Tag: agra

  • ಮಿಷನ್‌-100 ಟಾರ್ಗೆಟ್‌; 98ರಲ್ಲಿ ಸೋಲು, 99ನೇ ಚುನಾವಣೆಯಲ್ಲಿ ಮತ್ತೆ ಕಣಕ್ಕೆ – ಈ ಅಭ್ಯರ್ಥಿ ಯಾರು ಗೊತ್ತೆ?

    ಮಿಷನ್‌-100 ಟಾರ್ಗೆಟ್‌; 98ರಲ್ಲಿ ಸೋಲು, 99ನೇ ಚುನಾವಣೆಯಲ್ಲಿ ಮತ್ತೆ ಕಣಕ್ಕೆ – ಈ ಅಭ್ಯರ್ಥಿ ಯಾರು ಗೊತ್ತೆ?

    – ಸೋಲಿನಲ್ಲೇ ಶತಕ ಬಾರಿಸುವ ಗುರಿ ಹೊಂದಿದ್ದಾರೆ ಆಗ್ರಾದ ಅಭ್ಯರ್ಥಿ

    ಲಕ್ನೋ: ದೇಶದಲ್ಲಿ ಈಗಾಗಲೇ ಲೋಕಸಭಾ ಚುನಾವಣೆ (Lok Sabha Elections) ಆರಂಭವಾಗಿದೆ. ಏಪ್ರಿಲ್‌ 19ರಿಂದ ಮೊದಲ ಹಂತದ ಚುನಾವಣೆ ಶುರುವಾಗಿದ್ದು, 21 ರಾಜ್ಯಗಳ 102 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಮೊದಲ ಹಂತದ ಚುನಾವಣೆಯಲ್ಲಿ ಅತ್ಯಂತ ಶ್ರೀಮಂತ ಹಾಗೂ ಶೂನ್ಯ ಆಸ್ತಿ ಹೊಂದಿದ್ದ ಬಡ ಅಭ್ಯರ್ಥಿಗಳನ್ನೂ ನೋಡಿದ್ದೇವೆ. ಆದ್ರೆ ಉತ್ತರ ಪ್ರದೇಶದಲ್ಲೊಬ್ಬ ವ್ಯಕ್ತಿ ಸೋಲಿನಲ್ಲೇ ಶತಕ ಬಾರಿಸಲು ಮುಂದಾಗಿದ್ದಾರೆ.

    ಈಗಾಗಲೇ 98 ಚುನಾವಣೆಗಳಲ್ಲಿ ಸೋತಿರುವ ಆಗ್ರಾದ ರಾಮನಗರ ನಿವಾಸಿಯಾಗಿರುವ ಹಸ್ನೂರಾಮ್ ಅಂಬೇಡ್ಕರ್ (Hasnuram Ambedkari) 99ನೇ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. 100ನೇ ಚುನಾವಣೆಯಲ್ಲಿ ತಾನು ಸೋತ ಬಳಿಕ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: Lok Sabha Elections 2024: ಮಣಿಪುರದ 11 ಬೂತ್‌ಗಳಲ್ಲಿ ಇಂದು ಮರು ಮತದಾನ

    ಹೌದು. ಹಸ್ನೋರಾಮ್‌ ಅಂಬೇಡ್ಕರ್‌ 1985 ರಿಂದ ಇಲ್ಲಿಯವರೆಗೆ ಎಲ್ಲಾ ಮಾದರಿಯ ಚುನಾವಣೆಗಳಿಂದ 98 ಬಾರಿ ಸ್ಪರ್ಧಿಸಿ ಸೋತಿದ್ದಾರೆ. ಈ ಬಾರಿ ಶತಕ ಬಾರಿಸಲೇಬೇಕೆಂದು ಆಗ್ರಾ ಮತ್ತು ಫತೇಪುರ್‌ ಸಿಕ್ರಿಯಿಂದ ನಾಮಪತ್ರ ಸಲ್ಲಿಸಿದ್ದರು. ಆದ್ರೆ ಫತೇಪುರ್‌ ಸಿಕ್ರಿಯಲ್ಲಿ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ 99ನೇ ಬಾರಿ ಕಣಕ್ಕಿಳಿಯುವ ಮೂಲಕ ಸುದ್ದಿಯಾಗಿದ್ದಾರೆ.

    ಕಳೆದ 4 ದಶಕಗಳಿಂದ ವಿಧಾನಸಭೆ, ಲೋಕಸಭೆ, ಪಂಚಾಯ್ತಿ ಚುನಾವಣೆಗಳು, ಸ್ಥಳೀಯ ಸಂಸ್ಥೆ ಮತ್ತು ಬ್ಲಾಕ್ ಡೆವಲಪ್‌ಮೆಂಟ್ ಕೌನ್ಸಿಲ್ (ಬಿಡಿಸಿ)ಗೆ ನಡೆದ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಅಲ್ಲದೇ ಅಷ್ಟೂ ಚುನಾವಣೆಯನ್ನೂ ತಮ್ಮ ಸ್ವಂತ ಖರ್ಚಿನಿಂದಲೇ ಎದುರಿಸುತ್ತಿದ್ದಾರೆ ಎಂಬುದು ವಿಶೇಷ. ಈ ಹಿಂದೆ ಬಹುಜನ ಸಮಾಜವಾದಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದರು ಆದ್ರೆ ಪಕ್ಷ ಟಿಕೆಟ್‌ ನಿರಾಕರಿಸಿದ್ದರಿಂದ ಸ್ವತಂತ್ರವಾಗಿ ಸ್ಪರ್ಧಿಸಲು ಶುರು ಮಾಡಿದ್ದಾರೆ.

    2,768 ಮತ ಪಡೆದಿದ್ದ ಹಸ್ನೂರಾಮ್:
    ಸತತ ಸೋಲುಗಳನ್ನೇ ಕಂಡಿದ್ದರೂ ಉತ್ಸಾಹ ಕಳೆದುಕೊಳ್ಳದ ಹಸ್ನೋರಾಮ್‌ 2019ರ ಲೋಕಸಭಾ ಚುನಾವಣೆಯಲ್ಲಿ ಆಗ್ರಾದಿಂದ ಸ್ಪರ್ಧಿಸಿ 2,768 ಮತಗಳನ್ನು ಪಡೆದುಕೊಂಡಿದ್ದರು.

    ಈ ಕುರಿತು ಮಾತನಾಡಿರುವ ಹಸ್ನೂರಾಮ್ ನಾನು ಯಾವುದೇ ಕಾರಣಕ್ಕೂ ಗೆಲ್ಲೋದಿಲ್ಲ ಅನ್ನೋದು ಗೊತ್ತಿದೆ. ಆದ್ರೆ 100 ಚುನಾವಣೆಗಳಲ್ಲಿ ಸ್ಪರ್ಧಿಸಲೇಬೇಕೆಂಬುದು ನನ್ನ ಗುರಿ. 100ನೇ ಚುನಾವಣೆಯಲ್ಲಿ ಸೋತ ನಂತರ ಸ್ಪರ್ಧಿಸುವುದನ್ನು ಬಿಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: 14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ

  • ಗೇಟ್‌ ಮುಚ್ಚದ ನೆರೆಮನೆ ವ್ಯಕ್ತಿಯ ಕಿವಿ ಕಚ್ಚಿ ನುಂಗಿದ ಮಹಿಳೆ!

    ಗೇಟ್‌ ಮುಚ್ಚದ ನೆರೆಮನೆ ವ್ಯಕ್ತಿಯ ಕಿವಿ ಕಚ್ಚಿ ನುಂಗಿದ ಮಹಿಳೆ!

    ನವದೆಹಲಿ: ಮನೆಯ ಗೇಟ್‌ ಹಾಕದ್ದಕ್ಕೆ ರೊಚ್ಚಿಗೆದ್ದ ಮಹಿಳೆಯೊಬ್ಬಳು ನೆರೆಮನೆಯವನ ಕಿವಿ ಕಚ್ಚಿ (Agra Woman Bites Neighbour’s Ear) ಬಳಿಕ ಪೀಸ್‌ ನುಂಗಿದ ಪ್ರಸಂಗವೊಂದು ಆಗ್ರಾದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಕಿವಿ ಕಳೆದುಕೊಂಡ ವ್ಯಕ್ತಿಯನ್ನು ರಾಮ್‌ವೀರ್ ಬಘೇಲ್ ಎಂದು ಗುರುತಿಸಲಾಗಿದ್ದು, ಇವರು ಸೈಕಲ್‌ ರಿಕ್ಷಾ ಓಡಿಸುತ್ತಿದ್ದಾರೆ. ರಾಖಿ, ಆರೋಪಿ ಮಹಿಳೆ. ವ್ಯಕ್ತಿಯ ಕುಟುಂಬ ಹಾಗೂ ಮಹಿಳೆಯ ಕುಟುಂಬ ನ್ಯೂ ಆಗ್ರಾ ಪ್ರದೇಶದ ವಸತಿಗೃಹದಲ್ಲಿ ಬಾಡಿಗೆಗೆ ವಾಸವಾಗಿದೆ. ರಾಖಿಯು ಇತರ ಬಾಡಿಗೆದಾರರೊಂದಿಗೆ ಪ್ರತಿದಿನವೂ ಜಗಳ ಮಾಡುತ್ತಿದ್ದಳು ಎಂದು ರಾಮ್‌ವೀರ್ ಆರೋಪಿಸಿದ್ದಾರೆ.

