Tag: Aditya

  • ಶಶಿಕುಮಾರ್ ಪುತ್ರನ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ : ‘ರಾಶಿ’ಗೆ ಆದಿತ್ಯ ಹೀರೋ

    ಶಶಿಕುಮಾರ್ ಪುತ್ರನ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ : ‘ರಾಶಿ’ಗೆ ಆದಿತ್ಯ ಹೀರೋ

    ಧುವನ್ ಫಿಲಂಸ್ ಲಾಂಛನದಲ್ಲಿ  ನಿರ್ಮಾಣವಾಗುತ್ತಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ (Shasikumar) ಅವರ ಪುತ್ರ ಆದಿತ್ಯ (Aditya) ಶಶಿಕುಮಾರ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಸುಂದರ ಪ್ರೇಮ ಕಥಾನಕಕ್ಕೆ “ರಾಶಿ” (Rashi) ಎಂದು ಹೆಸರಿಡಲಾಗಿದೆ. ಆದಿತ್ಯ ಶಶಿಕುಮಾರ್ ಅವರ ಹುಟ್ಟುಹಬ್ಬದ ದಿನವೇ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡುವ ಮೂಲಕ ನಾಯಕನಿಗೆ ಚಿತ್ರತಂಡ ವಿಶೇಷ ಉಡುಗೊರೆ ನೀಡಿದೆ. ರಾಜ್ಯಸಭಾ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾರ್ಯಾಧ್ಯಕ್ಷರಾದ ಜಿ.ಎಸ್.ಚಂದ್ರಶೇಖರ್, ನಟ ಶಶಿಕುಮಾರ್, ಬೆಂಗಳೂರು ಪೊಲೀಸ್ ಉಪ ಆಯುಕ್ತರಾದ ಸಿದ್ದರಾಜು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಎಸ್ ಚಿದಂಬರ್ ಸೇರಿದಂತೆ ಮುಂತಾದ ಗಣ್ಯರು ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ಇದು ನಾನು ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರ‌ ಎಂದು ಮಾತನಾಡಿದ ನಾಯಕ ಆದಿತ್ಯ ಶಶಿಕುಮಾರ್, ಈ ಚಿತ್ರದ ಕಥೆ ಬಹಳ ಚೆನ್ನಾಗಿದೆ. ನನ್ನ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು ಖುಷಿಯಾಗಿದೆ. ಇಷ್ಟು ದಿನ ಅಕ್ಷಿತ್ ಶಶಿಕುಮಾರ್ ಆಗಿದ್ದ ನಾನು, ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದೇನೆ. ಇನ್ನು ಮುಂದೆ ಎಲ್ಲರೂ ಆದಿತ್ಯ ಶಶಿಕುಮಾರ್ ಎಂದೇ ಕರೆಯಬೇಕೆಂದು ವಿನಂತಿಸುತ್ತೇನೆ ಎಂದರು.

    ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿಸಿಕೊಂಡು ಬರುವಾಗ ನಿರ್ಮಾಪಕ ಅಖಿಲೇಶ್ ಅವರು ನನ್ನನ್ನು ಕರೆದು ಈ ಚಿತ್ರವನ್ನು ನಿರ್ದೇಶಿಸಬೇಕೆಂದರು.  ಅಖಿಲೇಶ್ ಅವರೆ ಈ ಚಿತ್ರದ ಕಥೆ ಬರೆದಿದ್ದಾರೆ. ನಾನು ಚಿತ್ರಕಥೆ, ಬರೆದು, ಗೀತರಚನೆ ಮಾಡಿ, ಸಂಗೀತ ನಿರ್ದೇಶನದೊಂದಿಗೆ ನಿರ್ದೇಶನನ್ನು ಮಾಡುತ್ತಿದ್ದೇನೆ. “ಟ್ರಿಗರ್” ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು. ಇನ್ನು ಈ ಚಿತ್ರಕ್ಕೆ ಅಭಿನಂದನ್ ದೇಶಪ್ರಿಯ ಸಂಭಾಷಣೆ, ನವೀನ್ ಸೂರ್ಯ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ‌, ಮಂಜು ಮಹದೇವ್ ಹಿನ್ನೆಲೆ ಸಂಗೀತ ಹಾಗೂ ಬಂಡೆ ಚಂದ್ರು ಅವರ ಸಾಹಸ ನಿರ್ದೇಶನವಿದೆ. ಇತ್ತೀಚಿಗೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಈ ಪ್ರೇಮ ಕಥಾನಕಕ್ಕೆ ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ವಿಜಯ್ ಪಾಳೇಗಾರ್ ತಿಳಿಸಿದರು.

