Tag: afghanistan

  • ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ಬ್ಯಾನ್ ಮಾಡಿದ ತಾಲಿಬಾನ್

    ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ಬ್ಯಾನ್ ಮಾಡಿದ ತಾಲಿಬಾನ್

    ಕಾಬೂಲ್: ಆಫ್ಘಾನಿಸ್ತಾನದ ತಾಲಿಬಾನ್ ಆಡಳಿತವು ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ (ವಾಹನ ಪರವಾನಗಿ) ನೀಡುವುದನ್ನು ನಿಲ್ಲಿಸಿದೆ.

    ಆಹಾರ ಮತ್ತು ಇತರ ಅಗತ್ಯ ವಸ್ತುಗಳ ಸರಬರಾಜುಗಳ ತೀವ್ರ ಕೊರತೆಯೊಂದಿಗೆ ದೇಶವು ವಿನಾಶಕಾರಿ ಮಾನವೀಯ ಬಿಕ್ಕಟ್ಟಿನಿಂದ ಬಳಲುತ್ತಿರುವ ಸಂದರ್ಭದಲ್ಲಿ ಈ ನಿಷೇಧವನ್ನು ಹೇರಲಾಗಿದೆ. ಇದನ್ನೂ ಓದಿ: ಮೋದಿ ಗಿಫ್ಟ್‌ಗೆ ವಿಶೇಷ ಸ್ಥಾನಕೊಟ್ಟ ಡೆನ್ಮಾರ್ಕ್ ಪ್ರಧಾನಿ

    ತಾಲಿಬಾನ್ ವಶಪಡಿಸಿಕೊಳ್ಳುವ ಮೊದಲು ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಕಾಬೂಲ್ ಸೇರಿದಂತೆ ದೇಶದ ಕೆಲವು ಪ್ರಮುಖ ನಗರಗಳಲ್ಲಿ ವಾಹನ ಚಲಾಯಿಸುವ ಹಕ್ಕು ಹೊಂದಿದ್ದರು. ಆದರೆ ತಾಲಿಬಾನ್ ಈಗ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ವಿತರಿಸುವುದನ್ನು ನಿಲ್ಲಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಆಫ್ಘನ್ ಸರ್ಕಾರದ ಪತನ ಮತ್ತು ತಾಲಿಬಾನ್ ಅಧಿಕಾರಕ್ಕೆ ಮರಳಿದ ನಂತರ ಆಫ್ಘಾನಿಸ್ತಾನದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿ ಹದಗೆಟ್ಟಿದೆ. ದೇಶದಲ್ಲಿ ಹೋರಾಟ ಕೊನೆಗೊಂಡಿದ್ದರೂ, ಮಾನವ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿದೆ. ಜೊತೆಗೆ ಮಹಿಳೆಯರ ಹಕ್ಕುಗಳನ್ನೂ ಕಸಿಯಲಾಗುತ್ತಿದೆ. ಇದನ್ನೂ ಓದಿ: 11 ಲಕ್ಷ ಪ್ರಜೆಗಳು ಇದೀಗ ರಷ್ಯಾದ ಒತ್ತೆಯಾಳುಗಳು: ಉಕ್ರೇನ್ ಆರೋಪ

    ಈಚೆಗಷ್ಟೇ ತಾಲಿಬಾನ್ ಆಡಳಿತವು, ಆಫ್ಘಾನಿಸ್ತಾನದಲ್ಲಿ 6ನೇ ತರಗತಿ ಮುಗಿಸಿದ ನಂತರ ಹೆಣ್ಣುಮಕ್ಕಳು ಶಾಲೆಗೆ ಹೋಗುವುದನ್ನು ನಿಷೇಧಿಸಿತು. ಈ ನಡೆ ವಿಶ್ವಾದ್ಯಂತ ಖಂಡನೆಗೆ ಕಾರಣವಾಯಿತು. ‘ಶಿಕ್ಷಕರ ಕೊರತೆ ಇರುವುದರಿಂದ ಈ ಕ್ರಮಕೈಗೊಳ್ಳಲಾಗಿದೆ. ಶೀಘ್ರದಲ್ಲೇ 6ನೇ ತರಗತಿ ನಂತರವೂ ಹೆಣ್ಣುಮಕ್ಕಳು ಶಾಲೆಗಳಲ್ಲಿ ಶಿಕ್ಷಣ ಕಲಿವುದನ್ನು ಪುನಾರಂಭಿಸಲಾಗುವುದು ಎಂದು ತಾಲಿಬಾನ್ ಹೇಳಿತ್ತು.

    ಆಫ್ಘಾನಿಸ್ತಾನ ಈಗ ವಿಶ್ವದಲ್ಲೇ ಅತಿ ಹೆಚ್ಚು ತುರ್ತು ಆಹಾರ ಅಭದ್ರತೆಯ ಸಮಸ್ಯೆ ಎದುರಿಸುತ್ತಿದೆ. ದೇಶದಲ್ಲಿ ಶೇ.95ರಷ್ಟು ಜನತೆ ಆಹಾರ ಕೊರತೆಯಿಂದ ಬಳಲುತ್ತಿದ್ದಾರೆ. ಇದನ್ನೂ ಓದಿ: ಪುಟಿನ್‌ಗೆ ಕ್ಯಾನ್ಸರ್‌ – ಯುದ್ಧದ ವೇಳೆ ಅಧಿಕಾರ ಹಸ್ತಾಂತರ ಸಾಧ್ಯತೆ!

