Tag: agricultural land

  • ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ವಿಧಾನ ಸರಳ – ಆರ್.ಅಶೋಕ್

    ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ವಿಧಾನ ಸರಳ – ಆರ್.ಅಶೋಕ್

    ಬೆಳಗಾವಿ: ಕೃಷಿ ಭೂಮಿಯನ್ನು (Agricultural Land) ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವ ವಿಧಾನವನ್ನು ಸರ್ಕಾರ ಇನ್ನಷ್ಟು ಸರಳೀಕರಣಗೊಳಿಸಿದೆ. ಈ ಸಂಬಂಧ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ (R Ashoka) ತಿಳಿಸಿದರು.

    ವಿಧಾನ ಪರಿಷತ್ (Legislative Council) ನಲ್ಲಿಂದು ಮಾತನಾಡಿದ ಅವರು, ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 95(2)ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಲು ಇಚ್ಛಿಸಿದರೆ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಯು ನಿಯಮಗಳಿಗೆ ಒಳಪಟ್ಟು ಅನುಮತಿಯನ್ನು ನಿರಾಕರಿಸಬಹುದು ಅಥವಾ ತಾನು ಯುಕ್ತವೆಂದು ಆಲೋಚಿಸುವಂತಹ ಷರತ್ತುಗಳಿಗೆ ಒಳಪಟ್ಟು ಕೊಡಬಹುದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮದ್ಯಕ್ಕೆ ದಾಸರಾದ ದಂಪತಿ – ಮಗು ಸಾಕಲಾಗದೇ ಬಾಲಮಂದಿರದಲ್ಲಿ ಬಿಟ್ಟುಹೋದ್ರು

    ಅರ್ಜಿದಾರರು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿದಾಗ ಕರ್ನಾಟಕ ಭೂ ಕಂದಾಯ ಕಾಯ್ದೆ (Karnataka Land Revenue Act), 1964ರ ಕಲಂ 96(4)ರನ್ವಯ ಈ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ ಕಂದಾಯ ವಿಧಿಸಲಾಗಿರುವ ಅಥವಾ ಬೇಸಾಯದ ಉದ್ದೇಶಕ್ಕೆ ಹೊಂದಿರುವ ಯಾವುದೇ ಭೂಮಿಯನ್ನು ಯಾವುದೇ ಇತರೆ ಉದ್ದೇಶಕ್ಕಾಗಿ ಜಿಲ್ಲಾಧಿಕಾರಿಯ ಅನುಮತಿಯಿಲ್ಲದೇ ಕಟ್ಟಡಗಳನ್ನು ಕಟ್ಟುವುದು ಅಥವಾ ಉಪಯೋಗ ಮಾಡಿದಲ್ಲಿ ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 96(4)ರನ್ವಯ ದಂಡ ವಿಧಿಸಿ, ಭೂ ಪರಿವರ್ತನೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸೀರಿಯಲ್ ಕಿಲ್ಲರ್ ಚಾರ್ಲ್ಸ್ ಶೋಭರಾಜ್ ಬಿಡುಗಡೆಗೆ ನೇಪಾಳ ಸುಪ್ರೀಂ ಆದೇಶ

    ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95ಕ್ಕೆ ಇತ್ತೀಚೆಗೆ ಯಾವುದೇ ತಿದ್ದುಪಡಿ ತಂದಿರುವುದಿಲ್ಲ ಎಂದರು.

    Live Tv
    [brid partner=56869869 player=32851 video=960834 autoplay=true]

  • ಕೆರೆ ಏರಿ ಒಡೆದು ನೂರಾರು ಎಕರೆ ಜಮೀನಿಗೆ ನುಗ್ಗಿದ ನೀರು- ರೈತರು ಕಂಗಾಲು

    ಕೆರೆ ಏರಿ ಒಡೆದು ನೂರಾರು ಎಕರೆ ಜಮೀನಿಗೆ ನುಗ್ಗಿದ ನೀರು- ರೈತರು ಕಂಗಾಲು

    ಚಾಮರಾಜನಗರ: ಕೆರೆ ಏರಿ ಒಡೆದು ನೂರಾರು ಎಕರೆ ಜಮೀನಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ನಡೆದಿದೆ.

