Tag: agnipath protests

  • ಅಗ್ನಿಪಥ್‌ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಸೇನಾ ವ್ಯವಹಾರಗಳ ಇಲಾಖೆ

    ಅಗ್ನಿಪಥ್‌ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಸೇನಾ ವ್ಯವಹಾರಗಳ ಇಲಾಖೆ

    ನವದೆಹಲಿ: ಅಗ್ನಿಪಥ್ ಯೋಜನೆ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ರೆಜಿಮೆಂಟಲ್ ಪ್ರಕ್ರಿಯೆಯೂ ಬದಲಾಗುವುದಿಲ್ಲ ಎಂದು ಸೇನಾ ವ್ಯವಹಾರಗಳ ಇಲಾಖೆ ಮಂಗಳವಾರ ಸ್ಪಷ್ಟಪಡಿಸಿದೆ.

    ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ಉದ್ಯೋಗಾಕಾಂಕ್ಷಿಗಳು ಯೋಜನೆ ವಿರೋಧಿಸಿ ನಾವು ಯಾವುದೇ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿಲ್ಲ ಎಂಬುದನ್ನು ನಮಗೆ ಸಾಬೀತುಪಡಿಸಬೇಕು. ಅಂತಹವರನ್ನು ಮಾತ್ರ ನಾವು ಪರಿಗಣಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅಗ್ನಿಪಥ್‌ ಯೋಜನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ದೋವಲ್‌

    ಭಾರತದಲ್ಲಿರುವಷ್ಟು ಜನಸಂಖ್ಯಾ ಲಾಭಾಂಶವನ್ನು ಜಗತ್ತಿನ ಯಾವುದೇ ದೇಶ ಹೊಂದಿಲ್ಲ. 50 ರಷ್ಟು ಯುವಕರು 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಸೇನೆಯು ಇದರ ಸದುಪಯೋಗ ಪಡೆದುಕೊಳ್ಳಬೇಕು. ನಾವು ಈ ಜನಸಂಖ್ಯಾ ಲಾಭಾಂಶವನ್ನು ಪ್ರತಿಬಿಂಬಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

    ಜೂನ್ 17 ರಂದು ಭಾರತೀಯ ರಕ್ಷಣಾ ಸೇವೆಗಳ ಮೂವರು ಮುಖ್ಯಸ್ಥರು, ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಭಾರತೀಯ ಯುವಕರಿಗೆ ನೇಮಕಾತಿ ಪ್ರಕ್ರಿಯೆಯಾದ ʼಅಗ್ನಿಪಥ್ʼ ಯೋಜನೆಗೆ ಅನುಮೋದನೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದರು. ಇದನ್ನೂ ಓದಿ: ಅಗ್ನಿಪಥ್ ಆದೇಶ ನೀಡೋ ಮುನ್ನ ನಮ್ಮ ಮನವಿ ಆಲಿಸಿ- ಸುಪ್ರೀಂಗೆ ಕೇಂದ್ರದಿಂದ ಕೇವಿಯಟ್

    ಈ ಯೋಜನೆ ವಿರೋಧಿಸಿ ದೇಶಾದ್ಯಂತ ಯುವಸಮುದಾಯ ವ್ಯಾಪಕ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಯು ಹಿಂಸಾಚಾರ ಸ್ವರೂಪ ಪಡೆದುಕೊಂಡಿದೆ. ಯೋಜನೆ ಕುರಿತು ಕೇಂದ್ರ ಸರ್ಕಾರ ಹಾಗೂ ಸೇನಾಧಿಕಾರಿಗಳು ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದಾರೆ.

    Live Tv

  • ಅಗ್ನಿಪಥ್‌ ಯೋಜನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ದೋವಲ್‌

    ಅಗ್ನಿಪಥ್‌ ಯೋಜನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ದೋವಲ್‌

    ನವದೆಹಲಿ: ʼಅಗ್ನಿಪಥ್ʼ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರೀಯ ರಕ್ಷಣಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್‌ ತಿಳಿಸಿದ್ದಾರೆ.

