Tag: Aditya

  • ಸಿನಿಮಾಗಾಗಿ ಕಂಬಳದ ಕೋಣ ಓಡಿಸಿದ ರಿಯಲ್ ಹೀರೋ ಶ್ರೀನಿವಾಸ್ ಗೌಡ

    ಸಿನಿಮಾಗಾಗಿ ಕಂಬಳದ ಕೋಣ ಓಡಿಸಿದ ರಿಯಲ್ ಹೀರೋ ಶ್ರೀನಿವಾಸ್ ಗೌಡ

    ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು “ವೀರ ಕಂಬಳ” ಎಂಬ ಚಿತ್ರವನ್ನು ಖ್ಯಾತ  ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾಗಿರುವ ಶ್ರೀನಿವಾಸ ಗೌಡ ಹಾಗೂ ನಾಟಕ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈವರೆಗೂ ರಿಯಲ್ ಆಗಿ ಕಂಬಳದ ಕೋಣ ಓಡಿಸುತ್ತಿದ್ದ ಶ್ರೀನಿವಾಸ್ ಗೌಡ ಇದೇ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ. ದನ್ನೂ ಓದಿ : ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಈ ಸಿನಿಮಾದಲ್ಲಿ ವಿಶೇಷಪಾತ್ರದಲ್ಲಿ ಆದಿತ್ಯ ನಟಿಸುತ್ತಿದ್ದರೆ, ‌ರಾಧಿಕಾ ಚೇತನ್ ಪೊಲೀಸ್ ಕಮಿಷನರ್ ಆಗಿ ಕಾಣಿಸಿಕೊಂಡಿದ್ದಾರೆ. ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜುರು ಸೇರಿದಂತೆ ಪ್ರಸಿದ್ದ ತುಳು ನಟರು ಈ ಚಿತ್ರದಲ್ಲಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿದಿದೆ. ಸ್ವಲ್ಪ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ಅಭಿನಯಿಸಲು ಚಿತ್ರತಂಡ ಕೇಳಿದೆಯಂತೆ. ಅವರು ಒಪ್ಪಿಗೆ ನೀಡಿದ್ದಾರೆ. ಸದ್ಯದಲ್ಲೇ ಅವರ ಭಾಗ ಶೂಟಿಂಗ್ ಕೂಡ ಮುಗಿಯಲಿದೆ ಎಂದಿದೆ ಸಿನಿಮಾತಂಡ.

    ಈ ಚಿತ್ರಕ್ಕೆ ದೇಸಿ ಸಂಗೀತ ಬೇಕಿತ್ತು. ಹಾಗಾಗಿ ಅಲ್ಲಿನ ಬಗ್ಗೆ ತಿಳಿದಿರುವ ಮಣಿಕಾಂತ್ ಕದ್ರಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಗಿರಿ ಈ ಚಿತ್ರದ ಛಾಯಾಗ್ರಾಹಕರು. ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ತೆಲುಗು, ತಮಿಳು , ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಿಗೆ ಡಬ್ ಆಗಲಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಗೆ ಸಿದ್ದತೆ ನಡೆಯುತ್ತಿದೆ. ವಿದೇಶಗಳಲ್ಲಿ ಪ್ರೀಮಿಯರ್ ಶೋ ನಡೆಸುವ ಯೋಜನೆಯಿದೆ ಎಂದು “ವೀರ ಕಂಬಳ” ದ ಬಗ್ಗೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ : ತಮಿಳು ಖ್ಯಾತ ನಟ ಸಿಂಬು ಮನೆಮುಂದೆ ಹೈಡ್ರಾಮಾ, ಸೀರಿಯಲ್ ನಟಿ ಧರಣಿ

    ಈ ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡಿರುವ ಆದಿತ್ಯ ಮಾತನಾಡಿ, “ನನಗೆ ತುಳು ಚಿತ್ರದಲ್ಲಿ ಅಭಿನಯಿಸುವ ಆಸೆ ಮುಂಚಿನಿಂದಲೂ ಇತ್ತು. ಏಕೆಂದರೆ ನನ್ನ ಅಜ್ಜಿ ಹಾಗೂ ಅಮ್ಮ ಇಬ್ಬರೂ ದಕ್ಷಿಣ ಕನ್ನಡದವರು. ನಾನು ಚಿತ್ರದಲ್ಲಿ ಅಭಿನಯಿಸುವ ವಿಷಯ ನನಗೆ ಗೊತ್ತಿರಲಿಲ್ಲ. ನಿರ್ಮಾಪಕರು ಈ ರೀತಿ ಪಾತ್ರವಿದೆ. ನೀವು ಮಾಡಬೇಕೆಂದರು. ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನಾನು ಮೊದಲ‌ ದಿನ‌ ಚಿತ್ರೀಕರಣಕ್ಕೆ ಸಿದ್ದವಾಗಿ ಬಂದಾಗ ಅಲ್ಲಿದವರೆಲ್ಲ ನನ್ನ ನೋಡಿ ಆಶ್ಚರ್ಯಪಟ್ಟರು. ಚಿತ್ರ ಬಿಡುಗಡೆಯಾದಾಗ ನನ್ನ ಪಾತ್ರದ ಬಗ್ಗೆ ನಿಮಗೂ ತಿಳಿಯಬಹುದು” ಎಂದಿದ್ದಾರೆ.

  • ಕಂಬಳ ಕುರಿತಾಗಿ ಕನ್ನಡದಲ್ಲಿ ಮತ್ತೊಂದು ಸಿನಿಮಾ: ಒಂದಕ್ಕೆ ರಿಷಭ್ ಮತ್ತೊಂದಕ್ಕೆ ರಾಜೇಂದ್ರ ಸಿಂಗ್ ಬಾಬು ಡೈರೆಕ್ಟರ್

    ಕಂಬಳ ಕುರಿತಾಗಿ ಕನ್ನಡದಲ್ಲಿ ಮತ್ತೊಂದು ಸಿನಿಮಾ: ಒಂದಕ್ಕೆ ರಿಷಭ್ ಮತ್ತೊಂದಕ್ಕೆ ರಾಜೇಂದ್ರ ಸಿಂಗ್ ಬಾಬು ಡೈರೆಕ್ಟರ್

    ಗಾಗಲೇ ರಿಷಭ್ ಶೆಟ್ಟಿ ನಿರ್ದೇಶನದಲ್ಲಿ ‘ಕಾಂತಾರ’ ಹೆಸರಿನ ಸಿನಿಮಾವೊಂದು ಸೆಟ್ಟೇರಿದೆ. ಈ ಚಿತ್ರದಲ್ಲಿ ಕಂಬಳ ಕುರಿತಾಗಿಯೂ ಕಥೆಯಿದೆ. ಅಲ್ಲದೇ, ಇದೀಗ ಕಂಬಳ ಕುರಿತಾಗಿ ಮತ್ತೊಂದು ಸಿನಿಮಾ ಸೆಟ್ಟೇರುತ್ತಿದ್ದು,  ವೀರ ಕಂಬಳ ಹೆಸರಿನ ಈ ಸಿನಿಮಾವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡುತ್ತಿದ್ದಾರೆ. ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು “ವೀರ ಕಂಬಳ” ಎಂಬ ಚಿತ್ರವನ್ನು ಖ್ಯಾತ  ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಕುರಿತು ಚಿತ್ರತಂಡ ಮಾಧ್ಯಮದ ಮುಂದೆ ಮಾಹಿತಿ ಹಂಚಿಕೊಂಡದ್ದು ಹೀಗೆ‌. ಇದನ್ನೂ ಓದಿ : 17 ವರ್ಷ ಲವ್, 2 ಮಕ್ಕಳಾದ ನಂತರ ಮದುವೆಯಾದ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್