    ಚಿತ್ರದ ನಾಯಕಿ ಸಮೀಕ್ಷ, ನಿರ್ಮಾಪಕ ಅಖಿಲೇಶ್,  ಕಲಾವಿದರಾದ ಕರಿಸುಬ್ಬು, ಉಗ್ರಂ ರವಿ, ಹುಲಿ ಕಾರ್ತಿಕ್ ಮುಂತಾದವರು “ರಾಶಿ” ಚಿತ್ರದ ಬಗ್ಗೆ ‌ಮಾತನಾಡಿದರು.

  • ‘ಕಾಂಗರೂ’ ಚಿತ್ರದ ಟ್ರೈಲರ್ ರಿಲೀಸ್: ಇದು ಆದಿತ್ಯ ನಟನೆಯ ಚಿತ್ರ

    ‘ಕಾಂಗರೂ’ ಚಿತ್ರದ ಟ್ರೈಲರ್ ರಿಲೀಸ್: ಇದು ಆದಿತ್ಯ ನಟನೆಯ ಚಿತ್ರ

    ದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ  ಕಾಂಗರೂ (Kangaroo) ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಅರಸಪ್ಪ ಮಾಜಿ ಅಧ್ಯಕ್ಷರು ಕರ್ನಾಟಕ ಸಣ್ಣ ಕೈಗಾರಿಕೆ ಉದ್ಯಮ, ಆರಿಫ್ ಅಧ್ಯಕ್ಷರು ಪೀಣ್ಯ ಕೈಗಾರಿಕಾ ಉದ್ಯಮ ಹಾಗೂ ನಿರ್ಮಾಪಕ ಸಿಲ್ಕ್ ಮಂಜು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

    ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ಕುಣಿಗಲ್, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ಆರ್ ಗೌಡ  ಈ ಚಿತ್ರವನ್ನು ನಿರ್ಮಾಣ‌ ಮಾಡಿದ್ದಾರೆ. ನಾವು ಆರು ಜನ ಸ್ನೇಹಿತರು. ನಾವೆಲ್ಲಾ ಸಣ್ಣ ಕೈಗಾರಿಕೋದ್ಯಮಿಗಳು. ಪೀಣ್ಯದಲ್ಲಿ ನಮ್ಮ ಫ್ಯಾಕ್ಟರಿ ಇದೆ. ಸಿನಿಮಾ ರಂಗ ನಮಗೆ ಹೊಸತು. ಸ್ನೇಹಿತರ ಮೂಲಕ ಪರಿಚಿತರಾದ ನಿರ್ದೇಶಕ ಕಿಶೋರ್ ಅವರು ಈ ಚಿತ್ರದ ಕಥೆ ಹೇಳಿದ ರೀತಿ ನಮಗೆ ಇಷ್ಟವಾಯಿತು. ಚಿತ್ರ ನಿರ್ಮಾಣಕ್ಕೆ ಮುಂದಾದೆವು. ನಟ ಆದಿತ್ಯ ಹಾಗೂ ಚಿತ್ರತಂಡದ ಸಹಕಾರ ಮರೆಯಲು ಸಾಧ್ಯವಿಲ್ಲ. ಮೇ 3 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದು ಆರು ಜನ ನಿರ್ಮಾಪಕರ ಪರವಾಗಿ ಚೆನ್ನಕೇಶವ ಬಿ ಸಿ ಮಾತನಾಡಿದರು.

    ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ.‌ ಕನ್ನಡದಲ್ಲಿ ಸಾಕಷ್ಟು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಬಂದಿವೆಯಾದರೂ, ನಮ್ಮ ಚಿತ್ರ ಸ್ವಲ್ಪ ವಿಭಿನ್ನ. ಫ್ಯಾಮಿಲಿ ಆಡಿಯನ್ಸ್ ಗಾಗಿಯೇ ಮಾಡಿರುವ ಕಥೆ ಇದು. ಇನ್ನು ಕಾಂಗರೂ ಮೃದುಸ್ವಭಾವದ ಪ್ರಾಣಿ. ಯಾರ ತಂಟೆಗೂ ಹೋಗುವುದಿಲ್ಲ. ಆದರೆ ತನ್ನ ಮಕ್ಕಳ ತಂಟೆಗೆ ಬಂದರೆ ಅದು ಯಾರನ್ನು ಬಿಡುವುದಿಲ್ಲ. ಇದೇ ಚಿತ್ರದ ಕಥಾಸಾರಾಂಶ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಮ್ಮ ಚಿತ್ರ ನಿರ್ಮಾಣವಾಗಿದೆ‌. ನಾಯಕ ಆದಿತ್ಯ, ನಾಯಕಿ ರಂಜನಿ ರಾಘವನ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ. ಸಾಧುಕೋಕಿಲರ ಸಂಗೀತ ನಿರ್ದೇಶನ ಹಾಗೂ ಉದಯಲೀಲಾ ಅವರ ಛಾಯಾಗ್ರಹಣ ಚಿತ್ರದ ಹೈಲೆಟ್ ಎಂದರು ನಿರ್ದೇಶಕ ಕಿಶೋರ್ ಮೇಗಳಮನೆ.

