ಇಸ್ಲಾಮಾಬಾದ್: ಅಫ್ಘಾನಿಸ್ತಾನ ಗಡಿಯ ಬಳಿ ನಡೆದ ಘರ್ಷಣೆಯಲ್ಲಿ ಐವರು ಪಾಕಿಸ್ತಾನಿ ಸೈನಿಕರು ಮತ್ತು 25 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಸೇನೆ ಭಾನುವಾರ ತಿಳಿಸಿದೆ.
ಹಿಂದಿನ ಸರಣಿ ಘರ್ಷಣೆಗಳ ನಂತರ ಉದ್ವಿಗ್ನತೆಯನ್ನು ಶಮನಗೊಳಿಸಲು ಎರಡೂ ದೇಶಗಳ ನಿಯೋಗಗಳು ಇಸ್ತಾಂಬುಲ್‌ನಲ್ಲಿ ಭೇಟಿಯಾದಾಗಲೂ ಹಿಂಸಾಚಾರ ಸಂಭವಿಸಿದೆ.
ಶುಕ್ರವಾರ ಮತ್ತು ಶನಿವಾರ ಉಗ್ರಗಾಮಿಗಳು ಅಫ್ಘಾನಿಸ್ತಾನದಿಂದ ಪಾಕಿಸ್ತಾನದ ಕುರ್ರಂ ಮತ್ತು ಉತ್ತರ ವಜೀರಿಸ್ತಾನ್ ಜಿಲ್ಲೆಗಳಿಗೆ, ವಾಯುವ್ಯ ಗಡಿಯುದ್ದಕ್ಕೂ ಇರುವ ಒರಟಾದ ಪ್ರದೇಶಗಳಿಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಪಾಕಿಸ್ತಾನಿ ಸೇನೆ ಹೇಳಿಕೊಂಡಿದೆ.
ಶನಿವಾರ ಮುಂಜಾನೆ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಕದನ ವಿರಾಮ ಮುಂದುವರೆದಿದೆ ಎಂದು ಹೇಳಿದ್ದರು. ಅಫ್ಘಾನಿಸ್ತಾನ ಶಾಂತಿಯನ್ನು ಬಯಸುತ್ತದೆ ಎಂಬ ನಂಬಿಕೆಯನ್ನು ವ್ಯಕ್ತಪಡಿಸಿದರು. ಆದರೆ ಇಸ್ತಾಂಬುಲ್‌ನಲ್ಲಿ ಒಪ್ಪಂದ ಮಾಡಿಕೊಳ್ಳಲು ವಿಫಲವಾದರೆ ಯುದ್ಧವಾಗುತ್ತದೆ ಎಂದು ಸಹ ಅವರು ಎಚ್ಚರಿಸಿದ್ದರು.
ಪಾಕಿಸ್ತಾನದ ಆರೋಪಗಳಿಗೆ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ. ಆದಾಗ್ಯೂ, ಉಗ್ರರಿಗೆ ಆಶ್ರಯ ನೀಡುವುದನ್ನು ಆ ಗುಂಪು ನಿರಾಕರಿಸುತ್ತದೆ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳು ಅಫ್ಘಾನ್ ಸಾರ್ವಭೌಮತ್ವವನ್ನು ಉಲ್ಲಂಘಿಸುತ್ತದೆ ಎಂದು ಹೇಳುತ್ತದೆ.
– ರಕ್ತ, ನದಿ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ – ಅಫ್ಘಾನ್ ಸರ್ಕಾರ ಪ್ರತಿಪಾದನೆ
ಕಾಬೂಲ್: ಭಾರತದ ನಂತರ ತಾಲಿಬಾನ್ (Taliban) ಆಳ್ವಿಕೆಯ ಅಫ್ಘಾನಿಸ್ತಾನವು ತನ್ನ ಭೂಪ್ರದೇಶದಲ್ಲಿ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ಪಾಕಿಸ್ತಾನಕ್ಕೆ (Pakistan) ನೀರಿನ ಹರಿವು ತಡೆಯಲು ಯೋಜಿಸುತ್ತಿದೆ.
ತಾಲಿಬಾನ್ ಸರ್ವೋಚ್ಚ ನಾಯಕ ಹಿಬತುಲ್ಲಾ ಅಖುಂಡ್ಜಾದಾ (Taliban Supreme Hibatullah Akhundzada) ಅವರು, ಕುನಾರ್ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವಂತೆ ಆದೇಶಿಸಿದ್ದಾರೆ. ಕುನಾರ್‌ನಲ್ಲಿ ಅಣೆಕಟ್ಟುಗಳ ನಿರ್ಮಾಣವನ್ನು ಸಾಧ್ಯವಾದಷ್ಟು ಬೇಗ ಪ್ರಾರಂಭಿಸಬೇಕು. ವಿದೇಶಿ ಕಂಪನಿಗಳಿಗೆ ಕಾಯದೇ ಆಂತರಿಕ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ ಎಂದು ತಾಲಿಬಾನ್ ಜಲ ಸಚಿವ ಅಬ್ದುಲ್ ಲತೀಫ್ ಮನ್ಸೂರ್ ತಿಳಿಸಿದ್ದಾರೆ.
