Tag: Admit

  • ನಟಿ ವಿಜಯಲಕ್ಷ್ಮಿ ನೆರವಿಗೆ ಧಾವಿಸಿದ ಫಿಲ್ಮ್ ಚೇಂಬರ್

    ನಟಿ ವಿಜಯಲಕ್ಷ್ಮಿ ನೆರವಿಗೆ ಧಾವಿಸಿದ ಫಿಲ್ಮ್ ಚೇಂಬರ್

    ಬೆಂಗಳೂರು: ಕಳೆದ ರಾತ್ರಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ನಟಿ ವಿಜಯಲಕ್ಷ್ಮಿಯವರ ಆರೋಗ್ಯವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ವಿಚಾರಿಸಿ ಅವರ ನೆರವಿಗೆ ಧಾವಿಸಿದ್ದಾರೆ.

    ತೀವ್ರ ಜ್ವರ ಹಾಗೂ ಅಧಿಕ ರಕ್ತದೊತ್ತಡದಿಂದಾಗಿ ನಟಿ ವಿಜಯಲಕ್ಷ್ಮಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಖರ್ಚು ಬರಿಸುವ ಹಣವಿಲ್ಲದೆ ಚಿತ್ರರಂಗದ ಸಹಾಯ ಕೋರಿ ವಿಜಯಲಕ್ಷ್ಮಿ ಅವರ ಸಹೋದರಿ ಉಷಾರಾಣಿ ಪಬ್ಲಿಕ್ ಟಿವಿಯಲ್ಲಿ ವಿನಂತಿ ಮಾಡಿಕೊಂಡಿದ್ದರು.

    ಉಷಾರಾಣಿಯವರ ಮನವಿಯನ್ನು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಕೂಡಲೇ ಸ್ಪಂದಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಭಾ.ಮಾ ಹರೀಶ್, ನಿರ್ಮಾಪಕ ಸುನಿಲ್ ಕುಮಾರ್, ಶಿಲ್ಪಾ ಶ್ರೀನಿವಾಸ್, ಗಿರೀಶ್ ವಿಜಯಲಕ್ಷ್ಮೀಯವರನ್ನ ಬೇಟಿ ಮಾಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ಕೊಟ್ಟಿದ್ದಾರೆ.

    ವಿಜಯಲಕ್ಷ್ಮಿಯವರ ಆರೋಗ್ಯಕ್ಕೆ ಸಹಾಯವಲ್ಲದೇ ಚೇತರಿಸಿಕೊಂಡ ಬಳಿಕ ಮತ್ತೆ ಬಣ್ಣ ಹಚ್ಚ ಬೇಕೆಂಬ ಅವರ ಆಸೆಯನ್ನ ಈಡೆರಿಸಲು ಫಿಲ್ಮ್ ಚೇಂಬರ್ ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ನೀಡಿದ್ದಾರೆ.

    ಸಾಹಸಸಿಂಹ ವಿಷ್ಣುವರ್ಧನ್, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಸೇರಿದಂತೆ ಅನೇಕ ಸೂಪರ್ ಸ್ಟಾರ್ ನಟರೊಂದಿಗೆ ನಾಯಕಿಯಾಗಿ ವಿಜಯಲಕ್ಷ್ಮಿ ಅವರು ನಟಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಟಿ ವಿಜಯಲಕ್ಷ್ಮಿ ಆಸ್ಪತ್ರೆಗೆ ದಾಖಲು- ಸಹಾಯಕ್ಕಾಗಿ ಚಿತ್ರರಂಗದ ಮೊರೆ

    ನಟಿ ವಿಜಯಲಕ್ಷ್ಮಿ ಆಸ್ಪತ್ರೆಗೆ ದಾಖಲು- ಸಹಾಯಕ್ಕಾಗಿ ಚಿತ್ರರಂಗದ ಮೊರೆ

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಟಾಪ್ ನಟಿ ಆಗಿದ್ದ ವಿಜಯಲಕ್ಷ್ಮೀ ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ನಟಿ ವಿಜಯಲಕ್ಷ್ಮೀ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಗುರುವಾರ ದಾಖಲಾಗಿದ್ದು, ಚಿತ್ರರಂಗದ ಸಹಾಯ ಹಸ್ತ ಚಾಚುತ್ತಿದ್ದಾರೆ.

