Tag: Adivasis

  • ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸಿದ 100ಕ್ಕೂ ಹೆಚ್ಚು ಆದಿವಾಸಿಗಳು ಪೊಲೀಸರ ವಶಕ್ಕೆ

    ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸಿದ 100ಕ್ಕೂ ಹೆಚ್ಚು ಆದಿವಾಸಿಗಳು ಪೊಲೀಸರ ವಶಕ್ಕೆ

    ಮುಂಬೈ: ಆದಿವಾಸಿಗಳು ತಮ್ಮ ಹಕ್ಕುಗಳಿಗಾಗಿ ಬೇಡಿಕೆ ಇಟ್ಟಿದಕ್ಕೆ 100ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಥಾಣೆಯಲ್ಲಿ ನಡೆದಿದೆ.

    ಥಾಣೆಯ ಆದಿವಾಸಿಗಳು ನಿನ್ನೆ ಉಪವಿಭಾಗಾಧಿಕಾರಿಗಳ ಆವರಣದಲ್ಲಿ ಅರಣ್ಯ ಹಕ್ಕುಗಳು, ಜಾತಿ ಪ್ರಮಾಣ ಪತ್ರಗಳು ಮತ್ತು ಇತರ ಸೌಕರ್ಯಗಳಿಗೆ ಒತ್ತಾಯಿಸಿ ಪ್ರತಿಭಟನೆಯನ್ನು ಮಾಡುತ್ತಿದ್ದರು. ಈ ಸಂಬಂಧ 100ಕ್ಕೂ ಹೆಚ್ಚು ಆದಿವಾಸಿಗಳನ್ನು ಥಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ವಶಕ್ಕೆ ಪಡೆದುಕೊಂಡ ಆದಿವಾಸಿಗಳನ್ನು ಪೊಲೀಸರು ನಂತರ ಬಿಡುಗಡೆ ಮಾಡಿದ್ದಾರೆ. ಆದರೆ ಎನ್‍ಜಿಒ ಅಡಿಯಲ್ಲಿ ಆದಿವಾಸಿಗಳ ನಿಯೋಗವು ತಮ್ಮ ಬೇಡಿಕೆಗಳನ್ನು ಒಳಗೊಂಡ ಜ್ಞಾಪಕ ಪತ್ರವನ್ನು ಉಪವಿಭಾಗಾಧಿಕಾರಿ ಅವಿನಾಶ್ ಶಿಂಧೆ ಅವರನ್ನು ಭೇಟಿ ಮಾಡಿ ಸಲ್ಲಿಸಿತ್ತು. ಇದನ್ನೂ ಓದಿ:  ಸೋಶಿಯಲ್ ಮೀಡಿಯಾದಲ್ಲಿ ನಿಂದಿಸಿದ್ದಕ್ಕೆ ಯುವಕನ ಅಪಹರಿಸಿ ಕೊಂದರು!

    ಈ ಪತ್ರದಲ್ಲಿ ಬಾಕಿ ಉಳಿದಿರುವ 1,200 ಅರಣ್ಯ ಹಕ್ಕುಗಳ ಅರ್ಜಿಗಳನ್ನು ಪರಿಶೀಲಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಆದಿವಾಸಿಗಳ ದುಸ್ಥಿತಿಗೆ ಕಾಂಗ್ರೆಸ್ ಕಾರಣ: ಮೋದಿ

    ಆದಿವಾಸಿಗಳ ದುಸ್ಥಿತಿಗೆ ಕಾಂಗ್ರೆಸ್ ಕಾರಣ: ಮೋದಿ

    ಭೋಪಾಲ್: ಆದಿವಾಸಿಗಳನ್ನು ಕಾಂಗ್ರೆಸ್ ಪಕ್ಷ ನಿರ್ಲಕ್ಷ ಮಾಡಿತ್ತು. ಅವರ ಇಂದಿನ ದುಸ್ಥಿತಿಗೆ ಕಾಂಗ್ರೆಸ್ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ದೂರಿದ್ದಾರೆ.