ಅಲ್ಲದೇ ಆಫ್ಘನ್ನರು (Afghans) ತಮ್ಮದೇ ಆದ ಜಲ ಸಂಪನ್ಮೂಲಗಳನ್ನ ನಿರ್ವಹಿಸುವ ಹಕ್ಕು ಹೊಂದಿದ್ದಾರೆ. ನೀರು ಮತ್ತು ನದಿ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಅಂತ ಮನ್ಸೂರ್ ಪ್ರತಿಪಾದಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ತಾಲಿಬಾನ್ ಆಡಳಿತದ ಸೇನಾ ಜನರಲ್ ಮುಬಿನ್, ಕುನಾರ್ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದರು. ಬಳಿಕ ಹಣ ಸಂಗ್ರಹಿಸಿ ಅಣೆಕಟ್ಟು ನಿರ್ಮಿಸಲು ತಾಲಿಬಾನ್ ಸರ್ಕಾರಕ್ಕೆ ಒತ್ತಾಯಿಸಿದ್ದರು.
ಕುನಾರ್ ನದಿಯ ಮಹತ್ವ ಏನು?
ಕುನಾರ್ ಪಾಕಿಸ್ತಾನದ ಚಿತ್ರಾಲ್ ಪ್ರದೇಶದಿಂದ (Chitral Area) ಉಗಮವಾಗುವ 480 ಕಿಮೀ ಉದ್ದದ ನದಿಯಾಗಿದೆ. ಇದು ಅಫ್ಘಾನಿಸ್ತಾನದ ನಂಗಹಾರ್ ಮತ್ತು ಕುನಾರ್ ಪ್ರಾಂತ್ಯಗಳ ಮೂಲಕ ಹಾದುಹೋಗಲಿದ್ದು, ಸಿಂಧೂ ನದಿ ಸೇರುತ್ತದೆ. ಅಫ್ಘಾನಿಸ್ತಾನದಿಂದ ಪಾಕಿಸ್ತಾನಕ್ಕೆ ಹರಿಯುವ ಕಾಬೂಲ್ ಮತ್ತು ಕುನಾರ್ ನದಿಗಳು ಪಾಕಿಸ್ತಾನಕ್ಕೆ ಅತಿದೊಡ್ಡ ನೀರಿನ ಮೂಲಗಳಾಗಿವೆ.
ಅಫ್ಘಾನ್ ವಾಟರ್ ಬಾಂಬ್ ಹಾಕ್ತಿರೋದೇಕೆ?
ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಪಾಕ್ – ಅಫ್ಘಾನ್ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾಗಿದೆ. ಆದ್ರೆ ಕದನ ವಿರಾಮ ಉಲ್ಲಂಘಿಸಿ ಪಾಕ್ ದಾಳಿ ನಡೆಸುತ್ತಿದೆ. ತನ್ನ ನಾಗರಿಕರ ಮೇಲಿನ ದಾಳಿಗೆ ಮಿಲಿಟರಿ ಬಲವನ್ನು ಬಳಸುತ್ತಿದೆ. ಹಾಗಾಗಿ ಪಾಕ್ ತನ್ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ತಪ್ಪಿಸಲು ʻನೀರುʼ ತನ್ನ ಏಕೈಕ ಮಿಲಿಟರಿಯೇತರ ಅಸ್ತ್ರವೆಂಬುದು ಅಫ್ಘಾನ್ ನಂಬಿಕೆ. ಇದರೊಂದಿಗೆ ಹೆಲ್ಮಂಡ್, ಕಾಬೂಲ್ ಹಾಗೂ ಕುನಾರ್ ನಂತಹ ನದಿಗಳ ಮೇಲೆ ತನ್ನ ಹಕ್ಕು ಸಾಧಿಸಲು ಅಫ್ಘಾನ್ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಮುಂದಾಗುತ್ತಿದೆ. ಅದರಂತೆ ಪಾಕ್‌ಗೆ ಹರಿಯುವ ಮೊದಲು ಅಫ್ಘಾನ್‌ನ ಕೃಷಿ ಮತ್ತು ವಿದ್ಯುತ್ ಚಟುವಟಿಕೆಗಳಿಗೆ ನೀರಿನ ಪ್ರಯೋಜನ ಪಡೆದುಕೊಳ್ಳಲು ತಯಾರಿ ನಡೆಸಿದೆ.
ಇಸ್ಲಾಮಾಬಾದ್: ಪಾಕಿಸ್ತಾನ-ಅಫ್ಘಾನಿಸ್ತಾನದ (Afghanistan-Pakistan) ನಡುವೆ ತಾರಕಕ್ಕೇರಿದ್ದ ಸಂಘರ್ಷಕ್ಕೆ ತೆರೆ ಬಿದ್ದಿದೆ. ಕತಾರ್ ಮತ್ತು ಟರ್ಕಿಯ ಮಧ್ಯಸ್ಥಿಕೆಯೊಂದಿಗೆ, ಎರಡೂ ರಾಷ್ಟ್ರಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಕದನ ವಿರಾಮಕ್ಕೆ (Ceasefire) ಒಪ್ಪಿಕೊಂಡಿವೆ ಎಂದು ಕತಾರ್‌ನ ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ.
ದೋಹಾದಲ್ಲಿ ಪಾಕಿಸ್ತಾನದ ನಿಯೋಗದಲ್ಲಿ ರಕ್ಷಣಾ ಸಚಿವ ಖವಾಜಾ ಆಸಿಫ್ ಮತ್ತು ಗುಪ್ತಚರ ಮುಖ್ಯಸ್ಥ ಜನರಲ್ ಅಸಿಮ್ ಮಲಿಕ್ ಇದ್ದರು. ಅಫ್ಘಾನಿಸ್ತಾನದ ಪರವಾಗಿ ರಕ್ಷಣಾ ಸಚಿವ ಮೊಹಮ್ಮದ್ ಯಾಕೂಬ್ ನೇತೃತ್ವ ವಹಿಸಿದ್ದರು ಎಂದು ತಾಲಿಬಾನ್ ತಿಳಿಸಿದೆ.