    ನಾನು ಜನಪ್ರಿಯ ವಾರಪತ್ರಿಕೆಯೊಂದರಲ್ಲಿ “ಕಂಬಳ’ದ ಕುರಿತು ಬರುತ್ತಿದ್ದ ಬರಹಗಳನ್ನು ಓದುತ್ತಿದ್ದೆ. ಆ ವಾರಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗ್ಗೆ ಇದ್ದ ಸಾಕಷ್ಟು ಆರ್ಟಿಕಲ್ ಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧಾರ ಮಾಡಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಭೇಟಿ ಮಾಡಿದೆ. ಅವರಿಂದ ಕಂಬಳದ ಬಗ್ಗೆ ಸಾಕಷ್ಟು ಮಾಹಿತಿ ದೊರಕಿತು. ಅರುಣ್ ರೈ ತೋಡಾರ್ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ಮೂಡುಬಿದಿರೆ ಬಳಿ ಇದಕ್ಕಾಗಿ ದೊಡ್ಡ ಕಂಬಳದ ಮೈದಾನ ಸಿದ್ದವಾಯಿತು. ಇಪ್ಪತ್ತು ಜೊತೆ ಕೋಣ. ಒಂದು ಕೋಣ ನೋಡಿಕೊಳ್ಳಲು ನಾಲ್ಕು ಜನ. ಸಹ ಕಲಾವಿದರು ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಜನ ಒಂದು ದಿನದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದರು. ಕೋಣಗಳ ಮೂಡ್ ಒಂದೇ ತರಹ ಇರುವುದಿಲ್ಲ. ಅದನೆಲ್ಲಾ ನೋಡಿಕೊಂಡು ಚಿತ್ರೀಕರಣ ಮಾಡಬೇಕಿತ್ತು. ಒಂದು ಸಲ ಓಟದ ಶಾಟ್ ತೆಗೆದರೆ, ಸುಮಾರು ಒಂದು ಗಂಟೆ ವಿಶ್ರಾಂತಿ. ನಂತರ ಚಿತ್ರೀಕರಣ.  ಈ ಚಿತ್ರಕ್ಕೆ ಕಥೆಯೇ ಹೀರೋ. ಇದನ್ನೂ ಓದಿ : ಧನುಶ್ ನಟನೆಯ ಹಾಲಿವುಡ್ ಸಿನಿಮಾದ ಟ್ರೇಲರ್ ರಿಲೀಸ್ : ಎಲ್ಲಿದ್ದಾರೆ ಧನುಶ್?

    ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾಗಿರುವ ಶ್ರೀನಿವಾಸ ಗೌಡ ಹಾಗೂ ನಾಟಕ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷಪಾತ್ರದಲ್ಲಿ ಆದಿತ್ಯ ಅಭಿನಯಿಸಿದ್ದಾರೆ. ‌ರಾಧಿಕಾ ಚೇತನ್ ಪೊಲೀಸ್ ಕಮಿಷನರ್ ಆಗಿ ಕಾಣಿಸಿಕೊಂಡಿದ್ದಾರೆ. ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜುರು ಸೇರಿದಂತೆ ಪ್ರಸಿದ್ದ ತುಳು ನಟರು ಈ ಚಿತ್ರದಲ್ಲಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿದಿದೆ. ಸ್ವಲ್ಪ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ಅಭಿನಯಿಸಲು ಕೇಳಿದ್ದೇವೆ. ಅವರು ಒಪ್ಪಿಗೆ ನೀಡಿದ್ದಾರೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ “ವೀರ ಕಂಬಳ” ನಿಮ್ಮ ಮುಂದೆ ಬರಲಿದೆ.  ಈ ಚಿತ್ರಕ್ಕೆ ದೇಸಿ ಸಂಗೀತ ಬೇಕಿತ್ತು. ಹಾಗಾಗಿ ಅಲ್ಲಿನ ಬಗ್ಗೆ ತಿಳಿದಿರುವ ಮಣಿಕಾಂತ್ ಕದ್ರಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಗಿರಿ ಈ ಚಿತ್ರದ ಛಾಯಾಗ್ರಾಹಕರು. ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ತೆಲುಗು, ತಮಿಳು , ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಿಗೆ ಡಬ್ ಆಗಲಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಗೆ ಸಿದ್ದತೆ ನಡೆಯುತ್ತಿದೆ. ವಿದೇಶಗಳಲ್ಲಿ ಪ್ರೀಮಿಯರ್ ಶೋ ನಡೆಸುವ ಯೋಜನೆಯಿದೆ ಎಂದು “ವೀರ ಕಂಬಳ” ದ ಬಗ್ಗೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮಾಹಿತಿ ನೀಡಿದರು. ನಂತರ ವಿಶ್ವದಾದ್ಯಂತ ಜಯಭೇರಿ ಬಾರಿಸುತ್ತಿರುವ “ಕೆ ಜಿ ಎಫ್ ೨” ಚಿತ್ರತಂಡಕ್ಕೆ ಶುಭ ಕೋರಿದ ರಾಜೇಂದ್ರ ಸಿಂಗ್ ಬಾಬು, ಮುಂದೆ ನಾನು ಸಹ ದರ್ಶನ್ ಅವರ  ಅಭಿನಯದಲ್ಲಿ ಅದ್ದೂರಿ ಚಿತ್ರವೊಂದನ್ನು ನಿರ್ದೇಶನ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ : ಕನ್ನಡದ ಖ್ಯಾತ ನಟಿಯೊಬ್ಬಳು ನಿರ್ದೇಶಕನನ್ನೇ ಮಂಚಕ್ಕೆ ಕರೆದ ಕಥೆಗೆ ಮೆಗಾ ಟ್ವಿಸ್ಟ್

    ನನಗೆ ತುಳು ಚಿತ್ರದಲ್ಲಿ ಅಭಿನಯಿಸುವ ಆಸೆ ಮುಂಚಿನಿಂದಲೂ ಇತ್ತು. ಏಕೆಂದರೆ ನನ್ನ ಅಜ್ಜಿ ಹಾಗೂ ಅಮ್ಮ ಇಬ್ಬರೂ ದಕ್ಷಿಣ ಕನ್ನಡದವರು. ನಾನು ಚಿತ್ರದಲ್ಲಿ ಅಭಿನಯಿಸುವ ವಿಷಯ ನನಗೆ ಗೊತ್ತಿರಲಿಲ್ಲ. ನಿರ್ಮಾಪಕರು ಈ ರೀತಿ ಪಾತ್ರವಿದೆ. ನೀವು ಮಾಡಬೇಕೆಂದರು. ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನಾನು ಮೊದಲ‌ ದಿನ‌ ಚಿತ್ರೀಕರಣಕ್ಕೆ ಸಿದ್ದವಾಗಿ ಬಂದಾಗ ಅಲ್ಲಿದವರೆಲ್ಲ ನನ್ನ ನೋಡಿ ಆಶ್ಚರ್ಯಪಟ್ಟರು. ಚಿತ್ರ ಬಿಡುಗಡೆಯಾದಾಗ ನನ್ನ ಪಾತ್ರದ ಬಗ್ಗೆ ನಿಮಗೂ ತಿಳಿಯಬಹುದು ಎಂದರು ನಟ ಆದಿತ್ಯ. ಎಷ್ಟೋ ಜನಕ್ಕೆ ನಾನು ತುಳುನಾಡಿನವಳೆಂದು ತಿಳಿದಿಲ್ಲ. ನನ್ನ ಮಾತೃ ಭಾಷೆ ಕೂಡ ತುಳು. ಈ ಚಿತ್ರದಲ್ಲಿ ಅಭಿನಯಿಸಲು ಅವಕಾಶ ಕೊಟ್ಟ ನಿರ್ದೇಶಕರಿಗೆ ವಂದನೆಗಳು. ಪೊಲೀಸ್ ಕಮಿಷನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ ಎಂದರು ನಟಿ ರಾಧಿಕಾ ಚೇತನ್.

