Tag: Advice

  • ಹೂವಿನ ಹಾರ, ಮೊಟ್ಟೆ, ಕಲ್ಲು ಹಾಗೂ ರಶ್ಮಿಕಾ: ಕಿಚ್ಚನ ಸಖತ್ ಉತ್ತರ

    ಹೂವಿನ ಹಾರ, ಮೊಟ್ಟೆ, ಕಲ್ಲು ಹಾಗೂ ರಶ್ಮಿಕಾ: ಕಿಚ್ಚನ ಸಖತ್ ಉತ್ತರ

    ಸಂದರ್ಶನ ಯಾರೇ ಮಾಡುತ್ತಿರಲಿ ಕಿಚ್ಚ ಸುದೀಪ್ ಮಾತ್ರ ಅಚ್ಚುಕಟ್ಟಾಗಿ ಅದರಲ್ಲಿ ಭಾಗಿಯಾಗುತ್ತಾರೆ. ಪ್ರಶ್ನೆಗೆ ಹೊಸ ರೀತಿಯಲ್ಲೇ ಉತ್ತರ ನೀಡುತ್ತಾರೆ. ಅವರ ಮಾತಿನಲ್ಲೊಂದು ತೂಕ ಇರುತ್ತದೆ. ಪ್ರತಿಮೆ ಬಳಸಿಕೊಂಡೇ ಅವರು ಮಾತನಾಡುತ್ತಾರೆ. ರಶ್ಮಿಕಾ ಮಂದಣ್ಣ ಮೇಲೆ ಆಗುತ್ತಿರುವ ಟ್ರೋಲ್ ವಿಚಾರವಾಗಿಯೂ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದ್ದಾರೆ. ನಾವು ಏನು ಮಾತನಾಡುತ್ತಿದ್ದೇವೆ ಎನ್ನುವುದರ ಬಗ್ಗೆ ಅರಿವೂ ಇರಬೇಕು ಅಂದಿದ್ದಾರೆ.

    ನಾನಾ ಕಾರಣಗಳಿಂದಾಗಿ ರಶ್ಮಿಕಾ ಮಂದಣ್ಣ ಟ್ರೋಲ್ ಆಗುತ್ತಲೇ ಇರುತ್ತಾರೆ. ಬಹುಶಃ ಈ ವರ್ಷದಲ್ಲಿ ಅತೀ ಹೆಚ್ಚು ಟ್ರೋಲ್ ಆದ ನಟಿ ಎಂಬ ಹೆಗ್ಗಳಿಕೆಯೂ ಅವರದ್ದು. ಅದರಲ್ಲೂ ಕನ್ನಡ ಸಿನಿಮಾರಂಗ ಮತ್ತು ಕನ್ನಡದ ವಿಚಾರವಾಗಿ ಅವರು ಸಾಕಷ್ಟು ಬಾರಿ ಟ್ರೋಲ್ ಆಗಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಕಾಂತಾರ ಸಿನಿಮಾವನ್ನೂ ಇನ್ನೂ ನೋಡಿಲ್ಲ ಎನ್ನುವ ಕಾರಣಕ್ಕಾಗಿ ಟ್ರೋಲಿಗರಿಗೆ ಆಹಾರವಾಗಿದ್ದರು. ಇದೇ ವಿಚಾರವಾಗಿಯೇ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ಅದನ್ನೂ ಮಾರ್ಮಿಕವಾಗಿಯೇ ವಿವರಿಸಿದ್ದಾರೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಟ್ರೋಲ್ ವಿಚಾರದಲ್ಲಿ ಮುಂದುವರೆದು ಮಾತನಾಡಿರುವ ಸುದೀಪ್, ‘ಪಬ್ಲಿಕ್ ಫಿಗರ್ ಎಂಬ ಹಣೆಪಟ್ಟಿ ಬಂದಾಕ್ಷಣ ಹೂವಿನ ಹಾರದ ಜೊತೆ, ಟೊಮ್ಯಾಟೊ, ಮೊಟ್ಟೆ, ಕಲ್ಲುಗಳು ಸಹ ಬರಬಹುದು’ ಎಂದು ಹೇಳಿದ್ದಾರೆ. ಈ ಮೂಲಕ ಸಿಲೆಬ್ರಿಟಿ ಆದವನು ಹೇಗೆ ಇರಬೇಕು, ಹೇಗೆ ಇದ್ದರೆ ತಮ್ಮತ್ತ ಏನು ತೂರಿ ಬರುತ್ತವೆ ಎನ್ನುವುದನ್ನು ಸೂಕ್ಷ್ಮವಾಗಿ ಹೇಳಿದ್ದಾರೆ. ಅದರಲ್ಲೂ ಸಾರ್ವಜನಿಕ ಬದುಕಿನಲ್ಲಿ ಇರುವವರು ಹೇಗೆ ಇರಬೇಕು, ಯಾವ ರೀತಿಯಲ್ಲಿ ವರ್ತಿಸಬೇಕು ಎನ್ನುವುದನ್ನು ವಿವರಿಸಿದ್ದಾರೆ.

    ಬಿಗ್ ಬಾಸ್ ವೇದಿಕೆಯಲ್ಲೂ ಕಿಚ್ಚ ಇಂತಹ ಅನೇಕ ಸಂಗತಿಗಳನ್ನು ಹೇಳಿಕೊಂಡಿದ್ದಾರೆ. ಉದಾಹರಣೆ ಸಹಿತ ವಿವರಿಸಿದ್ದಾರೆ. ಯಾರೋ ಯಾರಿಗೋ ಅವಮಾನ ಮಾಡಿದಾಗ ನೇರವಾಗಿಯೇ ಅವರಿಗೆ ತಿವಿದಿದ್ದಾರೆ. ಸಲಹೆಗಳನ್ನು ನೀಡಿದ್ದಾರೆ. ಎಚ್ಚರಿಕೆಯ ಮಾತುಗಳನ್ನೂ ಆಡಿದ್ದಾರೆ. ಹಾಗಾಗಿ ಕಿಚ್ಚ ಸುದೀಪ್ ಅವರ ಮಾತುಗಳು ಯಾವತ್ತಿಗೂ ವಿಶೇಷವಾಗಿ ಇರುತ್ತವೆ.

    Live Tv
    [brid partner=56869869 player=32851 video=960834 autoplay=true]

  • ತಕ್ಷಣ ಉಕ್ರೇನ್‌ನಿಂದ ಹೊರಟುಬಿಡಿ – ವಿದ್ಯಾರ್ಥಿಗಳು, ನಾಗರಿಕರಿಗೆ ಭಾರತ ತುರ್ತು ಸಲಹೆ

    ತಕ್ಷಣ ಉಕ್ರೇನ್‌ನಿಂದ ಹೊರಟುಬಿಡಿ – ವಿದ್ಯಾರ್ಥಿಗಳು, ನಾಗರಿಕರಿಗೆ ಭಾರತ ತುರ್ತು ಸಲಹೆ

    ನವದೆಹಲಿ: ರಷ್ಯಾ ಉಕ್ರೇನ್ ಮೇಲೆ ಯುದ್ಧವನ್ನು (Russia Ukraine War) ಇನ್ನಷ್ಟು ತೀವ್ರಗೊಳಿಸಿದ್ದು, ಇದೀಗ ಭಾರತ (India) ಭಾರೀ ಕಳವಳ ವ್ಯಕ್ತಪಡಿಸಿದೆ. ಉಕ್ರೇನ್‌ನಲ್ಲಿರುವ ತನ್ನ ನಾಗರಿಕರಿಗೆ ಭಾರತ, ತುರ್ತಾಗಿ ಉಕ್ರೇನ್ ಅನ್ನು ತೊರೆಯುವಂತೆ ಬುಧವಾರ ಕೇಳಿಕೊಂಡಿದೆ.

    ಉಕ್ರೇನ್‌ನಲ್ಲಿ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಉಕ್ರೇನ್‌ಗೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಭಾರತ ತನ್ನ ಎಲ್ಲಾ ನಾಗರಿಕರಿಗೆ ಬುಧವಾರ ಸಲಹೆ ನೀಡಿದೆ. ಪ್ರಸ್ತುತ ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರು ಲಭ್ಯವಿರುವ ವಿಧಾನಗಳ ಮೂಲಕ ಅಲ್ಲಿಂದ ಆದಷ್ಟು ಬೇಗ ಹೊರಡುವಂತೆ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ (Embassy) ತನ್ನ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ.

    ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಬುಧವಾರ ಉಕ್ರೇನ್‌ನ 4 ಪ್ರದೇಶಗಳಲ್ಲಿ ಸಮರ ಕಾನೂನನ್ನು ಜಾರಿಗೊಳಿಸಿದ್ದಾರೆ. ಇದರ ಹಿನ್ನೆಲೆ ಯುದ್ಧ ತೀವ್ರಗೊಳ್ಳುವ ಭೀತಿ ಉಂಟಾಗಿದ್ದು, ಭಾರತ ತನ್ನ ನಾಗರಿಕರಿಗೆ ಉಕ್ರೇನ್ ತೊರೆಯುವಂತೆ ಸಲಹೆ ನೀಡಿದೆ. ಇದನ್ನೂ ಓದಿ: ದೀಪಾವಳಿಯಲ್ಲಿ ನಿಷೇಧಿತ ಪಟಾಕಿ ಸಿಡಿಸಿದ್ರೆ 6 ತಿಂಗಳು ಜೈಲು ಶಿಕ್ಷೆ

    ಇದೇ ವೇಳೆ ಆಕ್ರಮಿತ ನಗರ ಖರ್ಸನ್‌ನ ಕೆಲವು ನಿವಾಸಿಗಳು ದೋಣಿಗಳ ಮೂಲಕ ಸ್ಥಳವನ್ನು ತೊರೆದಿದ್ದಾರೆ. ಈ ಪ್ರದೇಶ ಯುದ್ಧ ವಲಯವಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆ ನಾಗರಿಕರನ್ನು ಅಲ್ಲಿಂದ ತೆರವುಗೊಳಿಸಲಾಗುತ್ತಿದೆ. ಖರ್ಸನ್‌ನಿಂದ ಜನರು ಪಲಾಯನವಾಗುತ್ತಿರುವ ಚಿತ್ರಗಳನ್ನು ರಷ್ಯಾ ತನ್ನ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದೆ. ಇದನ್ನೂ ಓದಿ: ಕಾಶ್ಮೀರ ಪ್ರತ್ಯೇಕ ದೇಶ – ಶಾಲಾ ಪ್ರಶ್ನೆ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದಕ್ಕೆ ವಿವಾದ

    Live Tv
    [brid partner=56869869 player=32851 video=960834 autoplay=true]

  • ಈದ್ ಉಲ್ ಫಿತರ್ ಅನ್ನು ಬಸವ ಜಯಂತಿಯಂತೆ ಆಚರಿಸಿದ್ದರೆ ಮತ್ತಷ್ಟು ಹೃದಯ ಸ್ಪರ್ಶಿಯಾಗುತ್ತಿತ್ತು: ಸಿಎಂಗೆ ಸಾಹಿತಿಗಳು, ಚಿಂತಕರಿಂದ ಪತ್ರ

    ಈದ್ ಉಲ್ ಫಿತರ್ ಅನ್ನು ಬಸವ ಜಯಂತಿಯಂತೆ ಆಚರಿಸಿದ್ದರೆ ಮತ್ತಷ್ಟು ಹೃದಯ ಸ್ಪರ್ಶಿಯಾಗುತ್ತಿತ್ತು: ಸಿಎಂಗೆ ಸಾಹಿತಿಗಳು, ಚಿಂತಕರಿಂದ ಪತ್ರ

    ಬೆಂಗಳೂರು: ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬಂದಿದೆ. ಸಾರ್ವಜನಿಕ ಶಾಂತಿಯ ತೋಟವನ್ನು ಮರುಸ್ಥಾಪನೆ ಮಾಡಬೇಕಿದೆ ಎಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಸಾಹಿತಿಗಳು, ಚಿಂತಕರು ಸಿನಿ ಕ್ಷೇತ್ರದವರು ಹಾಗೂ ಎಡಪಂಥೀಯರು ಪತ್ರ ಬರೆದಿದ್ದಾರೆ.

    ಸಾಹಿತಿ ವೈದೇಹಿ, ಚಲನ ಚಿತ್ರ ನಿರ್ದೇಶಕ ಬಿ.ಸುರೇಶ್, ಗಿರೀಶ್ ಕಾಸರವಳ್ಳಿ, ಗಾಯಕಿ ಎಂಡಿ ಪಲ್ಲವಿ, ವಸುಂಧರ ಭೂಪತಿ, ನಾಗೇಶ್ ಹೆಗ್ಡೆ ಸೇರಿದಂತೆ ವಿವಿಧ ಕ್ಷೇತ್ರಗಳ 75 ಮಂದಿ ಪತ್ರ ಬರೆದಿದ್ದಾರೆ.

    ಪತ್ರದಲ್ಲೇನಿದೆ?
    ಕರ್ನಾಟಕದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಬಗ್ಗೆ ಕಾಳಜಿ ಹಾಗೂ ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ತುರ್ತಾಗಿ ಮರುಸ್ಥಾಪಿಸುವುದರ ವಿಷಯದ ಬಗ್ಗೆ ಬರೆಯಲಾಗಿದೆ.

    ಕಳೆದ ಒಂದು ತಿಂಗಳಿಂದ ತಮ್ಮನ್ನು ಭೇಟಿ ಮಾಡಿ ಈ ಕೆಳಕಂಡ ಪತ್ರವನ್ನು ಸಲ್ಲಿಸಲು ತಮ್ಮ ಕಚೇರಿಯ ಮೂಲಕ ಪ್ರಯತ್ನಿಸಿದ್ದೇವೆ. ನಮ್ಮ ಪ್ರಯತ್ನಗಳು ವಿಫಲವಾಗಿರುವುದರಿಂದ, ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಕೂಡಿರುವ ಈ ಪತ್ರವನ್ನು ಬಹಿರಂಗ ಪತ್ರವನ್ನಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ. ನಮ್ಮ ಕಾಳಜಿಯನ್ನೂ ಸಲಹೆಗಳನ್ನೂ ತಮ್ಮ ಗಮನಕ್ಕೆ ತರುವುದು ನಾಗರಿಕರಾಗಿ ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ತಾವು ಹಾಗೂ ತಮ್ಮ ಸರ್ಕಾರವು ಈ ಪತ್ರವನ್ನು ಗಂಭೀರವಾಗಿ ಪರಿಗಣಿಸುವಿರೆಂದು ನಂಬಿದ್ದೇವೆ.

    ನಾವು ಕರ್ನಾಟಕದಲ್ಲಿ ನೆಲೆಸಿರುವ ವಿವಿಧ ಕ್ಷೇತ್ರ ಮತ್ತು ವೃತ್ತಿಗಳಿಗೆ ಸೇರಿದ ಸಾರ್ವಜನಿಕ ಕಳಕಳಿಯುಳ್ಳ ನಾಗರಿಕರಾಗಿದ್ದೇವೆ. ಶಾಂತಿ, ಸಹಬಾಳ್ವೆ, ವೈವಿದ್ಯತೆ, ಬಹುತ್ವಕ್ಕೆ ಹೆಸರಾಗಿದ್ದ ಈ ನಾಡಿನಲ್ಲಿ ಇವುಗಳನ್ನೆಲ್ಲ ನಾಶಗೊಳಿಸುವಂತಹ ಇತ್ತೀಚಿನ ಬೆಳವಣಿಗೆಗಳನ್ನು ನೋಡಿ ಲಕ್ಷಾಂತರ ನಾಗರಿಕರಂತೆ ನಾವೂ ಸಹ ತೀವ್ರವಾಗಿ ವ್ಯಾಕುಲಗೊಂಡಿದ್ದೇವೆ. ಇಂತಹ ತಪ್ಪು ನಡೆಗಳನ್ನು ಸರಿಪಡಿಸಲು ಈಗಲೂ ಅವಕಾಶವಿದ್ದು ಅದಕ್ಕೆ ಅಗತ್ಯವಾದ ಸಲಹೆಗಳನ್ನು ಸರ್ಕಾರಕ್ಕೆ ನೀಡುವುದು ನಾಗರಿಕರಾದ ನಮ್ಮ ಕರ್ತವ್ಯವೆಂದು ಭಾವಿಸಿ ಈ ಪತ್ರವನ್ನು ತಮಗೆ ಸಲ್ಲಿಸುತ್ತಿದ್ದೇವೆ. ಇದನ್ನೂ ಓದಿ: ಗಡಿಯಲ್ಲಿರುವಾಗಲೇ ಸೈನಿಕನಾದವನು ಚಿಂತೆಗೆ ಬೀಳಬೇಕು- ಅಗ್ನಿಪಥ್ ವಿರುದ್ಧ ನಲಪಾಡ್ ಕಿಡಿ

    ಕೋಮು ಸೌಹಾರ್ದತೆಯ ವಿಷಯದಲ್ಲಿ ನಮ್ಮ ರಾಜ್ಯಕ್ಕೆ ಭವ್ಯ ಪರಂಪರೆಯಿದೆ. 1956 ರಲ್ಲಿ ಕರ್ನಾಟಕ ಏಕೀಕರಣವಾಯಿತು. ಆದರೆ ಕರ್ನಾಟಕದ ಮತೀಯ ಸೌಹಾರ್ದತೆಯ ಇತಿಹಾಸ ಇದಕ್ಕಿಂತಲೂ ಹಳೆಯದು. ಹನ್ನೆರಡನೆಯ ಶತಮಾನದಲ್ಲಿಯೇ ಕವಿ-ದಾರ್ಶನಿಕ ಬಸವಣ್ಣನವರ ಪ್ರಯತ್ನಗಳಿಂದಾಗಿ ಸಾಮಾಜಿಕ ಹಾಗೂ ಧಾರ್ಮಿಕ ಸುಧಾರಣೆಯಲ್ಲಿ ನಮ್ಮ ಕನ್ನಡ ನಾಡು ಸೌಹಾರ್ದತೆಯ ಇತಿಹಾಸವನ್ನೇ ನಿರ್ಮಿಸಿದೆ. ಸಮ್ಮಿಶ್ರ ಸಂಪ್ರದಾಯಗಳಿಗೆ, ಹಿಂದು ಮುಸ್ಲಿಮರನ್ನು ಒಳಗೊಂಡಂತೆ ಜನಸಮುದಾಯಗಳ ನಡುವೆ ಶಾಂತಿಯುತ ಸಹಬಾಳ್ವೆಗೆ ನಮ್ಮ ನಾಡಿನ ಇತಿಹಾಸ ಸಾಕ್ಷಿಯಾಗಿದೆ. ಈ ಭವ್ಯ ಪರಂಪರೆಯ ಹಿನ್ನೆಲೆಯಲ್ಲೇ ನಮ್ಮ ರಾಷ್ಟ್ರಕವಿ ಕುವೆಂಪುರವರು 100 ವರ್ಷಗಳಷ್ಟು ಹಿಂದೆಯೇ ಈ ನಾಡನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಬಣ್ಣಿಸಿದ್ದಾರೆ.