    ಬೇಗೂರು ಹೋಬಳಿ ವ್ಯಾಪ್ತಿಗೆ ಸೇರಿದ ಈ ಬೆಳಚಲವಾಡಿ ಕೆರೆಯು 65 ಎಕರೆ ವಿಸ್ತೀರ್ಣ ಹೊಂದಿದ್ದು, ನೀರಿನ ಒತ್ತಡ ಹೆಚ್ಚಾಗಿ ಕೆರೆ ಏರಿ ಒಡೆದಿದೆ. ಶನಿವಾರ ಮಧ್ಯಾಹ್ನ ಕೆರೆ ಏರಿ ಸೋರುತ್ತಿರುವ ಕುರಿತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಈಗ ಏರಿಯೇ ಇಬ್ಭಾಗವಾಗಿ ಜಮೀನುಗಳಿಗೆ ನೀರು ನುಗ್ಗುತ್ತಿದ್ದು, ಬೆಳೆ ನಾಶವಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾ.ಪಂ.ಸದಸ್ಯ ಮಹಾದೇವಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನು ಚುಡಾಯಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿದ ಗ್ರಾಮಸ್ಥರು

    ರೈತರೊಬ್ಬರು ಕಳೆದ ಕೆಲವು ದಿನಗಳ ಹಿಂದೆ ಕೆರೆ ಮಧ್ಯೆ ಅಕ್ರಮವಾಗಿ ಕಟ್ಟೆ ಕಟ್ಟಿದ್ದರಿಂದ ನೀರಿನ ಒತ್ತಡ ಹೆಚ್ಚಾಗಿ ಈ ಅವಘಡ ಸಂಭವಿಸಿದೆ ಎಂಬ ಆರೋಪಗಳು ಕೇಳಿಬಂದಿವೆ. ಕಳೆದ ಮೂರು ವರ್ಷಗಳಿಂದ ಗಾಂಧಿ ಗ್ರಾಮ ಯೋಜನೆಯ ಮೂಲಕ ಕೆರೆಗೆ ನೀರು ತುಂಬಿಸಲಾಗುತ್ತಿದ್ದು, ಈ ಕೆರೆ ತುಂಬಿದ ಬಳಿಕ ಕಮ್ಮರಹಳ್ಳಿ ಕೆರೆಗೆ ನೀರು ಹರಿಯುತ್ತಿತ್ತು.

    ಕೆರೆ ಏರಿ ಒಡೆದಿರುವುದರಿಂದ ಗ್ರಾಮಸ್ಥರು ಆತಂಕಕ್ಕೆಗೊಳಗಾಗಿದ್ದು, ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಕೆರೆ ಏರಿ ಒಡೆದಿದ್ದರಿಂದ ಅಪಾರ ಪ್ರಮಾಣದ ನೀರು ಹೆಡಿಯಾಲ ಬೇಗೂರು ಮುಖ್ಯ ರಸ್ತೆಗೆ ನೀರು ನುಗ್ಗಿ ಸಂಚಾರ ವ್ಯತ್ಯಯವಾಗಿತ್ತು.

  • ಪ್ರವಾಹದ ನಂತರ ಕೃಷಿ ಜಮೀನಿನಲ್ಲಿ ಹೂಳು – ಬೆಳೆಯಲಾಗದೇ ರೈತರು ಕಂಗಾಲು

    ಪ್ರವಾಹದ ನಂತರ ಕೃಷಿ ಜಮೀನಿನಲ್ಲಿ ಹೂಳು – ಬೆಳೆಯಲಾಗದೇ ರೈತರು ಕಂಗಾಲು

    ಕಾರವಾರ: ಉತ್ತರ ಜಿಲ್ಲೆಯಲ್ಲಿ ಕಳೆದ ಜುಲೈ 23ರಂದು ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂ ಕುಸಿತದಿಂದ 1,700 ಹೆಕ್ಟೇರ್ ಗೂ ಹೆಚ್ಚು ಕೃಷಿ ಭೂಮಿಗೆ ಹಾನಿಯಾಗಿದೆ. ಅದರಲ್ಲೂ ಬಹುತೇಕ ಕಡೆ ಗದ್ದೆಗಳಲ್ಲಿ ಮಣ್ಣು ತುಂಬಿಕೊಂಡಿದ್ದು ರೈತರು ಕಣ್ಣೀರಿಡುವ ಸ್ಥಿತಿ ನಿರ್ಮಾಣವಾಗಿದೆ.