    ನಿರ್ದೇಶಕ ಕಿಶೋರ್ (Kishore) ಅವರು ಕಥೆ ಕೇಳಿ ಎಂದರು. ನಾನು ಸರಿ ಎಂದೆ. ಆನಂತರ ಕೇಳುವುದು ಬೇಡ ಸರ್ ಸಿನಿಮಾನೇ ತೋರಿಸುತ್ತೇನೆ ಎಂದರು. ನನಗೆ ಆಶ್ಚರ್ಯವಾಯಿತು. ಚಿತ್ರದ ಕಥೆಯನ್ನು ಅನಿಮೇಶನ್ ಮೂಲಕ ತೋರಿಸಿದ ಪ್ರಥಮ ನಿರ್ದೇಶಕ ಇವರೆ ಇರಬಹುದು. ನಾನು ಈ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರ ಚೆನ್ನಾಗಿ ಬಂದಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರ ಸೇರಿದಂತೆ ಎಲ್ಲಾ ಕನ್ನಡ ಚಿತ್ರಗಳನ್ನು ಚಿತ್ರಮಂದಿರಗಳಲ್ಲೇ ನೋಡಿ ಎನ್ನುತ್ತಾರೆ ಆದಿತ್ಯ.

    ನಾನು ಈ ಚಿತ್ರದಲ್ಲಿ ಮನೋವೈದ್ಯೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇದು ನಾನು ನಾಯಕಿಯಾಗಿ ನಟಿಸಿರುವ ಐದನೇ ಚಿತ್ರ ಎಂದರು ನಾಯಕಿ ರಂಜನಿ ರಾಘವನ್. ಚಿತ್ರದಲ್ಲಿ ನಟಿಸಿರುವ ನಾಗೇಂದ್ರ ಅರಸ್, ಅಶ್ವಿನ್ ಹಾಸನ್, ಶುಭಲಕ್ಷ್ಮೀ, ಗೌತಮ್ ಮುಂತಾದವರು ಕಾಂಗರೂ ಚಿತ್ರದ ಕುರಿತು ಮಾತನಾಡಿದರು.

  • ‘ಕಾಂಗರೂ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ ಶಿವಣ್ಣ

    ‘ಕಾಂಗರೂ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ ಶಿವಣ್ಣ

    ದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ  ‘ಕಾಂಗರೂ’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಆದಿತ್ಯ ಅವರ ಅಭಿಮಾನಿಗಳು ಮೋಷನ್ ಪೋಸ್ಟರ್ ಗೆ ಫಿದಾ ಆಗಿದ್ದಾರೆ. ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

    ಮೋಷನ್ ಪೋಸ್ಟರ್ ತುಂಬಾ ಚೆನ್ನಾಗಿದೆ. ನೋಡಿದಾಗ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಎಂದಿನಿಸುತ್ತದೆ. ಆದಿತ್ಯ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಶಿವಣ್ಣ ಹಾರೈಸಿದ್ದಾರೆ. ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನಿರ್ಮಾಣವಾಗುತ್ತಿದೆ.

    ಆದಿತ್ಯ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.  ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ಕುಣಿಗಲ್, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ಆರ್ ಗೌಡ  ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ.

    ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ, ಸಾಧುಕೋಕಿಲ ಸಂಗೀತ ನೀಡಿದ್ದಾರೆ. ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

  • ಆದಿತ್ಯ ನಟನೆಯ ‘ಕಾಂಗರೂ’ ಚಿತ್ರಕ್ಕೆ ಸೂಪರ್ ಸ್ಟಾರ್ ಸಾಥ್

    ಆದಿತ್ಯ ನಟನೆಯ ‘ಕಾಂಗರೂ’ ಚಿತ್ರಕ್ಕೆ ಸೂಪರ್ ಸ್ಟಾರ್ ಸಾಥ್

    ದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ  ‘ಕಾಂಗರೂ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಮಾತಿನ ಜೋಡಣೆ(ಡಬ್ಬಿಂಗ್) ಸಹ ಪೂರ್ಣವಾಗಿದೆ.  ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಕಾಂಗರೂ ಚಿತ್ರ ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.

    ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ  ಹೊಂದಿರುವ ಈ ಚಿತ್ರದ ಮೋಷನ್ ಪೋಸ್ಟರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಒಬ್ಬರು ನಮ್ಮ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಲಿದ್ದಾರೆ. ಕಾಂಗರೂ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಿರುವ ಸೂಪರ್ ಸ್ಟಾರ್ ಯಾರು ಎಂಬುದನ್ನು ಸದ್ಯದಲ್ಲೇ ತಿಳಿಸುವುದಾಗಿ ನಿರ್ದೇಶಕ ಕಿಶೋರ್ ಮೇಗಳಮನೆ ಹೇಳಿದ್ದಾರೆ.

    ಆದಿತ್ಯ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.  ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ರಾಮಚಂದ್ರಯ್ಯ  ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ. ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ, ಸಾಧುಕೋಕಿಲ ಸಂಗೀತ ನೀಡಿದ್ದಾರೆ. ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

  • ಆದಿತ್ಯ ನಟನೆಯ ‘ಕಾಂಗರೂ’ ಸಿನಿಮಾದ ಶೂಟಿಂಗ್ ಮುಕ್ತಾಯ

    ಆದಿತ್ಯ ನಟನೆಯ ‘ಕಾಂಗರೂ’ ಸಿನಿಮಾದ ಶೂಟಿಂಗ್ ಮುಕ್ತಾಯ

    ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ (Aditya) ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ (Kishor Megalamane) ನಿರ್ದೇಶನದ ಕಾಂಗರೂ (Kangaroo) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯ ಮಾತಿನ ಜೋಡಣೆ (ಡಬ್ಬಿಂಗ್) ನಡೆಯುತ್ತಿದೆ.

    ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ  ಹೊಂದಿರುವ ಈ ಚಿತ್ರದಲ್ಲಿ ಆದಿತ್ಯ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಸಾಕಷ್ಟು ಬಂದಿದೆ. ಆದರೆ ನಮ್ಮ ಚಿತ್ರ ಸ್ವಲ್ಪ ವಿಭಿನ್ನ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ ಗಾಗಿ ಮಾಡಿರುವ ಕಥೆವಿದು. ಇನ್ನು ಕಾಂಗರೂ ಶೀರ್ಷಿಕೆ ಕುರಿತು ಹೇಳುವುದಾದರೆ, ಕಾಂಗರೂ ಒಂದು ಮುಗ್ಧ ಪ್ರಾಣಿ. ಅದು ಯಾರಿಗೂ ಏನು ಮಾಡುವುದಿಲ್ಲ. ಮತ್ತು ಈ ಕಾಂಗರೂ ತನ್ನ ಮರಿಗೆ ಜನ್ಮ ನೀಡಿದ ನಂತರ ಅದರ ಹೊಟ್ಟೆಯ ಮೇಲ್ಬಾಗದಲ್ಲಿ ಇರುವ ಚೀಲದಲ್ಲಿ ಆ ಮರಿಯನ್ನು ಇಟ್ಟು ಕಾಪಾಡುತ್ತದೆ, ಅಂತ ಸಮಯದಲ್ಲಿ ತನ್ನ ಮರಿಯ ತಂಟೆಗೆ ಯಾರಾದರೂ ಹೋದರೆ ಅದು ಯಾರನ್ನು ಬಿಡುವುದಿಲ್ಲ. ಈ ಪ್ರಾಣಿಯ ನಡವಳಿಕೆಯನ್ನು ಹೋಲುವ ಕಥೆಯಾಗಿರುತ್ತದೆ ಎಂದು ನಿರ್ದೇಶಕರು ಚಿತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ.

    ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ರಾಮಚಂದ್ರಯ್ಯ  ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ, ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

  • ಸಿನಿಮಾಗೆ ನಾಯಕಿಯಾದ ‘ಭೂಮಿಗೆ ಬಂದ ಭಗವಂತ’ ಬಾಲನಟಿ

    ಸಿನಿಮಾಗೆ ನಾಯಕಿಯಾದ ‘ಭೂಮಿಗೆ ಬಂದ ಭಗವಂತ’ ಬಾಲನಟಿ

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಯಲ್ಲಿ ಪ್ರಣೀತಾ ಪಾತ್ರ ಮಾಡುತ್ತಿರುವ ಅಂಕಿತಾ ಜಯರಾವ್ (Ankita Jayaram) ಇದೀಗ ಹಿರಿತೆರೆಗೂ ಕಾಲಿಟ್ಟಿದ್ದಾರೆ. ಕಾಗದ (Kagada) ಹೆಸರಿನ ಸಿನಿಮಾದಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ.

    ಈ ಹಿಂದೆ ಆ್ಯಪಲ್ ಕೇಕ್ ಎಂಬ ಸಿನಿಮಾ ನಿರ್ದೇಶಿಸಿದ್ದ ರಂಜಿತ್ ಕುಮಾರ್ ಗೌಡರ (Ranjith Kumar Gowda) ಎರಡನೇ ಹೆಜ್ಜೆ ಕಾಗದ. ಮದರಂಗಿ, ವಾಸ್ಕೋಡಿಗಾಮ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದ ರಂಜಿತ್ ‘ಆ್ಯಪಲ್ ಕೇಕ್’ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದರು. ಈಗ ಅವರ ನಿರ್ದೇಶನದ ಎರಡನೇ ಸಿನಿಮಾ ‘ಕಾಗದ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಸ್ಯಾಂಡಲ್ ವುಡ್ ಕ್ಯೂಟ್ ಕಪಲ್ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಫಸ್ಟ್ ಲುಕ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

    ಕಾಗದ ಸಿನಿಮಾ ಮೂಲಕ ಬಾಲನಟಿ ಅಂಕಿತಾ ನಾಯಕಿಯಾಗಿ, ಆದಿತ್ಯ (Aditya) ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದಾರೆ. ಮಫ್ತಿ ಖ್ಯಾತಿಯ ಬಾಲರಾಜವಾಡಿ, ನೇಹಾ ಪಾಟೀಲ್, ಶಿವಮಂಜು, ಅಶ್ವತ್ಥ್ ನೀನಾಸಂ, ಗೌತಮ್ ತಾರಾಬಳಗದಲ್ಲಿದ್ದಾರೆ. ಕಾಗದ ಪ್ರೇಮಕಥಾ ಹಂದರದ ಚಿತ್ರ. 2005ರ ಸಮಯದಲ್ಲಿ ನಡೆಯುವ ಕಾಲ್ಪನಿಕ ಕಥೆ. ಮೊಬೈಲ್ ಇಲ್ಲದ ಕಾಲಘಟ್ಟದಲ್ಲಿ ಕಾಗದ ಎಷ್ಟು ಮುಖ್ಯ ಪಾತ್ರವಹಿಸಿದೆ ಅನ್ನುವುದು ಚಿತ್ರದ ಕಂಟೆಂಟ್.

     

    ರಂಜಿತ್ ಕುಮಾರ್ ಗೌಡ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಸಿನಿಮಾಗೆ ಅರುಣ್ ಕುಮಾರ್ ಎ ಬಂಡವಾಳ ಹೂಡಿದ್ದಾರೆ. ಅಮ್ಮ ಸಿನಿ ಕ್ರಿಯೇಷನ್ ನಡಿ ಸಿನಿಮಾ ಮೂಡಿ ಬರಲಿದ್ದು, ಇದೇ ನಿರ್ಮಾಣ ಸಂಸ್ಥೆಯಡಿ ಈ ಹಿಂದೆ ರಗಡ್ ಎಂಬ ಚಿತ್ರ ನಿರ್ಮಾಣವಾಗಿತ್ತು. ಕಾಗದ ಸಿನಿಮಾದ ಬಹುತೇಕ ಶೂಟಿಂಗ್ ಮುಕ್ತಾಯಗೊಂಡಿದ್ದು, ಒಂದು ಹಾಡಿನ ಚಿತ್ರೀಕರಣವಷ್ಟೇ ಬಾಕಿ ಇದೆ. ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ, ಎಸ್ ಪ್ರದೀಪ್ ವರ್ಮಾ ಸಂಗೀತ, ಪವನ್ ಗೌಡ ಸಂಕಲನ, ಭೂಷಣ್ ಕೊರಿಯೋಗ್ರಫಿ ಸಿನಿಮಾಕ್ಕಿದೆ. ಬೇಲೂರು, ಮೂಡಿಗೆರೆ ಭಾಗದಲ್ಲಿ ಕಾಗದ ಸಿನಿಮಾದ ಚಿತ್ರೀಕರದ ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆದಿತ್ಯ ನಟನೆಯ ಹೊಸ ಸಿನಿಮಾಗೆ ರಂಜನಿ ರಾಘವನ್ ನಾಯಕಿ

    ಆದಿತ್ಯ ನಟನೆಯ ಹೊಸ ಸಿನಿಮಾಗೆ ರಂಜನಿ ರಾಘವನ್ ನಾಯಕಿ

    ಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ‘ಡೆಡ್ಲಿ ಸೋಮ’ ಖ್ಯಾತಿಯ ಆದಿತ್ಯ (Aditya) ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ‌‌. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕಿಶೋರ್ ಮೇಗಳಮನೆ (Kishor Megalamane) ಅವರೆ ಬರದಿದ್ದಾರೆ. ಕಿಶೋರ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

    ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಚಿಕ್ಕಮಗಳೂರು ಹಾಗೂ ಬೆಂಗಳೂರು ಸುತ್ತಮುತ್ತ ಹದಿನೇಳು ದಿನಗಳ ಚಿತ್ರೀಕರಣ ನಡೆದಿದೆ.  ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಫ್ಯಾಕ್ಟರಿ ಮಾಲೀಕರಾದ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ರಾಮಚಂದ್ರಯ್ಯ ಕೆ.ಜಿ ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ. ಇದನ್ನೂ ಓದಿ:ಜಗ್ಗೇಶ್ ಗೆ ಕನ್ನಡ ಪಾಠ ಮಾಡಿದ ನಾಗ್ತಿ ಮೇಷ್ಟ್ರು

    ಗಾಯಕರಾಗಿ ಹೆಸರು ಮಾಡಿರುವ ಶಶಾಂಕ್ ಶೇಷಗಿರಿ (Shashank Seshagiri) ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ನೂತನ ಚಿತ್ರಕ್ಕಿದೆ. ಆದಿತ್ಯ ಅವರಿಗೆ ನಾಯಕಿಯಾಗಿ ರಂಜನಿ ರಾಘವನ್ (Ranjani Raghavan) ನಟಿಸುತ್ತಿದ್ದಾರೆ.

    ಶಿವಮಣಿ(ನಿರ್ದೇಶಕ), ಅಶ್ವಿನ್ ಹಾಸನ್, ಕರಿಸುಬ್ಬು ಮುಂತಾದವರು ತಾರಾಬಳಗದಲ್ಲಿದ್ದಾರೆ. ಸದ್ಯದಲ್ಲೇ ಕನ್ನಡದ ಚಿತ್ರರಂಗದ ಖ್ಯಾತ ನಟರೊಬ್ಬರು ಚಿತ್ರದ ಶೀರ್ಷಿಕೆ ಅನಾವರಣ ಮಾಡಲಿದ್ದಾರೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

  • ಆದಿತ್ಯ ಹುಟ್ಟುಹಬ್ಬಕ್ಕೆ ‘ಟೆರರ್’ ಚಿತ್ರದ ಟೀಸರ್ ರಿಲೀಸ್

    ಆದಿತ್ಯ ಹುಟ್ಟುಹಬ್ಬಕ್ಕೆ ‘ಟೆರರ್’ ಚಿತ್ರದ ಟೀಸರ್ ರಿಲೀಸ್

    ನಟ ಆದಿತ್ಯ ಅಭಿನಯದ ‘ಟೆರರ್’ (Terror) ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ನಾಯಕ ಆದಿತ್ಯ (Aditya) ಅವರ ಹುಟ್ಟುಹಬ್ಬದ ಸಲುವಾಗಿ ಚಿತ್ರತಂಡ ವಿಶೇಷ ಟೀಸರ್ (Teaser) ಬಿಡುಗಡೆ ಮಾಡಿದೆ‌.  ನಿರ್ದೇಶಕ, ನಿರ್ಮಾಪಕ ಆರ್. ಚಂದ್ರು (R. Chandru) ಟೆರರ್ ಚಿತ್ರದ ಟೀಸರ್ ಬಿಡುಗಡೆಗೊಳಿಸಿದರು. ಟೆರರ್ ಸಿನಿಮಾದ ಹೆಸರಿನಲ್ಲೆ ಒಂದು ಫೈಯರ್ ಇದೆ. ಟೀಸರಿನಲ್ಲಿ ಕಾಣುವ ಪ್ರತಿಯೊಂದು ಸನ್ನಿವೇಶಗಳು ಗಮನ ಸೆಳೆಯುತ್ತದೆ. ಟೀಸರ್ ನಲ್ಲಿಯೇ ಟೆರರ್ ದೊಡ್ಡ ಹಿಟ್ ಆಗುವ ಲಕ್ಷಣಗಳು ಕಾಣುತ್ತಿದೆ ಎಂದು ಆರ್ ಚಂದ್ರು ಹಾರೈಸಿದರು.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ಮಾಪಕರಾದ ದೇವೇಂದ್ರ ರೆಡ್ಡಿ,  ರಮೇಶ್ ರೆಡ್ಡಿ, ಪ್ರಕಾಶ್, ಶ್ರೀನಗರ ಕಿಟ್ಟಿ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಆದಿತ್ಯ ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದರು. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಈ ಕಥೆ ಕೇಳಿದ ಕೂಡಲೇ ನಿರ್ಮಾಪಕ ಸಿಲ್ಕ್ ಮಂಜು ಈ ಸಿನಿಮಾ ಮಾಡಲು ಒಪ್ಪಿಕೊಂಡರು. ಅವರ ಸಹಕಾರದಿಂದಲೇ ಈ ಸಿನಿಮಾ ಮಾಡಲು ಸಾಧ್ಯವಾಗುತ್ತಿದೆ.  ಸಿನಿಮಾದಲ್ಲಿ ಆದಿತ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಶ್ರೀನಗರ ಕಿಟ್ಟಿ (Srinagar Kitty)ಕೂಡ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಕೋಟೆ ಪ್ರಭಾಕರ್, ಧರ್ಮ ಮೊದಲಾದವರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಶೇಕಡಾ 30 ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ ಎಂದು ನಿರ್ದೇಶಕ ರಂಜನ್ ಶಿವರಾಮ್ ಗೌಡ ಹೇಳಿದರು.

