗಳನ್ನು ಅದಿತಿ ಪ್ರಭುದೇವ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಉದ್ಯಮಿ ಯಶಸ್ ಅವರ ಜೊತೆ ಹೊಸ ಜೀವನಕ್ಕೆ ಅದಿತಿ ಕಾಲಿಡುತ್ತಿದ್ದು, ಈಗಾಗಲೇ ತಮ್ಮ ಭಾವಿ ಪತಿಯನ್ನು ಅಭಿಮಾನಿಗಳಿಗೆ ಹಲವಾರು ಬಾರಿ ಪರಿಚಯಿಸಿದ್ದಾರೆ. ಒಂದು ದಿನ ತಮ್ಮ ಯಶಸ್ವಿ ಜೊತೆ ಕಾಡಿನಲ್ಲಿ ಕಳೆದ ಅನುಭವವನ್ನೂ ಅವರು ಹಂಚಿಕೊಂಡಿದ್ದರು. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ

    ತಾವು ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರೂ, ಅದಿತಿ ಮಾತ್ರ ಹುಡುಗನನ್ನು ಆಯ್ಕೆ ಮಾಡಿಕೊಂಡಿದ್ದು ಉದ್ಯಮ ಕ್ಷೇತ್ರದವರನ್ನು ಯಶಸ್ ಉದ್ಯಮಿಯಾಗಿದ್ದು, ಕಾಫಿ ಪ್ಲಾಂಟರ್ ಕೂಡ ಆಗಿದ್ದಾರೆ. ಇಂತಹ ಹುಡುಗನನ್ನು ಪಡೆಯುವುದಕ್ಕಾಗಿಯೇ ನಾನು ಇಷ್ಟು ದಿನ ಕಾದಿದ್ದೆ ಎಂದೂ ಅವರು ಹುಡುಗನ ಬಗ್ಗೆ ಬರೆದುಕೊಂಡಿದ್ದರು.

    ಈಗಾಗಲೇ ತಮ್ಮ ಮದುವೆಯ ಆಹ್ವಾನ ಪತ್ರಿಕೆಯನ್ನು ಚಿತ್ರೋದ್ಯಮದ ಅನೇಕರಿಗೆ ನೀಡಿದ್ದು, ನಾಳೆ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಅದಿತಿ ಪ್ರಭುದೇವ್ ಅವರ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ತಿಂಗಳು ಅದಿತಿ ಅವರ ಎರಡು ಚಿತ್ರಗಳು ರಿಲೀಸ್ ಆಗಿದ್ದು, ಇವರ ಪಾತ್ರಕ್ಕೆ ಮೆಚ್ಚುಗೆಯ ಮಾತೂ ಕೇಳಿ ಬಂದಿದೆ.

    ಮದುವೆಯ ನಂತರ ಅದಿತಿ ಸಿನಿಮಾ ರಂಗದಲ್ಲೇ ಮುಂದುವರೆಯುತ್ತಾರಾ ಅಥವಾ ಸಿನಿಮಾ ರಂಗದಿಂದ ದೂರವಾಗುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದ್ದು, ಮುಂದಿನ ದಿನಗಳಲ್ಲಿ ಅದಿತಿ ಅವರೇ ಇದಕ್ಕೆ ಉತ್ತರವನ್ನೂ ನೀಡಲಿದ್ದಾರೆ. ಬಹುಶಃ ಸಿನಿಮಾ ರಂಗವನ್ನು ತೊರೆಯುವುದಿಲ್ಲ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ನಾಳೆ ನಟಿ ಅದಿತಿ ಪ್ರಭುದೇವ್ ಮದುವೆ : ಇಂದು ಅರಿಶಿನ ಶಾಸ್ತ್ರ