    ನಮ್ಮ ಊರಿನಲ್ಲಿ ನಡೆಯುವ ಕಂಬಳಕ್ಕೆ ರಾಜೇಂದ್ರ ಸಿಂಗ್ ಬಾಬು ಅವರನ್ನು ಆಹ್ವಾನಿಸಲು ಕಂಬಳದ ಅಧ್ಯಕ್ಷರು ಹೇಳಿದರು. ಬಾಬು ಸರ್ ನಮ್ಮ ಊರಿಗೆ ಬಂದರು. ಅಲ್ಲಿ ಈ ಚಿತ್ರದ ಮಾತುಕತೆಯಾಗಿ, ಚಿತ್ರ ಆರಂಭವಾಯಿತು. ನಾನು ರಾಜೇಂದ್ರ ಸಿಂಗ್ ಬಾಬು ಅವರ ದೊಡ್ಡ ಅಭಿಮಾನಿ. ಅವರು ನಮ್ಮ ಚಿತ್ರ ನಿರ್ದೇಶನ ಮಾಡುತ್ತಿರುವುದು ಸಂತೋಷ ತಂದಿದೆ ಎಂದರು ನಿರ್ಮಾಪಕ ಅರುಣ್ ರೈ ತೋಡಾರ್. ಇದನ್ನೂ ಓದಿ : ನಿಮ್ಮ ಬಾಡಿಯನ್ನು ನೀವೇ ಲವ್ ಮಾಡಬೇಕು : ರಾಗಿಣಿ

    ನಾನು ಮೂಲತಃ ರಂಗಭೂಮಿಯವನು. ತುಳು ಭಾಷೆಯ ಸಾಕಷ್ಟು ನಾಟಕಗಳಿಗೆ ಸಂಭಾಷಣೆ ಬರೆದಿದ್ದೇನೆ. ರಾಜೇಂದ್ರ ಸಿಂಗ್ ಬಾಬು ಅವರು ನನ್ನನ್ನು ಭೇಟಿಯಾಗಿ ಈ ಚಿತ್ರಕ್ಕೆ ತುಳು ಹಾಗೂ ಕನ್ನಡದಲ್ಲಿ ಸಂಭಾಷಣೆ ಬರೆಯಲು ಹೇಳಿದರು. ಈವರೆಗೂ ನಾನು ಕನ್ನಡ ಚಿತ್ರಕ್ಕೆ ಸಂಭಾಷಣೆ ಬರೆದಿರಲಿಲ್ಲ. ಇದೇ ಮೊದಲು. ಕನ್ನಡ ಚಿತ್ರರಂಗಕ್ಕೆ ಇದು ದೊಡ್ಡ ಚಿತ್ರವಾಗುತ್ತದೆ. ತುಳು ಭಾಷೆಯಲಂತೂ ಪ್ರಚಂಡ ಯಶಸ್ಸು ಕಾಣಲಿದೆ ಎಂದು  ಚಿತ್ರಕಥೆ , ಸಂಭಾಷಣೆ ಬರೆದಿರುವ ವಿಜಯ್ ಕುಮಾರ್ ಕಿಡಿಯಾಲ್ ಬೈಲ್ ತಿಳಿಸಿದರು. ಚಿತ್ರದಲ್ಲಿ ಅಭಿನಯಿಸಿರುವ ಶ್ರೀನಿವಾಸ ಗೌಡ ,  ಸ್ವರಾಜ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ “ವೀರ ಕಂಬಳ” ದ ಕುರಿತು ಮಾತನಾಡಿದರು. ಇದನ್ನೂ ಓದಿ : ಸದ್ದಿಲ್ಲದೇ ಶುರುವಾಯ್ತು ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ : ಮೊದಲ ದಿನವೇ ಫೋಟೋ ಲೀಕ್

    ಎ.ಆರ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ ಎಸ್ .ವಿ .ರಾಜೇಂದ್ರ ಸಿಂಗ್ ಬಾಬು. ಅರ್ ಗಿರಿ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ಆರ್ ಬಾಬು ಸಂಕಲನವಿರುವ ಈ ಚಿತ್ರಕ್ಕೆ ವಿಜಯ್ ಕುಮಾರ್ ಕಿಡಿಯಾಲ್ ಬೈಲ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ರಾಜೇಶ್ ಕುಡ್ಲ ಅವರ ನಿರ್ಮಾಣ ನಿರ್ವಹಣೆ “ವೀರ ಕಂಬಳ” ಚಿತ್ರಕ್ಕಿದೆ. ಆದಿತ್ಯ, ರಾಧಿಕಾ ಚೇತನ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜೂರು, ಮೈಮ್ ರಮೇಶ್, ರಾಜಶೇಖರ ಕೋಟ್ಯಾನ್, ಉಷಾ ಭಂಡಾರಿ, ಶ್ರೀನಿವಾಸ ಗೌಡ, ಸ್ವರಾಜ್ ಶೆಟ್ಟಿ, ವೀಣಾ ಪೊನ್ನಪ್ಪ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

  • ಮೊದಲ ನಿರ್ದೇಶನದಲ್ಲಿ ಗೆದ್ದ ನಿರ್ದೇಶಕ ಬಾಲು ಚಂದ್ರಶೇಖರ್

    ಮೊದಲ ನಿರ್ದೇಶನದಲ್ಲಿ ಗೆದ್ದ ನಿರ್ದೇಶಕ ಬಾಲು ಚಂದ್ರಶೇಖರ್

    – ಥಿಯೇಟರ್‌ನಲ್ಲಿ ಮ್ಯಾಜಿಕ್ ಮಾಡ್ತಿದೆ ‘ಮುಂದುವರೆದ ಅಧ್ಯಾಯ’ ಸಿನಿಮಾ

    ಬೆಂಗಳೂರು: ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ ನಟನೆಯ, ಯುವ ನಿರ್ದೇಶಕ ಬಾಲು ಚಂದ್ರಶೇಖರ್ ಆ್ಯಕ್ಷನ್ ಕಟ್ ಹೇಳಿರುವ ಮುಂದುವರೆದ ಅಧ್ಯಾಯ ಸಿನಿಮಾ ಬೆಳ್ಳಿಪರದೆಯ ಮೇಲೆ ರಾರಾಜಿಸುತ್ತಿದೆ. ಆಫ್ಟರ್ ಲಾಂಗ್ ಗ್ಯಾಪ್ ಬಳಿಕ ಮತ್ತೆ ಬಣ್ಣ ಹೆಚ್ಚಿದ್ದ ಆದಿತ್ಯರ ಸಿನಿಮಾಕ್ಕೆ ಪ್ರೇಕ್ಷಕ ಜೈಕಾರ ಹಾಕಿದ್ದಾನೆ. ಈ ವಾರ ರಾಜ್ಯಾದ್ಯಂತ ರಿಲೀಸ್ ಆಗಿರುವ ಮುಂದುವರೆದ ಅಧ್ಯಾಯ ಸಿನಿಮಾಕ್ಕೆ ಸಖತ್ ರೆಸ್ಪಾನ್ಸ್ ಸಿಗುತ್ತಿದ್ದು, ಒಳ್ಳೆ ಕಥೆ ಇರುವ ಸಿನಿಮಾ ನೋಡಿ ಪ್ರೇಕ್ಷಕ ಪ್ರಭು ನೂರು ಮಾಕ್ರ್ಸ್ ಕೊಟ್ಟಿದ್ದಾರೆ.

    ಮೊದಲ ನಿರ್ದೇಶನದಲ್ಲಿ ಗೆಲುವು
    ನಿರ್ದೇಶಕನಾಗಬೇಕು ಎಂಬ ಕನಸು ಹೊತ್ತು ಮುಂದುವರೆದ ಅಧ್ಯಾಯ ಸಿನಿಮಾದ ಮೂಲಕ ನಿರ್ದೇಶನಕ್ಕಿಳಿದಿದ್ದ ಯುವ ನಿರ್ದೇಶಕ ಬಾಲು ಚಂದ್ರಶೇಖರ್ ಮೊದಲ ಡೈರೆಕ್ಷನ್ ನಲ್ಲಿಯೇ ಗೆದ್ದಿದ್ದಾರೆ. ಕಾಡುವ ಕಥೆ… ಅದರ ಸುತ್ತ ಹೆಣೆದ ಪಾತ್ರಗಳು.. ಯಾವುದನ್ನು ಎಷ್ಟು ಬೇಕು..ಅಷ್ಟೇ ವೈಭವೀಕರಿಸಿ ಸಿನಿಮಾ ಮಾಡಿರುವ ಬಾಲು ತಂತ್ರಗಾರಿಕೆಯನ್ನು ಸಿನಿಮಾ ಮಂದಿ ಮೆಚ್ಚುಕೊಂಡಿದ್ದಾರೆ.