    ಪ್ರವಾಹದ ಬಳಿಕ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಹಾನಿಯ ಜಂಟಿ ಸರ್ವೆ ಕಾರ್ಯ ಕೈಗೊಂಡಿವೆ. ಈವರೆಗಿನ ಲೆಕ್ಕಾಚಾರದ ಪ್ರಕಾರ 1,700 ಹೆಕ್ಟೇರ್ ಕೃಷಿ ಭೂಮಿ ಮತ್ತು ಸುಮಾರು 600 ಹೆಕ್ಟೇರ್ ತೋಟಗಾರಿಕೆ ಭೂಮಿ ಹಾನಿಗೊಳಗಾಗಿದೆ. ಹಾನಿಗೊಳಗಾದ ಕೃಷಿ ಭೂಮಿಯ ಪೈಕಿ ಕೆಲವೆಡೆ ಪ್ರವಾಹದ ನೀರು ತುಂಬಿಕೊಂಡು ಬೆಳೆ ನಾಶವಾಗಿದ್ದರೆ 600.08 ಹೆಕ್ಟೇರ್ ಭೂಮಿಯಲ್ಲಿ ಪ್ರವಾಹದಿಂದ ಕೊಚ್ಚಿಕೊಂಡು ಬಂದ ಮಣ್ಣು ಮತ್ತು ಮರಳು ಭರ್ತಿಯಾಗಿದೆ. ಅದರಲ್ಲೂ ಕೆಲವೆಡೆ ಮೊಣಕಾಲವರೆಗೆ ಮಣ್ಣು ತುಂಬಿಕೊಂಡಿದೆ.

    ಕೇವಲ ಬೆಳೆ ಹಾನಿಯಾಗಿದ್ದಲ್ಲಿ ಮತ್ತೊಮ್ಮೆ ಬೆಳೆಯನ್ನಾದರೂ ಬೆಳೆಯಬಹುದು. ಆದರೆ ಮಣ್ಣು, ಮರಳು, ಕಟ್ಟಿಗೆ, ಕಸ ತುಂಬಿಕೊಂಡ ಭೂಮಿಯಲ್ಲಿ ಸ್ವಚ್ಛಗೊಳಿಸದ ಹೊರತು ಬೆಳೆ ಬೆಳೆಯಲು ಕಷ್ಟ ಸಾಧ್ಯ. ಶೇಖರಣೆಯಾಗಿರುವ ಮಣ್ಣನ್ನು ಖಾಲಿ ಮಾಡಿ ಭೂಮಿಯನ್ನು ಮೊದಲಿನ ಸ್ಥಿತಿಗೆ ತರಲು ಅಪಾರ ವೆಚ್ಚವಾಗುತ್ತದೆ. ಮೊದಲೇ ಬೆಳೆಗಳಿಗೆ ಸೂಕ್ತ ಬೆಲೆಯಿಲ್ಲದೆ ಕಂಗಾಲಾಗಿರುವ ರೈತರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹತಾಶರಾಗಿ ಕೈ ಚೆಲ್ಲಿ ಕುಳಿತಿರುವ ರೈತರಿಗೆ ಭವಿಷ್ಯವೇ ಮಸುಕಾಗಿದೆ.

    ಸಂತ್ರಸ್ತರಿಗೆ ಅರೆಕಾಸಿನ ಮಜ್ಜಿಗೆ
    ಬೆಳೆ ಹಾನಿಗೆ ಮತ್ತು ಮಣ್ಣು ತುಂಬಿಕೊಂಡಿರುವ ಕೃಷಿ ಭೂಮಿಗೆ ಸರ್ಕಾರ ಪರಿಹಾರವೇನೋ ವಿತರಿಸುತ್ತದೆ. ಆದರೆ ಇದು ಬಡವನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ. ಒಂದು ಹೆಕ್ಟೇರ್ ಕೃಷಿ ಬೆಳೆಯ ಹಾನಿಗೆ ಎನ್‍ಡಿಆರೆಫ್ ನಿಯಮಾವಳಿಯ ಪ್ರಕಾರ 6,800 ರೂ. ಪರಿಹಾರ ನಿಗದಿಪಡಿಸಲಾಗುತ್ತದೆ.