    ನಾಳೆ ನಟಿ ಅದಿತಿ ಪ್ರಭುದೇವ್ ಮದುವೆ : ಇಂದು ಅರಿಶಿನ ಶಾಸ್ತ್ರ

    ನ್ನಡ ಸಿನಿಮಾ ರಂಗದ ಬಹುಬೇಡಿಕೆಯ ನಟಿ, ಒಂದೇ ಒಂದು ವಿವಾದವಿಲ್ಲದೇ ಸ್ಟಾರ್ ನಟಿಯಾಗಿ ಬೆಳೆದಿರುವ ಅದಿತಿ ಪ್ರಭುದೇವ ಅವರ ವಿವಾಹ ನಾಳೆ ಬೆಂಗಳೂರಿನ  ಅರಮನೆ ಮೈದಾನದಲ್ಲಿ ನಡೆಯಲಿದೆ. ಇಂದು ಅರಿಶಿನ ಶಾಸ್ತ್ರ ನಡೆಯುತ್ತಿದ್ದು, ಆ ಫೋಟೋಗಳನ್ನು ಅದಿತಿ ಪ್ರಭುದೇವ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ಉದ್ಯಮಿ ಯಶಸ್ ಅವರ ಜೊತೆ ಹೊಸ ಜೀವನಕ್ಕೆ ಅದಿತಿ ಕಾಲಿಡುತ್ತಿದ್ದು, ಈಗಾಗಲೇ ತಮ್ಮ ಭಾವಿ ಪತಿಯನ್ನು ಅಭಿಮಾನಿಗಳಿಗೆ ಹಲವಾರು ಬಾರಿ ಪರಿಚಯಿಸಿದ್ದಾರೆ. ಒಂದು ದಿನ ತಮ್ಮ ಯಶಸ್ವಿ ಜೊತೆ ಕಾಡಿನಲ್ಲಿ ಕಳೆದ ಅನುಭವವನ್ನೂ ಅವರು ಹಂಚಿಕೊಂಡಿದ್ದರು. ಇದನ್ನೂ ಓದಿ: ಮದುವೆ ಬಗ್ಗೆ ವೈಷ್ಣವಿ ತುಂಬಾ ಕನಸು ಕಂಡಿದ್ದಳು: ತಂದೆ ರವಿಕುಮಾರ್

    ತಾವು ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರೂ, ಅದಿತಿ ಮಾತ್ರ ಹುಡುಗನನ್ನು ಆಯ್ಕೆ ಮಾಡಿಕೊಂಡಿದ್ದು ಉದ್ಯಮ ಕ್ಷೇತ್ರದವರನ್ನು ಯಶಸ್ ಉದ್ಯಮಿಯಾಗಿದ್ದು, ಕಾಫಿ ಪ್ಲಾಂಟರ್ ಕೂಡ ಆಗಿದ್ದಾರೆ. ಇಂತಹ ಹುಡುಗನನ್ನು ಪಡೆಯುವುದಕ್ಕಾಗಿಯೇ ನಾನು ಇಷ್ಟು ದಿನ ಕಾದಿದ್ದೆ ಎಂದೂ ಅವರು ಹುಡುಗನ ಬಗ್ಗೆ ಬರೆದುಕೊಂಡಿದ್ದರು.

    ಈಗಾಗಲೇ ತಮ್ಮ ಮದುವೆಯ ಆಹ್ವಾನ ಪತ್ರಿಕೆಯನ್ನು ಚಿತ್ರೋದ್ಯಮದ ಅನೇಕರಿಗೆ ನೀಡಿದ್ದು, ನಾಳೆ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಅದಿತಿ ಪ್ರಭುದೇವ್ ಅವರ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ತಿಂಗಳು ಅದಿತಿ ಅವರ ಎರಡು ಚಿತ್ರಗಳು ರಿಲೀಸ್ ಆಗಿದ್ದು, ಇವರ ಪಾತ್ರಕ್ಕೆ ಮೆಚ್ಚುಗೆಯ ಮಾತೂ ಕೇಳಿ ಬಂದಿದೆ.