    ಒಂದು ಸಾವು.. ಆ ಸಾವಿನ ಜಾಡು ಹಿಡಿದು ಹೊರಡುವ ಪೊಲೀಸ್ ಅಧಿಕಾರಿ… ಮತ್ತಿತರ ಪಾತ್ರಗಳು ಪ್ರೇಕ್ಷಕರನ್ನು ಸೀಟಿನ ತುದಿಗೆ ಕುರುವಂತೆ ಮಾಡಿದೆ ಮುಂದುವರೆದ ಅಧ್ಯಾಯ. ಇಂತಹ ತನಿಖೆ ಕಥೆ ನೋಡೋದಿಕ್ಕೆ ಸಿನಿಮಂದಿ ಮುಗಿಬೀಳ್ತಿದ್ದಾರೆ. ಸಿನಿಮಾ ನೋಡಿ ಕಥೆ ಇಷ್ಟಪಡ್ತಿದ್ದಾರೆ.

    ಜಾನಿ – ನಿತಿನ್ ಮ್ಯೂಸಿಕ್, ಅನೂಪ್ ಸೀಳಿನ್ ಬ್ಯಾಗ್ ಗ್ರೌಂಡ್ ಮ್ಯೂಸಿಕ್ ಪ್ರೇಕ್ಷಕರನ್ನು ಕಾಡಿದ್ರೆ, ದಿಲೀಪ್ ಚಕ್ರವರ್ತಿ ಕ್ಯಾಮೆರಾ ವರ್ಕ್ ಅದ್ಭುತವಾಗಿ ಮೂಡಿ ಬಂದಿದೆ. ಉಳಿದಂತೆ ಆಶಿಕ ಸೋಮಶೇಖರ್, ಜೈಜಗದೀಶ್, ಮುಖ್ಯಮಂತ್ರಿ ಚಂದ್ರು, ಅಜಯ್ ರಾಜ್, ವಿನಯ್ ಕೃಷ್ಣಸ್ವಾಮಿ, ಸಂದೀಪ್ ಕುಮಾರ್, ಚಂದನ ಗೌಡ ಮುಂತಾದ ಪಾತ್ರಗಳು ಕೊನೆ ತನಕ ಕಾಡುತ್ತವೆ. ಕಣಜ ಎಂಟರ್ ಪ್ರೈಸಸ್ ಲಾಂಛನ ದಡಿಯಲ್ಲಿ ಮುಂದುವರೆದ ಅಧ್ಯಾಯ ಸಿನಿಮಾ ನಿರ್ಮಾಣವಾಗಿದೆ.

  • ಇದು ಡೆಡ್ಲಿ ಸೋಮನ ‘ಹೊಸ ಅಧ್ಯಾಯ’ – ‘ಮುಂದುವರೆದ ಅಧ್ಯಾಯ’ದ ಮೂಲಕ ಮತ್ತೆ ಬಂದ್ರು ಆದಿತ್ಯ

    ಇದು ಡೆಡ್ಲಿ ಸೋಮನ ‘ಹೊಸ ಅಧ್ಯಾಯ’ – ‘ಮುಂದುವರೆದ ಅಧ್ಯಾಯ’ದ ಮೂಲಕ ಮತ್ತೆ ಬಂದ್ರು ಆದಿತ್ಯ

    – ಭಾರೀ ಕುತೂಹಲ ಮೂಡಿಸಿದ ಸಿನಿಮಾದ ಟ್ರೇಲರ್

    ಮಾಸ್ ಅಂಡ್ ಕ್ಲಾಸ್ ಸಿನಿಮಾಗಳ ಮೂಲಕ ತೆರೆಮೇಲೆ ಅಬ್ಬರಿಸಿದ್ದ ಡೆಡ್ಲಿ ಸೋಮ ಖ್ಯಾತಿಯ ನಟ ಆದಿತ್ಯ ‘ಮುಂದುವರೆದ ಅಧ್ಯಾಯ’ ಸಿನಿಮಾದ ಮೂಲಕ ಮತ್ತೆ ಕಂ ಬ್ಯಾಕ್ ಮಾಡ್ತಿದ್ದಾರೆ. ಹಾಗಂತ ಈ ಬಾರಿ ಅವರು ಕೈಯಲ್ಲಿ ಲಾಂಗ್ ಹಿಡಿದಿಲ್ಲ. ಬದಲಾಗಿ ಸ್ಪೆಷಲ್ ಇನ್ವಿಸ್ಟಿಗೇಷನ್ ಆಫೀಸ್ ಆಗಿ ಬೆಳ್ಳಿಪರದೆ ಪ್ರವೇಶಿಸಲು ರೆಡಿಯಾಗಿದ್ದಾರೆ.

    ಈಗಾಗ್ಲೇ ರಿಲೀಸ್ ಆಗಿರುವ ಸಿನಿಮಾದ ಪೋಸ್ಟರ್, ಟೀಸರ್, ಡೈಲಾಗ್ ಟೀಸರ್ ಗೆ ಸಖತ್ ರೆಸ್ಪಾನ್ಸ್ ಸಿಕ್ಕಿದ್ದು, ಇದೀಗ ಹೊರ ಬಂದಿರುವ ಟ್ರೇಲರ್ ನಿರೀಕ್ಷೆಗೂ ಮೀರಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಒಂದು ಕೊಲೆ.. ಕೊಲೆ ಸುತ್ತ ನಡೆಯುವ ಘಟನೆ.. ಆಗಾಗ ಬರುವ ಡೈಲಾಗ್.. ಪಾತ್ರ ವರ್ಗ ಬ್ಯಾಗ್ ಗ್ರೌಂಡ್ ಮ್ಯೂಸಿಕ್.. ವಿಷ್ಯುವಲ್ಸ್ ಎಫೆಕ್ಟ್ ಎಲ್ಲವೂ ಟ್ರೇಲರ್ ನಲ್ಲಿ ಅದ್ಭುತವಾಗಿ ಕಟ್ಟಿಕೊಡಲಾಗಿದೆ.

    ಆ್ಯಕ್ಷನ್, ಮಾಸ್, ಸಸ್ಪೆನ್ಸ್ ಎಲ್ಲ ಅಂಶಗಳ ಹೂರಣವಾಗಿರುವ ಮುಂದುವರೆದ ಅಧ್ಯಾಯ ಸಿನಿಮಾದ ಮೂಲಕ ಡೈರೆಕ್ಟರ್ ಬಾಲು ಚಂದ್ರಶೇಖರ್, ಸಮಾಜದಲ್ಲಿ ಭೂಗತ ಚಟುವಟಿಕೆ, ರೌಡಿಸಂಗಳಿಗೆ ಕೊನೆ ಎಂಬುದೇ ಇಲ್ಲ. ಆದರೆ ಜನ ಬದಲಾಗಬೇಕಿದೆ. ನಾವೆಲ್ಲ ಬದಲಾದರೆ ಸಮಾಜದಲ್ಲಿ ಖಂಡಿತ ಬದಲಾವಣೆ ಸಾಧ್ಯ ಎಂಬುದನ್ನು ಹೇಳಲು ಹೊರಟ್ಟಿದ್ದಾರೆ.