    ಕಳೆದ ವಾರ ತಾಯಿಗೆ ಹೆಲ್ತ್ ಪ್ರಾಬ್ಲಾಂ ಆಗಿತ್ತು. ಈಗ ಸಡನ್ ಆಗಿ ನನ್ನ ತಂಗಿ ವಿಜಯಲಕ್ಷ್ಮಿ ಹೀಗೆ ಆನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ಇದ್ದ ಹಣವೆಲ್ಲ ತಾಯಿಯ ಚಿಕಿತ್ಸೆಗೆ ಖರ್ಚು ಮಾಡಿದ್ದೀವಿ. ಈಗ ನಮಗೆ ಇಂಡಸ್ಟ್ರಿಯ ಸಹಾಯ ಬೇಕಿದೆ ಎಂದು ವಿಜಯಲಕ್ಷ್ಮಿ ಅವರ ತಂಗಿ ಉಷಾದೇವಿ ಪಬ್ಲಿಕ್ ಟಿವಿ ಮುಂದೆ ಕಣ್ಣೀರು ಹಾಕಿದ್ದಾರೆ.

    ಸಾಹಸಸಿಂಹ ವಿಷ್ಣುವರ್ಧನ್, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಸೇರಿದಂತೆ ಅನೇಕ ಸೂಪರ್ ಸ್ಟಾರ್ ನಟರೊಂದಿಗೆ ನಾಯಕಿಯಾಗಿ ವಿಜಯಲಕ್ಷ್ಮಿ ಅವರು ನಟಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುಡಿಯುವ ನೀರಿನಲ್ಲಿ ವಿಷ ಮಿಶ್ರಣ – ಅಸ್ವಸ್ಥರ ಸಂಖ್ಯೆ 17ಕ್ಕೆ ಏರಿಕೆ

    ಕುಡಿಯುವ ನೀರಿನಲ್ಲಿ ವಿಷ ಮಿಶ್ರಣ – ಅಸ್ವಸ್ಥರ ಸಂಖ್ಯೆ 17ಕ್ಕೆ ಏರಿಕೆ

    ಯಾದಗಿರಿ: ಕುಡಿಯುವ ನೀರಿನ ಟ್ಯಾಂಕಿನಲ್ಲಿ ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ವಸ್ಥರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ.

    ಶಖಾಪುರ ಗ್ರಾಮದ ರೇವಣಸಿದ್ದಪ್ಪ ರಾಯಪ್ಪ(30), ಸಿದ್ದಪ್ಪ ತಿಪ್ಪಣ್ಣಾ ದೊರೆ(60) ಹಾಗೂ ಶಶಿಕುಮಾರ್ ಚಾಮಣ್ಣಾ(18) ಅಸ್ವಸ್ಥರಾಗಿದ್ದಾರೆ. ಅವರನ್ನು ಕೆಂಬಾವಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಶಖಾಪುರ ಗ್ರಾಮದ ವಿಷಕಾರಿ ನೀರು ಕುಡಿದಿದ್ದಕ್ಕೆ 14 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಅಸ್ವಸ್ಥರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

