Tag: Agnipath Project

  • ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ: ಅಚ್ಚರಿ ಹೇಳಿಕೆ ಕೊಟ್ಟ ಸವದಿ

    ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ: ಅಚ್ಚರಿ ಹೇಳಿಕೆ ಕೊಟ್ಟ ಸವದಿ

    ಚಿಕ್ಕೋಡಿ: ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ ಎಂದು ಅಥಣಿಯಲ್ಲಿ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಅಚ್ಚರಿ ಹೇಳಿಕೆ ನೀಡಿದರು.

    ಅಗ್ನಿಪಥ್ ಯೋಜನೆ ಕುರಿತು ಇತ್ತೀಚೆಗೆ ಹಲವು ವಿವಾದಾತ್ಮಕ ಹೇಳಿಕೆಗಳು ಕೇಳಿಬರುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸವದಿ ಅವರು, ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ. ಕಳೆದ 30 ವರ್ಷದ ಹಿಂದೆ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

    ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಹೆಚ್ಚುತ್ತಿರುವ ಹಿನ್ನೆಲೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಅಗ್ನಿಪಥ್ ಒಂದು ಒಳ್ಳೆಯ ಯೋಜನೆ. ಇದನ್ನು ಮುಂದಿಟ್ಟು ಯುವಕರನ್ನು ಕಟ್ಟಿಕೊಂಡು ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಮೋದಿ, ರಾಜನಾಥ್ ಸಿಂಗ್‍ಗೆ ಕರೆ ಮಾಡಿ ಬೆಂಬಲ ಕೋರಿದ ಯಶವಂತ್ ಸಿನ್ಹಾ

    ಮೋದಿ ಅವರಿಗೆ ಕುಟುಂಬ, ಮಕ್ಕಳು ಇಲ್ಲ. ದೇಶದ ಒಳಿತಿಗಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಗಲು-ರಾತ್ರಿಯೆನ್ನದೆ ದೇಶದ ಸೇವೆಯಲ್ಲಿ ತೊಡಗಿದ್ದಾರೆ ಎಂದು ಪ್ರಶಂಸಿಸಿದರು.

    Live Tv

  • ಗಡಿಯಲ್ಲಿರುವಾಗಲೇ ಸೈನಿಕನಾದವನು ಚಿಂತೆಗೆ ಬೀಳಬೇಕು- ಅಗ್ನಿಪಥ್ ವಿರುದ್ಧ ನಲಪಾಡ್ ಕಿಡಿ

    ಗಡಿಯಲ್ಲಿರುವಾಗಲೇ ಸೈನಿಕನಾದವನು ಚಿಂತೆಗೆ ಬೀಳಬೇಕು- ಅಗ್ನಿಪಥ್ ವಿರುದ್ಧ ನಲಪಾಡ್ ಕಿಡಿ

    ಬೆಂಗಳೂರು: ಅಗ್ನಿಪಥ್ ಯೋಜನೆ ವಿರುದ್ಧ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ನಲಪಾಡ್ ಹ್ಯಾರೀಸ್ ಕಿಡಿಕಾರಿದ್ದಾರೆ.

    ಅಗ್ನಿಪಥ್ ಯೋಜನೆ ವಿರೋಧಿಸಿ ಇಂದು ರಾಜ್ಯ ಯುವ ಕಾಂಗ್ರೆಸ್ ನಿಂದ ರಾಜಭವನ ಚಲೋ ನಡೆಯುತ್ತಿದೆ. ಈ ವೇಳೆ ಮಾತನಾಡಿದ ನಲಪಾಡ್, ಅಗ್ನಿಪಥ್ ಯೋಜನೆ ತಂದಿದ್ದೀರಿ. ಯುವಕರು ಸೈನಿಕನಾಗಬೇಕೆಂಬ ಕನಸು ಕಾಣುತ್ತಿದ್ದಾರೆ. ಚಿಕ್ಕವಯಸ್ಸಿನಲ್ಲೇ ಕನಸು ಕಾಣುತ್ತಿದ್ದಾರೆ. ಸೇನೆಯಲ್ಲಿ ಸೇರೋಕೆ ವರ್ಷಗಟ್ಟಲೆ ಆಸೆ ಇಟ್ಕೊಂಡಿದ್ದಾರೆ. ಆದರೆ ಇದೀಗ ಯೋಜನೆ ಮೂಲಕ ಅವರ ಕನಸಿಗೆ ನೀವು ಹೊಡೆದಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

    ನಾಲ್ಕು ವರ್ಷಕ್ಕೆ ಅವರ ಆಸೆಯನ್ನ ಹತ್ತಿಕ್ಕಿದ್ದೀರಿ. ಮುಂದೆ ನಮ್ಮ ಜೀವನ ಹೇಗೆ ಅಂತ ಗಡಿಯಲ್ಲಿರುವಾಗಲೇ ಅವನು ಚಿಂತೆಗೆ ಬೀಳಬೇಕು. 17 ವರ್ಷಕ್ಕೇ ಕೆಲಸಕ್ಕೆ ಸೇರೋದು ಹೇಗೆ ಎಂದು ಪ್ರಶ್ನಿಸಿದ ನಲಪಾಡ್, ಐಐಎಂನಲ್ಲಿ ಓದಿದವರಿಗೆ ಕೆಲಸ ಇಲ್ಲ ಎಂದರು. ಇದನ್ನೂ ಓದಿ: ನನಗೆ ಮಾಟ ಮಾಡಿಸಿದವ್ರಿಗೆ ಶಿಕ್ಷೆ ಕೊಟ್ರೆ 50,001 ರೂ. ಕಾಣಿಕೆ ಹಾಕ್ತೀನಿ- ಸವದತ್ತಿ ಯಲ್ಲಮ್ಮನಿಗೆ ಬಂತು ಪತ್ರ

