Tag: Aerospace

  • ಭಾರತದ ವಾಯುಸೀಮೆಯನ್ನು ಅಮೆರಿಕ ಬಳಸಿ ಇರಾನ್‌ ಮೇಲೆ ದಾಳಿ ಮಾಡಿತ್ತಾ? – ಉತ್ತರ ನೀಡಿದ ಪಿಐಬಿ

    ಭಾರತದ ವಾಯುಸೀಮೆಯನ್ನು ಅಮೆರಿಕ ಬಳಸಿ ಇರಾನ್‌ ಮೇಲೆ ದಾಳಿ ಮಾಡಿತ್ತಾ? – ಉತ್ತರ ನೀಡಿದ ಪಿಐಬಿ

    ನವದೆಹಲಿ: ಇರಾನ್‌ನಲ್ಲಿ (Iran) ಪರಮಾಣು ನೆಲೆಗಳ ಮೇಲೆ ನಡೆಸಿದ ದಾಳಿಗೆ ಅಮೆರಿಕ (USA) ಭಾರತದ ವಾಯುಸೀಮೆಯನ್ನು ಬಳಸಿಲ್ಲ ಎಂದು ಪಿಐಬಿ ಹೇಳಿದೆ.


    ಸಾಮಾಜಿಕ ಜಾಲತಾಣದಲ್ಲಿ ಭಾರತದ ವಾಯುಸೀಮೆಯನ್ನು ಬಳಸಿ ಇರಾನ್‌ ದಾಳಿ ನಡೆಸಿದೆ ಎಂದು ಸುದ್ದಿಗಳು ಹರಿದಾಡುತ್ತಿದ್ದಂತೆ ಪಿಐಬಿ ಸ್ಟಷ್ಟನೆ ನೀಡಿದೆ. ಇದನ್ನೂ ಓದಿ: ಕಿಲ್ಲರ್‌ ಲೇಡಿಯಿಂದ ಇರಾನ್‌ ನಾಶ – ಇಸ್ರೇಲ್‌ ನಿಖರ ದಾಳಿ ಹಿಂದಿದ್ದಾಳೆ ಸುಂದರಿ!

    ಬಿ2 ಯುದ್ಧ ವಿಮಾನ ಅಟ್ಲಾಂಟಿಕ್‌ ಸಮುದ್ರ ನಂತರ ಮೆಡಿಟೆರಿಯನ್‌ ಸಮುದ್ರ ಬಳಸಿ ಇರಾನಿನ ಮೂರು ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಅಮೆರಿಕ ಸೇನೆ ಸುದ್ದಿಗೋಷ್ಠಿ ನಡೆಸಿದ ಲಿಂಕ್‌ ಹಾಕಿ ಈ ಸುದ್ದಿ ಸುಳ್ಳು ಎಂದು ತಿಳಿಸಿದೆ.

    ಅಮೆರಿಕ ಬಹಳ ಎಚ್ಚರಿಕೆಯಿಂದ ಈ ದಾಳಿಯನ್ನು ನಡೆಸಿತ್ತು. ಜೂನ್‌ 21 ರಂದು ಎರಡು ಬಿ2 ಯುದ್ಧ ವಿಮಾನಗಳು ಮೊನೊ, ವೈಟ್‌ಮನ್ ಏರ್ ಫೋರ್ಸ್ ಬೇಸ್‌ನಿಂದ ಪಶ್ಚಿಮಕ್ಕೆ ಟೇಕಾಫ್‌ ಆಗಿ ಗುವಾಮ್‌ಗೆ ಬಂದಿತ್ತು. ಈ ವಿಮಾನಗಳು ಹಾರಿದ್ದರಿಂದ ಗುವಾಮ್‌ನಿಂದ ಅಮರಿಕ ಇರಾನ್‌ ಮೇಲೆ ದಾಳಿ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಉದ್ದೇಶಪೂರ್ವಕವಾಗಿ ತಮ್ಮ ಕಾರ್ಯಾಚರಣಾ ತಂತ್ರ ಸೋರಿಕೆ ಆಗದೇ ಇರಲು ಮಾಧ್ಯಮಗಳು ಮತ್ತು ಜನರ ದಿಕ್ಕು ತಪ್ಪಿಸಲು ಎರಡು ಯುದ್ಧವಿಮಾನಗಳನ್ನು ಗುವಾಮ್‌ಗೆ ಅಮೆರಿಕ ಕಳುಹಿಸಿತ್ತು ಎಂದು ವಿಶ್ಲೇಷಿಸಲಾಗುತ್ತಿದೆ.  ಇದನ್ನೂ ಓದಿ: ಬಾಂಬ್‌ ಹಾಕಿದ ಬೆನ್ನಲ್ಲೇ ಇರಾನ್‌ಗೆ MIGA ಘೋಷಿಸಿದ ಟ್ರಂಪ್‌

  • ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‍ಗಳನ್ನು ಘೋಷಿಸುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ: ಜಗದೀಶ್ ಶೆಟ್ಟರ್

    ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‍ಗಳನ್ನು ಘೋಷಿಸುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ: ಜಗದೀಶ್ ಶೆಟ್ಟರ್

    ಬೆಂಗಳೂರು: ದೇಶದ ಏರೋಸ್ಪೇಸ್ ಹಾಗೂ ರಕ್ಷಣಾ ಉತ್ಪನ್ನಗಳ ಕ್ಷೇತ್ರದಲ್ಲಿ ಮೂಂಚೂಣಿ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್ ಗಳನ್ನು ಘೋಷಿಸುವ ಮೂಲಕ ರಾಜ್ಯದ ಏರೋಸ್ಪೇಸ್ ಹಾಗೂ ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ಕೇಂದ್ರ ರಕ್ಷಣಾ ಖಾತೆ ಸಚಿವರಾದ ರಾಜನಾಥ್ ಸಿಂಗ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್ ರೌಂಡ್ ಟೇಬಲ್ ವೆಬಿನಾರ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದಲ್ಲಿ ರಕ್ಷಣಾ ಹಾಗೂ ಏರೋಸ್ಪೇಸ್ ಗೆ ಸಂಬಂಧಿಸಿದಂತಹ ಕ್ಷೇತ್ರಗಳಿಗೆ ಹಲವಾರು ಯೋಜನೆಗಳ ಮೂಲಕ ಪ್ರೋತ್ಸಾಹ ನೀಡುತ್ತಿದೆ. ರಕ್ಷಣಾ ಉತ್ಪಾದನಾ ಕಾರಿಡಾರ್ ಯೋಜನೆಯ ಮೂಲಕ ಉತ್ತರ ಪ್ರದೇಶ ಹಾಗೂ ತಮಿಳುನಾಡುಗಳಲ್ಲಿ ಕ್ರಮವಾಗಿ 6 ಮತ್ತು 5 ನೋಡ್ ಗಳನ್ನು ಉತ್ತೇಜಿಸುವ ಕಾರ್ಯಕ್ಕೆ ಮುಂದಾಗಿದೆ. ಹೊಸ ರಕ್ಷಣಾ ಕಾರಿಡಾರ್ ಗಳನ್ನು ನಿರ್ಮಿಸುವುದರ ಜೊತೆಯಲ್ಲೇ, ಈಗಾಗಲೇ ಅಸ್ತಿತ್ವದಲ್ಲಿರುವ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಪರಿಸರವನ್ನು ಹೊಂದಿರುವ ಪ್ರದೇಶಗಳಿಗೂ ಉತ್ತೇಜನ ನೀಡಬೇಕು ಎಂಬುದು ನಮ್ಮ ಮನವಿಯಾಗಿದೆ.