    ಕರ್ನಾಟಕದ ಈ ಮುಕ್ತ ಮನಸ್ಸಿನ ಹಲನಡಾವಳಿಯ, ಸಂಸ್ಕೃತಿಯೇ ಈ ಕಾಲಘಟ್ಟದಲ್ಲಿ ಸೃಜನಶೀಲ ಮತ್ತು ಹೊಸತನ್ನರಸುವ ವ್ಯಕ್ತಿಗಳನ್ನು ರಾಷ್ಟ್ರದ ಎಲ್ಲೆಡೆಯಿಂದ ಸೂಜಿಗಲ್ಲಿನಂತೆ ಆಕರ್ಷಿಸಿದೆ. ಭಾರತದ ವಿವಿಧ ಪ್ರಾಂತ್ಯಗಳಿಗೆ ಸೇರಿದ ವಿಭಿನ್ನ ಜನಸಮುದಾಯಗಳ ಜನರು ಕರ್ನಾಟಕಕ್ಕೆ ಅಪಾರ ಸಂಖ್ಯೆಯಲ್ಲಿ ವಲಸೆ ಬಂದು ಇಲ್ಲಿ ನೆಲೆಸಿ ನಮ್ಮ ರಾಜ್ಯದ ಸಮೃದ್ಧ ವೈವಿಧ್ಯಮಯ ಸಂಸ್ಕೃತಿಯನ್ನು ಮೆಚ್ಚಿ ತಮ್ಮ ಬದುಕಿನಲ್ಲೂ ಅವುಗಳನ್ನು ಅಳವಡಿಸಿಕೊಂಡಿದ್ದಾರೆ. ತನ್ಮೂಲಕ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಆರೋಗ್ಯ ರಕ್ಷಣೆ, ಉದ್ಯಮಶೀಲತೆ, ಸಾಹಿತ್ಯ, ಕಲೆ, ಸಾಮಾಜಿಕ, ಸಾಂಸ್ಕೃತಿಕ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕವನ್ನು ಚೈತನ್ಯಶೀಲ ರಾಜ್ಯವಾಗಿ ರೂಪಿಸಿದ್ದಾರೆ.

    ಇಂತಹ ಉಜ್ವಲ ಹಿನ್ನೆಲೆಯ ನಾಡಿನಲ್ಲಿ ಇತ್ತೀಚೆಗೆ ಮುಸ್ಲಿಂ, ಕ್ರೈಸ್ತ ಮತ್ತು ದಲಿತ ಸಮುದಾಯಗಳ ಮೇಲೆ ನಾನಾ ರೀತಿಯಲ್ಲಿ ಹಲ್ಲೆಗಳು ನಡೆಯುತ್ತಿವೆ. ಸರ್ವರನ್ನೂ ಒಳಗೊಳ್ಳುವ, ಒಪ್ಪಿ ಅಪ್ಪಿಕೊಳ್ಳುವ ಗುಣಲಕ್ಷಣದ ಕರ್ನಾಟಕ ರಾಜ್ಯದ ಬಗ್ಗೆ ಹೆಮ್ಮೆ, ಅಭಿಮಾನ ಹೊಂದಿರುವ ಜನರಲ್ಲಿ ಈ ಘಟನೆಗಳು ಆಘಾತ ಮೂಡಿಸಿವೆ. ಸಂಕುಚಿತ ಮತೀಯವಾದಿಗಳು ಹಾಗೂ ದ್ವೇಷಪೂರಿತ ಕೆಲ ವ್ಯಕ್ತಿಗಳು ಮತ್ತು ಗುಂಪುಗಳು ಧರ್ಮ ಮತ್ತು ಜಾತಿಯ ಆಧಾರದಲ್ಲಿ ಅಲ್ಪಸಂಖ್ಯಾತರನ್ನು ಪ್ರತ್ಯೇಕಿಸಿ ದೂರವಿಡುವ ಹಾಗೂ ಅವರನ್ನು ದಮನಗೊಳಿಸುವ ಕೃತ್ಯಗಳಲ್ಲಿ ತೊಡಗಿರುವುದು ಆತಂಕದ ವಿಷಯವಾಗಿದೆ.

    ಭಾರತ ಸಂವಿಧಾನದ ಮೌಲ್ಯ ಮತ್ತು ಆಶಯಗಳನ್ನು ಅಕ್ಷರಶಃ ಎತ್ತಿ ಹಿಡಿಯುತ್ತೇವೆಂದು ಪ್ರಮಾಣವಚನ ಸ್ವೀಕರಿಸಿರುವ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಜವಾಬ್ದಾರಿ ಹುದ್ದೆಗಳಲ್ಲಿರುವ ಹಲವರು ಈ ವಚನವನ್ನು ಬಹಿರಂಗವಾಗಿ ಉಲ್ಲಂಘಿಸಿ ಅಲ್ಪಸಂಖ್ಯಾತ ಸಮುದಾಯದವರನ್ನು ಭೀತರನ್ನಾಗಿಸುವುದು ಇದಕ್ಕಿಂತಲೂ ಕಳವಳದ ಹಾಗೂ ಹತಾಶೆಯ ಸಂಗತಿಯಾಗಿದೆ. ಇದಲ್ಲದೆ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಈ ಕೇರುಕೃತ್ಯಗಳನ್ನು ಸಮರ್ಥಿಸಿಕೊಳ್ಳುತ್ತಾ ಹಿಂಸೆ ದುರಾಕ್ರಮಣ ಕೃತ್ಯಗಳಿಗೆ ಉತ್ತೇಜನ ನೀಡುತ್ತಿರುವುದಂತೂ ಇನ್ನೂ ನೋವಿನ ಸಂಗತಿಯಾಗಿದೆ. ಇನ್ನೂ ಮುಂದುವರಿದು ಈ ಸಮುದಾಯಗಳ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರ ಹಾಕಿ ಅವರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಪರಿಗಣಿಸಿ ಅವರ ಸಾಂವಿಧಾನಿಕ ಹಕ್ಕುಗಳನ್ನು ಅನುಭವಿಸದಂತೆ ಹತ್ತಿಕ್ಕುತ್ತಿರುವುದು ಹೀನಾಯ ಕೃತ್ಯವಾಗಿದೆ.

    ಈ ಹಿನ್ನೆಲೆಯಲ್ಲಿ, ಭಾರತದ ಸಂವಿಧಾನದ ಅನುಚ್ಚೇದ 51A(e) ಯಲ್ಲಿ ‘ಭಾರತದ ಎಲ್ಲ ಜನರ ನಡುವೆ ಧಾರ್ಮಿಕ, ಭಾಷೆ, ಪ್ರಾದೇಶಿಕ ಹಾಗೂ ವರ್ಗಿಯ ವೈವಿಧ್ಯತೆಗಳನ್ನು ಮೀರಿ ಪರಸ್ಪರ ಸೌಹಾರ್ದತೆ ಮತ್ತು ಬಂಧುತ್ವವನ್ನು ಉತ್ತೇಜಿಸುವುದು’ ಪ್ರತಿಯೊಬ್ಬ ನಾಗರಿಕರ ಮೂಲಭೂತ ಕರ್ತವ್ಯ ಎಂದು ಹೇಳಿವೆ. ಅನುಚ್ಛೇದ 5A(1)ವು ‘ಸಮ್ಮಿಶ್ರ ಸಂಸ್ಕೃತಿಯನ್ನೊಳಗೊಂಡ ದೇಶದ ಭವ್ಯ ಪರಂಪರೆಗೆ ಪ್ರಾಮುಖ್ಯತೆ ನೀಡಿ ಅದನ್ನು ಉಳಿಸಬೇಕು’ ಎಂದು ಪ್ರತಿಯೊಬ್ಬ ನಾಗರಿಕರನ್ನು ಒತ್ತಾಯಿಸುತ್ತದೆ. ಆದರೆ ನಮ್ಮ ಚುನಾಯಿತ ಜನಪ್ರತಿನಿಧಿಗಳು ಇದನ್ನು ಮರೆತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

    ರಾಜ್ಯವು ಅಭಿವೃದ್ಧಿ ಹೊಂದಿ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಅಂದರೆ ‘ಎಲ್ಲರ ಜೊತೆ, ಎಲ್ಲರ ವಿಶ್ವಾನದೊಂದಿಗೆ, ಎಲ್ಲರ ಅಭಿವೃದ್ಧಿ’ಯನ್ನು ಸಾಧಿಸಬೇಕಾದರೆ ಶಾಂತಿ, ಸೌಹಾರ್ದತೆ ಮತ್ತು ನ್ಯಾಯದಾನಗಳು ಅತ್ಯಗತ್ಯ ಮೂಲ ಅಂಶಗಳಾಗಿವೆ. ಸರ್ವ ಜನರ ಸುಸ್ಥಿರ ಮತ್ತು ಉತ್ತಮ ಭವಿಷ್ಯದ ನೀಲ ನಕ್ಷೆಯೆಂಬಂತಿರುವ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳ 16 ನೆಯ ಅಂಶವೂ ಸಹ ಇದನ್ನೇ ಹೇಳುತ್ತದೆ. ಏನೆಂದರೆ, ‘ಜಾಗತಿಕ ಸುಸ್ಥಿರ ಅಭಿವೃದ್ಧಿಯ ಯಾವುದೇ ಉದ್ದೇಶವನ್ನು ಈಡೇರಿಸುವಲ್ಲಿ ಮೊದಲ ಹೆಜ್ಜೆಯೆಂದರೆ, ಸಾಂಸ್ಥಿಕ ನಿರ್ಬಂಧಗಳ ಹೇರಿಕೆಯಿಂದ ನ್ಯಾಯವಂಚಿತರಾಗಿ ಅಥವಾ ನೇರ ದಂಗೆ ಹಿಂಸೆಗಳಿಂದಾಗಿ ತಮ್ಮ ಮೂಲಭೂತ ಸ್ವಾತಂತ್ರ‍್ಯಕ್ಕೆ ಅಪಾಯವನ್ನು ಎದುರಿಸುತ್ತಿರುವ ವ್ಯಕ್ತಿಗಳ ಜೀವ ರಕ್ಷಣೆ ಹಾಗೂ ಮಾನವ ಹಕ್ಕುಗಳನ್ನು ಸಂರಕ್ಷಿಸುವುದಾಗಿದೆ’.