    ಪಂಪ್ ಆಪರೇಟರ್ ಮೌನೇಶ್ ಪಂಪ್ ಆಪರೇಟರ್, ನಾಗಮ್ಮ, ರಾಯಮ್ಮ, ಅಶ್ವಿನಿ, ಮಲ್ಲಮ್ಮ ಗಂಡ ವಿರುಪಾಕ್ಷಿ, ಹಳ್ಳೆಮ್ಮ, ಈರಪ್ಪ, ಕಲ್ಲಮ್ಮ, ಲಕ್ಷ್ಮೀಬಾಯಿ, ಕಸ್ತೂರಿ ಬಾಯಿ, ಶಾಂತಮ್ಮ, ಬಸಮ್ಮ, ಅಯ್ಯಮ್ಮ, ಸುರೇಶ, ರೇವಣಸಿದ್ದಪ್ಪ, ಸಿದ್ದಪ್ಪ ದೋರೆ, ಶಶಿಕುಮಾರ್ ಅಸ್ವಸ್ಥರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪಂಪ್ ಆಪರೇಟರ್ ಮೌನೇಶ್ ತಾಯಿ ಹೊನ್ನಮ್ಮ ಚಿಕಿತ್ಸೆ ಫಲಿಸದೇ ರಕ್ತ ವಾಂತಿ ಮಾಡಿಕೊಂಡು ಬುಧವಾರ ಮೃತಪಟ್ಟಿದ್ದರು. ಬುಧವಾರ ತಪಾಸಣೆಗೆಂದು ಕ್ರಿಮಿನಾಶಕ ಬೆರೆಸಿದ ಕುಡಿಯುವ ನೀರು ಕುಡಿದು ಹೊನ್ನಮ್ಮ ಅಸ್ವಸ್ಥಗೊಂಡಿದ್ದರು. ಅವರನ್ನು ಯಾದಗಿರಿಯ ಕೆಂಬಾವಿಯಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಷ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆದಿದ್ದ 6 ಮಂದಿ ಮತ್ತೆ ಆಸ್ಪತ್ರೆಗೆ ದಾಖಲು

    ವಿಷ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆದಿದ್ದ 6 ಮಂದಿ ಮತ್ತೆ ಆಸ್ಪತ್ರೆಗೆ ದಾಖಲು

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆದಿದ್ದ 6 ಮಂದಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಎಂ.ಜಿ.ದೊಡ್ಡಿ ಗ್ರಾಮದ ರೇಖಾ, ಪಳನಿಯಮ್ಮ, ಮಲ್ಲಿಗೆ, ವೀರಮ್ಮ, ಕಮಲ ಮತ್ತು ಪಳನಿ ಎಂಬವರಿಗೆ ಹೊಟ್ಟೆ ಉರಿ, ಎದೆ ನೋವು, ತಲೆ ನೋವು, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಇತ್ತ ಸುಳ್ವಾಡಿ ದುರಂತ ಇನ್ನು ಹಸಿಯಾಗಿರುವಾಗಲೇ ಅಂಥದ್ದೇ ಪ್ರಕರಣವೊಂದು ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ. ಅಲ್ಲಿ ಮಾರಮ್ಮನ ಪ್ರಸಾದದಲ್ಲಿ ವಿಷ ಬೆರೆಸಿದರೆ, ಇಲ್ಲಿ ಕುಡಿಯುವ ನೀರಿಗೆ ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ್ದಾರೆ. ಸುರಪುರ ತಾಲೂಕಿನ ಮುದನೂರ ಕೆ ಗ್ರಾಮದ ಹೊರಭಾಗದಲ್ಲಿರುವ ಬಾವಿಯ ನೀರು ಶಾಖಾಪುರ ಹಾಗೂ ತೆಗ್ಗಳ್ಳಿ ಗ್ರಾಮಕ್ಕೆ ಫಿಲ್ಟರ್ ಅಗಿ ಸರಬರಾಜಾಗ್ತಿತ್ತು. ಆದ್ರೆ ಯಾರೋ ಕಿಡಿಗೇಡಿಗಳು ಈ ನೀರಿಗೆ ಭತ್ತದ ಬೆಳೆಗೆ ಸಿಂಪಡಿಸುವ ಕ್ರಿಮಿನಾಶಕ ಬೆರೆಸಿದ್ದಾರೆ.