    ಮದುವೆಯ ನಂತರ ಅದಿತಿ ಸಿನಿಮಾ ರಂಗದಲ್ಲೇ ಮುಂದುವರೆಯುತ್ತಾರಾ ಅಥವಾ ಸಿನಿಮಾ ರಂಗದಿಂದ ದೂರವಾಗುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದ್ದು, ಮುಂದಿನ ದಿನಗಳಲ್ಲಿ ಅದಿತಿ ಅವರೇ ಇದಕ್ಕೆ ಉತ್ತರವನ್ನೂ ನೀಡಲಿದ್ದಾರೆ. ಬಹುಶಃ ಸಿನಿಮಾ ರಂಗವನ್ನು ತೊರೆಯುವುದಿಲ್ಲ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ದೀಪಾವಳಿಗೆ ರಿಲೀಸ್ ಆಯಿತು ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರದ ಪೋಸ್ಟರ್

    ದೀಪಾವಳಿಗೆ ರಿಲೀಸ್ ಆಯಿತು ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರದ ಪೋಸ್ಟರ್

    ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಮಾಫಿಯಾ” (Mafia) ಚಿತ್ರದ ನೂತನ ಪೋಸ್ಟರ್ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಿದೆ. ವಿಭಿನ್ನ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿದ್ದಾರೆ. ಲೋಹಿತ್ ಹೆಚ್ (Lohit) ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶಗಳು ಸಾಹಸಪ್ರಿಯರಿಗೆ ಹೆಚ್ಚು ಪ್ರಿಯವಾಗಲಿದೆ.

    ನಾಯಕ ಪ್ರಜ್ವಲ್ ದೇವರಾಜ್ (Prajwal Devaraj) ಅಭಿನಯದ 35ನೇ ಚಿತ್ರ “ಮಾಫಿಯಾ”. ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್ ನಲ್ಲಿ ಪ್ರಜ್ವಲ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಸಹ ಮಾಡಿಕೊಂಡಿದ್ದಾರೆ. ಈಗಾಗಲೇ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾರ್ಗ ಬಾಕಿಯಿದೆ. ದೀಪಾವಳಿ ನಂತರ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ‌. ಇದನ್ನೂ ಓದಿ:ಚೇತನ್ ಕಾಂಟ್ರವರ್ಸಿಗೆ ಪ್ರಗತಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

     

    “ಮಾಫಿಯಾ”ಗಾಗಿ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಸೆಟ್ ಸಹ ನಿರ್ಮಾಣ ಮಾಡಲಾಗಿತ್ತು. ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ (Aditi Prabhudev), ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಚಾಂಪಿಯನ್’ ಸಿನಿಮಾದ ಟ್ರೈಲರ್ ರಿಲೀಸ್ : ಚಿತ್ರ ತಂಡಕ್ಕೆ ಡೈನಾಮಿಕ್ ಸ್ಟಾರ್ ದೇವರಾಜ್ ಸಾಥ್