    ಕೋವಿಡ್ ನಲ್ಲಿ ಕೋಟಿ ಜನ ಕೆಲಸ ಕಳೆದುಕೊಂಡರು. ಹಾಗಾಗಿ ಅಗ್ನಿಪಥ್ ವಾಪಸ್ ಪಡೆಯಬೇಕು. ಪಡೆಯುವವರೆಗೆ ಹೋರಾಟ ನಡೆಯಲಿದೆ. ರಾಜಭವನ್ ಚಲೋ ಇಟ್ಕೊಂಡಿದ್ದೇವೆಪೊಲೀಸರು ನಮ್ಮನ್ನ ತಡೆಯೋಕೆ ಆಗಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    Live Tv

  • ನಾಳೆ ಏನಾದ್ರೂ ಅಹಿತಕರ ಘಟನೆ ಸಂಭವಿಸಿದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಸಿದ್ಧ: ಬೋರಲಿಂಗಯ್ಯ

    ನಾಳೆ ಏನಾದ್ರೂ ಅಹಿತಕರ ಘಟನೆ ಸಂಭವಿಸಿದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಸಿದ್ಧ: ಬೋರಲಿಂಗಯ್ಯ

    ಬೆಳಗಾವಿ: ಅಗ್ನಿಪಥ್ ಯೋಜನೆ ಸಂಬಂಧ ಬೆಳಗಾವಿ ಬಂದ್‍ಗೆ ಯಾವುದೇ ರೀತಿ ಅನುಮತಿ ಇಲ್ಲ. ಅನುಮತಿ ಇಲ್ಲದೇ ಪ್ರತಿಭಟನೆಯಲ್ಲಿ ಭಾಗಿಯಾದ್ರೆ ಸೂಕ್ತ ಕಾನೂನುಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಎಚ್ಚರಿಸಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗ್ನಿಪಥ್ ಯೋಜನೆ ಸಂಬಂಧ ನಾಳೆ ಬೆಳಗಾವಿ ಚಲೋ ಹಾಗೂ ಬೆಳಗಾವಿ ಬಂದ್ ಮಾಡಲು ಹೊರಟಿದ್ದಾರೆ. ಅವರು ಯಾವುದೇ ರೀತಿ ಮನವಿ ಮಾಡಿಕೊಂಡಿಲ್ಲ. ನಾಳೆ ಏನಾದ್ರೂ ಅಹಿತಕರ ಘಟನೆಗಳು ಸಂಭವಿಸಿದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರುದ್ಧ ಯುವಕರನ್ನು ಕಾಂಗ್ರೆಸ್‍ ಬೇಕೆಂದು ಪ್ರಚೋದಿಸುತ್ತಿದೆ: ಬಿ.ಸಿ.ಪಾಟೀಲ್ 

    ಡ್ರೋನ್ ಕ್ಯಾಮರಾ ಉಪಯೋಗಿಸಿಕೊಂಡು ರೈಲ್ವೆ ನಿಲ್ದಾಣ ಸೇರಿದಂತೆ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವ ಸ್ಥಳಗಳಲ್ಲಿ ಕಣ್ಗಾವಲು ಇಡುತ್ತೇವೆ. ಬಂದೋಬಸ್ತ್ ಬಗ್ಗೆಯೂ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

    ನಾವು ಎಲ್ಲವನ್ನು ಗಮನಿಸುತ್ತಿದ್ದೇವೆ. ಅವಶ್ಯಕತೆ ಕಂಡುಬಂದರೆ ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಚೋದನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಯಾರು ಆಕಾಂಕ್ಷಿಗಳು ಇದ್ದಾರೆ. ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾದರೆ ಮುಂದೆ ಸರ್ಕಾರಿ ಕೆಲಸದಲ್ಲಿ ನೇಮಕಾತಿ ಪಡೆಯಲು ಅರ್ಹತೆ ಇರೋದಿಲ್ಲ ಎಂದು ಹೇಳಿದರು.

    ಅದೇ ರೀತಿ ಖಾಸಗಿ ಕೆಲಸವನ್ನು ಅಷ್ಟು ಸುಲಭವಾಗಿ ಪಡೆದುಕೊಳ್ಳಲು ಆಗೋದಿಲ್ಲ. ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ನಿಮ್ಮ ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳುವ ಸಂದರ್ಭ ಇದು. ಯಾವುದೇ ರೀತಿಯ ಪ್ರಚೋದನೆಗೆ ಕಿವಿಗೊಡದೇ ನಿಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಏನೇ ಮಾಡೋದು ಇದ್ದರೆ ಅನುಮತಿ ಪಡೆದು, ಶಾಂತಿ ಸುವ್ಯವಸ್ಥೆಯಿಂದ ಮಾಡಬಹುದು. ಆದರೆ, ಯಾವುದೇ ಅನುಮತಿ ಪಡೆಯದೇ ಗಲಾಟೆ, ಧೋಂಬಿ ಮಾಡಲು ಬಂದರೆ ನಾವು ಯಾವುದಕ್ಕೂ ಬಿಡೋದಿಲ್ಲ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮಕ್ಕಳನ್ನು ನೋಡಿಕೊಳ್ಳಲು ಆಗುತ್ತಿಲ್ಲವೆಂದು ಪತ್ನಿಯನ್ನ ಕೊಂದು ಬಾತ್‍ರೂಮ್‍ನಲ್ಲಿ ಬಚ್ಚಿಟ್ಟ 

    Live Tv