Tag: Advani

  • ಈ ಹೋರಾಟದಲ್ಲಿ ನಾನು ಭಾಗವಹಿಸಿದ್ದೆ, ಸತ್ಯಕ್ಕೆ ಜಯ ಸಿಕ್ಕಿದೆ: ಬಿಎಸ್‍ವೈ

    ಈ ಹೋರಾಟದಲ್ಲಿ ನಾನು ಭಾಗವಹಿಸಿದ್ದೆ, ಸತ್ಯಕ್ಕೆ ಜಯ ಸಿಕ್ಕಿದೆ: ಬಿಎಸ್‍ವೈ

    ಬೆಂಗಳೂರು: ಬಾಬ್ರಿ ಮಸೀದಿಯ ಹೋರಾಟದಲ್ಲಿ ನಾನು ಸಹ ಭಾಗವಹಿಸಿದ್ದೆ, ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಹೇಳಿದ್ದಾರೆ.

    ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಬಂದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇಂದು ಸಿಬಿಐ ನ್ಯಾಯಾಲಯ ಐತಿಹಾಸಿಕ ತೀರ್ಪು ಕೊಟ್ಟಿದೆ. 32 ನಾಯಕರನ್ನು ನಿರ್ದೋಷಿ ಎಂದು ತೀರ್ಪು ಬಂದಿದೆ. ಇದರಿಂದ ಸತ್ಯಕ್ಕೆ ಜಯ ಸಿಕ್ಕಿದೆ. ಈ ಹೋರಾಟದಲ್ಲಿ ನಾನೂ ಸಹ ಭಾಗವಹಿಸಿದ್ದೆ ಎಂದು ಸಂತಸ ವ್ಯಕ್ತಪಡಿಸಿದರು.

    ನನಗೂ ಈ ತೀರ್ಪು ವೈಯಕ್ತಿಕವಾಗಿ ಸಂತಸ ತಂದಿದೆ. ಹಿರಿಯ ನಾಯಕ ಅಡ್ವಾಣಿಯವರ ಯಶಸ್ವಿ ಹೋರಾಟದಿಂದ ಅಯೋಧ್ಯೆಯಲ್ಲಿ ಇಂದು ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ. ಜನ ತೀರ್ಪು ಏನಾಗುತ್ತೆ ಎಂದು ಬಹಳ ಕಾತುರದಿಂದ ಕಾಯುತ್ತಿದ್ದರು. ಇವತ್ತು ಭಾರತೀಯರೆಲ್ಲರೂ ಸಂತೋಷ ಪಡುವ ದಿನ. ಹೋರಾಟಗಾರರಿಗೆ ಗೆಲುವು ಯಾವತ್ತೂ ಶತಸಿದ್ಧ ಅನ್ನೋದಕ್ಕೆ ಇದು ತಾಜಾ ಉದಾಹರಣೆ. ಈ ಯಶಸ್ಸಿಗೆ ಅಡ್ವಾಣಿ, ಜೋಷಿ, ಉಮಾಭಾರತಿಯಂತವರು ಕಾರಣ ಎಂದರು.

    1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿತ್ತು. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್‍ಶೀಟ್ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು. ಈಗ ಈ ಪ್ರಕರಣದಲ್ಲಿದ್ದ ಎಲ್ಲ ಆರೋಪಿಗಳು ಖುಲಾಸೆಯಾಗಿದ್ದಾರೆ.

  • ಬಾಬ್ರಿ ಮಸೀದಿ ಧ್ವಂಸ ಕೇಸ್‌, ಸೆ.30ಕ್ಕೆ ಅಂತಿಮ ತೀರ್ಪು – 32 ಆರೋಪಿಗಳು ಹೆಸರು ಇಲ್ಲಿದೆ

    ಬಾಬ್ರಿ ಮಸೀದಿ ಧ್ವಂಸ ಕೇಸ್‌, ಸೆ.30ಕ್ಕೆ ಅಂತಿಮ ತೀರ್ಪು – 32 ಆರೋಪಿಗಳು ಹೆಸರು ಇಲ್ಲಿದೆ

    ಲಕ್ನೋ: 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಸೆ.30ರಂದು ಅಂತಿಮ ತೀರ್ಪು ಪ್ರಕಟಿಸುವುದಾಗಿ ಸಿಬಿಐ ವಿಶೇಷ ಕೋರ್ಟ್ ತಿಳಿಸಿದೆ.

    ತೀರ್ಪು ನೀಡುವ ದಿನ ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್‌ ಸೂಚಿಸಿದ್ದಾರೆ.

    ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ ಆರೋಪಿಗಳಿದ್ದಾರೆ.