    ‘ಚಾಂಪಿಯನ್’ ಸಿನಿಮಾದ ಟ್ರೈಲರ್ ರಿಲೀಸ್ : ಚಿತ್ರ ತಂಡಕ್ಕೆ ಡೈನಾಮಿಕ್ ಸ್ಟಾರ್ ದೇವರಾಜ್ ಸಾಥ್

    ಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ (Aditi Prabhudev) ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” (Champion) ಚಿತ್ರದ ಟ್ರೇಲರ್ (Trailer)ಡೈನಾಮಿಕ್ ಸ್ಟಾರ್ ದೇವರಾಜ್ (Devraj) ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು.‌ ಈ ಕುರಿತು ಚಿತ್ರತಂಡವು ಹಲವು ವಿಚಾರಗಳನ್ನು ಹಂಚಿಕೊಂಡಿದೆ. ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ಹೇಳಿದ್ದೆ.  ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ “ಚಾಂಪಿಯನ್” ಚಿತ್ರವನ್ನು ನಾನು ನಿರ್ಮಾಣ ಮಾಡಿದ್ದೀನಿ. ಚಿತ್ರ ಅಕ್ಟೋಬರ್ 14 ರಂದು ಬಿಡುಗಡೆಯಾಗಲಿದೆ. 2019 ರಲ್ಲಿ ಈ ಚಿತ್ರ ಆರಂಭವಾಯಿತು. ನಂತರ ಕೋವಿಡ್.. ಆನಂತರ ನಮ್ಮ ಚಿತ್ರದ ನಿರ್ದೇಶಕ ಶಾಹುರಾಜ್ ಶಿಂಧೆ ಅವರ ಹಠಾತ್ ನಿಧನ. ಈ ರೀತಿ ಹಲವು ಅಡೆತಡೆಗಳನ್ನು ದಾಟಿ ಈಗ ಚಿತ್ರ ಬಿಡುಗಡೆ ಹಂತ ತಲುಪಿದೆ‌. ಉತ್ತರ ಕರ್ನಾಟಕದ ನನ್ನ ಸ್ನೇಹಿತರು ತಮ್ಮದೇ ಚಿತ್ರ ಅನ್ನುವ ಹಾಗೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ನನ್ನ ಹಾಗೂ ಸಚಿನ್ ಕುಟುಂಬದವರು ಸಾಕಷ್ಟು ಜನ ಆರ್ಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆರ್ಮಿಯಲ್ಲಿ ನಮಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರೆಲ್ಲರ ಬೆಂಬಲ ಕೂಡ ನಮ್ಮಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದೇವರಾಜ್ ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕ ಶಿವಾನಂದ ಎಸ್ ನೀಲಣ್ಣನವರ್.

    ನಾನು ಚಿತ್ರದಲ್ಲಿ ನಟಿಸುತ್ತೇನೆ ಎಂದು ಅಂದು ಕೊಂಡಿರಲಿಲ್ಲ. ಏಕೆಂದರೆ ನನ್ನ ತಂದೆ, ತಮ್ಮ ಎಲ್ಲಾ ಆರ್ಮಿಯಲ್ಲಿದ್ದಾರೆ. ನಾನು ಸಹ ಪರೀಕ್ಷೆ ಬರೆದಿದ್ದೆ. ಆದರೆ ಸೆಲೆಕ್ಟ್ ಆಗಲಿಲ್ಲ. ಹನ್ನೆರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಕೆಲಸ ಮಾಡುತ್ತಿದ್ದೆ. ಕೆಲವು ವರ್ಷಗಳ ಹಿಂದೆ ನನ್ನ ಸ್ನೇಹಿತ ಶಿವಾನಂದ, ಕೊಟ್ಟ ಮಾತಿನಂತೆ “ಚಾಂಪಿಯನ್” ಚಿತ್ರದ ಮೂಲಕ ನನ್ನನ್ನು ಹೀರೋ ಮಾಡಿದ್ದಾರೆ.  ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೀನಿ. ಅದಿತಿ ಪ್ರಭುದೇವ ಸೇರಿದಂತೆ ಎಲ್ಲರ ಅಭಿನಯ ಚೆನ್ನಾಗಿದೆ. ಸನ್ನಿಲಿಯೋನ್ ಈ ಚಿತ್ರದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.  ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದೇವರಾಜ್ ಸರ್ ಗೆ, ಸಮಾರಂಭಕ್ಕೆ ಆಗಮಿಸಿರುವ ಲಹರಿ ವೇಲು ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ. ಮುಂದಿನ ತಿಂಗಳ ಹದಿನಾಲ್ಕು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ ಪ್ರೋತ್ಸಾಹ ನೀಡಿ ಎಂದರು ನಾಯಕ ಸಚಿನ್ ಧನಪಾಲ್ (Sachin Dhanapal). ಇದನ್ನೂ ಓದಿ:ನಾಯಕಿ ರುಕ್ಮಿಣಿ ಜೊತೆ ಆಫ್ರಿಕಾಗೆ ಹೊರಟು ನಿಂತ ಗೋಲ್ಡನ್ ಸ್ಟಾರ್ ಗಣೇಶ್