    PM MODI

    ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಯೋಧ ಬಿರ್ಸಾಮುಡಾ ಜನ್ಮ ದಿನೋತ್ಸವದಲ್ಲಿ ಗೌರವ ನಮನಸಲ್ಲಿಸಿದ ಮೋದಿ ಕಾಂಗ್ರೆಸ್ ಆಡಳಿತದಲ್ಲಿ ಸೌಲಭ್ಯ ಪಡೆಯಲು ಆದಿವಾಸಿಗಳು ದಶಕಗಳ ಕಾಲ ಕಾಯಬೇಕಿತ್ತು ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ:  ಜಗತ್ತಿನಲ್ಲಿ ಮೊಟ್ಟ ಮೊದಲು ವಿಮಾನ ಹಾರಿಸಿದವನು ರಾವಣನೇ?- ಲಂಕಾ ಅಧ್ಯಯನ

    ಕಾಂಗ್ರೆಸ್ ಸರ್ಕಾರ ಬುಡಕಟ್ಟು ಜನರ 9ರಿಂದ 10 ಉತ್ಪನ್ನಗಳಿಗೆ ಮಾತ್ರ ಬೆಂಬಲ ಬೆಲೆ ನೀಡಿತ್ತು. ಆದರೆ ಬಿಜೆಪಿ ಸರ್ಕಾರ 90 ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುತ್ತಿದೆ. ಆದಿವಾಸಿಗಳಿಗಾಗಿ 50 ಏಕಲವ್ಯ ಶಾಲೆಗಳ ಸ್ಥಾಪನೆಗೆ ಅವರು ಶಂಕುಸ್ಥಾಪನೆ ನೆರೆವೇರಿಸಿದರು. ಇದನ್ನೂ ಓದಿ:  ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್

  • ಹಕ್ಕುಪತ್ರಕ್ಕಾಗಿ ಆದಿವಾಸಿಗಳ ಅನಿರ್ಧಿಷ್ಟಾವಧಿ ಪ್ರತಿಭಟನೆ- ಕಾಡಿನಲ್ಲೇ ವಾಸ್ತವ್ಯ

    ಹಕ್ಕುಪತ್ರಕ್ಕಾಗಿ ಆದಿವಾಸಿಗಳ ಅನಿರ್ಧಿಷ್ಟಾವಧಿ ಪ್ರತಿಭಟನೆ- ಕಾಡಿನಲ್ಲೇ ವಾಸ್ತವ್ಯ

    ರಾಮನಗರ: ಆದಿವಾಸಿ ಇರುಳಿಗ ಜನಾಂಗದವರು ಅರಣ್ಯ ಹಕ್ಕು ಕಾಯಿದೆ ಪ್ರಕಾರ ಭೂಮಿಯ ಹಕ್ಕು ಪತ್ರಕ್ಕಾಗಿ ನಡೆಸಿಸುತ್ತಿರುವ ಅನಿರ್ಧಿಷ್ಟಾವಧಿ ಹಾಗೂ ಆಹೋರಾತ್ರಿ ಪ್ರತಿಭಟನೆ ಎರಡೇ ದಿನಕ್ಕೆ ಕಾಲಿಟ್ಟಿದೆ.

    ಕನಕಪುರ ತಾಲೂಕಿನ ಮರಳವಾಡಿ ಹೋಬಳಿಯ ಬುಡಗಯ್ಯನದೊಡ್ಡಿ ಸಮೀಪದ ಬನ್ನೇರುಘಟ್ಟ ರಾಷ್ಟ್ರೀಯ ಅರಣ್ಯ ಪ್ರದೇಶದಲ್ಲಿ ಆದಿವಾಸಿ ಇರುಳಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ಉಪ ವಿಭಾಗಧಿಕಾರಿ ದಾಕ್ಷಾಯಿಣಿ ಸ್ಥಳಕ್ಕೆ ಭೇಟಿ ನೀಡಿ, ಹೋರಾಟಗಾರರ ಮನವೊಲಿಕೆಗೆ ಪ್ರಯತ್ನಿಸಿದರೂ ಸಫಲವಾಗಿಲ್ಲ. ಹೀಗಾಗಿ ಪ್ರತಿಭಟನಾಕಾರರು ಅರಣ್ಯದಲ್ಲೇ ಪ್ರತಿಭಟನೆ ಮುಂದುವರಿಸಿದ್ದಾರೆ.