    ಭಾರತವು ವಿಶ್ವದಲ್ಲೇ ಹೆಚ್ಚಿನ ಸಂಖ್ಯೆಯ ಯುವಸಮುದಾಯವನ್ನು ಹೊಂದಿದೆ. ಹೀಗಾಗಿ ಹೆಚ್ಚಿನ ಸರಾಸರಿ ವಯಸ್ಸಿನವರನ್ನು ಸೈನ್ಯದಲ್ಲಿ ಹೊಂದಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಕೃಷಿ ಕಾಯ್ದೆಗಳಂತೆಯೇ ಇದಕ್ಕೂ ಮಂಡಿಯೂರಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ಯೋಜನೆಯು ದಶಕಗಳಿಂದ ಚರ್ಚೆಯಲ್ಲಿದೆ. ರಾಷ್ಟ್ರೀಯ ಹಿತಾಸಕ್ತಿಗಾಗಿ ಒಂದು ಹೆಜ್ಜೆ ಮುಂದೆ ಹೋಗಿ ರಾಜಕೀಯವಾಗಿ ರಿಸ್ಕ್‌ ತೆಗೆದುಕೊಳ್ಳುತ್ತೇನೆಂದು ಪ್ರಧಾನಿ ನರೇಂದ್ರ ಮೋದಿಯಂತಹ ನಾಯಕರು ಮಾತ್ರ ಹೇಳಬಲ್ಲರು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಹೆಸರು ಪ್ರಸ್ತಾಪ

    ಪ್ರತಿಭಟನೆ ಹಾಗೂ ಹಿಂಸಾಚಾರ ಕುರಿತು ಮಾತನಾಡಿದ ಅವರು, ಉದ್ಯೋಗಾಕಾಂಕ್ಷಿಗಳು ಈ ರೀತಿ ಮಾಡುವುದಿಲ್ಲ. ನಿಜವಾದ ಆಕಾಂಕ್ಷಿಗಳು ಮನೆಯಲ್ಲಿದ್ದು, ತಯಾರಿ ನಡೆಸುತ್ತಿದ್ದಾರೆ. ಸರ್ಕಾರವನ್ನು ಅಪಖ್ಯಾತಿಗೊಳಿಸಲು ಸಮಾಜದಲ್ಲಿ ಸಂಘರ್ಷವನ್ನು ಬಯಸುವ ಜನರಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: MVA ಸರ್ಕಾರವನ್ನು ಅಲುಗಾಡಿಸುತ್ತಿರುವ ಏಕನಾಥ್ ಶಿಂಧೆ ಯಾರು?

    ಕೇಂದ್ರ ಸರ್ಕಾರ ಘೋಷಿಸಿರುವ ʼಅಗ್ನಿಪಥ್ʼ ಯೋಜನೆ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಕೂಡಲೇ ಯೋಜನೆಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಯೋಜನೆಯಲ್ಲಿ ಅಗತ್ಯ ಮಾರ್ಪಾಡಿಗೆ ಕೇಂದ್ರ ಸರ್ಕಾರ ಮುಂದಾಗಿದೆ.

    Live Tv

  • ಅಗ್ನಿಪಥ್‌ ಹಿಂಸಾಚಾರದ ಎಷ್ಟು ಪ್ರತಿಭಟನಾಕಾರರ ಮನೆಗಳ ಮೇಲೆ ಬುಲ್ಡೋಜರ್‌ ಬಿಟ್ಟಿದ್ದೀರಿ: BJPಗೆ ಓವೈಸಿ ಪ್ರಶ್ನೆ

    ಅಗ್ನಿಪಥ್‌ ಹಿಂಸಾಚಾರದ ಎಷ್ಟು ಪ್ರತಿಭಟನಾಕಾರರ ಮನೆಗಳ ಮೇಲೆ ಬುಲ್ಡೋಜರ್‌ ಬಿಟ್ಟಿದ್ದೀರಿ: BJPಗೆ ಓವೈಸಿ ಪ್ರಶ್ನೆ