    ನಾನು ಈ ಚಿತ್ರದಲ್ಲಿ ನಟಿಸಲು ಪ್ರಮುಖ ಕಾರಣ ನಿರ್ದೇಶಕ ಶಾಹುರಾಜ್ ಶಿಂಧೆ. ಇಂದು ಅವರಿಲ್ಲದಿರುವುದು ತುಂಬಾ ದುಃಖದ ವಿಷಯ.  ಉತ್ತರ ಕರ್ನಾಟಕದ ನಿರ್ಮಾಪಕ ಶಿವಾನಂದ್ ಅವರ ಬಗ್ಗೆ ನನಗೆ ಹೆಮ್ಮೆಯಿದೆ. ಸ್ನೇಹಿತನಿಗಾಗಿ ಅವರು ಚಿತ್ರ ನಿರ್ಮಾಣ ಮಾಡಿರುವುದು ನಿಜಕ್ಕೂ ಖುಷಿಯ ವಿಚಾರ.  ಮೊದಲ ಚಿತ್ರದಲ್ಲೇ ಸಚಿನ್ ಚೆನ್ನಾಗಿ ನಟಿಸಿದ್ದಾರೆ. ನನ್ನ‌ ಪಾತ್ರ ಕೂಡ ಚೆನ್ನಾಗಿದೆ. ನಿಮ್ಮೆಲ್ಲರ ಬೆಂಬಲ ನಮ್ಮ ಚಿತ್ರಕ್ಕಿರಲಿ ಎಂದು ನಟಿ‌ ಅದಿತಿ ಪ್ರಭುದೇವ ತಿಳಿಸಿದರು. ನನ್ನ ಮನೆಗೆ ಶಿವಾನಂದ್ ಹಾಗೂ ಸಚಿನ್ ಅವರು ಬಂದಿದಾಗ ನಾನು, ನಿರ್ಮಾಪಕ ಹಾಗೂ ಹೀರೋ ಬಂದಿದ್ದಾರೆ ಅಂದು ಕೊಂಡಿದ್ದೆ. ಆನಂತರ ಇವರ ಸ್ನೇಹದ ಬಗ್ಗೆ ತಿಳಿದು ಆನಂದವಾಯಿತು. ನಾನು ಕೂಡ ಈ ಚಿತ್ರದಲ್ಲಿ ನಟಿಸಿದ್ದೇನೆ ಎಂದರು ನಟ ದೇವರಾಜ್.ಲಹರಿ ವೇಲು “ಚಾಂಪಿಯನ್” ಗೆ ಶುಭ ಕೋರಿದರು. ಛಾಯಾಗ್ರಾಹಕ ಸರವಣನ್ ನಟರಾಜನ್ ಹಾಗೂ ನೃತ್ಯ ನಿರ್ದೇಶಕ ಧನು ಮಾಸ್ಟರ್ ಚಿತ್ರದ ಬಗ್ಗೆ ‌ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ನಟ ಧನಂಜಯ್ ಮತ್ತು ಅದಿತಿ ಪ್ರಭುದೇವ್ ರಿಯಲ್ ಆಗಿ ಮದುವೆ ಆಗ್ಬೇಕಿತ್ತು: ಆದರೆ ತಪ್ಪಿಸಿದವರು ಯಾರು?

    ನಟ ಧನಂಜಯ್ ಮತ್ತು ಅದಿತಿ ಪ್ರಭುದೇವ್ ರಿಯಲ್ ಆಗಿ ಮದುವೆ ಆಗ್ಬೇಕಿತ್ತು: ಆದರೆ ತಪ್ಪಿಸಿದವರು ಯಾರು?

