ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಬಳಿ ಸೋಮವಾರ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ರಷ್ಯಾದ ಇಬ್ಬರು ರಾಜತಾಂತ್ರಿಕರು ಸೇರಿದಂತೆ 20 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ವರದಿಗಳ ಪ್ರಕಾರ, ಜನರು ವೀಸಾಕ್ಕಾಗಿ ರಾಯಭಾರ ಕಚೇರಿಯ ಹೊರಗಡೆ ಗೇಟ್ ಬಳಿ ನಿಂತಿದ್ದಾಗ ಸ್ಫೋಟ ಸಂಭವಿಸಿದೆ. ಈಗಾಗಲೇ 20 ಜನರು ಸಾವನ್ನಪ್ಪಿದ್ದು, ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತದ ರಿಷಿಗೆ ಸೋಲು – ಬ್ರಿಟನ್ ಪ್ರಧಾನಿ ಗದ್ದುಗೆ ಏರಿದ ಲಿಜ್ ಟ್ರಸ್
ಆತ್ಮಹತ್ಯಾ ಬಾಂಬರ್‌ನಿಂದಾಗಿ ಸ್ಫೋಟ ಸಂಭವಿಸಿದೆ. ದಾಳಿಗೂ ಮೊದಲೇ ಆತ್ಮಹತ್ಯಾ ಬಾಂಬರ್‌ನನ್ನು ತಾಲಿಬಾನ್ ಗಾರ್ಡ್‌ಗಳು ಗುರುತಿಸಿದ್ದರು. ಅವರು ಗುಂಡು ಹಾರಿಸುತ್ತಿದ್ದಂತೆಯೇ ಆತ್ಮಹತ್ಯಾ ಬಾಂಬರ್ ತನ್ನ ಬಳಿಯಿದ್ದ ಸ್ಫೋಟಕ ಸಾಧನವನ್ನು ಸಕ್ರಿಯಗೊಳಿಸಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ತೇಲುವ ಫ್ರೀಜರ್ ಸಹಾಯದಿಂದ 11 ದಿನ ಸಮುದ್ರದಲ್ಲೇ ಜೀವ ಉಳಿಸಿಕೊಂಡ
ಕೇವಲ 2 ದಿನಗಳ ಹಿಂದೆಯಷ್ಟೇ ವಾಯುವ್ಯ ಅಫ್ಘಾನಿಸ್ತಾನದ ಮಸೀದಿಯೊಂದರಲ್ಲಿ ಸ್ಫೋಟ ಸಂಭವಿಸಿ 20 ಜನರು ಸಾವನ್ನಪ್ಪಿದ್ದರು. ಹೆರಾತ್ ನಗರದ ಗುಜರ್ಗಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ಬಾಂಬ್ ದಾಳಿ ನಡೆದಿದ್ದಾಗಿ ವರದಿಯಾಗಿದೆ.
Live Tv
[brid partner=56869869 player=32851 video=960834 autoplay=true]
ಕಾಬೂಲ್: ಅಫ್ಘಾನಿಸ್ತಾನದ ಹೆರಾತ್ ಪ್ರಾಂತ್ಯದ ಮಸೀದಿಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ತಾಲಿಬಾನ್ ಪರ ಉನ್ನತ ಮಟ್ಟದ ಧರ್ಮಗುರು ಸೇರಿದಂತೆ ಹಲವು ನಾಗರಿಕರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ವರದಿಗಳ ಪ್ರಕಾರ ಹೆರಾತ್ ಪ್ರಾಂತ್ಯದ ಗುಜರ್ಗಾ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ. ಶುಕ್ರವಾರದ ಪ್ರಾರ್ಥನೆಯ ಬಳಿಕ ಆತ್ಮಹತ್ಯಾ ಬಾಂಬರ್‌ನಿಂದ ಸ್ಫೋಟ ಸಂಭವಿಸಿರುವುದಾಗಿ ವರದಿಯಾಗಿದ್ದು, ಸ್ಫೋಟದಲ್ಲಿ ಮಸೀದಿಯ ಇಮಾಮ್ ಮೌಲಾವಿ ಮುಜೀಬ್ ರೆಹಮಾನ್ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಮೋದಿ ವಿರುದ್ಧ ಆಕ್ರೋಶ – ಮೋದಿ ಮೋಸ, ಗೋ ಬ್ಯಾಕ್ ಮೋದಿ ಅಭಿಯಾನ
ಸ್ಫೋಟದಲ್ಲಿ ಹಲವು ನಾಗರಿಕರೂ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಆದರೆ ಮೃತಪಟ್ಟವರ ಸಂಖ್ಯೆಯ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಇದುವರೆಗೆ ಯಾವುದೇ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ಮಂಜೂರು
Live Tv
[brid partner=56869869 player=32851 video=960834 autoplay=true]
ದುಬೈ/ಕಾಬೂಲ್: ಭಾರತೀಯ ಕ್ರಿಕೆಟಿಗರು ವಿಶ್ವದಾದ್ಯಂತ ಅಭಿಮಾನಿಗಳನ್ನ ಹೊಂದಿದ್ದಾರೆ ಎಂಬುದಕ್ಕೆ ಅಫ್ಘಾನಿಸ್ತಾನದಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ.
