Tag: advithi shetty

  • ‘ಜೈ’ ಚಿತ್ರದ ‘ಲವ್ ಯು’ ಹಾಡು ರಿಲೀಸ್ ಮಾಡಿದ ರಿಯಲ್ ಲವ್ ಬರ್ಡ್ಸ್

    ‘ಜೈ’ ಚಿತ್ರದ ‘ಲವ್ ಯು’ ಹಾಡು ರಿಲೀಸ್ ಮಾಡಿದ ರಿಯಲ್ ಲವ್ ಬರ್ಡ್ಸ್

    ರಾವಳಿ ಭಾಗದ ಪ್ರತಿಭೆ ಹಾಗೂ ಬಿಗ್‌ಬಾಸ್ ಖ್ಯಾತಿಯ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ (Roopesh Shetty) ನಟಿಸಿ, ನಿರ್ದೇಶನ ಮಾಡಿರುವ ತುಳು ಹಾಗೂ ಕನ್ನಡದ `ಜೈ’ ಸಿನಿಮಾದ (Jai Cinema) ಲವ್ ಎಂಬ ಹಾಡು ಇತ್ತೀಚೆಗೆ ರಿಲೀಸ್ ಆಗಿದೆ. ಇದು ಪ್ಯೂರ್ ಲವ್ ಸಾಂಗ್ ಆಗಿರೋದ್ರಿಂದ ನಿಜವಾದ ಪ್ರೇಮಿಗಳು ಹಾಡನ್ನ ಬಿಡುಗಡೆ ಮಾಡಿದ್ದಾರೆ. ಗುರುಕಿರಣ್ ದಂಪತಿ, ನಿರಂಜನ್ ದೇಶಪಾಂಡೆ ದಂಪತಿ, ವಿನಯ್ ಗೌಡ ದಂಪತಿ, ರೂಪೇಶ್ ರಾಜಣ್ಣ ದಂಪತಿ, ಆರ್ಯವರ್ಧನ್ ಗುರೂಜಿ ದಂಪತಿಯಿಂದ ಹಾಡು ರಿಲೀಸ್ ಆಗಿದೆ.

    ಲವ್ ಯೂ ಅನ್ನೋ ಹಾಡನ್ನ ಫೈನಲ್ ಮಾಡುವುದಕ್ಕೇನೆ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. 5 ವರ್ಷನ್ ಕೇಳಿದ ಮೇಲೂ 6ನೇ ವರ್ಷನ್ ಫೈನಲ್ ಮಾಡಲಾಗಿತ್ತು. ಮತ್ತೆ ಮತ್ತೆ ಕೇಳಬೇಕು ಎನ್ನುವಂತ ಫೀಲ್ ಬರಬೇಕು ಎಂಬ ಕಾರಣಕ್ಕೆ ಹಾಡಿನ ಮೇಲೆ ಶ್ರಮ ಹಾಕಲಾಗಿದೆ. ಇಷ್ಟು ಅದ್ಭುತವಾದ ಸಾಹಿತ್ಯಕ್ಕೆ ಧ್ವನಿಯೂ ಅಷ್ಟೇ ಚೆನ್ನಾಗಿ ಕೂಡಿದಾಗ ಹಾಡು ಮತ್ತಷ್ಟು ಖುಷಿ ಕೊಡುತ್ತದೆ. ಹೀಗಾಗಿ ಹಾಡುವವರ ಹುಡುಕಾಟ ನಡೆಯುತ್ತಿದ್ದಾಗ ರಜತ್ ಹೆಗ್ಡೆ ವಾಯ್ಸ್ ಕಿವಿಗೆ ಬಿದ್ದಿತ್ತು. ಇವರ ಧ್ವನಿ ಪಕ್ಕಾ ಮ್ಯಾಚ್ ಆಗಿತ್ತು. ಹೀಗಾಗಿ ರಜತ್ ಹೆಗ್ಡೆ ಲವ್ ಯೂ ಹಾಡನ್ನ ಹಾಡಿದ್ದಾರೆ.