    ನಡೆದಿದ್ದೇನು..?: ಮಾರ್ಚ್ 4 ರಂದು ಬಾಡಿಗೆದಾರರ ಮಗನಿಗೆ ಪರೀಕ್ಷೆ ಇದೆ ಎಂದು ಹೇಳಿದರು. ಹೀಗಾಗಿ ಬೆಳಗ್ಗೆ 6 ಗಂಟೆಗೆ ಮಗುವನ್ನು ಬಿಡಲು ಹೊರಟರು. ಆದರೆ ತರಾತುರಿಯಲ್ಲಿ ಹೊರಟಿದ್ದರಿಂದ ಅವರು ಗೇಟ್ ಮುಚ್ಚಲು ಮರೆತರು. ಹೀಗಾಗಿ ರಾಖಿ ರಾಮ್‌ವೀರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಲು ಆರಂಭಿಸಿದ್ದಾಳೆ. ಇದನ್ನೂ ಓದಿ: 26ನೇ ವಯಸ್ಸಿಗೆ ನೀಲಿ ತಾರೆ ಸೋಫಿಯಾ ಲಿಯೋನ್ ನಿಧನ

    ಈ ವೇಳೆ ರಾಮ್‌ ವೀರ್‌ ಮಹಿಳೆಗೆ ತಿಳಿಹೇಳಲು ಪ್ರಯತ್ನಿಸಿದ್ದಾರೆ. ಇದರಿಂದ ಆಕೆ ಮತ್ತಷ್ಟು ಕೋಪಗೊಂಡಳು. ಇದೇ ಸಂದರ್ಭದಲ್ಲಿ ರಾಖಿ ಪತಿ ಸಂಜೀವ್ ಎಂಟ್ರಿ ಕೊಟ್ಟಿದ್ದಾನೆ. ಅಲ್ಲದೇ ಆತ ರಾಮ್‌ವೀರ್‌ನನ್ನು ಹಿಡಿದುಕೊಂಡನು. ಸಂಜೀವ್‌ ಹಿಡಿದುಕೊಳ್ಳುತ್ತಿದ್ದಂತೆಯೇ ಸಿಟ್ಟಲಿದ್ದ ರಾಖಿ, ರಾಮ್‌ವೀರ್‌ ಕಿವಿಯನ್ನು ಜೋರಾಗಿ ಕಚ್ಚಿದ್ದಾಳೆ. ಪರಿಣಾಮ ಕಿವಿಯ ತುಂಡು ಆಕೆಯ ಬಾಯಲ್ಲಿತ್ತು. ಈ ವೇಳೆ ಅದನ್ನು ಉಗುಳಲು ಹೇಳಿದ್ದಾರೆ. ಆದರೆ ಕೋಪದಿಂದಿದ್ದ ರಾಖಿ ಅದನ್ನು ನುಂಗಿಯೇ ಬಿಟ್ಟಿದ್ದಾಳೆ.

    ಸದ್ಯ ಘಟನೆ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್‌ 325 (ಸ್ವಯಂಪ್ರೇರಣೆಯಿಂದ ತೀವ್ರ ಗಾಯ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಈ ಕುರಿತು ಸಹಾಯಕ ಪೊಲೀಸ್ ಕಮಿಷನರ್ ಆರಿಬ್ ಅಹ್ಮದ್ ಪ್ರತಿಕ್ರಿಯಿಸಿ, ಆರೋಪಿ ಮಹಿಳೆಯ ವಿರುದ್ಧ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪ್ರಸ್ತುತ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

  • ದಲಿತ ಯುವತಿಯ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಹತ್ಯೆ ಮಾಡಿದ ಪೊಲೀಸ್ ಪೇದೆ

    ದಲಿತ ಯುವತಿಯ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಹತ್ಯೆ ಮಾಡಿದ ಪೊಲೀಸ್ ಪೇದೆ

    ಆಗ್ರಾ: ದಲಿತ ಯುವತಿಯ (Dalit Women) ಮೇಲೆ ಪೊಲೀಸ್ ಪೇದೆಯೊಬ್ಬ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಯುವತಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಕಾನ್‌ಸ್ಟೇಬಲ್ ರಾಘವೇಂದ್ರ ಸಿಂಗ್ (27) ನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಆರ್‌ಕೆ ಸಿಂಗ್ ತಿಳಿಸಿದ್ದಾರೆ.

    25 ವರ್ಷದ ಮೃತ ಯುವತಿಯ ಗುರುತು ಮುಚ್ಚಿಡಲಾಗಿದ್ದು, ಕಾನ್‌ಸ್ಟೇಬಲ್ ರಾಘವೇಂದ್ರ ಸಿಂಗ್ (27) ಬಾಡಿಗೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ನೇಣು ಬಿಗಿದುಕೊಂಡಿರುವುದು ಸಾವಿಗೆ ಕಾರಣ ಎಂದು ದೃಢಪಡಿಸಿದೆ. ಇದನ್ನೂ ಓದಿ: ಅದಾನಿ ಕೇಸ್‌ ತನಿಖೆ ನಡೆಸಲು ಸೆಬಿ ಸಮರ್ಥವಾಗಿದೆ – ಪತ್ರಿಕೆಯ ವರದಿಯನ್ನು ಅವಲಂಬಿಸಬೇಡಿ : ಸುಪ್ರೀಂ ಹೇಳಿದ್ದೇನು?