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಏಷ್ಯಾ ಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ 5 ವಿಕೆಟ್‌ಗಳ ಅಂತರದಲ್ಲಿ ಗೆದ್ದು ಬೀಗಿತು. ಕೊನೆಯ ಕ್ಷಣದ ವರೆಗೂ ರೋಚಕತೆಯಿಂದಲೇ ಕೂಡಿದ ಪಂದ್ಯ ಪ್ರತಿ ಎಸೆತದಲ್ಲೂ ಅಭಿಮಾನಿಗಳ ಮೈ ರೋಮಾಂಚನಗೊಳಿಸುತ್ತಿತ್ತು. ಇದನ್ನೂ ಓದಿ: ಅಂದು ಗಾಯಾಳು, ಇಂದು ಮ್ಯಾಚ್ ವಿನ್ನರ್ – ಹಳೆಯ ಘಟನೆ ಬಿಚ್ಚಿಟ್ಟ ಪಾಂಡ್ಯ
ಒತ್ತಡದ ನಡುವೆಯೂ ಬದ್ಧ ವೈರಿ ಪಾಕಿಸ್ತಾನವನ್ನು ಮಣಿಸಿದ ಟೀಂ ಇಂಡಿಯಾ ಖುಷಿಯನ್ನು ಇಡೀ ದೇಶವೇ ಸಂಭ್ರಮಿಸುತ್ತಿತ್ತು. ಇದೇ ವೇಳೆ ವಿದೇಶಗಳಲ್ಲೂ ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ಈ ನಡುವೆ ಅಫ್ಘಾನಿಸ್ತಾನದ ಅಭಿಮಾನಿಯೊಬ್ಬ ಟಿವಿ ಸ್ಕ್ರೀನ್‌ನಲ್ಲೇ ಹಾರ್ದಿಕ್ ಪಾಂಡ್ಯಾಗೆ ಮುತ್ತಿಡುವ ಮೂಲಕ ತನ್ನ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಹಾರ್ದಿಕ್ ಪಾಂಡ್ಯಗೆ ಮುತ್ತಿಡುತ್ತಿರುವ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಜನರು ವೀಡಿಯೋ ವೀಕ್ಷಣೆ ಮಾಡಿದ್ದಾರೆ.
ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 19.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 147 ರನ್‌ಗಳನ್ನು ಗಳಿಸಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಭಾರತ 19.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್‌ಗಳಿಸಿ ಗೆಲುವು ಸಾಧಿಸಿತು.
Live Tv
[brid partner=56869869 player=32851 video=960834 autoplay=true]
ಕಾಬೂಲ್: ತಾಲಿಬಾನ್ ಅಫ್ಘಾನಿಸ್ತಾನದ ಆಡಳಿತವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಒಂದು ವರ್ಷದ ನಂತರ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೆ ಗ್ರೀನ್‌ಸಿಗ್ನಲ್ ಕೊಟ್ಟಿದೆ. ಆದರೆ ಚಲನಚಿತ್ರಗಳಲ್ಲಿ ಮಹಿಳಾ ಕಲಾವಿದರ ಪಾತ್ರಗಳಿಗೆ ನಿರ್ಬಂಧ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಒಂದು ವರ್ಷದ ನಂತರ ಆಫ್ಘನ್‌ನಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ಸಿಕ್ಕಿರುವುದು ಸಿನಿಪ್ರಿಯರು, ಚಲನಚಿತ್ರ ನಿರ್ಮಾಪಕರು ಹಾಗೂ ನಿರ್ದೇಶಕರಲ್ಲಿ ಮಂದಹಾಸ ಮೂಡಿಸಿದೆ. ಇದೇ ವೇಳೆ ಮಹಿಳಾ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತೀವ್ರ ಕಳವಳವೂ ವ್ಯಕ್ತವಾಗಿದೆ. ಈಗಾಗಲೇ 37 ಚಲನಚಿತ್ರಗಳು ಹಾಗೂ ಸಾಕ್ಷ್ಯಾಚಿತ್ರಗಳು ಪ್ರದರ್ಶನಕ್ಕೆ ಸಜ್ಜಾಗಿವೆ. ಆದರೆ ಇತ್ತೀಚಿಗೆ ನಿರ್ಮಿಸಲಾದ ಚಿತ್ರಗಳಲ್ಲಿ ಮಹಿಳಾ ನಟಿ ಅತಿಫಾ ಮೊಹಮ್ಮದಿ ಮಾತ್ರವೇ ಏಕೈಕ ಮಹಿಳಾ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಿದವರಿಗೆ 5 ಸಾವಿರ ರೂ. ದಂಡ – ಶ್ರೀನಗರ ಕಾಲೇಜು ಆದೇಶ