  • ಕಾಬೂಲ್ ಮಸೀದಿಯಲ್ಲಿ ಸ್ಫೋಟ – 50ಕ್ಕೂ ಹೆಚ್ಚು ಮಂದಿ ಸಾವು

    ಕಾಬೂಲ್ ಮಸೀದಿಯಲ್ಲಿ ಸ್ಫೋಟ – 50ಕ್ಕೂ ಹೆಚ್ಚು ಮಂದಿ ಸಾವು

    ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ಬಳಿಕ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಅಫ್ಘಾನಿಸ್ತಾನದ ರಾಜಧಾನಿಯಲ್ಲಿರುವ ಖಲೀಫಾ ಸಾಹಿಬ್ ಮಸೀದಿಯಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದೆ ಎಂದು ಆಂತರಿಕ ಸಚಿವಾಲಯದ ಉಪ ವಕ್ತಾರ ಬೆಸ್ಮುಲ್ಲಾ ಹಬೀಬ್ ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ ಪಡೆ ನನ್ನನ್ನು ಸೆರೆ ಹಿಡಿಯಲು ಭಾರೀ ಹತ್ತಿರದಲ್ಲಿತ್ತು: ಝೆಲೆನ್ಸ್ಕಿ

    ಪ್ರಾರ್ಥನೆಯ ಬಳಿಕ ಸುನ್ನಿ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಜನರು ಜಮಾಯಿಸಿದ್ದ ಸಂದರ್ಭದಲ್ಲಿ ಸ್ಫೋಟ ನಡೆದಿದೆ. ಸಭೆಯಲ್ಲಿ ಆತ್ಮಾಹುತಿ ಬಾಂಬರ್ ಸೇರಿಕೊಂಡಿದ್ದು, ಸ್ಫೋಟವನ್ನು ನಡೆಸಿದ್ದಾನರ ಎಂದು ಮಸೀದಿಯ ಮುಖ್ಯಸ್ಥ ಸೈಯದ್ ಫಾಜಿಲ್ ಅಘಾ ತಿಳಿಸಿದ್ದಾರೆ. ಇದನ್ನೂ ಓದಿ: ಚೀನಿಗಳಿಗೆ ವೀಸಾ ಬಂದ್ ಮಾಡಿದ ಬೆನ್ನಲ್ಲೇ ಭಾರತೀಯ ವಿದ್ಯಾರ್ಥಿಗಳಿಗೆ ಬನ್ನಿ ಎಂದ ಚೀನಾ

    ಘಟನೆಯ ಬಳಿಕ ಆಸ್ಪತ್ರೆಗೆ 66 ಮೃತ ದೇಹಗಳು ಹಾಗೂ 78 ಗಾಯಾಳುಗಳನ್ನು ಸಾಗಿಸಲಾಗಿದೆ ಎಂದು ವರದಿಯಾಗಿದೆ.

  • ಕುಂದುಜ್ಹ್‌ ಮಸೀದಿ ಮೇಲೆ ಬಾಂಬ್ ದಾಳಿ- 10ಕ್ಕೂ ಹೆಚ್ಚು ಮಂದಿ ದಾರುಣ ಸಾವು

    ಕುಂದುಜ್ಹ್‌ ಮಸೀದಿ ಮೇಲೆ ಬಾಂಬ್ ದಾಳಿ- 10ಕ್ಕೂ ಹೆಚ್ಚು ಮಂದಿ ದಾರುಣ ಸಾವು

    ಕಾಬೂಲ್: ಅಫ್ಘಾನಿಸ್ತಾನದ ಮಝಾರ್ ಇ-ಷರೀಫ್ ಮಸೀದಿ ಮೇಲೆ ಉಗ್ರರು ಬಾಂಬ್ ಸ್ಫೋಟ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 65 ಜನರು ಗಾಯಗೊಂಡಿರುವ ಘಟನೆ ನಡೆದಿದೆ.

    BOMB BLAST (1)

    ಪ್ರಾರ್ಥನಾ ಸಮಯದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಉತ್ತರ ಅಫ್ಘಾನ್ ನಗರದ ಶಿಯಾ ಪಂಗಡದ ಮಝಾರ್ ಇ ಷರೀಫ್ ಮಸೀದಿ ಮೇಲೆ ಬಾಂಬ್ ದಾಳಿ ನಡೆಸಿರುವುದು ತಾನೇ ಎಂದು ತಾಲಿಬಾನ್‌ನ ಸ್ಥಳೀಯ ಮುಖಂಡನೊಬ್ಬ ಹೊಣೆ ಹೊತ್ತುಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಮಾಹಿತಿಯನ್ನು ಪೊಲೀಸ್ ವಕ್ತಾರ ಒಬೈದುಲ್ಲಾ ಅಬೇದಿ ಎಎಫ್‌ಪಿಗೆ ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿಮಾಡಿದೆ. ಇದನ್ನೂ ಓದಿ: ಇಮ್ಲಿವಾಲಿ ಮಸೀದಿ ಮುಂದೆ ನಮಾಜ್ ಮಾಡಿದ 150 ಮಂದಿ ವಿರುದ್ಧ FIR