    ಮೂಲಗಳ ಪ್ರಕಾರ ಗುರುಗ್ರಾಮ್‌ನ ಕಿಡ್ನಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಮೃತ ಯುವತಿ ಮತ್ತು ಕಾನ್‌ಸ್ಟೇಬಲ್ ರಾಘವೇಂದ್ರ ಸಿಂಗ್ ಪರಸ್ಪರ ಪರಿಚಯಸ್ಥರು. ಇಬ್ಬರು ಝಾನ್ಸಿಯಲ್ಲಿ ನರ್ಸಿಂಗ್ ತರಬೇತಿ ಪಡೆದಿದ್ದರು ಮತ್ತು ಅಂದಿನಿಂದ ಸಂಪರ್ಕದಲ್ಲಿದ್ದರು. ಕೆಲ ದಿನಗಳ ಹಿಂದೆ ಯುವತಿಯ ಸಹೋದರ ರಾಘವೇಂದ್ರ ಸಿಂಗ್ ಮನೆಗೆ ಭೇಟಿ ನೀಡಿದ್ದರು. ಬಳಿಕ ರಾಘವೇಂದ್ರ ಅವರ ಮದುವೆ ಪ್ರಸ್ತಾಪವನ್ನು ಯುವತಿಯ ಕುಟುಂಬವು ನಿರಾಕರಿಸಿತು. ಅದಾಗ್ಯೂ ರಾಘವೇಂದ್ರ ಸಿಂಗ್ ಯುವತಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

    ಘಟನೆ ನಡೆಯುವ ಒಂದು ದಿನ ಮೊದಲು ಯುವತಿಯು ಕಾನ್‌ಸ್ಟೇಬಲ್‌ನ ಬಾಡಿಗೆ ಕೊಠಡಿಗೆ ಭೇಟಿ ನೀಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಕಾನ್ಸ್‌ಟೇಬಲ್ ರಾಘವೇಂದ್ರ ಸಿಂಗ್ ಝಾನ್ಸಿ ಮೂಲದವರಾಗಿದ್ದು, ಬೆಳಂಗಂಜ್‌ನಲ್ಲಿ ಬಾಡಿಗೆಗೆ ವಾಸವಾಗಿದ್ದರು. ಘಟನೆಯ ದಿನ, ರಾಘವೇಂದ್ರ ಸಿಂಗ್ ತಮ್ಮ ಕಚೇರಿಗೆ ಬಂದಿದ್ದರು. ಆದರೆ ಬೇಗ ಹೊರಟರು, ಬಳಿಕ ಘಟನೆಯ ಬಗ್ಗೆ ತನ್ನ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಸ್, ಟ್ರಕ್ ನಡುವೆ ಅಪಘಾತ 12 ಮಂದಿ ದುರ್ಮರಣ

  • ಕ್ಲಾಸ್‍ಮೇಟ್ ಜೊತೆ ಪ್ರೀತಿ – ಕುಟುಂಬಸ್ಥರಿಗೆ ಮಾಹಿತಿ ನೀಡಿದ ಶಿಕ್ಷಕನಿಗೆ ಗುಂಡೇಟು ನೀಡಿದ ವಿದ್ಯಾರ್ಥಿ

    ಕ್ಲಾಸ್‍ಮೇಟ್ ಜೊತೆ ಪ್ರೀತಿ – ಕುಟುಂಬಸ್ಥರಿಗೆ ಮಾಹಿತಿ ನೀಡಿದ ಶಿಕ್ಷಕನಿಗೆ ಗುಂಡೇಟು ನೀಡಿದ ವಿದ್ಯಾರ್ಥಿ

    ಲಕ್ನೋ: ವಿದ್ಯಾರ್ಥಿನಿಯೊಂದಿಗಿನ ಪ್ರೀತಿ ವಿಚಾರವನ್ನು ಕುಟುಂಬಸ್ಥರಿಗೆ ತಿಳಿಸಿದ್ದಕ್ಕೆ, ಅಪ್ರಾಪ್ತ ವಿದ್ಯಾರ್ಥಿಗಳು ಶಿಕ್ಷಕರೊಬ್ಬರ ಕಾಲಿಗೆ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ (Agra) ನಡೆದಿದೆ. ಈ ಬಗ್ಗೆ ವಿದ್ಯಾರ್ಥಿಗಳು ವೀಡಿಯೋ ಒಂದನ್ನು ಹರಿಬಿಟ್ಟಿದ್ದು ನಾವು 40 ಬಾರಿ ಗುಂಡು ಹಾರಿಸಬೇಕಿತ್ತು. ಈಗ 39 ಬಾರಿ ಗುಂಡು ಹಾರಿಸುವುದು ಬಾಕಿ ಇದೆ ಎಂದು ಹೇಳಿಕೊಂಡಿದ್ದಾರೆ.