ಚಿತ್ರ ನಿರ್ಮಾಣಕ್ಕೆ ಹಣ ನೀಡುವಂತೆ ಮನವಿ: ಚಿತ್ರಮಂದಿರ ತೆರೆಯಲು ಅನುಮತಿ ಸಿಕ್ಕಿರುವುದು ಚಲನಚಿತ್ರ ನಿರ್ಮಾಪಕರಲ್ಲಿ ಉತ್ಸಾಹ ತರಿಸಿದ್ದು, ನಿರ್ಮಿಸುವ ಚಲನಚಿತ್ರಗಳಿಗೆ ಹಣ ನೀಡುವಂತೆ ಮನವಿ ಮಾಡಿದ್ದಾರೆ. ನಮ್ಮ ಕೆಲಸವನ್ನು ಸಂತೋಷದಿಂದ ಮಾಡುತ್ತಿದ್ದೇವೆ. ನಮ್ಮ ಪಾಕೆಟ್ ಮನಿಯಿಂದ ಸಿನಿಮಾಕ್ಕೆ ಖರ್ಚು ಮಾಡಿದ್ದೇವೆ. ಹಾಗಾಗಿ ಚಿತ್ರ ನಿರ್ಮಾಣಕ್ಕೆ ಹಣ ನೀಡುವಂತೆ ಮನವಿ ಮಾಡಿರುವುದಾಗಿ ಕಲಾವಿದ ಫಯಾಜ್ ಇಫ್ತಿಕರ್ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಮುಖಂಡ ಝಹ್ರಾ ಮುರ್ತಝಾವಿ, ಸಿನಿಮಾ ಕ್ಷೇತ್ರದಲ್ಲಿ ಮಹಿಳೆಯರನ್ನು ನಿಷೇಧಿಸಬಾರದು. ಏಕೆಂದರೆ ಇದು ಮಹಿಳೆಯರ ಹಕ್ಕು. ಮಹಿಳೆಯರ ಉಪಸ್ಥಿತಿಯಿಲ್ಲದೇ ಚಲನಚಿತ್ರವು ಉತ್ತಮವಾಗಿ ಮೂಡಿಬರುತ್ತದೆ ಎಂದು ನನಗೆ ಅನ್ನಿಸುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮೆರಿಕಾದ ಸಿಯಾಟಲ್‍ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ
ತಾಲಿಬಾನ್ ಕಳೆದ ತಿಂಗಳು ಮಹಿಳೆಯರು ಹಾಗೂ ಹುಡುಗಿಯರು ಅಗತ್ಯವಿಲ್ಲದೇ ಮನೆಯಿಂದ ಹೊರಗೆ ಬಾರದಂತೆ ಹಾಗೂ ಮುಖ ತೋರಿಸದಂತೆ ಆದೇಶಿಸಿತ್ತು. ಇದಕ್ಕೂ ಮುನ್ನ ಹೆಣ್ಣುಮಕ್ಕಳಿಗೆ ಮಾಧ್ಯಮಿಕ ಶಿಕ್ಷಣವನ್ನು ನಿಷೇಧಿಸಿತ್ತು.
Live Tv
[brid partner=56869869 player=32851 video=960834 autoplay=true]
ದುಬೈ: ಅಫ್ಘಾನಿಸ್ತಾನ ವಿರುದ್ಧ ಅಬ್ಬರಿಸುವ ವಿಶ್ವಾಸದಲ್ಲಿದ್ದ ಶ್ರೀಲಂಕಾಗೆ ಆಘಾತವಾಗಿದೆ. ಏಷ್ಯಾಕಪ್ ಉದ್ಘಾಟನಾ ಪಂದ್ಯದಲ್ಲೇ ಶ್ರೀಲಂಕಾ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲವಾಗಿ ಅಫ್ಘಾನಿಸ್ತಾನದ ಎದುರು ಸೋಲನುಭವಿಸಿದೆ. ಉತ್ತಮ ಶುಭಾರಂಭ ನೀಡಿದ ಆಫ್ಘನ್ ತಂಡವು 8 ವಿಕೆಟ್‌ಗಳ ಸುಲಭ ಜಯ ಸಾಧಿಸಿ ಬೀಗಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಅಫ್ಘಾನಿಸ್ತಾನ ಮೊದಲು ಲಂಕಾಗೆ ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು. ಮೊದಲ ಪಂದ್ಯದಲ್ಲೇ ಅಬ್ಬರಿಸಲು ಮುಂದಾದ ಲಂಕಾ ಬ್ಯಾಟಿಂಗ್ ವೈಫಲ್ಯದಿಂದ 19.4 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 105 ರನ್‌ಗಳಿಸಿತು. ಅಲ್ಪಮೊತ್ತದ ಗುರಿ ಬೆನ್ನತ್ತಿದ ಆಫ್ಘನ್ 10.1 ಓವರ್‌ಗಳಲ್ಲೇ 2 ವಿಕೆಟ್ ನಷ್ಟಕ್ಕೆ 106 ರನ್‌ಗಳಿಸುವ ಮೂಲಕ ಸುಲಭ ಜಯ ಸಾಧಿಸಿತು.
ಟಾಸ್ ಗೆದ್ದು ನಂತರ ಬ್ಯಾಟ್‌ಮಾಡಿದ ಆಫ್ಘನ್ ತಂಡ ಉತ್ತಮ ಶುಭಾರಂಭ ನೀಡಿತು. ಆರಂಭಿಕರಾಗಿ ಕ್ರೀಸ್‌ಗಿಳಿದ ಹಜರತುಲ್ಲಾ ಝಝೈ ಹಾಗೂ ರಹಮಾನುಲ್ಲಾ ಗುರ್ಬಾಜ್ ಆರಂಭದಿಂದಲೇ ಲಂಕಾ ವಿರುದ್ಧ ಅಬ್ಬರಿಸಲು ಶುರು ಮಾಡಿದರು. ಈ ವೇಳೆ ಹಜರತುಲ್ಲಾ ಝಝೈ 28 ಎಸೆತಗಳಲ್ಲಿ 37 ರನ್ (5 ಬೌಂಡರಿ, 1 ಸಿಕ್ಸರ್) ಗಳಿಸಿ ಅಜೇಯರಾಗುಳಿದರು. ಮತ್ತೊಬ್ಬ ಆರಂಭಿಕನಾಗಿದ್ದ ರಹಮಾನುಲ್ಲಾ ಗುರ್ಬಾಜ್ ಕೇವಲ 18 ಎಸೆತಗಳಲ್ಲಿ 40 ರನ್(3 ಬೌಂಡರಿ, 4 ಸಿಕ್ಸರ್) ಚಚ್ಚಿ ಆಫ್ಘನ್ ತಂಡ ಗೆಲುವಿಗೆ ಕಾರಣರಾದರು. ನಂತರದಲ್ಲಿ ಬಂದ ಇಬ್ರಾಹಿಂ ಜದ್ರಾನ್ 13 ಎಸೆತಗಳಲ್ಲಿ 15 ರನ್ ಗಳಿಸಿ ಪೆವಿಲಿಯನ್ ಸೇರಿದರೆ ನಜೀಬುಲ್ಲಾ ಜದ್ರಾನ್ 2 ರನ್‌ಗಳಿಸಿ ಅಜೇಯರಾಗುಳಿದರು.
ಮಿಂಚಿದ ಬೌಲರ್‌ಗಳು:
ಆಫ್ಘಾನಿಸ್ತಾನ ಪರ ಫಾರೂಖಿ 3 ವಿಕೆಟ್ ಕಬಳಿಸಿ ಮಿಂಚಿದರು. ಮುಜೀಬ್ ಯಆರ್ ರೆಹಮಾನ್ 2 , ನಾಯಕ ಮೊಹಮ್ಮದ್ 2 ಹಾಗೂ ನವೀನ್ ಉಲ್ ಹಕ್ 1 ವಿಕೆಟ್ ಕಬಳಿಸಿದರು.
ಟಾಸ್ ಸೋತು ಕ್ರೀಸ್‌ಗಿಳಿದ ಶ್ರೀಲಂಕಾ ತಂಡಕ್ಕೆ ಆರಂಭದಲ್ಲೇ ಆಫ್ಘಾನಿಸ್ತಾನ ಬೌಲರ್‌ಗಳು ಶಾಕ್ ನೀಡಿದರು. ಆಫ್ಘನ್ನಿನ ಫಜಲಾಖ್ ಫಾರೂಖಿ, ಮುಜೀಬ್ ಹಾಗೂ ನಬಿ ಬೌಲಿಂಗ್ ದಾಳಿಗೆ ರನ್ ಕಲೆಹಾಕುವಲ್ಲಿ ಲಂಕಾ ತಂಡ ಹೆಣಗಾಡಿತ್ತು. ಆದರೆ ಭಾನುಕಾ ರಾಜಪಕ್ಸೆ ಹಾಗೂ ಚಾಮಿಕ ಕರುಣಾರತ್ನೆ ಹೋರಾಟದಿಂದ ಶ್ರೀಲಂಕಾ 100 ರನ್ ಗಡಿ ದಾಟಿತು.
ಕುಸಾಲ್ ಮೆಂಡಿಸ್ ಕೇವಲ 2 ರನ್ ಗಳಿಸಿ ಔಟಾದರು. ಇದರ ಬೆನ್ನಲ್ಲೇ ಚಾರಿತ್ ಅಸಲಂಕಾ ಡಕೌಟ್ ಆದರು. ಆರಂಭದಲ್ಲೇ ಫಾರೂಖಿ ಎರಡು ಪ್ರಮುಖ ವಿಕೆಟ್ ಕಬಳಿಸಿ ಆಫ್ಘಾನಿಸ್ತಾನಕ್ಕೆ ಭರ್ಜರಿ ಮೇಲುಗೈ ತಂದುಕೊಟ್ಟರು. ಪಥುಮ್ ನಿಸಾಂಕ 3 ರನ್ ಗೆ ಔಟಾದರು. ಶ್ರೀಲಂಕಾ 5 ರನ್ ಗಳಿಸುವಷ್ಟರಲ್ಲೇ ಪ್ರಮುಖ 3 ವಿಕೆಟ್ ಕಳೆದುಕೊಂಡಿತು. ನಂತರದಲ್ಲಿ ಬಂದ ದಸೂನ್ ಗುಣತಿಲಕ 17 ರನ್ ಗಳಿಸಿ ಪೆವಿಲಿಯನ್ ಸೇರಿದರು. ಭಾನುಕಾ ರಾಜಪಕ್ಸ ಹೋರಾಟ ನೀಡಿದರೆ, ಇತರ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ತಿಣುಕಾಡಿದರು. ವಾನಿಂದು ಹಸರಂಗ 2 ರನ್‌ಗೆ ಔಟಾದರು. ಇತ್ತ ನಾಯಕ ದಸೂನು ಶನಕಾ ಸಹ ಡಕೌಟ್ ಆದರು.
ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಚಾಮಿಕ ಕರುಣಾರತ್ನೆ ಹಾಗೂ ಭಾನುಕಾ ರಾಜಪಕ್ಸ ಲಂಕಾ ತಂಡಕ್ಕೆ ಆಸರೆಯಾದರು. ಭಾನುಕ 38 ರನ್ ಸಿಡಿಸಿದರೆ ಚಾಮಿಕಾ 31ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇವರಿಬ್ಬರ ಆಸರೆಯಿಂದ ಲಂಕಾ 19.4 ಓವರ್‌ಗಳಲ್ಲಿ 105 ರನ್‌ಗಳಿಸಿತು. ನಂತರದ ಬ್ಯಾಟರ್‌ಗಳು ಸ್ಥಿರವಾಗಿ ನಿಲ್ಲದ ಕಾರಣ ಲಂಕಾ ಮೊದಲ ಪಂದ್ಯದಲ್ಲಿ ಸೋಲನ್ನು ಅನುಭವಿಸಿತು.
Live Tv
[brid partner=56869869 player=32851 video=960834 autoplay=true]
ಕಾಬೂಲ್: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಅಲ್ಲಿನ ವಿದ್ಯಾರ್ಥಿಗಳ ಪಾಡು ಹೇಳತೀರದಂತಾಗಿದೆ. ಅಧ್ಯಯನಕ್ಕೆ ವಿದೇಶಕ್ಕೆ ತೆರಳಲು ವೀಸಾ ಸಿಗದೇ ಸಿಲುಕಿಕೊಂಡಿದ್ದಾರೆ. ಓದಿನ ಹಂಬಲದಲ್ಲಿ ಅಫ್ಘನ್‌ನ ಯುವತಿಯೊಬ್ಬಳು ಮೋದಿ ಬಳಿ ಮನವಿ ಮಾಡಿಕೊಂಡಿದ್ದಾಳೆ.
ಅಫ್ಘಾನಿಸ್ತಾನದ ಕಾಲೇಜು ವಿದ್ಯಾರ್ಥಿನಿ ಫಾತಿಮಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಅಧ್ಯಯನ ಮಾಡಲು ವೀಸಾ ಪಡೆಯಲು ತೊಂದರೆಯಾಗುತ್ತಿರುವ ಬಗ್ಗೆ ಹೇಳಿಕೊಂಡಿದ್ದಾಳೆ. ನಾನು ಅಫ್ಘಾನಿಸ್ತಾನದ ಕಾಲೇಜು ಹುಡುಗಿ ಫಾತಿಮಾ, ಭಾರತದಲ್ಲಿ ಅಧ್ಯಯನವನ್ನು ಮುಂದುವರಿಸಲು ನನಗೆ ಸಹಾಯ ಮಾಡುವಂತೆ ಭಾರತದ ಪ್ರಧಾನಿಗೆ ಮನವಿ ಮಾಡುತ್ತೇನೆ. ನಾವು ಭಾರತವನ್ನು ಪ್ರೀತಿಸುತ್ತೇವೆ ಅದು ನಮ್ಮ ಕುಟುಂಬದಂತೆಯೇ ಎಂದು ಫಾತಿಮಾ ವೀಡಿಯೊದಲ್ಲಿ ಹೇಳಿದ್ದಾಳೆ. ಇದನ್ನೂ ಓದಿ: ಸಿದ್ದರಾಮೋತ್ಸವ ಬಳಿಕ ಮತ್ತೊಮ್ಮೆ ಶಕ್ತಿ ಪ್ರದರ್ಶನಕ್ಕೆ ಪ್ಲಾನ್- ಆಗಸ್ಟ್ 26ರಂದು ನಡೆಯುತ್ತಾ ಹೈಡ್ರಾಮಾ..?
ಭಾರತದಲ್ಲಿ ಓದುತ್ತಿರುವ ಸುಮಾರು 5,000 ಅಫ್ಘಾನಿಸ್ತಾನದ ವಿದ್ಯಾರ್ಥಿಗಳು ಕಳೆದ ವರ್ಷದಿಂದ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ. ತಮಗೆ ವೀಸಾ ದೊರೆಯುತ್ತಿರದ ಕಾರಣ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾಳೆ. ಇದನ್ನೂ ಓದಿ: ಸಿಬಿಐ ದಾಳಿ ಬೆನ್ನಲ್ಲೇ 12 ಐಎಎಸ್ ಅಧಿಕಾರಿಗಳ ವರ್ಗಾವಣೆ
ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಭಾರತದ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾದ ಆಫ್ಘನ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಗಿಸಲು ವೀಸಾಗಳಿಗಾಗಿ ಕಾಯುತ್ತಿದ್ದಾರೆ. ಮೇ 2022 ರಲ್ಲಿ, ವಿದ್ಯಾರ್ಥಿಗಳು ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಹೊರಗೆ ಜಮಾಯಿಸಿ, ಭಾರತ ಸರ್ಕಾರ ಸಾಧ್ಯವಾದಷ್ಟು ಬೇಗ ಇ-ವೀಸಾಗಳನ್ನು ನೀಡಬೇಕೆಂದು ಮನವಿ ಮಾಡುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಅಫ್ಘಾನಿಸ್ತಾನದಲ್ಲಿ ಭಾರತ ಆರಂಭಿಸಿರುವ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ದುಲ್ ಕಹರ್ ಬಾಲ್ಕಿ ಒತ್ತಾಯಿಸಿದ್ದಾರೆ. ತಾಲಿಬಾನ್ ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನಲೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆಯನ್ನು ಅವರು ನೀಡಿದ್ದಾರೆ.
Taliban Foreign Ministry spokesman Abdul Qahar Balkhi said on the eve of the anniversary of their return to power that their “nascent government” has quickly brought security to the country and it “has begun treading the path of peace, stability and prosperity.” https://t.co/i5Ox4Rpmonpic.twitter.com/gskZCQvx5P
ಎರಡು ದೇಶಗಳ ನಡುವಿನ ರಾಜತಾಂತ್ರಿಕ ಮಿಷನ್ ಅನ್ನು ನವೀಕರಿಸಬೇಕು, ನಾವು ಮಾನವೀಯ ಅಂಶಗಳೊಂದಿಗೆ ಅಭಿವೃದ್ಧಿ ಮುಂದುವರಿಸುತ್ತೇವೆ, ಮೊದಲ ಹಂತವಾಗಿ ಭಾರತ ಆರಂಭಿಸಿದ ಕೆಲವು ಅಪೂರ್ಣ ಯೋಜನೆಗಳನ್ನು ಪೂರ್ಣಗೊಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: Bigg Boss: ಮೂಡ್ ಇಲ್ಲ ಅಂದ್ರೆ ಮೂರು ದಿನ ಸ್ನಾನ ಮಾಡಲ್ಲ: ಸೋನು ಶ್ರೀನಿವಾಸ್ ಗೌಡ
ಕಾಬೂಲ್‌ನಲ್ಲಿರುವ ಶಾಹಟೂತ್ ಅಣೆಕಟ್ಟು ಯೋಜನೆಯನ್ನು ಉಲ್ಲೇಖಿಸಿದ ಅವರು, ಭಾರತವು ಹಲವಾರು ವಿಭಿನ್ನ ಯೋಜನೆಗಳನ್ನು ಅಘ್ಫಾನಿಸ್ತಾನದಲ್ಲಿ ಆರಂಭಿಸಿದೆ, ಅವು ಅಪೂರ್ಣವಾಗಿವೆ ಅವುಗಳನ್ನು ಪೂರ್ಣಗೊಳಿಸದಿದ್ದರೆ ವ್ಯರ್ಥವಾಗುತ್ತದೆ ಹೀಗಾಗಿ ಆ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಲು ನಾವು ಅವರನ್ನು ಒತ್ತಾಯಿಸಿದ್ದೇವೆ ಅಬ್ದುಲ್ ಕಹರ್ ಬಾಲ್ಕಿ ಹೇಳಿದರು.
ಪ್ರಮುಖ ರಸ್ತೆಗಳು, ಅಣೆಕಟ್ಟುಗಳು, ವಿದ್ಯುತ್ ಪ್ರಸರಣ ಮಾರ್ಗಗಳು, ಸಬ್‌ಸ್ಟೇಷನ್‌ಗಳು, ಶಾಲೆಗಳು, ಆಸ್ಪತ್ರೆಗಳು ಸೇರಿದಂತೆ ಅಫ್ಘಾನಿಸ್ತಾನಕ್ಕೆ ಭಾರತದ ಅಭಿವೃದ್ಧಿ ನೆರವು 20 ವರ್ಷಗಳಲ್ಲಿ 3 ಶತಕೋಟಿಗೂ ಡಾಲರ್‌ಗೂ ಹೆಚ್ಚು ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ. ಆದರೆ ಅಘ್ಫಾನ್ ಮನವಿಗೆ ಇನ್ನು ಭಾರತ ಸ್ಪಂದಿಸಿಲ್ಲ. ಇದನ್ನೂ ಓದಿ: ತನ್ನ ಪತಿಯನ್ನು ಖುಷಿಯಾಗಿರಿಸಲು ಮೂವರು ಸುಂದರಿಯರನ್ನ ಕೆಲಸಕ್ಕೆ ನೇಮಿಸಿದ ಪತ್ನಿ!
