Tag: Agneepath Scheme

  • ಅಗ್ನಿಪಥ್ ಪ್ರತಿಭಟನೆಗಳಿಂದ ರೈಲ್ವೇ ಇಲಾಖೆಗೆ 259 ಕೋಟಿ ಲಾಸ್

    ಅಗ್ನಿಪಥ್ ಪ್ರತಿಭಟನೆಗಳಿಂದ ರೈಲ್ವೇ ಇಲಾಖೆಗೆ 259 ಕೋಟಿ ಲಾಸ್

    ನವದೆಹಲಿ: ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆ ಮತ್ತು ಹಿಂಸಾಚಾರಗಳಿಂದ ರೈಲ್ವೆ ಇಲಾಖೆಗೆ 259.44 ಕೋಟಿ ರೂ. ನಷ್ಟವಾಗಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

    ಜೂನ್ 15 ರಿಂದ 23ರ ಅವಧಿಯಲ್ಲಿ 2,132 ರೈಲುಗಳ ಸಂಚಾರ ರದ್ದಾಗಿತ್ತು. ಈ ನಡುವೆ ಜೂನ್ 14 ರಿಂದ 30ರ ಅವಧಿಯಲ್ಲಿ 102 ರೂಪಾಯಿ ಹಣವನ್ನ ಪ್ರಯಾಣಿಕರಿಗೆ ಮರುಪಾವತಿ ಮಾಡಲಾಯಿತು. ಈ ಕಾರಣಗಳಿಂದ 259.44 ಕೋಟಿ ರೂ. ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: Bundelkhand Expressway; ಒಂದು ವಾರಕ್ಕೇ ಮಳೆಗೆ ಗುಂಡಿ ಬಿತ್ತು ಪ್ರಧಾನಿ ಮೋದಿ ಉದ್ಘಾಟಿಸಿದ್ದ ರಸ್ತೆ

    ಈ ಮಧ್ಯೆ ಅಗ್ನಿಪಥ್ ಯೋಜನೆ ಕುರಿತಾಗಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ರಕ್ಷಣಾ ವಿಭಾಗದ ಸಂಸದೀಯ ಸ್ಥಾಯಿ ಸಮಿತಿಯ ಮೂವರು ಸಭೆಯಿಂದ ಮಧ್ಯದಲ್ಲೇ ನಿರ್ಗಮಿಸಿದ್ದಾರೆ. ಕಾಂಗ್ರೆಸ್‌ನ ಕೆ.ಸಿ.ವೇಣುಗೋಪಾಲ್, ಉತ್ತಮ್‌ಕುಮಾರ್ ರೆಡ್ಡಿ ಹಾಗೂ ಬಿಎಸ್‌ಪಿ ಸಂಸದ ಡ್ಯಾನಿಶ್ ಆಲಿ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಅಗ್ನಿಪಥ್’ ವಿರೋಧದ ನಡುವೆ ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ

    ‘ಅಗ್ನಿಪಥ್’ ವಿರೋಧದ ನಡುವೆ ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ

    ನವದೆಹಲಿ: ಅಗ್ನಿಪಥ್ ವಿರೋಧದ ನಡುವೆಯೇ ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಗ್ನಿವೀರರಿಗೆ ಶೇ. 10ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ.

    ಅಗ್ನಿಪಥ್ ವಿರೋಧಿಸಿ ಈಗಾಗಲೇ ದೇಶದ್ಯಾಂತ ಪ್ರತಿಭಟನೆ ನಡೆಯುತ್ತಿದೆ. ಉತ್ತರಪ್ರದೇಶ, ಬಿಹಾರ ಹಾಗೂ ತೆಲಂಗಾಣಗಳಲ್ಲಿ ಪ್ರತಿಭಟನೆಯೂ ಹಿಂಸಾತ್ಮಕಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ರೈಲು ಬೋಗಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಈ ನಡುವೆ ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಇಲಾಖೆ, ಅಗ್ನಿವೀರರಿಗೆ 10% ಮೀಸಲಾತಿ ನೀಡಿದ್ದು, CAPF ಮತ್ತು ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ಮೀಸಲಾತಿ ನೀಡಲಾಗಿದೆ ಎಂದು ತಿಳಿಸಿದೆ.

    ಅಷ್ಟೇ ಅಲ್ಲದೇ ಎರಡು ಪಡೆಗಳ ನೇಮಕಾತಿಯಲ್ಲಿ ಅಗ್ನಿವೀರರಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು 3 ವರ್ಷಕ್ಕೆ ಸಡಿಲಿಕೆ ಮಾಡಿದ್ದು, ಅಗ್ನಿವೀರ್ ಮೊದಲ ಬ್ಯಾಚ್ ನೇಮಕಾತಿಗೆ 5 ವರ್ಷ ಸಡಿಲಿಸಿದೆ. ಇದನ್ನೂ ಓದಿ: ಲಾಲೂ ಯಾದವ್ ಪಕ್ಷದ ಬೆಂಬಲದೊಂದಿಗೆ ಅಗ್ನಿಪಥ್ ವಿರೋಧಿಸಿ ಇಂದು ಬಿಹಾರ್ ಬಂದ್

    ಅಗ್ನಿಪಥ್‍ಗೆ ಯಾಕಿಷ್ಟು ವಿರೋಧ?: ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಮತ್ತು ದೇಶದ ಮಿಲಿಟರಿಯಲ್ಲಿ ಸೇವೆ ಮಾಡಲು ಯುವ ಜನರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಅಗ್ನಿಪಥ್ ಯೋಜನೆ ಆರಂಭಿಸಲಾಗಿದೆ ಎಂದು ಸರ್ಕಾರ ತಿಳಿಸಿತ್ತು. ಆದರೆ ಇದು ತಾತ್ಕಾಲಿಕ ಪರಿಹಾರ ಎನ್ನುವುದು ವಿರೋಧಿಸುತ್ತಿರುವವರ ವಾದವಾಗಿದೆ. ಇದನ್ನೂ ಓದಿ: ಇಸ್ರೇಲ್ ಮಾದರಿಯ ʼಅಗ್ನಿಪಥ್ʼ- ಏನಿದು ಯೋಜನೆ, ಯಾಕಿಷ್ಟು ವಿರೋಧ?

    4 ವರ್ಷದ ಬಳಿಕ ವಾಟ್ ನೆಕ್ಸ್ಟ್ ಎನ್ನುವ ಪ್ರಶ್ನೆಯೂ ಮೂಡುತ್ತದೆ. ಇದರ ಬದಲು ಬೇರೆ ವಲಯಕ್ಕೆ ಸೀಮಿತವಾಗುವಂತೆ ಉದ್ಯೋಗಾವಕಾಶವನ್ನು ಮಾಡಬಹುದು. 4 ವರ್ಷದ ಅವಧಿಗೆ ಕೆಲಸ ಮಾಡುವ ಉದ್ದೇಶ ಇದ್ದರೆ ಇವರಲ್ಲಿ ದೇಶ ಸೇವೆಯ ಮನೋಭಾವ ಬರಲ್ಲ ಎನ್ನುವ ವಾದದ ಮೇಲೆ ವಿರೋಧ ವ್ಯಕ್ತವಾಗುತ್ತಿದೆ.

    Live Tv