    ನವದೆಹಲಿ: ʼಅಗ್ನಿಪಥ್‌ʼ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇಂತಹ ಸನ್ನಿವೇಶದಲ್ಲಿ ಎಷ್ಟು ಪ್ರತಿಭಟನಾಕಾರರ ಮನೆಗಳ ಮೇಲೆ ನಿಮ್ಮ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಿದ್ದೀರಿ ಎಂದು ಯೋಗಿ ಆದಿತ್ಯನಾಥ್‌ ಹಾಗೂ ಕೇಂದ್ರ ಸರ್ಕಾರಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಪ್ರಶ್ನಿಸಿದ್ದಾರೆ.

    ಪ್ರಧಾನಿ ಮೋದಿ ಅವರ ತಪ್ಪು ನಿರ್ಧಾರದಿಂದ ಯುವಸಮುದಾಯ ಬೀದಿಗಳಿದಿದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಎಷ್ಟು ಪ್ರತಿಭಟನಾಕಾರರ ಮನೆಗಳನ್ನು ಬುಲ್ಡೋಜರ್‌ ಮೂಲಕ ನೆಲಸಮಗೊಳಿಸಿದ್ದೀರಿ ಎಂದು ಪ್ರಶ್ನಿಸಿರುವ ಓವೈಸಿ, ಯಾರ ಮನೆಯೂ ನೆಲಸಮವಾಗಬಾರದು ಎಂಬುದು ನಮ್ಮ ಬಯಕೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸವನ್ನು ಬರಿಗೈಯಲ್ಲೇ ತೆಗೆದ ಮೋದಿ

    ನಾನು ಮೋದಿ ಅವರನ್ನು ಕೇಳಬಯಸುತ್ತೇನೆ. ಮುಸ್ಲಿಮರು ನಿಮ್ಮ ಮಕ್ಕಳಲ್ಲವೇ? ನಾವು ಕೂಡ ಈ ದೇಶದ ಮಕ್ಕಳು. ನೀವು ನಮ್ಮೊಂದಿಗೆ ಮಾತನಾಡಿ. ಕಳೆದ ಶುಕ್ರವಾರವೇ ನಮ್ಮೊಂದಿಗೆ ನೀವು ಮಾತನಾಡಬೇಕಿತ್ತು ಎಂದು ತಿಳಿಸಿದ್ದಾರೆ.

    ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನೂಪುರ್‌ ಶರ್ಮಾ ವಿರುದ್ಧ ದೇಶಾದ್ಯಂತ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ಮೂಲಕ ಗಲಭೆ ಸೃಷ್ಟಿಸಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಅನೇಕ ಮುಸ್ಲಿಮರ ಮನೆಗಳನ್ನು ಬುಲ್ಡೋಜರ್‌ ಮೂಲಕ ನೆಲಸಮಗೊಳಿಸಲಾಯಿತು. ಸರ್ಕಾರದ ಆದೇಶದ ಮೇರೆಗೆ ಅಧಿಕಾರಿಗಳು ಈ ಕ್ರಮಕೈಗೊಂಡಿದ್ದರು. ಇದಕ್ಕೂ ಮೊದಲು ದೆಹಲಿಯಲ್ಲೂ ಬಿಜೆಪಿ ಆಡಳಿತವಿರುವ ಪಾಲಿಕೆ ವ್ಯಾಪ್ತಿಯಲ್ಲಿ ಮುಸ್ಲಿಮರ ಮನೆಗಳನ್ನು ಬುಲ್ಡೋಜರ್‌ ಕಾರ್ಯಾಚರಣೆ ಮೂಲಕ ನೆಲಸಮಗೊಳಿಸಲಾಗಿತ್ತು. ಇದನ್ನೂ ಓದಿ: ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