ಭಾರತವು ಇತ್ತೀಚೆಗೆ ಕಾಬೂಲ್‌ನಲ್ಲಿ ತನ್ನ ರಾಯಭಾರ ಕಚೇರಿಯನ್ನು ಪುನಃ ತೆರೆದಿದೆ, ಆಗಸ್ಟ್ 15, 2021 ರಂದು ಅಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು.ಸದ್ಯ ರಾಯಭಾರಿ ಕಚೇರಿಯ ಕಾರ್ಯ ಆರಂಭಿಸಿದ್ದು, ಭದ್ರತೆಗಾಗಿ ITBP ಯ ತುಕಡಿಯನ್ನು ಕಳುಹಿಸಲಾಗಿದೆ.
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ನಡೆದ ಬಾಂಬ್ ದಾಳಿಗೆ ತಾಲಿಬಾನ್ ಪ್ರಖ್ಯಾತ ಧರ್ಮಗುರು ಶೇಖ್ ರಹೀಮುಲ್ಲಾ ಹಕ್ಕಾನಿ ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಬೂಲ್‌ನಲ್ಲಿ ಧಾರ್ಮಿಕ ಸೆಮಿನಾರ್‌ನಲ್ಲಿ ಈ ಘಟನೆ ನಡೆದಿದೆ. ಈ ಹಿಂದೆ ಕಾಲು ಕಳೆದುಕೊಂಡಿದ್ದ ವ್ಯಕ್ತಿ ನಂತರ ಪ್ಲಾಸ್ಟಿಕ್ ಕಾಲು ಅಳವಡಿಸಿಕೊಂಡಿದ್ದು, ಅದರಲ್ಲಿ ಸ್ಫೋಟಕಗಳನ್ನು ಇಟ್ಟುಕೊಂಡಿದ್ದ. ಸೆಮಿನಾರ್‌ನಲ್ಲಿ ಈ ಸ್ಫೋಟಕಗಳನ್ನು ಸ್ಫೋಟಿಸಿದ್ದಾನೆ ಎಂದು ತಾಲಿಬಾನ್ ತಿಳಿಸಿದೆ.
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ಅಲ್ಪಸಂಖ್ಯಾತ ಶಿಯಾ ಸಮುದಾಯದವರು ಹೆಚ್ಚಿರುವ ಪ್ರದೇಶದ ಮಸೀದಿ ಬಳಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡಿದ್ದು, 8 ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಅಧಿಕಾರಿ ತಿಳಿಸಿದ್ದಾರೆ.
ಕಾಬೂಲ್ ಪೊಲೀಸ್ ಮುಖ್ಯಸ್ಥರಾಗಿ ತಾಲಿಬಾನ್ ನೇಮಿಸಿರುವ ವಕ್ತಾರ ಖಾಲಿದ್ ಜದ್ರಾನ್ ಪ್ರಕಾರ, ಪಶ್ಚಿಮ ಕಾಬೂಲ್‌ನಲ್ಲಿ ಸರ್-ಇ ಕರೇಜ್ ಪ್ರದೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಇಬ್ಬರು ಮೃತಪಟ್ಟಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸೇರಿಸುವಷ್ಟರಲ್ಲಿ ಸಾವಿನ ಸಂಖ್ಯೆ ಏರಿತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾದೊಂದಿಗಿನ ಉದ್ವಿಗ್ನದ ಮಧ್ಯೆ ತೈವಾನ್ ರಕ್ಷಣಾ ಅಧಿಕಾರಿ ಶವವಾಗಿ ಪತ್ತೆ
ಶತ್ರುಗಳು ಪವಿತ್ರ ದಿನದಂದೇ ದಾಳಿ ನಡೆಸಿ ಅಮಾಯಕರನ್ನು ಕೊಂದಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಜದ್ರಾನ್ ಮಾಹಿತಿ ನೀಡಿದ್ದಾರೆ.
ದಾಳಿ ಹೊಣೆಗಾರಿಕೆಯನ್ನು ಈವರೆಗೂ ಯಾರೂ ಹೊತ್ತಿಲ್ಲ. ಆದರೆ ಈ ಹಿಂದಿನ ದೊಡ್ಡ ಪ್ರಮಾಣದ ದಾಳಿಗಳಲ್ಲಿ ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಶಿಯಾ ಸಮುದಾಯದವರನ್ನು ಗುರಿಯಾಗಿಸಿಕೊಂಡಿರುವ ಇಸ್ಲಾಮಿಕ್ ಸ್ಟೇಟ್ ಗುಂಪಿನ ವಿರುದ್ಧ ಆರೋಪ ಕೇಳಿಬರುತ್ತಿದೆ. ಇದನ್ನೂ ಓದಿ: ಕಷ್ಟದ ದಿನಗಳು ಹತ್ತಿರದಲ್ಲೇ ಇದೆ: ಪಾಕಿಸ್ತಾನ ಹಣಕಾಸು ಸಚಿವ ಎಚ್ಚರಿಕೆ
ಅಮೆರಿಕ ತನ್ನ ಸೇನೆಯನ್ನು ವಾಪಸ್ ಕರೆಸಿಕೊಂಡ ಮೇಲೆ ಅಪ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತೆ ಅಧಿಕಾರ ಸ್ಥಾಪಿಸಿತು. ಇದಾದ ಬಳಿಕ ದೇಶಾದ್ಯಂತ ಮಸೀದಿಗಳು, ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಇಸ್ಲಾಮಿಕ್ ಸ್ಟೇಟ್ (ಐಎಸ್) ದಾಳಿ ನಡೆಸುತ್ತಿದೆ.