    ಗುಂಡು ಹಾರಿಸಿದ ವಿದ್ಯಾರ್ಥಿಗಳನ್ನು ತರುಣ್ ಮತ್ತು ಉತ್ತಮ್ ಎಂದು ಗುರುತಿಸಲಾಗಿದೆ. ವೀಡಿಯೋದಲ್ಲಿ ತಮ್ಮನ್ನು ಗ್ಯಾಂಗ್‍ಸ್ಟರ್‌ಗಳು ಎಂದು ಆರೋಪಿತ ವಿದ್ಯಾರ್ಥಿಗಳು ಬಿಂಬಿಸಿಕೊಂಡಿದ್ದಾರೆ. ಆರು ತಿಂಗಳ ನಂತರ ಮತ್ತೆ ಹಿಂದಿರುಗುತ್ತೇವೆ. ಆಗ ಮತ್ತೆ ಗುಂಡು ಹಾರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ- ಸಮಯಪ್ರಜ್ಞೆ ಮೆರೆದ ಇನ್ಸ್‌ಪೆಕ್ಟರ್

    ಖಂಡೋಲಿ ಪಟ್ಟಣದ ಕೋಚಿಂಗ್ ಸೆಂಟರ್ ಹೊರಗೆ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಕ ಸುಮಿತ್ ಎಂಬವರಿಗೆ ಗುಂಡು ಹಾರಿಸಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಪ ಪೊಲೀಸ್ (Police) ಆಯುಕ್ತ ಸೋನಮ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಆರೋಪಿತ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಅಗ್ನಿ ಅವಘಡ – 6 ಮಂದಿ ಸಾವು, 40 ಮಂದಿಗೆ ಗಾಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಬ್ ಇನ್ಸ್‌ಪೆಕ್ಟರ್‌ನಿಂದ ಮಹಿಳೆಯ ಅತ್ಯಾಚಾರಕ್ಕೆ ಯತ್ನ- ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

    ಸಬ್ ಇನ್ಸ್‌ಪೆಕ್ಟರ್‌ನಿಂದ ಮಹಿಳೆಯ ಅತ್ಯಾಚಾರಕ್ಕೆ ಯತ್ನ- ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

    ಲಕ್ನೋ: ಮಹಿಳೆಯೊಬ್ಬರ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ ಸಬ್ ಇನ್ಸ್‌ಪೆಕ್ಟರ್‌ನನ್ನು  ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ (Agra) ನಡೆದಿದೆ. ಬಳಿಕ ಆತನನ್ನು ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಗ್ರಾಮಸ್ಥರು ಸಬ್ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹರಿದಾಡುತ್ತಿರುವ ವೀಡಿಯೋದಲ್ಲಿ ಗ್ರಾಮಸ್ಥರು ಸಂದೀಪ್ ಕುಮಾರ್ ಎಂಬಾತನನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ಘಟನೆ ನಡೆದ ಬಳಿಕ ಆಗ್ರಾದ ಪೊಲೀಸ್ ಆಯುಕ್ತರು, ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ. ಅಲ್ಲದೇ ಈ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಉಗ್ರ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ: ಕೆನಡಾ ಗಂಭೀರ ಆರೋಪ

    ಘಟನೆ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅಲ್ಲದೇ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಆದರೆ ಆರೋಪಿ ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾನೆ. ಪ್ರಕರಣವೊಂದರ ತನಿಖೆಗೆ ತೆರಳಿದ್ದಾಗ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾನೆ.

    ಆರೋಪಿ ಎರಡು ವರ್ಷಗಳ ಹಿಂದೆಯಷ್ಟೇ ಪೊಲೀಸ್ ಇಲಾಖೆಗೆ ಸೇರಿದ್ದ ಎಂದು ತಿಳಿದು ಬಂದಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೋಟಿ ಕೋಟಿ ವಂಚನೆ ಪ್ರಕರಣ – ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಸಿಬಿ ಆಕ್ಷೇಪಣೆ ಸಾಧ್ಯತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವ್ಯಕ್ತಿಯ ತಲೆ ಮೇಲೆ ಒದ್ದು, ಮೂತ್ರ ವಿಸರ್ಜನೆ ಮಾಡಿ ದರ್ಪ – ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ

    ವ್ಯಕ್ತಿಯ ತಲೆ ಮೇಲೆ ಒದ್ದು, ಮೂತ್ರ ವಿಸರ್ಜನೆ ಮಾಡಿ ದರ್ಪ – ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ

    ಲಕ್ನೋ: ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದ ಮೇಲೆ ಮಲಗಿದ್ದ ಗಾಯಾಳುವಿನ ಮೇಲೆ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಮತ್ತೊಂದು ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಹೇಯಕೃತ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 30 ಸೆಕೆಂಡ್‌ಗಳ ವೀಡಿಯೋದಲ್ಲಿ ವ್ಯಕ್ತಿಯ ತಲೆಯ ಮೇಲೆ ಯುವಕನೊಬ್ಬ ಒದೆಯುತ್ತಿರುವ ದೃಶ್ಯವೂ ಇದೆ. ಯುವಕ ಮತ್ತು ಅವನ ಸ್ನೇಹಿತರು ಸಂತ್ರಸ್ತನನ್ನು ನಿಂದಿಸಿದ್ದಾರೆ. ಇದನ್ನೂ ಓದಿ: 500 ಕೋಟಿ ಭ್ರಷ್ಟಾಚಾರ: ಗೆಹ್ಲೋಟ್‌ ವಿರುದ್ಧ ಮಾಜಿ ಸಚಿವನಿಂದಲೇ ಬಾಂಬ್‌

    ವೀಡಿಯೋ ವೈರಾಲ್‌ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ವೀಡಿಯೋ ಮೂರ್ನಾಲ್ಕು ತಿಂಗಳ ಹಳೆಯದು ಎಂದು ಪೊಲೀಸರು ತಿಳಿಸಿದ್ದಾರೆ.

