Tag: Agricultural Activities

  • ರಾಜ್ಯದ ಹಲವೆಡೆ ಇಂದಿನಿಂದ 3 ದಿನ ಮಳೆ ಸಾಧ್ಯತೆ – ಹವಾಮಾನ ಇಲಾಖೆ

    ರಾಜ್ಯದ ಹಲವೆಡೆ ಇಂದಿನಿಂದ 3 ದಿನ ಮಳೆ ಸಾಧ್ಯತೆ – ಹವಾಮಾನ ಇಲಾಖೆ

    ಬೆಂಗಳೂರು: ಮುಂಗಾರು ರಾಜ್ಯಕ್ಕೆ ಎಂಟ್ರಿ ಕೊಟ್ಟು 10 ದಿನ ಕಳೆದಿದೆ. ಇಷ್ಟು ದಿನ ರಾಜ್ಯದಲ್ಲಿ ಚದುರಿದಂತೆ ಮಳೆ ಆಗುತ್ತಿತ್ತು. ಆದರೆ ಇಂದಿನಿಂದ ಮುಂಗಾರು ಮಳೆ ಅಬ್ಬರಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಗದಗ, ಹಾವೇರಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇದ್ದು. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ನೂಪುರ್ ಶರ್ಮಾ ಪ್ರತಿಕೃತಿ ಮಾಡಿ ನೇಣು ಹಾಕಿದ ಕಿಡಿಗೇಡಿಗಳು

    RAIN

    ಉಳಿದಂತೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೃಷಿ ಚಟುವಟಿಕೆಗಳು ಇನ್ಮುಂದೆ ಬಿರುಸು ಪಡೆಯುವ ಸಂಭವ ಇದೆ. ಇದನ್ನೂ ಓದಿ: ರಾಜ್ಯಸಭೆಗೆ ಆಯ್ಕೆ ಹಿನ್ನೆಲೆ ಮಂತ್ರಾಲಯ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ

  • ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದ ರೈತ

    ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದ ರೈತ

    ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅಗಲಿ ಐದು ತಿಂಗಳು ಕಳೆದರೂ, ಅವರನ್ನು ಆರಾಧಿಸುವವರ ಸಂಖ್ಯೆ ಇಳಿದಿಲ್ಲ. ತಮ್ಮ ನೆಚ್ಚಿನ ನಟನನ್ನು ನಾನಾ ರೀತಿಯಲ್ಲಿ ನೆನಪಿಸುವಂತಹ ಕೆಲಸಗಳನ್ನು ಅವರ ಅಭಿಮಾನಿಗಳು ಮಾಡುತ್ತಿದ್ದಾರೆ. ರಕ್ತದಾನ, ಅಂಗಾಂಗ ದಾನ, ನೇತ್ರದಾನ ಹಾಗೂ ಸಮಾಜಮುಖಿ ಕೆಲಸಗಳನ್ನು ಮಾಡುತ್ತಲೇ ಅಪ್ಪು ಅವರನ್ನು ಜೀವಂತವಾಗಿರಿಸುವ ಕೆಲಸ ನಿರಂತರವಾಗಿ ನಡೆಯುತ್ತಲೇ ಇದೆ. ಈಗ ಮತ್ತೊಂದು ಹೊಸ ಕೆಲಸ ಮಾಡುವ ಮೂಲಕ ಅಪ್ಪುವನ್ನು ಕೃಷಿಕರು ಕೂಡ ತಮ್ಮದೇ ಮನೆಮಗ ಎನ್ನುವಂತೆ ಅಪ್ಪಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ಮಗುವಿನ ನೆರವಿಗೆ ಬಂದ ರೈಲ್ವೆ ಅಧಿಕಾರಿಗಳು

    ಯುಗಾದಿ ಹಬ್ಬದ ಹಿನ್ನೆಲೆ ರೈತರೆಲ್ಲರೂ ಭೂತಾಯಿಗೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭ ಮಾಡುವುದು ವಾಡಿಕೆ. ಭೂತಾಯಿಯ ಪೂಜೆಯ ಜತೆ ಜತೆಗೆ ತಮ್ಮಿಷ್ಟದ ದೇವರನ್ನೂ ಈ ಸಂದರ್ಭದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅದರಂತೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ರೈತನೋರ್ವ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕೃಷಿ ಚಟುವಟಿಕೆ ಆರಂಭಿಸಿದ್ದಾನೆ.

    ರೈತ ಅಶೋಕ ಕುರಿ ಇಂದು ತನ್ನ ಹೊಲದಲ್ಲಿ ಪುನೀತ್ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದ್ದು, ಪುನೀತ್ ರಾಜ್ ಕುಮಾರ್ ಅವರನ್ನು ಉತ್ತಿಲ್ಲ, ಬಿತ್ತಿದ್ದೇವೆ ಎನ್ನುವ ಸಾಲುಗಳನ್ನು ಸಾರ್ಥಕಗೊಳಿಸಿದ್ದಾನೆ. ಸಾಮಾನ್ಯವಾಗಿ ಎಲ್ಲರೂ ಯುಗಾದಿ ದಿನದಂದು ಹೊಸ ವರ್ಷಾಚರಣೆಯ ಸಡಗರದಲ್ಲಿರುತ್ತಾರೆ. ಇಂಥದ್ದೊಂದು ಸಡಗರಕ್ಕೆ ಅಪ್ಪು ಅವರನ್ನು ಸಾಕ್ಷಿಗೊಳಿಸಿದ್ದಾರೆ ಅಶೋಕ ಕುರಿ. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ, ಭಗವಂತ್ ಮಾನ್, ಕೇಜ್ರಿವಾಲ್

    ಈ ರೈತ ಪುನೀತ್ ರಾಜಕುಮಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ, ಗೌರವ ಸಲ್ಲಿಸಿ ಹೊಸ ವರ್ಷಾವನ್ನು ಬರಮಾಡಿಕೊಂಡಿದ್ದಾರೆ.