    ಅಂದುಕೊಂಡಂತೆ ಆಗಿದ್ದರೆ ನಟ ಧನಂಜಯ್ ಮತ್ತು ನಟಿ ಅದಿತಿ ಪ್ರಭುದೇವ ರಿಯಲ್ ಲೈಫ್ ನಲ್ಲಿ ಮದುವೆ ಆಗಬೇಕಿತ್ತು. ಅದಕ್ಕಾಗಿ ಪೂರ್ವ ತಯಾರಿ ಕೂಡ ನಡೆದಿತ್ತು. ಇಬ್ಬರನ್ನೂ ಒಂದು ಮಾಡುವುದಕ್ಕಾಗಿ ನಟ ಜಗ್ಗೇಶ್ ಕೂಡ ಪ್ರಯತ್ನಪಟ್ಟರು. ಅದು ಸಾಧ್ಯವಾಗಲಿಲ್ಲ. ಯಾಕೆಂದರೆ, ಡಾಲಿಯನ್ನು ಅವರು ಒಪ್ಪಲಿಲ್ಲವಂತೆ. ಇಂಥದ್ದೊಂದು ಇಂಟ್ರಸ್ಟಿಂಗ್ ವಿಷಯವನ್ನು ಸ್ವತಃ ಜಗ್ಗೇಶ್ ಅವರೇ ಹೇಳಿಕೊಂಡಿದ್ದಾರೆ.

    ಈ ಮದುವೆ ವಿಚಾರ ಗಾಸಿಪ್ ಅಲ್ಲ. ಸ್ವತಃ ಈ ವಿಷಯವನ್ನು ಹೇಳಿದವರು ಜಗ್ಗೇಶ್. ತೋತಾಪುರಿ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಜಗ್ಗೇಶ್ ‘ಡಾಲಿ ಧನಂಜಯ್ ಮತ್ತು ಅದಿತಿಯನ್ನು ಮದುವೆ ಮಾಡಿಸಲು ನಾನು ಪ್ರಯತ್ನ ಪಟ್ಟೆ. ಆದರೆ, ಅದು ಸಾಧ್ಯವಾಗಲಿಲ್ಲ’ ಅಂದರು. ಅದಿತಿ ತಾಯಿ ಒಪ್ಪದೇ ಇರುವ ಕಾರಣಕ್ಕಾಗಿ ಇಬ್ಬರೂ ಮದುವೆ ಆಗಲಿಲ್ಲ ಎನ್ನುವ ಮಾತೂ ಅದೇ ವೇದಿಕೆಯ ಮೇಲೆ ಕೇಳಿ ಬಂತು. ಈ ಮದುವೆಗೆ ಸಮ್ಮತಿ ಸಿಕ್ಕಿದ್ದರೆ ಒಪ್ಪಿದ್ದರೆ ಮತ್ತೊಂದು ಸ್ಟಾರ್ ಕಪಲ್ ಕನ್ನಡ ಸಿನಿಮಾ ರಂಗಕ್ಕೆ ಸಿಕ್ಕಿರೋದು. ಇದನ್ನೂ ಓದಿ:ಪ್ರೀ ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ಮಿಂಚಿದ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ- ಸುಹಾಸ್

    ಜಗ್ಗೇಶ್ ಮತ್ತು ಅದಿತಿ ಪ್ರಭುದೇವ್ ತೋತಾಪುರಿ ಸಿನಿಮಾದಲ್ಲಿ ನಟಿಸಿದ್ದಾರೆ. ಇದೇ ಚಿತ್ರದಲ್ಲೇ ಡಾಲಿ ಧನಂಜಯ್ ಕೂಡ ವಿಶೇಷ ಪಾತ್ರವನ್ನು ಮಾಡಿದ್ದಾರೆ. ಹಾಗಾಗಿ ಅದಿತಿ ಮತ್ತು ಡಾಲಿ ಅನೇಕ ದಿನಗಳ ಕಾಲ ಶೂಟಿಂಗ್ ನಲ್ಲಿ ಸಿಗುತ್ತಿದ್ದರು. ಈ ವೇಳೆಯಲ್ಲೇ ಜಗ್ಗೇಶ್ ಇಬ್ಬರನ್ನೂ ಒಪ್ಪಿಸಿ ಮದುವೆ ಮಾಡಲು ಟ್ರೈ ಮಾಡಿದ್ದಾರೆ. ಮದುವೆ ಅನ್ನುವುದು ಸ್ವರ್ಗದಲ್ಲಿ ನಿಶ್ಚಯ ಆಗಿರುತ್ತೆ ಅಂತಾರೆ. ಹಾಗಾಗಿ ಅದಿತಿ ಬೇರೆ ಹುಡುಗನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