ಈ ಹೊಸ ಒಪ್ಪಂದದ ಹೊರತಾಗಿಯೂ, ಉಭಯ ದೇಶಗಳು ಕದನ ವಿರಾಮ ಉಲ್ಲಂಘನೆಯ ಬಗ್ಗೆ ಪರಸ್ಪರ ಆರೋಪಗಳನ್ನು ಮುಂದುವರಿಸಿವೆ. ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ಪ್ರಧಾನಿ ಮೊಹಮ್ಮದ್ ಹಸನ್ ಅಖುಂದ್, ಅಫ್ಘಾನಿಸ್ತಾನ ಯುದ್ಧದ ಪರವಾಗಿಲ್ಲ ಮತ್ತು ಪಾಕಿಸ್ತಾನವು ಅಫ್ಘಾನಿಸ್ತಾನದ ಭೂಪ್ರದೇಶವನ್ನು ಉಲ್ಲಂಘಿಸುವ ಮೂಲಕ ಹೊಸ ದಾಳಿ ಪ್ರಾರಂಭಿಸಿದೆ ಎಂದು ಆರೋಪಿಸಿದ್ದಾರೆ.
– ಭಾರತದ ನೆರವಿನಿಂದ ನಮ್ಮ ವಿರುದ್ಧವೇ ತಾಲಿಬಾನ್ ಪಿತೂರಿ ಮಾಡ್ತಿದೆ ಎಂದು ಆರೋಪ
ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ಮತ್ತೆ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ಪಾಕ್ ವಾಯುದಾಳಿ (Pakistan AirStrike) ನಡೆಸಿದ ಬಳಿಕ ಅಫ್ಘಾನಿಸ್ತಾನ ಪ್ರತಿದಾಳಿಗೆ ಮುಂದಾಗಿದೆ. ತಡರಾತ್ರಿ ಪಾಕ್ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನ್‌ನ 10 ಮಂದಿ ಮೃತಪಟ್ಟಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ (Khawaja Asif), ಪಾಕ್‌ನಲ್ಲಿರುವ ಆಫ್ಘನ್ನರು ದೇಶ ತೊರೆಯುವಂತೆ ಎಚ್ಚರಿಕೆ ನೀಡಿದ್ದಾರೆ.
ಅಫ್ಘಾನಿಸ್ತಾನ (Afghanistan) ಸರ್ಕಾರ ನೆರೆಹೊರೆಯವರೊಂದಿಗೆ ಇದ್ದ ಹಳೆಯ ಸಂಬಂಧಗಳನ್ನ ಕಳೆದುಕೊಂಡಿದೆ. ಇಲ್ಲಿನ ದೇಶದ ಸಂಪನ್ಮೂಲಗಳು 2.50 ಕೋಟಿ ಪಾಕಿಸ್ತಾನಿಯರಿಗೆ ಸೇರಿದ್ದೇ ಹೊರತು, ಆಫ್ಘನ್ನರಿಗೆ ಅಲ್ಲ. ಹಾಗಾಗಿ ಕೂಡಲೇ ಆಫ್ಘನ್ನರು ಪಾಕ್ ತೊರೆದು ತಾಯ್ನಾಡಿಗೆ ಮರಳಬೇಕು. ಈಗ ಅಲ್ಲಿ ತಮ್ಮದೇ ಸರ್ಕಾರವನ್ನ ಅವರು ಹೊಂದಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕದನ ವಿರಾಮ ಉಲ್ಲಂಘಿಸಿ ಪಾಕ್ ಏರ್‌ಸ್ಟ್ರೈಕ್ – ಮೂವರು ಅಫ್ಘಾನ್ ಕ್ರಿಕೆಟಿಗರು ಸಾವು; ರಶೀದ್ ಖಾನ್ ಖಂಡನೆ
ಪಾಕಿಸ್ತಾನ ಹಲವು ವರ್ಷಗಳಿಂದ ತಾಳ್ಮೆ ವಹಿಸುತ್ತಲೇ ಬಂದಿದೆ. ಗಡಿಯಾಚೆಗಿನ ಭಯೋತ್ಪಾದನಾ ಘಟನೆಗಳ ಕುರಿತು 836 ಪ್ರತಿಭಟನಾ ಟಿಪ್ಪಣಿಗಳನ್ನ ಕಳಿಸಿದೆ. ಆದ್ರೆ ಅಫ್ಘಾನ್‌ನಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಇನ್ಮುಂದೆ ನಮ್ಮ ಮನವಿಗಳು ಶಾಂತಿಯುತವಾಗಿರಲ್ಲ. ಪಾಕಿಸ್ತಾನದ ಯಾವುದೇ ನಿಯೋಗಗಳೂ ಕಾಬೂಲ್‌ಗೆ ಹೋಗಲ್ಲ. ಭಯೋತ್ಪಾದನೆಯ ಮೂಲ ಎಲ್ಲಿದ್ದರೂ, ಅದು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಉಗ್ರಕೃತ್ಯಗಳಿಗೆ ಬೆಂಬಲ ನೀಡುವ ಪಾಕ್ ಹೇಳಿಕೊಂಡಿದೆ.