    ಇನ್ನು ಕೃಷಿ ಭೂಮಿಯಲ್ಲಿ ಮಣ್ಣು ಮರಳು ತುಂಬಿಕೊಂಡಿದ್ದರೆ ಒಂದು ಹೆಕ್ಟೇರ್‍ಗೆ 12,200 ರೂ. ಪರಿಹಾರ ಕೊಡಲಾಗುತ್ತದೆ. ಇಂದಿನ ಹೆಚ್ಚಿನ ಕೂಲಿ ದರದಲ್ಲಿ ಈ ಪರಿಹಾರ ಸಾಲುವುದಿಲ್ಲ ಎಂಬುದು ರೈತರ ಅಳಲು.

    ಒಂದು ಹೆಕ್ಟೇರ್ ನಲ್ಲಿ ತುಂಬಿಕೊಂಡಿರುವ ಮಣ್ಣನ್ನು ತೆಗೆದು ಭೂಮಿಯನ್ನು ಹದಗೊಳಿಸಿ ಮೊದಲಿನ ಸ್ಥಿತಿಗೆ ತರಲು 50 ಸಾವಿರಕ್ಕೂ ಹೆಚ್ಚು ಖರ್ಚು ತಗುಲುತ್ತದೆ ಎಂದು ರೈತರು ಅಳಲು ತೋಡಿಕೊಳ್ಳುತ್ತಾರೆ.

    ಸೂಕ್ತ ಪರಿಹಾರ ನೀಡಲಿ
    ಸರ್ಕಾರ ಕೇವಲ ನಾಮಕಾವಸ್ತೆ ಪರಿಹಾರ ನೀಡಿ ಕೈತೊಳೆದುಕೊಳ್ಳುವಂತಾಗಬಾರದು. ರೈತರ ಬೆಳೆ ಹಾನಿ ಮತ್ತು ಭೂಮಿ ಹಾನಿಗೆ ವೈಜ್ಞಾನಿಕವಾಗಿ ಪರಿಹಾರ ನಿಗದಿಪಡಿಸಬೇಕು. ಸ್ಥಳೀಯ ಕೂಲಿ ದರ, ಯಂತ್ರೋಪಕರಣಗಳು, ಬೀಜದ ವೆಚ್ಚವನ್ನೆಲ್ಲ ಸರಿಯಾಗಿ ಲೆಕ್ಕ ಹಾಕಿ ಪರಿಹಾರ ವಿತರಿಸಬೇಕು ಎಂದು ಬೆಳೆ ಹಾನಿಗೊಳಗಾದ ರೈತ ನೀಲಕಂಠ ನಾಯ್ಕ ಮತ್ತಿತರರು ಆಗ್ರಹಿಸಿದ್ದಾರೆ.

    ಎನ್‍ಡಿಆರೆಫ್ ನಿಯಮದ ಪ್ರಕಾರ ಕೃಷಿ ಬೆಳೆ ಹಾನಿಗೆ ಮತ್ತು ಭುಮಿಯಲ್ಲಿ ಮಣ್ಣು ತುಂಬಿಕೊಂಡಿರುವುದಕ್ಕೆ ಪ್ರತ್ಯೇಕ ಪರಿಹಾರ ನಿಗದಿಪಡಿಸಲಾಗಿದೆ. ಜಂಟಿ ಸರ್ವೇ ಚಾಲ್ತಿಯಲ್ಲಿದ್ದು ಸರ್ವೇ ಮುಗಿದ ಮೇಲೆ ಒಟ್ಟು ಹಾನಿಗೊಳಗಾದ ಕೃಷಿ ಭೂಮಿಯ ಲೆಕ್ಕ ಸರಿಯಾಗಿ ಸಿಗಲಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೌಡರವರು ತಿಳಿಸಿದ್ದಾರೆ.

  • ದೊಡ್ಡವರ ಜಮೀನು ಬೇಡ-ಸಣ್ಣವರ ಜಮೀನು ಬಿಡಲ್ಲ

    ದೊಡ್ಡವರ ಜಮೀನು ಬೇಡ-ಸಣ್ಣವರ ಜಮೀನು ಬಿಡಲ್ಲ

    ಬೆಳಗಾವಿ: ಅಭಿವೃದ್ದಿ ಹೆಸರಿನಲ್ಲಿ ಜಮೀನು ಕಸಿದುಕೊಂಡು ಕೆಲಸ ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪ್ರಭಾವಿಗಳ ಒತ್ತಡಕ್ಕೆ ಮಣಿದು ಕೇವಲ ಸಣ್ಣ ರೈತರ ಜಮೀನಿಗೆ ಕಣ್ಣ ಹಾಕಿದೆ ಎಂಬ ಆರೋಪ ಕೇಳಿ ಬಂದಿದೆ. ಶಾಸಕಿ ಹೆಬ್ಬಾಳ್ಕರ್ ಕೂಡ ಈ ವಿಷಯದಲ್ಲಿ ಸೈಲೆಂಟ್ ಆಗಿರುವುದು ರೈತರನ್ನ ಕೆರಳಿಸುವಂತೆ ಮಾಡಿದೆ.