    ತನಿಖೆಯ ನಂತರ, ಈ ಬಗ್ಗೆ ಆಗ್ರಾದ ಯಾವುದೇ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ದೂರು ದಾಖಲಿಸಿಲ್ಲ. ಬಂಧಿತನನ್ನು ಆದಿತ್ಯ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ: ಸುಪ್ರೀಂ ಸಲಹೆ

    ಆರೋಪಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಗೆ ಯತ್ನ) ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

    ವೀಡಿಯೋದಲ್ಲಿದ್ದ ಇತರ ಯುವಕರಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಬಂಧಿತ ಯುವಕ ಆದಿತ್ಯನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಕಾನೂನು ಕ್ರಮ ಕೈಗೊಳ್ಳಲಾಗುವುದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತವರು ಮನೆಯಿಂದ ಕರೆತರಲು ಹೋದ ಪತಿಗೆ ಬೆಂಕಿ ಹಚ್ಚಿದ ಪತ್ನಿ!

    ತವರು ಮನೆಯಿಂದ ಕರೆತರಲು ಹೋದ ಪತಿಗೆ ಬೆಂಕಿ ಹಚ್ಚಿದ ಪತ್ನಿ!

    ಲಕ್ನೋ: ತವರು ಮನೆಯಿಂದ ಪತ್ನಿಯನ್ನು (Wife) ಕರೆದುಕೊಂಡು ಬರಲು ತೆರಳಿದ್ದ ಪತಿಯನ್ನು (Husband) ಹೆಂಡತಿಯೇ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಘಟನೆ ಆಗ್ರಾದಲ್ಲಿ (Agra) ನಡೆದಿದೆ.

    ಮೃತನನ್ನು ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಆತ ತವರು ಮನೆಯಲ್ಲಿದ್ದ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ತೆರಳಿದ್ದ ವೇಳೆ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಈ ಕೃತ್ಯ ಎಸಗಿದ್ದಾರೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿದ್ದಂತೆ ಆತ ಕೂಗಿಕೊಂಡು ಮನೆಯಿಂದ ಹೊರಗೆ ಓಡಿಹೋಗಿದ್ದಾನೆ. ಕೂಡಲೇ ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬೆಂಗ್ಳೂರಿನ ಬಾಡಿಗೆ ಮನೆಯಲ್ಲಿದ್ದುಕೊಂಡೇ ಡ್ರಗ್ಸ್ ಸಪ್ಲೈ ಮಾಡ್ತಿದ್ದ ನೈಜೀರಿಯನ್ ಪ್ರಜೆ ಅರೆಸ್ಟ್!

    ಈ ಸಂಬಂಧ ಮೃತನ ಸಹೋದರ ಪೊಲೀಸರಿಗೆ ದೂರು ನೀಡಿದ್ದಾನೆ. ಆರೋಪಿಗಳ ವಿರುದ್ಧ ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ದಾಖಲಿಸಲಾಗಿತ್ತು. ಈಗ ಸಂತ್ರಸ್ತ ಮೃತಪಟ್ಟಿದ್ದು ಅದನ್ನು ತಿದ್ದುಪಡಿ ಮಾಡಲಾಗುವುದು ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಸಂತ್ರಸ್ತನ ಸಹೋದರ ನೀಡಿದ ದೂರಿನಲ್ಲಿ ಧರ್ಮೇಂದ್ರ ಮತ್ತು ಆತನ ಪತ್ನಿ ಪ್ರೀತಿ 2019 ರಲ್ಲಿ ಮದುವೆಯಾಗಿದ್ದರು. ಮದುವೆಯ ಆರಂಭದಿಂದಲೂ ಪ್ರೀತಿ ಮತ್ತು ಅವರ ಕುಟುಂಬದ ನಡವಳಿಕೆ ವಿಚಿತ್ರವಾಗಿತ್ತು. ಪ್ರೀತಿ ತನ್ನ ತವರು ಮನೆಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಳು. ಮೂರು ತಿಂಗಳ ಹಿಂದೆ ಅವಳು ಮನೆಗೆ ಹೋಗಿದ್ದಳು. ಅವಳನ್ನು ಕರೆದುಕೊಂಡು ಬರಲು ಧರ್ಮೇಂದ್ರ ತೆರಳಿದ್ದ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಟೊಮೆಟೋ ತಿನ್ನೋದನ್ನೇ ನಿಲ್ಲಿಸಿದ್ರೆ ಬೆಲೆ ಕಡಿಮೆಯಾಗುತ್ತೆ – ಯುಪಿ ಸಚಿವೆ ಸಲಹೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮದುವೆಯಾದ 2 ಗಂಟೆಯಲ್ಲೇ ಪತ್ನಿಗೆ ತಲಾಖ್ ನೀಡಿದ ಪತಿ

