Tag: Aerospace Engineer

  • ಪಂಜಾಬ್‌ನಲ್ಲಿ ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್ – ಪ್ರೊಫೆಸರ್ ಅರೆಸ್ಟ್

    ಪಂಜಾಬ್‌ನಲ್ಲಿ ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್ – ಪ್ರೊಫೆಸರ್ ಅರೆಸ್ಟ್

    ಮಂಗಳೂರು: ಪಂಜಾಬ್‌ನಲ್ಲಿ ಧರ್ಮಸ್ಥಳ(Dharmasthala) ಮೂಲದ ಏರೋಸ್ಪೇಸ್ ಎಂಜಿನಿಯರ್(Aerospace Engineer) ಆಕಾಂಕ್ಷ ಸಾವು ಪ್ರಕರಣದಲ್ಲಿ ಪ್ರೊಫೆಸರ್(Professor) ಒಬ್ಬನನ್ನು ಜಲಂಧರ್ ಪೊಲೀಸರು ಬಂಧಿಸಿದ್ದಾರೆ.

    ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಪ್ರೊಫೆಸರ್ ಬಿಜಿಲ್ ಮ್ಯಾಥ್ಯೂ(45) ಬಂಧಿತ ಆರೋಪಿ. ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಉದ್ಧಟತನ – ಒಂದು ಪಂದ್ಯಕ್ಕೆ ದಿಗ್ವೇಶ್ ಅಮಾನತು, ಭಾರೀ ದಂಡ

    ಆಕಾಂಕ್ಷ ಸಾವಿಗೆ ಯೂನಿವರ್ಸಿಟಿಯ ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ(Bijil Mathew) ಕಾರಣ ಎಂದು ಜಲಂಧರ್ ಪೊಲೀಸ್ ಠಾಣೆಗೆ ಆಕಾಂಕ್ಷ ಹೆತ್ತವರು ದೂರು ನೀಡಿದ್ದರು. ಆಕಾಂಕ್ಷ ಮೊಬೈಲ್ ಪಡೆದು ತನಿಖೆ ನಡೆಸಿರುವ ಪೊಲೀಸರಿಗೆ ಸಾವಿಗೂ ಮುನ್ನ ಆಕಾಂಕ್ಷ, ಬಿಜಿಲ್ ಮಾಥ್ಯೂಗೆ ತಾನು ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಮೆಸೇಜ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ; ಕುಮಟಾ-ಸಿದ್ದಾಪುರ ರಸ್ತೆ ಜಲಾವೃತ

    ಅಲ್ಲದೇ ಆಕಾಂಕ್ಷ ಆತ್ಮಹತ್ಯೆಯ ಬಳಿಕ ಬಿಜಿಲ್ ಮಾಥ್ಯೂ ತಲೆಮರಿಸಿಕೊಂಡಿದ್ದ. ಇದೀಗ ಜಲಂಧರ್ ಪೊಲೀಸರು ಬಿಜಲ್ ಮ್ಯಾಥ್ಯೂನನ್ನು ಬಂಧಿಸಿದ್ದಾರೆ. ಕಾಲೇಜಿನಿಂದ ಕೂಡ ಮ್ಯಾಥ್ಯೂನನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ

    ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್‌ ಜೆಟ್ ಏರೋಸ್ಪೇಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಹೆಚ್ಚಿನ ತರಬೇತಿಗೆ ಜರ್ಮನಿಗೆ ತೆರಳಲು ತಯಾರಿ ನಡೆಡಸಿದ್ದ ಆಕಾಂಕ್ಷ ಕೆಲವು ಶೈಕ್ಷಣಿಕ ದಾಖಲೆಗಳನ್ನು ಶುಕ್ರವಾರ ಪಂಜಾಬ್‌ನ(Panjab) ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದಳು. ಬಳಿಕ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಇದನ್ನೂ ಓದಿ: 1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್

    ಆಕಾಂಕ್ಷಗೆ ತಾನು ಓದುತ್ತಿದ್ದ ಯೂನಿವರ್ಸಿಟಿಯ ಪ್ರೊಫೆಸರ್ ಕೇರಳದ ಕೊಟ್ಟಾಯಂ ನಿವಾಸಿ ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂ ಜೊತೆ ಪ್ರೇಮಾಂಕುರವಾಗಿತ್ತು. ಅಲ್ಲದೇ ಮ್ಯಾಥ್ಯೂ ಜೊತೆ ಆತನ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಆಕಾಂಕ್ಷ ಜಗಳ ಮಾಡಿದ್ದಳು. ಬಳಿಕ ಕಾಲೇಜಿನಲ್ಲೂ ಜಗಳ ಮಾಡಿ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.

  • ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್‌ಗೆ ಟ್ವಿಸ್ಟ್ – 2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ

    ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್‌ಗೆ ಟ್ವಿಸ್ಟ್ – 2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ

    ಚಂಡೀಗಢ/ಮಂಗಳೂರು: ಧರ್ಮಸ್ಥಳ (Dharmasthala) ಮೂಲದ ಏರೋಸ್ಪೆಸ್ ಎಂಜಿನಿಯರ್ (Aerospace Engineer) ಪಂಜಾಬ್ ಕಾಲೇಜಿನಲ್ಲಿ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೇಮ ವೈಫಲ್ಯದಿಂದ (Love Failure) ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ.

    ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಹೆಚ್ಚಿನ ತರಬೇತಿಗೆ ಜರ್ಮನಿಗೆ ತೆರಳಲು ತಯಾರಿ ನಡೆಡಸಿದ್ದ ಆಕಾಂಕ್ಷ ಕೆಲವು ಶೈಕ್ಷಣಿಕ ದಾಖಲೆಗಳನ್ನು ಶುಕ್ರವಾರ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದಳು. ಬಳಿಕ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಆಕಾಂಕ್ಷ ಪೋಷಕರು ಕಾಲೇಜಿನವರೇ ನನ್ನ ಮಗಳಿಗೆ ಏನೋ ಮಾಡಿದ್ದಾರೆ, ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಹುಡುಗಿಯಲ್ಲ ಎಂದು ಆರೋಪಿಸಿದ್ದರು. ಆದರೆ ಅಸಲಿ ವಿಚಾರ ಈಗ ಹೊರಬಿದ್ದಿದೆ. ಇದನ್ನೂ ಓದಿ: ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ಪಂಜಾಬ್‌ನಲ್ಲಿ ನಿಗೂಢ ಸಾವು

    ಆಕಾಂಕ್ಷಗೆ ತಾನು ಓದುತ್ತಿದ್ದ ಯೂನಿವರ್ಸಿಟಿಯ ಪ್ರೊಫೆಸರ್ ಜೊತೆ ಪ್ರೇಮವಾಗಿತ್ತು. ಕೇರಳದ ಕೊಟ್ಟಾಯಂ ನಿವಾಸಿ ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂ ಜೊತೆ ಆಕಾಂಕ್ಷಗೆ ಪ್ರೇಮಾಂಕುರವಾಗಿತ್ತು. ಅಲ್ಲದೇ ಮ್ಯಾಥ್ಯೂ ಜೊತೆ ಆತನ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಆಕಾಂಕ್ಷ ಜಗಳ ಮಾಡಿದ್ದಳು. ಬಳಿಕ ಕಾಲೇಜಿನಲ್ಲೂ ಜಗಳ ಮಾಡಿ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಏರೋಸ್ಪೇಸ್ ಎಂಜಿನಿಯರ್ ಸಾವು

    ಆತ್ಮಹತ್ಯೆಗೆ ಪ್ರೇರಣೆ ಹಿನ್ನೆಲೆ ಮ್ಯಾಥ್ಯೂ ವಿರುದ್ದ ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಂದು ಶವಪರೀಕ್ಷೆ ಬಳಿಕ ಹೆತ್ತವರಿಗೆ ಆಕಾಂಕ್ಷಳ ಮೃತದೇಹ ಹಸ್ತಾಂತರಿಸಲಾಗುತ್ತದೆ. ಇಂದು ಸಂಜೆ ವೇಳೆಗೆ ಧರ್ಮಸ್ಥಳ ಬೊಳಿಯೂರು ಮನೆಯಲ್ಲಿ ಆಕಾಂಕ್ಷ ಅಂತ್ಯಸಂಸ್ಕಾರ ನಡೆಯಲಿದೆ.‌ ಇದನ್ನೂ ಓದಿ: ಬೆಂಗಳೂರಿನ ಸಿಸಿಬಿ ಕಚೇರಿ ಜಲಾವೃತ | ಬೊಮ್ಮನಹಳ್ಳಿ -ಸಿಲ್ಕ್ ಬೋರ್ಡ್ ರಸ್ತೆಯಲ್ಲಿ 3 ಅಡಿ ನೀರು

  • ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಏರೋಸ್ಪೇಸ್ ಎಂಜಿನಿಯರ್ ಸಾವು

    ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಏರೋಸ್ಪೇಸ್ ಎಂಜಿನಿಯರ್ ಸಾವು

    ಚಂಡೀಗಢ/ಮಂಗಳೂರು: ಪಂಜಾಬ್‌ನಲ್ಲಿ (Punjab) ಏರೋಸ್ಪೇಸ್ ಎಂಜಿನಿಯರ್ (Aerospace Engineer) ನಿಗೂಢ ಸಾವಿಗೆ ಟ್ವಿಸ್ಟ್ ಸಿಕ್ಕಿದ್ದು, ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಆಕಾಂಕ್ಷ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಆಕಾಂಕ್ಷ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಬೊಳಿಯೂರು ನಿವಾಸಿ. ಬೊಳಿಯೂರು ನಿವಾಸಿ ಸುರೇಂದ್ರ ಹಾಗೂ ಸಿಂಧೂದೇವಿ ದಂಪತಿಗಳ ಪುತ್ರಿ 22 ವರ್ಷದ ಆಕಾಂಕ್ಷ ಎಸ್ ನಾಯರ್ ಪಂಜಾಬ್‌ನ ಎಲ್‌ಸಿಯು ಪಾಗ್ವಾಡ ಕಾಲೇಜಿನಲ್ಲಿ ಏರೋನಾಟಿಕ್ಸ್ ಎಂಜಿನಿಯರಿಂಗ್ ಮುಗಿಸಿ ಕಳೆದ ಆರು ತಿಂಗಳಿನಿಂದ ದೆಹಲಿಯಲ್ಲಿ ಸ್ಪೈಸ್ ಜೆಟ್ ಏರೋಸ್ಪೇಸ್‌ನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು. ಹೆಚ್ಚಿನ ತರಬೇತಿಗಾಗಿ ಜರ್ಮನಿಗೆ ತೆರಳಲು ತಯಾರಿ ನಡೆಸಿದ್ದ ಆಕಾಂಕ್ಷ ಕೆಲ ಶೈಕ್ಷಣಿಕ ದಾಖಲೆಗಳನ್ನು ಪಡೆಯಲು ಕಳೆದ ಶುಕ್ರವಾರ ಸಂಜೆ ದೆಹಲಿಯಿಂದ ಅಮೃತಸರಕ್ಕೆ ತೆರಳಿ ಅಲ್ಲಿ ಸ್ನೇಹಿತೆಯ ರೂಂನಲ್ಲಿದ್ದಳು. ಇದನ್ನೂ ಓದಿ: ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ಪಂಜಾಬ್‌ನಲ್ಲಿ ನಿಗೂಢ ಸಾವು

    ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಸ್ನೇಹಿತ ಕೇರಳ ಮೂಲದ ಯುವಕನೊಂದಿಗೆ ಬೈಕ್‌ನಲ್ಲಿ ಪಾಗ್ವಾಡ್ ಕಾಲೇಜಿಗೆ ತೆರಳಿದ್ದಳು. ಸುಮಾರು 11 ಗಂಟೆಗೆ ಹೆತ್ತವರು ಆಕೆಗೆ ಕರೆ ಮಾಡಿದ್ದು, ಈ ವೇಳೆ ಕರೆ ಕಟ್ ಮಾಡಿದ್ದ ಆಕಾಂಕ್ಷ ತಾನು ಕಾಲೇಜಿನಲ್ಲಿರುವುದಾಗಿ ಮೆಸೇಜ್ ಮಾಡಿದ್ದಾಳೆ. ಆ ಬಳಿಕ ಎರಡು ಗಂಟೆ ಸುಮಾರಿಗೆ ಕರೆ ಮಾಡಿದಾಗ ಆಕೆ ಕರೆ ಸ್ವೀಕರಿಸಿಲ್ಲ, ಮೆಸೇಜ್ ಕೂಡಾ ಮಾಡಿಲ್ಲ. ಬಳಿಕ ಸಂಜೆ ನಾಲ್ಕು ಗಂಟೆ ಸುಮಾರಿಗೆ ಪಂಜಾಬ್‌ನ ಜಲಂಧರ್ ಠಾಣಾ ಪೊಲೀಸರು ಆಕಾಂಕ್ಷಳ ತಂದೆಗೆ ಕರೆ ಮಾಡಿ ನಿಮ್ಮ ಮಗಳು ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ. ತಕ್ಷಣ ಹೊರಟು ಬನ್ನಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪರಿಸರದ ಚಿತ್ರ ಕಳಿಸಿದ್ದ ದಾವಣಗೆರೆಯ ಬಾಲಕನಿಗೆ ಪ್ರಧಾನಿ ಮೋದಿ ಮೆಚ್ಚುಗೆ

    ಜರ್ಮನಿಗೆ ಹೆಚ್ಚಿನ ಶಿಕ್ಷಣಕ್ಕಾಗಿ ತೆರಳಲು ಟ್ರೈ ಮಾಡುತ್ತಿದ್ದ ಆಕಾಂಕ್ಷಳಿಗೆ ಅಲ್ಲಿ ತರಬೇತಿಗೆ ಸೀಟ್ ಸಿಕ್ಕಿತ್ತು .ಹೀಗಾಗಿ ಎಲ್ಲಾ ದಾಖಲೆಗಳು ಬೇಕಿದ್ದ ಕಾರಣ ತಾನು ಕಲಿತ ಪಂಜಾಬ್ ನ ಪಾಗ್ವಾಡ್ ಎಲ್‌ಸಿಯು ಕಾಲೇಜಿಗೆ ಕರೆ ಮಾಡಿ ಸರ್ಟಿಫಿಕೇಟ್ ಕೇಳಿದ್ದಳು. ಆದರೆ ಸರ್ಟಿಫಿಕೇಟ್ ಕಳಿಸಿಕೊಡಲು ಆಗೋದಿಲ್ಲ, ನೀನೇ ಬಂದು ತೆಗೆದುಕೊಂಡು ಹೋಗು ಎಂದು ಕಾಲೇಜಿನವರು ಹೇಳಿದ್ದರು. ಹೀಗಾಗಿ ದೆಹಲಿಯಿಂದ ಪಂಜಾಬ್‌ನ ಕಾಲೇಜಿಗೆ ಆಕೆ ತೆರಳಿದ್ದಳು. ಕಾಲೇಜಿಗೆ ಹೋಗುವವರೆಗೂ ಸಂಪರ್ಕದಲ್ಲಿದ್ದ ಆಕೆಗೆ ಬಳಿಕ ಏನಾಗಿದೆ ಎಂಬುದು ಕುಟುಂಬಸ್ಥರ ಅನುಮಾನ. ಕಾಲೇಜಿನವರೇ ಏನಾದರೂ ಮಾಡಿರುವ ಸಾಧ್ಯತೆ ಇದೆ ಎಂದು ಹೆತ್ತವರು ಆರೋಪಿಸಿದ್ದಾರೆ. ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳುವ ಹುಡುಗಿ ಅಲ್ಲ. ಕಾಲೇಜಿನ ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾಳೆ ಎಂದು ಹೇಳಿರುವುದರಿಂದ ಕಾಲೇಜಿನವರೇ ಏನೋ ಮಾಡಿದ್ದಾರೆ ಎಂದು ಹೆತ್ತವರು ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಗ್ರೇಟರ್‌ ಬೆಂಗಳೂರು? ಹೆಚ್ಚು ಮಳೆಯಾದ್ರೆ ಮುಳುಗುತ್ತದೆ, ಕಡಿಮೆ ಸುರಿದರೆ ತೇಲುತ್ತದೆ: ಹೆಚ್‌ಡಿಕೆ ಕಿಡಿ