    BOMB BLAST

    ಶಿಯಾ ಮಸೀದಿಯೊಳಗೆ ಸಂಭವಿಸಿರುವ ಬಾಂಬ್ ಸ್ಫೋಟದಲ್ಲಿ 10ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 30-40 ಮಂದಿ ಗಾಯಗೊಂಡಿರುವುದಾಗಿ ತಾಲಿಬಾನ್ ಕಮಾಂಡರ್‌ನ ವಕ್ತಾರ ಮೊಹಮ್ಮದ್ ಅಸೀಫ್ ವಾಝೇರಿ ತಿಳಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಪ್ರಾಂತೀಯ ಆರೋಗ್ಯ ಮಂಡಳಿಯ ವಕ್ತಾರ ಝಿಯಾ ಝೆಂಡಾನಿ ಅವರು, ಸ್ಫೋಟದಲ್ಲಿ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಲಂಡನ್‌ ವ್ಯಕ್ತಿಯ ದೇಹದಲ್ಲಿ ಬರೋಬ್ಬರಿ ಒಂದೂವರೆ ವರ್ಷ ಅಡಗಿತ್ತು ಕೋವಿಡ್‌ – ಅಧ್ಯಯನದಿಂದ ದೃಢ

    TALIBAN
    ಅಫ್ಘಾನಿಸ್ಥಾನದ ಕಾಬೂಲ್‌ನಲ್ಲಿ ತಾಲಿಬಾನಿ ಉಗ್ರರು ನಿಂತಿದ್ದ ದೃಶ್ಯ

    ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ದಾಳಿ ಬಗೆಗಿನ ಚಿತ್ರಗಳನ್ನು ಪರಿಶೀಲಿಸಲಾಗಿ ಬಾಂಬ್ ದಾಳಿಯಾಗಿರುವುದು ಬೆಳಕಿಗೆ ಬಂದಿದೆ. ಪ್ರತ್ಯಕ್ಷದರ್ಶಿಯೊಬ್ಬರು ಎಎಫ್‌ಪಿಗೆ ದೂರವಾಣಿ ಕರೆಯ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ, ಈ ಬಗ್ಗೆ ಇನ್ನೂ ಅಧೀಕೃತ ದಾಖಲೆಗಳು ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.

    ತಾಲಿಬಾನ್ ಅಫ್ಘಾನಿಸ್ಥಾನವನ್ನು ನಿಯಂತ್ರಣಕ್ಕೆ ತೆಗೆದುಕೊಂಡ ನಂತರ ಬಾಂಬ್ ದಾಳಿಗಳು ಕಡಿಮೆಯಾಗಿದೆ. ಆದರೂ ಆಗಾಗ್ಗೆ ಶಿಯಾ ಉಪಸಮುದಾಯದವರ ಮಸೀದಿಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ವರದಿಗಳಲ್ಲಿ ಉಲ್ಲೇಖವಾಗಿದೆ.

  • ಕಾಬೂಲ್‌ ಶಾಲೆಯಲ್ಲಿ ಸ್ಫೋಟ- 6 ಮಂದಿ ಸಾವು

    ಕಾಬೂಲ್‌ ಶಾಲೆಯಲ್ಲಿ ಸ್ಫೋಟ- 6 ಮಂದಿ ಸಾವು

    ಕಾಬೂಲ್:‌ ಪಶ್ಚಿಮ ಕಾಬೂಲ್‌ನಲ್ಲಿರುವ ಶಾಲೆಯೊಂದರಲ್ಲಿ ಮೂರು ಸ್ಫೋಟಗಳು ಸಂಭವಿಸಿದ ಪರಿಣಾಮ 6 ಮಂದಿ ಸಾವಿಗೀಡಾಗಿದ್ದು, 11 ಮಂದಿ ಗಾಯಗೊಂಡಿದ್ದಾರೆ.

    ನೆರೆಹೊರೆಯ ಅನೇಕ ನಿವಾಸಿಗಳು ಶಿಯಾ ಹಜಾರಾ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇಸ್ಲಾಮಿಕ್ ಸ್ಟೇಟ್ ಸೇರಿದಂತೆ ಸುನ್ನಿ ಭಯೋತ್ಪಾದಕ ಗುಂಪುಗಳಿಂದ ಆಗಾಗ್ಗೆ ಗುರಿಯಾಗುತ್ತಿರುವ ಜನಾಂಗೀಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತರು ಇವರಾಗಿದ್ದಾರೆ. ಇದನ್ನೂ ಓದಿ: ನಮ್ಮಿಂದ ತಪ್ಪಾಗಿದೆ: ಕ್ಷಮೆ ಕೇಳಿದ ಶ್ರೀಲಂಕಾ ಅಧ್ಯಕ್ಷ

    ಪ್ರೌಢ ಶಾಲೆಯಲ್ಲಿ ಮೂರು ಸ್ಫೋಟಗಳು ಸಂಭವಿಸಿವೆ. ಮೃತರು ಹಾಗೂ ಗಾಯಗೊಂಡವರು ಶಿಯಾ ಸಮುದಾಯದವರಾಗಿದ್ದಾರೆ ಎಂದು ಕಾಬೂಲ್‌ ಕಮಾಂಡರ್‌ನ ವಕ್ತಾರ ಖಲಿದ್‌ ಝಾರ್ಡನ್‌ ತಿಳಿಸಿದ್ದಾರೆ.

    ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ದೇಶ ಸುರಕ್ಷಿತವಾಗಿದೆ ಎಂದು ತಾಲಿಬಾನ್‌ ಹೇಳುತ್ತಿದೆ. ಆದರೆ ಅಫ್ಘಾನಿಸ್ತಾನದಲ್ಲಿ ಭಯೋತ್ಪಾದನೆಯ ಅಪಾಯ ಮರುಕಳಿಸಿದೆ. ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಗುಂಪು ಹಲವಾರು ಪ್ರಮುಖ ದಾಳಿಗಳನ್ನು ನಡೆಸುವುದಾಗಿ ಹೇಳಿಕೊಂಡಿವೆ ಎಂದು ಅಂತರರಾಷ್ಟ್ರೀಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ವಿರೊಧಿ ಪ್ರತಿಭಟನೆಗಳ ನಡುವೆ ಶ್ರೀಲಂಕಾದಲ್ಲಿ ಹೊಸ ಕ್ಯಾಬಿನೆಟ್

  • ತಾಲಿಬಾನ್ ಮೇಲೆ ಪಾಕಿಸ್ತಾನ ಏರ್‌ಸ್ಟ್ರೈಕ್ – 30 ಮಂದಿ ಸಾವು

    ತಾಲಿಬಾನ್ ಮೇಲೆ ಪಾಕಿಸ್ತಾನ ಏರ್‌ಸ್ಟ್ರೈಕ್ – 30 ಮಂದಿ ಸಾವು

    ಕಾಬೂಲ್: ಅಫ್ಘಾನಿಸ್ತಾನದ ಖೋಸ್ಟ್ ಪ್ರಾಂತ್ಯದ ಮೇಲೆ ಪಾಕಿಸ್ತಾನಿ ವಿಮಾನಗಳು ವೈಮಾನಿಕ ದಾಳಿಯನ್ನು ನಡೆಸಿವೆ. ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ ೩೦ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಪಾಕಿಸ್ತಾನಿ ವಿಮಾನಗಳು ಖೋಸ್ಟ್ ಪ್ರಾಂತ್ಯದ ಸ್ಪರ್ರಾ ಜಿಲ್ಲೆಯ ಪ್ರದೇಶಗಳಾದ ಮಿರ್ಪರ್, ಮಾಂಡೆ, ಶೈದಿ ಮತ್ತು ಕೈ ಗ್ರಾಮಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ ಎಂದು ತಾಲಿಬಾನ್ ಪೊಲೀಸ್ ಮುಖ್ಯಸ್ಥರ ವಕ್ತಾರು ತಿಳಿಸಿದ್ದಾರೆ. ಇದನ್ನೂ ಓದಿ: ಈ ಕಾಂಗ್ರೆಸ್‍ನವರು ದರಿದ್ರ ನನ್ಮಕ್ಕಳು, ಅವರ ಜೊತೆ ಹೋಗಬಾರದಿತ್ತು: ನಂಜೇಗೌಡ

    ಶುಕ್ರವಾರ ಗೋರ್ಬ್ಜ್ ಜಿಲ್ಲೆಯ ಮಾಸ್ಟರ್ಬೆಲ್ ಪ್ರದೇಶದಲ್ಲಿ ಪಾಕಿಸ್ತಾನ ಮತ್ತು ತಾಲಿಬಾನ್ ಪಡೆಗಳ ಮಧ್ಯೆ ಘರ್ಷಣೆ ನಡೆದಿದೆ. ಮಾಧ್ಯಮ ವರದಿಗಳು ಮತ್ತು ಹಲವಾರು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳು ಶುಕ್ರವಾರ ರಾತ್ರಿ ಅಫ್ಘಾನಿಸ್ತಾನದ ಪೂರ್ವ ಕುನಾರ್ ಮತ್ತು ಆಗ್ನೇಯ ಖೋಸ್ಟ್ ಪ್ರಾಂತ್ಯಗಳ ಎರಡು ಪ್ರದೇಶಗಳಲ್ಲಿ ಪಾಕಿಸ್ತಾನಿ ಪಡೆಗಳು ವೈಮಾನಿಕ ದಾಳಿ ನಡೆಸಿವೆ ಎಂದು ತಿಳಿಸಿವೆ. ಇದನ್ನೂ ಓದಿ: ಪಾಲಕ್ಕಾಡ್‍ನಲ್ಲಿ RSS ಮುಖಂಡ ಹತ್ಯೆ

    ಪಾಕಿಸ್ತಾನ ಸರ್ಕಾರ ಮತ್ತು ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯ ಇದುವರೆಗೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಅಫ್ಘಾನಿಸ್ತಾನದಲ್ಲಿ ಬಾಂಬ್ ಸ್ಫೋಟ – 8 ಮಂದಿ ಸಾವು

    ಅಫ್ಘಾನಿಸ್ತಾನದಲ್ಲಿ ಬಾಂಬ್ ಸ್ಫೋಟ – 8 ಮಂದಿ ಸಾವು

    ಕಾಬೂಲ್: ಕಾರಿನಲ್ಲಿದ್ದ ಬಾಂಬ್ ಸ್ಫೋಟವಾಗಿ ಮೃತಪಟ್ಟವರ ಸಂಖ್ಯೆ 8 ಕ್ಕೆ ಏರಿಕೆಯಾಗಿದ್ದು, 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಅಫ್ಘಾನಿಸ್ತಾನ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

    ಶುಕ್ರವಾರ ತಡರಾತ್ರಿ ಈ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಘಟನೆ ಸಂಬಂಧ ಯಾವುದೇ ಭಯೋತ್ಪಾದಕ ಸಂಘಟನೆ ಹೊಣೆ ಹೊತ್ತಿಲ್ಲ ಎಂದು ಸ್ಥಳೀಯ ಪೋಲಿಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ಮಗುವಿನ ನೆರವಿಗೆ ಬಂದ ರೈಲ್ವೆ ಅಧಿಕಾರಿಗಳು