    ಈ ನೀರು ಕುಡಿದ ಪಂಪ್ ಆಪರೇಟರ್ ತಾಯಿ ನಾಗಮ್ಮ ಸೇರಿ ಐವರು ಅಸ್ವಸ್ಥರಾಗಿದ್ದು ಕೆಂಬಾವಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಪಂಪ್ ಆಪರೇಟರ್ ಮೌನೇಶ್ ನೀರು ಪೂರೈಕೆ ಸ್ಥಗಿತಗೊಳಿಸಿ ಗ್ರಾಮದಲ್ಲಿ ಯಾರು ಈ ನೀರು ಕುಡಿಯಬೇಡಿ ಎಂದು ಡಂಗೂರ ಸಾರಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಸದ್ಯ ಬಾವಿಯ ನೀರು ಖಾಲಿ ಮಾಡಿಸಲಾಗ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಾಲಿವುಡ್ ನಟಿ ಬಿಪಾಶಾ ಬಸು ಆಸ್ಪತ್ರೆಗೆ ದಾಖಲು!

    ಬಾಲಿವುಡ್ ನಟಿ ಬಿಪಾಶಾ ಬಸು ಆಸ್ಪತ್ರೆಗೆ ದಾಖಲು!

    ಮುಂಬೈ: ಬಾಲಿವುಡ್ ನಟಿ ಬಿಪಾಶಾ ಬಸು ತೀವ್ರ ಉಸಿರಾಟದ ಸಮಸ್ಯೆಯಿಂದ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಇತ್ತೀಚೆಗೆ ಬಿಪಾಶಾ ಬಸು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೇ ಆಗಾಗ ಆಸ್ಪತ್ರೆಗೂ ಕೂಡ ಭೇಟಿ ನೀಡುತ್ತಿದ್ದರು. ಆದರೆ ಈಗ ಅವರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದು, ಆಸ್ಪತ್ರೆಯಲ್ಲೇ ದಾಖಲಾಗಿದ್ದಾರೆ.

    ಬಿಪಾಶಾ ಆರೋಗ್ಯದ ಬಗ್ಗೆ ಆಕೆಯ ಕುಟುಂಬದವರಾಗಲೀ ಅಥವಾ ಸ್ನೇಹಿತರಾಗಲಿ ಅಧಿಕೃತವಾಗಿ ಯಾವುದೇ ಮಾಹಿತಿ ನೀಡುತ್ತಿಲ್ಲ. ಸದ್ಯ ಬಿಪಾಶಾ ಅವರನ್ನು ಎಲ್ಲಾ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲು ಶುರು ಮಾಡಿದ್ದಾರೆ.

  • ವೇಗವಾಗಿ ಬಂದು ತಪಾಸಣಾ ಗೇಟ್ ಗೆ ಡಿಕ್ಕಿ ಹೊಡೆಯಿತು ಲಾರಿ – ಪಾಲಕನಿಗೆ ಗೇಟ್ ಬಡಿಯೋದನ್ನು ನೋಡಿ

    ವೇಗವಾಗಿ ಬಂದು ತಪಾಸಣಾ ಗೇಟ್ ಗೆ ಡಿಕ್ಕಿ ಹೊಡೆಯಿತು ಲಾರಿ – ಪಾಲಕನಿಗೆ ಗೇಟ್ ಬಡಿಯೋದನ್ನು ನೋಡಿ

    ಮಡಿಕೇರಿ: ರಭಸದಿಂದ ಬಂದ ಲಾರಿಯೊಂದು ಅರಣ್ಯ ತಪಾಸಣಾ ಗೇಟ್ ಗೆ ಡಿಕ್ಕಿ ಹೊಡೆದು ಆ ಗೇಟ್ ಪಾಲಕನಿಗೆ ಬಡಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆಯಲ್ಲಿ ನಡೆದಿದೆ.