    ಅಂದಹಾಗೇ ಬಾಲು ಚಂದ್ರಶೇಖರ್ ಈ ಸಿನಿಮಾದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದು, ಸಿನಿಮಾ ನಿರ್ದೇಶನದ ಜೊತೆ ಕಥೆ, ಚಿತ್ರಕಥೆ ಹಾಗೂ ಒಂದು ಹಾಡನ್ನು ಬರೆದಿದ್ದಾರೆ. ಉಳಿದಂತೆ ಸಿನಿಮಾದಲ್ಲಿ ಎಂಎಲ್‍ಎ ಪಾತ್ರದಲ್ಲಿ ವಿನಯ್ ಕೃಷ್ಣಸ್ವಾಮಿ, ಪೊಲೀಸ್ ಪಾತ್ರದಲ್ಲಿ ವಿನೋದ್, ಪತ್ರಕರ್ತೆಯ ಪಾತ್ರದಲ್ಲಿ ಆಶಿಕಾ ಸೋಮಶೇಖರ್, ಡಾಕ್ಟರ್ ಆಗಿ ಚಂದನಾ ಗೌಡ, ರೆಸ್ಟೋರೆಂಟ್ ಮಾಲೀಕನ ಪಾತ್ರದಲ್ಲಿ ಸಂದೀಪ್ ಕುಮಾರ್ ಹೀಗೆ ಹಲವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಣಜ ಎಂಟಪ್ರ್ರೈಸಸ್ ಬ್ಯಾನರ್ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ದಿಲೀಪ್ ಚಕ್ರವರ್ತಿಯವರ ಕ್ಯಾಮೆರಾ ಕೈಚಳಕ, ವಿನೋದ್ ಸಾಹಸ, ಶ್ರೀಕಾಂತ್ ಸಂಕಲನ ಸಿನಿಮಾದಲ್ಲಿರಲಿದೆ. ಒಟ್ಟು ಮೂರು ಹಾಡುಗಳಿದ್ದು, ಜಾನಿ ಹಾಗೂ ನಿತಿನ್ ಜೋಡಿ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

    ರಾಮನಗರ, ದೇವರಾಯನ ದುರ್ಗ, ಮಂಡ್ಯ, ಮಳವಳ್ಳಿ, ತುಮಕೂರು, ಬೆಂಗಳೂರಿನ ರಾಕ್ಲೈನ್ ಸ್ಟುಡಿಯೋ, ಯೂನಿವರ್ಸಿಟಿ ಕ್ಯಾಂಪಸ್ ಸುತ್ತಮತ್ತ ಚಿತ್ರದ ಚಿತ್ರೀಕರಣ ಮಾಡಲಾಗಿದೆ. ಈಗಾಗ್ಲೇ ಸೆನ್ಸಾರ್ ಮುಗಿಸಿರುವ ಸಿನಿಮಾಕ್ಕೆ ಯು/ಎ ಸರ್ಟಿಫಿಕೇಟ್ ಸಿಕ್ಕಿದ್ದು, ಇದೇ ಮಾರ್ಚ್ 19ಕ್ಕೆ ಬೆಳ್ಳಿತೆರೆಗೆ ಮುಂದುವರೆದ ಅಧ್ಯಾಯ ಸಿನಿಮಾ ಗ್ರ್ಯಾಂಡ್ ಎಂಟ್ರಿ ಕೊಡ್ತಿದೆ.

  • ಸಮೋಸ ಸವಿಯಲು ನಿರಾಕರಿಸಿದ ಆದಿತ್ಯ!

    ಸಮೋಸ ಸವಿಯಲು ನಿರಾಕರಿಸಿದ ಆದಿತ್ಯ!

    – ಮಂಗಳೂರಿಗೆ ಆದಿತ್ಯ ರಾವ್

    ಬೆಂಗಳೂರು: ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್‍ನನ್ನು ಮಂಗಳೂರು ಪೊಲೀಸರ ವಶಕ್ಕೆ ನೀಡಲಾಗಿದೆ. ನ್ಯಾಯಾಲಯದ ಎದುರು ಹಾಜರು ಪಡಿಸುವ ಹಿನ್ನೆಲೆಯಲ್ಲಿ ಮಂಗಳೂರಿಗೆ ಕರೆಕೊಂಡು ಹೋಗಲು ಆರೋಪಿ ಆದಿತ್ಯನನ್ನು ಪೊಲೀಸರು ಕೆಐಎಎಲ್ ವಿಮಾನ ನಿಲ್ದಾಣಕ್ಕೆ ಕರೆತಂದಿದ್ದು, ಈ ವೇಳೆ ಆತನಿಗೆ ತಿನ್ನಲು ನೀಡಲಾಗಿದ್ದ ಸಮೋಸವನ್ನು ನಿರಾಕರಿಸಿದ್ದಾನೆ ಎನ್ನಲಾಗಿದೆ.

    ಇಂದು ಸಂಜೆ 7:15ಕ್ಕೆ ಕೆಐಎಎಲ್‍ನಿಂದ ಮಂಗಳೂರಿಗೆ ತೆರಳುವ ವಿಮಾನವಿದ್ದು, ಸಂಜೆ ವೇಳೆಗೆ ಆದಿತ್ಯನನ್ನು ಕರೆತಂದ ಪೊಲೀಸರು ಆತನನ್ನು ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಇರಿಸಿದ್ದರು. ಈ ವೇಳೆ ಆದಿತ್ಯಗೆ ಪೊಲೀಸರು ತಿನ್ನಲು ಸಮೋಸಾ ನೀಡಿದ್ದು, ಆದರೆ ಅದನ್ನು ತಿನ್ನಲು ಆದಿತ್ಯ ನಿರಾಕರಿಸಿದ್ದಾನೆ. ಇದನ್ನೂ ಓದಿ; ಹರಸಾಹಸ ಪಟ್ಟು 2018ರಲ್ಲಿ ಆದಿತ್ಯನನ್ನು ಹಿಡಿದಿದ್ರು ಬೆಂಗ್ಳೂರು ಪೊಲೀಸರು

    ಆರೋಪಿ ಆದಿತ್ಯ ರಾವ್ ಇಂದು ಪೊಲೀಸರ ಎದುರು ಶರಣಾದ ಹಿನ್ನೆಲೆಯಲ್ಲಿ ಆತನನ್ನು ಹಲಸೂರು ಪೊಲೀಸರು ವಿಚಾರಣೆ ನಡೆಸಿ ಬಳಿಕ ನಗರ 1ನೇ ಎಸಿಎಂಎಂ ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ದರು. ಆರೋಪಿಯ ಪ್ರಾಥಮಿಕ ಹೇಳಿಕೆ ಪರಿಶೀಲನೆ ನಡೆಸಿ ನ್ಯಾಯಾಧೀಶರು ಮಂಗಳೂರು 6ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಮಂಗಳೂರಿಗೆ ಕರೆದುಕೊಂಡು ಹೋಗಲು ಕೆಐಎಎಲ್ ವಿಮಾನ ನಿಲ್ದಾಣದಕ್ಕೆ ಸಂಜೆ 5:15ರ ವೇಳೆಗೆ ಕರೆ ತಂದಿದ್ದರು. ಇದನ್ನೂ ಓದಿ: I Am Fit And Fine- ವೈದ್ಯರ ಬಳಿ ಆದಿತ್ಯ ರಾವ್ ಡೈಲಾಗ್

    ವಿಮಾನ ನಿಲ್ದಾಣದ ಪೊಲೀಸ್ ರಾಣೆಯಲ್ಲಿ ಕೆಲ ನಿಯಮಗಳನ್ನು ಪೂರೈಸಲು ಹಾಗೂ ವಿಮಾನದ ಅವಧಿ ತಡವಾದ ಕಾರಣ ಆತನನ್ನು ಪೊಲೀಸ್ ಠಾಣೆಗೆ ಕರೆತರಲಾಗಿತ್ತು ಎನ್ನಲಾಗಿದೆ. ಈ ವೇಳೆ 2018ರ ಹುಸಿ ಬಾಂಬ್ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಿಂದ ಕೆಲ ಮಾಹಿತಿಯನ್ನು ಪಡೆದ್ದರು ಎನ್ನಲಾಗಿದೆ. ಪೊಲೀಸ್ ಠಾಣೆಯಲ್ಲಿದ್ದ ಸಂದರ್ಭದಲ್ಲಿ ಮಂಗಳೂರು ಪೊಲೀಸರಿಗೆ ಸೇರಿದಂತೆ ಆರೋಪಿಗೆ ಸಮೋಸ ನೀಡಲಾಗಿತ್ತು.