    ಅಫ್ಘಾನಿಸ್ತಾನದ ಮತ್ತೊಂದೆಡೆ ಫಿರಂಗಿ ಸ್ಫೋಟಕ್ಕೆ 5 ಮಕ್ಕಳು ಮೃತಪಟ್ಟಿದ್ದಾರೆ. ಈ ಘಟನೆ ವರ್ಜಾ ಜಿಲ್ಲೆಯಲ್ಲಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದ ರೈತ

  • ತಾಲಿಬಾನ್ ಹೊಸ ಕಾನೂನು – ಪುರುಷರೊಂದಿಗೆ ಮಹಿಳೆಯರು ಪಾರ್ಕ್‌ಗೆ ಹೋಗುವಂತಿಲ್ಲ

    ತಾಲಿಬಾನ್ ಹೊಸ ಕಾನೂನು – ಪುರುಷರೊಂದಿಗೆ ಮಹಿಳೆಯರು ಪಾರ್ಕ್‌ಗೆ ಹೋಗುವಂತಿಲ್ಲ

    ಕಾಬೂಲ್: ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಇಲ್ಲಿಗೆ 9 ತಿಂಗಳುಗಳೇ ಕಳೆದಿವೆ. ತಾಲಿಬಾನ್ ಆಡಳಿತ ಪ್ರಾರಂಭವಾದಾಗಿನಿಂದ ಒಂದೆಡೆ ಜನರು ಹಸಿವಿನಿಂದ ಒದ್ದಾಡುವಂತಾಗಿದ್ದರೆ, ಮತ್ತೊಂದೆಡೆ ತಾಲಿಬಾನ್ ಆದೇಶಗಳಿಂದಾಗಿ ಅಲ್ಲಿನ ಮಹಿಳೆಯರ ಜೀವನ ಕಷ್ಟಕರವಾಗುತ್ತಲೇ ಇದೆ.

    ಇದೀಗ ತಾಲಿಬಾನ್‌ನ ಹೊಸ ಆದೇಶ ಕಾಬೂಲ್‌ನಲ್ಲಿ ಮಹಿಳೆಯರು ಪುರುಷರೊಂದಿಗೆ ಪಾರ್ಕ್ ತೆರಳಲು ನಿಷೇಧಿಸಿದೆ. ಇದರ ಪ್ರಕಾರ ಮಹಿಳೆಯರು ಪುರಷರೊಂದಿಗೆ ಒಂದೇ ದಿನ ಪಾರ್ಕ್ ತೆರಳಲು ಸಾಧ್ಯವಾಗುವುದಿಲ್ಲ. ಇದನ್ನೂ ಓದಿ: ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ ಕರೆ

    ತಾಲಿಬಾನ್ ಕಾಬೂಲ್‌ನಲ್ಲಿ ಮಹಿಳೆಯರಿಗೆ ವಾರದಲ್ಲಿ 3 ದಿನಗಳ ಕಾಲ ಪಾರ್ಕ್ ಪ್ರವೇಶಿಸಲು ಅವಕಾಶ ನೀಡಿದೆ. ಭಾನುವಾರ, ಸೋಮವಾರ ಹಾಗೂ ಮಂಗಳವಾರ ಮಹಿಳೆಯರಿಗೆ ಪಾರ್ಕ್‌ಗಳಲ್ಲಿ ಪ್ರವೇಶ ನೀಡಿದರೆ ವಾರದ ಉಳಿದ ದಿನಗಳು ಕೇವಲ ಪುರುಷರು ಪ್ರವೇಶಿಸಬಹುದು.

    ಒಂದು ವೇಳೆ ಮಹಿಳೆಯರು ಪುರುಷರಿಗೆ ನಿಗದಿ ಪಡಿಸಿರುವ ದಿನಗಳಲ್ಲಿ ಪಾರ್ಕ್ ಪ್ರವೇಶಿಸಿದ್ದಲ್ಲಿ ಅವರಿಗೆ ಕಠಿಣ ಕ್ರಮವನ್ನು ವಿಧಿಸಲಾಗುವುದು ಎಂದು ತಾಲಿಬಾನ್ ಸಂಸ್ಕೃತಿ ಸಚಿವಾಲಯ ಎಚ್ಚರಿಸಿದೆ. ಜೊತೆಗೆ ಮಹಿಳೆಯರು ಪಾರ್ಕ್ ಪ್ರವೇಶಿಸುವಾಗ ಕಡ್ಡಾಯವಾಗಿ ಹಿಜಬ್ ಧರಿಸಬೇಕು ಎಂದು ಆದೇಶಿಸಿದೆ. ಇದನ್ನೂ ಓದಿ: ಕಂಬಕ್ಕೆ ಸ್ಪೈಸ್‌ಜೆಟ್ ವಿಮಾನ ಡಿಕ್ಕಿ – ತಪ್ಪಿದ ಅನಾಹುತ

    ವಿಮಾನಗಳಲ್ಲಿ ಮಹಿಳೆಯರು ಮಾತ್ರವೇ ಪ್ರಯಾಣಿಸುವುದನ್ನು ನಿಷೇಧಿಸಿದೆ. ಮಹಿಳೆಯರು ವಿಮಾನದಲ್ಲಿ ಸ್ವದೇಶ ಅಥವಾ ವಿದೇಶಗಳಿಗೆ ಪ್ರಯಾಣಿಸುವಾಗ ಯಾರಾದರೂ ಕುಟುಂಬದ ಪುರುಷರನ್ನು ಕರೆದುಕೊಂಡು ಹೋಗುವಂತೆ ಸೂಚಿಸಿದೆ.