    ರಾಮನಗರ ಜಿಲ್ಲಾಡಳಿತ ಅರಣ್ಯ ಹಕ್ಕು ಕಾಯಿದೆ ಪ್ರಕಾರ ಭೂಮಿಯ ಹಕ್ಕು ಪತ್ರ ನೀಡದೆ ಪದೇ ಪದೇ ಮರುಪರಿಶೀಲನೆ ಮಾಡುತ್ತೇವೆ ಎಂದು ದಿಕ್ಕು ತಪ್ಪಿಸುತ್ತಿದೆ. ನಮಗೆ ಕೂಡಲೇ ಹಕ್ಕು ಪತ್ರ ನೀಡಬೇಕು ಎಂದು ಆಗ್ರಹಿಸಿ ಇರುಳಿಗ ಸಮುದಾಯದ ಜನರು ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

    ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ವಿಫಲವಾದ ಬಳಿಕ ಮಾತನಾಡಿದ ಉಪವಿಭಾಗಧಿಕಾರಿ ದಾಕ್ಷಾಯಿಣಿ ಅವರು, ಹಕ್ಕುಪತ್ರಕ್ಕೆ ಆಗ್ರಹಿಸಿ ಇರುಳಿಗ ಜನಾಂಗದವರು ಧರಣಿ ಕುಳಿತುಕೊಂಡಿದ್ದಾರೆ. ಸರ್ವೇ ಮಾಡಿಸಿ ಹಕ್ಕು ಪತ್ರ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಈಗಾಗಲೇ ಸರ್ವೇ ಕಾರ್ಯ ಮಾಡಲಾಗಿದೆ ಅಂತ ತಾಲೂಕು ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೇಳುತ್ತಿದ್ದಾರೆ. ಈ ಕುರಿತು ದೂರವಾಣಿ ಕರೆಯ ಮೂಲಕ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಓ) ಮನ್ಸೂರ್ ಅವರನ್ನು ವಿಚಾರಿಸಿ ಮಾಹಿತಿ ಪಡೆದಿದ್ದೇನೆ. ಹಂತ ಹಂತವಾಗಿ ಹಕ್ಕು ಪತ್ರ ವಿತರಣೆಗೆ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಅರಣ್ಯದಲ್ಲಿ ಜನತೆ ಇರುವುದು ಕಷ್ಟವಾಗುತ್ತದೆ. ಪ್ರತಿಭಟನೆ ಕೈಬಿಡಬೇಕು ಎಂದು ಉಪವಿಭಾಗಧಿಕಾರಿ ಮನವಿ ಮಾಡಿಕೊಂಡರು. ಸರ್ವೇ ನೀಲ ನಕ್ಷೆ ಬಂದ ಕೂಡಲೇ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಪ್ರತಿಭಟನಾ ನಿರತರಿಗೆ ತಿಳಿಸಿದರು. ಆದರೆ ಅಧಿಕಾರಿಗಳ ಮನವಿಗೆ ಸೊಪ್ಪು ಹಾಕದ ಇರುಳಿಗರು ಅರಣ್ಯದಲ್ಲೇ ಮಕ್ಕಳು, ಮನೆಯವರ ಜೊತೆ ಟೆಂಟ್‍ಗಳನ್ನು ಹಾಕಿಕೊಂಡು ಪ್ರತಿಭಟನೆ ಮುಂದುವರಿಸಿದ್ದಾರೆ.