    ಕನ್ನಡ ಚಿತ್ರರಂಗಕ್ಕೆ ‘A’ ಎಂಬ ಉತ್ತಮ ಚಿತ್ರಕೊಟ್ಟ ನಿರ್ಮಾಪಕ ಸಿಲ್ಕ್ ಮಂಜು ಅವರ ನಿರ್ಮಾಣದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರಂಜನ್ ಅವರು ಹೇಳಿದ ಕಥೆ ಇಷ್ಟವಾಯಿತು. ನನ್ನ ಹುಟ್ಟುಹಬ್ಬಕ್ಕಾಗಿ ವಿಶೇಷ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡಕ್ಕೆ ಇಲ್ಲಿ ಆಗಮಿಸಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯವಾದ ಎಂದರು ನಾಯಕ ಆದಿತ್ಯ.  ‘ಎ’ ಸಿನಿಮಾ ಬಿಡುಗಡೆಯಾಗಿ 25 ವರ್ಷ ಆದ ಮೇಲೆ ಮತ್ತೊಂದು ನಿರೀಕ್ಷಿತ ಸಿನಿಮಾ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸಿಲ್ಕ್ ಮಂಜು.

  • ಡೆಡ್ಲಿ ಆದಿತ್ಯ ನಟನೆಯ ‘ಟೆರರ್’ ಸಿನಿಮಾಗೆ ಮುಹೂರ್ತ

    ಡೆಡ್ಲಿ ಆದಿತ್ಯ ನಟನೆಯ ‘ಟೆರರ್’ ಸಿನಿಮಾಗೆ ಮುಹೂರ್ತ

    ಸಿಲ್ಕ್ ಮಂಜು ನಿರ್ಮಿಸುತ್ತಿರುವ, ರಂಜನ್ ಶಿವರಾಮ ಗೌಡ (Ranjan Shivaram) ನಿರ್ದೇಶನದ ಹಾಗೂ ಆದಿತ್ಯ (Aditya) ನಾಯಕರಾಗಿ ನಟಿಸುತ್ತಿರುವ  ‘ಟೆರರ್’ (Terror) ಚಿತ್ರದ ಮುಹೂರ್ತ ಸಮಾರಂಭ  ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಿತು. ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ  ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಐ ಪಿ ಎಸ್ ಅಧಿಕಾರಿ ರವಿಕಾಂತೇಗೌಡ ಅವರು ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು, ಲಹರಿ ವೇಲು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.  ಇದನ್ನೂ ಓದಿ: ಬಂಗಾರದ ಬೆಳೆ ತೆಗೆದ `ಪಠಾಣ್’ ಚಿತ್ರಕ್ಕೆ ಕಂಗನಾ ರಣಾವತ್ ಮೆಚ್ಚುಗೆ

    ನನ್ನ ಮೊದಲ ನಿರ್ದೇಶನದ ಚಿತ್ರ. ಹೊಸ ಮಾಫಿಯಾ ಸುತ್ತ ಕಥೆ ಇದೆ. ಆದಿತ್ಯ ಅವರಿಗೆ ಕಥೆ ಇಷ್ಟವಾಯಿತು. ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯುತ್ತದೆ. ಸಿಲ್ಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನೀಡಲಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಸಂಕಲನ ನಮ್ಮ ಚಿತ್ರಕ್ಕಿದೆ. ಧರ್ಮ, ಪ್ರಮೋದ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ನಿರ್ದೇಶಕ ರಂಜನ್ ಶಿವರಾಮ ಗೌಡ ತಿಳಿಸಿದರು. ನಮ್ಮ ‘A’ ಚಿತ್ರ ಬಿಡುಗಡೆಯಾಗಿ ಇಂದಿಗೆ ಸರಿಯಾಗಿ ಇಪ್ಪತ್ತೈದು ವರ್ಷಗಳಾಯಿತು. ಹಾಗಾಗಿ ಇಂದು “ಟೆರರ್” ಚಿತ್ರ ಆರಂಭಿಸಿದ್ದೇವೆ.  ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ ಎಂದರು ನಿರ್ಮಾಪಕ ಸಿಲ್ಕ್ ಮಂಜು.