  • ಉಬರ್ ಚಾಲಕರಾದ ಅಫ್ಘಾನ್ ಮಾಜಿ ಹಣಕಾಸು ಸಚಿವ

    ಉಬರ್ ಚಾಲಕರಾದ ಅಫ್ಘಾನ್ ಮಾಜಿ ಹಣಕಾಸು ಸಚಿವ

    ವಾಷಿಂಗ್ಟನ್‍: ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈವಶವಾಗಿದೆ. ಈ ವೇಳೆ ಅಲ್ಲಿದ್ದ ಅನೇಕ ಮಂದಿ ಬೇರೆಕಡೆ ವಲಸೆ ಹೋಗಿದ್ದಾರೆ. ಅಫ್ಘಾನ್ ಮಾಜಿ ಹಣಕಾಸು ಸಚಿವ ಖಲೀದ್ ಪಾಯೆಂಡಾ ಜೀವನೋಪಾಯಕ್ಕಾಗಿ, ಅಮೆರಿಕದಲ್ಲಿ ಉಬರ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ.

    ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತಕ್ಕೂ ಮೊದಲಿದ್ದ ಅಶ್ರಫ್ ಘನಿ ಸರ್ಕಾರದಲ್ಲಿ ಆರ್ಥಿಕ ಇಲಾಖೆ ಸಚಿವರಾಗಿದ್ದ, ಖಲೀದ್ ಪಾಯೆಂಡಾ ಈಗ ವಾಷಿಂಗ್ಟನ್‍ನಲ್ಲಿ ಉಬರ್ ಓಡಿಸುತ್ತಿದ್ದಾರೆ.

    ಅಧಿಕಾರಕ್ಕೆ ರಾಜೀನಾಮೆ ಕೊಟ್ಟು ವಲಸೆ: ಅಫ್ಘಾನ್‍ನಲ್ಲಿ ತಾಲಿಬಾನ್ ಉಗ್ರರ ಆಡಳಿತ ಬರುತ್ತಿದ್ದಂತೆ ರಾಜೀನಾಮೆ ನೀಡಿದ ಅವರು ಕುಟುಂಬದೊಂದಿಗೆ ವಾಷಿಂಗ್ಟನ್ ಡಿಸಿಗೆ ತೆರಳಿದ್ದರು. ಈಗ ಜೀವನೋಪಾಯಕ್ಕಾಗಿ ಉಬರ್ ವಾಹನ ಓಡಿಸಿ ಹಣಗಳಿಕೆ ಮಾಡುತ್ತಿದ್ದಾರೆ. ಜಾರ್ಜ್‍ಟೌನ್ ಯೂನಿವರ್ಸಿಟಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: 133 ಪ್ರಯಾಣಿಕರಿದ್ದ ಚೀನಾ ವಿಮಾನ ಪತನ

    ಅಫ್ಘಾನ್‍ನಿಂದ ಅಮೆರಿಕಾಗೆ ವಲಸೆ: ಖಲೀದ್ ಪಾಯೆಂಡಾ ಅಫ್ಘಾನ್‍ನಿಂದ ಪತ್ನಿ, ನಾಲ್ವರು ಮಕ್ಕಳೊಂದಿಗೆ ಯುಎಸ್‍ಗೆ ಪರಾರಿಯಾಗಿದ್ದರು. ಸುಮ್ಮನೆ ಕುಳಿತರೆ ಕೂಡಿಟ್ಟ ಹಣ ಎಷ್ಟು ದಿನ ಬರುತ್ತದೆ ಎಂದು ಕೆಲಸ ಹುಡುಕಲು ಪ್ರಾರಂಭಿಸಿದರು. ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆಯಾದರೂ ಕೂಡ ಅದು ಪರ್ಮನೆಂಟ್ ಕೆಲಸವಲ್ಲ. ಬರೀ ಅದೊಂದೇ ಕೆಲಸಕ್ಕೆ ನೀಡುವ ಸಂಬಳವೂ ಸಾಕಾಗುವುದಿಲ್ಲ. ಹೀಗಾಗಿ ಉಬರ್ ಚಾಲನೆ ಕೆಲಸವನ್ನೂ ಶುರು ಮಾಡಿದರು. ಈ ಬಗ್ಗೆ ನನಗೆ ಸ್ವಲ್ಪವೂ ಬೇಸರವಿಲ್ಲ. ಇಷ್ಟಾದರೂ ಕೆಲಸ ಸಿಕ್ಕಿ, ಜೀವನೋಪಾಯಕ್ಕೆ ಅನುಕೂಲವಾಯಿತಲ್ಲ. ನಾನಿನ್ನು ಹತಾಶನಾಗಬೇಕಿಲ್ಲ ಎಂದು ಖಾಸಗಿವಾಹಿನಿಯೊಂದಕ್ಕೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಶ್ಯಾಮನೂರು ಶಿವಶಂಕರಪ್ಪನವರದ್ದು ಎಷ್ಟನೇ ಬಣ – ಸಿದ್ದುಗೆ ಬಿಜೆಪಿ ಪ್ರಶ್ನೆ

    ನಾನು ಅಮೆರಿಕ, ಅಫ್ಘಾನಿಸ್ತಾನಕ್ಕೆ ಸೇರಿದವನೂ ಅಲ್ಲ: ಬೇಸರ ಇದ್ದೇ ಇದೆ. ನನಗೆ ನನ್ನದೇ ಆದ ಜಾಗವಿಲ್ಲ. ನಾನು ಅಮೆರಿಕದವನಲ್ಲ. ಅಫ್ಘಾನಿಸ್ತಾನಕ್ಕೆ ಸೇರಿದವನೂ ಅಲ್ಲ. ಹೀಗಾಗಿ ಖಾಲಿತನ ಭಾವನೆ ಹುಟ್ಟುತ್ತದೆ. ಹಾಗಂತ ಯಾರನ್ನೂ ದೂಷಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಗಾಗಿ ನಾನು ನನ್ನನ್ನೂ ದ್ವೇಷ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.