    ಈಗಾಗಲೇ ಕಾಫಿ ನಾಡು ಹುಡುಗನ ಜೊತೆ ಎಂಗೇಜ್ ಆಗಿರುವ ಅದಿತಿ, ಆಗಾಗ್ಗೆ ಆ ಹುಡುಗನ ಜೊತೆಗಿನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಬಹುಶಃ ಈ ವರ್ಷದಲ್ಲಿ ಅದಿತಿ ಮದುವೆ ಆಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತ ಡಾಲಿ ಹೆಸರು ಮತ್ತೋರ್ವ ನಟಿಯ ಜೊತೆ ತಳುಕು ಹಾಕಿಕೊಂಡಿದ್ದು, ಅಮೃತಾ ಜೊತೆ ಡಾಲಿ ಮದುವೆ ಆಗುತ್ತಾರೆ ಎನ್ನುವುದು ಸದ್ಯ ಹರಡಿರುವ ಗಾಸಿಪ್.

    Live Tv
    [brid partner=56869869 player=32851 video=960834 autoplay=true]

  • ಪ್ರಜ್ವಲ್ ದೇವರಾಜ್ ಅಭಿನಯದ ‘ಮಾಫಿಯಾ’ ಚಿತ್ರಕ್ಕೆ ಹೈದರಾಬಾದ್ ನಲ್ಲಿ ನಡೀತು ಭರ್ಜರಿ ಫೈಟ್

    ಪ್ರಜ್ವಲ್ ದೇವರಾಜ್ ಅಭಿನಯದ ‘ಮಾಫಿಯಾ’ ಚಿತ್ರಕ್ಕೆ ಹೈದರಾಬಾದ್ ನಲ್ಲಿ ನಡೀತು ಭರ್ಜರಿ ಫೈಟ್

    ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಮಾಫಿಯಾ”. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲಂಸಿಟಿಯಲ್ಲಿ ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ನಡೆಯುತ್ತಿದೆ. ವಿನೋದ್ ಅವರ ಸಾಹಸ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಈ ಸಾಹಸ ಸನ್ನಿವೇಶದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸಹ ಕಲಾವಿದರು ಪಾಲ್ಗೊಂಡಿದ್ದಾರೆ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ. ಇದು ಕ್ಲೈಮ್ಯಾಕ್ಸ್ ಭಾಗದ ಸಾಹಸ ದೃಶ್ಯ.

    “ಮಾಫಿಯಾ” ಚಿತ್ರ ತುಂಬಾ ಚೆನ್ನಾಗಿ ಮೂಡಿ ಬರುತ್ತಿದ್ದು, ಪ್ರಜ್ವಲ್ ಅವರ ಈವರೆಗಿನ ಸಿನಿಪಯಣದ ಅತ್ಯುತ್ತಮ ಚಿತ್ರವಾಗಲಿದೆ ಎಂಬ ಭರವಸೆಯಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಹ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಅವರ ಸಹಕಾರಕ್ಕೆ ಧನ್ಯವಾದ ಎಂದರು ನಿರ್ಮಾಪಕ ಕುಮಾರ್. ಈ ಸಾಹಸ ಸನ್ನಿವೇಶದ ನಂತರ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿರುತ್ತದೆ. ಆ ಹಾಡಿನ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ. ಇದನ್ನೂ ಓದಿ:ನಂದು -ಜಯಶ್ರೀ ಜಟಾಪಟಿ: ನಟಿ ಜಯಶ್ರೀಗೆ ಶಿಕ್ಷೆ ಕೊಟ್ಟ ಬಿಗ್ ಬಾಸ್

    ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಾಫಿಯಾದಲ್ಲಿ ಶೈನ್ ಶೆಟ್ಟಿ, ಫುಟ್ಬಾಲ್ ಆಡ್ತಾರಾ ಬಿಗ್ ಬಾಸ್ ಸ್ಪರ್ಧಿ

    ಮಾಫಿಯಾದಲ್ಲಿ ಶೈನ್ ಶೆಟ್ಟಿ, ಫುಟ್ಬಾಲ್ ಆಡ್ತಾರಾ ಬಿಗ್ ಬಾಸ್ ಸ್ಪರ್ಧಿ

    ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ, ಲೋಹಿತ್ ನಿರ್ದೇಶನದ ಮಾಫಿಯಾ ಸಿನಿಮಾ ತಂಡವನ್ನು ಸೇರಿಕೊಂಡಿದ್ದಾರೆ ಬಿಗ್ ಬಾಸ್ ಸ್ಪರ್ಧಿ ಶೈನ್ ಶೆಟ್ಟಿ. ಈ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದು, ಅದು ಫುಟ್ಬಾಲ್ ಆಟಗಾರನ ಪಾತ್ರವಂತೆ. ಇದೇ ಜೂನ್ 15ರಿಂದ ಆರಂಭವಾಗಲಿರುವ ಕೊನೆಯ ಹಂತದ ಶೂಟಿಂಗ್ ನಲ್ಲಿ ಶೆಟ್ಟಿ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿ ಈ ಹಂತದ ಶೂಟಿಂಗ್ ನಡೆಯಲಿದೆ.

    ಪ್ರಜ್ವಲ್ ದೇವರಾಜ್ ಗೆಳೆಯನ ಪಾತ್ರ ಅದಾಗಿದ್ದು, ಅದೊಂದು ಮಹತ್ವದ ಪಾತ್ರ ಎಂದಿದ್ದಾರೆ ನಿರ್ದೇಶಕ ಲೋಹಿತ್. ‘ಮಾಫಿಯಾ ಸಿನಿಮಾ ಕಾರಣಾಂತರಗಳಿಂದ ಶೂಟಿಂಗ್ ತಡವಾಗಿದೆ. ಒಂದು ತಿಂಗಳ ಕಾಲ ಕೊನೆಯ ಹಂತದ ಶೂಟಿಂಗ್ ನಡೆಯಲಿದೆ. ಅಲ್ಲದೇ, ಹಾಡೊಂದರ ಚಿತ್ರಿಕರಣಕ್ಕಾಗಿ ಲಡಾಖ್ ಅಥವಾ ಗೋವಾಗೆ ಹೋಗಲು ತಯಾರಿ ಕೂಡ ಮಾಡಿಕೊಳ್ಳಲಾಗುತ್ತಿದೆ’ ಎನ್ನುತ್ತಾರೆ ನಿರ್ದೇಶಕರು. ಇದನ್ನೂ ಓದಿ : ನಯನತಾರಾ ಒಂದಲ್ಲ, ಎರಡೆರಡು ಎಡವಟ್ಟು ತಿರುಪತಿ ದೇವಸ್ಥಾನದಿಂದ ಲೀಗಲ್ ನೋಟಿಸ್

    ಪ್ರಜ್ವಲ್ ದೇವರಾಜ್ ಮತ್ತು ಅದಿತಿ ಪ್ರಭುದೇವ್ ಕಾಂಬಿನೇಷನ್ ನ ಸಿನಿಮಾ ಇದಾಗಿದ್ದು, ವಾಸುಕಿ ವೈಭವ್, ಸಾಧು ಕೋಕಿಲಾ, ಪ್ರಕಾಶ್ ಬೆಳವಾಡಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದೆ. ಜುಲೈನಲ್ಲಿ ಸಿನಿಮಾದ ಬಹುತೇಕ ಶೂಟಿಂಗ್ ಮುಗಿಯಲಿದೆ.