Tag: afghanistan

  • 69 ರನ್‌ಗಳ ಭರ್ಜರಿ ಜಯ – ಇಂಗ್ಲೆಂಡ್ ಶಾಕ್, ಅಫ್ಘಾನ್ ರಾಕ್

    69 ರನ್‌ಗಳ ಭರ್ಜರಿ ಜಯ – ಇಂಗ್ಲೆಂಡ್ ಶಾಕ್, ಅಫ್ಘಾನ್ ರಾಕ್

    ನವದೆಹಲಿ: ರಹ್ಮನುಲ್ಲಾ ಗುರ್ಬಾಝ್‌ ಬೆಂಕಿ ಬ್ಯಾಟಿಂಗ್‌ ಹಾಗೂ ಮುಜೀಬ್ ಉರ್ ರೆಹಮಾನ್, ರಶೀದ್ ಖಾನ್ ಮಾರಕ ಬೌಲಿಂಗ್‌ ದಾಳಿಯಿಂದಾಗಿ ಇಂಗ್ಲೆಂಡ್‌ ವಿರುದ್ಧ ಆಫ್ಘಾನಿಸ್ತಾನ (England vs Afghanistan) 69 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐತಿಹಾಸಿಕ ಗೆಲುವು ದಾಖಲಿಸಿದೆ.

    ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ (Cricket World Cup 2023) 13ನೇ ಪಂದ್ಯದಲ್ಲಿ ಟಾಸ್‌ ಗೆದ್ದಿದ್ದ ಇಂಗ್ಲೆಂಡ್‌ (England) ಫೀಲ್ಡಿಂಗ್‌ ಆಯ್ದುಕೊಂಡಿತ್ತು. ಉತ್ತಮ ಬ್ಯಾಟಿಂಗ್‌ ಪ್ರದರ್ಶನದೊಂದಿಗೆ ಆಂಗ್ಲ ಬೌಲರ್‌ಗಳನ್ನು ಚೆಂಡಾಡಿದ ಆಫ್ಘಾನಿಸ್ತಾನ (Afghanistan) ತಂಡ ಆಲೌಟ್‌ ಆಗಿ ಇಂಗ್ಲೆಂಡ್‌ಗೆ 285 ರನ್‌ಗಳ ಗುರಿ ನೀಡಿತ್ತು. ಗುರಿ ಬೆನ್ನತ್ತಿದ ಇಂಗ್ಲೆಂಡ್‌ 40.3 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 215 ರನ್‌ಗಳನ್ನಷ್ಟೇ ಗಳಿಸಿ ಸೋಲನುಭವಿಸಿತು. ಇದನ್ನೂ ಓದಿ: ಹೈವೋಲ್ಟೇಜ್ ಪಂದ್ಯದ ಬಳಿಕ ಪಾಕ್ ನಾಯಕನಿಗೆ ಜೆರ್ಸಿ ಗಿಫ್ಟ್ ಮಾಡಿದ ಕೊಹ್ಲಿ: ವಾಸಿಂ ಅಕ್ರಮ್ ಗರಂ

    ಆರಂಭಿಕರಾಗಿ ಕಣಕ್ಕಿಳಿದಿದ್ದ ಜಾನಿ ಬೈರ್‌ಸ್ಟೋವ್‌ ಕೇವಲ 2 ರನ್‌ ಗಳಿಸಿ ಎಲ್‌ಬಿಡಬ್ಲ್ಯೂ ಆಗಿ ಇಂಗ್ಲೆಂಡ್‌ಗೆ ಆರಂಭಿಕ ಆಘಾತ ನೀಡಿದರು. ನಂತರ ಜೊತೆಯಾದ ಡೇವಿಡ್ ಮಲನ್ ಮತ್ತು ಜೋ ರೂಟ್‌ ಜೊತೆಯಾಗಿ ತಂಡಕ್ಕೆ ಚೇತರಿಕೆ ನೀಡಲು ಯತ್ನಿಸಿದರು. ಡೇವಿಡ್ ಮಲನ್ 32 ರನ್‌ ಗಳಿಸಿ (39 ಬಾಲ್‌, 4 ಫೋರ್‌) ಕ್ಲೀನ್‌ ಬೌಲ್ಡ್‌ ಆದರು. ಜೋ ರೂಟ್‌ ಕೇವಲ 11 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಈ ವೇಳೆ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದ್ದ ಹ್ಯಾರಿ ಬ್ರೂಕ್‌ ಮೈದಾನದಲ್ಲಿ 61 ಬಾಲ್‌ಗಳಿಗೆ 66 ರನ್‌ ಗಳಿಸಿ (7 ಫೋರ್‌, 1 ಸಿಕ್ಸ್‌) ಉತ್ತಮ ಪ್ರದರ್ಶನ ನೀಡಿದರು. ಆದರೆ ಅವರಿಗೆ ಜೊತೆಯಾಗಿ ಸಾಥ್‌ ಕೊಡುವಲ್ಲಿ ಇತರೆ ಆಟಗಾರರು ವಿಫಲರಾದರು. ಆಫ್ಘನ್ನರ ಸ್ಪಿನ್‌ ದಾಳಿಗೆ ಆಂಗ್ಲ ಬ್ಯಾಟರ್‌ಗಳು ತರಗೆಲೆಯಂತೆ ಉದುರಿ ಹೋದರು.

    ಪರಿಣಾಮವಾಗಿ ಇಂಗ್ಲೆಂಡ್‌ ತಂಡದ ನಾಯಕ ಜೋಸ್‌ ಬಟ್ಲರ್‌ ಕೇವಲ 9 ರನ್‌ ಗಳಿಸಿ ಔಟಾದರು. ಲಿಯಾಮ್ ಲಿವಿಂಗ್ಸ್ಟೋನ್ 10 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಸ್ಯಾಮ್ ಕರ್ರನ್ ಕೂಡ ಕೇವಲ 10 ರನ್‌ ಗಳಿಸಲಷ್ಟೇ ಶಕ್ತರಾದರು. ಕ್ರಿಸ್ ವೋಕ್ಸ್ 9 ರನ್‌ಗಳಿಸಿ ಔಟಾದರು. ಆದಿಲ್ ರಶೀದ್ 20 ರನ್‌, ಮಾರ್ಕ್ ವುಡ್ 18 ರನ್‌ ಗಳಿಸಿ ಪೆವಿಲಿಯನ್‌ನತ್ತ ನಡೆದರು. ಇದನ್ನೂ ಓದಿ: ಸಿಕ್ಸ್‌ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

    ಇಂಗ್ಲೆಂಡ್‌ ವಿರುದ್ಧ ಆಫ್ಘನ್‌ ಬೌಲರ್‌ಗಳು ಅಮೋಘ ಪ್ರದರ್ಶನ ತೋರಿದರು. ಮುಜೀಬ್ ಉರ್ ರೆಹಮಾನ್ ಹಾಗೂ ರಶೀದ್ ಖಾನ್ 3 ವಿಕೆಟ್‌ ಕಿತ್ತು ಗಮನ ಸೆಳೆದರು. ಮೊಹಮ್ಮದ್ ನಬಿ 2, ಫಜಲ್ಹಕ್ ಫಾರೂಕಿ ಹಾಗೂ ನವೀನ್-ಉಲ್-ಹಕ್ ತಲಾ 1 ಕಿತ್ತು ತಂಡದ ಗೆಲುವಿಗೆ ಸಹಕಾರಿಯಾದರು.

    ಗುರ್ಬಾಝ್‌ ಬೆಂಕಿ ಬ್ಯಾಟಿಂಗ್‌
    ಟಾಸ್ ಗೆದ್ದ ಇಂಗ್ಲೆಂಡ್‌ ತಂಡ ಅಫ್ಘಾನಿಸ್ತಾನಕ್ಕೆ ಬ್ಯಾಟಿಂಗ್ ಆಹ್ವಾನ ನೀಡಿತು. ಬ್ಯಾಟಿಂಗ್‌ಗೆ ಇಳಿದ ಅಫ್ಘಾನ್ ಭರ್ಜರಿ ಆರಂಭ ಪಡೆಯಿತು. ರಹ್ಮನುಲ್ಲಾ ಗುರ್ಬಾಝ್ ಮತ್ತು ಇಬ್ರಾಹಿಂ ಝರ್ದಾನ್ ತಂಡಕ್ಕೆ 114 ರನ್‌ಗಳ ಉತ್ತಮ ಜೊತೆಯಾಟ ನೀಡಿದರು. 16.4 ಓವರ್‌ನಲ್ಲಿ ಸ್ಪಿನ್ನರ್ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಇಬ್ರಾಹಿಂ ಝರ್ದಾನ್ (28) ಔಟ್ ಆಗುವುದರೊಂದಿಗೆ ಅಫ್ಘಾನ್ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ರಹ್ಮನುಲ್ಲಾ ಗುರ್ಬಾಝ್ 57 ಎಸೆತಗಳಲ್ಲಿ 80 ರನ್ ಸಿಡಿಸಿ (8 ಬೌಂಡರಿ, 4 ಸಿಕ್ಸರ್) ಸಿಡಿಸಿ ಆಂಗ್ಲರನ್ನು ಚೆಂಡಾಡಿದರು. ನಂತರ ಗುರ್ಬಾಝ್‌ ರನ್‌ಔಟ್‌ ಆದರು. ಇದನ್ನೂ ಓದಿ: Record… Record… Record: ಇಂಡೋ-ಪಾಕ್‌ ಕದನದಲ್ಲಿ ಎಲ್ಲಾ ದಾಖಲೆ ಉಡೀಸ್‌!