  • ಅರಣ್ಯ ಹಕ್ಕು ಕಾಯ್ದೆಯಡಿ ಭೂಮಿಗಾಗಿ ಆಗ್ರಹಿಸಿ ಆದಿವಾಸಿಗಳ ಅಹೋರಾತ್ರಿ ಧರಣಿ

    ಅರಣ್ಯ ಹಕ್ಕು ಕಾಯ್ದೆಯಡಿ ಭೂಮಿಗಾಗಿ ಆಗ್ರಹಿಸಿ ಆದಿವಾಸಿಗಳ ಅಹೋರಾತ್ರಿ ಧರಣಿ

    ರಾಮನಗರ: ಅರಣ್ಯ ಹಕ್ಕು ಕಾಯ್ದೆಯಡಿ ಭೂಮಿ ನೀಡುವಂತೆ ಆಗ್ರಹಿಸಿ ಕನಕಪುರ ತಾಲೂಕಿನ ಮರಳವಾಡಿಯ ಬುಡಗಯ್ಯನ ದೊಡ್ಡಿ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಅರಣ್ಯದಲ್ಲಿ ವಾಸವಿದ್ದ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡಲು ಬಂದಿದ್ದ ಅಧಿಕಾರಿಗಳನ್ನು ಆದಿವಾಸಿ ಇರುಳಿಗ ಸಮುದಾಯದವರು ತಡೆದು, ಜಿಲ್ಲಾ ಉಪ ವಿಭಾಗಾಧಿಕಾರಿಯೇ ಸ್ಥಳಕ್ಕೆ ಬರಬೇಕು. ಈ ಹಿಂದೆ ನಡೆಸಿದ ಸರ್ವೆ ವರದಿ ಏನಾಯ್ತು ಎಂದು ತಿಳಿಸಬೇಕು ಎಂದು ಸರ್ವೇ ಕಾರ್ಯವನ್ನ ಅಡ್ಡಿಪಡಿಸಿದ್ದಾರೆ. ಅಲ್ಲದೇ ಸಂಜೆಯಾದರೂ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

    ಮರಳವಾಡಿ ಹೋಬಳಿ ಬುಡಗಯ್ಯನ ದೊಡ್ಡಿ ಗ್ರಾಮ ಸಮೀಪದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಅರಣ್ಯ ಭೂಮಿಯಲ್ಲಿ ಆದಿವಾಸಿಗಳು ವಾಸವಿದ್ದಾರೆ. ಈ ಹಿಂದೆ ಕೂಡ ನಾವು ಇಲ್ಲಿಯೇ ಅರಣ್ಯವಾಸಿಗಳಾಗಿ ವಾಸವಿದ್ದೆವು. ನಮ್ಮನ್ನು ಬಲವಂತವಾಗಿ ಇಲ್ಲಿಂದ ಒಕ್ಕಲೆಬ್ಬಿಸಲಾಯಿತು. ಅರಣ್ಯವಾಸಿಗಳ ಅರಣ್ಯ ಹಕ್ಕು ಕಾಯ್ದೆಯಡಿ ನಮಗೆ ಭೂಮಿ ಕೊಡುವುದಾಗಿ 93 ಮಂದಿಯಿಂದ ಅರ್ಜಿಯನ್ನು ಪಡೆದುಕೊಳ್ಳಲಾಗಿತ್ತು. ಆದರೆ ಇಲ್ಲಿಯವರೆಗೂ ಭೂಮಿ ಕೊಟ್ಟಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

    2017ರಲ್ಲಿ ಇದೇ ರೀತಿ 93 ಮಂದಿ ಆದಿವಾಸಿಗಳು ಪ್ರತಿಭಟನೆ ನಡೆಸಿದ್ದ ಪರಿಣಾಮ ಸರ್ಕಾರವು ಸರ್ವೇ ನಡೆಸಿ ಭೂಮಿ ನೀಡುವಂತೆ ಸೂಚಿಸಿತ್ತು. ವಾಸವಿದ್ದ ಕುರುಹುಗಳನ್ನು ಆಧರಿಸಿ ಸರ್ವೇ ಮಾಡಿಸಿ ಶೀಘ್ರವೇ ಭೂಮಿ ನೀಡಿ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಇಲ್ಲಿಯ ತನಕ ನೀಡಿಲ್ಲ ಎಂದು ಪ್ರತಿಭಟನಾಕಾರರು ಅಹೋರಾತ್ರಿ ಹಾಗೂ ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