ಭಾರತದ ಪ್ರಾಕ್ಸಿ ತಾಲಿಬಾನ್
ತಾಲಿಬಾನ್ ಸರ್ಕಾರವು ʻಭಾರತದ ಪ್ರಾಕ್ಸಿʼಯಾಗಿ ಕೆಲಸ ಮಾಡುತ್ತಿದೆ. ಭಾರತದ ನೆರವಿನಲ್ಲಿ ಪಾಕಿಸ್ತಾನದ ವಿರುದ್ಧ ಕಾಬೂಲ್ ಆಡಳಿತಾಧಿಕಾರಿಗಳು ಪಿತೂರಿ ನಡೆಸುತ್ತಿದ್ದಾರೆ. ಒಂದು ಕಾಲದಲ್ಲಿ ನಮ್ಮ ರಕ್ಷಣೆಯಲ್ಲಿದ್ದರು, ನಮ್ಮ ನೆಲದಲ್ಲಿ ಅಡಗಿಕೊಂಡಿದ್ದರು ಈಗ ಭಾರತದ ನೆರವಿನಲ್ಲಿ ನಮ್ಮ ವಿರುದ್ಧವೇ ತಿರುಗಿಬಿದ್ದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 24 ಗಂಟೆಯಲ್ಲಿ 300 ನಕ್ಸಲರ ಶರಣಾಗತಿ – ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ: ಮೋದಿ
ಅಫ್ಘಾನ್ ಯುವ ಕ್ರಿಕೆಟಿಗರ ದುರ್ಮರಣ
ಕ್ರಿಕೆಟ್ ಟೂರ್ನಿಗಾಗಿ ಈ ಪ್ರದೇಶಕ್ಕೆ ಬಂದಿದ್ದ ಮೂವರು ಯುವ ಕ್ರಿಕೆಟ್ ಆಟಗಾರರು ಸಾವನ್ನಪ್ಪಿದ್ದಾರೆ. ಕಬೀರ್, ಸಿಬ್ಘತ್ ಉಲ್ಲಾ ಮತ್ತು ಹರೂನ್ ಸಾವನ್ನಪ್ಪಿದವರು ಎಂದು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ. ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಅಫ್ಘಾನ್ ಕ್ರಿಕೇಟ್ ಮಂಡಳಿ, ಈ ದಾಳಿಯನ್ನು ಪಾಕಿಸ್ತಾನ ಆಡಳಿತದ ಹೇಡಿತನದ ಕೃತ್ಯ ಎಂದು ಬಣ್ಣಿಸಿದೆ.
ತ್ರಿಕೋನ ಟಿ20 ಸರಣಿಯಿಂದ ಹಿಂದೆ ಅಫ್ಘಾನ್
ಘಟನೆ ಬೆನ್ನಲ್ಲೇ ಮುಂದಿನ ತಿಂಗಳು ನಡೆಯಲಿರುವ ಪಾಕಿಸ್ತಾನ ಒಳಗೊಂಡ ತ್ರಿಕೋನ ಟಿ20 ಸರಣಿಯಿಂದ ಹಿಂದೆ ಸರಿಯುತ್ತಿರುವುದಾಗಿಯೂ ಅಫ್ಘಾನ್ ಕ್ರಿಕೆಟ್ ಮಂಡಳಿ ಹೇಳಿದೆ. ನವೆಂಬರ್ 5 ರಿಂದ 29ರ ವರೆಗೆ ಲಾಹೋರ್ ಮತ್ತು ರಾವಲ್ಪಿಂಡಿಯಲ್ಲಿ ನಡೆಯಲಿದ್ದ ತ್ರಿಕೋನ ಸರಣಿಯಲ್ಲಿ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಭಾಗವಹಿಸಬೇಕಾಗಿತ್ತು.
ಕಾಬೂಲ್: ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ನಡುವಿನ ಸಂಘರ್ಷ ಮುಂದುವರೆದಿದೆ. ಕದನ ವಿರಾಮ ಉಲ್ಲಂಘಿಸಿ ತಡರಾತ್ರಿ ಪಾಕ್ ನಡೆಸಿದ ಮೈಮಾನಿಕ ದಾಳಿಯಲ್ಲಿ (Pakistan Airstrike) ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು (Afghanistan Cricketers) ಸಾವನ್ನಪ್ಪಿದ್ದಾರೆ.
ಅಫ್ಘಾನಿಸ್ತಾನದ ಕ್ರಿಕೆಟ್ ಮಂಡಳಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸ್ಥಳೀಯ ಕ್ರಿಕೆಟಿಗರು ಮೃತಪಟ್ಟಿರುವುದನ್ನ ಖಚಿತಪಡಿಸಿ, ಶೋಕ ವ್ಯಕ್ತಪಡಿಸಿದೆ. ಪಾಕ್ ದಾಳಿಗೆ ಮೃತಪಟ್ಟ ಕ್ರಿಕೆಟಿಗರನ್ನು ಕಬೀರ್, ಸಿಬ್ಬತುಲ್ಲಾ ಮತ್ತು ಹರೂನ್ ಎಂದು ಗುರುತಿಸಲಾಗಿದೆ.
Statement of Condolence
The Afghanistan Cricket Board expresses its deepest sorrow and grief over the tragic martyrdom of the brave cricketers from Urgun District in Paktika Province, who were targeted this evening in a cowardly attack carried out by the Pakistani regime.
ಹೃದಯ ವಿದ್ರಾವಕ ಘಟನೆಯಲ್ಲಿ ಮೂವರು ಆಟಗಾರರು ಹುತಾತ್ಮರಾಗಿದ್ದಾರೆ. ಇತರ 7 ಮಂದಿ ಗಾಯಗೊಂಡಿದ್ದಾರೆ. ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಫ್ಘಾನ್ ಕ್ಲಬ್ ಮಟ್ಟದ ಯುವ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ ಪಕ್ತಿಕಾ ಪ್ರಾಂತ್ಯದ ಉರ್ಗುನ್‌ನಿಂದ ಶರಾನಾಗೆ ಪ್ರಯಾಣಿಸಿದ್ದರು. ಈ ವೇಳೆ ದಾಳಿ ನಡೆದಿದ್ದು, ಇದರಿಂದ ಮೂವರು ಕ್ರಿಕೆಟಿಗರು ಹಾಗೂ ಐವರು ನಾಗರಿಕರು ಸಾವನ್ನಪ್ಪಿದ್ದು, ಇನ್ನು ಕೆಲವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದೆ.