2014 ರಿಂದ ಅಫ್ಘಾನಿಸ್ತಾನದಲ್ಲಿ ಕಾರ್ಯಪ್ರವೃತ್ತವಾಗಿರುವ ಐಎಸ್, ದೇಶದ ತಾಲಿಬಾನ್ ಆಡಳಿತಗಾರರನ್ನು ಎದುರುಹಾಕಿಕೊಂಡಿದೆ. ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ತಾಲಿಬಾನ್ ದೇಶದ ಪೂರ್ವದಲ್ಲಿರುವ IS ಪ್ರಧಾನ ಕಚೇರಿ ಮೇಲೆ ದಾಳಿ ಕೂಡ ನಡೆಸಿತ್ತು.
Live Tv
[brid partner=56869869 player=32851 video=960834 autoplay=true]
ವಾಷಿಂಗ್ಟನ್: ಅಲ್‍ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್ ಝವಾಹಿರಿಗೆ ಆಶ್ರಯ ನೀಡುವ ಮೂಲಕ ತಾಲಿಬಾನ್ ದೋಹಾ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಕಿಡಿಕಾರಿದ್ದಾರೆ.
ಅಫ್ಗಾನಿಸ್ತಾನದಲ್ಲಿ ನಡೆದ ಅಮೆರಿಕದ ಡ್ರೋನ್ ದಾಳಿಯಲ್ಲಿ ಆಯ್ಮಾನ್ ಅಲ್ ಝವಾಹಿರಿಯನ್ನು ಹತ್ಯೆ ಮಾಡಲಾಗಿದೆ. ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಆಯ್ಮಾನ್ ಅಲ್ ಝವಾಹಿರಿ, ಒಸಾಮಾ ಬಿಲ್ ಲಾಡೆನ್ ನಂತರದಲ್ಲಿ ಅಲ್‍ಖೈದಾ ಮುಖ್ಯಸ್ಥನಾಗಿದ್ದ. 2001ರ ಸೆಪ್ಟೆಂಬರ್ 11ರಂದು ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದಿದ್ದ ದಾಳಿಯ ಪ್ರಮುಖ ಶಂಕಿತ ಸಂಚುಕೋರನೂ ಆಗಿದ್ದನು. ಜೊತೆಗೆ ಜಾಗತಿಕ ಭಯೋತ್ಪಾದನಾ ಜಾಲದ ಪ್ರಮುಖ ಆದರ್ಶವಾದಿಯಾಗಿದ್ದ ಎಂದು ಹೇಳಲಾಗಿದೆ. ಇದನ್ನೂ ಓದಿ: ಅಲ್‌ಖೈದಾ ಮುಖ್ಯಸ್ಥ ಝವಾಹಿರಿ ಹತ್ಯೆ- ಮೋಸ್ಟ್ ವಾಂಟೆಡ್ ಉಗ್ರನ ಮೇಲೆ ಡ್ರೋಣ್ ಸ್ಟ್ರೈಕ್
ಈ ಹಿನ್ನೆಲೆ ಆಂಟೋನಿ ಬ್ಲಿಂಕೆನ್ ಅಸಮಾಧಾನ ವ್ಯಕ್ತಪಡಿಸಿದ್ದು, ಝವಾಹಿರಿಗೆ ಆಶ್ರಯ ನೀಡುವ ಮೂಲಕ ತಾಲಿಬಾನ್ ದೋಹಾ ಒಪ್ಪಂದವನ್ನು ‘ತೀವ್ರವಾಗಿ’ ಉಲ್ಲಂಘಿಸಿದೆ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ.
ತಾಲಿಬಾನ್ ಅವರು ತಮ್ಮ ಒಪ್ಪಂದಗಳಿಗೆ ಬದ್ಧವಾಗಿರಲು ಅಸಮರ್ಥವಾಗಿದೆ. ಈ ಹಿನ್ನೆಲೆ ನಾವು ಅಫ್ಘಾನ್ ಜನರನ್ನು ಮಾನವೀಯ ನೆರವಿನೊಂದಿಗೆ ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಅವರ ಮಾನವ ಹಕ್ಕುಗಳ ರಕ್ಷಣೆಗಾಗಿ, ವಿಶೇಷವಾಗಿ ಮಹಿಳೆಯರು ಮತ್ತು ಹುಡುಗಿಯರ ರಕ್ಷಣೆಗಾಗಿ ಪ್ರತಿಪಾದಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಲಸಿನ ಹಣ್ಣಿಗಾಗಿ ಗಜರಾಜನ ಸರ್ಕಸ್ – ಕೊನೆಗೆ ಏನಾಯ್ತು ನೋಡಿ
Live Tv
[brid partner=56869869 player=32851 video=960834 autoplay=true]