    ಈಗಾಗಲೇ ಆದಿವಾಸಿ ಇರುಳಿಗರು ಅರಣ್ಯಕ್ಕೆ ಕಾಲಿಟ್ಟು ಟೆಂಟ್‍ಗಳನ್ನು ನಿರ್ಮಿಸಿಕೊಂಡು ಇದೇ ಸ್ಥಳದಲ್ಲಿ ವಾಸ ಮಾಡುವುದಾಗಿ ಮಕ್ಕಳು, ಮನೆಯವರನ್ನ ಕರೆದುಕೊಂಡು ಹೋಗಿ ಠಿಕಾಣಿ ಹೂಡಿದ್ದಾರೆ.

  • ಜೀತ ಮುಕ್ತರಿಗಿಲ್ಲ ನೆಮ್ಮದಿ – ವಾಸಿಸಲು ಮನೆಯಿಲ್ಲದೇ ಆದಿವಾಸಿಗರ ಪರದಾಟ

    ಜೀತ ಮುಕ್ತರಿಗಿಲ್ಲ ನೆಮ್ಮದಿ – ವಾಸಿಸಲು ಮನೆಯಿಲ್ಲದೇ ಆದಿವಾಸಿಗರ ಪರದಾಟ

    ಕೊಡಗು: 10 ವರ್ಷದ ಹಿಂದೆ ಜೀತ ಮುಕ್ತರಾಗಿದ್ದರು ಕೂಡ 140 ಆದಿವಾಸಿ ಕುಟುಂಬಗಳು ವಾಸಿಸಲು ಮನೆಯಿಲ್ಲದೇ ಪರದಾಡುತ್ತಿದ್ದಾರೆ.

    ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಚೆರಿಯಪರಂಬುವಿನ ಬೇತು ಗ್ರಾಮದ ಜನರ ಬದುಕು ಕರುಣಾಜನಕ ಸ್ಥಿತಿ ತಲುಪಿದೆ. ಕಾಫಿ ಎಸ್ಟೇಟ್‍ಗಳಲ್ಲಿ ಜೀತದಾಳಾಗಿ ದುಡಿಯುತ್ತಿದ್ದವರು ಕಳೆದ ಹತ್ತು ವರ್ಷಗಳ ಹಿಂದೆ ಬಂಧಮುಕ್ತರಾಗಿ ನೆಮ್ಮದಿಯ ಬದುಕಿನ ಕನಸು ಹೊತ್ತು ಬಂದಿದ್ದರು. ನಮಗೂ ಒಂದು ಸ್ವಂತ ಸೂರು ಸಿಗುತ್ತೆ ಅಂತ ಬೇತು ಗ್ರಾಮದ ಸರ್ಕಾರಿ ಪೈಸಾರಿಯಲ್ಲಿ ಗುಡಿಸಲು ಕಟ್ಟಿಕೊಂಡಿದ್ದರು.