ಈ ದಾಳಿ ವಿರುದ್ಧ ಅಫ್ಘಾನಿಸ್ತಾನ ಕ್ರಿಕೆಟಿಗರು ಧ್ವನಿಯೆತ್ತಿದ್ದು, ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
I am deeply saddened by the loss of civilian lives in the recent Pakistani aerial strikes on Afghanistan. A tragedy that claimed the lives of women, children, and aspiring young cricketers who dreamed of representing their nation on the world stage.
ಟಿ20 ಸರಣಿ ರದ್ದು
ಇನ್ನೂ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ಕ್ರಿಕೆಟಿಗರು ಸಾವನ್ನಪ್ಪಿದ ನಂತರ ಅಫ್ಘಾನಿಸ್ತಾನವು ಪಾಕಿಸ್ತಾನದೊಂದಿಗೆ ನವೆಂಬರ್‌ನಲ್ಲಿ ನಿಗದಿಯಾಗಿದ್ದ ಮೂರು ರಾಷ್ಟ್ರಗಳ ಟಿ20 ಸರಣಿಯನ್ನೇ ರದ್ದುಗೊಳಿಸಿದೆ.
ರಶೀದ್ ಖಾನ್ ತೀವ್ರ ಖಂಡನೆ
ಪಾಕಿಸ್ತಾನದ ವಾಯುದಾಳಿಯನ್ನು ಅಫ್ಘಾನ್ ಕ್ರಿಕೆಟಿಗ ರಶೀದ್ ಖಾನ್ (Rashid Khan) ತೀವ್ರವಾಗಿ ಖಂಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ದಾಳಿಯಲ್ಲಿ ಮೃತರಾದ ನಾಗರಿಕರು, ಕ್ರಿಕೆಟಿಗರಿಗೆ ಸಂತಾಪ ಸೂಚಿಸಿದ್ದಾರೆ.
ನಾಗರಿಕರ ಸಾವು ನನಗೆ ತೀವ್ರ ದುಃಖ ತಂದಿದೆ. ವಿಶ್ವ ವೇದಿಕೆಯಲ್ಲಿ ತಮ್ಮ ರಾಷ್ಟ್ರವನ್ನ ಪ್ರತಿನಿಧಿಸುವ ಕನಸು ಕಂಡಿದ್ದ ಮಹಿಳೆಯರು, ಮಕ್ಕಳು ಮತ್ತು ಮಹತ್ವಾಕಾಂಕ್ಷಿ ಯುವ ಕ್ರಿಕೆಟಿಗರ ಪ್ರಾಣವನ್ನು ಬಲಿ ತೆಗೆದುಕೊಂಡ ದುರಂತ ಇದು. ನಾಗರಿಕ ಮೂಲಸೌಕರ್ಯ ಗುರಿಯಾಗಿಸಿಕೊಂಡಿರುವುದು ಸಂಪೂರ್ಣವಾಗಿ ಅನೈತಿಕ ಮತ್ತು ಅನಾಗರಿಕ ದಾಳಿ ನಡೆಸಲಾಗಿದೆ. ಅಮೂಲ್ಯ ಮುಗ್ಧ ಆತ್ಮಗಳು ದಾಳಿಯಲ್ಲಿ ಕಳೆದುಹೋಗಿವೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ವಿರುದ್ಧದ ಮುಂಬರುವ ಪಂದ್ಯಗಳಿಂದ ಹಿಂದೆ ಸರಿಯುವ ಎಸಿಬಿ ನಿರ್ಧಾರವನ್ನ ನಾನು ಸ್ವಾಗತಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ನಾನು ನಮ್ಮ ಜನರೊಂದಿಗೆ ನಿಲ್ಲುತ್ತೇನೆ, ನಮ್ಮ ರಾಷ್ಟ್ರೀಯ ಘನತೆಯು ಎಲ್ಲಕ್ಕಿಂತ ಮೊದಲು ಬರಬೇಕು ಎಂದು ಹೇಳಿದ್ದಾರೆ.