    ಮಂಗ್ಳೂರಿಗೆ ಆದಿತ್ಯ: ಆರೋಪಿ ಆದಿತ್ಯ ರಾವ್‍ನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ಮಂಗಳೂರಿಗೆ ಕರೆದುಕೊಂಡು ಹೋದರು. ಹಲಸೂರುಗೇಟ್ ಪೊಲೀಸರಿಂದ ಆದಿತ್ಯ ರಾವ್ ನನ್ನ ವಶಕ್ಕೆ ಪಡೆದ ಮಂಗಳೂರು ಪೊಲೀಸರ ತಂಡ ನೇರವಾಗಿ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದರು. ಇದನ್ನೂ ಓದಿ: ತಾಯಿಗೆ ಕ್ಯಾನ್ಸರ್ ಆಗಿದ್ರೂ ಸಹಾಯಕ್ಕೆ ಬಂದಿರಲಿಲ್ಲ ಆದಿತ್ಯ ರಾವ್!

    ಪೊಲೀಸ್ ಠಾಣೆಯಲ್ಲಿ ಕಾಫಿ-ಟೀ, ಸಮೋಸ ಸವಿದ ಪೊಲೀಸರ ತಂಡ 6:00 ಗಂಟೆ ಸುಮಾರಿಗೆ ನೇರವಾಗಿ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಡಿಪಾರ್ಚರ್ ಗೇಟ್ ನಂ.1ರ ಮೂಲಕ ವಿಮಾನ ನಿಲ್ದಾಣದ ಒಳಭಾಗಕ್ಕೆ ಕರೆದುಕೊಂಡು ಹೋದರು. ಸಂಜೆ 7.15 ರ ಸ್ಪೈಸ್ ಜೆಟ್ ವಿಮಾನದಲ್ಲಿ ಆದಿತ್ಯ ರಾವ್ ನನ್ನ ಕರೆದುಕೊಂಡು ಮಂಗಳೂರಿನತ್ತ ಪೊಲೀಸರು ಪ್ರಯಾಣ ಬೆಳೆಸಿದರು.

  • ವಿಚಾರಣೆಗೆ ಹಾಜರಾಗಿ – ನಿರ್ಮಾಪಕ ರಾಜೇಂದ್ರ ಸಿಂಗ್ ಬಾಬುಗೆ ಪೊಲೀಸ್ ನೋಟಿಸ್

    ವಿಚಾರಣೆಗೆ ಹಾಜರಾಗಿ – ನಿರ್ಮಾಪಕ ರಾಜೇಂದ್ರ ಸಿಂಗ್ ಬಾಬುಗೆ ಪೊಲೀಸ್ ನೋಟಿಸ್

    ಬೆಂಗಳೂರು: ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರೂ ಕ್ಯಾರೆ ಅನ್ನದ ನಿರ್ಮಾಪಕ ರಾಜೇಂದ್ರ ಸಿಂಗ್ ಬಾಬು ಕುಟುಂಬದ ಸದಸ್ಯರು ವಿಚಾರಣೆಗೆ ಹಾಜರಾಗುವಂತೆ ಸದಾಶಿವನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

    ಬಾಡಿಗೆ ಕಟ್ಟದೇ ಮನೆಯ ಮಾಲೀಕ ಜಿ.ಆರ್.ಪ್ರಸನ್ನ ಜೊತೆ ಜಗಳ ಮಾಡಿ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಆರೋಪ ರಾಜೇಂದ್ರ ಸಿಂಗ್ ಬಾಬು ಮೇಲಿದೆ. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು 12 ದಿನಗಳಿಂದ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

    ಪೊಲೀಸ್ ಸೂಚನೆಗೆ ರಾಜೇಂದ್ರ ಸಿಂಗ್ ಬಾಬು ಕುಟುಂಬ, ನಾವು ಹೊರದೇಶದಲ್ಲಿ ಇರುವ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಉತ್ತರ ನೀಡಿದ್ದಾರೆ. ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಈಗ ಪೊಲೀಸ್ ಆಯುಕ್ತರಿಗೆ ದೂರು ನೀಡಲು ಮುಂದಾಗಿದ್ದೇನೆ ಎಂದು ಮನೆ ಮಾಲೀಕ ಪ್ರಸನ್ನ ತಿಳಿಸಿದ್ದಾರೆ.

    ಏನಿದು ಪ್ರಕರಣ?
    ರಾಜೇಂದ್ರ ಸಿಂಗ್ ಬಾಬು ಮತ್ತು ಅವರ ಮಗ ಆದಿತ್ಯ ಮತ್ತು ಮಗಳು ಹಾಗೂ ಅವರ ಪತ್ನಿ ಕಳೆದ ನಾಲ್ಕು ವರ್ಷದಿಂದ ಸದಾಶಿವನಗರದ ಆರ್‍ಎಂವಿ ಎಕ್ಷಟೆನ್ಷನ್‍ನಲ್ಲಿರುವ ಪ್ರಸನ್ನ ಎಂಬುವವರ ಮನೆಯಲ್ಲಿ ಬಾಡಿಗೆಯಲ್ಲಿದ್ದಾರೆ. ನಾಲ್ಕು ವರ್ಷದಿಂದ ತಿಂಗಳಿಗೆ 40 ಸಾವಿರ ಬಾಡಿಗೆ ನೀಡಲಾಗುತ್ತಿತ್ತು. ಆದರೆ ಮನೆಯ ಮಾಲೀಕ ಮನೆಯ ಬಾಡಿಗೆಯನ್ನು ಏರಿಕೆ ಮಾಡಿ 48 ಸಾವಿರ ಕೊಡಲು ಹೇಳಿದ್ದಾರೆ. ಇದಕ್ಕೆ ಒಪ್ಪದ ರಾಜೇಂದ್ರ ಸಿಂಗ್ ಬಾಬು ಅವರು ಕಳೆದ 7 ತಿಂಗಳಿನಿಂದ 2 ಲಕ್ಷ 88 ಸಾವಿರ ಬಾಡಿಗೆ ಹಣವನ್ನು ಬಾಕಿ ಉಳಿಸಿಕೊಂಡಿದ್ದರು. ಈ ಸಂಬಂಧ ಮನೆ ಮಾಲೀಕ ಪ್ರಸನ್ನ ಅವರು ಕೋರ್ಟ್‍ಗೆ ಎವಿಕ್ಷನ್ ಕೇಸ್ ನೀಡಿದ್ದರು. ಸದ್ಯ ಈಗ ಮನೆ ಖಾಲಿ ಮಾಡಿಸಿ ಕೊಡುವಂತೆ ಪೊಲೀಸರಿಗೆ ಮೇ 2 ರಂದು ದೂರು ನೀಡಿದ್ದಾರೆ.

  • ನಟ ಆದಿತ್ಯ ವಿರುದ್ಧ ದೂರು ದಾಖಲು

    ನಟ ಆದಿತ್ಯ ವಿರುದ್ಧ ದೂರು ದಾಖಲು

    ಬೆಂಗಳೂರು: ಮನೆ ಬಾಡಿಗೆ ನೀಡದೇ ಮಾಲೀಕನ ಜೊತೆ ಗಲಾಟೆ ಮಾಡಿದ್ದಕ್ಕೆ ಸ್ಯಾಂಡಲ್‍ವುಡ್ ನಟ ಆದಿತ್ಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ನಟ ಆದಿತ್ಯ, ಸದಾಶಿವನಗರದ ಆರ್‍ಎಂವಿ ಎಕ್ಷಟೆನ್ಷನ್‍ನಲ್ಲಿರುವ ಪ್ರಸನ್ನ ಅವರ ಬಾಡಿಗೆ ಮನೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಆದರೆ ಕಳೆದ ಏಳು ತಿಂಗಳಿಂದ ಬಾಡಿಗೆ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿದಕ್ಕೆ ಮನೆ ಮಾಲೀಕರಾದ ಪ್ರಸನ್ನ ಜೊತೆ ಜಗಳವಾಡಿದ್ದಾರೆ.