    ಕರ್ನಾಟಕ ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್ ನಿರ್ಮಾಣಕ್ಕೆ ಎಲ್ಲಾ ರೀತಿಯ ಅನುಕೂಲವಿದ್ದು ಉತ್ತಮ ಪರಿಸರವಿದೆ. ರಾಜ್ಯದಲ್ಲಿ ಅತ್ಯುತ್ತಮ ಸಂಶೋಧನೆ ಮತ್ತು ಅಭಿವೃದ್ದಿಯ ಕೇಂದ್ರಗಳು ಇವೆ. ಅಲ್ಲದೆ, ಹೆಚ್‍ಎಎಲ್, ಬಿಇಎಲ್ ನಂತಹ ಸಾರ್ವಜನಿಕ ಸ್ವಾಮ್ಯದ ಕಂಪನಿಗಳು ಮತ್ತು ಡಿಆರ್‍ಡಿಓದ ಪ್ರಯೋಗಾಲಯಗಳಾದ ಡಿಏಆರ್‍ಇ ಮತ್ತು ಎಡಿಇ ಗಳಿವೆ. ಏರ್ ಬಸ್, ಬೋಯಿಂಗ್, ಜಿಈ ಏವಿಯೇಷನ್ ನಂತಹ ಪ್ರಮುಖ ಕಂಪನಿಗಳು ರಾಜ್ಯದಲ್ಲಿವೆ. ಇದು ನಮ್ಮ ರಾಜ್ಯವನ್ನು ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವಂತೆ ಮಾಡಿದೆ ಎಂದು ಹೇಳಿದರು.

    ದೇಶದ ಶೇಕಡಾ 25 ಕ್ಕೂ ಹೆಚ್ಚು ಏರ್ ಕ್ರಾಫ್ಟ್ ಮತ್ತು ಸ್ಪೇಸ್ ಕ್ರಾಫ್ಟ್ ಕೈಗಾರಿಕೆಗಳು ರಾಜ್ಯದಲ್ಲಿವೆ. ರಕ್ಷಣಾ ಕ್ಷೇತ್ರಕ್ಕೆ ಅಗತ್ಯವಿರುವ ಶೇಕಡಾ 67 ರಷ್ಟು ಏರ್ ಕ್ರಾಫ್ಟ್ ಮತ್ತು ಹೆಲಿಕ್ಯಾಪ್ಟರ್ ಉತ್ಪಾದನೆ ರಾಜ್ಯದಲ್ಲಿ ನಡೆಯುತ್ತದೆ. ಅಲ್ಲದೆ, ಎಫ್‍ಡಿಐ ಇಂಟಲಿಜೆನ್ಸ್ ನ ವಿಶ್ವ ಏರೋಸ್ಪೇಸ್ ನಗರಗಳ ಸೂಚ್ಯಾಂಕದ ಮೊದಲ 10 ನೇ ಸ್ಥಾನದಲ್ಲಿ ಬೆಂಗಳೂರು ನಗರ ಸ್ಥಾನ ಪಡೆದುಕೊಂಡಿದೆ. ಹಾಗೆಯೇ, ಈ ಕ್ಷೇತ್ರಕ್ಕೆ ಬಿಡಿಭಾಗಗಳನ್ನು ಪೂರೈಸುವ 2000 ಕ್ಕೂ ಹೆಚ್ಚು ಎಂಎಸ್‍ಎಂಇ ಗಳಿವೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ದೇಶದಲ್ಲೇ ಮೊದಲು ಏರೋಸ್ಪೇಸ್ ಹಾಗೂ ಡಿಫೆನ್ಸ್ ಪಾಲಿಸಿಯನ್ನು ಜಾರಿಗೊಳಿಸಿದ ರಾಜ್ಯ ನಮ್ಮದಾಗಿದೆ ಎಂದರು. ಬೆಂಗಳೂರು, ಮೈಸೂರು, ತುಮಕೂರು ಮತ್ತು ಚಾಮರಾಜನಗರ ಈ ನಾಲ್ಕೂ ನೋಡ್/ಹಬ್ ಗಳು ಏರೋಸ್ಪೇಸ್ ಮತ್ತು ಡಿಫೆನ್ಸ್ ಎಕೋಸಿಸ್ಟಮ್ ಗೆ ಈಗಾಗಲೇ ಸಿದ್ಧವಿರುವ ಮೂಲಭೂತ ಸೌಕರ್ಯಗಳನ್ನು ಹೊಂದಿವೆ. ಮುಂದಿನ ದಿನಗಳಲ್ಲೂ ಕರ್ನಾಟಕ ರಾಜ್ಯ ದೇಶದ ಏರೋಸ್ಪೇಸ್ ಮತ್ತು ಡೀಫೆನ್ಸ್ ಉತ್ಪಾದನಾ ಕ್ಷೇತ್ರದಲ್ಲಿ ಸ್ಥಳೀಯವಾಗಿ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಲಿದೆ ಎಂದರು.