     

     

    351 ಸಾಕ್ಷಿ ಹಾಗೂ 600 ದಾಖಲಾತಿ ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದೆ ಸಿಬಿಐ ಹಾಜರುಪಡಿಸಿತ್ತು. ಸೆಪ್ಟೆಂಬರ್‌ 1ರಂದು ವಾದ ಮತ್ತು ಪ್ರತಿವಾದ ಮುಗಿದಿದ್ದು, ವಿಶೇಷ ನ್ಯಾಯಾಧೀಶರು ತೀರ್ಪು ಬರೆಯುತ್ತಿದ್ದಾರೆ ಎಂದು ಸಿಬಿಐ ಪರ ವಕೀಲ ಲಲಿತ್‌ ಸಿಂಗ್‌ ತಿಳಿಸಿದ್ದಾರೆ.

    2017ರ ಏಪ್ರಿಲ್‌ 19 ಎಂದು ಪ್ರತಿನಿತ್ಯ ವಿಚಾರಣೆ ನಡೆಸಿ 2 ವರ್ಷದ ಒಳಗಡೆ ತೀರ್ಪು ಪ್ರಕಟಿಸುವಂತೆ ಸಿಬಿಐ ವಿಶೇಷ ಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

    ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿತ್ತು. ಲಕ್ನೋ ಸಿಬಿಐ ನ್ಯಾಯಾಲಯದಲ್ಲಿ ಕರಸೇವಕರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೆ 8 ವಿಐಪಿಗಳ ವಿರುದ್ಧ ರಾಯಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. 2017ರ ಏಪ್ರಿಲ್‌ನಲ್ಲಿ ರಾಯಬರೇಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಲಕ್ನೋ ಸಿಬಿಐ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್‌ ವರ್ಗಾಯಿಸಿತ್ತು.

    32 ಮಂದಿಆರೋಪಿಗಳು ಯಾರು?
    ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್‌ ಪಾಂಡೆ, ವಿಜಯ್‌ ಬಹದ್ದೂರ್‌ ಸಿಂಗ್‌, ಆರ್‌ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.

  • ಬಾಬರಿ ಮಸೀದಿ ಧ್ವಂಸ ಪ್ರಕರಣ – ಅಡ್ವಾಣಿ, ಉಮಾಭಾರತಿ ಸೇರಿ 12 ಮಂದಿಗೆ ಜಾಮೀನು

    ಬಾಬರಿ ಮಸೀದಿ ಧ್ವಂಸ ಪ್ರಕರಣ – ಅಡ್ವಾಣಿ, ಉಮಾಭಾರತಿ ಸೇರಿ 12 ಮಂದಿಗೆ ಜಾಮೀನು

    ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರಾದ ಲಾಲ್ ಕೃಷ್ಣ ಅಡ್ವಾಣಿ, ಕೇಂದ್ರ ಸಚಿವೆ ಉಮಾಭಾರತಿ ಹಾಗೂ ಮುರಳಿ ಮನೋಹರ ಜೋಷಿ ಸೇರಿದಂತೆ ಪ್ರಕರಣದ 12 ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

    ಉತ್ತರ ಪ್ರದೇಶದ ಲಖನೌನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಎಸ್ ಕೆ ಯಾದವ್ ನೇತೃತ್ವದಲ್ಲಿ ವಿಚಾರಣೆ ನಡೆಯಿತು. ಈ ಹಿಂದಿನ ವಿಚಾರಣೆಯಲ್ಲಿ ಆರೋಪಿಗಳು ಖುದ್ದಾಗಿ ಹಾಜರಾಗಬೇಕು. ಇಲ್ಲದಿದ್ದರೆ ಯಾವುದೇ ರೀತಿಯ ಮನವಿ ಮತ್ತು ಅರ್ಜಿಗಳನ್ನು ಸ್ಪೀಕರಿಸುವುದಿಲ್ಲ ಎಂದು ನ್ಯಾಯಮೂರ್ತಿ ಎಸ್.ಕೆ. ಯಾದವ್ ಸ್ಪಷ್ಟಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳು ಇಂದು ವಿಚಾರಣೆಗೆ ಖುದ್ದು ಹಾಜರಾಗಿ, ಜಾಮೀನು ಅರ್ಜಿ ಸಲ್ಲಿಸಿದ್ದರು.

    ಬಾಬರಿ ಮಸೀದಿ ಧ್ವಂಸಕ್ಕೆ ಸಂಚು ರೂಪಿಸಿದ್ದರು ಎಂಬ ಆರೋಪದ ಮೇಲೆ ಕಳೆದ ಏಪ್ರಿಲ್ 19ರಂದು ಪ್ರಕರಣ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಪ್ರಕರಣದ ತನಿಖೆಯನ್ನು ಲಖನೌನಲ್ಲಿ ನಡೆಸಿ 2 ವರ್ಷದಲ್ಲಿ ತೀರ್ಪು ನೀಡುವಂತೆ ಆದೇಶ ನೀಡಿತ್ತು.