ಇಸ್ಲಾಮಾಬಾದ್: ತಾಲಿಬಾನ್ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ ವಹಿಸಿದ್ದು, ಅಫ್ಘಾನಿಸ್ತಾನ ಭಾರತದ ಪ್ರಾಕ್ಸಿ ಯುದ್ಧದಲ್ಲಿ (Indias Proxy War) ಹೋರಾಡುತ್ತಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ (Khawaja Asif) ಆರೋಪಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ತಾನವು (Afghanistan) ಯುದ್ಧದ ನಿರ್ಧಾರಗಳನ್ನ ಕಾಬೂಲ್‌ನಲ್ಲಿ ಅಲ್ಲ ಭಾರತದ ನವದೆಹಲಿಯಲ್ಲಿ ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ. ಇದೇ ವೇಳೆ ಕದನ ವಿರಾಮದ ಬಗ್ಗೆಯೂ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಫ್ಘಾನ್-ಪಾಕ್ ಮಧ್ಯೆ 48 ಗಂಟೆಗಳ ಕದನ ವಿರಾಮ ಜಾರಿ
ತಾಲಿಬಾನ್‌ನ (Taliban) ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಇತ್ತೀಚೆಗೆ ಭಾರತಕ್ಕೆ ಭೇಟಿ ನೀದ್ದಾಗ ಪ್ಲ್ಯಾನ್ ರೂಪಿಸಿದ್ದಾರೆ. ದೆಹಲಿಗೆ ಅವರ ಮೊದಲ ಭೇಟಿಯು ಅಧಿಕೃತವಾಗಿ ವ್ಯಾಪಾರ ಮತ್ತು ದ್ವಿಪಕ್ಷೀಯ ಸಂಬಂಧಗಳ ಮೇಲೆ ಕೇಂದ್ರೀಕೃತವಾಗಿತ್ತು. ಆದ್ರೆ ಈ ಸಭೆಯ ನಿಜವಾದ ಉದ್ದೇಶ ಬೇರೆಯದ್ದೇ ಆಗಿತ್ತು ಎಂದಿದ್ದಾರೆ ಖವಾಜ ಆಸಿಫ್. ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ, ಮೋದಿ ನನಗೆ ಭರವಸೆ ನೀಡಿದ್ದಾರೆ: ಟ್ರಂಪ್
48 ಗಂಟೆಗಳ ಕದನ ವಿರಾಮ
ಪಾಕಿಸ್ತಾನ ಮತ್ತು ಅಫ್ಘಾನ್ ನಡುವೆ 48 ಗಂಟೆಗಳ ಕದನ ವಿರಾಮ ಘೋಷಣೆಯಾಗಿದೆ. ಎರಡು ದೇಶಗಳ ಮಧ್ಯೆ ಸಂಭವಿಸಿದ ಸಂಘರ್ಷದಲ್ಲಿ ಕನಿಷ್ಠ 15 ಅಫ್ಘಾನ್ ನಾಗರಿಕರು, 6 ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ರಾತ್ರಿ ಅಫ್ಘಾನ್ ಪಡೆಗಳು, ಸ್ಥಳೀಯ ಉಗ್ರಗಾಮಿಗಳು ನಡೆಸಿದ ಗಡಿಯಾಚೆಗಿನ ಗುಂಡಿನ ದಾಳಿಗೆ ತನ್ನ ಸೇನೆಯು ಪ್ರತೀಕಾರ ತೀರಿಸಿಕೊಂಡಿದೆ ಎಂದು ಪಾಕಿಸ್ತಾನ ಹೇಳಿದೆ.
ಕಾಬೂಲ್/ಇಸ್ಲಾಮಾಬಾದ್: ಪಾಕಿಸ್ತಾನ (Pakistan) ಮತ್ತು ಅಫ್ಘಾನಿಸ್ತಾನ (Afghanistan) ನಡುವೆ ನಡೆದ ಹಿಂಸಾಚಾರದಲ್ಲಿ ಡಜನ್‌ಗಟ್ಟಲೇ ಜನ ಸಾವನ್ನಪ್ಪಿ ಮತ್ತು ಅನೇಕರು ಗಾಯಗೊಂಡ ನಂತರ ಎರಡು ದೇಶಗಳು 48 ಗಂಟೆಗಳ ಕದನ ವಿರಾಮಕ್ಕೆ (Ceasefire) ಒಪ್ಪಿಕೊಂಡಿವೆ.
ಭಾರತೀಯ ಕಾಲಮಾನ ಬುಧವಾರ ಸಂಜೆ 6 ಗಂಟೆಗೆ ಕದನ ವಿರಾಮ ಜಾರಿಯಾಗಿದೆ. ಅಫ್ಘಾನಿಸ್ತಾನ ಕದನ ವಿರಾಮವನ್ನು ಕೇಳಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಕದನ ವಿರಾಮದ ಬಗ್ಗೆಯಾಗಲಿ ಅಥವಾ ಹೋರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಮೊದಲು ಕೇಳಿದ್ದು ಯಾರು ಮತ್ತು ಪಾಕ್ ಹೇಳಿಕೆಯ ಬಗ್ಗೆಯಾಗಲಿ ಅಫ್ಘಾನಿಸ್ತಾನ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
After years of covert interference, Pakistan’s agenda in Afghanistan is now clear. Its reaction to the Taliban FM’s India visit exposes a policy driven by insecurity, not stability. Multiple sites in Kabul have been hit. Afghanistan will stand firm. May Allah have mercy on our… pic.twitter.com/nNz2mjQDGy
ನಮ್ಮ ನಡುವೆ ಸಂಕೀರ್ಣವಾಗಿರುವ ಸಮಸ್ಯೆಯಿದೆ. ಆದರೆ ಈ ಸಮಸ್ಯೆಗೆ ಮಾತುಕತೆಯ ಮೂಲಕ ಪರಿಹಾರವನ್ನು ಕಂಡುಹಿಡಿಯಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ ಪಾಕಿಸ್ತಾನ ಹೇಳಿದೆ. ಇದನ್ನೂ ಓದಿ: ಪಾಕ್ ವಿರುದ್ಧ ಸಿಡಿದೆದ್ದ ಪಿಒಕೆ – ಏನಿದು ವಿವಾದ?
ಇಂದು ಮುಂಜಾನೆ ನಡೆಸಿದ ಮಿಲಿಟರಿ ಕಾರ್ಯಾಚರಣೆಗಳಲ್ಲಿ ಡಜನ್‌ಗಟ್ಟಲೆ ಅಫ್ಘಾನ್ ಸೈನಿಕರನ್ನು ಉಗ್ರಗಾಮಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಹೇಳಿದೆ.