    ರಾಜ್ಯದಲ್ಲಿ ಘೋಷಣೆ ಆಗುವ ರಕ್ಷಣಾ ತಂತ್ರಜ್ಞಾನ ಹಬ್, ದೇಶದ ಡಿಫೆನ್ಸ್ ಆಫ್‍ಸೆಟ್ ಪಾಲಿಸಿ ಅಡಿಯಲ್ಲಿ ಡಿಫೆನ್ಸ್ ಕಾರಿಡಾರ್ ನ ವರ್ಧಿತ ಗುಣಕಗಳು (enhanced multipliers) ಹಾಗೂ ರಕ್ಷಣಾ ವೇದಿಕೆ ಮತ್ತು ಉತ್ಪನ್ನಗಳ ಪರೀಕ್ಷೆ ಮತ್ತು ಪ್ರಮಾಣ ಪತ್ರ ಮತ್ತಿತರ ವಿಶೇಷ ಸೌಲಭ್ಯಗಳಿಂದ ರಾಜ್ಯದಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದ ಬೆಳವಣಿಗೆಗೆ ಮತ್ತಷ್ಟು ಪುಷ್ಟಿ ನೀಡುತ್ತದೆ. ಅಲ್ಲದೆ, ಆತ್ಮನಿರ್ಭರ ಭಾರತ ಗುರಿಗೆ ಮತ್ತಷ್ಟು ಬಲ ತುಂಬಲಿದೆ. ಈ ಹೊಸ ಉಪಕ್ರಮಗಳಿಂದ ನಮ್ಮ ರಾಜ್ಯದ ವೈಜ್ಞಾನಿಕ ನಾಯಕತ್ವ ಹಾಗೂ ಈ ಕ್ಷೇತ್ರಕ್ಕೆ ನಮ್ಮ ರಾಜ್ಯದಿಂದ ನೀಡಿರುವ ಸಂಶೋಧನೆ ಮತ್ತು ಅಭಿವೃದ್ದಿಯ ಕೊಡುಗೆಗೆ ಸ್ವೀಕೃತಿ ನೀಡಿದಂತಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದೇವೆ ಎಂದು ಹೇಳಿದರು.