    ರಾಜಪ್ಪ ಗಂಭೀರವಾಗಿ ಗಾಯಗೊಂಡಿದ್ದ ಗೇಟ್ ಪಾಲಕ. ರಾಜಪ್ಪ ಅರಣ್ಯ ಇಲಾಖೆಯ ಹಂಗಾಮಿ ನೌಕರನಾಗಿದ್ದು ಗೇಟ್ ಹಾಕುವ ಕೆಲಸ ಮಾಡುತ್ತಿದ್ದರು. ಈ ವೇಳೆ ಲಾರಿಯೊಂದು ರಭಸದಿಂದ ಬಂದು ಗೇಟ್‍ಗೆ ಡಿಕ್ಕಿ ಹೊಡೆದಿದೆ. ಆ ಗೇಟ್ ಪಾಲಕನಿಗೆ ಎರಡು ಬಾರಿ ಹೊಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಏಪ್ರಿಲ್ 6ರ ಬೆಳಿಗ್ಗೆ 10.50 ಕ್ಕೆ ಘಟನೆ ನಡೆದಿದ್ದು, ರಾಜಪ್ಪ ಗೇಟ್ ಹಾಕುವ ಕೆಲಸ ಮಾಡುತ್ತಿದ್ದರು. ಮಡಿಕೇರಿ ಕಡೆಯಿಂದ ಬಂದ ಲಾರಿ ಏಕಾಏಕಿ ಗೇಟ್ ಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಗೇಟ್ ರಸ್ತೆ ಬದಿ ನಿಲ್ಲಿಸಿದ ಇಕೋ ವಾಹನಕ್ಕೆ ಸೇರಿಸಿ ರಾಜಪ್ಪ ಅವರಿಗೆ ಎರಡು ಬಾರಿ ಅಪ್ಪಳಿಸಿದೆ.

    ಲಾರಿಯ ಬ್ರೇಕ್ ವಿಫಲಗೊಂಡ ಪರಿಣಾಮ ರಾಜಿ ಸಂಧಾನ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸದ್ಯ ರಾಜಪ್ಪ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    https://www.youtube.com/watch?v=wgpKi3w4EeU&feature=youtu.be

  • ಅಮೆರಿಕ ಆಸ್ಪತ್ರೆಗೆ ಬಾಹುಬಲಿ ಪ್ರಭಾಸ್ ದಾಖಲು!

    ಅಮೆರಿಕ ಆಸ್ಪತ್ರೆಗೆ ಬಾಹುಬಲಿ ಪ್ರಭಾಸ್ ದಾಖಲು!

    ಹೈದರಾಬಾದ್: ಪ್ರಭಾಸ್ ಇತ್ತೀಚಿನ ದಿನಗಳಲ್ಲಿ ತಮ್ಮ ಸಾಹೋ ಚಿತ್ರದಲ್ಲಿ ಬ್ಯೂಸಿಯಾಗಿದ್ದಾರೆ. ಹೀಗಿರುವಾಗ ಪ್ರಭಾಸ್ ಹೊಸ ವರ್ಷದಂದು ಅಮೇರಿಕಾಗೆ ಹೋಗಿದ್ದಾರೆ.

    ಪ್ರಭಾಸ್ `ಬಾಹುಬಲಿ’ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ತಮ್ಮ ಎಡ ಬುಜಕ್ಕೆ ಬಲವಾದ ಪೆಟ್ಟು ಮಾಡಿಕೊಂಡಿದ್ದರು. ಆ ನೋವು ತಡೆಯಲಾರದೇ 2016ರಲ್ಲೇ ಅಮೆರಿಕ ದೇಶಕ್ಕೆ ಶಸ್ತ್ರ ಚಿಕಿತ್ಸೆಗೆಂದು ಹೋಗಿದ್ದರು. ಆ ಚಿಕಿತ್ಸೆ ಹಾಗೇ ಬಾಕಿ ಇತ್ತು. ಆದರೆ ಈಗ ಮತ್ತೆ ಪ್ರಭಾಸ್ ಗೆ ಆ ನೋವು ಕಾಣಿಸಿಕೊಂಡಿದೆ.

    ಹೌದು. `ಸಾಹೋ’ ಸಿನಿಮಾದ ಮೇಜರ್ ಫೈಟಿಂಗ್ ಸಿಕ್ವೇನ್ಸ್ ನಲ್ಲಿ ಇರೋ ಕಾರಣ ಮತ್ತೆ ಭುಜದ ನೋವು ಕಾಣಿಸಿಕೊಂಡಿದೆ. ತಮ್ಮಿಂದ ಶೂಟಿಂಗ್ ಗೆ ತೊಂದರೆ ಆಗಬಾರದೆಂದು ಹೊಸವರ್ಷದ ದಿನ ಅಮೆರಿಕಗೆ ಹಾರಿದ್ದಾರೆ. ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾರೆ ಎಂದು ಟಾಲಿವುಡ್ ಮಾಧ್ಯಮಗಳು ವರದಿ ಮಾಡಿವೆ.