  • ಒಂದು ಯುದ್ಧದಿಂದ ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದ್ರೆ ಇನ್ನೊಂದು ಯುದ್ಧ ಪ್ರಾರಂಭವಾಗಿದೆ: ಅಫ್ಘಾನ್ ನಿವಾಸಿ

    ಒಂದು ಯುದ್ಧದಿಂದ ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದ್ರೆ ಇನ್ನೊಂದು ಯುದ್ಧ ಪ್ರಾರಂಭವಾಗಿದೆ: ಅಫ್ಘಾನ್ ನಿವಾಸಿ

    ಕೀವ್: ಅಫ್ಘಾನಿಸ್ತಾನದ ಯುದ್ಧವನ್ನು ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದಿದ್ದೆ. ಆದರೆ ಇಲ್ಲಿ ಇನ್ನೊಂದು ಯುದ್ಧ ಪ್ರಾರಂಭವಾಗಿದೆ. ಇದು ನನ್ನ ದುರಾದೃಷ್ಟವಾಗಿದೆ ಎಂದು ಸಂತ್ರಸ್ತ ಅಜ್ಮಲ್ ರಹಮಾನಿ ಹೇಳಿದರು.

    ಪೋಲೆಂಡ್‍ಗೆ ದಾಟಿದ ಸ್ವಲ್ಪ ಸಮಯದ ನಂತರ ಮಾತನಾಡಿದ ಅವರು, ಒಂದು ವರ್ಷದ ಹಿಂದೆ ಅಫ್ಘಾನಿಸ್ತಾನವನ್ನು ತೊರೆದು ಉಕ್ರೇನ್‍ನಲ್ಲಿ ನೆಲೆಸಿದ್ದೆವು. ಇಲ್ಲಿ ಶಾಂತಿಯಿಂದ ನೆಲೆಸಿದ್ದೆವು. ಆದರೆ ಇಲ್ಲೂ ಕಳೆದ 5 ದಿನಗಳಿಂದ ಯುದ್ಧ ಪ್ರಾರಂಭವಾಗಿದ್ದು, ನಾನು ಹಾಗೂ ನನ್ನ ಕುಟುಂಬ ಪಲಾಯನ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದು ಅಳಲುತೊಡಿಕೊಂಡರು.

    ಅಫ್ಘಾನಿಸ್ತಾನದಲ್ಲಿದ್ದಾಗ ನನಗೆ ಸ್ವಂತ ಮನೆ ಕಾರು ಇತ್ತು. ಕುಟುಂಬದ ಜೊತೆ ಉತ್ತಮವಾಗಿ ಜೀವನ ನಡೆಸುತ್ತಿದ್ದೆ. ಆದರೆ ಅಫ್ಘಾನಿಸ್ತಾನದಲ್ಲಿ ಯುದ್ಧ ಪ್ರಾರಂಭವಾದಾಗ ಎಲ್ಲವೂ ಬದಲಾಗಿದೆ. ನಾನು ಎಲ್ಲವನ್ನೂ ಕಳೆದುಕೊಂಡೆ. ಅಲ್ಲಿಂದ ನಾನು ನನ್ನ ಕುಟುಂಬ ಪಾರಾಗಿ ಉಕ್ರೇನ್‍ಗೆ ಬಂದೆವು. ಆದರೆ ಈಗ ಇಲ್ಲೂ ಅದೇ ಸ್ಥಿತಿ ಬಂದೊದಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಟೂತ್‌ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಪ್ರಾಣ ಬಿಟ್ಟಳು

    ರಷ್ಯಾ ದಾಳಿಗೆ ಉಕ್ರೇನ್ ತತ್ತರಿಸಿದೆ. ಉಕ್ರೇನ್‍ನಿಂದ ಜೀವ ಉಳಿಸಿಕೊಳ್ಳಲು ಜನ ಹರಸಾಹಸ ಪಡುತ್ತಿದ್ದಾರೆ. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಬಂಕರ್‍ಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಇನ್ನೂ ಕೆಲವು ಜನರು ಬೇರೆ ದೇಶಗಳಿಗೆ ತಲುಪಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

  • ಮಹಿಳೆಯರಿಗೆ ಮತ್ತೆ ವಿಶ್ವವಿದ್ಯಾಲಯಗಳನ್ನು ತೆರೆದ ತಾಲಿಬಾನ್

    ಕಾಬೂಲ್: ಅಫ್ಘಾನಿಸ್ತಾನದ 34 ಪ್ರಾಂತ್ಯಗಳ ಪೈಕಿ 6 ಪ್ರಾಂತ್ಯಗಳಲ್ಲಿ ಮಹಿಳಾ ವಿದ್ಯಾರ್ಥಿಗಳಿಗೆ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ತೆರೆಯಲಾಗಿದೆ ಎಂದು ತಾಲಿಬಾನ್ ಬುಧವಾರ ತಿಳಿಸಿದೆ.