    ಬೆಳಗಾವಿ ತಾಲೂಕಿನ ಹೊರವಲಯದಲ್ಲಿ ಬೆಳಗಾವಿ-ಗೋವಾ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 4ರ ಬೈಪಾಸ್ ರಸ್ತೆ ನಿರ್ಮಾಣವಾಗುತ್ತಿದೆ. ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರೈತರಿಂದ ಜಮೀನು ಕಬ್ಜಾ ಪಡೆದುಕೊಂಡು ಕೆಲಸ ಮಾಡುತ್ತಿದೆ. ಬೆಳಗಾವಿಯ ಪ್ರತಿಷ್ಠಿತ ಉದ್ಯಮಿಗಳು ಹಾಗೂ ರಾಜಕಾರಣಿಗಳ ಜಮೀನಿನ ಜಾಗದಲ್ಲಿ ನಿರ್ಮಾಣವಾಗಬೇಕಿದ್ದ ರಸ್ತೆ ಸಣ್ಣ ರೈತರ ಜಮೀನಿನಲ್ಲಿ ನಿರ್ಮಾಣವಾಗುತ್ತಿದೆ ಎನ್ನಲಾಗುತ್ತಿದೆ. ಇದು ಸಣ್ಣ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

    ರೈತರು ತಮ್ಮ ಭೂಮಿ ಉಳಿಸಿಕೊಳ್ಳೋಕೆ ಇಷ್ಟೆಲ್ಲ ಹೋರಾಟ ಮಾಡುತ್ತಿದ್ರೆ, ಇತ್ತ ಸ್ಥಳೀಯ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತ್ರ ಒಂದು ದಿನವೂ ಇವ್ರ ಹೋರಾಟಕ್ಕೆ ಸಾಥ್ ಕೊಟ್ಟಿಲ್ಲ. ಹೀಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಿ ಉದ್ಯಮಿಗಳ ಪರ ನಿಂತ್ರಾ ಅನ್ನೋ ಪ್ರಶ್ನೆ ಕಾಡುತ್ತಿದೆ. ಪ್ರಭಾವಿಗಳ ಜಮೀನುಗಳು ಇಲ್ಲಿ ಇರೋದ್ರಿಂದ ಹೋರಾಟ ಮಾಡುವುದರಿಂದ ಹೆಬ್ಬಾಳ್ಕರ್ ಗೆ ತೊಂದರೆ ಆಗುತ್ತೆ ಎಂಬ ಕಾರಣಕ್ಕೆ ಇಲ್ಲಿ ಬಂದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಈಗಾಗಲೇ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಕಾಮಗಾರಿಯ ನೀಲ ನಕ್ಷೆಯನ್ನು ತರಿಸಿಕೊಂಡು ನೋಡಿದ್ದೇನೆ. ಫಲವತ್ತಾದ ಭೂಮಿ ಬಿಟ್ಟು ಬೇರೆ ಸ್ಥಳದಲ್ಲಿ ಬೈಪಾಸ್ ನಿರ್ಮಾಣ ಮಾಡಲು ಸಾಧ್ಯವಾಗುತ್ತಾ ಎಂಬ ಚರ್ಚೆಗಳು ನಡೆದಿವೆ. ಒಬ್ಬರಿಗೆ ಒಂದು ಇನ್ನೊಬ್ಬರಿಗೆ ಮತ್ತೊಂದು ಮಾಡುವ ಜಾಯಮಾನ ನಮ್ಮದಲ್ಲ. ಭೂಮಿ ಕಳೆದುಕೊಂಡವರು ಎಲ್ಲರೂ ರೈತರೇ ಎಂದು ತಿಳಿಸಿದ್ದಾರೆ.

