Tag: admitte

  • ಐಶ್ವರ್ಯಾ ರೈ, ಪುತ್ರಿ ಆರಾಧ್ಯ ಬಚ್ಚನ್‌ಗೆ ಕೊರೊನಾ, ಆಸ್ಪತ್ರೆಗೆ ದಾಖಲು

    ಐಶ್ವರ್ಯಾ ರೈ, ಪುತ್ರಿ ಆರಾಧ್ಯ ಬಚ್ಚನ್‌ಗೆ ಕೊರೊನಾ, ಆಸ್ಪತ್ರೆಗೆ ದಾಖಲು

    ಮುಂಬೈ: ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾಧ್ಯ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗಲಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಕಳೆದ ಆರು ದಿನಗಳ ಹಿಂದೆ ಹಿರಿಯ ನಟ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್‍ಗೆ ಮೊದಲು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದಾದ ನಂತರ ನಟಿ ಐಶ್ವರ್ಯಾ ರೈ ಅವರಿಗೂ ಮತ್ತು ಪುತ್ರಿ ಆರಾಧ್ಯ ಬಚ್ಚನ್ ಅವರಿಗೂ ಅಲ್ಪ ಮಟ್ಟದ ಸೋಂಕಿನ ಗುಣಲಕ್ಷಣಗಳು ಕಾಣಿಸಿಕೊಂಡಿದ್ದವು. ಆದರೆ ಜಯಾ ಬಚ್ಚನ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿತ್ತು.

    ಕೊರೊನಾ ವೈರಸ್ ಗುಣಲಕ್ಷಣ ಕಾಣಿಸಿಕೊಂಡ ತಕ್ಷಣ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಪ ಮಟ್ಟದ ಗುಣಲಕ್ಷಣಗಳು ಕಂಡು ಬಂದಿದ್ದ ಐಶ್ವರ್ಯಾ ಮತ್ತು ಆರಾಧ್ಯ ಮನೆಯಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಅವರು ಕೂಡ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಶ್ಚರ್ಯಾ ಮತ್ತು ಆರಾಧ್ಯ ಆಸ್ಪತ್ರೆಗೆ ದಾಖಲಾಗಿದ್ದು, ನಾವು ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ಖಚಿತ ಪಡಿಸಿದೆ.

    ಜುಲೈ 11ರಂದು ಅಮಿತಾಬ್ ಬಚ್ಚನ್ ಅವರಿಗೆ ಮತ್ತು ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಕುರಿತು ಅಂದು ಟ್ವೀಟ್ ಮಾಡಿದ್ದ ಬಿಗ್‍ಬಿ, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದೇನೆ. ನಮ್ಮ ಕುಟುಂಬದವರು ಹಾಗೂ ಸಿಬ್ಬಂದಿಯನ್ನು ಸಹ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿಗಾಗಿ ಕಾಯುತ್ತಿದ್ದೇವೆ ಎಂದು ಬರೆದುಕೊಂಡಿದ್ದರು.