    ಸದ್ಯ ಪ್ರಭಾಸ್ ಸಾಹೋ ಚಿತ್ರದಲ್ಲಿ ನಟಿಸುತ್ತಿದ್ದು, ಶ್ರದ್ಧಾ ಕಪೂರ್ ಚಿತ್ರದ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

  • ವಯಸ್ಸಾದವರನ್ನು ಆಸ್ಪತ್ರೆಗೆ ದಾಖಲಿಸಿ ಮತ್ತೆ ಕರ್ಕೊಂಡೋಗಲ್ಲ- ಶಿರಸಿಯಲ್ಲಿ ಮನಕಲುಕುವ ಘಟನೆ

    ವಯಸ್ಸಾದವರನ್ನು ಆಸ್ಪತ್ರೆಗೆ ದಾಖಲಿಸಿ ಮತ್ತೆ ಕರ್ಕೊಂಡೋಗಲ್ಲ- ಶಿರಸಿಯಲ್ಲಿ ಮನಕಲುಕುವ ಘಟನೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸರ್ಕಾರಿ ಪಂಡಿತ್ ಸಾರ್ವಜನಿಕ ಆಸ್ಪತ್ರೆ ಇದೆ. ಈ ಆಸ್ಪತ್ರೆಗೆ ಸುತ್ತಮುತ್ತಲಿನ ಜನರು ಹಲವು ಕಾರಣಗಳಿಗಾಗಿ ವಯಸ್ಸಾದ ತಂದೆ-ತಾಯಿಯರನ್ನು ಕರೆದುಕೊಂಡು ಬಂದು ದಾಖಲು ಮಾಡುತ್ತಾರೆ. ಆದ್ರೆ ಹುಷಾರಾದ ಬಳಿಕ ತಂದೆ-ತಾಯಿಯನ್ನು ವಾಪಸ್ ಕರೆದುಕೊಂಡು ಹೋಗದೇ ಇರುವುದು ವಿಷಾದನೀಯ ಸಂಗತಿ.

    ಪ್ರತಿ ತಿಂಗಳು ಇದೇ ರೀತಿ ಇಬ್ಬರು ವಯೋವೃದ್ಧರು ಈ ಆಸ್ಪತ್ರೆಗೆ ಬಂದು ದಾಖಲಾಗುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಆಸ್ಪತ್ರೆಯಲ್ಲಿ ನೀಡುವ ಬನ್ ಹಾಗೂ ಹಾಲನ್ನು ಸೇವಿಸಿ ಬದುಕು ಸಾಗಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಕೆಲವರನ್ನು ಎನ್‍ಜಿಒ ನೆರವಿನಿಂದ ಧಾರವಾಡದ ವೃದ್ಧಾಶ್ರಮಕ್ಕೆ ಸೇರಿಸಲಾಗಿದೆ. ಈ ಆಸ್ಪತ್ರೆ ಸಿಬ್ಬಂದಿಗಳು ಕೂಡ ಯಾವುದೇ ಫಲಾಪೇಕ್ಷೆ ಇಲ್ಲದೆ ತಮ್ಮದೇ ಖರ್ಚಿನಲ್ಲಿ ಮೂಲಭೂತ ವಸ್ತುಗಳಾದ ಸೋಪು, ತಲೆಗೆ ಎಣ್ಣೆ ಕೊಡಿಸುತ್ತಿದ್ದಾರೆ. ನಮಗೆ ಎಲ್ಲಿಯಾದರೂ ವ್ಯವಸ್ಥೆ ಮಾಡಿಕೊಡಿ ಎನ್ನುವ ಧ್ವನಿ ಕಣ್ಣಲ್ಲಿ ನೀರು ತರಿಸುತ್ತಿದೆ.