    ಆದಿತ್ಯ ಅವರ ಜೊತೆ ಅವರ ತಂದೆ ರಾಜೇಂದ್ರ ಸಿಂಗ್ ಬಾಬು, ತಂಗಿ ಹಾಗೂ ತಾಯಿ ಮನೆಯಲ್ಲಿ ವಾಸಿಸುತ್ತಿದ್ದಾರೆ. ನಾಲ್ಕು ವರ್ಷದ ಹಿಂದೆ ತಿಂಗಳಿಗೆ 40 ಸಾವಿರ ರೂ. ನಂತೆ ಬಾಡಿಗೆಗೆ ನೀಡಲಾಗಿತ್ತು. ಬಳಿಕ ಈಗ ಮನೆ ಮಾಲೀಕರು 48 ಸಾವಿರ ಬಾಡಿಗೆಗೆ ಏರಿಸಿದ್ದಾರೆ. ಆದಿತ್ಯ ಇದುವರೆಗೆ 2 ಲಕ್ಷ 88 ಸಾವಿರ ಹಣ ಬಾಕಿ ನೀಡಬೇಕಿದೆ.

    ಕಳೆದ ನಾಲ್ಕು ವರ್ಷಗಳಿಂದ ಆದಿತ್ಯ ಕುಟುಂಬ ಇದೇ ಮನೆಯಲ್ಲಿ ವಾಸವಾಗಿದ್ದಾರೆ. ಆದರೆ ಕಳೆದ ಏಳು ತಿಂಗಳಿಂದ ಬಾಡಿಗೆ ನೀಡಿರಲಿಲ್ಲ. ಈ ವಿಚಾರವಾಗಿ ಮನೆ ಮಾಲೀಕ ಕೆಲ ಕಳೆದ ನವೆಂಬರ್ ನಲ್ಲಿ ಕೋರ್ಟ್ ಗೆ ಎವಿಕ್ಷನ್ ಕೇಸ್ ದಾಖಲಿಸಿದ್ದರು. ಸದ್ಯ ಇಂದು ಮನೆ ಖಾಲಿ ಮಾಡಿಸಿ ಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

    ಆದಿತ್ಯ ಮನೆ ಮಾಲೀಕ ಪ್ರಸನ್ನಗೆ ಬೈದಿರುವ ಆಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

  • ರೊಮ್ಯಾಂಟಿಕ್ ಮೂಡಿಗೆ ಜಾರಿಸೋ ಕಿಸ್ ಸಾಂಗ್!

    ರೊಮ್ಯಾಂಟಿಕ್ ಮೂಡಿಗೆ ಜಾರಿಸೋ ಕಿಸ್ ಸಾಂಗ್!

    ಬೆಂಗಳೂರು: ಎ.ಪಿ. ಅರ್ಜುನ್ ನಿರ್ದೇಶನದ ಕಿಸ್ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಶೀಲಾ ಸುಶೀಲ ಎಂಬ ಹಾಡು ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು. ಈಗ ಬಿಡುಗಡೆಯಾಗಿರೋ ಎರಡನೇ ಹಾಡು ಎಲ್ಲರನ್ನೂ ಹಾಯಾಗಿ ಮೆಲೋಡಿ ಮೂಡಿಗೆ ಜಾರುವಂತೆ ಮಾಡುವಷ್ಟು ಇಂಪಾಗಿದೆ!

    ಎ ಪಿ ಅರ್ಜುನ್ ನೀನೇ ಮೊದಲು ನೀನೇ ಕೊನೆ ಎಂಬ ಹಾಡಿಗೆ ವಿ ಹರಿಕೃಷ್ಣ ಪುತ್ರ ಆದಿತ್ಯ ಸಂಗೀತ ಸಂಯೋಜನೆ ಮಾಡಿದ್ದಾನೆ. ಆದಿತ್ಯ ಮೊದಲ ಹಾಡಿನಲ್ಲಿಯೇ ಭರವಸೆಯನ್ನೂ ಹುಟ್ಟಿಸಿದ್ದಾನೆ. ನಾಯಕ ವಿರಾಟ್ ಮತ್ತು ನಾಯಕಿ ಶ್ರೀಲೀಲಾ ಅವರಂತೂ ರೊಮ್ಯಾಂಟಿಕ್ ಮೂಡಿನಲ್ಲಿ ಮುದ್ದು ಮುದ್ದಾಗಿ ನಟಿಸಿದ್ದಾರೆ. ಶ್ರೇಯಾ ಘೋಶಾಲ್ ಹಾಡಿರೋ ಈ ಹಾಡೂ ಕೂಡಾ ಮೊದಲ ಹಾಡಿನಂತೆಯೇ ಹಿಟ್ ಆಗೋ ಎಲ್ಲ ಲಕ್ಷಣಗಳೂ ದಟ್ಟವಾಗಿವೆ.

    ಕಿಸ್ ಹಾಡುಗಳ ಖದರ್ ಎಂಥಾದ್ದೆಂಬುದು ಶೀಲ ಸುಶೀಲಾ ಹಾಡಿನ ಮೂಲಕವೇ ಸಾಬೀತಾಗಿದೆ. ಈ ಸಿನಿಮಾದಲ್ಲಿ ಒಟ್ಟು ಆರು ಹಾಡುಗಳಿವೆ. ಶ್ರೇಯಾ ಘೋಶಾಲ್ ಸೇರಿದಂತೆ ಅನೇಕರ ಮಾಧುರ್ಯ ತುಂಬಿದ ಕಂಠದಲ್ಲಿ ಈ ಹಾಡುಗಳು ಮೂಡಿ ಬಂದಿವೆ. ಇದರಲ್ಲಿ ಒಂದೊಂದೇ ಹಾಡುಗಳನ್ನು ವಾರಕ್ಕೊಂದು ಸಲ ಬಿಡುಗಡೆ ಮಾಡಲು ಅರ್ಜುನ್ ಮುಂದಾಗಿದ್ದಾರೆ. ನೀನೇ ಮೊದಲು ನೀನೇ ಕೊನೆ ಮೂಲಕ ಎರಡನೇ ಹಾಡು ಹೊರ ಬಂದಿದೆ. ಮುಂದಿನ ವಾರ ಮತ್ತೊಂದು ಹಾಡು ಬಿಡುಗಡೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಶಶಿಕುಮಾರ್ ಪುತ್ರನ ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ಸಾಥ್!

    ಶಶಿಕುಮಾರ್ ಪುತ್ರನ ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ಸಾಥ್!

    ಬೆಂಗಳೂರು: ಹೊಸಾ ಪ್ರತಿಭೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಲೇ ಬಂದಿರುವವರು ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಿಡುವಿಲ್ಲದಿದ್ದರೂ ಅತಿಥಿ ಪಾತ್ರಗಳಲ್ಲಿ ನಟಿಸುತ್ತಾ, ಒತ್ತಡಗಳಿದ್ದರೂ ಕಾರ್ಯಕ್ರಮಗಳಿಗೆ ಹೋಗಿ ಬೆನ್ನು ತಟ್ಟುವ ಮನಸ್ಥಿತಿ ಹೊಂದಿರೋ ದರ್ಶನ್ ಇದೀಗ ಶಶಿಕುಮಾರ್ ಪುತ್ರನ ಚಿತ್ರದ ಮುಹೂರ್ತದಲ್ಲಿಯೂ ಪಾಲ್ಗೊಳ್ಳಲಿದ್ದಾರೆ.

    ಶಶಿಕುಮಾರ್ ಪುತ್ರ ಆದಿತ್ಯ ನಾಯಕನಾಗಿ ಎಂಟ್ರಿ ಕೊಡುತ್ತಿರುವ ವಿಚಾರ ಗೊತ್ತೇ ಇದೆ. ಈ ಚಿತ್ರದ ಮುಹೂರ್ತ ಸಮಾರಂಭ ಸೆಪ್ಟೆಂಬರ್ 2ರ ಭಾನುವಾರ ಅದ್ಧೂರಿಯಾಗಿ ನೆರವೇರಲಿದೆ. ಈ ಸಮಾರಂಭದಲ್ಲಿ ಹಾಜರಿರಲಿರುವ ದರ್ಶನ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಶಶಿಕುಮಾರ್ ಮಗನ ಚಿತ್ರಕ್ಕೆ ಅಪೂರ್ವ ನಾಯಕಿ!