    ಮಗಳ ಸಾವಿನ ಸುದ್ದಿ ತಿಳಿದ ಹೆತ್ತವರು ಧರ್ಮಸ್ಥಳದಿಂದ ತೆರಳಿದ್ದಾರೆ. ದೆಹಲಿ ಮೂಲಕ ಪಂಜಾಬ್‌ಗೆ ತೆರಳಿದ್ದು, ಅಲ್ಲಿ ತಮ್ಮ ಮಗಳ ಸಾವಿನ ಬಗ್ಗೆ ಅನುಮಾನ ಇರುವ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಅಲ್ಲದೇ ತಮ್ಮ ಮಗಳ ಸಾವಿನ ಸತ್ಯಾಸತ್ಯತೆ ತಿಳಿಯಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: Hyderabad Fire | ಕಾಪಾಡಲು ಹೋಗಿದ್ದ ತಾಯಿ ಮಕ್ಕಳನ್ನು ಅಪ್ಪಿಕೊಂಡೇ ಸುಟ್ಟು ಕರಕಲು!

  • ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ಪಂಜಾಬ್‌ನಲ್ಲಿ ನಿಗೂಢ ಸಾವು

    ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ಪಂಜಾಬ್‌ನಲ್ಲಿ ನಿಗೂಢ ಸಾವು

    ಚಂಡೀಗಢ/ಮಂಗಳೂರು: ಧರ್ಮಸ್ಥಳ (Dharmasthala) ಮೂಲದ ಏರೋಸ್ಪೇಸ್ ಎಂಜಿನಿಯರ್ (Aerospace Engineer) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಪಂಜಾಬ್‌ನಲ್ಲಿ (Punjab) ನಡೆದಿದೆ.

    ಆಕಾಂಕ್ಷ ಮೃತ ಏರೋಸ್ಪೇಸ್ ಎಂಜಿನಿಯರ್. ಮೇ 17ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಆಕಾಂಕ್ಷ ಮನೆಯವರು ಪಂಜಾಬ್‌ಗೆ ತೆರಳಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಅಪಮಾನ – ಜಿಎಸ್‌ ಸೂಟ್ಸ್‌ ಹೋಟೆಲ್‌ ಸೀಜ್‌, ಮ್ಯಾನೇಜರ್‌ ಬಂಧನ

    ಧರ್ಮಸ್ಥಳದ ಬೋಳಿಯಾರ್ ನಿವಾಸಿಗಳಾದ ಸುರೇಂದ್ರ ಹಾಗೂ ಸಿಂದೂದೇವಿ ದಂಪತಿ ಮಗಳಾದ ಆಕಾಂಕ್ಷ ಪಂಜಾಬಿನ ಫಗ್ವಾಡಾ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪೂರೈಸಿ ಆರು ಹಿಂಗಳ ಹಿಂದೆ ದೆಹಲಿಯಲ್ಲಿ ಏರೋಸ್ಪೇಸ್ ಎಂಜಿನಿಯರ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಇದನ್ನೂ ಓದಿ: ಪೂರ್ವ ಮುಂಗಾರು ಮಳೆಗೆ ಬೆಂಗಳೂರು ತತ್ತರ – ಒಂದೇ ಒಂದು ಮಳೆಗೆ ಕೆರೆಯಂತಾದ ರಸ್ತೆಗಳು

    ಜಪಾನಿನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಆಕಾಂಕ್ಷ ಶೈಕ್ಷಣಿಕ ಪ್ರಮಾಣ ಪತ್ರ ಪಡೆಯಲು ಪಂಜಾಬ್‌ಗೆ ತೆರಳಿದ್ದರು. ಶೈಕ್ಷಣಿಕ ಪ್ರಮಾಣ ಪತ್ರ ಪಡೆದ ನಂತರ ಆಕಾಂಕ್ಷ ಮನೆಯವರಿಗೆ ಕರೆ ಮಾಡಿ ಮಾತನಾಡಿದ್ದರು. ನಂತರ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: EOS-09 ಉಪಗ್ರಹ ಉಡಾವಣೆ ವಿಫಲ – ನಿರ್ದಿಷ್ಟ ಕಕ್ಷೆ ಸೇರುವಲ್ಲಿ ಫೇಲ್