    ನಟ ಧರ್ಮ ಅವರ ಮೂಲಕ ರಂಜನ್ ಅವರ ಪರಿಚಯವಾಯಿತು. ಅವರು ಹೇಳಿದ ಕಥೆ ಬಹಳ ಹಿಡಿಸಿತು.  ಈ ಚಿತ್ರದಲ್ಲಿ ಎರಡು ಶೇಡ್ ಗಳಲ್ಲಿರುತ್ತದೆ. ಪಾತ್ರ ಬಹಳ ಸ್ಟೈಲಿಶ್ ಆಗಿರುತ್ತದೆ. ಯಂಗ್ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು ನಾಯಕ ಆದಿತ್ಯ. ಅತಿಥಿಗಳಾಗಿ ಆಗಮಿಸಿದ್ದ ಲಹರಿ ವೇಲು, ಜೇಡ್ರಳ್ಳಿ ಕೃಷ್ಣಪ್ಪ ಮುಂತಾದ ಗಣ್ಯರು, ಚಿತ್ರದಲ್ಲಿ ನಟಿಸಿರುವ  ನಟ ಧರ್ಮ, ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್, ಛಾಯಾಗ್ರಾಹಕ ಕಾರ್ತಿಕ್ ಶರ್ಮ ಮುಂತಾದವರು ‘ಟೆರರ್’ ಬಗ್ಗೆ ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆದಿತ್ಯ ನಟನೆಯ ‘ಟೆರರ್’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಆದಿತ್ಯ ನಟನೆಯ ‘ಟೆರರ್’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ಆದಿತ್ಯ (Aditya) ನಾಯಕರಾಗಿ ನಟಿಸುತ್ತಿರುವ “ಟೆರರ್” (Terror) ಚಿತ್ರದ ಫಸ್ಟ್ ಲುಕ್ (First Look) ಹಾಗೂ ಕ್ಯಾರೆಕ್ಟರ್ ಟೀಸರ್ ಲಹರಿ ಮ್ಯೂಸಿಕ್ ಯೂಟ್ಯೂಬ್ ಮೂಲಕ ಬಿಡುಗಡೆಯಾಗಿದೆ. ಜನವರಿಯಲ್ಲಿ ಚಿತ್ರಕ್ಕೆ ಮುಹೂರ್ತ ನಡೆಯಲಿದೆ. ಈ ಚಿತ್ರದ ಫಸ್ಟ್ ಲುಕ್  ಅದ್ದೂರಿಯಾಗಿ ಬಂದಿದ್ದು, ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ.

    ಉಪೇಂದ್ರ ಅಭಿನಯದ “A” ಚಿತ್ರ ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಸಿಲ್ಕ್ ಮಂಜು ಈ ಚಿತ್ರವನ್ನು‌ ನಿರ್ಮಾಣ ಮಾಡುತ್ತಿದ್ದಾರೆ. ರಂಜನ್ ಶಿವರಾಮ ಗೌಡ (Ranjan Sivarama Gowda) ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ರಂಜನ್ ಅವರದೆ.

    ಇದೇ ಮೊದಲ ಬಾರಿಗೆ ಆದಿತ್ಯ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ. ಆದಿತ್ಯ ಅವರು ಈ ಹಿಂದೆ ಅಭಿನಯಿಸಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ

    ಈತನಕ ಯಾರು ಮಾಡಿರದ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಹೇಳಬಹುದು. ಆದಿತ್ಯ ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ದಕ್ಷಿಣ ಭಾರತದ ಸುಪ್ರಸಿದ್ಧ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವುದಾಗಿ ನಿರ್ದೇಶಕ ರಂಜನ್ ಶಿವರಾಮ ಗೌಡ ತಿಳಿಸಿದ್ದಾರೆ.  ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಹರ್ಷವರ್ಧನ್ ರಾಜ್ ಸಂಗೀತ ನೀಡಲಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಕನಲ್ ಕಣ್ಣನ್ ಅವರ ಸಾಹಸ ನಿರ್ದೇಶನ “ಟೆರರ್” ಚಿತ್ರಕ್ಕಿರಲಿದೆ.

    Live Tv
    [brid partner=56869869 player=32851 video=960834 autoplay=true]