    ಇತ್ತೀಚಿಗೆ ಕೆಲವು ವಿಭಜಕ ಕೃತ್ಯಗಳಿಂದ ನಿರ್ದಿಷ್ಟ ಸಮುದಾಯಗಳನ್ನು ಅನ್ಯಗೊಳಿಸಿ ಆ ಜನರನ್ನು ಮೂಲಭೂತ ಹಕ್ಕುಗಳಿಂದ ವಂಚಿತರನ್ನಾಗಿಸುವ ಪ್ರವೃತ್ತಿ ಕಂಡು ಬರುತ್ತಿದೆ. ಇದು ರಾಜ್ಯದ ಪ್ರಗತಿಯನ್ನು ಕುಂಠಿತಗೊಳಿಸುವುದಷ್ಟೇ ಅಲ್ಲದೆ ನಮ್ಮ ರಾಜ್ಯದ ಕೀರ್ತಿಯನ್ನು ಸಹ ಕುಂದಿಸುವ ಜೊತೆಗೆ ಹೂಡಿಕೆದಾರರು ಮತ್ತು ಹೊಸತನ್ನರಸುವ ಉದ್ಯಮಿಗಳ ನಂಬಿಕೆ ಮತ್ತು ವಿಶ್ವಾಸವನ್ನು ಹುಸಿಗೊಳಿಸುತ್ತದೆ. ನಾಗರಿಕರಲ್ಲಿ ಅಪನಂಬಿಕೆ ಮಾತು ಅಸುರಕ್ಷಿತ ಭಾವನೆ ಮೂಡಿಸಿ ಭಯದ ವಾತಾವರಣವನ್ನು ಸೃಷ್ಟಿಸುತ್ತದೆ. ಇದು ಸಮಾಜದ ಎಲ್ಲ ವರ್ಗಗಳಿಗೂ ಹಾನಿ ಉಂಟು ಮಾಡುವುದಲ್ಲದೆ ನಮ್ಮ ದೇಶದ ಸಮಗ್ರತೆಗೆ ಕೂಡ ಧಕ್ಕೆ ತರುತ್ತದೆ. ಇಂತಹ ‘ದಿಗಿಲು ಹುಟ್ಟಿಸುವ ಭಾರತ’ ಮತ್ತು ‘ಕಳಂಕಿತ ಭಾರತ’ದ ವಾತಾವರಣದಲ್ಲಿ ‘ಭಾರತದಲ್ಲಿ ತಯಾರಿಸು’ (Make in India) ಎನ್ನುವ ಘೋಷ ವಾಕ್ಯವನ್ನು ಸಾಕಾರಗೊಳಿಸುವುದು ಸಾಧ್ಯವಿಲ್ಲದ ಮಾತು.

    ಇತ್ತೀಚಿಗೆ ನಡೆದ ‘ಬಸವ ಜಯಂತಿ – 2022’ ಸಂದರ್ಭದಲ್ಲಿ ಬಸವಣ್ಣನವರ ಕನಸಿನ ಸಮಾನತೆಯ ಸೌಹಾರ್ದಯುತ ಸಮಾಜವನ್ನು ಕಟ್ಟುವುದು ನಮ್ಮ ಗುರಿ ಎಂದು ಸರ್ಕಾರದ ಜಾಹಿರಾತಿನಲ್ಲಿ ಪ್ರಕಟಿಸಲಾಗಿದೆ. ಸಾಮಾಜಿಕ ಸೌಹಾರ್ದತೆ, ಬ್ರಾತೃತ್ವ, ಏಕತೆ ಮತ್ತು ಅಂತಃಕರಣಕ್ಕೆ ಬಸವಣ್ಣನವರು ಒತ್ತು ನೀಡಿದ್ದರು ಎನ್ನುವ ನಮ್ಮ ಪ್ರಧಾನ ಮಂತ್ರಿಯವರ ಮಾತುಗಳನ್ನು ಸಹ ಇದರ ಜೊತೆ ಉದ್ಧರಿಸಲಾಗಿದೆ. ಈ ಸಂದರ್ಭದಲ್ಲಿ ಸರ್ಕಾರವು ಪವಿತ್ರ ರಂಜಾನ್ ಈದ್ ಉಲ್ ಫಿತರ್ ಹಬ್ಬವನ್ನು ಬಸವ ಜಯಂತಿಯಂತೆಯೇ ಆಚರಿಸಿ ಸತತವಾಗಿ ಕೋಮು ದ್ವೇಷಿಗಳ ದಾಳಿಗೆ ತುತ್ತಾಗುತ್ತಿರುವ ಮುಸ್ಲಿಂ ನಾಗರಿಕರನ್ನು ಉದ್ದೇಶಿಸಿ ಅವರ ರಕ್ಷಣೆ ಮತ್ತು ಸುರಕ್ಷತೆ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರೆ ಅದು ಮತ್ತಷ್ಟು ಹೃದಯ ಸ್ಪರ್ಶಿಯಾಗುತ್ತಿತ್ತು.

    ಶಾಂತಿ ಸೌಹಾರ್ದತೆ ಮತ್ತು ನ್ಯಾಯದಾನ ನೀಡುವ ಹೊಣೆಗಾರಿಕೆಯನ್ನು ಕರ್ನಾಟಕ ಸರ್ಕಾರವು ನಿರ್ವಹಿಸುತ್ತದೆ ಎನ್ನುವ ನಂಬಿಕೆಯಿಂದ ನಾವು ಮುಖ್ಯಮಂತ್ರಿಗಳಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವ ಮೂಲಕ ಎಲ್ಲ ನಾಗರಿಕರ ಸೌಖ್ಯ ಮತ್ತು ವಿಶ್ವಾಸವನ್ನು ಪುನರ್ ಪ್ರತಿಷ್ಠಾಪಿಸಬೇಕೆಂದು ಮನವಿ ಮಾಡಿ ಕೊಳ್ಳುತ್ತೇವೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು

    1. ರಾಜ್ಯ ಪೊಲೀಸ್ ಪಡೆಯು ತನ್ನ ಸಾಂವಿಧಾನಿಕ ಕರ್ತವ್ಯಕ್ಕೆ ಬದ್ಧವಾಗಿ ಕಾನೂನು ಪಾಲನೆಯನ್ನು ಎತ್ತಿ ಹಿಡಿದು ಸಮಾಜದ ದುರ್ಬಲ ವರ್ಗದ ನಾಗರಿಕರ ರಕ್ಷಣೆ ಮಾಡುವಂತೆ ಸೂಕ್ತ ನಿರ್ದೇಶನ ನೀಡಬೇಕು, ಮತೀಯವಾದಿ ಮತ್ತು ಜಾತಿವಾದಿ ಅಪರಾಧಗಳಿಗೆ ತುತ್ತಾಗುವ ನಾಗರಿಕರಿಗೆ ಪೂರ್ಣ ನ್ಯಾಯ ದೊರಕುವಂತೆಯೂ, ಇಂತಹ ಅಪರಾಧಗಳನ್ನು ಎಸಗುವವರ ವಿರುದ್ಧ ಸಾಕ್ಷಿದಾರರು ಧೈರ್ಯದಿಂದ ಮುಂದೆ ಬಂದು ಮುಕ್ತವಾಗಿ ತಮ್ಮ ಸಾಕ್ಷ್ಯವನ್ನು ನೀಡುವಂತೆಯೂ, ಅವರಿಗೆಲ್ಲಾ ಪೂರ್ಣ ರಕ್ಷಣೆ ಒದಗಿಸಿ ಅವರಲ್ಲಿ ವಿಶ್ವಾಸ ತುಂಬಿಸಬೇಕು.

    2. ಕೋಮುವಾದಿ ಗಲಭೆಗಳಿಂದಾಗಿ ಹಿಂಸೆ, ಸಾವು ಹಾಗೂ ಬದುಕು ನಷ್ಟವಾದಾಗ, ಸ್ಥಳೀಯ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಜವಾಬ್ದಾರರಾದ ಅಧಿಕಾರಿಗಳ ವಿರುದ್ಧ, ವಿಶೇಷವಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾಡಳಿತ ಹಾಗೂ ಪೋಲಿಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು.

    3. ನಿರ್ದಿಷ್ಟ ಕೋಮಿನ ಜನರನ್ನು ನಿಂದಿಸಿ ಅಮಾನವೀಕರಣಗೊಳಿಸುವುದರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ದೈಹಿಕ ಹಿಂಸೆಗೆ ಪ್ರಚೋದನೆ ನೀಡುವಂತಹ ಪ್ರವೃತ್ತಿಗೆ ತಡೆಯೊಡ್ಡಿ ಅಲ್ಪಸಂಖ್ಯಾತರ ವಿರುದ್ಧ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಿ ಸಮಾಜದ ಸ್ವಾಸ್ಥ್ಯ ಹಾಳುಗೆಡುವುತ್ತಿರುವ ವ್ಯಕ್ತಿಗಳ ವಿರುದ್ಧ ಪ್ರಬಲ ಕಾನೂನು ಕ್ರಮ ಜರುಗಿಸಬೇಕು.

    4. ಸಾಮಾಜಿಕ ಜಾಲತಾಣಗಳು ಹಾಗೂ ಇನ್ನಿತರ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಸಹ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಸುಳ್ಳು ಸುದ್ದಿಗಳು ಮತ್ತು ಗಾಳಿ ಸಮಾಚಾರಗಳನ್ನು ಹಬ್ಬಿಸುವ ಕೃತ್ಯ ನಡೆಯುತ್ತಿದೆ. ಇದರಿಂದ ಈ ಸಮುದಾಯಗಳನ್ನು ಅನ್ಯವಾಗಿಸುವ ಮತ್ತು ಅವರನ್ನು ಹಿಂಸೆಗೆ ಒಳಪಡಿಸುವ ಅಪಾಯ ಹೆಚ್ಚಾಗುತ್ತಿದೆ. ಇಂತಹ ಅಪರಾಧಗಳ ವಿರುದ್ಧ ಸರ್ಕಾರ ಬಹಿರಂಗವಾಗಿ ದನಿಯೆತ್ತಿ ಮಾತನಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.