    ಮದುವೆಯಾದ 2 ಗಂಟೆಯಲ್ಲೇ ಪತ್ನಿಗೆ ತಲಾಖ್ ನೀಡಿದ ಪತಿ

    ಲಕ್ನೋ: ವ್ಯಕ್ತಿಯೊಬ್ಬ ಮದುವೆಯಾದ ಎರಡೇ ಗಂಟೆಯಲ್ಲಿ ಪತ್ನಿಗೆ ತಲಾಖ್ (Talaq) ನೀಡಿದ ಪ್ರಕರಣ ಉತ್ತರಪ್ರದೇಶದ (Uttar Pradesh) ಆಗ್ರಾದಲ್ಲಿ (Agra) ನಡೆದಿದೆ. ವರದಕ್ಷಿಣೆ (Dowry) ವಿಚಾರವಾಗಿ ತಲಾಖ್ ನೀಡಿರುವ ಮಾಹಿತಿ ತಿಳಿದು ಬಂದಿದೆ.

    ಈ ಬಗ್ಗೆ ವಧುವಿನ ಸಹೋದರ ಕಮ್ರಾನ್ ವಾಸಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಇಬ್ಬರು ಸಹೋದರಿಯರನ್ನು ಆಗ್ರಾದ ಫತೇಹಾಬಾದ್‍ನಲ್ಲಿ ಒಂದೇ ದಿನ ಮದುವೆ ಮಾಡಲಾಯಿತು. ಈ ವೇಳೆ ಒಬ್ಬಳು ಸಹೋದರಿ ತನ್ನ ಪತಿಯೊಂದಿಗೆ ತೆರಳಿದ್ದಾಳೆ. ಆದರೆ ಮತ್ತೊಬ್ಬಳು ಪತಿ ಮೊಹಮ್ಮದ್ ಆಸಿಫ್ ವರದಕ್ಷಿಣೆಯ ಕಾರಿಗಾಗಿ ಗಲಾಟೆ ತೆಗೆದಿದ್ದಾನೆ ಎಂದು ಆರೋಪಿಸಿದ್ದಾಳೆ. ಇದನ್ನೂ ಓದಿ: ಪೊಲೀಸ್ ಸಿಬ್ಬಂದಿಯಿಂದ ಕಿರುಕುಳ ಆರೋಪ – ಎಸ್ಪಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಅಲ್ಲದೇ ಅವನ ಕುಟುಂಬ ಸಹ ಈಕೆಯ ಪೋಷಕರು ಆಸಿಫ್‍ಗೆ ಕಾರು ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಸ್ಥಳದಲ್ಲೇ ಕಾರು ಕೊಡಿಸಿ ಇಲ್ಲವೇ 5 ಲಕ್ಷ ರೂಪಾಯಿ ನೀಡಬೇಕು ಎಂದು ಗಲಾಟೆ ಮಾಡಿದ್ದಾರೆ. ಇದಕ್ಕೆ ಹೆಣ್ಣಿನ ಕುಟುಂಬದವರು ಅಲ್ಪಾವಧಿಯಲ್ಲಿ ಹಣದ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದಾದ ಬಳಿಕ ಆಸಿಫ್ ತಲಾಖ್ ನೀಡಿ ತೆರಳಿದ್ದಾನೆ

    ಈ ಸಂಬಂಧ ಕಮ್ರಾನ್ ವಾಸಿ ದೂರು ದಾಖಲಿಸಿದ್ದಾರೆ. ಆಸಿಫ್ ಮತ್ತು ಇತರ 6 ಮಂದಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಎಫ್‍ಐಆರ್‍ನಲ್ಲಿ ಹೆಸರಿಸಿರುವ 7 ಮಂದಿಯನ್ನು ಬಂಧಿಸಬೇಕು ಎಂದು ಕಮ್ರಾನ್ ಆಗ್ರಹಿಸಿದ್ದಾರೆ.

    ತಲಾಖ್ ಹೇಳುವ ಮೂಲಕ ಮಹಿಳೆಗೆ ವಿಚ್ಛೇದನ (Divorce) ನೀಡುವುದು ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಕಾಯಿದೆ 2019ರ ಅಡಿಯಲ್ಲಿ ಕ್ರಿಮಿನಲ್ ಅಪರಾಧವಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಮರು ತನಿಖೆ – ಎಸ್ಪಿ ಶರತ್ ಹೆಸರು ಕೈಬಿಟ್ಟ ಸರ್ಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿಯೊಂದಿಗೆ ಜಗಳ – ಬೀದಿಗಳಲ್ಲಿ ಆಕೆಯ ನಂಬರ್‌ನೊಂದಿಗೆ ಅಶ್ಲೀಲ ಪೋಸ್ಟರ್ ಹಚ್ಚಿದ ಆಸಾಮಿ