    ಕಳೆದ ವರ್ಷ ಆಗಸ್ಟ್ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನನ್ನು ವಶಪಡಿಸಿಕೊಂಡ ಬಳಿಕ ತಮ್ಮ ಆಳ್ವಿಕೆಯಲ್ಲಿ ದೇಶಾದ್ಯಂತ ಕಠಿಣ ಕ್ರಮಗಳನ್ನು ವಿಧಿಸುತ್ತಿದೆ. ಮುಖ್ಯವಾಗಿ ಹುಡುಗಿಯರನ್ನು ಶಿಕ್ಷಣದಿಂದ ಹಾಗೂ ಮಹಿಳೆಯರನ್ನು ಸಾರ್ವಜನಿಕ ಜೀವನ ಮತ್ತು ಕೆಲಸದಿಂದ ವಂಚಿಸುತ್ತಲೇ ಇದೆ. 1990ರ ಕಾಲದಲ್ಲೂ ಇದೇ ರೀತಿಯ ಸಂದರ್ಭ ಏರ್ಪಟ್ಟಿತ್ತು.

    ತಾಲಿಬಾನ್ ವಿಧಿಸಿರುವ ನಿರ್ಬಂಧಗಳಲ್ಲಿ ಹೆಚ್ಚಿನವು ಮಹಿಳೆಯರ ಮೇಲೆ ಪ್ರಭಾವ ಬೀರುತ್ತದೆ. ಮಹಿಳೆಯರನ್ನು ಆರೋಗ್ಯ ಹಾಗೂ ಬೋಧನಾ ವಲಯಗಳನ್ನು ಹೊರತು ಪಡಿಸಿ ಇತರ ಉದ್ಯೋಗಗಳಿಂದ ನಿರ್ಬಂಧಿಸಿದೆ. ಹುಡುಗಿಯರು 6ನೇ ತರಗತಿಯ ಬಳಿಕ ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಮಹಿಳೆಯರಿಗೆ ಹಿಜಬ್ ಧರಿಸಲು ಒತ್ತಾಯಿಸುತ್ತಿದೆ. ಆದರೆ ಬುರ್ಖಾ ಹೇರಿಕೆಯ ಬಗ್ಗೆ ಸ್ವಲ್ಪ ವಿರಾಮ ದೊರಕಿದೆ. ಇದನ್ನೂ ಓದಿ: ತೈಲ ಖರೀದಿಸಲು ಶ್ರೀಲಂಕಾಗೆ 3 ಸಾವಿರ ಕೋಟಿ ಸಾಲ ನೀಡಿದ ಭಾರತ

    ತಾಲಿಬಾನ್ ಸಂಸ್ಕೃತಿ ಹಾಗೂ ಮಾಹಿತಿ ಸಚಿವಾಲಯ ಬುಧವಾರ ತಿಳಿಸಿರುವ ಮಾಹಿತಿಯ ಪ್ರಕಾರ ನಂಗರ್‌ಹಾರ್, ಕಂದಹಾರ್, ಹೆಲ್ಮಂಡ್, ಫರಾಹ್, ನಿಮ್ರೋಜ್ ಹಾಗೂ ಲಗ್ಮನ್ ಪ್ರಾಂತ್ಯಗಳಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ಮಹಿಳೆಯರಿಗೂ ತೆರೆಯಲಾಗಿದೆ ಎಂದು ತಿಳಿಸಿದೆ.

    ಅಫ್ಘಾನಿಸ್ತಾನದ ಈ ಆರು ಪ್ರಾಂತ್ಯಗಳು ಇತರ ಪ್ರದೇಶಗಳಿಗಿಂತ ಬೆಚ್ಚನೆಯ ಹವಾಮಾನ ಹೊಂದಿದೆ ಹೀಗಾಗಿ ಈ ಪ್ರಾಂತ್ಯಗಳಲ್ಲಿ ವಿಶ್ವವಿದ್ಯಾಲಯಗಳನ್ನು ಮತ್ತೆ ತೆರೆಯಲಾಗಿದೆ. ಪುರುಷರು ಬೆಳಗ್ಗೆ ಹಾಗೂ ಮಹಿಳೆಯರು ಮಧ್ಯಾಹ್ನ ತರಗತಿಗಳಿಗೆ ಹಾಜರಾಗಬಹುದು ಎಂದು ತಿಳಿಸಿದೆ. ಇದನ್ನೂ ಓದಿ: ಅಜ್ಮೀರ್ ದರ್ಗಾಕ್ಕೆ ಚಾದರ ಕಳಿಸಿಕೊಟ್ಟ ಪ್ರಧಾನಿ ಮೋದಿ

    ಹೆಣ್ಣುಮಕ್ಕಳ ಶಿಕ್ಷಣವನ್ನು ನಿರಾಕರಿಸಿದ್ದಕ್ಕೆ ಭಾರೀ ಟೀಕೆಗೆ ಒಳಗಾಗಿದ್ದೇವೆ. ಅಫ್ಘಾನಿಸ್ತಾನದಲ್ಲಿ ಮಾರ್ಚ್ ಅಂತ್ಯದ ವೇಳೆ ಎಲ್ಲಾ ಹೆಣ್ಣು ಮಕ್ಕಳು ಶಾಲೆಗೆ ಮರಳಲಿದ್ದಾರೆ ಎಂದು ತಾಲಿಬಾನ್ ಭರವಸೆ ನೀಡಿದೆ.