    5. ನೀತಿಯುತ ಪತ್ರಿಕೋದ್ಯಮದ ತತ್ವಬದ್ಧ ಮೌಲ್ಯಗಳನ್ನು ಉಲ್ಲಂಘಿಸಿ ಸುಳ್ಳು ಮಾಹಿತಿಯ ಸುದ್ದಿ ಬಿತ್ತರಿಸುತ್ತಾ ಸಮಾಜದಲ್ಲಿ ಅಸಹಿಷ್ಣುತೆ, ದ್ವೇಷ, ಮತ್ತು ಹಿಂಸೆಯನ್ನು ಪ್ರಚೋದಿಸುತ್ತಿರುವ ಮಾಧ್ಯಮಗಳಲ್ಲಿನ ಹಲವರಿಗೆ ಅಂತಹ ಕರ್ತವ್ಯಲೋಪಗಳನ್ನು ನಿಗ್ರಹಿಸುವಂತೆ ಒತ್ತಾಯಿಸಬೇಕು. ರಾಜ್ಯದಲ್ಲಿನ ಸೌಹಾರ್ದಯುತ ವಾತಾವರಣವನ್ನು ನಿರ್ಭೀತರಾಗಿ ಹಾಳುಗೆಡವುತ್ತಿರುವುದು ಒಪ್ಪಿತವಲ್ಲವೆಂಬುದನ್ನು ಮನದಟ್ಟು ಮಾಡಬೇಕು.

    ಕರ್ನಾಟಕ ಸರ್ಕಾರ ಈ ಸಕ್ರಿಯ ಕ್ರಮಗಳನ್ನು ಕೈಗೊಂಡರೆ ಹಿಂಸೆಯಲ್ಲಿ ತೊಡಗಿರುವ ಹಾಗೂ ಹಿಂಸೆಗೆ ಪ್ರಚೋದನೆ ನೀಡುತ್ತಿರುವರಿಗೆ ಹಾಗೂ ನಾಗರಿಕರಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣ ಮೂಡಿಸುತ್ತಿರುವವರಿಗೆ ಇಂತಹ ಕಾನೂನು ಬಾಹಿರ ಹಾಗೂ ಒಪ್ಪಿತವಲ್ಲದ ವರ್ತನೆಗಳನ್ನು ಹಾಗೂ ದ್ವೇಷಪೂರಿತ ಅಪರಾಧಗಳನ್ನು ಸರ್ಕಾರ ಸಹಿಸುವುದಿಲ್ಲ ಎನ್ನುವ ಸ್ಪಷ್ಟ ಸಂದೇಶ ಸಾರಿದಂತಾಗುವುದು. ರಾಜ್ಯವು ಇಂತಹ ಸಂಕ್ರಮಣ ಸ್ಥಿತಿಯಲ್ಲಿರುವಾಗ ಮತೀಯ ಸೌಹಾರ್ದತೆಯನ್ನು ಮರುಪ್ರತಿಷ್ಠಾಪಿಸುವುದು ಪ್ರಾಮುಖ್ಯವಾದ ಮತ್ತು ಅತ್ಯಂತ ತುರ್ತಿನ ಕಾರ್ಯವೆಂದು ನಾವು ಪರಿಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ತಮ್ಮ ನೇತೃತ್ವದ ಸರ್ಕಾರವು ಮುನ್ನಡಿ ಇಡಬೇಕೆಂದು ಬಯಸುತ್ತೇವೆ. ಈ ಸಂದರ್ಭದಲ್ಲಿ ರಾಜ್ಯವು ಪ್ರಗತಿಯೆಡೆಗೆ ಸಾಗುವ ಬದಲಾಗಿ ಸರ್ಕಾರದ ನಿಷ್ಕ್ರಿಯತೆಯಿಂದಾಗಿ ತಳಮಟ್ಟಕ್ಕಿಳಿಯಿತು ಎನ್ನುವ ಅಪಖ್ಯಾತಿಗೆ ತಾವು ಒಳಗಾಗಬಾರದು ಎನ್ನುವ ಆಶಯ ನಮ್ಮದು.

    ಈ ನಿಟ್ಟಿನಲ್ಲಿ ಸರ್ಕಾರದ ಪ್ರಬಲ, ಸ್ಪಷ್ಟ, ಅಧಿಕೃತ ಆದೇಶ ಕ್ರಮಗಳನ್ನು ನಾವು ನಿಮ್ಮಿಂದ ನಿರೀಕ್ಷಿಸುತ್ತಿದ್ದೇವೆ ಎಂದು ಪತ್ರದಲ್ಲಿ ಬರೆಯಲಾಗಿದೆ.

    Live Tv

  • ಸತತ ಮಳೆ, ಹಳದಿ ಬಣ್ಣಕ್ಕೆ ಮುಂಗಾರು ಬೆಳೆ- ಕೃಷಿ ವಿಜ್ಞಾನಿಗಳಿಂದ ರೈತರಿಗೆ ಸಲಹೆ

    ಸತತ ಮಳೆ, ಹಳದಿ ಬಣ್ಣಕ್ಕೆ ಮುಂಗಾರು ಬೆಳೆ- ಕೃಷಿ ವಿಜ್ಞಾನಿಗಳಿಂದ ರೈತರಿಗೆ ಸಲಹೆ

    ಬೀದರ್: ಜಿಲ್ಲೆಯಲ್ಲಿ ಹಲವು ದಿನಗಳಿಂದ ಸತತವಾಗಿ ಮಳೆ ಸುರಿದಿದ್ದರಿಂದ ನೂರಾರು ಎಕರೆ ಜಮೀನಿನಲ್ಲಿ ನೀರು ನಿಂತು, ರೈತರು ಕಷ್ಟಪಟ್ಟು ಬೆಳೆದಿದ್ದ ಸೋಯಾ, ಉದ್ದು, ಹೆಸರು ಬೆಳೆಗಳು ಹಳದಿ ಬಣ್ಣಕ್ಕೆ ತಿರುಗುತ್ತಿರುವುದು ರೈತರ ಗಾಯದ ಮೇಲೆ ಬರೆ ಎಳದಂತಾಗಿದೆ. ಆದರೆ ಇದಕ್ಕೆ ಕೃಷಿ ವಿಜ್ಞಾನಿಗಳು ಪರಿಹಾರ ಸೂಚಿಸಿದ್ದಾರೆ.

    ಬೀದರ್, ಬಸವಕಲ್ಯಾಣ, ಹುಮನಾಬಾದ, ಚಿಟ್ಟಗುಪ್ಪಾ, ಭಾಲ್ಕಿ, ಹುಲಸುರು, ಔರಾದ್, ಕಮಲನಗರ ತಾಲೂಕಿನ ಹಲವು ಜಮೀನುಗಳಲ್ಲಿ ನೀರು ನಿಂತು ಬೆಳೆಗಳ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿವೆ. ಮಳೆಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗುವ ಭಯದಲ್ಲಿ ರೈತರು ಹೈರಾಣಾಗಿದ್ದಾರೆ.

    ನಿರಂತರ ಮಳೆಯಿಂದ ಜಮೀನುಗಳಲ್ಲಿ ನೀರು ಸಂಗ್ರಹವಾಗಿದೆ ಬೆಳೆಗಳ ಬೇರುಗಳಿಗೆ ಗಾಳಿ ಬೆಳಕು ಲಭಿಸುತ್ತಿಲ್ಲ, ಪೌಷ್ಠಿಕಾಂಶವೂ ದೊರಕುತ್ತಿಲ್ಲ, 4-5 ದಿನಳಿಂದ ಸತತವಾಗಿ ಜಮೀನಿನಲ್ಲಿ ನೀರು ನಿಂತು ಪೋಷಕಾಂಶ ಸೋರಿ ಹೋಗಿದ್ದು, ಹೀಗಾಗಿ ಬೆಳೆಗಳ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಮಳೆಯಿಂದ ಜಮೀನುಗಳಲ್ಲಿ ನೀರು ಸಂಗ್ರಹವಾಗಿದ್ದರೆ ರೈತರು ಕೂಡಲೇ ಜಮೀನಿನಿಂದ ನೀರು ಹೊರ ಹೋಗುವ ವ್ಯವಸ್ಥೆ ಮಾಡಬೇಕು. ಜಮೀನು ಸುತ್ತಲು ತಗ್ಗು ತೋಡಿ ನೀರು ಹೋಗಲು ದಾರಿ ಮಾಡಿಕೊಡಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಎಂ.ಸುನಿಲ್ ಕುಮಾರ್ ರೈತರಿಗೆ ಮಾಹಿತಿ ನೀಡಿದ್ದಾರೆ.

    ಜೊತೆಗೆ ನೀರಿನಲ್ಲಿ ಕರಗುವ 19.19.19 ಗೊಬ್ಬರವನ್ನು ಹಾಕಬೇಕು. ಪ್ರತಿ ಲೀಟರ್ ನೀರಿನಲ್ಲಿ 10 ಗ್ರಾಂ. ಗೊಬ್ಬರ ಹಾಕಿ ಬೆಳೆಗಳ ಮೇಲೆ ಸಿಂಪಡಣೆ ಮಾಡಬೇಕು ಇದರೊಟ್ಟಿಗೆ ತಕ್ಷಣ ಪ್ರತಿ ಎಕರೆಗೆ ಒಂದು ಚೀಲ ಯೂರಿಯಾ ಗೊಬ್ಬರವನ್ನು ಹಾಕಬೇಕು ಎಂದು ತಿಳಿಸಿದ್ದಾರೆ.

  • ಕೋವಿಡ್ ನಿಭಾಯಿಸಲು ಸರ್ಕಾರಕ್ಕೆ ಎಚ್‍ಡಿಕೆ ಹತ್ತು ಸಲಹೆ

    ಕೋವಿಡ್ ನಿಭಾಯಿಸಲು ಸರ್ಕಾರಕ್ಕೆ ಎಚ್‍ಡಿಕೆ ಹತ್ತು ಸಲಹೆ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಮಿತಿ ಮೀರುತ್ತಿದ್ದು, ಆಕ್ಸಿಜನ್, ಬೆಡ್ ಕೊರತೆ ಕಾಡುತ್ತಿದೆ. ಅತಿಯಾದ ಸೋಂಕು ಪ್ರಕರಣಗಳು ಪತ್ತೆಯಾಗಿದ್ದರಿಂದ ಆಸ್ಪತ್ರೆ, ಆರೋಗ್ಯ ವ್ಯವಸ್ಥೆ, ಸರ್ಕಾರದ ಮೇಲೆ ತಡೆಯಲಾರದ ಒತ್ತಡ ಸೃಷ್ಟಿಯಾಗುತ್ತಿದೆ. ಹೀಗಾಗಿ ಎಷ್ಟೇ ಹೋರಾಟ ನಡೆಸಿದರೂ ನಿಭಾಯಿಸುವುದು ಕಷ್ಟಕರವಾಗಿದೆ. ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕೊರೊನಾ ನಿರ್ವಹಣೆಗೆ ಸರ್ಕಾರಕ್ಕೆ 10 ಮಹತ್ವದ ಸಲಹೆಗಳನ್ನು ನೀಡಿದ್ದಾರೆ.

    ಈ ಕುರಿತು ಟ್ವಿಟ್ಟರ್ ನಲ್ಲಿ ತಿಳಿಸಿರುವ ಅವರು, ಕೋವಿಡ್ ನ್ನು ಹೇಗೆ ತಡೆಯಬೇಕು, ಯಾವ ರೀತಿ ಇದರಿಂದ ಪಾರಾಗಬೇಕು ಎಂಬುದರ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಹೊಸ ಆಲೋಚನೆ, ಹೊಸ ಅವಕಾಶಗಳ ಬಗ್ಗೆ ಯೋಚಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ನನಗೆ ಪರಿಚಿತರಿರುವ ತಜ್ಞರು, ವೈದ್ಯರು, ಸಲಹೆಗಾರರ ಗುಂಪಿನೊಂದಿಗೆ ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಮುಖ ಎನಿಸುವ ಹತ್ತು ಸಲಹೆಗಳನ್ನು ಇಲ್ಲಿ ಪಟ್ಟಿ ಮಾಡಿದ್ದೇನೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂಬ ಆಶಾ ಭಾವ ನನ್ನದು ಎಂದು ತಿಳಿಸಿ, ನೀಡಿರುವ ಸಲಹೆಗಳ ಪಟ್ಟಿಯ ಫೋಟೋವನ್ನು ಹಾಕಿದ್ದಾರೆ.

    ಫೀವರ್ ಕ್ಲಿನಿಕ್‍ಗಳು
    ಪ್ರತಿ ವಾರ್ಡ್, ಗ್ರಾಮ ಪಂಚಾಯಿತಿ ಮಟ್ಟದಲ್ಲಿ 3-4 ಫೀವರ್ ಕ್ಲಿನಿಕ್‍ಗಳನ್ನು ಆರಂಭಿಸಬೇಕು. ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಇರುವವರಿಂದ ಆಸ್ಪತ್ರೆಗಳ ಮೇಲೆ ಬೀಳುತ್ತಿರುವ ಒತ್ತಡವನ್ನು ಈ ಮೂಲಕ ನಿಯಂತ್ರಿಸಬಹುದು. ಸೋಂಕಿತರನ್ನು ಪತ್ತೆ ಹಚ್ಚಲೂ ಈ ಫೀವರ್ ಕ್ಲಿನಿಕ್‍ಗಳು ನೆರವಾಗಬಲ್ಲವು.

    ಸಿಬ್ಬಂದಿ ನಿಯೋಜನೆ
    ವೈದ್ಯಕೀಯೇತರ ಬೋಧನಾ ಸಿಬ್ಬಂದಿ ಮತ್ತು ‘ರಾಷ್ಟ್ರೀಯ ಹೆಲ್ತ್ ಮಿಷನ್’ನ ಸಿಬ್ಬಂದಿಯನ್ನು ಕೋವಿಡ್ ನಿಯಂತ್ರಣಾ ವ್ಯವಸ್ಥೆಗೆ ನಿಯೋಜಿಸಬೇಕು. ಸಿಬ್ಬಂದಿ ಕೊರತೆ ಅನುಭವಿಸುತ್ತಿರುವ ಆಸ್ಪತ್ರೆಗಳು ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಇವರ ಸೇವೆಯನ್ನು ಅಗತ್ಯವಾಗಿ ಬಳಸಿಕೊಳ್ಳಬೇಕು.

    ಆಯುಷ್ ಕಾಲೇಜು, ಆಸ್ಪತ್ರೆಗಳ ಸೇವೆ ಬಳಕೆ
    ಸೋಂಕಿನ ಲಕ್ಷಣವಿಲ್ಲದ ಅಥವಾ ಕಡಿಮೆ ಲಕ್ಷಣಗಳಿರುವ ಕೋವಿಡ್ ರೋಗಿಗಳಿಗೆ ರಾಜ್ಯದ ಆಯುಷ್ ಕಾಲೇಜುಗಳು ಮತ್ತು ಆಸ್ಪತ್ರೆಗಳು ಚಿಕಿತ್ಸೆ ನೀಡಬೇಕು. ಅವುಗಳು ತಮ್ಮಲ್ಲಿ ಲಭ್ಯವಿರುವ ಸಿಬ್ಬಂದಿಯ ನೆರವಿನಿಂದಲೇ ಆರೋಗ್ಯ ಸೇವೆ ನೀಡಿದರೆ, ಇತರೆ ಆಸ್ಪತ್ರೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಬಹುದು. ಎಲ್ಲರಿಗೂ ಆರೋಗ್ಯ ಸೇವೆ ಸಿಗುವಂತೆ ಮಾಡಬಹುದು.

    ನಿಗಾ ಕೇಂದ್ರಗಳು
    ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳು, ಹೋಟೆಲ್‍ಗಳನ್ನು ಸೋಂಕು ಲಕ್ಷಣ ರಹಿತರ ಆರೈಕೆ ಮತ್ತು ನಿಗಾ ಕೇಂದ್ರಗಳಾಗಿ ಪರಿವರ್ತಿಸಬೇಕು. ಲಕ್ಷಣಗಳು ಕಾಣಿಸಿಕೊಂಡು, ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರನ್ನು ಮಾತ್ರ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ವರ್ಗಾಯಿಸಬೇಕು.

    ಸಾಂದರ್ಭಿಕ ಚಿತ್ರ

    ಹಾಸಿಗೆ ನೀಡಬೇಕಾದ್ದನ್ನು ಯಾರು ನಿರ್ಧರಿಸಬೇಕು?
    ವಾರ್ಡ್, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿರುವ ಕ್ಲಿನಿಕ್‍ಗಳು ಮತ್ತು ಆರೋಗ್ಯ ಸಿಬ್ಬಂದಿ ಮಾತ್ರ ಹಾಸಿಗೆಗಾಗಿ ವಾರ್ ರೂಂಗಳಿಗೆ ಶಿಫಾರಸು ಮಾಡಬೇಕು. ಹಾಸಿಗೆ ಒದಗಿಸುವ ಅಧಿಕಾರ, ಹೊಣೆಗಾರಿಕೆಯನ್ನು ಅವರಿಗೇ ನೀಡಬೇಕು. ಹಾಸಿಗೆ ನೀಡಬೇಕೇ ಬೇಡವೇ ಎಂಬುದನ್ನು ಡೇಟಾ ಎಂಟ್ರಿ ಆಪರೇಟರ್‍ಗಳು ನಿರ್ಧರಿಸಬಾರದು.

    ಆಸ್ಪತ್ರೆಗೊಬ್ಬ ಅಧಿಕಾರಿ
    ಎಲ್ಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವ್ಯವಸ್ಥಾಪನೆ ಮೇಲೆ ನಿಗಾ ವಹಿಸಲು ಐಎಎಸ್ ಮತ್ತು ಕೆಎಎಸ್ ಶ್ರೇಣಿಯ ಅಧಿಕಾರಿಗಳನ್ನು ನೇಮಿಸಬೇಕು. ಅವರು ರೋಗಿಗಗಳ ಹಾಸಿಗೆ, ಔಷಧ, ಆರೈಕೆ, ಆಹಾರ ಪೂರೈಕೆ ವ್ಯವಸ್ಥೆಯನ್ನು ನಿಭಾಯಿಸಬೇಕು. ಅದರ ಜೊತೆಗೆ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರೂ ಸೇರಿದಂತೆ ಆರೋಗ್ಯ ಸಿಬ್ಬಂದಿಯ ಅಗತ್ಯಗಳನ್ನು ಪೂರೈಸಬೇಕು.

    ಆಸ್ಪತ್ರೆ ಅಧಿಕಾರಿಯ ಹೊಣೆಗಾರಿಕೆಗಳು
    ನಿರ್ದಿಷ್ಟ ಆಸ್ಪತ್ರೆಗೆ ನಿಯೋಜಿಸಲಾದ ಅಧಿಕಾರಿಯು ಪ್ರತಿನಿತ್ಯ ತನ್ನ ಜವಾಬ್ದಾರಿಯ ಆಸ್ಪತ್ರೆಗೆ ಕಡ್ಡಾಯವಾಗಿ ಭೇಟಿ ನೀಡುವಂತೆ ತಾಕೀತು ಮಾಡಬೇಕು. ರೋಗಿಗಳು ಮತ್ತು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯ ಬೇಕು-ಬೇಡಗಳ ಮೇಲೆ ಅಧಿಕಾರಿಗಳು ಗಮನಹರಿಸಬೇಕು. ಸಮಸ್ಯೆ ಬಗೆಹರಿಸುವ ಅಧಿಕಾರ, ಹೊಣೆಗಾರಿಕೆ, ಸಂಪನ್ಮೂಲವನ್ನು ಸರ್ಕಾರ ನೀಡಬೇಕು.

    ಸ್ವಯಂ ಸೇವಕರು, ಯುಕವರಿಗೆ ಕರೆ
    ಕೋವಿಡ್ ವಿರುದ್ಧ ಅವಿರತವಾಗಿ ಹೋರಾಡುತ್ತಿರುವ, ನಾಗರಿಕರ ಪ್ರಾಣ ರಕ್ಷಣೆಯ ಕಾರ್ಯದಲ್ಲಿ ಸೆಣಸುತ್ತಿರುವ ಅರೋಗ್ಯ ವ್ಯವಸ್ಥೆಯ ನೆರವಿಗೆ ಬರುವಂತೆ ಯುವಕರಿಗೆ, ಸ್ವಯಂ ಸೇವಕರಿಗೆ ಸರ್ಕಾರ ಕರೆ ನೀಡಬೇಕು. ಅವರ ಸೇವೆ ಪಡೆಯುವ ಜೊತೆಗೆ, ಕೋವಿಡ್ ವಿರುದ್ಧ ಹೋರಾಟಕ್ಕೆ ಉಪಯುಕ್ತ ಎನಿಸುವ ಅವರ ಚಿಂತನೆಗಳನ್ನೂ ಸರ್ಕಾರ ಪ್ರೋತ್ಸಾಹಿಸಬೇಕು.

    ಲಸಿಕೆ ಮತ್ತು ಜಾಗೃತಿ
    ಫೀವರ್ ಕ್ಲಿನಿಕ್‍ಗಳ ಹಂತದಲ್ಲಿಯೂ ಲಸಿಕೆ ಲಭ್ಯವಾಗಬೇಕು. ಲಸಿಕೆಯು ಕೋವಿಡ್ ಅನ್ನು ನಿಯಂತ್ರಿಸಬಲ್ಲದು ಎಂದು ಜಾಗೃತಿ ಮೂಡಿಸುವ ಕಾರ್ಯವೂ ಇಲ್ಲಿಂದಲೇ ಆರಂಭವಾಗಬೇಕು.

    ಅರ್ಹರು ಖಾಯಂ ಆಗಬೇಕು
    ಆರೋಗ್ಯ ಇಲಾಖೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಸಿಬ್ಬಂದಿಯಲ್ಲಿ ಅರ್ಹರನ್ನು ಸರ್ಕಾರ ಕೂಡಲೇ ಖಾಯಂಗೊಳಿಸಬೇಕು.

    ಹೀಗೆ 10 ಸಲಹೆಗಳನ್ನು ಕುಮಾರಸ್ವಾಮಿಯವರು ನೀಡಿದ್ದು, ಈ ಬಗ್ಗೆ ಸರ್ಕಾರ ಯಾವ ರೀತಿ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

  • ಬಾಳಸಂಗಾತಿಯಾಗುತ್ತೀರಾ ಎಂದ ಅಭಿಮಾನಿಗೆ ಸಲಹೆ ನೀಡಿದ ಅನುಪ್ರಭಾಕರ್

    ಬಾಳಸಂಗಾತಿಯಾಗುತ್ತೀರಾ ಎಂದ ಅಭಿಮಾನಿಗೆ ಸಲಹೆ ನೀಡಿದ ಅನುಪ್ರಭಾಕರ್

    ಬೆಂಗಳೂರು: ಮುಂದಿನ ಜನ್ಮದಲ್ಲಿ ಬಾಳಸಂಗಾತಿಯಾಗುತ್ತೀರಾ ಎಂದ ಅಭಿಮಾನಿಯೋರ್ವನಿಗೆ ನಟಿ ಅನುಪ್ರಭಾಕರ್ ಒಂದು ಒಳ್ಳೆಯ ಸಲಹೆ ನೀಡಿದ್ದಾರೆ.

    ಒಂದು ಲಾಂಗ್ ಗ್ಯಾಪ್‍ನ ನಂತರ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ಅನುಪ್ರಭಾಕರ್ ಅವರು, ಸಾಮಾಜಿಕ ಜಾಲತಾಣದಲ್ಲಿ ಯಾವಾಗಲು ಸಖತ್ ಸಕ್ರಿಯವಾಗಿ ಇರುತ್ತಾರೆ. ಇತ್ತೀಚೆಗಷ್ಟೇ ನಿಮಗೆ ವಯಸ್ಸಯ್ತು ಎಂದಿದ್ದ ಅಭಿಮಾನಿಗೆ ಕ್ಲಾಸ್ ತೆಗೆದುಕೊಂಡಿದ್ದ ಅನು, ಈಗ ಅಭಿಮಾನಿಯೋರ್ವನಿಗೆ ಸಲಹೆ ನೀಡಿದ್ದಾರೆ.

    ನವೀನ್ ರಾಜ್ ಎಂಬ ಅನುಪ್ರಭಾಕರ್ ಅಭಿಮಾನಿಯೋರ್ವ ಟ್ವಿಟ್ಟರ್ ನಲ್ಲಿ ಅವರ ಒಂದು ಫೋಟೋಗೆ ರೀಟ್ವೀಟ್ ಮಾಡಿದ್ದು, ಸೂಪರ್ ಲುಕ್ ಅನು ನಿಮ್ಮನ್ನ ನೋಡುತ್ತಿದ್ದರೆ ನನ್ನ ಹಳೇ 1999 ಲವ್ ಸ್ಟೋರಿ ಮತ್ತೆ ಓಪನ್ ಆಗುತ್ತೆ. ಮುಂದಿನ ಜನ್ಮದಲ್ಲಿ ನೀವೇ ನನ್ನ ಬಾಳಸಂಗಾತಿಯಾಗಬೇಕು ಎಂದು ನನ್ನ ಆಸೆ ಅದಕ್ಕೆ ನೀವೆನಂತೀರಾ ಎಂದು ಬರೆದುಕೊಂಡಿದ್ದರು.

    ಈ ಟ್ವೀಟ್‍ಗೆ ಉತ್ತರ ನೀಡಿರುವ ಅನುಪ್ರಭಾಕರ್ ಅವರು, ಮೊದಲು ಈ ಜನ್ಮದಲ್ಲಿ ಖುಷಿಯಾಗಿ ಇರಿ. ಮುಂದಿನ ಜನ್ಮ ಆಮೇಲೆ ನೋಡೋಣ ಎಂದು ಸಲಹೆ ನೀಡಿದ್ದಾರೆ. ಇದಕ್ಕೆ ಕೆಲ ಅಭಿಮಾನಿಗಳು ಕಮೆಂಟ್ ಮಾಡಿದ್ದು, ಸೂಪರ್ ಉತ್ತರ ಅನು ಅವರೇ. ಸರಿಯಾಗಿ ಹೇಳಿದ್ದೀರಿ ಎಂದು ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ಅನುಪ್ರಭಾಕರ್ ಅವರು, ನಾನು ಚಿತ್ರರಂಗಕ್ಕೆ ಬರುತ್ತಿದ್ದೇನೆ. ಮತ್ತೆ ಕ್ಯಾಮೆರಾ ಮುಂದೆ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಕಮೆಂಟ್ ಹಾಕಿದ್ದ, ಮಧುಸೂದನ್ ಎಂಬವರು ಸ್ವಲ್ಪ ವಯಸ್ಸಗಿದೆ ಬಿಡಿ ಸಾಕು ಎಂದಿದ್ದರು. ಈ ಕಮೆಂಟ್ ನೋಡಿ ಗರಂ ಆದ ಅನುಪ್ರಭಾಕರ್, ವಯಸ್ಸು ಆದ್ರೆ ಕೆಲಸ ನಿಲ್ಲಿಸಬೇಕಾ ಮಧು? ನೀವು ನನ್ನ ಸಿನಿಮಾ ನೋಡೋ ಅವಶ್ಯಕತೆ ಇಲ್ಲ ಬಿಡಿ. ಕಲಾವಿದರಾಗಿ ನಮ್ಮನ್ನು ಇಷ್ಟ ಪಡುವವರು ನೋಡುತ್ತಾರೆ ಎಂದು ಬರೆದು ಖಾರವಾಗಿ ಪ್ರತಿಕ್ರಿಯಿಸಿದ್ದರು.

  • ಎಲ್ಲ ಮುಗ್ಧ ಹುಡುಗರಿಗೆ “What The F” ನೋಡಲು ರಶ್ಮಿಕಾ ಸಲಹೆ!

    ಎಲ್ಲ ಮುಗ್ಧ ಹುಡುಗರಿಗೆ “What The F” ನೋಡಲು ರಶ್ಮಿಕಾ ಸಲಹೆ!

    ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಮುಗ್ಧ ಹುಡುಗರಿಗೆ ‘ವಾಟ್ ದಿ ಎಫ್’ ಹಾಡು ನೋಡಲು ಸಲಹೆ ನೀಡಿದ್ದಾರೆ.

    ರಶ್ಮಿಕಾ ಮಂದಣ್ಣ ತೆಲುಗಿನ ‘ಗೀತಾ ಗೋವಿದಂ’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದ್ದು, ರಶ್ಮಿಕಾ ಈ ಹಾಡನ್ನು ನೋಡಿ ಎಂದು ತಮ್ಮ ಟ್ಟಿಟ್ಟರಿನಲ್ಲಿ ವಿಡಿಯೋ ಹಾಕುವ ಮೂಲಕ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.