    ಈ ಹಾಡಿಗೆ ತುಳು ಭಾಷೆಯಲ್ಲಿ ರೂಪೇಶ್ ಶೆಟ್ಟಿ ಅವರೇ ಸಾಹಿತ್ಯ ಬರೆದಿದ್ದು, ಕನ್ನಡಕ್ಕೆ ಕೀರ್ತನ್ ಬಂಡಾರಿ ಅವರು ಸಾಹಿತ್ಯ ಬರೆದಿದ್ದಾರೆ. ಹಾಗಂತ ತರ್ಜುಮೆ ಮಾಡಿಲ್ಲ, ಹಾಡಿನ ವಿಚಾರಧಾರೆಯನ್ನು ರೆಫರೆನ್ಸ್ ಇಟ್ಟುಕೊಂಡು, ಆ ಭಾವನೆ, ಆ ಮೀನಿಂಗ್ ಎಲ್ಲವನ್ನು ಅಚ್ಚುಕಟ್ಟಾಗಿ ಕಟ್ಟುಕೊಟ್ಟಿದ್ದಾರೆ. ಈ ಚಿತ್ರದಲ್ಲಿ ರೂಪೇಶ್ ಶೆಟ್ಟಿಗೆ ನಾಯಕಿಯಾಗಿ ನಟಿ ಅದ್ವಿತಿ ಶೆಟ್ಟಿ ತೆರೆಹಂಚಿಕೊಂಡಿದ್ದಾರೆ.

    ಈ ಸಿನಿಮಾ ಅದ್ವಿತಿಗೆ ಮೊದಲ ತುಳು ಸಿನಿಮಾವಾಗಿದ್ದು, ಅವರ ಮಾತೃಭಾಷೆ ತುಳು ಆಗಿದೆ ಎಂದಿದ್ದಾರೆ. ಈ ಸಿನಿಮಾದಲ್ಲಿ ಜರ್ನಲಿಸ್ಟ್ ಪಾತ್ರದಲ್ಲಿ ನಟಿ ಅದ್ವಿತಿ ಶೆಟ್ಟಿ ನಟಿಸಿದ್ದಾರಂತೆ. ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ ಚಿತ್ರಕ್ಕೆ ಬಂಡವಾಳ ಹೂಡಿದ್ದು, ದೀಕ್ಷಿತ್ ಸಹ ನಿರ್ಮಾಪಕರಾಗಿದ್ದಾರೆ. ಈ ಸಿನಿಮಾದ ವಿಶೇಷ ಪಾತ್ರದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟಿಸಿರೋದು ಈ ಚಿತ್ರದ ಮತ್ತೊಂದು ವಿಶೇಷ.

  • `ಜೈ’ ಚಿತ್ರದ ಟೀಸರ್ ಲಾಂಚ್ ಮಾಡಿದ ರೋರಿಂಗ್ ಸ್ಟಾರ್ ಶ್ರೀಮುರುಳಿ

    `ಜೈ’ ಚಿತ್ರದ ಟೀಸರ್ ಲಾಂಚ್ ಮಾಡಿದ ರೋರಿಂಗ್ ಸ್ಟಾರ್ ಶ್ರೀಮುರುಳಿ

    ರಾವಳಿ ಭಾಗದ ಪ್ರತಿಭೆ ಹಾಗೂ ಬಿಗ್‌ಬಾಸ್ ಖ್ಯಾತಿಯ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ತುಳು ಹಾಗೂ ಕನ್ನಡದ `ಜೈ’ (Jai) ಚಿತ್ರದ ಟೀಸರ್ ಬಿಡುಗಡೆ ಇತ್ತೀಚೆಗೆ ನಡೆದಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ನಟ ಶ್ರೀಮುರಳಿ (Srimurali) ಚಿತ್ರದ ಟೀಸರ್ ಅನ್ನ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ಬಿಗ್‌ಬಾಸ್ ಮೂಲಕ ಖ್ಯಾತಿ ಪಡೆದಿರುವ ರೂಪೇಶ್ ಶೆಟ್ಟಿ (Rupeesh Shetty) ತುಳು ಭಾಷೆಯ ಸಂಸ್ಕೃತಿ, ಆಚಾರ-ವಿಚಾರದ ಬಗ್ಗೆ ಅಪಾರ ಪ್ರೀತಿಯನ್ನು ಇಟ್ಟುಕೊಂಡು ಸಿನಿಮಾ ಮಾಡುತ್ತಾ ಬಂದಿದ್ದಾರೆ ಎಂದು ನಟ ಶ್ರೀಮುರಳಿ ರೂಪೇಶ್ ಗುಣಗಾನ ಮಾಡಿದ್ದಾರೆ. ಇದನ್ನೂ ಓದಿ: ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲುಗು ಸ್ಟಾರ್‌ ರಾಮ್‌ ಚರಣ್‌