    ಬಳಿಕ ಬಂದ ಯಾವೊಬ್ಬ ಬ್ಯಾಟರ್ ಕೂಡ ಇಂಗ್ಲೆಂಡ್‌ ಬಲಿಷ್ಟ ಬೌಲಿಂಗ್ ಎದುರು ಹೆಚ್ಚು ಸಮಯ ಕ್ರೀಸಿನಲ್ಲಿ ನಿಲ್ಲಲು ಸಾಧ್ಯವಾಗದೇ ದಿಢೀರ್ ಕುಸಿತ ಕಂಡಿತು. ರಹಮತ್ ಶಾ 3 ರನ್ ಗಳಿಸಿ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಸ್ಟಂಪ್ ಔಟ್ ಆದರೆ, ನಾಯಕ ಹಶ್ಮತುಲ್ಲಾ ಶಾಹಿದಿ 14 ರನ್ ಗಳಿಸಿ ಜೊ ರೂಟ್ ಬೌಲಿಂಗ್‌ನಲ್ಲಿ ಬೌಲ್ಡ್ ಆಗಿ ನಿರಾಸೆ ಮೂಡಿಸಿದರು. ಅಝ್ಮತುಲ್ಲಾ ಓಮರ್ಝೈ, ಮೊಹಮ್ಮದ್ ನಬಿ ಕ್ರಮವಾಗಿ 19, 9 ಗಳಿಸಿ ಪೆವಿಲಿಯನ್ ಪರೇಡ್‌ ನಡೆಸಿದರು. ಬಳಿಕ ಕೊಂಚ ಚೇತರಿಸಿಕೊಂಡ ಅಫ್ಘಾನ್ ಇಕ್ರಂ ಅಲಿಖಿಲ್ ಮತ್ತು ರಶೀದ್ ಖಾನ್ ಜೋಡಿ 43 ರನ್‌ಗಳ ಜೊತೆಯಾಟ ನೀಡಿ ಮೊತ್ತ ಹೆಚ್ಚಿಸುವ ಯೋಜನೆಯಲ್ಲಿ ಇದ್ದರು. ಆದರೆ ರಶೀದ್ ಖಾನ್ 23 ರನ್ ಗಳಸಿ ಕ್ಯಾಚ್ ನೀಡಿ ಔಟಾದರು. ಇಕ್ರಂ ಅಲಿಖಿಲ್ 58 ಗಳಿಸಿ ಅರ್ಧಶತಕ ಬಾರಿಸಿ (3 ಬೌಂಡರಿ, 2 ಸಿಕ್ಸರ್) ಮಿಂಚಿದರು. ಮುಜೀಬ್ ಉರ್ ರಹ್ಮಾನ್ 28 ರನ್ ಗಳ ಉಪಯುಕ್ತ ಕೊಡುಗೆ ನೀಡಿದರು. ಅಂತಿಮ ಜೋಡಿಯಾದ ನವೀನ್ 5 ರನ್‌ಗೆ ರನೌಟ್ ಆದರು. ಫಝಲ್ ಹಕ್ ಫಾರೂಕಿ 2 ರನ್ ಗಳಿಸಿದರು.

    ಇಂಗ್ಲೆಂಡ್‌ ಪರ ಆದಿಲ್ ರಶೀದ್ 3 ವಿಕೆಟ್ ಪಡೆದರೆ, ಮಾರ್ಕ್ ವುಡ್ 2, ಲಿಯಾಮ್ ಲಿವಿಂಗ್‌ಸ್ಟೋನ್‌, ಜೋ ರೂಟ್, ರೀಸ್ ಟೋಪ್ಲಿ ತಲಾ ಒಂದೊಂದು ವಿಕೆಟ್ ಕಬಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದುಷ್ಮನ್‌ ಅಲ್ಲ ದೋಸ್ತಿ – ಕೊಹ್ಲಿಯನ್ನು ಹಾಡಿ ಹೊಗಳಿದ ಗಂಭೀರ್‌, ಫ್ಯಾನ್ಸ್‌ ವಿರುದ್ಧ ಮತ್ತೆ ಗರಂ

    ದುಷ್ಮನ್‌ ಅಲ್ಲ ದೋಸ್ತಿ – ಕೊಹ್ಲಿಯನ್ನು ಹಾಡಿ ಹೊಗಳಿದ ಗಂಭೀರ್‌, ಫ್ಯಾನ್ಸ್‌ ವಿರುದ್ಧ ಮತ್ತೆ ಗರಂ

    ನವದೆಹಲಿ: ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯಕ್ಕೂ ಮುನ್ನ ವಿರಾಟ್‌ ಕೊಹ್ಲಿ (Virat Kohli) ಹಾಗೂ ನವೀನ್‌ ಉಲ್‌ ಹಕ್‌ (Naveen-ul-Haq) ಮೈದಾನದಲ್ಲಿ ಮುಖಾಮುಖಿಯಾಗುವ ಬಗ್ಗೆ ಸಾಕಷ್ಟು ಕುತೂಹಲವಿತ್ತು. 2023ರ ಐಪಿಎಲ್‌ ಬಳಿಕ ಇದೇ ಮೊದಲಬಾರಿಗೆ ಮುಖಾಮುಖಿಯಾಗಿದ್ದು, ಮತ್ತೆ ಕಿರಿಕ್‌ ಆಗಬಹುದೇ? ಕೊಹ್ಲಿ ಕಣಕ್ಕಿಳಿದ್ರೆ ಬ್ಯಾಟಿಂಗ್‌ನಲ್ಲಿ ಹೇಗೆ ಅಬ್ಬರಿಸುತ್ತಾರೆ? ಅನ್ನೋದನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದುಕುಳಿತಿದ್ದರು. ಆದ್ರೆ ಮೈದಾನದಲ್ಲಿ ನಡೆದಿದ್ದೇ ಬೇರೆ.

    ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ (Afghanistan) ನೀಡಿದ 273 ರನ್‌ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಪರ ರೋಹಿತ್‌ ಶರ್ಮಾ ಹಾಗೂ ಇಶಾನ್‌ ಕಿಶನ್‌ ಜೋಡಿ ಮೊದಲ ವಿಕೆಟ್‌ಗೆ 156 ರನ್‌ಗಳ ಜೊತೆಯಾಟ ನೀಡಿತ್ತು. ಸ್ಫೋಟಕ ಇನ್ನಿಂಗ್ಸ್‌ ಆರಂಭಿಸಿದ್ದ ರೋಹಿತ್‌ ಶರ್ಮಾಗೆ ಸಾಥ್‌ ನೀಡುತ್ತಿದ್ದ ಇಶಾನ್‌ ಕಿಶನ್‌ 47 ರನ್‌ಗಳಿಗೆ ಔಟಾಗಿ ಪೆವಿಲಿಯನ್‌ಗೆ ಮರಳಿದರು. ಬಳಿಕ 3ನೇ ಕ್ರಮಾಂಕದಲ್ಲಿ ಕೊಹ್ಲಿ ಕ್ರೀಸ್‌ಗೆ ಇಳಿಯುತ್ತಿದ್ದಂತೆ ಅಭಿಮಾನಿಗಳು ಜೈಕಾರ ಹಾಕುವ ಮೂಲಕ ಸ್ವಾಗತ ಕೋರಿದರು. ಕೊಹ್ಲಿ ಕ್ರೀಸ್‌ಗೆ ಬಂದು ನವೀನ್‌ ಉಲ್‌ ಹಕ್‌ ಬೌಲಿಂಗ್‌ನಲ್ಲಿ ಎದುರಾದ ಕೊಹ್ಲಿ ಅಬ್ಬರಿಸುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದ್ರೆ ಅಭಿಮಾನಿಗಳ ನಿರೀಕ್ಷೆ ಹುಸಿಯಾಯಿತು.

    ನವೀನ್‌ ಉಲ್‌ ಹಕ್‌ ಅವರ ಹಲವು ಎಸೆತಗಳನ್ನು ಕೊಹ್ಲಿ ಡಾಟ್‌ ಮಾಡಿಸಿದರು. ಜೊತೆಗೆ ಕೊಹ್ಲಿ… ಕೊಹ್ಲಿ… ಎಂದು ಜೈಕಾರ ಕೂಗುತ್ತಾ ನವೀನ್‌ ಉಲ್‌ ಹಕ್‌ ನನ್ನ ರೇಗಿಸುತ್ತಿದ್ದ ಅಭಿಮಾನಿಗಳನ್ನ ಕೈಸನ್ನೆಯಲ್ಲೇ ಸುಮ್ಮನಿರುವಂತೆ ಮನವಿ ಮಾಡಿದರು. ಅಷ್ಟೇ ಅಲ್ಲದೇ ಪಂದ್ಯದ ವೇಳೆ ನವೀನ್‌ ಉಲ್‌ ಹಕ್‌ನನ್ನ ಆತ್ಮೀಯವಾಗಿ ಅಪ್ಪಿಕೊಂಡು ಮಾತನಾಡಿಸಿದರು. ನವೀನ್‌ ಹೆಗಲಮೇಲೆ ಕೈಯಿಟ್ಟು ಪ್ರೀತಿಯಿಂದ ಮಾತನಾಡಿಸಿದರು. ವಿರಾಟ್‌ ಕೊಹ್ಲಿ ನಡೆಗೆ ಅಭಿಮಾನಿಗಳೂ ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: World Cup 2023: ಗುಡ್‌ನ್ಯೂಸ್‌ – ಪಾಕ್‌ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಸೇರಲಿದ್ದಾರೆ ಗಿಲ್‌

    ಕೊಹ್ಲಿ ಫ್ಯಾನ್ಸ್‌ ವಿರುದ್ಧ ಗಂಭೀರ್‌ ಗರಂ:
    ಇನ್ನೂ ಕೊಹ್ಲಿ-ನವೀನ್‌ ವಿಚಾರಕ್ಕೆ ಪ್ರತಿಕ್ರಿಯಿಸಿದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ (Gautam Gambhir), ಕೊಹ್ಲಿಯನ್ನು ಹೊಗಳುತ್ತಲೇ ಅಭಿಮಾನಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಪ್ರತಿಯೊಬ್ಬ ಆಟಗಾರನೂ ತನ್ನ ತಂಡಕ್ಕಾಗಿ ಹೋರಾಡುತ್ತಾನೆ ಅನ್ನೋದಕ್ಕೆ ಕೊಹ್ಲಿ ಸಾಕ್ಷಿಯಾಗಿದ್ದಾರೆ. ಯಾರು ಯಾವ ದೇಶದವರು ಅನ್ನೋದಕ್ಕಿಂತ ಕ್ರೀಡೆಯಲ್ಲಿ ಎಷ್ಟು ಉತ್ತಮವಾಗಿ ಆಡುತ್ತಾರೆ ಎಂಬುದು ಮುಖ್ಯವಾಗುತ್ತದೆ. ಕೊಹ್ಲಿ ಮತ್ತು ನವೀನ್‌ ಅವರನ್ನು ಕ್ರೀಡೆಯ ಉದ್ದೇಶದಿಂದಲೇ ನೋಡಿದ್ರೆ ಒಳ್ಳೆಯದು. ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಿ ಆಟಗಾರರನ್ನ ಟ್ರೋಲ್‌ ಮಾಡುವುದನ್ನು ನಿಲ್ಲಿಸಬೇಕು ಎಂದು ಕೊಹ್ಲಿ ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ.

    ನವೀನ್‌ ಉಲ್‌ ಹಕ್‌ ರಿಯಾಕ್ಷನ್‌ ಏನು?
    ಇನ್ನೂ ಪಂದ್ಯ ಮುಗಿದ ಬಳಿಕ ಕೊಹ್ಲಿ ಜೊತೆಗಿನ ಮಾತುಗಳನ್ನ ರಿವೀಲ್‌ ಮಾಡಿರುವ ನವೀನ್‌ ಉಲ್‌ ಹಕ್‌, ಕೊಹ್ಲಿ ತುಂಬಾ ಒಳ್ಳೆಯ ವ್ಯಕ್ತಿ, ಉತ್ತಮ ಆಟಗಾರ ಕೂಡ ಹೌದು. ಪಂದ್ಯದ ವೇಳೆ ಪರಸ್ಪರ ಕೈಕುಲುಕಿದೆವು. ಆದ್ರೆ ಅಭಿಮಾನಿಗಳೇ ಅದನ್ನ ದೊಡ್ಡದು ಮಾಡ್ತಿದ್ದಾರೆ. ಅಂದು ನಡೆದ ಘಟನೆಯನ್ನ ನಾವು ಅಲ್ಲಿಗೆ ಬಿಟ್ಟಿದ್ದೇವೆ. ಅಭಿಮಾನಿಗಳು ಅದನ್ನ ಮುಂದುವರಿಸಿದ್ದಾರೆ ಎಂದು ಬೇಸರದಿಂದ ಹೇಳಿಕೊಂಡಿದ್ದಾರೆ.

    ಒಟ್ಟಿನಲ್ಲಿ ವಿರಾಟ್‌ ಕೊಹ್ಲಿ ಹಾಗೂ ನವೀನ್‌ ಉಲ್‌ ಹಕ್‌ ನಡುವಣ ಕದನ ಅಂತ್ಯವಾಗಿದೆ ಎಂದೆಲ್ಲಾ ನೆಟ್ಟಿಗರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರೋಹಿತ್‌ ಶರ್ಮಾ ಸ್ಫೋಟಕ ಶತಕ – 8 ವಿಕೆಟ್‌ಗಳ ಜಯದೊಂದಿಗೆ ಪಾಕ್‌ ಹಿಂದಿಕ್ಕಿದ ಭಾರತ

    2023ರ ಐಪಿಎಲ್‌ನಲ್ಲಿ ಏನಾಗಿತ್ತು?
    2023ರ ಐಪಿಎಲ್‌ ಟೂರ್ನಿವೇಳೆ ಏಕನಾ ಕ್ರೀಡಾಂಗಣದಲ್ಲಿ ನಡೆದ 43ನೇ ಪಂದ್ಯದಲ್ಲಿ ಆರ್‌ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 18 ರನ್‌ಗಳ ಜಯ ಸಾಧಿಸಿತು. ಈ ಹಿಂದೆ ಆರ್‌ಸಿಬಿ ತವರಿನಲ್ಲಿ ಲಕ್ನೋ ವಿರುದ್ಧದ ವಿರೋಚಿತ ಸೋಲಿಗೆ ಸೇಡು ತೀರಿಸಿಕೊಂಡಿತು. ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಈ ಹಿಂದೆಯೂ ಹಲವು ಬಾರಿ ಜಗಳ ನಡೆದಿವೆ. ಆ ನಂತರ ಇಬ್ಬರ ನಡುವೆ ಉತ್ತಮ ಬಾಂಧವ್ಯವಿತ್ತು. ಆದರೆ ಅಂದು ನಡೆದ ಪಂದ್ಯದ ಬಳಿಕ ಇವರಿಬ್ಬರ ನಡುವಿನ ಜಗಳ ಅತಿರೇಕಕ್ಕೆ ತಲುಪಿತ್ತು. ಒಂದು ವೇಳೆ ಸಹ ಆಟಗಾರರು ಮಧ್ಯ ಬಾರದೇ ಇದ್ದಿದ್ದರೆ ಕೈಕೈ ಮಿಲಾಯಿಸುವುದಕ್ಕೂ ಕಾರಣವಾಗುತ್ತಿತ್ತು.

    ಅಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ನಡುವಣ ಪಂದ್ಯದಲ್ಲಿ ಲಕ್ನೋ ತಂಡ 1 ವಿಕೆಟ್‌ಗಳ ಜಯ ದಾಖಲಿಸಿತ್ತು. ಆ ಪಂದ್ಯದ ಬಳಿಕ ಗಂಭೀರ್ ಬಾಯ್ಮೇಲೆ ಬೆರೆಳಿಟ್ಟು ಆರ್‌ಸಿಬಿ ಪ್ರೇಕ್ಷಕರು ಸುಮ್ಮನಿರುವಂತೆ ಸೂಚಿಸಿ ಸಂಭ್ರಮಿಸಿದ್ದರು. ಲಕ್ನೋ ತಂಡದ ಅವೇಶ್ ಖಾನ್ ಹೆಲ್ಮೆಟ್ ಕಿತ್ತೆಸೆದು ಅತಿರೇಖದ ವರ್ತನೆ ತೋರಿಸಿದ್ದರು. ಇದಕ್ಕೆ ಪ್ರತಿಯಾಗಿ ತವರಿನಲ್ಲಿ ಬುದ್ಧಿ ಕಲಿಸಲು ನಿರ್ಧರಿಸಿದ್ದ ಕೊಹ್ಲಿ ಪಂದ್ಯದ ನಡುವೆ ಅಭಿಮಾನಿಗಳು ಸುಮ್ಮನಿರಬಾರದು? ಹೃದಯತುಂಬಿ ಸಂಭ್ರಮಿಸಬೇಕು ಎಂದು ಸನ್ನೆ ಮೂಲಕ ತೋರಿಸಿದ್ದರು. ಇದನ್ನೂ ಓದಿ: ಲಂಕಾ ವಿರುದ್ಧ ಮೋಸದಾಟವಾಡಿತಾ ಪಾಕ್‌? – ಮತ್ತೆ ಮತ್ತೆ ಟೀಕೆಗೆ ಗುರಿಯಾಗ್ತಿರೋದೇಕೆ?

    127 ರನ್ ಗುರಿ ಬೆನ್ನತ್ತಿದ್ದ ಲಕ್ನೋ ತಂಡ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇನಿಂಗ್ಸ್ ಅಂತ್ಯದಲ್ಲಿ ಅಮಿತ್ ಮಿಶ್ರಾ 19 ರನ್ ಮತ್ತು ವೇಗಿ ನವೀನ್ ಉಲ್ ಹಕ್ 13 ನಡುವೆ ಸಣ್ಣ ಜೊತೆಯಾಟವೊಂದು ಮೂಡಿಬಂದಿತ್ತು. ಕವರ್ಸ್ ವಿಭಾಗದಲ್ಲಿ ಒಂದು ಫೋರ್ ಕೂಡ ಬಾರಿಸಿದ್ದ ನವೀನ್ ಉಲ್‌ಹಕ್‌ ಆರ್‌ಸಿಬಿ ಸ್ಟಾರ್‌ ವಿರಾಟ್ ಕೊಹ್ಲಿ ಅವರನ್ನ ದುರುಗುಟ್ಟಿ ನೋಡಿ, ದೊಡ್ಡ ಜಗಳಕ್ಕೆ ಸಣ್ಣ ಕಿಡಿ ಹಚ್ಚಿದ್ದರು. ಪಂದ್ಯ ಮುಗಿದ ಬಳಿಕ ನವೀನ್ ಮತ್ತು ಕೊಹ್ಲಿ ಕೈ ಕುಲುಕುವಾಗಲೂ ಮಾತಿನ ಚಕಮಕಿ ನಡೆದಿತ್ತು. ಕೈ-ಕೈ ಮಿಲಾಯಿಸುವುದಕ್ಕೂ ಮುಂದಾಗಿದ್ದರು. ಆದ್ರೆ ಮ್ಯಾಕ್ಸ್ವೆಲ್ ಹಾಗೂ ಹರ್ಷಲ್ ಪಟೇಲ್ ಸಮಾಧಾನಪಡಿಸಿ ಕಳುಹಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಟ್‌ಮ್ಯಾನ್‌ ಸ್ಫೋಟಕ ಆಟಕ್ಕೆ 4 ದಾಖಲೆ ಸೃಷ್ಟಿ!

    ಹಿಟ್‌ಮ್ಯಾನ್‌ ಸ್ಫೋಟಕ ಆಟಕ್ಕೆ 4 ದಾಖಲೆ ಸೃಷ್ಟಿ!

    ನವದೆಹಲಿ: ಟೀಂ ಇಂಡಿಯಾ (Team India) ನಾಯಕ ಹಿಟ್‌ಮ್ಯಾನ್‌ ಎಂದೇ ಖ್ಯಾತಿ ಪಡೆದಿರುವ ರೋಹಿತ್‌ ಶರ್ಮಾ (Rohith Sharma) ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಶತಕ, ಸಿಕ್ಸರ್‌ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ.

    ಅಫ್ಘಾನಿಸ್ತಾನ (Afghanistan) ವಿರುದ್ಧ ಶತಕ ಸಿಡಿಸುವ ಮೂಲಕ ಏಕದಿನ ವಿಶ್ವಕಪ್‌ನಲ್ಲಿ (World Cup Cricket) 7 ಶತಕ ಸಿಡಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

    ಏಕದಿನ ಕ್ರಿಕೆಟ್‌ನಲ್ಲಿ ಸಚಿನ್‌ ತೆಂಡೂಲ್ಕರ್‌ 6, ಶ್ರೀಲಂಕಾದ ಕುಮಾರ ಸಂಗಕ್ಕಾರ 5, ರಿಕ್ಕಿಪಾಂಟಿಂಗ್‌ 5, ಡೇವಿಡ್‌ ವಾರ್ನರ್‌ 4, ಸೌರವ್‌ ಗಂಗೂಲಿ 4 ಶತಕ ಸಿಡಿಸಿದ್ದರು. ಇದನ್ನೂ ಓದಿ: ಲಂಕಾ ವಿರುದ್ಧ ಮೋಸದಾಟವಾಡಿತಾ ಪಾಕ್‌? – ಮತ್ತೆ ಮತ್ತೆ ಟೀಕೆಗೆ ಗುರಿಯಾಗ್ತಿರೋದೇಕೆ?

    ಟಿ20 ಶೈಲಿಯಲ್ಲಿ ಬ್ಯಾಟ್‌ ಬೀಸಿದ ರೋಹಿತ್‌ ಶರ್ಮಾ 30 ಎಸೆತದಲ್ಲಿ 50 ರನ್‌ (7 ಬೌಂಡರಿ, 2 ಸಿಕ್ಸರ್‌) ಹೊಡೆದರೆ 63 ಎಸೆತದಲ್ಲಿ 100 ರನ್‌ (12 ಬೌಂಡರಿ, 4 ಸಿಕ್ಸರ್‌) ಚಚ್ಚಿದರು. ಅಂತಿಮವಾಗಿ ರೋಹಿತ್‌ ಶರ್ಮಾ ತಂಡದ ಮೊತ್ತ 205 ಆಗಿದ್ದಾಗ 131 ರನ್‌ (84 ಎಸೆತ, 16 ಬೌಂಡರಿ, 5 ಸಿಕ್ಸರ್‌) ಸಿಡಿಸಿ ರಶೀದ್‌ ಖಾನ್‌ ಬೌಲಿಂಗ್‌ನಲ್ಲಿ ಬೌಲ್ಡ್‌ ಆಗುವ ಮೂಲಕ ಔಟಾದರು.

    ಅತಿವೇಗದ 1000 ರನ್​
    ವಿಶ್ವಕಪ್‌ನಲ್ಲಿ ವೇಗವಾಗಿ 1000 ರನ್ ಪೂರೈಸಿದ ದಾಖಲೆಯನ್ನೂ ರೋಹಿತ್ ಶರ್ಮಾ ಮಾಡಿದ್ದಾರೆ. ಡೇವಿಡ್ ವಾರ್ನರ್ ಜೊತೆಗೆ 19 ಇನಿಂಗ್ಸ್​ಗಳಲ್ಲಿ ವೇಗವಾಗಿ ಈ ಸಾಧನೆ ಮಾಡಿದ ಬ್ಯಾಟರ್​ ಎಂಬ ಸಾಧನೆ ಮಾಡಿದ್ದಾರೆ.

    ಭಾರತ ಪರ ಅತಿ ವೇಗದ ಶತಕ
    63 ಎಸೆತಗಳಲ್ಲಿ ಶತಕ ಬಾರಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ರೋಹಿತ್‌ ಪಾತ್ರರಾಗಿದ್ದಾರೆ. ಈ ಹಿಂದೆ ಕಪಿಲ್ ದೇವ್ 72 ಎಸೆತಗಳಲ್ಲಿ ಶತಕ ಹೊಡೆದಿದ್ದರು.

    ಅತಿ ಹೆಚ್ಚು ಸಿಕ್ಸರ್‌
    ಎಲ್ಲಾ ಮಾದರಿ ಕ್ರಿಕೆಟ್​ ಸೇರಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಸಿಕ್ಸರ್​ಗಳನ್ನು ಚಚ್ಚಿದ ಆಟಗಾರನಾಗಿ ರೋಹಿತ್‌ ಹೊರಹೊಮ್ಮಿದ್ದಾರೆ. ಈ ಹಿಂದೆ ವೆಸ್ಟ್ ಇಂಡೀಸ್​​ನ ​ಕ್ರಿಸ್ ಗೇಲ್ 553 ಸಿಕ್ಸರ್ (551 ಇನ್ನಿಂಗ್ಸ್) ಹೊಡೆದು ಮೊದಲ ಸ್ಥಾನದಲ್ಲಿದ್ದರು. ಈಗ ಮೂರನೇ ಸಿಕ್ಸರ್ ಬಾರಿಸುವ ಮೂಲಕ ಒಟ್ಟು 554 ಸಿಕ್ಸರ್​ಗಳೊಂದಿಗೆ ಅಗ್ರಸ್ಥಾನಕ್ಕೆ ಏರಿದ್ದಾರೆ.

     

     

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜದ್ರಾನ್ ವಿಕೆಟ್ ಪಡೆದು ಟೆಂಪಲ್ ಪಾಯಿಂಟ್ ಸ್ಟೈಲ್ ಅನುಕರಿಸಿದ ಬುಮ್ರಾ

    ಜದ್ರಾನ್ ವಿಕೆಟ್ ಪಡೆದು ಟೆಂಪಲ್ ಪಾಯಿಂಟ್ ಸ್ಟೈಲ್ ಅನುಕರಿಸಿದ ಬುಮ್ರಾ

    ನವದೆಹಲಿ: ಅಫ್ಘಾನ್ (Afghanistan) ವಿರುದ್ಧದ ಪಂದ್ಯದ ವೇಳೆ ಜದ್ರಾನ್ ವಿಕೆಟ್ ಪಡೆದು ಹೆಸರಾಂತ ಫುಟ್‍ಬಾಲ್ ಆಟಗಾರ ಮಾರ್ಕಸ್ ರಾಶ್ಫೋರ್ಡ್ ಅವರ ಟೆಂಪಲ್ ಪಾಯಿಂಟ್ ಸ್ಟೈಲ್‍ನ್ನು ಟೀಂ ಇಂಡಿಯಾ (Team India) ಆಟಗಾರ ಜಸ್‍ಪ್ರೀತ್ ಬುಮ್ರಾ (Jasprit Bumrah) ಅನುಸರಿಸಿ ಸಂಭ್ರಮಿಸಿದ್ದಾರೆ.

     

    View this post on Instagram

     

    A post shared by ICC (@icc)

    ನವದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದ ಏಳನೇ ಓವರ್‌ನಲ್ಲಿ ಬುಮ್ರಾ ವಿಕೆಟ್ ಪಡೆದರು. ಇಬ್ರಾಹಿಂ ಜದ್ರಾನ್ 22(28 ಎಸೆತ) ಅವರ ಕ್ಯಾಚ್‍ನ್ನು ಕೊಹ್ಲಿ ಪಡೆದು ಔಟ್ ಮಾಡಿದರು. ಈ ವೇಳೆ ಸಂಭ್ರಮಿಸುವಾಗ ಬುಮ್ರಾ ತಲೆಯತ್ತ ಬೆರಳು ಮಾಡಿ ತೋರಿಸಿದರು. ಇದನ್ನೂ ಓದಿ: ಪಾಕ್ ನೆಲದಲ್ಲೇ ಆಡಿದ ಫೀಲ್ ನೀಡಿದೆ – ಅಭಿಮಾನಿಗಳ ಬೆಂಬಲಕ್ಕೆ ಪಾಕ್ ಆಟಗಾರ ರಿಜ್ವಾನ್ ಪ್ರತಿಕ್ರಿಯೆ

    ಬುಮ್ರಾ ಒಬ್ಬ ದೊಡ್ಡ ಫುಟ್‍ಬಾಲ್ ಅಭಿಮಾನಿಯಾಗಿದ್ದಾರೆ. ಇದೇ ಕಾರಣಕ್ಕೆ ಅವರು ಇಂಗ್ಲೆಂಡ್‍ಗೆ ತೆರಳಿದ್ದ ವೇಳೆ ಓಲ್ಡ್ ಟ್ರಾಫರ್ಡ್ ಅವರನ್ನು ಭೇಟಿ ಮಾಡಿದ್ದರು. ಇತ್ತೀಚೆಗೆ ಹೆಸರಾಂತ ಫುಟ್ಬಾಲ್ ಆಟಗಾರ ಝ್ಲಾಟಾನ್ ಇಬ್ರಾಹಿಮೊವಿಕ್ ಅವರು ನಿವೃತ್ತರಾದ ಬಳಿಕ ಪೋಸ್ಟ್ ಒಂದನ್ನು ಬರೆದು `ನೀವು ನಿರಂತರ ಸ್ಫೂರ್ತಿಯ ಮೂಲ’ ಎಂದು ಕರೆದಿದ್ದರು.

    ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಅಫ್ಘಾನಿಸ್ತಾನ 50 ಓವರ್‍ಗೆ 8 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದೆ. ಇನ್ನು 273 ರನ್ ಗುರಿಯನ್ನು ಹೊತ್ತಿರುವ ಟೀಂ ಇಂಡಿಯಾ ಇನ್ನೂ ತನ್ನ ಬ್ಯಾಟ್ ಬೀಸುವ ತವಕದಲ್ಲಿದೆ. ಇದನ್ನೂ ಓದಿ: Major Update: ಗಿಲ್‌ ಆರೋಗ್ಯದ ಬಗ್ಗೆ ಬ್ಯಾಟಿಂಗ್‌ ಕೋಚ್‌ ಹೇಳಿದ್ದೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ಇಂದು ಇಂಡೋ-ಅಫ್ಘಾನ್‌ ಕದನ – ಕೊಹ್ಲಿ ಅಬ್ಬರ ನೋಡಲು ಅಭಿಮಾನಿಗಳ ಕಾತರ

    World Cup 2023: ಇಂದು ಇಂಡೋ-ಅಫ್ಘಾನ್‌ ಕದನ – ಕೊಹ್ಲಿ ಅಬ್ಬರ ನೋಡಲು ಅಭಿಮಾನಿಗಳ ಕಾತರ

    ನವದೆಹಲಿ: ವಿಶ್ವಕಪ್‌ (Cricket World Cup 2023) ಆರಂಭಿಕ ಪಂದ್ಯದಲ್ಲಿ ಸ್ಪಿನ್‌ ಸ್ನೇಹಿ ಪಿಚ್‌ನಲ್ಲೂ ಆಸೀಸ್‌ ವಿರುದ್ಧ ಗೆದ್ದು, ವಿಶ್ವಕಪ್‌ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿರುವ ಭಾರತ ಇಂದು ಅಫ್ಘಾನಿಸ್ತಾನ (Afghanistan) ತಂಡದ ವಿರುದ್ಧ ಸೆಣಸಲಿದೆ.

    ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭಗೊಳ್ಳಲಿದ್ದು, ಭಾರತ ತಂಡ ನಿರಾಯಾಸವಾಗಿ ಗೆಲ್ಲುವ ಗುರಿ ಹೊಂದಿದೆ. ಅದರಲ್ಲೂ ಮುಖ್ಯವಾಗಿ ಅಫ್ಘಾನ್‌ ಬೌಲರ್‌ ನವೀನ್‌ ಉಲ್‌ ಹಕ್‌ನನ್ನ ಕೆಣಕುವ ಸಲುವಾಗಿಯೇ ಮೈದಾನದಲ್ಲಿ ಕೊಹ್ಲಿ (Virat Kohli) ಅಬ್ಬರಿಸೋದನ್ನ ನೋಡಲು ಕಾದು ಕುಳಿತಿದ್ದಾರೆ.

    ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಮೂರು ಬಾರಿ ಮುಖಾಮುಖಿಯಾಗಿದ್ದು, ಭಾರತ 2 ಬಾರಿ ಗೆಲುವು ಸಾಧಿಸಿದೆ. ಒಂದು ಬಾರಿ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇದನ್ನೂ ಓದಿ: ಶತಕ ಸಿಡಿಸಿ ಎರಡು ದಾಖಲೆ ಬರೆದ ಮಲಾನ್‌ – ಇಂಗ್ಲೆಂಡ್‌ಗೆ 137ರನ್‌ಗಳ ಭರ್ಜರಿ ಜಯ

    ಪಿಚ್‌ ರಿಪೋರ್ಟ್‌ ಹೇಗಿದೆ?
    ಅರುಣ್‌ ಜೇಟ್ಲಿ ಕ್ರೀಡಾಂಗಣವು ಬ್ಯಾಟಿಂಗ್‌ ಸ್ನೇಹಿ ಪಿಚ್‌ ಆಗಿದ್ದು, ಟಾಸ್‌ ಗೆದ್ದ ತಂಡವು ಬ್ಯಾಟಿಂಗ್‌ ಆಯ್ದುಕೊಳ್ಳುವ ಸಾಧ್ಯತೆಗಳು ಹೆಚ್ಚಿದೆ. ಇದೇ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 428 ರನ್‌ ಸಿಡಿಸಿ ವಿಶ್ವದಾಖಲೆ ಬರೆದಿತು. ದಕ್ಷಿಣ ಆಫ್ರಿಕಾದ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ ಬರೋಬ್ಬರಿ 31 ಸಿಕ್ಸರ್‌ಗಳು ದಾಖಲಾಗಿದ್ದವು. ಹಾಗಾಗಿ ಉತ್ತಮ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಪಡೆಯನ್ನು ಹೊಂದಿರುವ ಭಾರತ ಗೆಲುವಿನ ವಿಶ್ವಾಸದಲ್ಲಿದೆ. ಇದನ್ನೂ ಓದಿ: Olympics 2028: ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್​ಗೆ ಕ್ರಿಕೆಟ್‌ ಸೇರ್ಪಡೆ ಖಚಿತ – ಅಧಿಕೃತ ಘೋಷಣೆಯಷ್ಟೇ ಬಾಕಿ

    ಕೊಹ್ಲಿ ಫ್ಯಾನ್ಸ್‌ಗೆ ನವೀನ್‌ ಆಹಾರವಾಗ್ತಿರೋದೇಕೆ?
    2023ರ ಐಪಿಎಲ್‌ ಟೂರ್ನಿವೇಳೆ ಏಕನಾ ಕ್ರೀಡಾಂಗಣದಲ್ಲಿ ನಡೆದ 43ನೇ ಪಂದ್ಯದಲ್ಲಿ ಆರ್‌ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 18 ರನ್‌ಗಳ ಜಯ ಸಾಧಿಸಿತು. ಈ ಹಿಂದೆ ಆರ್‌ಸಿಬಿ ತವರಿನಲ್ಲಿ ಲಕ್ನೋ ವಿರುದ್ಧದ ವಿರೋಚಿತ ಸೋಲಿಗೆ ಸೇಡು ತೀರಿಸಿಕೊಂಡಿತು. ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಈ ಹಿಂದೆಯೂ ಹಲವು ಬಾರಿ ಜಗಳ ನಡೆದಿವೆ. ಆ ನಂತರ ಇಬ್ಬರ ನಡುವೆ ಉತ್ತಮ ಬಾಂಧವ್ಯವಿತ್ತು. ಆದರೆ ಅಂದು ನಡೆದ ಪಂದ್ಯದ ಬಳಿಕ ಇವರಿಬ್ಬರ ನಡುವಿನ ಜಗಳ ಅತಿರೇಕಕ್ಕೆ ತಲುಪಿತ್ತು. ಒಂದು ವೇಳೆ ಸಹ ಆಟಗಾರರು ಮಧ್ಯ ಬಾರದೇ ಇದ್ದಿದ್ದರೆ ಕೈಕೈ ಮಿಲಾಯಿಸುವುದಕ್ಕೂ ಕಾರಣವಾಗುತ್ತಿತ್ತು. ಇದನ್ನೂ ಓದಿ: World Cup 2023: ಅ.14 ರಂದು ಪಾಕ್‌ ವಿರುದ್ಧ ಹೈವೋಲ್ಟೇಜ್‌ ಕದನ – ಗಿಲ್‌ ಕಣಕ್ಕಿಳಿಯೋದು ಡೌಟ್‌

    ಅಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ನಡುವಣ ಪಂದ್ಯದಲ್ಲಿ ಲಕ್ನೋ ತಂಡ 1 ವಿಕೆಟ್‌ಗಳ ಜಯ ದಾಖಲಿಸಿತ್ತು. ಆ ಪಂದ್ಯದ ಬಳಿಕ ಗಂಭೀರ್ ಬಾಯ್ಮೇಲೆ ಬೆರೆಳಿಟ್ಟು ಆರ್‌ಸಿಬಿ ಪ್ರೇಕ್ಷಕರು ಸುಮ್ಮನಿರುವಂತೆ ಸೂಚಿಸಿ ಸಂಭ್ರಮಿಸಿದ್ದರು. ಲಕ್ನೋ ತಂಡದ ಅವೇಶ್ ಖಾನ್ ಹೆಲ್ಮೆಟ್ ಕಿತ್ತೆಸೆದು ಅತಿರೇಖದ ವರ್ತನೆ ತೋರಿಸಿದ್ದರು. ಇದಕ್ಕೆ ಪ್ರತಿಯಾಗಿ ತವರಿನಲ್ಲಿ ಬುದ್ಧಿ ಕಲಿಸಲು ನಿರ್ಧರಿಸಿದ್ದ ಕೊಹ್ಲಿ ಪಂದ್ಯದ ನಡುವೆ ಅಭಿಮಾನಿಗಳು ಸುಮ್ಮನಿರಬಾರದು? ಹೃದಯತುಂಬಿ ಸಂಭ್ರಮಿಸಬೇಕು ಎಂದು ಸನ್ನೆ ಮೂಲಕ ತೋರಿಸಿದ್ದರು. ಇದನ್ನೂ ಓದಿ: ಪಾಕ್‌ ಉಗ್ರರನ್ನ ಹತ್ಯೆಗೈದ ಕಮಾಂಡೋಗಳಿಂದಲೇ ಭಾರತ-ಪಾಕ್ ಪಂದ್ಯಕ್ಕೆ ಭದ್ರತೆ – ಇಲ್ಲಿದೆ ಡಿಟೇಲ್ಸ್‌

    127 ರನ್ ಗುರಿ ಬೆನ್ನತ್ತಿದ್ದ ಲಕ್ನೋ ತಂಡ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇನಿಂಗ್ಸ್ ಅಂತ್ಯದಲ್ಲಿ ಅಮಿತ್ ಮಿಶ್ರಾ 19 ರನ್ ಮತ್ತು ವೇಗಿ ನವೀನ್ ಉಲ್ ಹಕ್ 13 ನಡುವೆ ಸಣ್ಣ ಜೊತೆಯಾಟವೊಂದು ಮೂಡಿಬಂದಿತ್ತು. ಕವರ್ಸ್ ವಿಭಾಗದಲ್ಲಿ ಒಂದು ಫೋರ್ ಕೂಡ ಬಾರಿಸಿದ್ದ ನವೀನ್ ಉಲ್‌ಹಕ್‌ ಆರ್‌ಸಿಬಿ ಸ್ಟಾರ್‌ ವಿರಾಟ್ ಕೊಹ್ಲಿ ಅವರನ್ನ ದುರುಗುಟ್ಟಿ ನೋಡಿ, ದೊಡ್ಡ ಜಗಳಕ್ಕೆ ಸಣ್ಣ ಕಿಡಿ ಹಚ್ಚಿದ್ದರು. ಪಂದ್ಯ ಮುಗಿದ ಬಳಿಕ ನವೀನ್ ಮತ್ತು ಕೊಹ್ಲಿ ಕೈ ಕುಲುಕುವಾಗಲೂ ಮಾತಿನ ಚಕಮಕಿ ನಡೆದಿತ್ತು. ಕೈ-ಕೈ ಮಿಲಾಯಿಸುವುದಕ್ಕೂ ಮುಂದಾಗಿದ್ದರು. ಆದ್ರೆ ಮ್ಯಾಕ್ಸ್ವೆಲ್ ಹಾಗೂ ಹರ್ಷಲ್ ಪಟೇಲ್ ಸಮಾಧಾನಪಡಿಸಿ ಕಳುಹಿಸಿದ್ದರು.

    ಕೊಹ್ಲಿ ಮತ್ತು ನವೀನ್ ಉಲ್‌ ಹಕ್‌ ನಡುವಣ ಸಣ್ಣ ಜಗಳವನ್ನು ಅಲ್ಲೇ ಇದ್ದ ಎರಡೂ ತಂಡಗಳ ಆಟಗಾರರು ಬಗೆ ಹರಿಸಿದ್ದರು. ಆದರೆ, ಡಗೌಟ್‌ನಿಂದ ಹೊರಬಂದ ಗೌತಮ್ ಗಂಭೀರ್ ಜಗಳವನ್ನು ಮತ್ತಷ್ಟು ಗಂಭೀರವಾಗಿಸಿದರು. ವಿರಾಟ್ ಜೊತೆಗೆ ಮಾತನಾಡುತ್ತಿದ್ದ ಎಲ್‌ಎಸ್‌ಜಿ ಆಟಗಾರ ಕೈಲ್ ಮೇಯರ್ಸ್ ಅವರನ್ನು ಎಳೆದೊಯ್ದ ಗಂಭೀರ್ ಈ ಸಂದರ್ಭದಲ್ಲಿ ಮಾತಿನ ಚಕಮಕಿಯೇ ನಡೆಸಿದ್ದರು. ಕೊಹ್ಲಿ ಮತ್ತು ಗಂಭೀರ್‌ನ ತಡೆದು ನಿಲ್ಲಿಸಲು ಎರಡೂ ತಂಡದ ಆಟಗಾರರು ಹರಸಾಹನ ನಡೆಸಿದರು. ಈ ವೇಳೆ ಕೆ.ಎಲ್ ರಾಹುಲ್ ಹಾಗೂ ಅಮಿತ್ ಮಿಶ್ರಾ ಪರಿಸ್ಥಿತಿಯನ್ನು ತಣ್ಣಗಾಗಿಸಿದರು. ಇದನ್ನೂ ಓದಿ:

    ಅಫ್ಘಾನ್‌ ವಿರುದ್ಧ ಭಾರತ ಪ್ಲೇಯಿಂಗ್‌-11: ರೋಹಿತ್‌ ಶರ್ಮಾ (ನಾಯಕ), ಇಶಾನ್‌ ಕಿಶನ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆ.ಎಲ್‌ ರಾಹುಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್‌ ಅಶ್ವಿನ್‌, ಕುಲ್ದೀಪ್‌ ಯಾದವ್‌, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪ – 4,000 ಗಡಿ ದಾಟಿದ ಸಾವಿನ ಸಂಖ್ಯೆ

    ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪ – 4,000 ಗಡಿ ದಾಟಿದ ಸಾವಿನ ಸಂಖ್ಯೆ

    ಕಾಬೂಲ್: ಪಶ್ಚಿಮ ಅಫ್ಘಾನಿಸ್ತಾನದಲ್ಲಿ (Afghanistan) ಶನಿವಾರ ಸಂಭವಿಸಿದ ಸರಣಿ ಭೂಕಂಪದಲ್ಲಿ (Earthquake) 4,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

    6.2 ತೀವ್ರತೆಯ 2 ಭೂಕಂಪಗಳಲ್ಲಿ ಸುಮಾರು 2,000 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

    ಇದುವರೆಗಿನ ಸಾವುನೋವುಗಳಿಗೆ ಸಂಬಂಧಿಸಿದಂತೆ ನಾವು ಪಡೆದ ಅಂಕಿಅಂಶಗಳು ದುರದೃಷ್ಟವಶಾತ್ 4,000 ಅಧಿಕ ಜನರನ್ನು ಮೀರಿದೆ. ನಮ್ಮ ಅಂಕಿಅಂಶಗಳ ಪ್ರಕಾರ ಸುಮಾರು 20 ಹಳ್ಳಿಗಳಲ್ಲಿ, ಸರಿಸುಮಾರು 1,980 ರಿಂದ 2,000 ಮನೆಗಳು ಸಂಪೂರ್ಣವಾಗಿ ಕುಸಿದಿವೆ ಎಂದು ವಕ್ತಾರ ಮುಲ್ಲಾ ಸಾಯಿಕ್ ಕಾಬೂಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದನ್ನೂ ಓದಿ: ಯುದ್ಧ ನಾವು ಆರಂಭಿಸಿಲ್ಲ ಆದ್ರೆ ಮುಗಿಸುತ್ತೇವೆ – ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುಡುಗು

    ವಿವಿಧ ಸಂಸ್ಥೆಗಳ 35 ರಕ್ಷಣಾ ತಂಡಗಳಲ್ಲಿ ಒಟ್ಟು 1,000 ಕ್ಕೂ ಹೆಚ್ಚು ರಕ್ಷಕರು ಪೀಡಿತ ಪ್ರದೇಶಗಳಲ್ಲಿ ಪರಿಹಾರ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಹಂಗಾಮಿ ಪ್ರಧಾನಿ ಮೊಹಮ್ಮದ್ ಹಸನ್ ಅಖುಂಡ್ ಅವರು ಹೆರಾತ್ ಪ್ರಾಂತ್ಯದ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು.

    ಚೀನಾ ಅಫ್ಘಾನ್ ರೆಡ್ ಕ್ರೆಸೆಂಟ್‌ಗೆ 200,000 ಅಮೆರಿಕನ್ ಡಾಲರ್‌ಗಳನ್ನು ತುರ್ತು ಮಾನವೀಯ ನೆರವಾಗಿ ಅದರ ರಕ್ಷಣೆ ಮತ್ತು ವಿಪತ್ತು ಪರಿಹಾರ ಪ್ರಯತ್ನಗಳಿಗೆ ಸಹಾಯ ಮಾಡಲು ಒದಗಿಸಿದೆ. ಇದನ್ನೂ ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ; 60 ಕ್ಕೂ ಹೆಚ್ಚು ವಿದೇಶಿ ಪ್ರಜೆಗಳು ಸಾವು – ಯಾವ ದೇಶದ ಎಷ್ಟು ಮಂದಿ?

    ಶನಿವಾರ ಮಧ್ಯಾಹ್ನ ಹೆರಾತ್ ಪ್ರಾಂತ್ಯ ಮತ್ತು ನೆರೆಯ ಪ್ರದೇಶಗಳಲ್ಲಿ ಭೂಕಂಪಗಳು ಸಂಭವಿಸಿದವು. ಮೊದಲ ಕಂಪನವು ಸ್ಥಳೀಯ ಸಮಯ 11.10 ರ ಸುಮಾರಿಗೆ ಸಂಭವಿಸಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಫ್ಘಾನ್ ಭೂಕಂಪ ಸಂತ್ರಸ್ತರ ನೆರವಿಗೆ ನಿಂತ ರಶೀದ್ ಖಾನ್ ಫೌಂಡೇಶನ್

    ಅಫ್ಘಾನ್ ಭೂಕಂಪ ಸಂತ್ರಸ್ತರ ನೆರವಿಗೆ ನಿಂತ ರಶೀದ್ ಖಾನ್ ಫೌಂಡೇಶನ್

    ಕಾಬೂಲ್: ಅಫ್ಘಾನ್ ಅಂತರಾಷ್ಟ್ರೀಯ ಕ್ರಿಕೆಟಿಗ ಹಾಗೂ T20ಯ ಅಫ್ಘಾನಿಸ್ತಾನದ (Afghanistan) ರಾಷ್ಟ್ರೀಯ ತಂಡದ ನಾಯಕ ರಶೀದ್ ಖಾನ್ (Rashid Khan) ಅವರು ನಡೆಸುತ್ತಿರುವ ಎನ್‍ಜಿಒ, ಹೆರಾತ್‍ನಲ್ಲಿ ಸಂಭವಿಸಿದ ಭೂಕಂಪನದಿಂದ (Earthquake) ನಲುಗಿದವರ ನೆರವಿಗೆ ನಿಂತಿದೆ. ಈ ಮೂಲಕ 83 ಲಕ್ಷ ರೂ.ಗಳನ್ನು ಸಂಗ್ರಹಿಸಿ ಸಂತ್ರಸ್ತರ ನೆರವಿಗೆ ನೀಡಲು ಮುಂದಾಗಿದೆ.

    ಸಂತ್ರಸ್ತರಿಗೆ ಸಹಾಯ ಮಾಡಲು ರಶೀದ್ ಖಾನ್ ಫೌಂಡೇಶನ್ ತುರ್ತು ನಿಧಿಸಂಗ್ರಹ ಅಭಿಯಾನವನ್ನು ಆಯೋಜಿಸಿದೆ. ಈ ದುರಂತದಲ್ಲಿ ಬದುಕುಳಿದವರಿಗೆ ತಕ್ಷಣದ ಪರಿಹಾರ ಹಾಗೂ ಬೆಂಬಲವನ್ನು ಒದಗಿಸಲು ಈ ನಿರ್ಧಾರಕ್ಕೆ ಸಂಸ್ಥೆ ಮುಂದಾಗಿದೆ. ಇದಕ್ಕಾಗಿ ಈ ಅಭಿಯಾನದಲ್ಲಿ ಕೈ ಜೋಡಿಸುವಂತೆ ಸಂಸ್ಥೆ ಕರೆಕೊಟ್ಟಿದೆ. ಇದನ್ನೂ ಓದಿ: ಅಫ್ಘಾನ್ ಪ್ರಬಲ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 2,000ಕ್ಕೆ ಏರಿಕೆ

    ಜನರು ನೀಡುವ ಸಹಾಯ ಸಹಾಯ ಸಂತ್ರಸ್ತರಿಗೆ ಸಹಾಯವಾಗಲಿದೆ. ಈ ಕಷ್ಟದ ಸಮಯದಲ್ಲಿ ಹೆರಾತ್‍ನ ಜನರ ಪರವಾಗಿ ನಾವು ಒಂದಾಗೋಣ. ಅವರಿಗೆ ನಮ್ಮ ಅಚಲ ಬೆಂಬಲವಿದೆ ಎಂದು ತೋರಿಸೋಣ ಎಂದು ರಶೀದ್ ಖಾನ್ ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

    ಅ.7 ರಂದು ಅಫ್ಘಾನಿಸ್ತಾನದ ಹೆರಾತ್ ಸಂಭವಿಸಿದ ಭೂಕಂಪ 2,000 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದೆ. ಅಲ್ಲದೇ ಇದರಲ್ಲಿ ಸಾವಿರಾರು ಜನರು ಗಾಯಗೊಂಡಿದ್ದಾರೆ. ಸುಮಾರು 12 ಹಳ್ಳಿಗಳು ಸಂಪೂರ್ಣವಾಗಿ ನಾಶಗೊಂಡಿವೆ. ಇದನ್ನೂ ಓದಿ: ಪ್ಯಾಲೆಸ್ಟೈನ್‌ ಬೆಂಬಲಿಸಿ ನಿರ್ಣಯ ಕೈಗೊಂಡ ಕಾಂಗ್ರೆಸ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಫ್ಘಾನ್ ಪ್ರಬಲ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 2,000ಕ್ಕೆ ಏರಿಕೆ