    ಕೈಗಾರಿಕಾ ಅಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ ಮಾತನಾಡಿ, ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2021-2026 ರ ಕರಡು ಅಂಶಗಳನ್ನು ವಿವರಿಸಿದರು. ರಾಜ್ಯವನ್ನು ಏರೋಸ್ಪೇಸ್ ಮತ್ತು ಡಿಫೆನ್ಸ್ ಕೈಗಾರಿಕಾ ಕ್ಷೇತ್ರದ ಪ್ರಮುಖ ಬಂಡವಾಳ ಹೂಡಿಕೆಯ ರಾಜ್ಯವನ್ನಾಗಿಸುವುದು ಪ್ರಮುಖ ಗುರಿಯಾಗಿದೆ. ರಾಜ್ಯದಲ್ಲಿ ರಕ್ಷಣಾ ಹಬ್ ಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಲ್ಲದೆ, ಬಂಡವಾಳ ಹೂಡಿಕೆಗೆ ಆಕರ್ಷಕವಾದ ಸೌಲಭ್ಯಗಳನ್ನು ಈ ನೀತಿ ಒಳಗೊಂಡಿರಲಿದೆ ಎಂದು ಹೇಳಿದರು. ಇದನ್ನೂ ಓದಿ: ತುರ್ತು ಅಂಬುಲೆನ್ಸ್ ಸೇವೆಗೆ ಸಚಿವ ಜಗದೀಶ್ ಶೆಟ್ಟರ್ ಚಾಲನೆ

    ವೆಬಿನಾರ್ ನಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜಕುಮಾರ್ ಖತ್ರಿ, ಕೈಗಾರಿಕಾ ಇಲಾಖೆಯ ತಾಂತ್ರಿಕ ನಿರ್ದೇಶಕರಾದ ರಮೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕರಾದ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಕೈಗಾರಿಕೋದ್ಯಮಿಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ರಾಯಚೂರಿನಲ್ಲಿ ಬೃಹತ್ ಔಷಧ ಉತ್ಪಾದನ ಪಾರ್ಕ್: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್

  • ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ನಾಸಾ ಪ್ರವಾಸಕ್ಕೆ ಆಯ್ಕೆ- ಕಷ್ಟದ ಕಥೆ ಓದಿ

    ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ನಾಸಾ ಪ್ರವಾಸಕ್ಕೆ ಆಯ್ಕೆ- ಕಷ್ಟದ ಕಥೆ ಓದಿ

    – ಒಂದೇ ತಿಂಗ್ಳಲ್ಲಿ ಇಂಗ್ಲಿಷ್ ಕಲಿತು ಯುಎಸ್‍ಗೆ ಹಾರುತ್ತಿರೋ ಸಾಧಕಿ
    – ಟ್ಯೂಶನ್ ನಡೆಸಿ, ಗೋಡಂಬಿ ಮಾರಿ ತಾಯಿ-ತಮ್ಮನ ಸಾಕ್ತಿದ್ದಾಳೆ

    ಚೆನ್ನೈ: ಇಂಗ್ಲಿಷ್ ಬಾರದಿದ್ದರೂ ಒಂದೇ ತಿಂಗಳಲ್ಲಿ ಕಲಿತು ಸರ್ಕಾರಿ ಶಾಲೆಯ 11ನೇ ತರಗತಿ ವಿದ್ಯಾರ್ಥಿನಿ ನಾಸಾಗೆ ತೆರಳಲು ಸಿದ್ಧತೆ ನಡೆಸಿದ್ದು, ಈಕೆಯ ಕಥೆಯನ್ನು ಓದಿದರೆ ಕಣ್ಣಂಚಲ್ಲಿ ನೀರು ಬರುವುದು ಖಚಿತ.