    ಅಂದಹಾಗೆ ಚಿತ್ರದ ನಟ, ನಿರ್ದೇಶಕ ರೂಪೇಶ್ ಶೆಟ್ಟಿ ಅವರ ಮೂರನೆಯ ನಿರ್ದೇಶನದ ಚಿತ್ರ. ಈ ಹಿಂದೆ ಗಿರಿಗಿಟ್, ಸರ್ಕಸ್ ಎಂಬ ಚಿತ್ರದ ನಿರ್ದೇಶನ ಮಾಡಿದ್ದ ರೂಪೇಶ್ ಶೆಟ್ಟಿ, ಇದೀಗ `ಜೈ’ ಸಿನಿಮಾ ಮೂಲಕ ಮತ್ತೆ ಕಮ್‌ಬ್ಯಾಕ್ ಮಾಡಿದ್ದಾರೆ. ಈ ಹಿಂದೆ ಮಾಡಿದ್ದ ಎರಡು ಸಿನಿಮಾಗಳು ಸಕ್ಸಸ್ ಕಂಡಿವೆ. ಅದರಲ್ಲೂ ಈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರಂತೆ. ಇದೊಂದು ಕರಾವಳಿ ಭಾಗದ ಲೋಕಲ್ ಪೊಲಿಟಿಕಲ್ ಕಂಟೆಂಟ್ ಇರುವ ಚಿತ್ರವಾಗಿದೆಯಂತೆ. ಇದನ್ನೂ ಓದಿ: ಚಾಮುಂಡಿ ತಾಯಿ ದರ್ಶನ ಪಡೆದ ಕಿಚ್ಚ ಸುದೀಪ್

    ಇನ್ನು ರೂಪೇಶ್ ಶೆಟ್ಟಿಗೆ ನಾಯಕಿಯಾಗಿ ನಟಿ ಅದ್ವಿತಿ ಶೆಟ್ಟಿ (Advithi Shetty) ತೆರೆಹಂಚಿಕೊಂಡಿದ್ದಾರೆ. ಈ ಸಿನಿಮಾ ಅದ್ವಿತಿಗೆ ಮೊದಲ ತುಳು ಸಿನಿಮಾವಾಗಿದ್ದು, ಅವರ ಮಾತೃಭಾಷೆ ತುಳು ಆಗಿದೆ ಎಂದಿದ್ದಾರೆ. ಈ ಸಿನಿಮಾದಲ್ಲಿ ಜರ್ನಲಿಸ್ಟ್ ಪಾತ್ರದಲ್ಲಿ ನಟಿ ಅದ್ವಿತಿ ಶೆಟ್ಟಿ ನಟಿಸಿದ್ದಾರಂತೆ. ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ ಚಿತ್ರಕ್ಕೆ ಬಂಡವಾಳ ಹೂಡಿದ್ದು, ದೀಕ್ಷಿತ್ ಸಹ ನಿರ್ಮಾಪಕರಾಗಿದ್ದಾರೆ.

    ಜೈ ಸಿನಿಮಾದ ಚಿತ್ರಕಥೆಯನ್ನ ರೂಪೇಶ್ ಶೆಟ್ಟಿ ಹಾಗೂ ವೇಣು ಹಸ್ರಳ್ಳಿ ಅವರು ಬರೆದಿದ್ದಾರೆ. ಮೂರು ಹಂತದಲ್ಲಿ ಚಿತ್ರೀಕರಣ ಮುಗಿಸಿದ `ಜೈ’ ಸಿನಿಮಾದಲ್ಲಿ ನಾಯಕನಾಗಿ ರೂಪೇಶ್ ಶೆಟ್ಟಿ ಮತ್ತು ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ. ಉಳಿದಂತೆ ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್ ಮೊದಲಾದವರು ಅಭಿನಯಿಸಿದ್ದಾರೆ.