    Live Tv

  • ʼಅಗ್ನಿಪಥʼ ಹಿಂಸಾಚಾರ – ಪ್ರತಿಭಟನಾಕಾರರಿಗೆ ಆಸ್ಪತ್ರೆಯಿಂದಲೇ ಸೋನಿಯಾ ಗಾಂಧಿ ಮನವಿ

    ʼಅಗ್ನಿಪಥʼ ಹಿಂಸಾಚಾರ – ಪ್ರತಿಭಟನಾಕಾರರಿಗೆ ಆಸ್ಪತ್ರೆಯಿಂದಲೇ ಸೋನಿಯಾ ಗಾಂಧಿ ಮನವಿ

    ನವದೆಹಲಿ: ಕೇಂದ್ರ ಸರ್ಕಾರದ ʻಅಗ್ನಿಪಥ್‌ʼ ಯೋಜನೆ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಪ್ರತಿಭಟನಾಕಾರರ ಪರವಾಗಿ ಆಸ್ಪತ್ರೆಯಿಂದಲೇ ಕರೆ ನೀಡಿದ್ದಾರೆ. ಶಾಂತಿಯುತ ಪ್ರತಿಭಟನೆಗೆ ಮನವಿ ಮಾಡಿದ್ದಾರೆ.

    ಹೊಸ ನೇಮಕಾತಿ ಯೋಜನೆಯಾದ ಅಗ್ನಿಪಥ್ ವಿರುದ್ಧದ ಪ್ರತಿಭಟನೆಗಳು ಇದೀಗ ಎಂಟು ರಾಜ್ಯಗಳಿಗೆ ಹರಡಿದೆ. ವಿವಾದಾತ್ಮಕ ಯೋಜನೆಯನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ʼಕಾಂಗ್ರೆಸ್‌ ಪಕ್ಷವು ಪ್ರತಿಭಟನಾಕಾರರೊಂದಿಗೆ ನಿಲ್ಲುತ್ತದೆʼ ಎಂದು ಮಿಲಿಟರಿ ಉದ್ಯೋಗಾಕಾಂಕ್ಷಿಗಳಿಗೆ ಸೋನಿಯಾ ಗಾಂಧಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧದ ನಡುವೆ ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ

    ಸೇನಾ ನೇಮಕಾತಿ ಯೋಜನೆಯು ದಿಕ್ಕುಗಳಿಲ್ಲದ ಮತ್ತು ಸೇನಾ ಉದ್ಯೋಗ ಆಕಾಂಕ್ಷಿಗಳ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಳ್ಳದೆ ಘೋಷಿಸಲಾಗಿದೆ ಎಂದು ಕೇಂದ್ರದ ವಿರುದ್ಧ ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸರ್ಕಾರವು ನಿಮ್ಮ ಧ್ವನಿಯನ್ನು ನಿರ್ಲಕ್ಷಿಸಿ ಹೊಸ ಮಿಲಿಟರಿ ನೇಮಕಾತಿ ಯೋಜನೆಯನ್ನು ಘೋಷಿಸಿದೆ ಎಂದು ನನಗೆ ನಿರಾಶೆಯಾಗಿದೆ. ಅನೇಕ ಮಾಜಿ ಸೈನಿಕರು ಹೊಸ ಯೋಜನೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ಪಕ್ಷದ ನಾಯಕ ಜೈರಾಮ್ ರಮೇಶ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಹೇಳಿಕೆಯನ್ನೂ ಸೋನಿಯಾ ಗಾಂಧಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ

    ಯೋಜನೆಯ ವಿರುದ್ಧ ನಿಮ್ಮ ಹಿತಾಸಕ್ತಿಗಳನ್ನು ರಕ್ಷಿಸುವ ಭರವಸೆಯೊಂದಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬಲವಾಗಿ ನಿಂತಿದೆ. ನಿಜವಾದ ದೇಶಪ್ರೇಮಿಗಳಾಗಿ ನಾವು ಹಿಂಸಾಚಾರ ಬಿಟ್ಟು ತಾಳ್ಮೆ ಮತ್ತು ಶಾಂತಿಯಿಂದ ಯೋಜನೆಯ ವಿರುದ್ಧ ಧ್ವನಿ ಎತ್ತುತ್ತೇವೆ ಎಂದು ತಿಳಿಸಿದ್ದಾರೆ.

    Live Tv