    ತಮಿಳುನಾಡಿನ ತಂಜಾವೂರು ಜಿಲ್ಲೆಯ ಅದನಕೊಟ್ಟೈನ 11ನೇ ತರಗತಿ ವಿದ್ಯಾರ್ಥಿನಿ ಕೆ.ವಿಜಯಲಕ್ಷ್ಮಿ ಆನ್‍ಲೈನಲ್ಲಿ ನಡೆದ ಸ್ಪರ್ಧೆಯಲ್ಲಿ ವಿಜೇತಳಾಗುವ ಮೂಲಕ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾಗೆ ತೆರಳುವ ಅವಕಾಶ ಪಡೆದಿದ್ದಾಳೆ. ವಿದ್ಯಾರ್ಥಿನಿ ತಮಿಳು ಮಾಧ್ಯಮದಲ್ಲಿ ಓದಿದರೂ, ಸ್ಪರ್ಧೆಯಲ್ಲಿ ವಿಜೇತಳಾಗಲು ಕೇವಲ ಒಂದು ತಿಂಗಳಲ್ಲಿ ಇಂಗ್ಲಿಷ್ ಕೋಚಿಂಗ್ ಪಡೆದುಕೊಂಡು ಆನ್‍ಲೈನ್ ಪರೀಕ್ಷೆಯಲ್ಲಿ 2ನೇ ರ‌್ಯಾಂಕ್ ಪಡೆದಿದ್ದಾಳೆ. ಈ ಮೂಲಕ ಯುಎಸ್‍ಗೆ ತೆರಳಲು ಸಜ್ಜಾಗುತ್ತಿದ್ದಾಳೆ.

    ಬಡತನವಿರುವುದರಿಂದ ತನ್ನ ಪ್ರಯಾಣದ ವೆಚ್ಚವನ್ನು ಭರಿಸುವಂತೆ ಜಯಲಕ್ಷ್ಮಿ ಜಿಲ್ಲಾಧಿಕಾರಿ ಮೊರೆ ಹೋಗಿದ್ದಾಳೆ. ಇವಳ ಕುಟುಂಬದಲ್ಲಿ ಜಯಲಕ್ಷ್ಮಿಯೊಬ್ಬಳೇ ಕೆಲಸ ಮಾಡಿ, ಮಾನಸಿಕ ಅಸ್ವಸ್ಥ ತಾಯಿ ಹಾಗೂ ತಮ್ಮನನ್ನು ಸಾಕುತ್ತಿದ್ದಾಳೆ. ವಿದ್ಯಾರ್ಥಿನಿಯು 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಟ್ಯೂಶನ್ ತೆಗೆದುಕೊಳ್ಳುತ್ತಾಳೆ. ಇದರ ಜೊತೆಗೆ ಗೋಡಂಬಿಗಳನ್ನೂ ಮಾರಿ ಮನೆ ನಡೆಸುತ್ತಿದ್ದಾಳೆ. ನಾಸಾದ ಬಾಹ್ಯಾಕಾಶ ವಿಜ್ಞಾನಿಗಳನ್ನು ಸಂದರ್ಶಿಸುವ ಅದ್ಭುತ ಪ್ರವಾಸಕ್ಕೆ ಆಯ್ಕೆಯಾಗಿರುವ ಕೆಲವೇ ವಿದ್ಯಾರ್ಥಿಗಳಲ್ಲಿ ಜಯಲಕ್ಷ್ಮಿ ಸಹ ಒಬ್ಬಳು.

    ಐದು ದಿನಗಳ ಪ್ರವಾಸದಲ್ಲಿ ಕಾರ್ಯಾಗಾರ ಮಾತ್ರವಲ್ಲದೆ ಡಿಸ್ನಿಯಂತಹ ಹತ್ತಿರದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ. ಜಯಲಕ್ಷ್ಮಿ ಅದನಕೊಟ್ಟೈ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಜ್ಞಾನ ವಿದ್ಯಾರ್ಥಿನಿಯಾಗಿದ್ದು, ಗೋ ಫೋರ್ ಗುರು ಎಂಬ ಸಂಸ್ಥೆ ಆನ್‍ಲೈನ್ ಪರೀಕ್ಷೆ ನಡೆಸುತ್ತಿದೆ ಎಂದು ಅಚಾನಕ್ಕಾಗಿ ತಿಳಿದು ಬಂದಿದೆ. ಈ ಕುರಿತು ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಾಳೆ.