    ಇದೂವರೆಗೆ ಸರ್ಕಾರ, ಜಿಲ್ಲಾಡಳಿತ ಮನೆ ನಿರ್ಮಿಸಿಕೊಟ್ಟಿಲ್ಲ. ಕನಿಷ್ಠ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ಜನರೇ ಮನೆ ಮುಂದೇ ಆಳವಾದ ಗುಂಡಿಗಳನ್ನು ತೋಡಿ ಬಾವಿ ಮಾಡಿಕೊಂಡಿದ್ದಾರೆ. ಅದಕ್ಕೆ ಯಾವ ತಡೆಗೋಡೆಯೂ ಇಲ್ಲ. ಹಸುಗೂಸುಗಳಿದ್ದು, ಕಣ್ಣು ಮಿಟುಕಿಸುವಷ್ಟು ಮಿಸ್ ಆದರು ಅವರ ಬದುಕೇ ಅಲ್ಲಿಗೆ ಕ್ಲೋಸ್ ಆಗಿ ಬಿಡುತ್ತೆ. ಜೀತದಿಂದ ಮುಕ್ತರಾಗಿದ್ದೇವೆ. ಇನ್ಮುಂದೆ ನಮಗೂ ಸ್ವತಂತ್ರದ ಬದುಕು ಇದೆ ಎಂದುಕೊಂಡು ಬಂದಿದ್ದ ಇವರಿಗೆ ಪ್ರತೀ ವರ್ಷ ಮಳೆ ಬಂದು ಕಾವೇರಿ ನದಿ ತುಂಬಿದರೆ ಸಾಕು ಗ್ರಾಮಕ್ಕೆ ಸಂಪರ್ಕ ಕಡಿತವಾಗಿಬಿಡುತ್ತೆ.

    ಇಡೀ ಮನೆಗಳೆಲ್ಲವೂ ನೀರಿನಿಂದ ಆವೃತವಾಗಿ ಬಿಡುತ್ತವೆ. ನಮ್ಮ ಬದುಕು ಏನೋ ಮುಗಿದು ಹೋಗುತ್ತಿದೆ. ನಮ್ಮ ಮಕ್ಕಳ ಬದುಕು ಹೇಗೆ ಸ್ವಾಮಿ ಎಂದು ಸಂಕಟಪಡುತ್ತಿದ್ದಾರೆ. ಅದರಲ್ಲೂ ಈ ಬಾರಿ ಕಾವೇರಿ ನದಿ ಪ್ರವಾಹ ಬಂದಾಗ ಹಲವು ಮನೆಗಳು ನೆಲಸಮವಾಗಿವೆ. ಅವರಿಗೆ ಕೇವಲ ತಾತ್ಕಾಲಿಕ ಪರಿಹಾರ 10 ಸಾವಿರ ಕೊಟ್ಟಿದ್ದು ಬಿಟ್ಟರೆ ಮನೆಗೆ ದಾಖಲೆ ಇಲ್ಲ ಎನ್ನೋ ಕಾರಣಕ್ಕೆ ಮನೆ ಬಿದ್ದೋಗಿದ್ದರೂ ಒಂದು ನಯಾಪೈಸೆ ಪರಿಹಾರ ಸಿಕ್ಕಿಲ್ಲ. ಹೀಗಾಗಿ ನಮಗೆ ಸುರಕ್ಷಿತವಾದ ಸ್ಥಳದಲ್ಲಿ ಸೈಟುಕೊಟ್ಟರೆ ನಾವು ನೆಮ್ಮದಿಯ ಬದುಕು ಕಟ್ಟಿಕೊಳ್ತೇವೆ ಎಂದು ಮನವಿ ಮಾಡಿದ್ದಾರೆ.

    ಇವರ ಸಮಸ್ಯೆ ಬಗ್ಗೆ ಪಬ್ಲಿಕ್ ಟಿವಿ ಜಿಲ್ಲಾಧಿಕಾರಿಯವರನ್ನ ಕೇಳಿದ್ರೆ, ಇವರ್ಯಾರು ನದಿತಟದಲ್ಲಿ ಇಲ್ಲ. ಅವರೆಲ್ಲರೂ 94 ಸಿ ಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅವರಿಗೇನು ಸಮಸ್ಯೆ ಇಲ್ಲ ಅಂತಾರೆ. ಹಾಗೇನಾದರೂ ಸಮಸ್ಯೆ ಇದ್ದರೆ ಒಮ್ಮೆ ಸ್ಥಳ ಪರಿಶೀಲನೆ ಮಾಡುವುದಾಗಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಜೀತಮುಕ್ತರಾಗಿ ನೆಮ್ಮದಿಯ ಬದುಕಿನ ಕನಸು ಕಂಡಿದ್ದ ಆದಿವಾಸಿ ಬುಡಕಟ್ಟು ಜನರ ಬದುಕು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದೆ.