Tag: Afzal

  • ‘ಹೊಸತರ’ ಮೂಲಕ ನಿರ್ದೇಶಕನಾಗಿ ಅಫ್ಜಲ್ ಎಂಟ್ರಿ

    ‘ಹೊಸತರ’ ಮೂಲಕ ನಿರ್ದೇಶಕನಾಗಿ ಅಫ್ಜಲ್ ಎಂಟ್ರಿ

    ಟನಾಗಿ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ, ಪತ್ರಕರ್ತನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್ (Afzal), ಹೊಸತರ ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಕೂಡ ಅಫ್ಜಲ್ ಅವರೆ ಬರೆದಿದ್ದಾರೆ. ಇತ್ತೀಚಿಗೆ ಚಿತ್ರದ ಶೀರ್ಷಿಕೆ ಅನಾವರಣಾವಾಗಿದ್ದು, ‘ಹೊಸತರ’ (Hosatara) ಎಂದು ಹೆಸರಿಡಲಾಗಿದೆ.

    ಜೈವಿಜಯ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹೊಸತರ ಚಿತ್ರದಲ್ಲಿ ಹೊಸ ತರಹದ ಕಥೆ ಇದೆ. ಸಿನಿಮಾದಲ್ಲೊಂದು ಸಿನಿಮಾ ಇದೆ. ಲವ್, ಸಸ್ಪೆನ್ಸ್, ಥ್ರಿಲ್ಲರ್ ಎಲ್ಲಾ ಅಂಶಗಳು ಇದೆ. ಕಾಮಿಡಿ ಸ್ವಲ್ಪ ಹೆಚ್ಚಾಗಿದೆ.  ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಮೂರು ಹಾಡುಗಳು ಹಾಗೂ ಎರಡು ಸಾಹಸ ಸನ್ನಿವೇಶಗಳಿದೆ. ರಾಜು ಎಮ್ಮಿಗನೂರು ಸಂಗೀತ ನಿರ್ದೇಶನ,   ಅಲ್ಟಿಮೇಟ್ ಶಿವು ಸಾಹಸ ನಿರ್ದೇಶನ ಮಾಡಲಿದ್ದಾರೆ.

    ರಾಜೀವ್ ಗನೇಸನ್ ಛಾಯಾಗ್ರಹಣ,  ಆಂಥೋನಿ ಪಯಾನೋ(ಕೆನಡಾ) ಹಿನ್ನೆಲೆ ಸಂಗೀತ ಹಾಗೂ ಬಾಬು ಶಿವಪುರ ಅವರ ಸಂಕಲನವಿರುವ ಈ ಚಿತ್ರಕ್ಕೆ ಅಮೇರಿಕಾದ ಜೆ ಹೆಚ್ ಜೆ ಸ್ಟುಡಿಯೋ ವಿ ಎಫ್ ಎಕ್ಸ್ ಮಾಡಲಿದೆ.  ಹೆಸರಾಂತ ತಂತ್ರಜ್ಞರು ಈ ಚಿತ್ರದಲ್ಲಿ ಭಾಗಿಯಾಗುತ್ತಿದ್ದು, ಉತ್ತಮ ಗುಣಮಟ್ಟದಲ್ಲಿ ಚಿತ್ರ ಮೂಡಿ ಬರಲಿದೆ. ತಾರಾಬಳಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡಿವುದಾಗಿ ನಿರ್ದೇಶಕ ಅಫ್ಜಲ್ ತಿಳಿಸಿದ್ದಾರೆ.

  • ವಸಿಷ್ಠ ಸಿಂಹ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ

    ವಸಿಷ್ಠ ಸಿಂಹ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ

    ಭಿನಯ ಹಾಗೂ ಕಂಠದ ಮೂಲಕ ಕನ್ನಡಿಗರ ಮನ ಗೆದ್ದಿರುವ ವಸಿಷ್ಠ ಸಿಂಹ (Vasishta Simha) ನಾಳೆ ತಮ್ಮ ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಅವರ ಹುಟ್ಟುಹಬ್ಬದ ಸಲುವಾಗಿ ಕಲಾ ಸೃಷ್ಠಿ ಪ್ರೊಡಕ್ಷನ್ಸ್ ನಿಂದ ಹೊಸ ಚಿತ್ರದ ಘೋಷಣೆಯಾಗಿದೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಅಫ್ಜಲ್ (Afzal) ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಈ ಹಿಂದೆ ಸಿದ್ದಿ ಸೀರೆ ಹಾಗೂ ರಾಗಿಣಿ ಅಭಿನಯದ ಸಾರಿ ಕರ್ಮ ರಿಟರ್ನ್ಸ್ ಚಿತ್ರದ ನಿರ್ದೇಶಕ ಬ್ರಹ್ಮ (Brahma) ಈ ನೂತನ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಕ್ರೈಮ್ ಥ್ರಿಲ್ಲರ್ ಹಾಗೂ ರಿವೆಂಜ್ ಕಥಾಹಂದರ ಹೊಂದಿರುವ ಈ ಚಿತ್ರ ಹಾಲಿವುಡ್ ಸ್ಟೈಲ್ ನಲ್ಲಿ (ನಾನ್ ಲೀನಿಯರ್ ಸ್ಕ್ರೀನ್ ಪ್ಲೇ) ಮೇಕಿಂಗ್ ಇರಲಿದೆ.  ಬೆಂಗಳೂರು, ಕೊಡಗು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

    ದೀಪಾವಳಿ ಹಬ್ಬದ ನಂತರ ಚಿತ್ರೀಕರಣ ಆರಂಭವಾಗಲಿದೆ. ರಾಜೀವ್ ಗಣೇಶನ್ ಛಾಯಾಗ್ರಹಣ ಹಾಗೂ ರಾಘವನ್ ಕಾರ್ತಿಕ್ ಸಂಗೀತ ನಿರ್ದೇಶನ ಪ್ರೊಡಕ್ಷನ್ ನಂ 1 ಚಿತ್ರಕ್ಕಿರಲಿದೆ. ಅನೇಕ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

     

    ಈ ಬಾರಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದಿದ್ದಾರೆ. ವಸಿಷ್ಠ. ಶೂಟಿಂಗ್ ನಲ್ಲಿ ಇರುವ ಕಾರಣದಿಂದಾಗಿ ಮನೆಯಲ್ಲಿ ಇರುವುದಿಲ್ಲ ಎಂದಿದ್ದಾರೆ. ತಾವು ಇರುವ ಸ್ಥಳದಿಂದಲೇ ಶುಭ ಹಾರೈಸುವಂತೆ ಮನವಿ ಮಾಡಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]