    ರಶ್ಮಿಕಾ ತಮ್ಮ ಟ್ವಿಟ್ಟರಿನಲ್ಲಿ ವಿಡಿಯೋ ಹಾಕಿ “ವಾಟ್ ದಿ ಎಫ್ ಹಾಡು ಬಿಡುಗಡೆಯಾಗಿದೆ. ನಾನು ಈ ಹಾಡಿನ ಪ್ರಚಾರ ಮಾಡಬೇಕು. ಏಕೆಂದರೆ ಇದು ನನ್ನ ಚಿತ್ರ. ನಾನು ಮತ್ತೇನು ಮಾಡಲು ಆಗುವುದಿಲ್ಲ. ಎಲ್ಲ ಮುಗ್ಧ ಹುಡುಗರೇ ಈ ಹಾಡನ್ನು ನೋಡಿ ಹಾಗೂ ಎಲ್ಲ ಮಹಿಳೆಯರೇ ನಾವು ಈ ರೀತಿಯ ಹಾಡನ್ನು ಬರೆಯಬೇಕು” ಎಂದು ಟ್ವೀಟ್ ಮಾಡಿದ್ದಾರೆ.

    ವಾಟ್ ದಿ ಎಫ್ ಹಾಡನ್ನು ಬಾಲಿವುಡ್ ಗಾಯಕರಾದ ಅರ್ಜಿತ್ ಸಿಂಗ್ ಹಾಗೂ ಸೋನಂ ನಿಗಮ್ ಹಾಡಬೇಕಿತ್ತು. ಆದರೆ ಅವರು ಸಿಗಲಿಲ್ಲ ಎಂಬ ಕಾರಣಕ್ಕೆ ಸಂಗೀತ ನಿರ್ದೇಶಕ ಗೋಪಿ ಸುಂದರ್ ಈ ಹಾಡನ್ನು ನೀನು ಹಾಡು ಎಂದು ಹೇಳಿದ್ದರು. ಹಾಗಾಗಿ ನಾನು ಈ ಹಾಡು ಹಾಡುತ್ತಿದ್ದೇನೆ ಎಂದು ನಟ ವಿಜಯ್ ದೇವರಕೊಂಡ ವಿಡಿಯೋದಲ್ಲಿ ತಿಳಿಸಿದ್ದಾರೆ.

    ಗೀತಾ ಗೋವಿದಂ ಚಿತ್ರದಲ್ಲಿ ರಶ್ಮಿಕಾಗೆ ನಾಯಕನಾಗಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದಾರೆ. ಬಿಡುಗಡೆಯಾದ ಮೊದಲನೇ ಹಾಡು ಯೂಟ್ಯೂಬ್‍ನಲ್ಲಿ ಸಾಕಷ್ಟು ಹಿಟ್ ಆಗಿದ್ದು, ಹಾಡು ಇದುವರೆಗೂ 23.45 ಲಕ್ಷ ವ್ಯೂ ಪಡೆದಿದೆ.

    ಸಿನಿಮಾದ ಟೀಸರ್ ಬಿಡುಗಡೆಯಾದ 7 ಗಂಟೆಯಲ್ಲಿ 14 ಲಕ್ಷ ವ್ಯೂ ಆಗಿದ್ದು, ನಂ.1 ಟ್ರೆಂಡಿಂಗ್ ನಲ್ಲಿತ್ತು. ಈಗ ಈ ಟೀಸರ್ 55 ಲಕ್ಷಕ್ಕೂ ಹೆಚ್ಚು ವ್ಯೂ ಪಡೆದಿದೆ. ಕನ್ನಡದ ವರನಟ ರಾಜ್‍ಕುಮಾರ್ ಅವರ ಎಂದೆಂದೂ ನಿನ್ನನು ಮರೆತು ನಾನಿರಲಾರೆ ಹಾಡಿನ ತೆಲುಗು ಟ್ಯೂನ್‍ನೊಂದಿಗೆ ಟೀಸರ್ ಆರಂಭವಾಗಿದೆ.

    ಸದ್ಯ ಈ ಚಿತ್ರವನ್ನು ಪರುಶರಾಮ್ ನಿರ್ದೇಶನ ಮಾಡಿದ್ದು, ಗೋಪಿ ಸುಂದರ್ ಸಂಗೀತ ನೀಡಿದ್ದಾರೆ. ಲಿರಿಕಲ್ ವಿಡಿಯೋ ಸಾಂಗ್ ಮೂಲಕವೇ ಈ ಹಾಡು ಸಾಕಷ್ಟು ವೈರಲ್ ಆಗಿದೆ. ಸದ್ಯ ಈ ಸಿನಿಮಾ ರಶ್ಮಿಕಾ ಅವರ ಎರಡನೇ ತೆಲುಗು ಸಿನಿಮಾ ಆಗಿದ್ದು, ಇದೇ ಆಗಸ್ಟ್ 15ಕ್ಕೆ ಚಿತ್ರ ಬಿಡುಗಡೆಯಾಗಲಿದೆ.

    https://www.youtube.com/watch?v=T4imX7yFgY0

  • ಜಾತಿ ನೋಡಿ ಮತ ಹಾಕ್ಬೇಡಿ, ಜಾತಿ ನೋಡಿ ಮರ್ಯಾದೆ ಕೊಡ್ಬೇಡಿ- ಅಭಿಮಾನಿಗಳಿಗೆ ಶಿವಣ್ಣ ಸಲಹೆ

    ಜಾತಿ ನೋಡಿ ಮತ ಹಾಕ್ಬೇಡಿ, ಜಾತಿ ನೋಡಿ ಮರ್ಯಾದೆ ಕೊಡ್ಬೇಡಿ- ಅಭಿಮಾನಿಗಳಿಗೆ ಶಿವಣ್ಣ ಸಲಹೆ

    ತುಮಕೂರು: ಜಾತಿ ನೋಡಿ ಮತ ಹಾಕಬೇಡಿ, ಜಾತಿ ನೋಡಿ ಮರ್ಯಾದೆ ಕೊಡಬೇಡಿ ಎಂದು ನಟ ಶಿವರಾಜ್‍ಕುಮಾರ್ ಅಭಿಮಾನಿಗಳಗೆ ಸಲಹೆ ನೀಡಿದ್ದಾರೆ

    ಸಿದ್ದಗಂಗಾ ಮಠ ಆಧರಿಸಿದ ಭೂಸ್ವರ್ಗ ಚಿತ್ರದ ಧ್ವನಿ ಸುರುಳಿ ಬಿಡುಗಡೆಗೆಂದು ಭಾನುವಾರದಂದು ನಟ ಶಿವರಾಜ್ ಕುಮಾರ್ ತುಮಕೂರಿನ ಉಡುಪಿ ಡಿಲಕ್ಸ್ ಗೆ ಹೋಗಿದ್ದರು. ಧ್ವನಿ ಸುರುಳಿ ಬಿಡುಗಡೆ ವೇಳೆ ಮಾತನಾಡಿದ ಶಿವಣ್ಣ, ಜಾತಿ ನೋಡಿ ಮತ ಹಾಕಬೇಡಿ, ಜಾತಿ ನೋಡಿ ಮರ್ಯಾದೆ ಕೊಡಬೇಡಿ ಎಂದು ಅಭಿಮಾನಿಗಳಿಗೆ ಸಲಹೆ ನೀಡಿದ್ರು.

    ಸಿದ್ದಗಂಗಾ ಮಠಕ್ಕೆ ಏನೋ ಒಂದು ಪವರ್ ಇದೆ. ಮಠದ ಮಹಿಮೆಯೋ ಏನೋ ಎಲ್ಲಾ ಜಾತಿಗಳನ್ನು ಒಗ್ಗೂಡಿಸುತ್ತದೆ. ಮಠದಲ್ಲಿ ಜಾತಿ ಬೇಧ ಭಾವ ಇಲ್ಲಾ. ಅಂತಹ ಮಹಾನ್ ಮಠ ಹಾಕಿಕೊಟ್ಟ ಹಾದಿಯಲ್ಲಿ ನಾವು ಸಾಗಬೇಕು. ಹಾಗಾಗಿ ಜಾತಿ ನೋಡಿ ಮತ ಹಾಕಬೇಡಿ. ಒಳ್ಳೆ ಮನುಷ್ಯನಿಗೆ, ಒಳ್ಳೆ ಕೆಲಸ ಮಾಡೋರಿಗೆ ವೋಟ್ ಹಾಕಿ ಎಂದು ಹೇಳಿದ್ರು.

    ಈ ವೇಳೆ ಕಾರ್ಯಕ್ರಮ ನಡೆಯುತ್ತಿದ್ದಾಗ ಅಭಿಮಾನಿಗಳು ಮೊಬೈಲ್ ನಿಂದ ವಿಡಿಯೋ ಮಾಡುತ್ತಿದ್ದು, ಇದರಿಂದ ಕಿರಿಕಿರಿ ಅನುಭವಿಸಿದ ನಟ, ಪ್ಲೀಸ್ ಸೈಲೆನ್ಸ್ ಸೈಲೆನ್ಸ್ ಎಂದು ಒಂದೇ ಸಮನೇ ಕೂಗಿದ್ರು. ಅಲ್ಲದೇ ಮೊಬೈಲ್ ಯಾವ ಪುಣ್ಯಾತ್ಮ ಕಂಡು ಹಿಡಿದಿದ್ದಾನೋ ಎಂದು ಶಿವಣ್ಣ ರೇಗಿದ್ರು.

    ಶಿವರಾಜ್ ಕುಮಾರ್ ರನ್ನು ಸುತ್ತುವರಿದು ಅಭಿಮಾನಿಗಳು ಕಿರಿಕಿರಿ ಉಂಟು ಮಾಡಿದ್ದರಿಂದ ಅವರ ಮೇಲೆ ರೇಗಿದರು ಎಂದು ಹೇಳಲಾಗಿದೆ. ಇದನ್ನೂ ಓದಿ: ತುಮಕೂರಿನಲ್ಲಿ ಅಭಿಮಾನಿಗಳ ವಿರುದ್ಧ ಗರಂ ಆದ ಶಿವರಾಜ್ ಕುಮಾರ್!