Afghan Taliban claims they used drones to target Pakistani border outposts. Dozens of Pakistani soldiers have been killed or are missing as of now. Deadliest clashes between Pakistan and Afghanistan in years. pic.twitter.com/Ig4raLRnVl
ಇತ್ತೀಚಿನ ವರ್ಷಗಳಲ್ಲಿ ಎರಡು ದೇಶಗಳ ಮಧ್ಯೆ ನಡೆದ ಅತ್ಯಂತ ಭೀಕರ ಘರ್ಷಣೆ ಇದಾಗಿದೆ. ಕಾಬೂಲ್ ಮೇಲೆ ಪಾಕಿಸ್ತಾನ ಏರ್ ಸ್ಟ್ರೈಕ್ ಮಾಡಿದ್ದಕ್ಕೆ ಪ್ರತಿಯಾಗಿ ಅಫ್ಘಾನಿಸ್ತಾನ ಗಡಿಯಲ್ಲಿ ದಾಳಿ ನಡೆಸಿತ್ತು.
ವಾಷಿಂಗ್ಟನ್: ನಾನು ಯುದ್ಧ ನಿಲ್ಲಿಸೋದ್ರಲ್ಲಿ ನಾನು ನಿಪುಣ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ (India Pakistan Clashes) ಸೇರಿದಂತೆ ವಿಶ್ವದ ಹಲವು ಸಂಘರ್ಷಗಳನ್ನು ಪರಿಹರಿಸುವಲ್ಲಿ ತಾನು ಪ್ರಮುಖ ಪಾತ್ರ ವಹಿಸಿದ್ದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತೊಮ್ಮೆ ತಮಗೆ ತಾವೇ ಬೆನ್ನುತಟ್ಟಿಕೊಂಡಿದ್ದಾರೆ. ಜೊತೆಗೆ ಇದನ್ನೆಲ್ಲ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ ಎಂದು ಹೇಳಿದ್ದಾರೆ.
#WATCH | “…I settled a few of the wars just based on tariffs. For example, between India and Pakistan, I said, if you guys want to fight a war and you have nuclear weapons. I am going to put big tariffs on you both, like 100 per cent, 150 per cent, and 200 per cent…I said I… https://t.co/UejAFkcB0Hpic.twitter.com/B5Zb7AjYTU
ಭಾನುವಾರ ರಾತ್ರಿ ಗಾಜಾಕ್ಕೆ (Gaza Strip) ಮಧ್ಯಪ್ರಾಚ್ಯಕ್ಕೆ ತೆರಳುವ ಮುನ್ನ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ಭಾರತ-ಪಾಕ್ ಸಂಘರ್ಷ ಸೇರಿದಂತೆ ಅನೇಕ ಯುದ್ಧಗಳನ್ನು ನಿಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ಇಸ್ರೇಲ್-ಗಾಜಾ ಕದನ ವಿರಾಮ ನಾನು ಪರಿಹರಿಸಿದ 8 ಯುದ್ಧ. ಈಗ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಸಂಘರ್ಷ ನಡೆಯುತ್ತಿದೆ. ನಾನು ಹಿಂದಿರುಗುವಾಗ ಅದನ್ನೂ ಪರಿಹರಿಸುತ್ತೇನೆ. ನಾನು ಯುದ್ಧಗಳನ್ನು ಪರಿಹರಿಸುವಲ್ಲಿ ನಿಪುಣ ಎಂದು ತಮ್ಮ ಬೆನ್ನು ತಾವೇ ತಟ್ಟಿಕೊಂಡಿದ್ದಾರೆ. ಇದನ್ನೂ ಓದಿ: ಭಾರತ-ಅಫ್ಘಾನಿಸ್ತಾನ ಜಂಟಿ ಹೇಳಿಕೆ ಸರಿಯಲ್ಲ; ಅಫ್ಘಾನ್ ರಾಯಭಾರಿಗೆ ಪಾಕಿಸ್ತಾನ ಸಮನ್ಸ್
🇦🇫🇵🇰 TRUMP: 8 WARS FIXED. NEXT UP? PAKISTAN-AFGHANISTAN.
“This will be my 8th war that I have solved.
And I hear there is a war now going on between Pakistan and Afghanistan.