    ಒಂದು ಅವಘಡದ ನಂತರ ಚಿತ್ರರಂಗದಿಂದ ದೂರವೇ ಉಳಿದಿರುವ ಶಶಿಕುಮಾರ್ ಇದೀಗ ತಮ್ಮ ಪುತ್ರನನ್ನು ಹೀರೋ ಮಾಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ. ನಾಯಕನಟನಾಗಿ ಉತ್ತುಂಗದಲ್ಲಿರುವಾಗಲೇ ಅಪಘಾತವೊಂದಕ್ಕೀಡಾಗಿ ನೇಪಥ್ಯಕ್ಕೆ ಸರಿದಿದ್ದವರು ಶಶಿಕುಮಾರ್. ಆ ನಂತರ ಸಾಕಷ್ಟು ನೋವುಂಡ ಅವರು ಚಿತ್ರರಂಗದಿಂದ ದೂರ ಸರಿದಿದ್ದರು. ಇದೀಗ ಅವರಲ್ಲಿ ಉಳಿದು ಹೋದಂತಿರೋ ಬಾಕಿ ಕನಸುಗಳನ್ನು ಮಗನ ಮೂಲಕ ನನಸಾಗಿಸಿಕೊಳ್ಳುವ ಹುರುಪಿನಿಂದಲೇ ಈ ಚಿತ್ರವನ್ನವರು ಆರಂಭಿಸಿದ್ದಾರೆ.

    ಹಿರಿಯ ನಟ ಶಶಿಕುಮಾರ್ ಮಗನ ಚಿತ್ರದ ಮುಹೂರ್ತಕ್ಕೆ ದರ್ಶನ್ ಖುಷಿಯಿಂದಲೇ ಬರಲೊಪ್ಪಿಕೊಂಡಿದ್ದಾರೆ. ಕ್ಲ್ಯಾಪ್ ಮಾಡುವ ಮೂಲಕ ಈ ಚಿತ್ರಕ್ಕೆ ಚಾಲನೆಯನ್ನೂ ಕೊಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಶಿಕುಮಾರ್ ಮಗನ ಚಿತ್ರಕ್ಕೆ ಅಪೂರ್ವ ನಾಯಕಿ!

    ಶಶಿಕುಮಾರ್ ಮಗನ ಚಿತ್ರಕ್ಕೆ ಅಪೂರ್ವ ನಾಯಕಿ!

    – ಮುದ್ದಾದ ಲವ್ ಸ್ಟೋರಿಯಲ್ಲೀಕೆ ಹಳ್ಳಿ ಹುಡುಗಿಯಂತೆ!

    ಬೆಂಗಳೂರು: 90ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಮಿಂಚಿದ್ದವರು ಶಶಿ ಕುಮಾರ್. ಆ ನಂತರದಲ್ಲಿ ಅಪಘಾತದ ಆಘಾತದಿಂದ ಚಿತ್ರರಂಗದಿಂದ ದೂರಾಗಿದ್ದ ಶಶಿಕುಮಾರ್ ಅವರನ್ನು ಪ್ರೇಕ್ಷಕರೆಲ್ಲರೂ ಮಿಸ್ ಮಾಡಿಕೊಳ್ಳುತ್ತಲೇ ಇದ್ದಾರೆ. ಹೀಗಿರುವಾಗಲೇ ಅವರ ಪುತ್ರ ಆದಿತ್ಯ ಇದೀಗ ನಾಯಕನಾಗಿ ಎಂಟ್ರಿ ಕೊಡುತ್ತಿದ್ದಾರೆ. ಹೊಸವಿಚಾರವೆಂದರೆ, ಆದಿತ್ಯನಿಗೆ ನಾಯಕಿಯೂ ಫಿಕ್ಸಾಗಿದ್ದಾಳೆ!

    ಶಶಿಕುಮಾರ್ ಅವರ ಪುತ್ರ ಆದಿತ್ಯ ನಾಯಕನಾಗಿ ಎಂಟ್ರಿ ಕೊಡೋದರ ಬಗ್ಗೆ ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ ನಾಯಕಿಗಾಗಿ ವ್ಯಾಪಕವಾಗಿಯೇ ಶೋಧ ಕಾರ್ಯ ಚಾಲ್ತಿಯಲ್ಲಿತ್ತು. ಕಡೆಗೂ ಅಪೂರ್ವ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ವರ್ಷಾಂತರಗಳ ಹಿಂದೆ ತರೆ ಕಂಡಿದ್ದ ರವಿಚಂದ್ರನ್ ಅಭಿನಯ ಮತ್ತು ನಿರ್ದೇಶಕನದ ಅಪೂರ್ವ ಚಿತ್ರದ ಮೂಲಕವೇ ಸ್ಯಾಂಡಲ್ ವುಡ್‍ಗೆ ಎಂಟ್ರಿ ಕೊಟ್ಟಿದ್ದ ಅಪೂರ್ವ ಇದೀಗ ವಿಕ್ಟರಿ 2 ಚಿತ್ರದಲ್ಲಿಯೂ ನಾಯಕಿಯಾಗಿ ನಟಿಸಿದ್ದಾಳೆ. ಅದೇ ಹೊತ್ತಿನಲ್ಲಿ ಆದಿತ್ಯನಿಗೆ ಜೋಡಿಯಾಗಿರೋ ಸುದ್ದಿಯನ್ನೂ ಜಾಹೀರು ಮಾಡಿದ್ದಾಳೆ.

    ಶಶಿಕುಮಾರ್ ಪುತ್ರನ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರೋದರ ಬಗ್ಗೆ ಖುಷಿಗೊಂಡಿರೋ ಅಪೂರ್ವ, ಶಶಿಕುಮಾರ್ ಚಿತ್ರಗಳನ್ನು ನೋಡುತ್ತಾ ಬೆಳೆದ ತಾನು ಇದೀಗ ಅವರ ಪುತ್ರನಿಗೆ ನಾಯಕಿಯಾಗಿ ಆಯ್ಕೆಯಾದದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾಳೆ. ಈಗೊಂದೆರಡು ದಿನಗಳ ಹಿಂದಷ್ಟೇ ಅಪೂರ್ವ ಮತ್ತು ಆದಿತ್ಯಾ ಫೋಟೋ ಶೂಟ್ ಕೂಡಾ ನಡೆದಿದೆಯಂತೆ. ಅಪೂರ್ವ ಚಿತ್ರದಲ್ಲಿ ಮಾಡರ್ನ್ ಹುಡುಗಿಯಾಗಿ ಕಾಣಿಸಿಕೊಂಡಿದ್ದ ಅಪೂರ್ವ ಈ ಚಿತ್ರದಲ್ಲಿ ಅದಕ್ಕೆ ತದ್ವಿರುದ್ಧವಾದ ಹಳ್ಳಿ ಹುಡುಗಿಯಾಗಿ ನಟಿಸಲಿದ್ದಾಳಂತೆ.

    ಇದೇ ಹೊತ್ತಿನಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿ ನಿರ್ದೇಶನ ಮಾಡುತ್ತಿರುವ ರಾಜೇಂದ್ರ ಪೊನ್ನಪ್ಪ ಚಿತ್ರದಲ್ಲಿಯೂ ಅಪೂರ್ವಳೇ ನಾಯಕಿ. ವರ್ಷಗಳ ಹಿಂದೆ ತೆರೆ ಕಂಡಿದ್ದ ಅಪೂರ್ವ ಚಿತ್ರದ ನಂತರ ಸದ್ದಿಲ್ಲದಂತಿದ್ದ ಅಪೂರ್ವ ಈಗ ಒಂದರ ಹಿಂದೊಂದರಂತೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾಳೆ.