Tag: Africa corona Virus

  • ಘಾನಾದಿಂದ ಆಗಮಿಸಿದ ವ್ಯಕ್ತಿಗೆ ಸೋಂಕು – ತುರ್ತು ಸಭೆ ನಡೆಸಿದ ಮಂಗಳೂರು ಡಿಸಿ

    ಘಾನಾದಿಂದ ಆಗಮಿಸಿದ ವ್ಯಕ್ತಿಗೆ ಸೋಂಕು – ತುರ್ತು ಸಭೆ ನಡೆಸಿದ ಮಂಗಳೂರು ಡಿಸಿ

    ಮಂಗಳೂರು: ಹೈರಿಸ್ಕ್ ದೇಶ ಘಾನಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದನ್ನೂ ಓದಿ: ಭಾರತದಲ್ಲಿ ಓಮಿಕ್ರಾನ್‌ ಸೆಂಚುರಿ – 101 ಮಂದಿಗೆ ಸೋಂಕು

    ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾಗಿದೆ. ಆ ಪ್ರಯಾಣಿಕನ ಹತ್ತಿರದ ಸೀಟಿನ ಒಟ್ಟು 27 ಪ್ರಯಾಣಿಕರಿಗೆ ಟೆಸ್ಟ್ ನಡೆಸಿ ಕ್ವಾರೆಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ಪ್ರಯಾಣಿಕರ ಗಂಟಲು ದ್ರವ್ಯವನ್ನು ಜನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!

    ಪಾಸಿಟಿವ್ ಬಂದ ಹಿನ್ನೆಲೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅಧಿಕಾರಿಗಳ ತುರ್ತು ಸಭೆ ನಡೆಸಿದ್ದು, ಏರ್ ಪೋರ್ಟ್ ಮುಖ್ಯಸ್ಥರು, ಏರ್ ಪೋರ್ಟ್ ಆರೋಗ್ಯಾಧಿಕಾರಿ (ಎ.ಪಿ.ಹೆಚ್.ಓ), ಜಿಲ್ಲಾ ಸರ್ವೇಕ್ಷಾಣಾಧಿಕಾರಿ (ಡಿ.ಎಸ್.ಓ), ಕೋವಿಡ್ ನೋಡಲ್ ಅಧಿಕಾರಿ ಹಾಗೂ ಅಪೋಲೋ ಲ್ಯಾಬ್ ಮುಖ್ಯಸ್ಥರೊಂದಿಗೆ ಈ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿಮಾನ ನಿಲ್ದಾಣದಲ್ಲಿ ತಪಾಸಣೆ ಬಿಗಿಗೊಳಿಸಲು ಸೂಚನೆ ನೀಡಿದ್ದಾರೆ.

  • ಬ್ರಿಟನ್‌ನಲ್ಲಿ ಮೊದಲ ಬಾರಿಗೆ ಇಬ್ಬರಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್‌ ಪತ್ತೆ

    ಬ್ರಿಟನ್‌ನಲ್ಲಿ ಮೊದಲ ಬಾರಿಗೆ ಇಬ್ಬರಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್‌ ಪತ್ತೆ

    ಲಂಡನ್: ಕೊರೊನಾ ವೈರಸ್‌ ರೂಪಾಂತರ ತಳಿ ಓಮಿಕ್ರಾನ್‌ ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ ಬ್ರಿಟನ್‌ನಲ್ಲಿ ಪ್ರಥಮ ಬಾರಿಗೆ ಹೊಸ ತಳಿಯ ಎರಡು ಪ್ರಕರಣಗಳು ದೃಢಪಟ್ಟಿವೆ.

    ಹೊಸ ತಳಿ ಸೋಂಕಿಗೆ ಒಳಗಾಗಿರುವ ಇಬ್ಬರು ಸಹ ದಕ್ಷಿಣ ಆಫ್ರಿಕಾದಿಂದ ಪ್ರಯಾಣ ಬೆಳೆಸಿದವರಾಗಿದ್ದಾರೆ ಎಂದು ಉನ್ನತ ಮೂಲಗಳು ದೃಢಪಡಿಸಿವೆ. ಇದನ್ನೂ ಓದಿ: ಲಸಿಕೆ ಪಡೆದವರಲ್ಲಿಯೂ ಒಮಿಕ್ರಾನ್ ಹೊಸ ತಳಿ ಪತ್ತೆ – ಆತಂಕ ಯಾಕೆ?

    ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಗುರುತಿಸಿ ಸ್ವಯಂ ಐಸೊಲೇಷನ್‌ನಲ್ಲಿ ಇರುವಂತೆ ಮಾಡುವ ಕಾರ್ಯಾಚರಣೆಯನ್ನು ತ್ವರಿತಗೊಳಿಸಿದ್ದೇವೆ ಎಂದು ಆರೋಗ್ಯ ಕಾರ್ಯದರ್ಶಿ ಸಾಜಿದ್‌ ಜಾವಿದ್‌ ತಿಳಿಸಿದ್ದಾರೆ.

    ಕೊರೊನಾ ರೂಪಾಂತರಿ ಓಮಿಕ್ರಾನ್‌ ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಯಿತು. ವಿಶ್ವಾದ್ಯಂತ ಈವರೆಗೆ ಒಟ್ಟು 87 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಇದು ಬಹು ಬೇಗ ಹರಡುವ ಹಾಗೂ ಕೋವಿಡ್‌ ಲಸಿಕೆಗಳು ಸೃಷ್ಟಿಸಿರುವ ಪ್ರತಿಕಾಯಗಳನ್ನು ಭೇದಿಸಿ ದೇಹವನ್ನು ಹೊಕ್ಕುವ ಸಾಮರ್ಥ್ಯ ಹೊಂದಿದೆ. ಹೀಗಾಗಿ ಎರಡು ಡೋಸ್‌ ಲಸಿಕೆ ಪಡೆದಿದ್ದರೂ ಕೊರೊನಾ ಹೊಸ ರೂಪಾಂತರ ತಳಿ ತಗುಲುತ್ತದೆ ಎಂದು ಜಿನೋಮ್‌ ಸೀಕ್ವೆನ್ಸ್‌ನಿಂದ ತಿಳಿದುಬಂದಿದೆ. ಇದನ್ನೂ ಓದಿ: ದಕ್ಷಿಣ ಅಫ್ರಿಕಾದಿಂದ ಬಂದವರಲ್ಲಿ ಇಬ್ಬರಿಗೆ ಸೋಂಕು- ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್‌

    ಹೊಸ ತಳಿ ಬಗ್ಗೆ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದರ ಮಧ್ಯೆಯೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದವರಲ್ಲಿ ಇಬ್ಬರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿವೆ. ಅವರಿಂದ ಸ್ಯಾಂಪಲ್ಸ್‌ ಅನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.

  • ಶಿವಮೊಗ್ಗದಲ್ಲಿ ರೂಪಾಂತರಿ ವೈರಸ್ ಕಂಡು ಬಂದಿಲ್ಲ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗದಲ್ಲಿ ರೂಪಾಂತರಿ ವೈರಸ್ ಕಂಡು ಬಂದಿಲ್ಲ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ದುಬೈಯಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ವ್ಯಕ್ತಿಗೆ ಕೊರೊನಾ ನೆಗಟಿವ್ ವರದಿ ಬಂದಿದ್ದು, ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲಕ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.

    ಮೆಗ್ಗಾನ್ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುಬೈಯಿಂದ ಆಗಮಿಸಿದ್ದ ವ್ಯಕ್ತಿಯ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಪ್ರಾಥಮಿಕ ಸಂಪರ್ಕ ಹೊಂದಿರುವ ಎಲ್ಲರಿಗೂ ಸಹ ನೆಗೆಟಿವ್ ಬಂದಿದೆ. ಈ ವ್ಯಕ್ತಿಯೊಂದಿಗೆ ಎರಡನೇ ಹಂತದ ಸಂಪರ್ಕ ಹೊಂದಿದ್ದ 39 ಮಂದಿಯ ತಪಾಸಣೆ ನಡೆಸಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಇದೆ. ಈ ಹಿನ್ನೆಲೆಯಲ್ಲಿ ಯಾರೂ ಅನಗತ್ಯವಾಗಿ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.

    ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆಯನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಕಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆ, ಆಯುರ್ವೇದಿಕ್ ಕಾಲೇಜು ಆಸ್ಪತ್ರೆ, 41 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 7 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ಇದಲ್ಲದೆ ಶಿವಮೊಗ್ಗ ನಗರದ 8 ಖಾಸಗಿ ಆಸ್ಪತ್ರೆಗಳಲ್ಲಿ 250 ರೂ. ದರ ನಿಗದಿಪಡಿಸಿ ಲಸಿಕೆ ನೀಡಲಾಗುತ್ತಿದೆ. ಸ್ಥಳದಲ್ಲಿಯೇ ನೋಂದಣಿ ಮಾಡಲು ಅವಕಾಶವಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

    ನೆರೆಯ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ನಮ್ಮ ರಾಜ್ಯದಲ್ಲಿ ಸಹ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸರ್ಕಾರ 1 ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ ಆರಂಭಿಸಲು ಅನುಮತಿ ನೀಡಿಲ್ಲ. 6ನೇ ತರಗತಿಯಿಂದ ಮೇಲಿನವರಿಗೆ ಮಾತ್ರ ಶಾಲೆ ನಡೆಸಲು ಅನುಮತಿ ನೀಡಿದೆ ಎಂದು ನುಡಿದರು.

    ಈ ವೇಳೆ ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಉಪಸ್ಥಿತರಿದ್ದರು.