    ಅಫ್ಘಾನ್ ಪ್ರಬಲ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 2,000ಕ್ಕೆ ಏರಿಕೆ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ (Afghanistan) ಸಂಭವಿಸಿದ ಪ್ರಬಲ ಭೂಕಂಪದಿಂದ (Earthquake) ಸಾವನ್ನಪ್ಪಿದವರ ಸಂಖ್ಯೆ 2060ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

    ಭೂಕಂಪದಿಂದ ಸುಮಾರು 12 ಗ್ರಾಮಗಳು ನಾಶವಾಗಿವೆ. ಅಲ್ಲಿನ ಸಾವಿರಾರು ಮನೆಗಳು ನೆಲಸಮವಾಗಿವೆ. ನೂರಾರು ಜನ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗೆ ಸತತ ಪ್ರಯತ್ನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭೂಕಂಪದ ಕೇಂದ್ರ ಬಿಂದು ಹೆರಾತ್ ನಗರದ ವಾಯುವ್ಯಕ್ಕೆ ಸುಮಾರು 40 ಕಿಲೋಮೀಟರ್ ದೂರದಲ್ಲಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (United States Geological Survey) ಹೇಳಿದೆ. ನಗರದಲ್ಲಿ ಕನಿಷ್ಠ ಐದು ಪ್ರಬಲ ಕಂಪನಗಳು ಸಂಭವಿಸಿವೆ ಎಂದು ತಿಳಿದು ಬಂದಿದೆ. ಅಲ್ಲದೇ ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ಗೋದಾಮು ಮಾಲೀಕ ಅರೆಸ್ಟ್

    ಹೆರಾತ್‍ನಲ್ಲಿ ದೂರವಾಣಿ ಸಂಪರ್ಕ ಕಡಿತಗೊಂಡಿದ್ದು, ಇದರಿಂದ ಭೂಕಂಪ ಪೀಡಿತ ಪ್ರದೇಶಗಳಿಂದ ವಿವರಗಳನ್ನು ಪಡೆಯುವುದು ಕಷ್ಟವಾಗಿದೆ. ಇದರಿಂದಾಗಿಯೂ ಸಹ ಪರಿಹಾರ ಕಾರ್ಯದಲ್ಲಿ ವಿಳಂಬವಾಗುತ್ತಿದೆ. ಇದರ ನಡುವೆಯೂ ಪರಿಹಾರ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಅಫ್ಘಾನಿಸ್ತಾನದ ಸರ್ಕಾರ ಅಲ್ಲಿನ ಶ್ರೀಮಂತರು, ಹಾನಿಗೊಳಗಾದ ಜನರ ನೆರವಿಗೆ ಕೈಜೋಡಿಸಬೇಕು ಎಂದು ಕೇಳಿಕೊಂಡಿದೆ. ಇದನ್ನೂ ಓದಿ: ಮನ್‌ಮುಲ್ ಮೆಗಾ ಡೈರಿ ಘಟಕದಲ್ಲಿ ಅಗ್ನಿ ಅವಘಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ – ಸಾವಿನ ಸಂಖ್ಯೆ 320ಕ್ಕೆ ಏರಿಕೆ

    ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ – ಸಾವಿನ ಸಂಖ್ಯೆ 320ಕ್ಕೆ ಏರಿಕೆ

    ಕಾಬೂಲ್: ಪಶ್ಚಿಮ ಅಫ್ಘಾನಿಸ್ತಾನದ (Afghanistan) ಹೆರಾತ್‍ನಲ್ಲಿ ಸಂಭವಿಸಿದ 6.3 ತೀವ್ರತೆಯ ಪ್ರಬಲ ಭೂಕಂಪನದಿಂದ (Earthquake) 320ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ಜಿಂದಾ ಜಾನ್ ಮತ್ತು ಘೋರಿಯನ್ ಜಿಲ್ಲೆಗಳ 12 ಹಳ್ಳಿಗಳು ಸಂಪೂರ್ಣವಾಗಿ ನಾಶವಾಗಿವೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇದಲ್ಲದೆ ಫರಾಹ್ ಮತ್ತು ಬದ್ಗಿಸ್ ಪ್ರಾಂತ್ಯಗಳಲ್ಲಿನ ಕೆಲವು ಮನೆಗಳು ಸಹ ಭಾಗಶಃ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ – 120 ಮಂದಿ ಬಲಿ, 1,000ಕ್ಕೂ ಅಧಿಕ ಮಂದಿಗೆ ಗಾಯ

    ಅತಿ ದೊಡ್ಡ ನಗರವಾದ ಹೆರಾತ್‍ನ ವಾಯವ್ಯ ಭಾಗದ 40 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಜಿಯಾಲಾಜಿಕಲ್ ಸಮೀಕ್ಷಾ ಕೇಂದ್ರ (States Geological Survey) ತಿಳಿಸಿದೆ. ರಿಕ್ಟರ್ ಮಾಪನದಲ್ಲಿ ಇದು 6.3 ತೀವ್ರತೆ ದಾಖಲಾಗಿದೆ. ಇದರ ನಂತರವೂ 4.3 ಮತ್ತು 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಅವಶೇಷಗಳ ಅಡಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    2022ರ ಜೂನ್‍ನಲ್ಲಿ ಪೂರ್ವ ಅಫ್ಘಾನಿಸ್ತಾನದ ಪರ್ವತ ಪ್ರದೇಶದಲ್ಲಿ ಪ್ರಬಲವಾದ ಭೂಕಂಪನದಿಂದ 1,000ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿತ್ತು. ಈ ವೇಳೆ ಸುಮಾರು 1,500 ಜನರು ಗಾಯಗೊಂಡಿದ್ದರು. ಇದನ್ನೂ ಓದಿ: ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿ – 300ಕ್ಕೂ ಹೆಚ್ಚು ಜನ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ – 120 ಮಂದಿ ಬಲಿ, 1,000ಕ್ಕೂ ಅಧಿಕ ಮಂದಿಗೆ ಗಾಯ

    ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ – 120 ಮಂದಿ ಬಲಿ, 1,000ಕ್ಕೂ ಅಧಿಕ ಮಂದಿಗೆ ಗಾಯ

    ಕಾಬೂಲ್‌: ಅಫ್ಘಾನಿಸ್ತಾನದ ಪಶ್ಚಿಮ ಭಾಗದಲ್ಲಿ (Western Afghanistan) ಶನಿವಾರ ಸಂಭವಿಸಿದ 6.3 ತೀವ್ರತೆಯ ಪ್ರಬಲ ಭೂಕಂಪನದಿಂದ (Earthquak) ಕನಿಷ್ಠ 120 ಮಂದಿ ಸಾವನ್ನಪ್ಪಿದ್ದು, 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಭಾಗದ ಅತಿ ದೊಡ್ಡ ನಗರವಾದ ಹೆರಾತ್‌ನ (Herat Northwest ) ವಾಯವ್ಯ ಭಾಗದ 40 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಜಿಯಾಲಾಜಿಕಲ್ ಸಮೀಕ್ಷಾ ಕೇಂದ್ರ ತಿಳಿಸಿದೆ. ರಿಕ್ಟರ್ ಮಾಪನದಲ್ಲಿ ಇದು 6.3 ತೀವ್ರತೆ ದಾಖಲಾಗಿದೆ. ಇದರ ನಂತರವೂ 4.3 ಮತ್ತು 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಹತ್ಯೆ, ಮೋದಿ ಸ್ಟೇಡಿಯಂ ಸ್ಫೋಟ ಬೆದರಿಕೆ – ಮುಂಬೈ ಪೊಲೀಸರಿಗೆ ಸಂದೇಶ

    ಗಾಯಗೊಂಡ 1 ಸಾವಿರಕ್ಕೂ ಅಧಿಕ ಜನರಲ್ಲಿ ಮಹಿಳೆಯರು‌, ಮಕ್ಕಳು ಹಾಗೂ ವೃದ್ಧರೂ ಇದ್ದಾರೆ. ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಭೂಕಂಪನದ ತೀವ್ರತೆಗೆ ಅನೇಕ ಕಟ್ಟಡಗಳು ಕುಸಿದಿದ್ದು, ಅವುಗಳ ಅವಶೇಷಗಳ ಅಡಿ ಅನೇಕ ಮಂದಿ ಸಿಲುಕಿಕೊಂಡಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಇದನ್ನೂ ಓದಿ: 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌

    ಜನರು ಅವಶೇಷಗಳ ಅಡಿ ಹೂತು ಹೋಗಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದ್ದು, ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೆರಾತ್ ಪ್ರಾಂತ್ಯದ ಸಾರ್ವಜನಿಕ ಆರೋಗ್ಯ ನಿರ್ದೇಶಕ ಮೊಹಮ್ಮದ್ ತಾಲೆಬ್ ಶಾಹಿದಿ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]