Tag: adyar padavu

  • ಹಲ್ಲೆಗೈದು ಕಾಲಿನಿಂದ ಎದೆಗೆ ಒದ್ದು ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನ ಕಗ್ಗೊಲೆ

    ಹಲ್ಲೆಗೈದು ಕಾಲಿನಿಂದ ಎದೆಗೆ ಒದ್ದು ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನ ಕಗ್ಗೊಲೆ

    ಮಂಗಳೂರು: ನಗರದ ಹೊರವಲಯದ ಅಡ್ಯಾರ್ ಪದವು ಎಂಬಲ್ಲಿ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

    ಮೃತನನ್ನು ಯಾಕುಬ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ನಿವಾಸಿ ಶಾಕೀರ್ ಕೊಲೆ ಮಾಡಿದ ಆರೋಪಿ. ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ.

    ಇಬ್ಬರ ಮಧ್ಯೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಗಲಾಟೆ ತಾರಕಕ್ಕೇರಿ ಶಾಕೀರ್, ಯಾಕೂಬ್ ಮೇಲೆ ಕೈನಿಂದ ಹಲ್ಲೆ ಮಾಡಿದ್ದಾನೆ. ಅಲ್ಲದೆ ನೆಲಕ್ಕೆ ದೂಡಿ ಹಾಕಿ ಎದೆಗೆ ಕಾಲಿನಿಂದ ಒದ್ದಿದ್ದಾನೆ. ಪರಿಣಾಮ ಯಾಕೂಬ್ ಮೃತಪಟ್ಟಿದ್ದಾರೆ.

    ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಲ್ಲಿನ ಕೋರೆಯಲ್ಲಿ ಈಜಲು ತೆರಳಿದ್ದ 13ರ ಬಾಲಕ ಜಲಸಮಾಧಿ!

    ಕಲ್ಲಿನ ಕೋರೆಯಲ್ಲಿ ಈಜಲು ತೆರಳಿದ್ದ 13ರ ಬಾಲಕ ಜಲಸಮಾಧಿ!

    ಮಂಗಳೂರು: ಕಲ್ಲಿನ ಕೋರೆಯಲ್ಲಿ ಈಜಲು ತೆರಳಿದ್ದ ವೇಳೆ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಅಡ್ಯಾರ್‍ಪದವಿನಲ್ಲಿ ನಡೆದಿದೆ.

    ಸ್ಥಳೀಯ ನಿವಾಸಿ 13 ವರ್ಷದ ತಮೀಮ್ ಮೃತಪಟ್ಟ ಬಾಲಕ. ತಮೀಮ್ ತನ್ನ ಸ್ನೇಹಿತರೊಂದಿಗೆ ಈಜಲು ಕಲ್ಲಿನ ಕೋರೆಗೆ ತೆರಳಿದ್ದಾನೆ. ಕೋರೆಯಲ್ಲಿ ಈಜುವ ವೇಳೆ ಮುಳುಗಿ ಮೃತಪಟ್ಟಿದ್ದಾನೆ. ಕಳೆದ ಕೆಲ ದಿನಗಳಿಂದ ಮಂಗಳೂರು ಪರಿಸರದಲ್ಲಿ ನಿರಂತರ ಮಳೆಯಾಗುತ್ತಿದ್ದರಿಂದ ಕಲ್ಲಿನ ಕೋರೆಯಲ್ಲಿ ನೀರು ತುಂಬಿಕೊಂಡಿತ್ತು.

    ತಮೀಮ್ ಈಜಾಡುತ್ತಾ ನೀರಿರುವ ಮಧ್ಯಭಾಗವನ್ನು ತಲುಪಿದ್ದು, ನಿಯಂತ್ರಣ ಕಳೆದುಕೊಂಡು ಮುಳುಗಲಾರಂಭಿಸಿದ್ದಾನೆ. ಕೂಡಲೇ ಸ್ನೇಹಿತರು ರಕ್ಷಿಸುವುದಕ್ಕೆ ಮುಂದಾದರೂ ಸಾಧ್ಯವಾಗಲಿಲ್ಲ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಬಾಲಕನ ಶವ ಹೊರತೆಗೆದಿದ್ದಾರೆ.

    ಘಟನೆ ಬಳಿಕ ಸ್ಥಳೀಯರು ಪ್ರತಿಭಟನೆಗಾಗಿ ಮುಂದಾಗಿದ್ದು, ಕಾನೂನುಬಾಹಿರ ಕಲ್ಲು ಕ್ವಾರಿಯ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

  • ಮಂಗಳೂರು: ಚೂರಿ ಇರಿದು ಕೊಲೆ ಯತ್ನ ನಡೆಸಿದ್ದ ಮೂವರ ಬಂಧನ

    ಮಂಗಳೂರು: ಚೂರಿ ಇರಿದು ಕೊಲೆ ಯತ್ನ ನಡೆಸಿದ್ದ ಮೂವರ ಬಂಧನ

    ಮಂಗಳೂರು: ನಗರದ ಅಡ್ಯಾರುಪದವಿನಲ್ಲಿ ಯುವಕನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಅರ್ಕುಳದ ನಿತಿನ್ ಪೂಜಾರಿ(21), ಅಡ್ಯಾರ್ ಕಟ್ಟೆಯ ಪ್ರಾಣೇಶ್ ಪೂಜಾರಿ(20), ಪಡೀಲ್ ಕಂಡೇವಿನ ಕಿಶನ್ ಪೂಜಾರಿ(21) ಬಂಧಿತ ಆರೋಪಿಗಳು.

    ಜುಲೈ 7 ರಂದು ಅಡ್ಯಾರುಪದವಿನಲ್ಲಿ ಕೇರಳದ ಮಲಪ್ಪುರಂ ನಿವಾಸಿ, ಮಂಗಳೂರಿನ ಖಾಸಗಿ ಕಾಲೇಜೊಂದರ 3ನೆ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಸಾಜಿದ್ ಹಾಗೂ ಆತನ ಸ್ನೇಹಿತ ನೌಫಲ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು.

    ಬೈಕ್ ನಲ್ಲಿ ನೌಫಲ್ ಜೊತೆ ಬರುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು ಸ್ಕೂಟರ್ ಸ್ಟಾರ್ಟ್ ಆಗುವುದಿಲ್ಲ ಎಂದು ಹೇಳಿ ಬೈಕ್ ನಲ್ಲಿ ಹೋಗುತ್ತಿದ್ದವರನ್ನು ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಮೂವರು ಚೂರಿಯಿಂದ ಇರಿಯಲೆತ್ನಿಸಿದ್ದು ನೌಫಲ್ ಈ ಸಂದರ್ಭದಲ್ಲಿ ತಪ್ಪಿಸಿಕೊಂಡಿದ್ದರು. ಆದರೆ ಸಾಜಿದ್ ಗೆ ಚೂರಿಯಿಂದ ಇರಿಯಲಾಗಿತ್ತು. ಪರಿಣಾಮ ಸಾಜಿದ್ ನ ಕೈ ಹಾಗೂ ಹೊಟ್ಟೆಯ ಬಲಭಾಗಕ್ಕೆ ತೀವ್ರ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.