    ಪತ್ನಿಯೊಂದಿಗೆ ಜಗಳ – ಬೀದಿಗಳಲ್ಲಿ ಆಕೆಯ ನಂಬರ್‌ನೊಂದಿಗೆ ಅಶ್ಲೀಲ ಪೋಸ್ಟರ್ ಹಚ್ಚಿದ ಆಸಾಮಿ

    ಲಕ್ನೋ: ಪತ್ನಿಯೊಂದಿಗೆ (Wife) ಜಗಳವಾಡಿ ಕೋಪಗೊಂಡಿದ್ದ ವ್ಯಕ್ತಿ (Man) ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಅಶ್ಲೀಲ ಫೋಟೋದೊಂದಿಗೆ (Obscene Phot0) ಆಕೆಯ ನಂಬರ್ ಅನ್ನು ಬರೆದು ಬೀದಿಗಳಲ್ಲಿ ಪೋಸ್ಟರ್ (Poster) ಹಚ್ಚಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಉತ್ತರ ಪ್ರದೇಶದ ಆಗ್ರಾದ (Agra) ವ್ಯಕ್ತಿ ತನ್ನದೇ ಪತ್ನಿಯ ಅಶ್ಲೀಲ ಫೋಟೋ ಇರುವ ಪೋಸ್ಟರ್‌ಗಳನ್ನು ಬೀದಿಗಳಲ್ಲಿ ಹಚ್ಚಿರುವ ವೀಡಿಯೋ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಕಳೆದ 6 ವರ್ಷಗಳಿಂದ ಪತಿ ಹಾಗೂ ಪತ್ನಿ ಜಗಳವಾಡುತ್ತಿದ್ದು, ವ್ಯಕ್ತಿ ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಇಂತಹ ಕೃತ್ಯ ಮಾಡಿದ್ದಾನೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ರೂಮಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಪರಾರಿ!

    ಘಟನೆ ಬಗ್ಗೆ ಮಹಿಳೆ ತನ್ನ ಪತಿಯ ವಿರುದ್ಧ ಕಮಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಮಾತ್ರವಲ್ಲದೇ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯನ್ನು ಹಾಕಿದ್ದಾಳೆ. ಇದನ್ನೂ ಓದಿ: ಯುವತಿಯನ್ನು ಕೊಲೆಗೈದು ಮ್ಯಾನ್‍ಹೋಲ್‍ಗೆ ಬಿಸಾಕಿದ ಅರ್ಚಕ!

  • ಬಸ್, ಸಿನಿಮಾ ಥಿಯೇಟರ್, ಪಬ್ ಬಾರ್‌ಗಳಲ್ಲೂ ಮಾಸ್ಕ್ ಅಗತ್ಯ – ರಾಜ್ಯ ಆರೋಗ್ಯ ಇಲಾಖೆ ಗೈಡ್‌ಲೈನ್ಸ್‌ನಲ್ಲಿ ಏನೇನಿದೆ?

    ಬಸ್, ಸಿನಿಮಾ ಥಿಯೇಟರ್, ಪಬ್ ಬಾರ್‌ಗಳಲ್ಲೂ ಮಾಸ್ಕ್ ಅಗತ್ಯ – ರಾಜ್ಯ ಆರೋಗ್ಯ ಇಲಾಖೆ ಗೈಡ್‌ಲೈನ್ಸ್‌ನಲ್ಲಿ ಏನೇನಿದೆ?

    ಬೆಂಗಳೂರು: ಚೀನಾ (China) ಸೇರಿ ಹಲವು ದೇಶಗಳಲ್ಲಿ ಕೋವಿಡ್ (Covid) ಆರ್ಭಟ ಜೋರಾಗಿದ್ದು, ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯಗಳೂ ಅಲರ್ಟ್ ಆಗಿವೆ. ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿರೋ ಬೆನ್ನಲ್ಲೇ, ಇತ್ತ ರಾಜ್ಯ ಸರ್ಕಾರ ಕೂಡ ಸಿಎಂ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಸಭೆ ಸೇರಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನ (Karnataka Covid Guidelines) ಬಿಡುಗಡೆ ಮಾಡಿದೆ.

    ಹೊಸ ಮಾರ್ಗಸೂಚಿಯಲ್ಲಿ ಏನಿದೆ?
    ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಅದರಲ್ಲೂ ವಿಶೇಷವಾಗಿ ವೃದ್ಧರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ. ಇದನ್ನೂ ಓದಿ: ಕೋವಿಡ್ ಪರೀಕ್ಷೆ ಹೆಚ್ಚಿಸಿ.. ಎಲ್ಲರೂ ಮಾಸ್ಕ್ ಧರಿಸಿ – ಮೋದಿ ಸಲಹೆ

    ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್ ಅನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಠಾಚಾರದ ಅನ್ವಯ ಕ್ರಮಗಳನ್ನು ಪಾಲಿಸುವುದು.

    ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನವನ್ನು ಮಾಡಬಹುದಾಗಿದೆ. ಮುಂದುವರೆದು, ಸಭೆ ಹಾಗೂ ಸಮಾರಂಭಗಳ ಆಯೋಜಕರು ಈ ಕೆಳಗಿನ ಮಾರ್ಗಸೂಚಿಯನ್ನು ಪಾಲಿಸುವಂತೆ ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಪ್ರೇಮಿಗಳ ಸ್ವರ್ಗ ತಾಜ್‌ಮಹಲ್ ಭೇಟಿಗೂ ಕೋವಿಡ್ ಪರೀಕ್ಷೆ ಕಡ್ಡಾಯ

    ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟೂ ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ, ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]