  • ಕೆಟ್ಟ ಕಾಮೆಂಟ್ ಮಾಡೋರನ್ನ ಬ್ಲಾಕ್ ಮಾಡಿಬಿಡಿ ಅಷ್ಟೇ: ಅದ್ವಿತಿ ಶೆಟ್ಟಿ

    ಕೆಟ್ಟ ಕಾಮೆಂಟ್ ಮಾಡೋರನ್ನ ಬ್ಲಾಕ್ ಮಾಡಿಬಿಡಿ ಅಷ್ಟೇ: ಅದ್ವಿತಿ ಶೆಟ್ಟಿ

    ಬೆಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್‌ ಸ್ಟಾರ್‌ ಜೈಲು ಸೇರಿದ್ದಾರೆ. ಇದು ಇಡೀ ಕನ್ನಡ ಚಿತ್ರರಂಗಕ್ಕೆ‌ ದಂಗುಬಡಿಸಿದೆ. ಸದ್ಯ ನಟ ಆದಷ್ಟು ಬೇಗ ನಿರಪರಾಧಿಯಾಗಿ ಹೊರಬರಲಿ ಎಂಬುದಾಗಿ ನಟ-ನಟಿಯರು ಆಶಯ ವ್ಯಕ್ತಪಡಿಸುತ್ತಿದ್ದಾರೆ. ಈ ಸಂಬಂಧ ನಟಿ ಅದ್ವಿತಿ ಶೆಟ್ಟಿ (Adhvithi Shetty) ಕೂಡ ಇಂದು ಪ್ರತಿಕ್ರಿಯಿಸಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ನಟಿ, ಈ ಘಟನೆ ಬೇಸರ ತಂದಿದೆ. ಯಾರು ಯಾರಿಗೂ ಕೆಟ್ಟ ಕಾಮೆಂಟ್ ಮಾಡಬೇಡಿ. ಕೆಟ್ಟ ಕಾಮೆಂಟ್ ಮಾಡೋರನ್ನ ಬ್ಲಾಕ್ ಮಾಡಿಬಿಡಿ ಅಷ್ಟೇ. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿದರು. ಇದನ್ನೂ ಓದಿ: ದರ್ಶನ್‌ ಸರ್‌ ನಿರಪರಾಧಿಯಾಗಿ ಆಚೆ ಬರಲಿ: ಕಾರುಣ್ಯ ರಾಮ್‌

    ದರ್ಶನ್ ಸರ್ ನಮ್ ಫ್ಯಾಶನ್ ಶೋ ಕಾರ್ಯಕ್ರಮಕ್ಕೆ ಬಂದಿದ್ರು. ಅವತ್ತು ಸಿಕ್ಕಾಗ ಚೆನ್ನಾಗಿ ಮಾತಾಡಿಸಿದ್ರು. ಮತ್ತೆ ಯಾವತ್ತೂ ಮುಖಾಮುಖಿ ಆಗಿಲ್ಲ. ಈ ಕೇಸ್ ನಿಂದ ದರ್ಶನ್ ಸರ್ ಆಚೆ ಬರಲಿ ಅಂತ ಕೇಳಿಕೊಳ್ಳುತ್ತೇನೆ ಎಂದರು.

    ಪ್ರಕರಣ ಏನು?: ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್‌ ಮಾಡಿದನೆಂದು ಆರೋಪಿಸಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು (Renukaswamy Case) ಕಿಡ್ನಾಪ್‌ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ಬಳಿಕ ಪಟ್ಟಣಗೆರೆ ಶೆಡ್‌ಗೆ ಕರೆದೊಯ್ದು ದರ್ಶನ್‌ (Challenging Star Darshan) ಮತ್ತು ಗ್ಯಾಂಗ್‌ನಿಂದ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು. ಅಲ್ಲದೇ ಮೃತದೇಹವನ್ನು ಸುಮ್ಮನಹಳ್ಳಿ ಮೋರಿಗೆ ಎಸೆಯಲಾಗಿತ್ತು.

    ಇತ್ತ ಕಾಮಾಕ್ಷಿಪಳ್ಯ ಪೊಲೀಸ್‌ ಠಾಣೆಗೆ ನಾಲ್ವರು ಶರಣಾಗಿ ಹಣದ ವಿಚಾರಕ್ಕೆ ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದರು. ಈ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಅಸಲಿ ವಿಚಾರ ಗೊತ್ತಾಗಿದೆ. ಈ ಕೇಸ್‌ನಲ್ಲಿ ದರ್ಶನ್‌ ಪಾತ್ರ ಇರುವುದನ್ನು ಮನಗಂಡ ಪೊಲೀಸರು ನೇರವಾಗಿ ಮೈಸೂರಿಗೆ ತೆರಳಿ ನಟನನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಬಳಿಕ ಒಬ್ಬೊಬ್ಬರಾಗಿ ಒಟ್ಟು 17 ಮಂದಿಯನ್ನು ಬಂಧಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಇರಿಸಲಾಗಿತ್ತು. ತನಿಖೆಯ ಭಾಗವಾಗಿ ಸ್ಥಳ ಮಹಜರು ಪೂರ್ಣಗೊಳಿಸಿದ ಬಳಿಕ ಆರೋಪಿಗಳನ್ನು ಕೋರ್ಟ್‌ ಮುಂದೆ ಹಾಜರಿಸಿ ನಂತರ ಜೈಲಿಗಟ್ಟಲಾಗಿದೆ.