    ಎಪಿಜೆ ಅಬ್ದುಲ್ ಕಲಾಂ ಅವರೇ ನನಗೆ ಪ್ರೇರಣೆ ನಾನು ಬಾಹ್ಯಾಕಾಶದ ಬಗ್ಗೆ ಓದಿಕೊಂಡಿದ್ದೇನೆ. ಹೀಗಾಗಿ ನನ್ನ ಆಸಕ್ತಿ ಹೆಚ್ಚಿದೆ ಎಂದು ಜಯಲಕ್ಷ್ಮಿ ಸಂತಸ ವ್ಯಕ್ತಪಡಿಸಿದ್ದಾಳೆ.

    ನಾನು ಕ್ಯಾರಮ್ ಆಡುತ್ತಿದ್ದಾಗ, ಬೋರ್ಡ್ ಕೆಳಗಡೆ ನ್ಯೂಸ್ ಪೇಪರ್ ಇತ್ತು. ಅದರಲ್ಲಿ ಕಳೆದ ವರ್ಷ ನಾಸಾಗೆ ತೆರಳಲು ಚಾನ್ಸ್ ಗಿಟ್ಟಿಸಿಕೊಂಡಿದ್ದ ಧನ್ಯಾ ಥಸ್ನೆಮ್ ಬಗ್ಗೆ ವರದಿ ಬಂದಿತ್ತು. ನಂತರ ನಾನು ತಕ್ಷಣವೇ ಅಲ್ಲಿಂದ ಹೊರಟು ಮನೆಗೆ ತೆರಳಿ, ಪರೀಕ್ಷೆಗೆ ಹೆಸರು ನೋಂದಾಯಿಸಿದೆ ಎಂದು ತಿಳಿಸಿದ್ದಾಳೆ.

    ಜಯಲಕ್ಷ್ಮಿ ಈಗಾಗಲೇ ಹಲವು ಸ್ಕಾಲರ್‍ಶಿಪ್‍ಗಳನ್ನು ಪಡೆಯುತ್ತಿದ್ದಾಳೆ. ಆದರೆ ಇದೀಗ ನಾಸಾ ಪ್ರವಾಸಕ್ಕೆ ತೆರಳುವುದೇ ಸವಾಲಾಗಿ ಪರಿಣಮಿಸಿದೆ. ಇವಳ ಪ್ರಯಾಣದ ವೆಚ್ಚ ಸುಮಾರು 1.69 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ.

    ನಮ್ಮ ತಂದೆ ಬೇರೆಡೆ ವಾಸಿಸುತ್ತಿದ್ದು, ಒಂದು ಬಾರಿ ಮಾತ್ರ ಹಣ ಕಳುಹಿಸುತ್ತಾರೆ. ಗುರುಗಳು ಹಾಗೂ ಸ್ನೇಹಿತರ ಸಹಾಯದಿಂದ ಪಾಸ್‍ಪೋರ್ಟ್ ಪಡೆಯಲು ಸಾಧ್ಯವಾಯಿತು. ಪಾಸ್‍ಪೋರ್ಟ್ ಅಧಿಕಾರಿಗಳು ಸಹ ನನ್ನಿಂದ 500 ರೂ. ಪಡೆದರು. ಹೀಗಾಗಿ ನನ್ನ ಪ್ರಯಾಣದ ವೆಚ್ಚವನ್ನು ಭರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ನನ್ನ ಗೆಲವು ಸರ್ಕಾರಿ ಶಾಲೆಯ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದು ಜಯಲಕ್ಷ್ಮಿ ತಿಳಿಸಿದ್ದಾಳೆ.

    ಎಪಿಜೆ ಅಬ್ದುಲ್ ಕಲಾಂ ಅವರ ರೀತಿ ನಾನೂ ಸಹ ರಾಕೆಟ್ ತಯಾರಿಸಬೇಕು. ಈ ಪ್ರವಾಸಕ್ಕೆ ತೆರಳಲು ಯಾವುದೇ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿಲ್ಲ. ನಾನು ಸರ್ಕಾರಿ ಶಾಲೆಯ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು. ಈ ಪ್ರವಾಸಕ್ಕೆ ತೆರಳುವ ಮೂಲಕ ನನ್ನ ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕರಿಗೆ ಹೆಮ್ಮೆಯನ್ನುಂಟು ಮಾಡಬೇಕು ಎಂದು ತನ್ನ ಮನದಾಳವನ್ನು ಹಂಚಿಕೊಂಡಿದ್ದಾಳೆ.

    ಈ ಕುರಿತು ಶಾಲೆಯ ಪ್ರಾಂಶುಪಾಲರು ಪ್ರತಿಕ್ರಿಯಿಸಿ, ಇವಳು ತುಂಬಾ ಪ್ರತಿಭಾವಂತ ಹುಡುಗಿ. ಅಲ್ಲದೆ ಈ ವರೆಗೆ ಹಲವು ಸ್ಪರ್ಧೆಗಳಲ್ಲಿ ಜಯಗಳಿಸಿದ್ದಾಳೆ. ಆಕಾಶವೇ ಅವಳಿಗೆ ಚಿಕ್ಕದೆನಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಏರ್ ಶೋ ವೇಳೆ ಸಾವಿರಾರು ಜನರ ಮುಂದೆಯೇ ಸಮುದ್ರಕ್ಕೆ ಬಿತ್ತು ಮಿಲಿಟರಿ ವಿಮಾನ

    ಏರ್ ಶೋ ವೇಳೆ ಸಾವಿರಾರು ಜನರ ಮುಂದೆಯೇ ಸಮುದ್ರಕ್ಕೆ ಬಿತ್ತು ಮಿಲಿಟರಿ ವಿಮಾನ

    ರೋಮ್: ಇಟಲಿಯಲ್ಲಿ ಭಾನುವಾರ ಏರ್ಪಡಿಸಿದ್ದ ಏರ್ ಶೋನಲ್ಲಿ ಮಿಲಿಟರಿ ವಿಮಾನವೊಂದು ಜನರ ಕಣ್ಣ ಮುಂದೆಯೇ ಸಮುದ್ರಕ್ಕೆ ಉರುಳಿ ಬಿದ್ದಿದೆ.

    ಇಟಲಿಯಿಂದ ಸುಮಾರು 110 ಕಿ.ಮೀ ದೂರದಲ್ಲಿರುವ ಟೆರಿಸಿನಾ ನಗರದಲ್ಲಿ ಯುರೋಫೈಟರ್ ಜೆಟ್ ಹೆಸರಿನ ವಿಮಾನ ತನ್ನ ಪ್ರದರ್ಶನವನ್ನು ತೋರಿಸಲು ಭಾಗವಹಿಸಿತ್ತು. ಆಕಾಶದಲ್ಲಿ ಪ್ರದರ್ಶನ ನೀಡುತ್ತಿದ್ದ ವಿಮಾನ ಒಮ್ಮೆಗೆ ನಿಯಂತ್ರಣ ಕಳೆದುಕೊಂಡು ಸಮುದ್ರಕ್ಕೆ ಬಿದ್ದಿದೆ. ಈ ದುರಂತದಲ್ಲಿ ಪೈಲೆಟ್ ಮೃತಪಟ್ಟಿದ್ದಾರೆ.

    ವಿಮಾನ ಪತನಗೊಳ್ಳಲು ನಿಖರ ಕಾರಣಗಳು ಏನು ಎನ್ನುವುದು ತಿಳಿದು ಬಂದಿಲ್ಲ. ಘಟನೆಯ ಕುರಿತು ತನಿಖೆಯನ್ನು ಮುಂದುವರೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಶೋಗೆ ಸಾವಿರಾರು ಜನ ಭಾಗವಹಿಸಿದ್ದು, ಪತನ ಗೊಳ್ಳುತ್ತಿರುವ ದೃಶ್ಯವನ್ನು ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.