ಇನ್ನೂ ಭಾರತ-ಪಾಕ್ ಸಂಘರ್ಷ ಉಲ್ಲೇಖಿಸಿ ಮಾತನಾಡಿದ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ಬಗ್ಗೆ ಯೋಚಿಸಿ. ಕೆಲ ಯುದ್ಧಗಳು 31, 32, 37 ವರ್ಷಗಳ ಕಾಲ ನಡೆದವು. ಲಕ್ಷಾಂತರ ಜನರು ಸಾವನ್ನಪ್ಪಿದ್ರು. ಆದ್ರೆ ನಾನು ಒಂದು ದಿನದ ಬಳಗಾಗಿ ಯುದ್ಧ ಪರಿಹರಿಸಿದೆ. ವ್ಯಾಪಾರ ಮತ್ತು ಸುಂಕದಂತಹ ಆರ್ಥಿಕ ಕ್ರಮಗಳ ಮೂಲಕ ಸಂಘರ್ಷ ಬಗೆಹರಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಆತ್ಮಾಹುತಿ ದಾಳಿ – 7 ಪೊಲೀಸರು, 6 ಉಗ್ರರು ಸಾವು
ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ತಡೆಯಲು, ನಿಮ್ಮ ಬಳಿ ಪರಮಾಣು ಶಸ್ತ್ರಾಸ್ತ್ರಗಳಿವೆ ಅಂತ ನಾನು ಅವರಿಗೆ ಹೇಳಿದ್ದೆ. ನೀವಿಬ್ಬರೂ ಯುದ್ಧಕ್ಕೆ ಹೋದ್ರೆ ನಿಮ್ಮ ಮೇಲೆ 100%, 150% ಮತ್ತು 200% ಸುಂಕ ವಿಧಿಸುತ್ತೇನೆ ಅಂತ ಎಚ್ಚರಿಕೆ ಕೊಟ್ಟಿದ್ದೆ. ಸುಂಕದ ಎಚ್ಚರಿಕೆ ನೀಡಿದ 24 ಗಂಟೆಗಳಲ್ಲಿ ಯುದ್ಧ ನಿಲ್ಲಿಸಿದೆ. ಇಲ್ಲದಿದ್ದರೆ ಈ ಯುದ್ಧ ನಿಲ್ಲುತ್ತಿರಲಿಲ್ಲ ಎಂದು ಬೀಗಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ 58 ಸೈನಿಕರ ಹತ್ಯೆ, 30 ಮಂದಿಗೆ ಗಾಯ: ಅಫ್ಘಾನಿಸ್ತಾನ
ನೊಬೆಲ್ ಶಾಂತಿ ಪ್ರಶಸ್ತಿ ಗೆಲ್ಲುವುದು ತನ್ನ ಗುರಿಯಲ್ಲ. ಆದ್ರೆ ಯುದ್ಧಗಳನ್ನು ನಿಲ್ಲಿಸುವುದು ನನಗೆ ಗೌರವ. 2025 ರಲ್ಲಿ ಇನ್ನೂ ಪ್ರಮುಖ ಕೆಲಸಗಳನ್ನು ಮಾಡಲಾಗುತ್ತದೆ. ಜೀವಗಳನ್ನು ಉಳಿಸುವ ಉದ್ದೇಶದಿಂದ ನಾನು ಈ ಕೆಲಸಗಳನ್ನು ಮಾಡಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.
ನವದೆಹಲಿ: ದೆಹಲಿಯಲ್ಲಿ ಅಫ್ಘಾನ್ (Afghanistan) ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ (Amir Khan Muttaqi) ಅವರ ಪತ್ರಿಕಾಗೋಷ್ಠಿಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಟ್ಟ ವಿವಾದದ ಬಗ್ಗೆ ತಾಲಿಬಾನ್ (Taliban) ಸ್ಪಷ್ಟನೆ ನೀಡಿದೆ. ಪತ್ರಿಕಾಗೋಷ್ಠಿಗೆ ಯಾವುದೇ ಮಹಿಳಾ ಪತ್ರಕರ್ತರನ್ನು (Woman Journalists) ತಡೆಯಲಿಲ್ಲ ಎಂದು ತಾಲಿಬಾನ್ ತಿಳಿಸಿದೆ.
ಇದು ‘ತಾಂತ್ರಿಕ ಸಮಸ್ಯೆ’ ಹೊರತು ಉದ್ದೇಶಪೂರ್ವಕವಲ್ಲ. ಪತ್ರಿಕಾಗೋಷ್ಠಿಗೆ ಸಂಬಂಧಿಸಿದಂತೆ ಇದು ಅಲ್ಪಾವಧಿಯ ಸೂಚನೆಯಾಗಿತ್ತು. ಇನ್ನು ಪತ್ರಕರ್ತರ ಸಣ್ಣ ಪಟ್ಟಿಯನ್ನು ನಿರ್ಧರಿಸಲಾಗಿತ್ತು. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರಿಗೆ ಆಹ್ವಾನ ನೀಡಲು ಸಾಧ್ಯವಾಗಿರಲಿಲ್ಲ ಎಂದು ಅಮೀರ್ ಖಾನ್ ಮುತ್ತಕಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಂಗಾಳದ ಬರ್ಧಮಾನ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಹಲವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಭಾಗವಾಗಿ ಉಲ್ಲೇಖಿಸುವುದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ತಿಳಿಸಿದೆ.
ಏಪ್ರಿಲ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅಫ್ಘಾನಿಸ್ತಾನ ಬಲವಾಗಿ ಖಂಡಿಸಿದೆ. ಜನರು ಮತ್ತು ಭಾರತ ಸರ್ಕಾರದೊಂದಿಗೆ ಅಫ್ಘಾನಿಸ್ತಾನ ಜೊತೆಯಾಗಿರುತ್ತದೆ. ಪ್ರಾದೇಶಿಕ ದೇಶಗಳಿಂದ ಆಗುವ ಎಲ್ಲಾ ಭಯೋತ್ಪಾದಕಾ ಕೃತ್ಯಗಳನ್ನು ಎರಡೂ ಕಡೆಯವರು (ಭಾರತ-ಅಫ್ಘಾನಿಸ್ತಾನ) ನಿಸ್ಸಂದಿಗ್ಧವಾಗಿ ಖಂಡಿಸಿದ್ದಾರೆ. ಈ ಪ್ರದೇಶದಲ್ಲಿ ಶಾಂತಿ ಸ್ಥಾಪನೆಯಾಗಬೇಕು ಎಂದು ಅಫ್ಘಾನಿಸ್ತಾನ ತಿಳಿಸಿದೆ. ಇದನ್ನೂ ಓದಿ: ಕಾಬೂಲ್ ರಾಯಭಾರ ಕಚೇರಿ 4 ವರ್ಷದ ಬಳಿಕ ಪುನಾರಂಭಕ್ಕೆ ಭಾರತ ನಿರ್ಧಾರ – ಎಸ್.ಜೈಶಂಕರ್ ಘೋಷಣೆ
ಗುರುವಾರ ನವದೆಹಲಿಗೆ ಬಂದಿಳಿದ ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಆರು ದಿನಗಳ ಭಾರತ ಭೇಟಿಯಲ್ಲಿದ್ದಾರೆ.