Tag: Adulterer

  • ರಾಜಭವನ ಚಲೋ, ರೈತ ವಿರೋಧಿ ಸರ್ಕಾರದ ಅಂತ್ಯಕ್ಕೆ ಮುನ್ನುಡಿ: ಪ್ರಿಯಾಂಕ್ ಖರ್ಗೆ

    ರಾಜಭವನ ಚಲೋ, ರೈತ ವಿರೋಧಿ ಸರ್ಕಾರದ ಅಂತ್ಯಕ್ಕೆ ಮುನ್ನುಡಿ: ಪ್ರಿಯಾಂಕ್ ಖರ್ಗೆ

    ಕಲಬುರಗಿ: ಕೇಂದ್ರದ ಕೃಷಿ ಕಾಯಿದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಹಾಗೂ ಕಾಂಗ್ರೆಸ್ ಪಕ್ಷದಿಂದ ನಡೆಸಲಾಗುತ್ತಿರುವ ರಾಜಭವನ ಚಲೋ ಪ್ರತಿಭಟನೆಯನ್ನು ಉಲ್ಲೇಖಿಸಿ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.

    ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರ ತನ್ನ ಅಹಂಕಾರಕ್ಕೆ ಅತೀ ಶೀಘ್ರದಲ್ಲಿಯೇ ತಕ್ಕ ಪ್ರತಿಫಲ ಅನುಭವಿಸಲಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

    ರೈತರ ಈ ಹೋರಾಟ ಕಠಿಣವಾದ ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯುವವರೆಗೆ ನಿಲ್ಲುವುದಿಲ್ಲ. ರಾಜಭವನ ಚಲೋ ಕಾರ್ಯಕ್ರಮ ರೈತವಿರೋಧಿ ಸರ್ಕಾರ ಕೊನೆಗಾಣಿಸಲು ಮುನ್ನುಡಿಯಾಗಲಿದೆ ಎಂದು ಉಲ್ಲೇಖಿಸಿ ರಾಜಭವನ ಚಲೋ ಪ್ರತಿಭಟನೆಯ ಫೋಟೋಗಳನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಕೃಷಿ ಕಾನೂನಿನ ಪ್ರಮುಖ ಪಾಲುದಾರರಾದ ರೈತರ ಸೂಕ್ತ ಸಮಾಲೋಚನೆಯಿಲ್ಲದೆ, ಏಕೆ ಅಂಗೀಕರಿಸಲಾಗಿದೆ ಎಂದು ಸರ್ಕಾರ ಉತ್ತರಿಸಬೇಕಾಗಿದೆ. ಈ ಪ್ರತಿಭಟನೆಯಲ್ಲಿ 60ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.