    ಪ್ರಭಾವಿಗಳ ಜಮೀನು ಉಳಿಸಿಕೊಳ್ಳಲು ಕಾಮಗಾರಿಯ ಪ್ಲಾನ್ ಬದಲಾವಣೆ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲನೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ, ಸಚಿವ ಸತೀಶ್ ಜಾರಕಿಹೊಳಿ ಹೇಳುತ್ತಾರೆ.

    ಜಮೀನಿನ ಅಕ್ಕಪಕ್ಕ ಕೆಲವು ಕಡೆಗಳಲ್ಲಿ ಬರಡು ಭೂಮಿ ಇದ್ದರೂ ರೈತರ ಭೂಮಿಯನ್ನ ಪಡೆದುಕೊಳ್ಳುವ ಮುಂಚೆ ಸ್ವಲ್ಪ ಇಲಾಖೆಯವರು ಯೋಚಿಸಿ ಕೆಲಸ ಆರಂಭಿಸಿದ್ರೇ ರೈತರು ಬದುಕುತ್ತಿದ್ದರು. ಒಟ್ಟಿನಲ್ಲಿ ರೈತರಿಗೆ ಸರಿಯಾದ ಪರಿಹಾರ ಆದರೂ ಕೊಟ್ಟು ಬದುಕಿಸುವ ಕೆಲಸ ಇಲಾಖೆ ಮಾಡಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಜಮೀನಿಗೆ ಬಿದ್ದ ಬೆಂಕಿ ನಂದಿಸಲು ಹೋಗಿ ರೈತ ಸಜೀವ ದಹನ

    ಜಮೀನಿಗೆ ಬಿದ್ದ ಬೆಂಕಿ ನಂದಿಸಲು ಹೋಗಿ ರೈತ ಸಜೀವ ದಹನ

    ಹಾಸನ: ಜಮೀನಿಗೆ ಬಿದ್ದಿದ್ದ ಬೆಂಕಿ ನಂದಿಸಲು ಹೋಗಿ ರೈತರೊಬ್ಬರು ಸಜೀವ ದಹನವಾಗಿರೋ ಘಟನೆ ಜಿಲ್ಲೆಯ ಆಲೂರು ತಾಲೂಕು ಗಂಜಿಗೆರೆ ಗ್ರಾಮದಲ್ಲಿ ನಡೆದಿದೆ.

    55 ವರ್ಷದ ಪುಟ್ಟಸ್ವಾಮಿಗೌಡ ಸಜೀವ ದಹನವಾದ ರೈತ. ಇವರ ಜಮೀನಿಗೆ ಕಳೆದ ರಾತ್ರಿ ಬೆಂಕಿ ತಗುಲಿತ್ತು. ಬೆಂಕಿ ನಂದಿಸಲು ಹೋಗಿ ಪುಟ್ಟಸ್ವಾಮಿಗೌಡ ಅದರೊಳಗೆ ಸಿಲುಕಿ ಹೊರಬಾರಲಾರದೆ ಬೆಂದು ಹೋಗಿದ್ದಾರೆ. ಈ ಬಗ್ಗೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆಲೂರು ಸರ್ಕಾರಿ ಆಸ್ಪತ್ರೆಗೆ ಶಾಸಕ ಹೆಚ್‍ಕೆ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಅತ್ತ ಬಳ್ಳಾರಿಯಲ್ಲಿನ ತೋರಣಗಲ್‍ನಲ್ಲಿ ಸಾಮೀಲ್‍ಗೆ ಬೆಂಕಿ ಬಿದ್ದು ಕೋಟ್ಯಾಂತರ ರುಪಾಯಿ ಬೆಲೆ ಬಾಳುವ ಮರದ ದಿಮ್ಮಿಗಳು ಗುರುವಾರ ರಾತ್ರಿಯಿಡೀ ಹೊತ್ತಿ ಉರಿದಿವೆ. ಜಮಾಲುದ್ದಿನ್ ಅನ್ನೋರಿಗೆ ಸೇರಿದ್ದ ಸಾಮಿಲ್‍ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಅಂದಾಜು ಒಂದೂವರೆ ಕೋಟಿ ರೂ. ಮೌಲ್ಯದ ಮರದ ದಿಮ್ಮಿಗಳು ಸುಟ್ಟು ಕರಕಲಾಗಿವೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ 4 ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು.